ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಮ್ಯಾನುವಲ್ ಸ್ಕ್ಯಾವೆಂಜರ್ ನಿಷೇಧ ಕಾನೂನನ್ನು ಉಲ್ಲಂಘಿಸಿದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು. ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮ್ಯಾನುವಲ್ ಸ್ಕ್ಯಾವೆಂಜರ್ ಗಳ ನಿಷೇಧ ಮತ್ತು ಪುನರ್ವಸತಿ ಅಧಿನಿಯಮವು 2013ರಿಂದ ಜಾರಿಗೆ ಬಂದಿದ್ದು, ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಇವುಗಳನ್ನು ಉಲ್ಲಂಘಿಸಿ ಕೆಲಸ ಮಾಡಿಸಿದ್ದಲ್ಲಿ ಅಂತವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು. ಸಫಾಯಿ ಕರ್ಮಾಚಾರಿ ಮತ್ತು ಅವರ ಕುಟುಂಬ ವರ್ಗದವರ ಕಲ್ಯಾಣಕ್ಕಾಗಿ ಸರಕಾರ ಜಾರಿಗೆ ತಂದಿರುವ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸವನ್ನು ಅಧಿಕಾರಿಗಳು ತಪ್ಪದೇ ಮಾಡಬೇಕೆಂದು ತಿಳಿಸಿದ ಅವರು, ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳಿಗೆ ಸರಕಾರದಿಂದ ಸಿಗುವ ಸೌಲಭ್ಯದ ಬಗ್ಗೆ ಹಾಗೂ ಮ್ಯಾನುವಲ್ ಸ್ಕ್ಯಾವೆಂಜರ್ನಿ ಷೇಧದ ಕುರಿತ ಮಾಹಿತಿ ಕಾರ್ಯಾಗರಾವನ್ನು ನಾಳೆ ಆಯೋಜಿಸಬೇಕು. ಸಾಧ್ಯವಾದಲ್ಲಿ ಅಲ್ಲಿಯೇ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವ್ಯಕ್ತಿತ್ವದ ಬೆಳವಣಿಗೆ, ನಾಯಕತ್ವ ಗುಣ ಕಲಿಕೆ, ಸಮಾಜದ ಆಗುಹೋಗುಗಳ ಬಗ್ಗೆ ಸ್ಪಂದಿಸುವ ಗುಣ, ಪರಿಸರ ಸಂರಕ್ಷಣೆ ಮುಂತಾದ ಸೃಜನಾತ್ಮಕ ಹವ್ಯಾಸಗಳನ್ನು ವಿದ್ಯಾರ್ಥಿದೆಸೆಯಲ್ಲಿಯೇ ಬೆಳೆಸುವ ಉದ್ದೇಶವನ್ನು ರೋಟರಾಕ್ಟ್ ಕ್ಲಬ್ ಹೊಂದಿದೆ ಎಂದು ಆರ್.ಐ 3182 ಜಿಲ್ಲಾ ಗವರ್ನರ್ ಎಂ ರಾಮಚಂದ್ರಮೂರ್ತಿ ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ರೋಟರಿ ಕ್ಲಬ್ ಆಶ್ರಯದಲ್ಲಿ ಆರಂಭಗೊಂಡ ರೋಟರಾಕ್ಟ್ ಕ್ಲಬ್ ನ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ರೋಟರಾಕ್ಟ್ ಕಬ್ಬಿನ ಅಧ್ಯಕ್ಷೆಯಾಗಿ ಅಮೀಕ್ಷಾ ಡಿ ನಾಯ್ಕ್ ಇವರ ಪದ ಪ್ರಧಾನ ಕಾರ್ಯಕ್ರಮವು ನಡೆಯಿತು. ಜಿಲ್ಲಾ ರೋಟರಾಕ್ಟ್ ಚೇರ್ಮನ್ ಕಮಿಟಿ ಕೆ. ಕೆ ಕಾಂಚನ್ ಅವರು ರೋಟರ್ಯಾಕ್ಟ್ ಕ್ಲಬ್ ಬಗ್ಗೆ ಮಾಹಿತಿಯನ್ನು ನೀಡಿದರು. ಅಸಿಸ್ಟೆಂಟ್ ಗವರ್ನರ್ ರೋಟೇರಿಯನ್ ಜಯಪ್ರಕಾಶ್ ಶೆಟ್ಟಿ, ಡಿ ಆರ್ ಆರ್ ಗ್ಲಾಡ್ಸನ್, ಮಾಜಿ ಅಸಿಸ್ಟೆಂಟ್ ಗವರ್ನರ್ ಎಚ್ ಗಣೇಶ್ ಕಾಮತ್, ಜೋನಲ್ ಲೆಫ್ಟಿನೆಂಟ್ ರಾಮನಾಥ್ ನಾಯಕ್ ಕಬ್ಬಿನ ಕಾರ್ಯದರ್ಶಿ ನಾರಾಯಣ ಈ ನಾಯ್ಕ್ ಮತ್ತು ರೋಟರಾಕ್ಟ್ ಕ್ಲಬ್ನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.22: ತಾಲೂಕಿನ ಅಂಪಾರು ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ಮನೆಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ನಾಗರಾಜ (36) ಎಂಬುವವರ ಸಾವಿನ ಪ್ರಕರಣಕ್ಕೆ ತಿರುವು ದೊರಕಿದ್ದು ಪತ್ನಿ, ಸಂಬಂಧಿ ಹಾಗೂ ನೆರಮನೆಯಾತ ಸೇರಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ ಆರೋಪಿಗಳಾದ ಪತ್ನಿ ಮಮತಾ (34), ಆಕೆಯ ಭಾವ ಕುಮಾರ್, ಪಕ್ಕದ ಮನೆಯ ಯುವಕ ದಿನಕರ ಮತ್ತು ಕುಮಾರ್ ಅವರ ಇಬ್ಬರು ಮಕ್ಕಳನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಬಾಲಕರನ್ನು ರೀಮ್ಯಾಂಡ್ ಹೋಂಗೆ ಕಳುಹಿಸಲಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಒಂದು ವರ್ಷದಿಂದ ಸಂಚು, ಕೊಲೆ ಮಾಡಿ ಸುಳ್ಳು ಪ್ರಕರಣ ದಾಖಲು:ಸಾಗರ ತಾಲೂಕಿನವರಾದ ನಾಗರಾಜ ಹಾಗೂ ಮಮತಾ ಕಳೆದ ಹತ್ತು ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದು ಅವರಿಗೆ ಮೂವರು ಮಕ್ಕಳಿದ್ದಾರೆ. ಅಂಪಾರು ಮೂಡುಬಗೆಯ ವಿವೇಕ ನಗರದಲ್ಲಿ ವಾಸವಾಗಿದ್ದ ನಾಗರಾಜ್ ವಿಪರೀತ ಕುಡಿತದ ಚಟ ಹೊಂದಿದ್ದು ಮನೆಯಲ್ಲಿ ಪ್ರತಿದಿನ ಜಗಳ ಮಾಡುತ್ತಿದ್ದರು ಎನ್ನಲಾಗಿದೆ. ಹೊರಗಿನವರೊಂದಿಗೂ ಜಗಳವಾಡುವುದು, ಖ್ಯಾತೆ ತೆಗೆಯುವುದು ಮಾಡುತ್ತಿದ್ದು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದಿಂದ ಇಲ್ಲಿಂದ ಮಂಗಳೂರಿಗೆ ತೆರಳುವ ಖಾಸಗಿ ಎಕ್ಸ್ಪ್ರೆಸ್ ಬಸ್ ಏರಿದ್ದ ಯುವಕ ಚಿನ್ನಾಭರಣ ಸಹಿತ ಅಮೂಲ್ಯ ದಾಖಲೆಗಳನ್ನು ಕಳೆದುಕೊಂಡಿದ್ದು, ಕಂಡಕ್ಟರ್ ಪ್ರಾಮಾಣಿಕತೆಯಿಂದ ಮರಳಿ ಪಡೆದುಕೊಂಡಿದ್ದಾನೆ. ಕುಂದಾಪುರದಲ್ಲಿ ಬಸ್ ಏರಿದ್ದ ಯುವಕ ತೆಕ್ಕಟ್ಟೆಯಲ್ಲಿ ಇಳಿದುಹೋಗಿದ್ದಾನೆ. ಆತ ಕುಳಿತಿದ್ದ ಸೀಟು ನೋಡಿದಾಗ ಅಲ್ಲೊಂದು ಬ್ಯಾಗ್ ಇತ್ತು. ಅದರಲ್ಲಿ ಕರಿಮಣಿ ಸರ, ಮೂರು ಬಳೆಗಳು ಮತ್ತು ಒಂದು ಮೊಬೈಲ್ ಇತ್ತು. ಬ್ಯಾಗ್ ನೋಡಿದ ಕಂಡಕ್ಟರ್ ವಿಟ್ಲದ ಗೋಪಾಲ್ ಎಂಬಾತ, ಬಸ್ ಚಾಲಕ ಪ್ರತಾಪ್ ಎಂಬರಿಗೆ ತಿಳಿಸಿದ್ದಾರೆ. ಇದೇ ವೇಳೆಗೆ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಕೋಟ ಪೊಲೀಸ್ ಸಿಬ್ಬಂದಿಗೆ ಬ್ಯಾಗ್ ಹಸ್ತಾಂತರಿಸಿ ವಿಷಯ ತಿಳಿಸಿದ್ದಾರೆ. ನಂತರ ಜಾಲತಾಣದಲ್ಲಿ ಯುವಕ ಕಳೆದುಕೊಂಡ ಸೊತ್ತುಗಳ ಪೋಟೋ ಹಾಕಿ ಈ ನಂಬರ್ಗೆ ಕರೆ ಮಾಡಿ ಎಂದು ಸಂದೇಶ ರವಾನಿಸಿದ್ದರು. ಸಂದೇಶ ಹೇಗೋ ಯುವಕನಿಗೆ ತಲುಪಿದ್ದು, ಬ್ಯಾಗ್ ಕಳೆದುಕೊಂಡಿದ್ದ ಠಾಣೆಗೆ ತೆರಳಿ ಬ್ಯಾಗ್ ಪಡೆದುಕೊಂಡಿದ್ದಾನೆ. ಬಸ್ ಚಾಲಕ ಪ್ರತಾಪ್ ಮತ್ತು ಕಂಡಕ್ಟರ್ ವಿಟ್ಲ ಗೋಪಾಲ್ ಅವರ ಕಾರ್ಯ ಮೆಚ್ಚುಗೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಮಾಜದಲ್ಲಿ ಸರಿಯಾಗಿ ಜೀವಿಸಬೇಕಾದರೆ ಕಾನೂನಿನ ಅಗತ್ಯತೆ ಇದೆ. ಪ್ರತಿಯೊಂದು ಕಾನೂನು ಒಂದಲ್ಲ ಒಂದು ಪ್ರಯೋಜನವನ್ನು ನೀಡುತ್ತದೆ. ಕಾನೂನಿನ ಅರಿವು ಇಲ್ಲದಿದ್ದಲ್ಲಿ ನಾವು ನೀವೆಲ್ಲ ಒಳ್ಳೆಯ ಪ್ರಜೆಗಳಾಗಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಬಹುಸಂಖ್ಯೆಯ ವಿದ್ಯಾರ್ಥಿ ಸಮೂಹಕ್ಕೆ ಅರಿವು ಮೂಡಿಸುವುದು ಕಾನೂನು ಪ್ರಾಧಿಕಾರದ ಧ್ಯೇಯವಾಗಿದ್ದು, ಎಲ್ಲ ವಿದ್ಯಾರ್ಥಿಗಳು ಕಾನೂನಿನ ಪ್ರಕ್ರಿಯೆಗಳನ್ನು ಮನವರಿಕೆ ಮಾಡಿಕೊಂಡು ಗೌರವದಿಂದ ಜೀವನ ನಡೆಸುವಂತಾಗಬೇಕು ಎಂದು ಬೆಂಗಳೂರು ಜಿಲ್ಲಾ ನ್ಯಾಯಾಧೀಶರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಬೆಂಗಳೂರು ಇದರ ಸದಸ್ಯ ಎಚ್. ಶಶಿಧರ್ ಶೆಟ್ಟಿ ಹೇಳಿದರು. ಅವರು, ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಬೆಂಗಳೂರು, ಜಿಲ್ಲಾ ಕಾನುನು ಸೇವಾ ಪ್ರಾಧಿಕಾರ ಉಡುಪಿ, ತಾಲೂಕು ಕಾನೂನು ಸೇವಾ ಸಮಿತಿ ಕುಂದಾಪುರ, ವಕೀಲರ ಸಂಘ ಕುಂದಾಪುರ (ರಿ), ಲಯನ್ಸ್ ಕ್ಲಬ್ ಬನ್ನಾಡಿ, ವಡ್ಡರ್ಸೆ, ಲಯನ್ಸ್ ಕ್ಲಬ್ ಕುಂದಾಪುರ ಇದರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಅಭಿವೃದ್ಧಿ ಯೋಜನೆಯಡಿ ಮಂಜೂರಾದ ಅನುದಾನವನ್ನು ಪ್ರತಿಶತ ನೂರರಷ್ಟು ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ತಮ್ಮ ಕಛೇರಿಯ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ಪ. ಜಾತಿ ಮತ್ತು ಪ. ಪಂಗಡ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ.ಜಾತಿ ಮತ್ತು ಪ.ಪಂಗಡಗಳ ಜನರ ಸಮಗ್ರ ಅಭಿವೃದ್ಧಿಗಾಗಿ ಸರಕಾರ ಅನೇಕ ಯೋಜನೆಗಳನ್ನು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇವುಗಳನ್ನು ವಿವಿಧ ಫಲಾನುಭವಿಗಳಿಗೆ ತಲುಪಿಸುವುದರೊಂದಿಗೆ ಪೂರ್ಣಪ್ರಮಾಣದಲ್ಲಿ ಅನುಷ್ಠಾನಗೊಳಿಸಬೇಕು ಎಂದರು. ಯೋಜನೆಗಳು ಮತ್ತು ಕಾರ್ಯಕ್ರಮಗಳ ಬಗ್ಗೆ ಜನ ಸಾಮಾನ್ಯರಿಗೆ ಸರಳವಾಗಿ ಅರ್ಥವಾಗುವ ರೀತಿಯಲ್ಲಿ ಹೆಚ್ಚು ಪ್ರಚಾರಪಡಿಸುವುದರ ಜೊತೆಗೆ ಸಹಾಯವಾಣಿಗಳನ್ನು ತೆರೆಯುವ ಮೂಲಕ ಯೋಜನೆಗಳ ಇತರೆ ಮಾಹಿತಿಯನ್ನು ನೀಡಬೇಕು ಎಂದ ಅವರು, ಎಲ್ಲಾ ಇಲಾಖೆಗಳ ಯೋಜನಾ ಕಾರ್ಯಕ್ರಮಗಳ ಮಾಹಿತಿಯ ಮಡಿಕೆ ಪತ್ರಗಳನ್ನು ತಯಾರಿಸಿ ಗ್ರಾ.ಪಂ ಸದಸ್ಯರು ಸೇರಿದಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸಬೇಕು ಎಂದರು. ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪಟ್ಟಣದ ಹೋಟೆಲ್ ಒಂದರಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ಯುವಕನೋರ್ವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ. ಮುದೂರು ಸಮೀಪದ ಬಸ್ರಿಬೇರು ನಿವಾಸಿ ಪ್ರಶಾಂತ್ (19) ಮೃತ ದುರ್ದೈವಿ. ಮಗನ ಸಾವಿನ ಬಗ್ಗೆ ಪೋಷಕರು ಶಂಕೆ ವ್ಯಕ್ತಪಡಿಸಿದ್ದು, ಇದು ಆತ್ಮಹತ್ಯೆಯಲ್ಲ ಎಂದಿದ್ದಾರೆ. ಬಸ್ರಿಬೇರಿನ ಲಚ್ಚು ನಾಯ್ಕ್ – ಗೌರಿ ದಂಪತಿಗಳ ಮೂವರು ಮಕ್ಕಳಲ್ಲಿ ಕೊನೆಯವನಾದ ಪ್ರಶಾಂತ್ ಎಸ್.ಎಸ್.ಎಲ್.ಸಿ. ಬಳಿಕ ಹೋಟೆಲ್ ಕೆಲಸಕ್ಕೆ ಸೇರಿದ್ದ. ಅ.20 ಬುಧವಾರ ಸಂಜೆ ಮನೆಯವರಿಗೆ ಕರೆ ಮಾಡಿ ಲವಲವಿಕೆಯಿಂದಲೇ ಮಾತನಾಡಿದ್ದಲ್ಲದೇ, ಆತನ ಸಹೋದರನ ಖಾತೆಗೆ 5000 ಹಣ ಜಮಾ ಮಾಡಿದ್ದ. ಮುಂದಿನ ತಿಂಗಳು ಮನೆಗೆ ಬರುವುದಾಗಿ ಈ ವೇಳೆ ತಿಳಿಸಿದ್ದ ಎನ್ನಲಾಗಿದೆ. ಗುರುವಾರ ಮುಂಜಾನೆ ಹೋಟೆಲ್ ಸಿಬ್ಬಂದಿ ಮನೆಯವರಿಗೆ ಕರೆ ಮಾಡಿ ಪ್ರಶಾಂತ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಪೋಷಕರು, ಸಂಬಂಧಿಗಳು ಕೂಡಲೇ ಸ್ಥಳಕ್ಕೆ ಆಗಮಿಸಿದ್ದಾರೆ. ಇನ್ನು ಮಧ್ಯರಾತ್ರಿ ವೇಳೆ ಯುವಕ ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದು‘ ಏನು ಇಲ್ಲದವನ ಮುಂದೆ ಎಲ್ಲಾ ಇದ್ದವನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಭಾವನಾತ್ಮಕ ಗಾಯಗಳು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಸಂತ ಆಗ್ನೇಸ್ ಕಾಲೇಜಿನ ಸ್ನಾತಕೋತ್ತರ ಮನಃಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ದೀಪಾ ಕೊಠಾರಿ ಹೇಳಿದರು. ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿಮೆನ್ ವೆಲ್ ಫೇರ್ ಕಮಿಟಿ ವತಿಯಿಂದ ಆಯೋಜಿಸಿದ್ದ ಅತಿಥಿ ಉಪನ್ಯಾಸದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಅವರು, ಭಯ, ನಿರಾಕರಣೆ ಹಾಗೂ ಸೋಲಿನಿಂದ ಉಂಟಾಗುವ ಭಾವನಾತ್ಮಕ ಬದಲಾವಣೆಗಳು ಮಾನಸಿಕ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ನಮ್ಮಲ್ಲಿರುವ ಭಾವನೆಗಳನ್ನು ಒಪ್ಪಿಕೊಂಡು ಅದರೊಂದಿಗೆ ಬದುಕುವ ಮನೋಸ್ಥೈರ್ಯ ಬೆಳೆಸಿಕೊಳ್ಳಬೇಕು. ವದಂತಿಗಳಿಂದ ದೂರವಿದ್ದು, ವೈಫಲ್ಯದ ಕಾರಣಗಳನ್ನು ಮರು ವ್ಯಾಖ್ಯಾನಿಸಬೇಕೆಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಸದಾಕತ್ ವಹಿಸಿದ್ದರು, ಕಾಮರ್ಸ್ ವಿಭಾಗದ ಡೀನ್ ಪ್ರಶಾಂತ್ ಎಂ. ಡಿ., ಕಲಾ ವಿಭಾಗದ ಡೀನ್ ವೇಣುಗೋಪಾಲ್ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸಿಂಚನ ಸ್ವಾಗತಿಸಿದರು, ಸುರಭಿ ವಂದಿಸಿದರು, ರೋಶ್ನಿ ಅತಿಥಿಯನ್ನು ಪರಿಚಯಿಸಿದರು. ಮೀಶ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕೃಷಿಕರು ಆಧುನಿಕ ಕೃಷಿ ಚಟುವಟಿಕೆಗಳಿಗೆ ಒಗ್ಗಿಕೊಳ್ಳುವ ಮೂಲಕ ಕೃಷಿಯನ್ನು ಲಾಭದಾಯಕ ಉದ್ಯಮವನ್ನಾಗಿ ಪರಿವರ್ತಿಸಿಕೊಳ್ಳಬೇಕು, ದೇವಾಲಯಗಳಂತೆ ಕೃಷಿಯು ಅತ್ಯಂತ ಪಾವಿತ್ರ್ಯತೆ ಹೊಂದಿರುವ ಕ್ಷೇತ್ರವಾಗಿದ್ದು, ಪರಿಶ್ರಮದ ಕೃಷಿಯ ಮೂಲಕ ಹೆಚ್ಚಿಸಿ ಸಂಪತ್ತು ಗಳಿಸಲು ಸಾಧ್ಯವಾಗುತ್ತದೆ ಎಂದು ಎಂದು ಧರ್ಮಸ್ಥಳ ಧರ್ಮಾಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ರಿ. ಬೈಂದೂರು ತಾಲೂಕು ವತಿಯಿಂದ ಕೃಷಿ ಮನೆ ನಾಯ್ಕನಕಟ್ಟೆಯಲ್ಲಿ ಸ್ಥಳಾಂತರಗೊಳ್ಳುತ್ತಿರುವ ಕೃಷಿ ಯಂತ್ರಗಳ ಬಾಡಿಗೆ ಸೇವಾ ಕೇಂದ್ರ ಮತ್ತು ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟದ ಕಚೇರಿ ಉದ್ಘಾಟಿಸಿ ಮಾತನಾಡಿದರು. ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ 3666 ಸ್ವ-ಸಹಾಯ ಸಂಘಗಳಿವೆ. ಬಹುತೇಕ ಎಲ್ಲಾ ಸಂಘಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು ಎ ಗ್ರೇಡ್ನಲ್ಲಿ ಗುರುತಿಸಿಕೊಂಡಿದೆ. ತಾಲೂಕು ವ್ಯಾಪ್ತಿಯಲ್ಲಿನ ಸ್ವ ಸಹಾಯಗಳು ಈ ಬಾರಿ 8.53 ಕೋಟಿ ರೂ. ಲಾಭಗಳಿಸಿದ್ದು, ಪ್ರತಿ ಸದಸ್ಯರು ತಲಾ 22 ಸಾವಿರ ರೂ. ಲಾಭಾಂಶ ಹಂಚಿಕೊಂಡಿದ್ದಾರೆ. ಸ್ವಹಾಯ ಸಂಘದ ಮೂಲ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಸ್ಥಾನ ನನ್ನ ತವರು ಮನೆ ಇದ್ದಂತೆ. ಈ ದೇವಳದ ಶುದ್ಧತೆ ನಿಜಕ್ಕೂ ಅದ್ಭುತವಾಗಿದೆ. ರಾಜ್ಯ, ಹೊರರಾಜ್ಯದಿಂದ ಬರುವ ಭಕ್ತರಿಗೆ ಕಿಂಚಿತ್ತು ಸಮಸ್ಯೆಯಗದಂತೆ ವ್ಯವಸ್ಥೆ ಮಾಡಿರುವುದು ಬಹಳ ಸಂತಸವಾಗುತ್ತದೆ ಎಂದು ಚಲನಚಿತ್ರ ಹಿರಿಯ ನಟಿ ಲಕ್ಷ್ಮೀ ಹೇಳಿದರು. ಅವರು, ಕೊಲ್ಲೂರು ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು. ದೇವಳದ ಪುರೋಹಿತ ಸುರೇಶ ಭಟ್ ಅವರಿಗೆ ದೇವರ ಪ್ರಸಾದ ನೀಡಿ ಗೌರವಿಸಿದರು. ಹಿರಿಯ ನಟಿ ಲಕ್ಷ್ಮೀ ಅವರು, ದಕ್ಷಿಣ ಭಾರತದ ಕನ್ನಡ, ತೆಲುಗು, ತಮಿಳು, ಮಲೆಯಾಳಿ ಹಾಗೂ ಹಿಂದಿ ಚಲನಚಿತ್ರಗಳಲ್ಲಿ ಅಭಿನಯಿಸಿದ ಅವರು ಪಂಚಭಾಷಾ ನಟಿ ಎಂಬ ಖ್ಯಾತಿ ಹೊಂದಿದ್ದಾರೆ.
