Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಬೈಂದೂರು – ಗಂಗಾನಾಡು ಮಾರ್ಗದಲ್ಲಿ ಎತ್ತಬೇರು ಹಾಗೂ ಮಾವಡ ನಡುವಿನ ಕಿರು ಸಂಪರ್ಕ ಸೇತುವೆ ಶಿಥಿಲಗೊಂಡು ಮುರಿದುಬಿದ್ದು ಎರಡು ವರ್ಷ ಕಳೆದಿದ್ದರೂ ಮರುನಿರ್ಮಾಣವಾಗದೆ ಸಂಚಾರಕ್ಕೆ ತೊಡಕಾಗಿದೆ. ಗ್ರಾಮೀಣ ಭಾಗದ ನಡೆದಾರಿ ಮತ್ತು ಸಣ್ಣ ವಾಹನ ಸಂಚರಿಸುವ ಈ ಮಾರ್ಗ ಅಲ್ಲಿನ ಜನರ ಜೀವನಾಡಿ. ಈಗಲೂ ಅದರಲ್ಲೇ ಓಡಾಡುತ್ತಿದ್ದಾರೆ. ಮಳೆಗಾಲದಲ್ಲಿ ಅದರ ಮೇಲೆ ಹಳ್ಳದ ನೀರು ಹರಿಯುವುದರಿಂದ ಸಂಚಾರ ಸಾಧ್ಯವಾಗುವುದಿಲ್ಲ. ಸ್ಥಳೀಯರು ಹಲವು ಬಾರಿ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಮನವಿ ನೀಡಿರೂ ಕ್ರಮ ಆಗಿಲ್ಲ. ಈ ಬಗ್ಗೆ ಬೇಸತ್ತಿರುವ ಜನಸಾಮಾನ್ಯರು ಶೀಘ್ರ ದುರಸ್ತಿಗೆ ಆಗ್ರಹಿಸಿದ್ದಾರೆ ‘ಯಡ್ತರೆ, ಬೈಂದೂರು ಹಾಗೂ ಪಡುವರಿ ಗ್ರಾಮ ಪಂಚಾಯಿತಿಗಳು ವಿಲೀನಗೊಂಡು ಎರಡು ತಿಂಗಳುಗಳು ಆಗಿವೆ. ಇಷ್ಟರಲ್ಲೇ ವ್ಯಾಪ್ತಿಯಲ್ಲಿ ಕೆಟ್ಟು ಹೋಗಿರುವ ರಸ್ತೆ, ಸೇತುವೆಗಳ ದುರಸ್ತಿ ಬಗ್ಗೆ ಕ್ರಿಯಾಯೋಜನೆ ಸಿದ್ಧಪಡಿಸಿದೆ. ಅಂದಾಜು ವೆಚ್ಚದ ಕರಡು ಪಟ್ಟಿಯನ್ನು ಸಂಬಂಧಪಟ್ಟವರಿಗೆ ಕಳುಹಿಸಲಾಗಿದೆ. ಅನುದಾನ ಬಿಡುಗಡೆಯಾದ ನಂತರ ಎಲ್ಲ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು. ಹಾಗೂ ಎತ್ತಬೇರು-ಮಾವಡ ಸೇತುವೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಮೂರು ವರ್ಷಗಳ ಅವಧಿಗೆ ನೂತನ ವ್ಯವಸ್ಥಾಪನಾ ಸಮಿತಿಯನ್ನು ಆಯ್ಕೆ ಮಾಡಲಾಗಿದೆ. ನೂತನ ಸಮಿತಿಗೆ ಪಾಳಿಯಲ್ಲಿರುವ ಪ್ರಧಾನ ಅರ್ಚಕರಾದ ಡಾ. ಕೆ. ರಾಮಚಂದ್ರ ಅಡಿಗ, ಮಹಿಳಾ ಮೀಸಲಾತಿಯಲ್ಲಿ ರತ್ನಾ ರಮೇಶ್‌ ಕುಂದರ್‌ ಕೊಲ್ಲೂರು, ಸಂಧ್ಯಾ ರಮೇಶ್‌ ಮಚ್ಚಟ್ಟು, ಪರಿಶಿಷ್ಟ ಜಾತಿ ಮೀಸಲಾತಿಯಲ್ಲಿ ಗೋಪಾಲಕೃಷ್ಣ ರಾಮನಗರ ಸೇನಾಪುರ, ಸಾಮಾನ್ಯ ವರ್ಗದಿಂದ ಕೆರಾಡಿ ಚಂದ್ರಶೇಖರ ಶೆಟ್ಟಿ, ಗಣೇಶ್‌ ಕಿಣಿ ಬೆಳ್ವೆ, ಡಾ. ಅತುಲ್‌ಕುಮಾರ ಶೆಟ್ಟಿ ಚಿತ್ತೂರು, ಜಯಾನಂದ ಹೋಬಳಿದಾರ ಬೈಂದೂರು ಹಾಗೂ ಶೇಖರ ಪೂಜಾರಿ ಕಾರ್ಕಡ ಆಯ್ಕೆಯಾಗಿದ್ದಾರೆ. ಸಮಿತಿಗೆ ಈ ಬಾರಿ 158 ಅರ್ಜಿಗಳು ಬಂದಿದ್ದು, ಅರ್ಜಿದಾರರ ಅರ್ಹತೆ, ವಿಳಾಸ ಹಾಗೂ ಹಿನ್ನೆಲೆಯನ್ನು ಪರಿಶೀಲಿಸಿ ನೂತನ ಸಮಿತಿ ಸದಸ್ಯರ ಆಯ್ಕೆ ಮಾಡಲಾಗಿದೆ. ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ವ್ಯವಸ್ಥಾಪನ ಸಮಿತಿಯ ಪದನಿಮಿತ್ತ ಕಾರ್ಯದರ್ಶಿಯಾಗಿರುತ್ತಾರೆ. ನೂತನ ಸದಸ್ಯರು ಪ್ರಥಮ ಸಭೆಯಲ್ಲಿ ತಮ್ಮಲ್ಲಿಯೇ ಒಬ್ಬರನ್ನು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭತ್ತ ಕಟಾವು ಯಂತ್ರಗಳಿಗೆ ದುಬಾರಿ ಬಾಡಿಗೆ ನಿಗದಿಗೊಳಿಸುವ ಮೂಲಕ ರೈತರನ್ನು ಶೋಷಿಸಲಾಗುತ್ತಿದೆ ಎಂದು ಖಂಬದಕೋಣೆ ವ್ಯಾಪ್ತಿಯ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ರೈತಸಿರಿ ಸಭಾಭವನದಲ್ಲಿ ನಡೆದ ವ್ಯಾಪ್ತಿಯ 9 ಗ್ರಾಮಗಳ ರೈತರ ಮಾಸಿಕ ಸಭೆಯಲ್ಲಿ ಯಂತ್ರಗಳ ಲಭ್ಯತೆ ಮತ್ತು ದರ ಕುರಿತು ಗಂಭೀರ ಚರ್ಚೆ ನಡೆಯಿತು. ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ರೈತರಿಗೆ ಬಾಡಿಗೆ ಮೇಲೆ ಕಟಾವು ಯಂತ್ರ ಒದಗಿಸುವ ವ್ಯವಹಾರದಲ್ಲಿ ದಲ್ಲಾಳಿಗಳ ಕೈವಾಡ ನಡೆಯುತ್ತಿದೆ. ಅವರು ಗಂಟೆಗೆ ರೂ 2,400 ರೂ 2,500 ಕೊಡಬೇಕು ಎನ್ನುತ್ತಿದ್ದಾರೆ. ಇದರ ಕುರಿತು ಕೃಷಿ ಅಧಿಕಾರಿಗಳ ಗಮನ ಸೆಳೆದರೆ ಖಾಸಗಿಯವರ ಮೇಲೆ ತಮಗೆ ಕಾನೂನು ಬದ್ಧ ಹಿಡಿತ ಇಲ್ಲ. ರೈತರೇ ಒಗ್ಗಟ್ಟಾಗಿ ಮಧ್ಯವರ್ತಿಗಳನ್ನು ಹತ್ತಿರಕ್ಕೆ ಸೇರಿಸದೆ ಅವರನ್ನು ಮಣಿಸಬೇಕು ಎನ್ನುತ್ತಾರೆ ಎಂದು ಕೆಲವರು ದೂರಿದರು. ಕೃಷಿ ಇಲಾಖೆಯಿಂದ ಸಹಾಯಧನ ಪಡೆದು ನಿರ್ವಹಿಸಲಾಗುತ್ತಿರುವ ಯಂತ್ರಮನೆಯ ಯಂತ್ರಗಳಿಗೂ ಸುಮಾರಾಗಿ ಖಾಸಗಿಯವರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ನಡೆದ ವಿಸ್ತರಣಾ ಚಟುವಟಿಕೆಯ ಭಾಗವಾಗಿ ಬೀಜಾಡಿಯ ಕಪಿಲೆ ಗೋಸಮೃದ್ಧಿ ಟ್ರಸ್ಟ್‌ಗೆ ವಿದ್ಯಾರ್ಥಿಗಳು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಟ್ರಸ್ಟ್‌ನ ಪ್ರವರ್ತಕ ಕುಮಾರ್ ಕೆ. ಕಾಂಚನ್ ಅವರು ದೇಸಿ ಗೋತಳಿಗಳು ಮತ್ತು ಅದರ ಉತ್ಪನ್ನಗಳ ಮಹತ್ವದ ಕುರಿತು ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳಿಗೆ ವಿಸ್ತರಣಾ ಚಟುವಟಿಕೆಯ ಭಾಗವಾಗಿ ಸಗಣಿಯಿಂದ ಹಣತೆ, ದೂಪದ ಬತ್ತಿ ತಯಾರಿಕೆ ಹಾಗೂ ಗೋವುಗಳ ಆರೈಕೆಯ ಕುರಿತು ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವಿಭಾಗದ ಮುಖ್ಯಸ್ಥ ಹಾಗೂ ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ಎನ್. ಎಸ್. ಎಸ್. ಯೋಜನಾಧಿಕಾರಿ ಪ್ರವೀಣ್ ಮೊಗವೀರ ಗಂಗೊಳ್ಳಿ. ವಿಭಾಗದ ಪ್ರಾಧ್ಯಾಪಕರಾದ ಸುಕುಮಾರ್ ಶೆಟ್ಟಿ, ಪ್ರವೀಣಾ ಮಹಾಬಲ ಪೂಜಾರಿ ಹಾಗೂ ಕಛೇರಿ ಸಿಬ್ಬಂದಿ ಶರತ್ ಖಾರ್ವಿ ಉಪಸ್ಥಿತರಿದ್ದರು. ವಿಭಾಗದ ಉಪನ್ಯಾಸಕಿ ರೇಷ್ಮಾ ಶೆಟ್ಟಿ ಕಾರ್ಯಕ್ರಮ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಮೃತೇಶ್ವರಿ ಎಜುಕೇಶನಲ್ ಟ್ರಸ್ಟಿನ ಕುಂದಾಪುರ ರೂರಲ್ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆಯಿಂದ ಆಯೋಜಿಸಲಾದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಶಿಬಿರವನ್ನು ವಿಶ್ವಕರ್ಮ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದು. ಈ ಶಿಬಿರದ ಮುಖೇನ ನೂರಾರು ಸಾರ್ವಜನಿಕರಿಗೆ ಉಚಿತ ಆರೋಗ್ಯ ಪರೀಕ್ಷೆ ಮತ್ತು ವ್ಯಾದಿಕ್ಷಮತ್ವವನ್ನು ಹೆಚ್ಚಿಸುವ ಔಷಧಿಯನ್ನು ವಿತರಿಸಲಾಯಿತು. ಈ ಸುಸಂದರ್ಭದ ಸದುಪಯೋಗವನ್ನು ಕುಂದಾಪುರ, ಕೋಟೇಶ್ವರದ ಸುತ್ತಮುತ್ತ ಅನೇಕ ಹಳ್ಳಿಗಳ ಸಾರ್ವಜನಿಕರು ಈ ಶಿಬಿರದ ಉಪಯೋಗವನ್ನು ಪಡೆದುಕೊಂಡಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಸಂಸ್ಥೆಯ ವತಿಯಿಂದ ಹತ್ತು ಹಲವಾರು ಉಚಿತ ಆರೋಗ್ಯ ಶಿಬಿರವನ್ನು ಸುತ್ತಮುತ್ತಲಿನ ಹಳ್ಳಿಗಳಲ್ಲಿ ನಿರ್ವಹಿಸಲು ಉದ್ದೇಶಿಸಲಾಗಿದೆ, ಈ ಶಿಬಿರದಲ್ಲಿ ಒಟ್ಟು 350 ಜನ ಚಿಕಿತ್ಸೆಯನ್ನು ಪಡೆದುಕೊಂಡಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ತ್ರಾಸಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕೊಂಕಣಿ ಖಾರ್ವಿ ಭವನದಲ್ಲಿ ಗಂಗೊಳ್ಳಿಯ ನಿನಾದ ಚಾರಿಟೇಬಲ್ ಟ್ರಸ್ಟ್ ಪ್ರವರ್ತಿತ ’ಸಾಕೇತ’ ವೈದ್ಯಕೀಯ ಪ್ರಯೋಗಾಲಯ ಹಾಗೂ ತಪಾಸಣಾ ಕೇಂದ್ರ ಉದ್ಘಾಟನೆ ನಡೆಯಿತು. ಉದ್ಘಾಟಿಸಿ ಮಾತನಾಡಿದ ಮಣಿಪಾಲ ಕೆಎಂಸಿ ಆಸ್ಪತ್ರೆಯ ನೆಫ್ರೋಲಾಜಿ ವಿಭಾಗದ ಮುಖ್ಯಸ್ಥ, ಪ್ರಾಧ್ಯಾಪಕ ಡಾ. ರವೀಂದ್ರ ಪ್ರಭು, ಜನರು ಆರೋಗ್ಯ ರಕ್ಷಣೆ ಕಡೆಗೆ ಹೆಚ್ಚಿನ ಗಮನ ನೀಡಬೇಕಿದೆ. ಗ್ರಾಮೀಣ ಭಾಗದ ಜನರು ಆರೋಗ್ಯ ತಪಾಸಣೆಗಾಗಿ ಪಟ್ಟಣ ಪ್ರದೇಶಗಳಿಗೆ ತೆರಳಬೇಕಾದ ಅನಿವಾರ್ಯತೆ ಇದೆ. ಗ್ರಾಮೀಣ ಪ್ರದೇಶದ ಜನರು ಆರೋಗ್ಯ ತಪಾಸಣೆಗಾಗಿ ಪಟ್ಟಣ ಪ್ರದೇಶಗಳಿಗೆ ಅಲೆದಾಡುವುದನ್ನು ತಪ್ಪಿಸಲು ತ್ರಾಸಿಯ ಹೃದಯ ಭಾಗದಲ್ಲಿ ವಿಶಿಷ್ಟ ವೈದ್ಯಕೀಯ ಸೌಲಭ್ಯಗಳನ್ನೊಳಗೊಂಡ ’ಸಾಕೇತ’ ವೈದ್ಯಕೀಯ ಪ್ರಯೋಗಾಲಯ ಪ್ರಾರಂಭಿಸಿರುವುದು ಶ್ಲಾಘನೀಯ ಎಂದು ಹೇಳಿದರು. ಮಂಗಳೂರು ಹಾಂಗ್ಯೋ ಐಸ್‌ಕ್ರೀಮ್ ಪ್ರೈ. ಲಿ. ಆಡಳಿತ ನಿರ್ದೇಶಕ ಪ್ರದೀಪ ಜಿ. ಪೈ ಮಾತನಾಡಿ, ನಾಲ್ಕು ವರ್ಷಗಳ ಹಿಂದೆ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೆಂಗಳೂರಿನ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನವು ಅಕ್ಟೋಬರ್ ಮೊದಲ ವಾರದಲ್ಲಿ ನಡೆಸಿದ ದ್ವಿತೀಯ ಅಂತರರಾಷ್ಟ್ರೀಯ ಆನ್‌ಲೈನ್ ಯೋಗಾಸನ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ನಾವುಂದ ಗ್ರಾಮದ ಅರೆಹೊಳೆಯ ನಿರೀಕ್ಷಾ ಪ್ರಥಮ ಸ್ಥಾನ ಪಡೆದಿರುವಳು. ಅರೆಹೊಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೆ ತರಗತಿ ವಿದ್ಯಾರ್ಥಿನಿಯಾಗಿರುವ ಅವಳು ಅಲ್ಲಿನ ಬಾಬು ಪೂಜಾರಿ – ಜಯಲಕ್ಷ್ಮೀ ದಂಪತಿಯ ಪುತ್ರಿ.  ಪರಿಣತ ಯೋಗಗುರು ಸುಬ್ಬಯ್ಯ ದೇವಾಡಿಗ ಅವರಿಂದ ತರಬೇತಿ ಪಡೆದಿದ್ದಾಳೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ಅ.28 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಹೆಬ್ರಿ ಪ್ರವಾಸಿ ಮಂದಿರದಲ್ಲಿ ಹಾಗೂ ಮಧ್ಯಾಹ್ನ 2.30 ರಿಂದ ಸಾಯಂಕಾಲ 4.30 ರವರೆಗೆ ಕಾರ್ಕಳ ಪ್ರವಾಸಿ ಮಂದಿರದಲ್ಲಿ ಮತ್ತು ಅ.29 ರಂದು ಬೆಳಿಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಕುಂದಾಪುರ ಪ್ರವಾಸಿ ಮಂದಿರದಲ್ಲಿ ಹಾಗೂ ಮಧ್ಯಾಹ್ನ 2 ರಿಂದ ಸಂಜೆ 4.30 ರವರೆಗೆ ಬೈಂದೂರು ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಸಾರ್ವಜನಿಕ ನೌಕರ ತನ್ನ ದಿನನಿತ್ಯದ ಕೆಲಸಗಳನ್ನು ನಿರ್ವಹಿಸಲು ಅನಗತ್ಯ ವಿಳಂಬ ಮಾಡಿದ್ದಲ್ಲಿ, ನಿರ್ಲಕ್ಷತೆ ತೋರಿದ್ದಲ್ಲಿ ಅಥವಾ ಲಂಚ ಕೇಳಿದಲ್ಲಿ ದೂರು ಸ್ವೀಕರಿಸಲಾಗುವುದು ಎಂದು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ : ಉಡುಪಿಯ ಉಪ್ಪೂರು ಕೊಳಲಗಿರಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವು ಎಸ್.ಎಸ್.ಎಲ್.ಸಿ ಪಾಸಾಗಿರುವ ಅಭ್ಯರ್ಥಿಗಳಿಂದ ತಾಂತ್ರಿಕ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 16 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820 – 2950101, 9880510585 ಸಂಪರ್ಕಿಸುವಂತೆ ಕೇಂದ್ರದ ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಮುಕ್ತ ಪ್ರಕಟಣಾ ಮಾಲೆ ಹೆಸರಿನಲ್ಲಿ ಅಪ್ರಕಟಿತ ಕೃತಿಗಳನ್ನು ಪ್ರಕಟಣೆಗಾಗಿ ಆಹ್ವಾನಿಸಲಾಗಿದೆ. ಆಸಕ್ತ ಲೇಖಕರು ಸಂಶೋಧನೆ, ವಿಮರ್ಶೆ, ಜೀವನ ಚರಿತ್ರೆ, ಆತ್ಮಕತೆ, ನಿಘಂಟು, ಈವರೆಗೆ ಬಾರದೇ ಇರುವ ಜ್ಞಾನ ಶಾಖೆಯ ಬಗ್ಗೆ ಪ್ರಕಟವಾಗಬಹುದಾದ ಜ್ಞಾನನಿಧಿ ಎನಿಸಬಹುದಾದ ಶಾಸ್ತ್ರ ಜ್ಞಾನ ಹೆಚ್ಚಿಸುವ ವಿಶೇಷ ಕೃತಿಗಳು ಪ್ರಕಟಣೆಗೆ ಸಿದ್ಧವಿದ್ದಲ್ಲಿ ಕೃತಿಗಳನ್ನು ಅಕಾಡೆಮಿಯ ವಿಳಾಸಕ್ಕೆ ಕಳುಹಿಸಬಹುದು. ಹೆಚ್ಚಿನ ವಿವರಗಳಿಗೆ ಅಕಾಡೆಮಿಯ ವೆಬ್‍ಸೈಟ್ http://karnatakasahithyaacademy.org/ ಸಂಪರ್ಕಿಸುವಂತೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More