Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮರವಂತೆ: ದ್ವಿತೀಯ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರವನ್ನು ತನ್ನದಾಗಿಸಿಕೊಂಡ ಮರವಂತೆ ಗ್ರಾಮ ಪಂಚಾಯಿತಿ, 2019-20ನೇ ವರ್ಷದಲ್ಲಿ ಸಾಧಿಸಿದ ಜೀವನ ಗುಣಮಟ್ಟ, ಸ್ವಂತ ಸಂಪನ್ಮೂಲ ಕ್ರೋಢೀಕರಣ, ಮೂಲ ಸೌಕರ್ಯ ಅಭಿವೃದ್ಧಿ, ತ್ಯಾಜ್ಯ ನಿರ್ವಹಣೆ, ಉತ್ತಮ ಆಡಳಿತ, ಸೇವಾ ಪೂರೈಕೆ ಮತ್ತು ನಾವೀನ್ಯತಾ ಯೋಜನೆಗಳ ವಿವಿಧ ಮಾನದಂಡಗಳಿಗೆ ನಿಗದಿಗೊಳಿಸಿದ 200 ಅಂಕಗಳಲ್ಲಿ 161 ಅಂಕ ಗಳಿಸಿ ಈ ಪ್ರಶಸ್ತಿಗೆ ಪಾತ್ರವಾಗಿದೆ. 2,000ಕ್ಕಿಂತ ಈಚೆಗೆ ಮರವಂತೆ ಪಂಚಾಯಿತಿ ಅನನ್ಯ ಸಾಧನೆಗಳ ಮೂಲಕ ರಾಜ್ಯ, ರಾಷ್ಟ್ರದ ಗಮನ ಸೆಳೆದಿದೆ. ಸ್ವಯಂಪ್ರೇರಿತ ಸಮಗ್ರ ಸಾಮಾಜಿಕ ಆರ್ಥಿಕ ಸಮೀಕ್ಷೆ, ಯಶಸ್ವಿ ಸಂಪೂರ್ಣ ಸ್ವಚ್ಛತಾ ಆಂದೋಲನ, ಜನತಾ ಜೀವ ವೈವಿಧ್ಯ ದಾಖಲಾತಿ ಮತ್ತು ಪ್ರಕಟಣೆ, ಕುಡಿಯುವ ನೀರು ಪೂರೈಕೆ ಯೋಜನೆ, ಕೇಂದ್ರೀಕೃತ ಸೋಲಾರ್ ಬೀದಿದೀಪ, ದಾನಿಯಿಂದ ಪಂಚಾಯತ್ ಸೌಧ ನಿರ್ಮಾಣ, ಸುವರ್ಣ ಗ್ರಾಮೋದಯ ಯೋಜನೆ ಮೂಲಕ ಗ್ರಾಮದ ಮೂಲ ಸೌಲಭ್ಯ ವೃದ್ಧಿ, ಆರ್ಥಿಕ ಶಿಸ್ತು ಪಾಲನೆ, ವಸತಿ ಸಭೆ, ವಾರ್ಡ್‌ಸಭೆ, ಗ್ರಾಮಸಭೆ, ಮಹಿಳಾ ಗ್ರಾಮಸಭೆ, ಮಕ್ಕಳ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕರ್ನಾಟಕ ಸಾಹಿತ್ಯ ಅಕಾಡೆಮಿಯು ರಾಜ್ಯಮಟ್ಟದ ಮೂರು ದಿನಗಳ ಕಥಾ ಕಮ್ಮಟ, ಲಲಿತ ಪ್ರಬಂಧ ಕಮ್ಮಟ, ವಿಜ್ಞಾನ ಸಾಹಿತ್ಯ ಕಮ್ಮಟ ಹಾಗೂ ಸಾಹಿತ್ಯ ಮತ್ತು ಸಾಮಾಜಿಕ ಜಾಲತಾಣ ಕಮ್ಮಟಗಳನ್ನು ನಡೆಸಲು ಉದ್ದೇಶಿಸಿದ್ದು, ಈ ನಾಲ್ಕು ಕಮ್ಮಟಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 20 ಕೊನೆಯ ದಿನವಾಗಿದ್ದು, ಪ್ರತಿ ವಿಭಾಗದ ಕಮ್ಮಟಕ್ಕೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬೇಕು ಆಸಕ್ತರು ಅರ್ಜಿ ನಮೂನೆ ಹಾಗೂ ವಿವರಗಳನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‌ಸೈಟ್ http://karnatakasahithyaacademy.org ಯಿಂದ ಪಡೆದುಕೊಳ್ಳಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟಾರ್ ಕರಿಯಪ್ಪ ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಸಾಂಸ್ಕ್ರತಿಕ ಸೇವಾ ಪ್ರತಿಷ್ಠಾನ, ಸುರಭಿ ರಿ. ಬೈಂದೂರು ಇದರ ನೂತನ ಅಧ್ಯಕ್ಷರಾಗಿ ನಾಗರಾಜ ಪಿ. ಯಡ್ತರೆ ಹಾಗೂ ಕಾರ್ಯದರ್ಶಿಯಾಗಿ ಭಾಸ್ಕರ ಬಾಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಅಬ್ದುಲ್ ರವೂಫ್, ಜೊತೆ ಕಾರ್ಯದರ್ಶಿಗಳಾಗಿ ನಿಶ್ಚಿತಾ, ಗಣೇಶ್ ಪೂಜಾರಿ, ಸಂಘಟನಾ ಕಾರ್ಯದರ್ಶಿಯಾಗಿ ಸುಬ್ರಹ್ಮಣ್ಯ ಗಾಣಿಗ, ಖಜಾಂಚಿಯಾಗಿ ಸುರೇಶ್ ಹುದಾರ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಗೋಪಾಲಕೃಷ್ಣ ಜೋಶಿ, ನಾಗರಾಜ ಬೆಳ್ಳಿ, ರಾಘವೇಂದ್ರ ಕೆ., ಉದಯ, ಗಿರೀಶ್ ಮೇಸ್ತ, ರವಿರಾಜ, ಲಕ್ಷ್ಮಣ, ಸುನಿಲ್ ಹೆಚ್. ಜಿ., ಗಣೇಶ್ ಟೈಲರ್ ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Read More

ಕಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ:  ಭಂಡಾರ್ಕಾರ‍್ಸ್ ಕಾಲೇಜಿನಲ್ಲಿ ಐಕ್ಯೂಎಸಿ, ದೈಹಿಕ ಶಿಕ್ಷಣ ವಿಭಾಗ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ ಮತ್ತು ಭಾರತೀಯ ದೈಹಿಕ ಶಿಕ್ಷಣ ಪೌಂಡೇಶನ್ ಇದರ ಕರ್ನಾಟಕದ ಕೇಂದ್ರ ಇವರ ಸಹಯೋಗದಲ್ಲಿ ಯೋಗದ ಮೂಲಕ ಒತ್ತಡ ಮತ್ತು ಉದ್ವೇಗದ ನಿರ್ವಹಣೆ ಎಂಬ ವಿಷಯದ ಕುರಿತು ರಾಷ್ಟ್ರೀಯ ವೆಬಿನಾರ್ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾದ ಮಂಗಳೂರಿನ ಯೋಗಚೇತನ ಯೋಗ ಸಂಶೋಧನಾ ಕೇಂದ್ರದ ಶೈಕ್ಷಣಿಕ ನಿರ್ದೇಶಕರಾದ ಚೇತನಾ ಬಾಡೇಕರ್ ಮಾತನಾಡಿ, ಯೋಗ ಒಂದು ಕಲೆ. ಅಂದರೆ ಯೋಗ ಕಲಿಯುವಿಕೆಯಲ್ಲಿ ಮತ್ತು ತೊಡಗಿಸಿಕೊಳ್ಳವಲ್ಲಿ ನಿರಂತರತೆ ಬೇಕಾಗುತ್ತದೆ. ಯೋಗವನ್ನು ಕಲಿಯುವಲ್ಲಿಯೂ ಸಹ ಕೆಲವು ಅಂಶಗಳನ್ನು ಗಮನಿಸಬೇಕು. ವ್ಯಕ್ತಿ ತನಗೆ ಅನುಕುಲ ಮತ್ತು ಮಾನಸಿಕ ದೈಹಿಕ ಅಗತ್ಯವನ್ನು ಅರಿತು ಆಯಾ ಯೋಗವಿಧಾನದಲ್ಲಿ ತೊಡಗಿಸಿಕೊಂಡಾಗ ಒಂದು ರೀತಿಯ ಉತ್ತಮ ಫಲಿತಾಂಶ ಸಿಗಲು ಸಾಧ್ಯ ಅಲ್ಲದೇ ಯೋಗದಿಂದ ಉತ್ತಡ ಮತ್ತು ಉದ್ವೇಗವನ್ನು ನಿರ್ವಹಣೆಯನ್ನು ಖಂಡಿತ ಮಾಡಬಹುದು. ಅದಕ್ಕೆ ತಕ್ಕ ಹಾಗೆ ಯೋಗಾಭ್ಯಾಸವು ಅತಿ ಮುಖ್ಯ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿದ್ದ ಹರೀಶ್ ಅಕಾಲಿಕ ಸಾವು ನಮಗೆಲ್ಲಾ ಅತ್ಯಂತ ನೋವು ತಂದಿದೆ. ಯಾವುದೇ ಭಿನ್ನಾಭಿಪ್ರಾಯಗಳಿಲ್ಲದೇ ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದ ಹರೀಶ್ ಹಠಾತ್ ಸಾವು ನಮಗೆಲ್ಲರಿಗೂ ಆಘಾತವನ್ನುಂಟುಮಾಡಿದೆ ಎಂದು ಕುಂದಾಪುರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಶಶಿಧರ ಹೆಮ್ಮಾಡಿ ಹೇಳಿದರು. ಸೋಮವಾರ ಕುಂದಾಪುರ ಪ್ರೆಸ್ ಕ್ಲಬ್ ನಲ್ಲಿ ನಡೆದ ಇತ್ತೀಚೆಗಷ್ಟೆ ಅನಾರೋಗ್ಯದಿಂದ ಅಗಲಿದ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ, ಪತ್ರಕರ್ತ ಹರೀಶ್ ಅವರ ಶ್ರದ್ದಾಂಜಲಿ ಸಭೆಯಲ್ಲಿ ಮಾತನಾಡಿದರು. ಹರೀಶ್ ಅವರ ಮನೆಯ ವಾತಾವರಣ ನೋಡಿದರೆ ತುಂಬಾ ಬೇಸರವಾಗುತ್ತದೆ. ಇಬ್ಬರು ಸಹೋದರಿಯರು, ತಾಯಿ ಹಾಗೂ ಅನಾರೋಗ್ಯದಲ್ಲಿರುವ ತಂದೆಯನ್ನು ನೋಡಿಕೊಳ್ಳುವ ಜವಾಬ್ದಾರಿ ಅವರ ಮೇಲಿತ್ತು. ಒಬ್ಬನೆ ಮಗನಾಗಿ ಮನೆಯ ಎಲ್ಲಾ ಜವಾಬ್ದಾರಿಗಳನ್ನು ನಿಭಾಯಿಸುತ್ತಿದ್ದ ಹರೀಶ್ ಎಲ್ಲರಿಗೂ ಪ್ರೀತಿ ಪಾತ್ರರಾಗಿದ್ದರು. ಇಂತಹ ಸಂದರ್ಭದಲ್ಲಿ ಹರೀಶ್ ಈ ರೀತಿಯಾಗಿ ಅಂತ್ಯ ಕಂಡಿರುವುದು ಬಹಳ ನೋವಿನ ಸಂಗತಿ. ಹರೀಶ್ ಕುಟುಂಬದ ಮುಂದಿನ ದಿನಗಳು ಕೂಡ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ:  ಆಳ್ವಾಸ್ ಕಾಲೇಜಿನ ಪಿ. ಜಿ. ಸೆಮಿನಾರ್ ಹಾಲ್‌ನಲ್ಲಿ ವೃತ್ತಿಪರ ವಾಣಿಜ್ಯ ವಿಭಾಗ ಆಯೋಜಿಸಿದ  ’ಗಾಂಧಿ ಬೆಳಕಲ್ಲಿ ವರ್ತಮಾನ’  ಉದ್ಘಾಟನಾ ಕಾರ್ಯಕ್ರಮ ನಡೆಯಿತು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ, ಆಳ್ವಾಸ್ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಯೋಗೀಶ್ ಕೈರೋಡಿ  ’ಗಾಂಧಿ ಹೇಳಿರುವ ಹಾಗೆ ಆರ್ಥಿಕ ಸ್ವಾವಲಂಬನೆಯ ಜೊತೆಗೆ ಮಾನಸಿಕ ಸ್ವಾವಲಂಬನೆ ಕೂಡ ಆಗಬೇಕು.  ಪ್ರಾಯೋಗಿಕವಾಗಿ ಸರಳ ಜೀವನ ನಡೆಸುವ ಬಗ್ಗೆ ಚಿಂತನೆಯಾಗಬೇಕು’ ಗಾಂಧಿಯವರು ಬದುಕಿನಲ್ಲಿ ಅಳವಡಿಸಿದ್ದ ಸರಳತೆ, ಸಂದೇಶವನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುತ್ತಾ, ಮಹಾತ್ಮನನ್ನು ಮತ್ತೊಂದು ತಲೆಮಾರಿಗೆ ತಲುಪಿಸುವ ಪ್ರಯತ್ನವಾಗಬೇಕು. ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಆಳ್ವಾಸ್ ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಮಾತನಾಡಿ, ತನಗಾಗಿ ಏನನ್ನೂ ಕೂಡಿಡದೆ ಮಾನವೀಯತೆಗಾಗಿ ಬದುಕಿದ ಗಾಂಧಿ ನಮ್ಮೆಲ್ಲರ ಜನಮಾನಸದಲ್ಲಿ ಚಿರಸ್ಥಾಯಿಯಾಗಿರುತ್ತಾರೆ.  ವರ್ತಮಾನದಲ್ಲೂ ಅವರ ಮಾತುಗಳು, ಅವರು ನಡೆದು ಬಂದ ರೀತಿ ಎಲ್ಲರಿಗೂ ಆದರ್ಶ ಎಂದು ತಿಳಿಸಿದರು. ಹಸಿರು ಆವರಣ ಯೋಜನೆ: ಆಳ್ವಾಸ್ ಕಾಲೇಜಿನಲ್ಲಿ ಆಯೋಜಿಸಿದ್ದ ಗಾಂಧಿ ಜಯಂತಿಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಕಾವ್ರಾಡಿ ಮುಳ್ಳುಗುಡ್ಡೆ, ಬಸ್ರೂರು ಮತ್ತು ಕುಂದಾಪುರ ರೈಲ್ವೆ ನಿಲ್ದಾಣದ ವಸತಿ ಗೃಹದ ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ ಇಬ್ಬರನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಹೊನ್ನಾವರ ತಾಲೂಕು ಮಂಕಿ ನಿವಾಸಿ ವಿಲ್ಸನ್ ಪಿಯಾದಾಸ್ ಲೋಪಿಸ್ (29) ಮತ್ತು ತೆಕ್ಕಟ್ಟೆ ನಿವಾಸಿ ಗಂಗಾಧರ (40) ಬಂಧಿತ ಆರೋಪಿಗಳು. 2019 ಮೇ ತಿಂಗಳಿನಲ್ಲಿ ಕುಂದಾಪುರ ತಾಲೂಕಿನ ಕಾವ್ರಾಡಿ ಗ್ರಾಮದ ಮುಳ್ಳುಗುಡ್ಡೆಯಲ್ಲಿರುವ ನಾಗರಾಜ್ ಅವರು ಮನೆಗೆ ಬೀಗ ಹಾಕಿ ಕೆಲಸಕ್ಕೆ ಹೋಗಿದ್ದ ಸಮಯದಲ್ಲಿ ಮನೆಯ ಮಾಡಿನ ಹಂಚನ್ನು ತೆಗೆದು ಮನೆಯೊಳಗೆ ಪ್ರವೇಶಿಸಿ ಕಪಾಟನ್ನು ಒಡೆದು ಮನೆಯೊಳಗಿದ್ದ ಚಿನ್ನ ಮತ್ತು ಬೆಳ್ಳಿ ಆಭರಣ, ಇಸ್ತ್ರಿಪೆಟ್ಟಿಗೆ ನಗದು ಸೇರಿ ಒಟ್ಟು 64,900 ರೂ. ಮೌಲ್ಯದ ಸೊತ್ತು ಕಳವು ಮಾಡಿದ್ದರು. 2019 ಜೂನ್ ತಿಂಗಳಿನಲ್ಲಿ ಬಸ್ರೂರು ಗ್ರಾಮದ ಕೊಳ್ಕೇರಿ ಮಹಾಲಿಂಗ ಹಾಗೂ ಅವರ ಹೆಂಡತಿ ಮಕ್ಕಳು ಕೆಲಸಕ್ಕೆ ಹೋಗಿದ್ದ ಸಮಯದಲ್ಲಿ ಮನೆಯ ಮಾಡಿನ ಹಂಚನ್ನು ತೆಗೆದು ಒಳಗೆ ಪ್ರವೇಶಿಸಿ ಮನೆಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಭಾರತೀಯ ಜನತಾ ಪಕ್ಷದ ಬೈಂದೂರು ಮಂಡಲ ಮಹಿಳಾ ಮೋರ್ಚಾ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರೀರಥಿ ಸುರೇಶ ಗಂಗೊಳ್ಳಿ ಬೀಚ್‌ನಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಿಜೆಪಿ ಬೈಂದೂರು ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ಬೆಸ್ಕೂರ್, ಮಂಡಲ ಉಪಾಧ್ಯಕ್ಷೆ ಪ್ರೇಮಾ ಸಿ. ಪೂಜಾರಿ, ಸಾಮ್ರಾಟ್ ಶೆಟ್ಟಿ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಾಂತಿ ಖಾರ್ವಿ, ಮಹಿಳಾ ಮೋರ್ಚಾ ಉಪಾದ್ಯಕ್ಷರಾದ ಜಯಂತಿ ಪೂಜಾರಿ, ದೀಪಾ ಶೆಟ್ಟಿ, ಮಹಿಳಾ ಮೋರ್ಚಾ ಜಿಲ್ಲಾ ಕಾರ್ಯದರ್ಶಿಗಳಾದ ಅನಿತಾ ಆರ್. ಕೆ., ಮಾಲತಿ ನಾಯ್ಕ್, ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಸರಿತಾ ನಾಯ್ಕ್, ಸುಮಿತಾ ಶೇರುಗಾರ್, ಜ್ಯೋತಿ ಖಾರ್ವಿ, ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯರಾದ ಬಿ. ಲಕ್ಷ್ಮೀಕಾಂತ ಮಡಿವಾಳ,  ಬಿ. ರಾಘವೇಂದ್ರ ಪೈ, ಶೇಕ್ ಪರ್ವಿನ್ ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ದೀವಗಿಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ನಡೆದ ಲಾರಿ ಹಾಗೂ ಕಾರು ನಡುವಿನ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಹುಬ್ಬಳ್ಳಿ ಕಡೆ ತೆರಳುತ್ತಿದ್ದ ಲಾರಿ ಹಾಗೂ ಬೈಂದೂರು ಕಡೆಗೆ ಬರುತ್ತಿದ್ದ ಕಾರಿನ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮಂಜುನಾಥ ಆಚಾರ್ಯ ಕಾಲ್ತೋಡು (33) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಸಹಪ್ರಯಾಣಿಕ ರವಿಕಾಂತ್ ಆಚಾರ್ಯ (30) ಗಂಭೀರ ಗಾಯಗೊಂಡಿದ್ದು, ಅವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕೋಟ :  ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ ಕೋಟದಲ್ಲಿರುವ ಕಾರಂತ ಸಿರಿ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಸ್ಥಾಪಿಸಲಾಗಿರುವ ಪುಸ್ತಕ ಮಳಿಗೆಯಲ್ಲಿ ಕನ್ನಡದ ಪ್ರಸಿದ್ಧ ಸಾಹಿತಿ ಡಾ. ಶಿವರಾಮ ಕಾರಂತರು, ನಾಡೋಜ ಎಸ್.ಎಲ್ ಭೈರಪ್ಪ, ಪೂರ್ಣಚಂದ್ರ ತೇಜಸ್ವಿ , ಸೇರಿದಂತೆ ಇನ್ನಿತರ ಸಾಹಿತಿಗಳ ಕಾದಂಬರಿ , ಮಕ್ಕಳ ಕಥೆ ಪುಸ್ತಕ, ಧಾರ್ಮಿಕ ಸಂಬಂಧಿಸಿದ ಹಾಗೂ ವ್ಯಕ್ತಿತ್ವ ವಿಕಸನದ ಪುಸ್ತಕಗಳು ಮಾರಾಟಕ್ಕೆ ಲಭ್ಯವಿದೆ. ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರಕಟಿತವಾದ ಪುಸ್ತಕಗಳನ್ನು ವಿಶೇಷ ಸಂದರ್ಭಗಳಾದ ಗಣರಾಜ್ಯೋತ್ಸವ, ಸ್ವಾತಂತ್ರೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ ನಡೆಯುವ ಜನವರಿ , ಆಗಸ್ಟ್ ಹಾಗೂ ನವೆಂಬರ್ ಮಾಹೆಗಳಲ್ಲಿ ಅಲ್ಲದೆ ರಾಜ್ಯದಲ್ಲಿ ವಿಶೇಷವಾಗಿ ನಡೆಯುವ ವಿಶ್ವ ಕನ್ನಡ ಸಮ್ಮೇಳನ, ಅಖಿಲ ಭಾರತ ಸಾಹಿತ್ಯ ಸಮ್ಮೇಳನಗಳಲ್ಲಿ 50 % ರಿಯಾಯಿತಿ ದರದಲ್ಲಿ ಉಳಿದ ದಿನಗಳಲ್ಲಿ 15% ರಿಯಾಯಿತಿ ದರದಲ್ಲಿ ಪುಸ್ತಕಗಳು ದೊರೆಯಲಿದೆ ಎಂದು ಕಾರಂತ ಥೀಮ್ ಪಾರ್ಕ್ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮ , ಕಾರ್ಯದರ್ಶಿ ನರೇಂದ್ರ ಕುಮಾರ್…

Read More