ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸ್ತುತ ಸಾಲಿನ ಮಿಲಿಟರಿ ಪಿಂಚಣಿದಾರ ಕರ್ನಾಟಕದ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ನೀಡಲು ಒಂದನೇ ತರಗತಿಯಿಂದ ಅಂತಿಮ ಪದವಿ/ಡಿಪ್ಲೋಮಾ ಮತ್ತು ವೃತ್ತಿಪರ ಪದವಿವರೆಗೆ ಕರ್ನಾಟಕದಲ್ಲಿರುವ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 17ರ ನಂತರ ಅರ್ಜಿಯನ್ನು ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮಂಗಳೂರು ಇಲ್ಲಿಂದ ಪಡೆಯಬಹುದಾಗಿದೆ. ಇಂದರಿಂದ ಅಚಿತಿಮ ವರ್ಷದ ಪದವಿ/ಡಿಪ್ಲೊಮೋ ವರೆಗೆ ಅರ್ಜಿ ಸ್ವೀಕರಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದ್ದು, ವೃತಿಪರ ವ್ಯಾಸಾಂಗ ಮಾಡುತ್ತಿರುವವರಿಗೆ ಅರ್ಜಿ ಸ್ವೀಕರಿಸಲು ನವೆಂಬರ್ 30ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಇವರನ್ನು ಸಂಪರ್ಕಿಸಬಹುದಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಆತ್ಮ ಯೋಜನೆಯಡಿ ಜಿಲ್ಲಾ, ತಾಲೂಕು ಶ್ರೇಷ್ಠ ಪ್ರಶಸ್ತಿ ಹಾಗೂ ಶ್ರೇಷ್ಠ ಆಸಕ್ತ ಗುಂಪು ಪ್ರಶಸ್ತಿಗೆ ಹನ್ನೆರಡು ವಿಭಾಗಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಆಯ್ಕೆಯಾದ ಜಿಲ್ಲೆಯ 10 ಮಂದಿ ರೈತರಿಗೆ ತಲಾ ರೂ.25,000/ ಹಾಗೂ ತಾಲೂಕು ಮಟ್ಟದ ಚಟುವಟಿಕೆಗಳಡಿ ಆಯ್ಕೆಯಾದ ಆಯಾಯ ತಾಲೂಕಿನ 5 ಮಂದಿ ರೈತರಿಗೆ ತಲಾ 10,000/- ನಗದು ವಿತರಿಸಲಾಗುವುದು. ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ರೈತರು ಭಾಗವಹಿಸಬಹುದಾದ ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳು: ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ತಂತ್ರಜ್ಞಾನ ಅಳವಡಿಕೆ, ಕೃಷಿ ಸಂಸ್ಕರಣೆ, ಹಾಗೂ ಅರಣ್ಯ ಕೃಷಿ, ಆಡು, ಕುರಿ, ಮೊಲ, ಇತ್ಯಾದಿ ಸಾಕಾಣಿಕೆ ಚಟುವಟಿಕೆಗಳಾಗಿವೆ. ಜಿಲ್ಲೆಗಳ ಪ್ರಗತಿಪರ ರೈತರ ಗುಂಪುಗಳ ಸಾಧನೆಗಳನ್ನು ಗುರುತಿಸಿ ಪುರಸ್ಕರಿಸುವ ನಿಟ್ಟಿನಲ್ಲಿ ರೈತರ ಗುಂಪುಗಳಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಮಣಿಪಾಲದಲ್ಲಿ ಪ್ರಸ್ತುತ ಸಾಲಿನ ಐ.ಟಿ.ಐ ಪ್ರವೇಶಾತಿಗೆ ಸರಕಾರಿ ಕೈಗಾರಿಕಾ ಸಂಸ್ಥೆಯಿಂದ ೨೦೨೦ ರ ಸಾಲಿನ ಪ್ರವೇಶಕ್ಕಾಗಿ ಎಸ್.ಎಸ್.ಎಲ್.ಸಿ ಅಥವಾ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ವೆಬ್‌ಸೈಟ್ www.emptrg.kar.nic.in ಮೂಲಕ ಆಗಸ್ಟ್ ೧೭ರಿಂದ ೩೧ರವರೆಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸ.ಕೈ.ತ.ಸಂಸ್ಥೆ, ಪ್ರಗತಿನಗರ ಮಣಿಪಾಲ ಇಲ್ಲಿಗೆ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 9448409355& 9740541554 ಗೆ ಸಂಪರ್ಕಿಸಲು ಸರಕಾರಿ ಕೈಗಾರಿಕಾ ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸ್ತಕ ಸಾಲಿನ ಕೃಷಿ ಪ್ರಶಸ್ತಿ ರೈತರಿಗೆ ಉತ್ಪದನಾ ಬಹುಮಾನ ಕಾರ್ಯಕ್ರಮದಡಿ ಮುಂಗಾರು ಭತ್ತದ ಬೆಳೆಯಲ್ಲಿ ಬೆಳೆ ಸ್ವರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ. ಭತ್ತದ ಬೆಳೆಯಲ್ಲಿ ರೈತರು ವಿವಿಧ ಹಂತದ ಬೆಳೆ ಸ್ವರ್ದೆಗೆ ಪ್ರವೇಶ ಶುಲ್ಕವನ್ನು ಪಾವತಿಸಿ ಅರ್ಜಿ,ಭೂ ಮಾಲೀಕತ್ವ ಕ್ಷೇತ್ರ ಕುರಿತ ಕಂದಾಯ ಇಲಾಖೆಯ ದಾಖಲಾತಿ ಅಥವಾ ಗುತ್ತಿಗೆ ಕರಾರು ಪತ್ರ ಗಳೊಂದಿಗೆ ಸೆಪ್ಟೆಂಬರ್ 15 ರೊಳಗೆ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸಬಹುದಾಗಿರುತ್ತದೆ.ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದು. ಎಂದು ಉಡುಪಿ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ► ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ – https://kundapraa.com/?p=40294 .
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆಗೆ ಆ.14ರಂದು ಸರಕಾರ ಜಾರಿಮಾಡಿದ್ದ ಮಾರ್ಗಸೂಚಿಯಲ್ಲಿ ಸಡಿಲಿಕೆ ಮಾಡಲಾಗಿದೆ. ಪರಿಷ್ಕೃತ ಮಾರ್ಗಸೂಚಿ: ಗಣೇಶ ಚತುರ್ಥಿ ಹಬ್ಬವನ್ನು ಸರಳವಾಗಿ ದೇವಸ್ಥಾನ, ಮನೆ ಅಥವಾ ಸರ್ಕಾರಿ/ಖಾಸಗಿ/ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಬಹುದು. ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪಿಸುವವರು ಗಣೇಶ ಮೂರ್ತಿಯನ್ನು ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಎರಡು ಅಡಿ ಎತ್ತರ ಮೀರದಂತೆ ಪ್ರತಿಷ್ಠಾಪಿಸುವುದು. ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಮುನಿಷಿಪಲ್ ಕಾರ್ಪೋರೇಷನ್/ಸ್ಥಳೀಯ ಆಡಳಿತದ ಪೂರ್ವಾನುಮತಿ ಪಡೆಯುವುದು. ಒಂದು ವಾರ್ಡಿಗೆ/ಗ್ರಾಮಕ್ಕೆ ಒಂದು ಸಾರ್ವಜನಿಕ ಗಣೇಶೋತ್ಸವ ಮಾತ್ರ ಆಚರಿಸಲು ಪ್ರೋತ್ಸಾಹಿಸುವುದು. ಇಂತಹ ಸ್ಥಳಗಳಲ್ಲಿ 20 ಜನಕ್ಕೆ ಸೀಮಿತವಾದ ಆವರಣ ನಿರ್ಮಿಸುವುದು. ಒಮ್ಮೆಲೆ 20ಕ್ಕಿಂತ ಹೆಚ್ಚಿನ ಜನ ಸೇರದಂತೆ ಭಕ್ತಾಧಿಗಳಿಗೆ ಅನುವು ಮಾಡುವುದು. ಯಾವುದೇ ರೀತಿಯ ಸಾಂಸ್ಕೃತಿ/ಸಂಗೀತ/ನೃತ್ಯ ಇನ್ನಿತರ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿರುವುದಿಲ್ಲ. ಗಣೇಶ ಮೂರ್ತಿಯನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಲಿ ಯಾವುದೇ ರೀತಿಯ ಮೆರವಣಿಗೆ ಮಾಡುವಂತಿಲ್ಲ. ಇದನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಪೊಲೀಸ್ ಠಾಣೆಗೆ ಮಂಗಳವಾರ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಂಪ್ಯೂಟರ್ ಕೊಡುಗೆಯಾಗಿ ನೀಡಲಾಯಿತು. ಬೈಂದೂರು ಠಾಣೆ ಪಿಎಸ್ಐ ಸಂಗೀತಾ ಅವರಿಗೆ ಕಂಪ್ಯೂಟರ್ ಹಸ್ತಾಂತರಿಸಲಾಯಿತು. ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟಿನ ಟ್ರಸ್ಟಿನ ಮ್ಯಾನೆಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ ಅವರ ನಿರ್ದೇಶನದಂತೆ ಟ್ರಸ್ಟೀ ರಾಮ ಬಿಜೂರು, ಸದಸ್ಯ ಜಯರಾಮ ಶೆಟ್ಟಿ, ಕೃಷ್ಣ ಬಿಜೂರು ಈ ಸಂದರ್ಭ ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಮೂಲಭೂತ ಸೌಕರ್ಯ, ಆಡಳಿತಾತ್ಮಕ ಅಭಿವೃದ್ಧಿ ಸೇರಿದಂತೆ ಜನರ ಬಹುಕಾಲದ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದು, ಪ್ರಸ್ತುತ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಕೆಲವು ಕಾಮಗಾರಿಗಳಿಗೆ ಟೆಂಡರ್ ಹಂತದಲ್ಲಿದೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು. ಅವರು ಮಂಗಳವಾರ ಬೈಂದೂರು ಪ್ರವಾಸಿ ಮಂದಿರದಲ್ಲಿ ಜರುಗಿದ ಪತ್ರಿಕಾಗೋಷ್ಠಿಯನು ಉದ್ದೇಶಿಸಿ ಮಾತನಾದರು. ನಬಾರ್ಡ್ ಯೋಜನೆಯಡಿ ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ 220 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆಯಾಗಿರುತ್ತದೆ. ಇದರ ನೀಲಿ ನಕ್ಷೆ ತಯಾರಾಗಿದ್ದು, ಮುಂದಿನ ಎರಡು ವರ್ಷದಲ್ಲಿ ಬೈಂದೂರು ಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ. ಸೌಕೂರು ಏತ ನೀರಾವರಿಯ 73 ಕೋಟಿ ಕಾಮಗಾರಿ ಪ್ರಗತಿಯಲ್ಲಿದೆ. ಸುಮಾರು 7 ರಿಂದ 8 ಗ್ರಾಮಕ್ಕೆ ಕೃಷಿ ಚಟುವಟಿಕೆಗೆ ನೀರುಣಿಸುವ ಕಾರ್ಯ ಈ ಯೋಜನೆಯಿಂದ ಸಾಕಾರವಾಗಲಿದೆ. ಸುಮನಾವತಿ ನದಿಗೆ ಸುಬ್ಬರಡಿಯಲ್ಲಿ 35 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಇದರಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಆ.18ರ ಮಂಗಳವಾರ 421 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 158, ಉಡುಪಿ ತಾಲೂಕಿನ 203 ಹಾಗೂ ಕಾರ್ಕಳ ತಾಲೂಕಿನ50 ಮಂದಿಗೆ ಪಾಸಿಟಿವ್ ಬಂದಿದೆ. 10 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 142 ಸಿಂಥಮೇಟಿವ್ ಹಾಗೂ 279 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, 224 ಪುರುಷರು, 197 ಮಹಿಳೆಯರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 142, ILI 90, ಸಾರಿ 17 ಪ್ರಕರಣವಿದ್ದು, 158 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. 6 ಮಂದಿ ಅಂತರ್ಜಿಲ್ಲಾ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಇಂದು 177 ಮಂದಿ ಆಸ್ಪತ್ರೆಯಿಂದ ಹಾಗೂ 144 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. 1200 ನೆಗೆಟಿವ್: ಈ ತನಕ ಒಟ್ಟು 57576 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 47824 ನೆಗೆಟಿವ್, 8666 ಪಾಸಿಟಿವ್ ಬಂದಿದ್ದು, 1086 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಬೈಂದೂರು ಜ್ಯೂನಿಯರ್ ಕಾಲೇಜಿನ ವಿದ್ಯಾರ್ಥಿನಿ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ 611 (97.76%) ಅಂಕ ಗಳಿಕ ಶಾಲೆಗೆ ದ್ವಿತೀಯ ಸ್ಥಾನಿಯಾಗಿದ್ದಾಳೆ. ಪಲ್ಲವಿ ಬೈಂದೂರು ಸುರಭಿ ಸಂಸ್ಥೆಯ ಸಂಗೀತ ವಿದ್ಯಾರ್ಥಿನಿಯಾಗಿದ್ದು, ಸಂಗೀತ ಕಲಾವಿದ ಚಂದ್ರ ಬಂಕೇಶ್ವರ ಹಾಗೂ ಪೂರ್ಣಿಮಾ ದಂಪತಿಗಳ ಪುತ್ರಿ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು,ಅ.17: ಸಮುದ್ರದಲೆಗಳ ಹೊಡೆತಕ್ಕೆ ಸಿಲುಗಿ ಮುಗುಚಿ ಬಿದ್ದಿದ್ದ ದೋಣಿಯಲ್ಲಿ ನಾಪತ್ತೆಯಾಗಿದ್ದ ನಾಲ್ವರ ಪೈಕಿ ಎಲ್ಲಾ ಮೃತದೇಹಗಳು ಇಂದು ಬೆಳಿಗ್ಗೆ ಹಾಗೂ ರಾತ್ರಿಯ ವೇಳೆಗೆ ಪತ್ತೆಯಾಗಿದೆ. ರಾತ್ರಿ ಶೇಖರ ಖಾರ್ವಿ(39) ಹಾಗೂ ಲಕ್ಷಣ ಖಾರ್ವಿ(34) ಹಾಗೂ ಮಂಜುನಾಥ ಖಾರ್ವಿ (40) ಎಂದು ಗುರುತಿಸಲಾಗಿದೆ. ಶೇಖರ ಖಾರ್ವಿ ಅವರ ಮೃತದೇಹ ಕಿರಿಮಂಜೇಶ್ವರ ಹೊಸಹಕ್ಲು ಬಳಿ, ಲಕ್ಷಣ ಖಾರ್ವಿ ಅವರ ಮೃತದೇಹ ಆದ್ರಗೋಳಿ ಹಾಗೂ ಮಂಜುನಾಥ ಖಾರ್ವಿ ಅವರ ಮೃತದೇಹ ಗಂಗಿಬೈಲು ಬಳಿ ದೊರೆತಿದೆ. ಇಂದು ಬೆಳಿಗ್ಗೆ ನಾಗ ಖಾರ್ವಿ ಎಂಬುವವರ ಮೃತದೇಹ ಹೊಸಹಕ್ಲುವಿನಲ್ಲಿ ಪತ್ತೆಯಾಗಿತ್ತು. ಕೊಡೇರಿಯಲ್ಲಿ ಸಾಗರಶ್ರೀ ಎಂಬ ಹೆಸರಿನ ದೋಣಿ ಮೀನುಗಾರಿಕೆ ಮುಗಿಸಿ ಹಿಂದಿರುಗುತ್ತಿದ್ದ ಸಂದರ್ಭ ನಡೆದ ಅವಘಡದಲ್ಲಿ ಬಿ. ನಾಗ, ಲಕ್ಷಣ, ಶೇಖರ ಜಿ., ಮಂಜುನಾಥ ಖಾರ್ವಿ ಸೇರಿ ಒಟ್ಟು ನಾಲ್ವರು ವ್ಯಕ್ತಿಗಳು ನಾಪತ್ತೆಯಾಗಿದ್ದರು. ದೋಣಿಯಲ್ಲಿದ್ದ ಎಂಟು ಮಂದಿ ಅಪಾಯದಿಂದ ಪಾರಾಗಿದ್ದರು. ಅವರಿಗಾಗಿ ರಾತ್ರಿಯ ತನಕ ಶೋಧ ಕಾರ್ಯ ಮುಂದುವರಿದಿತ್ತು. ಇಂದು ರಾತ್ರಿಯ ಹೊತ್ತಿಗೆ ಎಲ್ಲಾ…
