Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಆಲೂರಿನ ಚಿತ್ರಕೂಟ ಆಯುರ್ವೇದ ಸಂಸ್ಥೆಯ ವತಿಯಿಂದ ಮಕ್ಕಳ ದಿನಾಚರಣೆಯ ಪ್ರಯುಕ್ತ ಬೈಂದೂರು ತಾಲೂಕಿನಾದ್ಯಂತ ‘ಶಿಶು ಪೋಷಕ್’ ಶಿಶುವಿನ ಆಹಾರವನ್ನು ಆಶಾ ಕಾರ್ಯಕರ್ತರ ಮೂಲಕ ಮನೆ ಮನೆಗೆ ತಲುಪಿಸಲಾಯಿತು. ಚಿತ್ರಕೂಟದ ಮುಖ್ಯಸ್ಥ ಡಾ ರಾಜೇಶ್ ಬಾಯಾರಿಯವರ ನೇತೃತ್ವದಲ್ಲಿ ಮರವಂತೆ, ಬೈಂದೂರು, ನಾಡ, ಆಲೂರು, ಚಿತ್ತೂರು, ಮಾರಣಕಟ್ಟೆಯ ಆಸುಪಾಸಿನ ಮಕ್ಕಳಿಗೆ ಶಿಶುವಿನ ಮಾನಸಿಕ ಹಾಗು ಬೌದ್ಧಿಕ ಬೆಳವಣಿಗೆಗೆ ಪೂರಕವಾಗುವಂತ ಶಿಶು ಆಹಾರವಾದ ಶಿಶುಪೋಷಕ್ ಆಹಾರವನ್ನು ವಿತರಿಸಲಾಯಿತು. ಏನಿದು ಶಿಶು ಪೋಷಕ್? ಮಾರುಕಟ್ಟೆಯಲ್ಲಿ ಬಹು ಬೇಡಿಕೆಯಿರುವ ಈ ಉತ್ಪನ್ನವು ಮಕ್ಕಳ ಆರೋಗ್ಯದಾಯಕ ಬೆಳವಣಿಗೆಗೆ ಸಹಕಾರಿಯಾಗಿದೆ. ಶಿಶು ಪೋಷಕ್ ಉತ್ಪನ್ನವು ಉತ್ತಮ ಗುಣಮಟ್ಟದ ಆಯ್ದ ಧಾನ್ಯಗಳಿಂದ ಸ್ವಚ್ಛ ಹಾಗು ಆರೋಗ್ಯಕರ ಪ್ರದೇಶಗಳಲ್ಲಿ ತಯಾರಿಸಲಾಗುತ್ತಿದೆ. ಶಿಶು ಪೋಷಕ್ 6 ತಿಂಗಳು ಮೇಲ್ಪಟ್ಟ ಮಕ್ಕಳಿಗೆ ನೀಡುವ ಅಹಾರವಾಗಿದ್ದು ಇದರಲ್ಲಿ ಯಾವುದೇ ರಾಸಾಯನಿಕ, ಸಂರಕ್ಷಕಗಳನ್ನು ಒಳಗೊಂಡಿಲ್ಲ. ಇದರಲ್ಲಿ ಬಳಸುವ ಏಕದಳ, ದ್ವಿದಳ ಧಾನ್ಯಗಳು, ಸಿರಿಧಾನ್ಯಗಳು ಸರಿಯಾದ ಪ್ರಮಾಣದಲ್ಲಿ ಒಳಗೊಂಡಿರುವುದು ಪ್ರಯೋಗಾಲಯದಲ್ಲಿ ಪರೀಕ್ಷೆಗೊಳಪಟ್ಟು ಪ್ರಮಾಣೀಕರಿಸಲಾಗಿದ್ದು ಯಾವುದೇ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಬರುವ ಜಿಲ್ಲೆಯ ಮಕ್ಕಳ ರಕ್ಷಣಾ ಘಟಕ, ಉಡುಪಿ ಜಿಲ್ಲೆಯಲ್ಲಿ ಖಾಲಿ ಇರುವ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ನವೆಂಬರ್ 27 ರ ಒಳಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ರಜತಾದ್ರಿ, ಮಣಿಪಾಲ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ. ಸಂ: 0820-2574964 ನ್ನು ಸಂಪರ್ಕಿಸುವಂತೆ ಜಿಲ್ಲಾ ಸಮಗ್ರ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 6 ರಿಂದ 14 ವರ್ಷದೊಳಗಿನ ಪ್ರತಿಭಾವಂತ ಮಕ್ಕಳಿಗೆ ಚಿಗುರು ಕಾರ್ಯಕ್ರಮ, 15 ರಿಂದ 30 ವರ್ಷದೊಳಗಿನ ಪ್ರತಿಭಾವಂತ ಯುವ ಕಲಾವಿದರಿಗೆ ಯುವ ಸೌರಭ ಮತ್ತು ಆಕಾಶವಾಣಿ ಬಿ ಹೈಗ್ರೇಡ್ ಹಾಗೂ ಸರಕಾರದಿಂದ ನೀಡುವ ಪ್ರಶಸ್ತಿ ಪುರಸ್ಕೃತ ಕಲಾವಿದರಿಂದ ಸಾಂಸ್ಕೃತಿಕ ಸೌರಭ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 27 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ದೂ. ಸಂ: 0820-2986168 ಅನ್ನು ಸಂಪರ್ಕಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯ ಸರ್ಕಾರದ ಪರಿಸರ ನಿರ್ವಹಣೆ ಮತ್ತು ನೀತಿಯ ಸಂಶೋಧನಾ ಸಂಸ್ಥೆಯ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ಅನುದಾನದ ಮೂಲಕ ದತ್ತು ಪಡೆದು ಇಲ್ಲಿನ ಸಮೀಪದ ಕೋಡಿ ಕಡಲ ಕಿನಾರೆಯ ಸೀವಾಕ್ ಪರಿಸರವನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಪರಿಸರ ವಿಭಾಗದ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರಾದೇಶಿಕ ನಿರ್ದೇಶಕ, ಅರಣ್ಯ ಇಲಾಖೆ ಡಿಸಿಎಫ್ ಡಾ.ದಿನೇಶ್ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾಹಿತಿ ನೀಡಿದ ಸಂಸ್ಥೆಯ ಕಾರ್ಯಕ್ರಮ ಅಧಿಕಾರಿ ಸತ್ಯಶ್ರೀ ಗೌತಮ್, ‘ಕಳೆದ ವರ್ಷ ಎರಡು ಜಿಲ್ಲೆಗಳ 6 ಸಮುದ್ರ ಕಿನಾರೆಗಳಲ್ಲಿ ಸ್ವಚ್ಛತಾ ಜಾಗೃತಿ ಮೂಡಿಸಲಾಗಿತ್ತು. ಇದರ ಮುಂದುವರಿದ ಭಾಗವಾಗಿ ಕೋಡಿ ಕಿನಾರೆಯಲ್ಲಿ ಸ್ಚಚ್ಛತಾ ಕಾರ್ಯ ಆರಂಭಿಸಲಾಗಿದೆ. ಮಾರ್ಚ್ 31ರವರಿಗೆ ನಿತ್ಯವೂ ಸ್ವಚ್ಛತೆ ನಡೆಯಲಿದೆ ಎಂದು ತಿಳಿಸಿದರು. ಕೋಡಿ ಸೀವಾಕ್ ಸಮೀಪದ ಅರಣ್ಯ ಇಲಾಖೆ ಜಾಗದಲ್ಲಿ ‘ಬೀಚ್ ಇಕೋ ಪಾರ್ಕ್’ ಹಾಗೂ ’ಟ್ರೀ ಪಾರ್ಕ್’ ನಿರ್ಮಾಣವಾಗಲಿದೆ ಎನ್ನುವ ಮಾಹಿತಿಯನ್ನು ಅಧಿಕಾರಿಗಳು ನೀಡಿದರು. ಅರಣ್ಯ ಇಲಾಖೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಲಯನ್ಸ್ ಕ್ಲಬ್ ಕುಂದಾಪುರ ವಿಶ್ವ ಲಯನ್ಸ್ ಸೇವಾ ಸಪ್ತಾಹದ ಅಂಗವಾಗಿ ನಡೆಸಿರುವಂತಹ ರಿಲೀವ್ ದ ಹಂಗರ್ ಕಾರ್ಯಕ್ರಮದ ಅಂಗವಾಗಿ ಸಿಸಿಲಿ ಕೋಟ್ಯಾನ್ ರವರು ನಡೆಸಿಕೊಂಡು ಬರುತ್ತಿರುವ ಚೈತನ್ಯ ವೃದ್ಧಾಶ್ರಮಕ್ಕೆ ಅವಶ್ಯಕತೆ ಇರುವಂತಹ ಊಟದ ಅಕ್ಕಿಯನ್ನು ಲಯನ್ಸ್ ಕ್ಲಬ್ ಕುಂದಾಪುರ ವತಿಯಿಂದ ನೀಡಿರುತ್ತಾರೆ. ಲಯನ್ಸ್ ಕ್ಲಬ್ ಕುಂದಾಪುರದ ಅಧ್ಯಕ್ಷರಾದ ಲಯನ್ ಚಂದ್ರಶೇಖರ್ ಕಲ್ಪತರು, ಲಯನ್ ರಾಜೀವ್ ಕೋಟ್ಯಾನ್, ಲಯನ್ ನವೀನ್ ಕುಮಾರ್ ಶೆಟ್ಟಿ, ಲಯನ್ ವೇಣುಗೋಪಾಲ ಶೆಟ್ಟಿ ಹಾಗೂ ಸಂಸ್ಥೆಯ ಸಿಸಿಲಿ ಕೋಟ್ಯಾನ್ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಮಿಜಾರ್‌ನ ಶೋಭಾವನ ಕ್ಯಾಂಪಸ್‌ನ ‘ಆಳ್ವಾಸ್ ಪುನರ್ಜನ್ಮ’ಸಮಗ್ರ ವೈದ್ಯಕೀಯ ಚಿಕಿತ್ಸೆಯ ದುಶ್ಚಟ ನಿವಾರಣಾ ಕೇಂದ್ರದಲ್ಲಿ ’ಕುಟುಂಬ ಸಮ್ಮಿಲನ ಸಭೆ’ ಹಾಗೂ ದೀಪಾವಳಿ ಆಚರಣೆ ನಡೆಯಿತು. ಸಭೆಯಲ್ಲಿ ಉಪಸ್ಥಿತರಿದ್ದ ಆಯುರ್ವೇದ ಮನೋರೋಗ ತಜ್ಞ ಡಾ. ರವಿ ಪ್ರಸಾದ ಹೆಗ್ಡೆ ಮಾತನಾಡಿ, ಹಲವು ಸಂಧರ್ಭದಲ್ಲಿ ಕುಡಿತ ಮನುಷ್ಯ ತಾನಾಗಿಯೆ ಕಲಿಯುವುದಲ್ಲ. ಇನ್ನೊಬ್ಬರ ಒತ್ತಾಯದಿಂದ ಕುಡಿಯುತ್ತಾನೆ. ನಂತರ ದಿನಗಳಲ್ಲಿ ಕುಡಿತ ಚಟವಾಗಿ ಮಾರ್ಪಟ್ಟು, ದುಡಿತ ಕಡಿಮೆಯಾಗಿ ಕುಡಿತ ಅಧಿಕವಾದಾಗ ಜೀವನ ನಡೆಸುವುದು ಕಷ್ಟವಾಗಿ ಬಿಡುತ್ತದೆ ಎಂದು ಹೇಳಿದರು. ಆಳ್ವಾಸ್ ಪದವಿ ಸಮಾಜಕಾರ‍್ಯ ವಿಭಾಗದ ಮುಖ್ಯಸ್ಥೆ ಡಾ ಮಧುಮಾಲ ಮಾತನಾಡಿ, ವ್ಯಸನಗಳಿಗೆ ಒಳಗಾಗಿದ್ದವರು, ವ್ಯಸನ ಮುಕ್ತರಾಗಬೇಕೆಂಬ ದೊಡ್ಡ ನಿರ್ಧಾರ ತೆಗೆದುಕೊಳ್ಳುವುದು ಚಿಕ್ಕ ವಿಷಯವಲ್ಲ. ಕುಡಿತದಿಂದ ಸಮಾಜದಲ್ಲಿ ಗೌರವ ಹಾಳಾಗುವುದರೊಂದಿಗೆ ಜನರು ಕೀಳಾಗಿ ನೋಡುತ್ತಾರೆ. ಕುಡಿತದಿಂದ ಪಡೆದು ಕೊಳ್ಳುವುದು ಎನೂ ಇಲ್ಲಾ, ಎಲ್ಲವೂ ಕಳೆದು ಕೊಳ್ಳುವುದೇ ಎಂದು ತಿಳಿಸಿದರು. ಕಾರ‍್ಯಕ್ರಮದಲ್ಲಿ ಕೊನೆಯಲ್ಲಿ ದೀಪ ಹಚ್ಚುವುದರ ಮೂಲಕ ಅಜ್ಞಾನ, ದುಷ್ಚಟವೆಲ್ಲ ಕಳೆದು, ಸುಜ್ಞಾನ ಮೂಡಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಲಯನ್ಸ್ ಕ್ಲಬ್ ಕುಂದಾಪುರ, ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜು ಹಾಗೂ ಶ್ರೀ ವಿನಾಯಕ ಕ್ಲಿನಿಕ್ ಇವರ ಸಹಯೋಗದಲ್ಲಿ ಉಚಿತ ಮಧುಮೇಹ ಪರೀಕ್ಷಾ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಲಯನ್ಸ್ ಕ್ಲಬ್ ಕುಂದಾಪುರ ಅಧ್ಯಕ್ಷ ಲಯನ್ ಚಂದ್ರಶೇಖರ ಕಲ್ಪತರು, ಘಟಕದ ಕಾರ್ಯದರ್ಶಿ ಪ್ರೊ. ರಾಜೇಂದ್ರ, ಲಯನ್ಸ್ ಕ್ಲಬ್ ನ ಡಿಸ್ಟ್ರಿಕ್ಟ್ ಕ್ಯಾಬಿನೇಟ್ ಮೆಂಬರ್ ಲಯನ್ ರಾಜೀವ ಕೋಟ್ಯಾನ್, ರೀಜನಲ್ ಸೆಕ್ರೆಟರಿ ಲಯನ್ ವೇಣುಗೋಪಾಲ್ ಶೆಟ್ಟಿ, ಉದ್ಯಮಿ ರಾಧಾಕೃಷ್ಣ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ನವೀನ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಶ್ರೀ ವಿನಾಯಕ ಕ್ಲಿನಿಕಲ್ ಲ್ಯಾಬ್ ನ ಸಿಬ್ಬಂದಿ ಬೇಬಿ ಮಧುಮೇಹ ಪರೀಕ್ಷೆಯನ್ನು ನಡೆಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಪ್ರಸಕ್ತ ಸಾಲಿನಲ್ಲಿ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗದವರಿದ ನಿಗಮದ ವಿವಿಧ ಯೋಜನೆಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್‌ಲೈನ್ kmdc.kar.nic.in/loan  ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 10 ಕೊನೆಯ ದಿನವಾಗಿದ್ದು, ದಾಖಲಾತಿಗಳೊಂದಿಗೆ ಅರ್ಜಿಯನ್ನು ಜಿಲ್ಲಾ ಕಛೇರಿಗೆ ಸಲ್ಲಿಸಲು ಡಿಸೆಂಬರ್ 21 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಉಡುಪಿ ಜಿಲ್ಲೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ. ಮೈಕ್ರೋ ಸಾಲ ಯೋಜನೆ-ಮಹಿಳೆಯರಿಂದ ಅರ್ಜಿ ಆಹ್ವಾನ ಕೋವಿಡ್-19ರ ಪಿಡುಗಿನಿಂದಾಗಿ ತೊಂದರೆಗೊಳಗಾದ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಯಾವುದೇ ಯೋಜನೆಯಲ್ಲೂ ಇದುವರೆಗೆ ಸಾಲ, ಸಹಾಯಧನ ಪಡೆಯದ ಇರುವ ಅಲ್ಪಸಂಖ್ಯಾತ ಸಮುದಾಯದ ಅಂತ್ಯೋದಯ/ ಬಿಪಿಎಲ್ ಕಾರ್ಡ್ ಹೊಂದಿರುವ 25 ರಿಂದ 50 ವಯೋಮಾನದೊಳಗಿನ ಮಹಿಳೆಯರಿಗೆ ತಳ್ಳುವ ಗಾಡಿಯಲ್ಲಿ ವ್ಯಾಪಾರ, ಬೀದಿ ವ್ಯಾಪಾರ, ಜಾತ್ರೆಗಳಲ್ಲಿ ವ್ಯಾಪಾರ, ಕಿರಾಣಿ ಅಂಗಡಿ, ಅರಿಷಿನ/ಕುಂಕುಮ/ ಅಗರಬತ್ತಿ/ಕರ್ಪೂರ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ಗೆ ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಚ್.ವಿ. ಇಬ್ರಾಹಿಮಾಪೂರ  ಭೇಟಿ ನೀಡಿ ಕಾರಂತರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಆರ್ಟ್ ಗ್ಯಾಲರಿ, ರಂಗ ಮಂದಿರ, ಅಂಗನವಾಡಿ, ಗ್ರಂಥಾಲಯ ವೀಕ್ಷಿಸಿದರು. ವೀಕ್ಷಿಸಿ ಮಾತನಾಡಿದ ಎಚ್.ವಿ. ಇಬ್ರಾಹಿಮಾಪೂರ, ಕಾರಂತರು ನಮಗಾಗಿ ತುಂಬಾ ನೆನಪುಗಳನ್ನು, ಬದುಕಿನ ಪಾಠಗಳನ್ನು ನೀಡಿದ್ದಾರೆ ಅದನ್ನು ಜನರಿಗೆ ತಲುಪಿಸುವ ಕಾರ್ಯ ಕಾರಂತ ಥೀಮ್ ಪಾರ್ಕ್‌ನಿಂದ ಆಗುತ್ತಿದ್ದೆ, ಇದು ಇನ್ನಷ್ಟೂ ಪ್ರಸಿದ್ದಿ ಹೊಂದಿ ಇನ್ನಷ್ಟೂ ಪ್ರವಾಸಿಗರು ಆಗಮಿಸಿ ಕಾರಂತ ಬದುಕು – ಬರಹ ಎಲ್ಲಾರಿಗೂ ತಲುಪುವಂತೆ ಆಗಲಿ ಎಂದು ಹೇಳಿದರು. ಅಂಗನವಾಡಿಯ ಸ್ತ್ರೀ – ಶಕ್ತಿ ಸಂಘದ ಸದಸ್ಯರಿಗೆ ಬಚ್ಚಲು ಗುಂಡಿ ನಿರ್ಮಾಣ – ಪೌಷ್ಠಿಕ ತೋಟದ ನಿರ್ಮಾಣಕ್ಕೆ ಸರಕಾರಿಂದ ಸಿಗುವ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಬ್ರಹ್ಮಾವರ ತಾಲೂಕು ಪಂಚಾಯತ್ ಪ್ರಭಾರ ಸಹಾಯಕ ನಿರ್ದೇಶಕ ಮಹೇಶ್ , ಕೋಟತಟ್ಟು ಗ್ರಾಮ ಪಂಚಾಯತ್ ಪಿ.ಡಿ.ಓ ಶೈಲಾ ಎಸ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ದೀಪಾವಳಿ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಹಸಿರು ಪಟಾಕಿ ಗಳನ್ನು ಮಾತ್ರ ಮಾರಾಟಬೇಕು ಹಾಗೂ ಸಾರ್ವಜನಿಕರು ಪಟಾಕಿ ಸಿಡಿಸುವ ಸಮಯವನ್ನು ಸರ್ಕಾರದ ಅದೇಶದಂತೆ ರಾತ್ರಿ 8 ರಿಂದ 10 ರ ವರಗೆ ಮಾತ್ರ ಸಿಡಿಸಬೇಕು, ನಿಗಧಿತ ಅವಧಿಗಿಂತ ಮುಂಚೆ ಹಾಗೂ ನಿಗಧಿತ ಅವಧಿಯ ನಂತರ ಪಟಾಕಿ ಸಿಡಿಸುವವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಸುರಕ್ಷಿತ ರೀತಿಯಲ್ಲಿ ದೀಪಾವಳಿ ಹಬ್ಬವನ್ನು ಆಚರಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾರ್ವಜನಿಕರು ನಿಗಧಿತ ಅವಧಿಯಲ್ಲಿ ಮಾತ್ರ ಪಟಾಕಿ ಸಿಡಿಸಬೇಕು, ಈ ಕುರಿತ ಪರಿಶೀಲಿಸಲು ಬೀಟ್ ನಲ್ಲಿರುವ ಪೊಲೀಸ್ ಸಿಬ್ಬಂದಿಯನ್ನು ಬಳಸಿಕೊಳ್ಳುವಂತೆ ಪೊಲೀಸ್ ಇಲಾಖೆಗೆ ಮತ್ತು ಎಲ್ಲಾ ತಹಸೀಲ್ದಾರ್ ಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು. ಪಟಾಕಿ ಮಳಿಗೆಗಳಲ್ಲಿ ಹಸಿರು ಪಟಾಕಿ ಮಾತ್ರ ಮಾರಾಟ ಮಾಡಬೇಕು, ನಿಷೇಧಿತ ಪಟಾಕಿಯನ್ನು ಮಾರಾಟ ಮಾಡಿದ್ದಲ್ಲಿ ಅಂತಹ ಅಂಗಡಿಗಳ ಮಾಲೀಕರ ವಿರುದ್ದ ಪ್ರಕರಣ ದಾಖಲಿಸಲಾಗುವುದು…

Read More