ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ನೇರಂಬಳ್ಳಿ ಗ್ರಾಮದ ವಯೋವೃದ್ಧರೋರ್ವರು ಉಡುಪಿಯ ಕೋವಿಡ್ ಆಸ್ಪತ್ರೆಯಲ್ಲಿ ಕರೊನಾದಿಂದ ಮೃತಪಟ್ಟಿದ್ದು ಅವರ ಅಂತಿಮ ಸಂಸ್ಕಾರಕ್ಕಾಗಿ ಕುಂದಾಪುರ ಹಳೆಕೋಟೆ ಸ್ಮಶಾನಕ್ಕೆ ಮೃತದೇಹವನ್ನು ತಂದಾಗ ಕುಟುಂಬಿಕರಿಗೊಂದು ಶಾಕ್ ಕಾದಿತ್ತು. ಅಂತಿಮ ಸಂಸ್ಕಾರಕ್ಕೂ ಮುನ್ನ ಅನುಮಾನಗೊಂಡು ಮೃತದೇಹದ ಪ್ಯಾಕ್ ಬಿಡಿಸಿದಾಗ ಅದರಲ್ಲಿ ಬೇರೊಬ್ಬ ವ್ಯಕ್ತಿಯ ಶವ ಕಂಡು ಕುಟುಂಬಸ್ಥರು ಕಂಗಾಲಾಗಿದ್ದಾರೆ. ನೇರಂಬಳ್ಳಿ ಮೂಲಕ 65 ವರ್ಷದ ವೃದ್ಧರು ಕರೊನಾ ಸೋಂಕಿನಿಂದಾಗಿ ಉಡುಪಿಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು ಎನ್ನಲಾಗಿದೆ. ಭಾನುವಾರ ಬೆಳಿಗ್ಗೆ ಶವವನ್ನು ಅಂಬುಲೆನ್ಸ್‌ನಲ್ಲಿ ಕುಂದಾಪುರಕ್ಕೆ ತರಲಾಗಿತ್ತು. ಮೃತದೇಹ ಸಂಪೂರ್ಣ ಪ್ಯಾಕ್ ಮಾಡಿದ್ದರಿಂದ ಒಳಗಿರುವ ಶವ ಯಾರದ್ದೆಂದು ಮೊದಲಿಗೆ ಸಂಬಂಧಿಕರಿಗೆ ತಿಳಿಯಲಿಲ್ಲ. ಹಳೆಕೋಟೆ ಸ್ಮಶಾನಕ್ಕೆ ಅಂತ್ಯ ಸಂಸ್ಕಾರಕ್ಕೆ ತಂದಾಗ ಅನುಮಾನಗೊಂಡು, ಓಪನ್ ಮಾಡಬಾರದು ಎಂಬ ಒತ್ತಡದ ನಡುವೆಯೂ ಶವ ಪರೀಕ್ಷಿಸುವಾಗ ಅದರಲ್ಲಿ ವೃದ್ಧರ ಬದಲಿಗೆ ಬೇರೊಬ್ಬ ಯುವಕನ ಶವವಿತ್ತು. ಇದು ನಮ್ಮ ಮೃತದೇಹ ಅಲ್ಲವೆನ್ನುತ್ತಿದ್ದಂತೆ ಅಂಬುಲೆನ್ಸ್ ಸಿಬ್ಬಂದಿಗಳು ಶವ ಕೊಂಡುಹೋಗಲು ಯತ್ನಿಸಿದ್ದರು. ತಕ್ಷಣ ಸ್ಮಶಾನದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕರ್ನಾಟಕ ಸಾಹಿತ್ಯ ಅಕಾಡೆಮಿಯು 2019ನೇ ವರ್ಷದ ಪುಸ್ತಕ ಬಹುಮಾನ ಯೋಜನೆಗಾಗಿ ಈ ಕೆಳಕಂಡ ಪ್ರಕಾರಗಳ ಕನ್ನಡ ಪುಸ್ತಕಗಳನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಿದೆ. ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2019ರ ಜನವರಿ 1 ರಿಂದ 2019ರ ಡಿಸೆಂಬರ್ 31ರ ವರೆಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು. ಕೃತಿಯಲ್ಲಿ ಪ್ರಥಮ ಮುದ್ರಣ 2019 ಎಂದು ಮುದ್ರಿತವಾಗಿರಬೇಕು. ಕಾವ್ಯ, ನವಕವಿಗಳ ಪ್ರಥಮ ಕವನ ಸಂಕಲನ, ಕಾವ್ಯ ಹಸ್ತ ಪ್ರತಿ-30 ವರ್ಷ ಒಳಗಿರುವ ಯುವಕವಿಗಳು ತಮ್ಮ ಅಪ್ರಕಟಿತ ಪ್ರಥಮ ಕವನ ಸಂಕಲನದ ಹಸ್ತ ಪ್ರತಿಯನ್ನು ಕಳಿಸಿಕೊಡಬೇಕು. ಕಾದಂಬರಿ, ಸಣ್ಣ ಕಥೆ, ನಾಟಕ, ಲಲಿತ ಪ್ರಬಂಧ, ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ/ಆತ್ಮಕಥೆ, ಸಾಹಿತ್ಯ ವಿಮರ್ಶೆ, ಗ್ರಂಥ ಸಂಪಾದನೆ, ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ, ಮಾನವಿಕ, ಸಂಶೋಧನೆ, ವೈಚಾರಿಕ/ಅಂಕಣ ಬರಹ, ಅನುವಾದ-1 ಭಾರತೀಯ ಭಾಷೆಯಿಂದ ಕನ್ನಡಕ್ಕೆ ಅನುವಾದಗೊಂಡ ಕೃತಿ, ಅನುವಾದ-2 ಕನ್ನಡದಿಂದ ಅನ್ಯಭಾಷೆಗೆ ಅನುವಾದಗೊಂಡ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಸಾಫ್ಟ್ ಸೆಲೆಕ್ಷನ್ ಕಮಿಷನ್ ಕೇಂದ್ರ ನೇಮಕಾತಿ ಪ್ರಾಧಿಕಾರವು ಇನ್ಸ್ಪೆಕ್ಟರ್, ಕೇಂದ್ರ ಮೀಸಲು ಪೊಲೀಸ್ ಪಡೆ (ಸಿ.ಎ.ಪಿ.ಎಫ್) ಹುದ್ದೆಗಳಿಗೆ ಕಂಪ್ಯೂಟರ್ ಆನ್ ಲೈನ್ ಸ್ಪರ್ಧಾತ್ಮಕ ಪರೀಕ್ಷಾ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 7 ಕೊನೆಯ ದಿನ, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ hಣಣಠಿ://ssಛಿ.ಟಿiಛಿ.iಟಿ ಅಥವಾ ದೂರವಾಣಿ ಸಂಖ್ಯೆ 08202574869/9480259790 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಪ್ರಕಟನೆಯಲ್ಲಿ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಎಮ್.ಆರ್.ಪಿ.ಎಲ್ ನ ಸಿ.ಎಸ್.ಆರ್ ನಿಧಿಯ ಧನ ಸಹಾಯದಿಂದ ಅಲಿಮ್ಕೋ ಎಸಿಸಿ, ಬೆಂಗಳೂರು ಇವರ ಮೂಲಕ ಉಡುಪಿ ಜಿಲ್ಲಾಡಳಿತ. ಉಡುಪಿ ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆ, ಅಂಗವಿಕಲರ ಪುನರ್ವಸತಿ ಕೇಂದ್ರ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಇದರ ಸಹಯೋಗದೊಂದಿಗೆ ಉಡುಪಿ ಜಿಲ್ಲಾ ವ್ಯಾಪ್ತಿಯ ಅಂಗವಿಕಲರಿಗೆ ದೈನಂದಿನ ಚಟುವಟಿಕೆಗಳಿಗೆ ಪೂರಕವಾದ ಸಾಧನ ಸಲಕರಣೆಯನ್ನು ವಿತರಿಸಲು ಶಿಬಿರವನ್ನು ಆಯೋಜಿಸಲಾಗಿದೆ. ಉಡುಪಿ ತಾಲೂಕು ವ್ಯಾಪ್ತಿಯ ಅಂಗವಿಕಲರಿಗೆ ಆಗಸ್ಟ್ 24 ರಂದು ವಿವೇಕಾನಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ,ಅಜ್ಜರಕಾಡು ಬ್ರಹ್ಮಾವರ ತಾಲೂಕು ವ್ಯಾಪ್ತಿಯ ಅಂಗವಿಕಲರಿಗೆ ಆಗಸ್ಟ್ 25 ರಂದು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬ್ರಹ್ಮಾವರ ಬೈಂದೂರು ತಾಲೂಕು ವ್ಯಾಪ್ತಿಯ ಅಂಗವಿಕಲರಿಗೆ ಆಗಸ್ಟ್ 26 ರಂದು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೈಂದೂರು ಕುಂದಾಪುರ ತಾಲೂಕು ವ್ಯಾಪ್ತಿಯ ಅಂಗವಿಕಲರಿಗೆ ಆಗಸ್ಟ್ 27 ರಂದು ತಾಲೂಕು ಪಂಚಾಯತ್ ಸಭಾಂಗಣ ಕುಂದಾಪುರ ಕಾರ್ಕಳ ತಾಲೂಕು ವ್ಯಾಪ್ತಿಯ ಅಂಗವಿಕಲರಿಗೆ ಆಗಸ್ಟ್ 28 ರಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಆ.22ರ ಶನಿವಾರ 348 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 132, ಉಡುಪಿ ತಾಲೂಕಿನ 165 ಹಾಗೂ ಕಾರ್ಕಳ ತಾಲೂಕಿನ 46 ಮಂದಿಗೆ ಪಾಸಿಟಿವ್ ಬಂದಿದೆ. 5 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಬಂದ ಪ್ರಕರಣಗಳು ಒಟ್ಟು 10,016 ಆಗಿದ್ದು, 2,842 ಸಕ್ರೀಯ ಪ್ರಕರಣಗಳಿವೆ. ಒಟ್ಟು ಪ್ರಕರಣಗಳಲ್ಲಿ 74 ಸಿಂಥಮೇಟಿವ್ ಹಾಗೂ 274 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, 171 ಪುರುಷರು, 177 ಮಹಿಳೆಯರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 178, ILI 42, ಸಾರಿ 2 ಪ್ರಕರಣವಿದ್ದು, 124 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. 2 ಮಂದಿ ಅಂತರ್ಜಿಲ್ಲಾ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಇಂದು 51 ಮಂದಿ ಆಸ್ಪತ್ರೆಯಿಂದ ಹಾಗೂ 184 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. 975 ನೆಗೆಟಿವ್: ಈ ತನಕ ಒಟ್ಟು 63925 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 53057 ನೆಗೆಟಿವ್, 10016…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸ್ತಕ ಸಾಲಿನ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ದಿಂದ ಹಿಂದುಳಿದ ವರ್ಗಗಳ ಪ್ರವರ್ಗ-(1)ರ ಕೋಲಿ, ಗಂಗಾಮತ, ಬೆಸ್ತ, ಕಬ್ಬಲಿಗ, ಮೊಗವೀರ, ಅಂಬಿಗ/ಅಂಬಿ, ಬಾರ‍್ಕಿ/ಬಾರಿಕ, ಬೆಸ್ತರ್, ಭೋಯಿ, ರಾಜಬೋಯಿ, ಬುಂಡೆ-ಬೆಸ್ತರ್, ದಾಲ್ಚಿ, ದಾವತ್, ಗಬಿಟ್, ಗಲಾಡಕೊಂಕಣಿ, ಗಂಗೆಮಕ್ಕಳು, ಗಂಗಾಕುಲ, ಗಂಗಾಮತಸ್ಥ, ಗಂಗಾಪುತ್ರ, ಗೌರಿಮತ, ಬುಂಡೆಬೆಸ್ತ/ಗುಂಡೆಬೆಸ್ತ, ಹರಿಕಂತ್ರ, ಜಲಗಾರ, ಕಬ್ಬೇರ/ಕಬ್ಬೇರ್, ಕಬ್ಬಿಲಿ, ಕಹರ್, ಖಾರ್ವಿ/ಕೊಂಕಣಿಖಾರ್ವಿ, ಕೋಳಿಮಹದೇವ್, ಮಡ್ಡರ್,ಮೀನಗಾರ್, ಮಗೇರ್, ಮುಕ್ಕವಾನ್, ಪರಿವಾರ, ಸಿವಿಯರ್, ಸುಣಗಾರ್, ಸುಣಗಾರ, ತೊರೆಯ ಜಾತಿಗೆ ಸೇರಿದ ಜನರ ಆರ್ಥಿಕ ಅಭಿವೃದ್ಧಿಗಾಗಿ ಬ್ಯಾಂಕ್‌ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ , ಸ್ವಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ ,ಅರಿವು ಶೈಕ್ಷಣಿಕ ಸಾಲ ಯೋಜನೆ ,ಗಂಗಾಕಲ್ಯಾಣ ನೀರಾವರಿ ಯೋಜನೆ ಕೌಶಲ್ಯಾಭಿವೃಧ್ಧಿ/ಉದ್ಯಮಶೀಲತಾ ತರಬೇತಿ ಗಳಲ್ಲಿ ಸಹಾಯಧನ ಹಾಗೂ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 1 ಕೊನೆಯ ದಿನವಾಗಿದೆ. ಅರ್ಜಿಯನ್ನು ಆನ್-ಲೈನ್ ಮೂಲಕ http://ambigaradevelopment.karnataka.gov.in ಮೂಲಕ ಅಥವಾ ನೇರವಾಗಿ ಜಿಲ್ಲಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಆ.21ರ ಶುಕ್ರವಾರ 278 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 99, ಉಡುಪಿ ತಾಲೂಕಿನ 159 ಹಾಗೂ ಕಾರ್ಕಳ ತಾಲೂಕಿನ 14 ಮಂದಿಗೆ ಪಾಸಿಟಿವ್ ಬಂದಿದೆ. 6 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 85 ಸಿಂಥಮೇಟಿವ್ ಹಾಗೂ 193 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, 157 ಪುರುಷರು, 121 ಮಹಿಳೆಯರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 114, ILI 68, ಸಾರಿ 6 ಪ್ರಕರಣವಿದ್ದು, 89 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. ಓರ್ವ ವ್ಯಕ್ತಿ ಅಂತರ್ಜಿಲ್ಲಾ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಇಂದು 204 ಮಂದಿ ಆಸ್ಪತ್ರೆಯಿಂದ ಹಾಗೂ 161 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. ಕುಂದಾಪುರದ 61 ವರ್ಷದ ಪುರುಷ ಹಾಗೂ ಉಡುಪಿಯ 80 ವರ್ಷದ ಪುರುಷ ಇಂದು ಮೃತರಾಗಿದ್ದು, ಕೋವಿಡ್ ಪಾಸಿಟಿವ್ ದೃಢವಾಗಿದೆ. 1,314 ನೆಗೆಟಿವ್: ಈ ತನಕ ಒಟ್ಟು 62767 ಮಾದರಿ ಸಂಗ್ರಹಿಸಿದ್ದು,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕೊಡೇರಿಯಲ್ಲಿ ನಡೆದ ದೋಣಿ ದುರಂತದಲ್ಲಿ ಮೃತರಾದ ನಾಲ್ವರು ಮೀನುಗಾರರ ಮನೆಗಳಿಗೆ ಶುಕ್ರವಾರ ಬಂದರು ಮತ್ತು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಭೇಟಿ ನೀಡಿ ರೂ. 6 ಲಕ್ಷ ಮೊತ್ತದ ತುರ್ತು ಪರಿಹಾರದ ಆದೇಶ ಪ್ರತಿಯನ್ನು ಕುಟುಂಬಿಕರಿಗೆ ಹಸ್ತಾಂತರಿಸಿದರು. ಬಳಿಕ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ದೋಣಿ ದುರಂತದಲ್ಲಿ ಮೃತರಾದ ಮೀನುಗಾರರ ಕುಟುಂಬಗಳಿಗೆ ತುರ್ತು ಪರಿಹಾರದ ಚೆಕ್ ವಿತರಿಸುವ ಬಗ್ಗೆ ಮುಖ್ಯಮಂತ್ರಿಗಳ ಹಾಗೂ ಎಲ್ಲಾ ಜನಪ್ರತಿನಿಧಿಗಳು ನಿರ್ಧರಿಸಿದ್ದರಿಂದ ಆರು ಲಕ್ಷ ರೂ. ನೀಡುವ ಬಗ್ಗೆ ಆದೇಶ ಪ್ರತಿ ನೀಡಿದ್ದೇವೆ. ಉಳಿದಂತೆ ಕುಟುಂಬಗಳಿಗೆ ಅವಶ್ಯವಿರುವ ಮನೆ ಹಾಗೂ ಇನ್ನಿತರ ಸೌಲಭ್ಯಗಳನ್ನು ಒದಗಿಸಿಕೊಡುವ ಬಗ್ಗೆ ಗರಿಷ್ಠ ಪ್ರಯತ್ನ ಮಾಡಲಾಗುವುದು ಎಂದರು. ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಮಾತನಾಡಿ ನಾಲ್ವರು ಮೀನುಗಾರರ ಕುಟುಂಬಕ್ಕೆ ಗರಿಷ್ಠ ಪರಿಹಾರ ದೊರಕಿಸಿಕೊಡುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದೇನೆ. ಬ್ರೇಕ್ ವಾಟರ್ ಕಾಮಗಾರಿ ವಿಸ್ತರಿಸುವ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉದ್ಯಮ ಹಾಗೂ ಸಹಕಾರಿ ಸಂಸ್ಥೆಗಳು ಕೋರೋನೊತ್ತರ ಆತಂಕವನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ನೂತನ ಶಾಖೆ ಆರಂಭಿಸಿ ಉತ್ತಮ ಠೇವಣಿ ಸಂಗ್ರಹಿಸಿರುವುದು ಶಾಘನೀಯ. ಸಂಸ್ಥೆಯಲ್ಲಿ ಮುಂದೆಯೂ ಉತ್ತಮ ವಹಿವಾಟು ನಡೆದು, ಸದಸ್ಯರು ಇದರ ಉಪಯೋಗ ಪಡೆಯುವಂತಾಗಲಿ ಎಂದು ಕುಂದಾಪುರ ಚಿನ್ಮಯಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಉಮೇಶ್ ಪುತ್ರನ್ ಹೇಳಿದರು. ಅವರು ಶುಕ್ರವಾರ ತೆಕ್ಕಟ್ಟೆ ರಜತಾದ್ರಿ ಕಾಂಪ್ಲೆಕ್ಸ್‌ನಲ್ಲಿ ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ. ಬೈಂದೂರು ಇದರ 8ನೇ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಸಾಗರ್ ಕ್ರೆಡಿಟ್ ಕೋ-ಆಪರೇಟಿವ್‌ನ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಮಾತನಾಡಿ ತೆಕ್ಕಟ್ಟೆ ಶಾಖೆಗಾಗಿ ಸೂಕ್ತ ಜಾಗವನ್ನು ಗುರುತಿಸಿ, ಸುತ್ತಲಿನ ಗ್ರಾಮಕ್ಕೆ ಅನುಕೂಲವಾಗುವ ಸ್ಥಳದಲ್ಲಿ ಸಂಸ್ಥೆಯನ್ನು ಆರಂಭಿಸಲಾಗಿದೆ. ಎಲ್ಲಾ ನಿರ್ದೇಶಕರು ಹಾಗೂ ಸಿಬ್ಬಂದಿಗಳು ಸಂಸ್ಥೆಯ ಅಭಿವೃದ್ಧಿಗೆ ನಿಸ್ವಾರ್ಥವಾಗಿ ಶ್ರಮಿಸಿದ್ದರಿಂದ ಎಂಟನೇ ಶಾಖೆ ಆರಂಭಿಸಲು ಸಾಧ್ಯವಾಗಿದ್ದು, ಸದಸ್ಯರ ಠೇವಣಿಗೆ ಉತ್ತಮ ಬಡ್ಡಿದರ ಹಾಗೂ ಅಗತ್ಯವುಳ್ಳವರಿಗೆ ಸಾಲಸೌಲಭ್ಯವನ್ನು ಕ್ಲಪ್ತ ಸಮಯದಲ್ಲಿ ಒದಗಿಸಿ ಸಂಸ್ಥೆ ಉತ್ತಮ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಸವಿತಾ ಸಮಾಜ ಮತ್ತು ಅದರ ಉಪಜಾತಿಗಳಿಗೆ ಸೇರಿದ ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ ಹಾಗೂ ಸ್ವಯಂ ಉದ್ಯೋಗ ಸಾಲ ಯೋಜನೆ ಯಲ್ಲಿ ಸಾಲ ಮತು ಸಹಾಯಧನ ಸೌಲಭ್ಯ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ ೩ ಕೊನೆಯ ದಿನವಾಗಿದ್ದು, ಅರ್ಜಿ ಮತ್ತು ಅಗತ್ಯ ದಾಖಾಲಾತಿಗಳನ್ನು ಆನ್-ಲೈನ್ www.dbcdc.karnataka.gov.in ವೆಬ್‌ಸೈಟ್ ಮೂಲಕ ಅಥವಾ ನೇರವಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಳ ಅಭಿವೃದ್ಧಿ ನಿಗಮ (ನಿ), ಉಡುಪಿ ಜಿಲ್ಲೆ, ಅಥವಾ ವೆಬ್ ಸೈಟ್ ನ್ನು ಸಂಪರ್ಕಿಸುವಂತೆ ತಿಳಿಸಿದೆ.
