ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ(ನಿ)ದಿಂದ ಸವಿತಾ ಸಮಾಜಕ್ಕೆ ಸೇರಿದ (ಪರಿಯಾಳ, ಅಂಬಟ್ಟನ್, ಬಜಂತ್ರಿ, ಭಂಡಾರಿ, ಚೌರಿಯ, ಹಡಪದ, ಕವುಟಿಯನ್, ಕೆಲಸಿ, ಕ್ಷೌರಿಕ, ಕ್ಷೌರದ್, ಮಹಾಲೆ, ಮಂಗಳ, ನಾಡಿಗ್, ಕ್ಷೌರಿಕ್, ಕ್ಷೌರಿಕ) ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಂಪ್ರಾದಾಯಿಕ ವೃತ್ತಿದಾರರ ಸಾಲ ಯೋಜನೆ ಹಾಗೂ ಸ್ವಯಂ ಉದ್ಯೋಗ ಸಾಲ ಯೋಜನೆಯಲ್ಲಿ ಸಾಲ ಸೌಲಭ್ಯ ಪಡೆಯಲು ಇಚ್ಛಿಸುವವರು ಉಚಿತವಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಇಚ್ಛಿಸುವವರು ಉಚಿತವಾಗಿ ಅರ್ಜಿ ನಮೂನೆಯನ್ನು ಜಿಲ್ಲಾ ಕಛೇರಿಯಲ್ಲಿ ಅಥವಾ ನಿಗಮದ ವೆಬ್ಸೈಟ್ www.dbcdc.karnataka.gov.in ನಲ್ಲಿ ಅರ್ಜಿಯೊಂದಿಗೆ ಜಾತಿ ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಫೋಟೋ ಮತ್ತು ಇತರೆ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಅಥವಾ ಆನ್ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇದ್ದಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ದಾಖಲಾತಿಗಳೊಂದಿಗೆ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ), ಉಡುಪಿ ಜಿಲ್ಲಾ ಕಛೇರಿಗೆ ಆಗಸ್ಟ್ 3…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿ ಕೈಗಾರಿಕಾ ಘಟಕಗಳ ನೋಂದಣಿ ಬಗ್ಗೆ 1.07.2020 ರಿಂದ ಉದ್ಯಮ ನೋಂದಣಿ ಚಾಲ್ತಿಯಲ್ಲಿದ್ದು, ಆನ್ಲೈನ್ನಲ್ಲಿ https://udyamregistration.gov.in/ ಲಿಂಕ್‌ನ್ನು ಬಳಸಿ ಉದ್ಯಮ ನೋಂದಣಿ ಪ್ರಮಾಣ ಪತ್ರ ಪಡೆಯಬಹುದಾಗಿದೆ. ಈ ನೋಂದಣಿಗೆ ಯಾವುದೇ ಶುಲ್ಕ ಇರುವುದಿಲ್ಲ. ಉತ್ಪಾದನೆ ಪ್ರಾರಂಭಿಸಿದ ನಂತರ ಎಲ್ಲಾ ಕೈಗಾರಿಕಾ ಘಟಕಗಳು ಆನ್ಲೈನ್ನಲ್ಲಿ ನೋಂದಣಿ ಮಾಡಬಹುದಾಗಿದೆ. ಅಲ್ಲದೇ 1.07.2020 ಕ್ಕಿಂತ ಹಿಂದೆ ಉದ್ಯೋಗ್ ಆಧಾರ್ ಅಥವಾ SSI Registration certificate ಅಥವಾ EM-II ನೋಂದಣಿ ಪಡೆದವರು ಸಹಾ ಉದ್ಯಮ ನೋಂದಣಿ( Udyam registration ) ಪಡೆಯಬೇಕಾಗಿರುತ್ತದೆ. ಆನ್ಲೈನ್ನಲ್ಲಿ ನೋಂದಣಿ ಮಾಡುವಾಗ ಉದ್ದಿಮೆದಾರರು ಸರಿಯಾದ ಲಿಂಕ್‌ನ್ನು ಉಪಯೋಗಿಸಲು ಸೂಚಿಸಲಾಗಿದೆ ಎಂದು ಉಡುಪಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಜಿಲ್ಲೆಯ ಅಂಗವಿಕಲರಿಗಾಗಿ, ಸರ್ಕಾರ ಅನುಷ್ಟಾನಗೊಳಿಸಿರುವ ಯೋಜನೆಗಳಾದ ವಿದ್ಯಾರ್ಥಿವೇತನ ಮತ್ತು ಪ್ರತಿಭಾ ಪ್ರೋತ್ಸಾಹಧನ, ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್, ಅಂಗವಿಕಲರ ದೈನಂದಿನ ಚಟುವಟಿಕೆಗಳಿಗೆ ಅಗತ್ಯವಿರುವ ಸಾಧನ ಸಲಕರಣೆ, ನಿವಾರಣಾ ಶಸ್ತ್ರಚಿಕಿತ್ಸೆಗೆ ವೈದ್ಯಕೀಯ ನೆರವು, ವಿಕಲಚೇತನರ ಬಸ್ ಪಾಸ್, ಸ್ವಯಂ ಉದ್ಯೋಗಕ್ಕಾಗಿ ಶೇ50%ರಷ್ಟು ಬ್ಯಾಂಕ್ ಸಾಲ ಮತ್ತು ಶೇ.50%ರಷ್ಟು ಸಬ್ಸಿಡಿ ಮೂಲಕ ಆಧಾರ ಸಾಲ ಯೋಜನೆ, ಯಂತ್ರಚಾಲಿತ ದ್ವಿಚಕ್ರವಾಹನ, ವಿಕಲಚೇತನ ವ್ಯಕ್ತಿಯನ್ನು ವಿವಾಹವಾಗುವ ಸಾಮಾನ್ಯ ವ್ಯಕ್ತಿಗೆ ವಿವಾಹ ಪ್ರೋತ್ಸಾಹಧನ, ಅಂಧ ಮಹಿಳೆಗೆ ಜನಿಸುವ ಮೊದಲನೇ ಮತ್ತು 2ನೇ ಮಗುವಿನ ಪಾಲನೆಗಾಗಿ ಶಿಶುಪಾಲನಾ ಭತ್ಯೆ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಸ್ಪರ್ಧಾ ಚೇತನ ಯೋಜನೆಗಳ ಷರತ್ತುಗಳಂತೆ 2020-21ನೇ ಸಾಲಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಯೋಜನೆಗಳ ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ: 0820-2574810 / 811…
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ 6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಸಮಯಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ ಬಾಲಕರಿಗೆ “ಹೊಯ್ಸಳ”ಮತ್ತು ಬಾಲಕಿಯರಿಗೆ “ಕೆಳದಿ ಚೆನ್ನಮ್ಮ” ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ. ಪ್ರಕರಣವು ಆಗಸ್ಟ್ 2019 ರಿಂದ ಜುಲೈ 2020 ರೊಳಗೆ ನಡೆದಿರಬೇಕು. ದಿನಾಂಕ: 01-08-2002 ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ .10000/-ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ. 2020-21 ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಉಪನಿರ್ದೇಶಕರು,ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಉಡುಪಿ ಇವರಿಂದ ಪಡೆದು ಭರ್ತಿಮಾಡಿ ಆಗಸ್ಟ್ 31 ರೊಳಗೆ ಸಲ್ಲಿಸತಕ್ಕದ್ದು.ಅರ್ಜಿಗಳನ್ನು ಕನ್ನಡ ಭಾಷೆಯಲ್ಲಿಯೇ ಸಲ್ಲಿಸತಕ್ಕದ್ದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಣೆಗಳಿಗಾಗಿ ,ಉಪನಿರ್ದೇಶಕರ ಕಛೇರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೋವಿಡ್ ವಿಪತ್ತಿನ ಸಹಾಯ ನಿಧಿ ರೋಟರಿ ಜಿಲ್ಲೆ 3182 ಜೋನ್-1ರ ವತಿಯಿಂದ ಸುಮಾರು ಎರಡು ಲಕ್ಷದ ಐವತ್ತು ಸಾವಿರ ಮೌಲ್ಯದ ಪಿಪಿಇ ಕಿಟ್, ಎನ್-೯೫ ಮಾಸ್ಕ್, ಟ್ರಿಪಲ್ ಲೇಯರ್ ಮಾಸ್ಕ್, ಥರ್ಮಲ್ ಸ್ಕ್ಯಾನರ್, ರೆಸ್ಪಿರೇಟರ್ ಹಾಗೂ ಪ್ಲಸ್ ಒಕ್ಸ್‌ಮಿಟರ್ ಕೊವೀಡ್ ಪರಿಕರಣಗಳನ್ನು ಜೋನ್-1ರ ನಿಕಟಪೂರ್ವ ಅಸಿಸ್ಟೆಂಟ್ ಗವರ್ನರ್ ರವಿರಾಜ್ ಶೆಟ್ಟಿಯವರು ಕುಂದಾಪುರ ಉಪ ವಿಭಾಗಾಧಿಕಾರಿ ರಾಜು ಕೆ. ಇವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಜೋನ್-1 ರ ಅಸಿಸ್ಟೆಂಟ್ ಗವರ್ನರ್ ಡಾ. ನಾಗಭೂಷಣ ಉಡುಪ ಅವರು 2019-20 ನೇ ಸಾಲಿನ ರೋಟರಿ ಜಿಲ್ಲೆ 3182 ಗವರ್ನರ್ ಬಿ.ಎನ್. ರಮೇಶ್ ಹಾಗೂ ವಲಯ 1ರ ಎಲ್ಲಾ ರೋಟರಿ ಅಧ್ಯಕ್ಷ, ಕಾರ್ಯದರ್ಶಿ, ವಲಯ ಸೇನಾನಿಗಳ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದರು. ತಾಲೂಕು ಆಸ್ಪತ್ರೆ ಕುಂದಾಪುರದ ಪಿಜಿಷೀಯನ್ ಡಾ. ನಾಗೇಶ, ಸೀನಿಯರ್ ಪಾರಮೆಸಿಸ್ಟ್ ಬಿ.ಎಮ್. ಚಂದ್ರಶೇಖರ್ ಹಾಗೂ ರೋಟರಿ ಕುಂದಾಪುರ ದಕ್ಷಿಣದ ನಿಕಟಪೂರ್ವಾಧ್ಯಕ್ಷ ದೇವರಾಜ್ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: 2019-20ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಉತ್ತಮ ಸಾಧನೆ ಮಾಡಿದ್ದು, ಶೇ. 95.6 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ ಒಟ್ಟು 159 ವಿದ್ಯಾರ್ಥಿಗಳ ಪೈಕಿ 152 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. 42 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 88 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 17 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಹಫ್ಸಾ (586), ವಾಣಿಜ್ಯ ವಿಭಾಗದಲ್ಲಿ ಅಕ್ಷಿತಾ (574) ಮತ್ತು ಯಶ್ರ (574) ಹಾಗೂ ಕಲಾ ವಿಭಾಗದಲ್ಲಿ ಚೈತ್ರ (557) ಕಾಲೇಜಿನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಗಣಿತಶಾಸ್ತ್ರ, ಅರ್ಥಶಾಸ್ತ್ರ ಮತ್ತು ಸಂಸ್ಕೃತದಲ್ಲಿ ತಲಾ ಮೂವರು ವಿದ್ಯಾರ್ಥಿಗಳು, ಅಕೌಂಟೆನ್ಸಿ, ಕಂಪ್ಯೂಟರ್ ಸಾಯನ್ಸ್ ಮತ್ತು ಬಯೋಲಜಿಯಲ್ಲಿ ತಲಾ ಒಬ್ಬರು 100 ಅಂಕ ಪಡೆದುಕೊಂಡಿದ್ದಾರೆ.
ರಾಜ್ಯ ಸರ್ಕಾರ ತಂದಿರುವ ಭೂಸುಧಾರಣೆ ಕಾಯ್ದೆ ತಿದ್ದುಪಡಿಯು , ಬಡವರಿಂದ ಭೂಮಿ ಕಿತ್ತುಕೊಂಡು ಬಂಡವಾಳ ಶಾಹಿಗಳಿಗೆ ನೀಡುವುದೇ ಸರ್ಕಾರದ ಅಜೆಂಡಾ. ರಾಜ್ಯದಲ್ಲಿ ಕೋವಿಡ್-19 ಸೋಂಕು ತೀವ್ರವಾಗಿ ಹರಡುತ್ತಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ಬಡವರ ಮತ್ತು ಕೃಷಿಕರ ವಿರುದ್ಧದ ಸುಗ್ರೀವಾಜ್ಞೆ ಹೊರಡಿಸಿರುವುದು ರಾಜ್ಯದ ಪಾಲಿಗೆ ಕರಾಳ ದಿನ ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿ ಆರೋಪಿಸಿದ್ದಾರೆ. ರಾಜ್ಯ ಸರ್ಕಾರ ಇಂತಹ ಸಂಧರ್ಭವನ್ನು ತನ್ನ ಸರ್ವಾಧಿಕಾರ ಬಳಸುತ್ತಿದೆ. ಸರ್ಕಾರ ತಿದ್ದುಪಡಿ ತರಲು ಹೊರಟಿರುವ ಭೂಸುಧಾರಣೆ ಕಾಯ್ದೆ, ರೈತರ, ಕೂಲಿಕಾರ್ಮಿಕರ, ಹಿಂದುಳಿದವರ ವಿರೋಧಿಯಾದಂತಹ ತಿದ್ದುಪಡಿಯ ಸುಗ್ರೀವಾಜ್ಞೆ ಹೊರಡಿಸಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಿದೆ. ಹಸಿರು ಶಾಲು ಹೊದ್ದು ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿರುವುದು ಕಪಟ ನಾಟಕವಾಗಿದೆ. ಭೂಸುಧಾರಣೆ ಕಾಯ್ದೆ(1961)ಗೆ 1974ರಲ್ಲಿ ದೇವರಾಜ ಅರಸು ಅವರು ಸೆಕ್ಷನ್ 63, ಸೆಕ್ಷನ್ 79 ಎ , ಸೆಕ್ಷನ್ 79 ಬಿ ,ಸೆಕ್ಷನ್ 79 ಸಿ ಹಾಗೂ ಸೆಕ್ಷನ್ 80 ಇವುಗಳನ್ನು ಸೇರ್ಪಡೆಗೊಳಿಸಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜು.17ರ ಶುಕ್ರವಾರ 84 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 40, ಉಡುಪಿ ತಾಲೂಕಿನ 33 ಹಾಗೂ ಕಾರ್ಕಳ ತಾಲೂಕಿನ 11 ಮಂದಿಗೆ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ 50 ಪುರುಷರು, 34 ಮಹಿಳೆಯರು ಸೇರಿದ್ದಾರೆ. ಇವರಲ್ಲಿ 7 ಮಂದಿ ಮಂಬೈ ಪ್ರಯಾಣದ ಹಿನ್ನೆಲೆ, 6 ಮಂದಿ ಬೆಂಗಳೂರು, 3 ಮಂದಿ ಮಂಗಳೂರು, ತಲಾ ಓರ್ವ ವ್ಯಕ್ತಿ ದುಬೈ ಹಾಗೂ ಅಬಿದಾಬಿ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಉಳಿದ ಪ್ರಕರಣಗಳು ಪ್ರಾಥಮಿಕ ಸಂಪರ್ಕದಿಂದ ಹಾಗೂ ILI ಪ್ರಕರಣಗಳಾಗಿವೆ. 489 ನೆಗೆಟಿವ್: ಈ ತನಕ ಒಟ್ಟು 23,858 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 21,465 ನೆಗೆಟಿವ್, 1,979 ಪಾಸಿಟಿವ್ ಬಂದಿದ್ದು, 414 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 309 ನೆಗೆಟಿವ್, 84 ಪಾಸಿಟಿವ್ ಬಂದಿದೆ. ಒಟ್ಟು 2,124 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ. 429 ಸಕ್ರಿಯ ಪ್ರಕರಣ:…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಪ್ರಕರಣಗಳು ವರದಿಯಾಗುತ್ತಿದ್ದು, ರೋಗಿಗಳ ಚಿಕಿತ್ಸೆ ಬಗ್ಗೆ ಹಾಲಿ ಇರುವ ವ್ಯವಸ್ಥೆಯನ್ನು ಉನ್ನತಿಕರಿಸಬೇಕಾದ ಅಗತ್ಯತೆ ಇದೆ. ಅದೇ ರೀತಿ ವೈದ್ಯರು/ಸ್ಟಾಫ್ ನರ್ಸ್‌ಗಳ ಅಗತ್ಯವಿದೆ. ಅಲ್ಲದೇ ಲ್ಯಾಬ್‌ಗಳಲ್ಲಿ ಲ್ಯಾಬ್ ಟೆಕ್ನೀಶೀಯನಗಳ ಕೆಲಸ ಅವಶ್ಯಕತೆ ಇರುತ್ತದೆ. ಆದುದರಿಂದ ಸ್ವಯಂ ಪ್ರೇರಿತರಾಗಿ ಕಾರ್ಯನಿರ್ವಹಿಸಲು ಇಚ್ಚಿಸುವ ವೈದ್ಯರು, ಸ್ಟಾಫ್ ನರ್ಸ್‌ಗಳು ಮತ್ತು ಲ್ಯಾಬ್ ಟೆಕ್ನಿಶಿಯನ್‌ಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಉಡುಪಿ ಇವರನ್ನು ಸಂಪರ್ಕಿಸಬಹುದಾಗಿದೆ. ಜಿಲ್ಲೆಯ ಸರ್ಕಾರಿ ಕೋವಿಡ್ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ವೆಂಟಿಲೇಟರ್‌ಗಳು ಮತ್ತು ಹೈ ಪ್ರೆಜರ್ ಆಕ್ಸಿಜನ್ ಸಿಸ್ಟಮ್‌ಗಳ ತೀರಾ ಅವಶ್ಯಕತೆ ಇರುವುದರಿಂದ ವೆಂಟಿಲೇಟರ್ ಹಾಗೂ ಹೈ ಪ್ರೆಜರ್ ಆಕ್ಸಿಜನ್ ಸಿಸ್ಟಮ್‌ಗಳನ್ನು ನೀಡಲು ಇಚ್ಚಿಸುವ ದಾನಿಗಳು /ಸಂಘ ಸಂಸ್ಥೆಗಳು ಜಿಲ್ಲಾಧಿಕಾರಿ ಕಚೇರಿಗೆ ಹಸ್ತಾಂತರಿಸಿ ಕೋವಿಡ್ -೧೯ ನಿಯಂತ್ರಣದಲ್ಲಿ ಜಿಲ್ಲಾಡಳಿತದೊಂದಿಗೆ ಕೈ ಜೋಡಿಸಿ ಸಹಕರಿಸಲು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಕ್ವಾರಂಟೈನ್ ಉಲ್ಲಂಘಿಸಿದ್ದಲ್ಲಿ ಕಠಿಣ ಕ್ರಮ: ಜಾಗತಿಕ ಸೋಂಕಾಗಿರುವ ಕೋವಿಡ್-19 ರೋಗವು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಾಡ ಗ್ರಾಮದ ಚುಂಗಿಗುಡ್ಡೆ ಲಕ್ಷ್ಮೀನಾರಾಯಣ ಹೆಬ್ಬಾರ್-ಜ್ಯೋತಿ ಹೆಬ್ಬಾರ್ ದಂಪತಿಯ ಪುತ್ರಿ ಅನನ್ಯಾ ಹೆಬ್ಬಾರ್ ಈ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ಶೇ 99 ಅಂಕ ಗಳಸಿ ರಾಜ್ಯದಲ್ಲಿ ಐದನೆ ಸ್ಥಾನ ಗಳಿಸಿದ್ದಾಳೆ. ಈಕೆ ಬೆಂಗಳೂರು ಮಲ್ಲೇಶ್ವರದ ವಿದ್ಯಾಮಂದಿರ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ. ಇಂಗ್ಲಿಷ್‌ನಲ್ಲಿ 94 ಅಂಕ ಬಂದಿದ್ದು, ಉಳಿದ ಐದು ವಿಷಯಗಳಾದ ಸಂಸ್ಕೃತ, ವ್ಯವಹಾರ ಶಾಸ್ತ್ರ, ಲೆಕ್ಕಾಚಾರ ಶಾಸ್ತ್ರ, ಸಂಖ್ಯಾ ಶಾಸ್ತ್ರ, ಮೂಲಗಣಿತದಲ್ಲಿ 100 ಅಂಕಗಳು ಬಂದಿವೆ.
