Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿಉಡುಪಿ,ಸೆ.24: ಪ್ರಸಕ್ತ ಸಾಲಿನ “ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ” ಮೀನುಗಾರರ ಕಲ್ಯಾಣ ಯೋಜನೆಯಾದ ಉಳಿತಾಯ ಮತ್ತು ಪರಿಹಾರ ಯೋಜನೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಮಂಜೂರಾತಿ ನೀಡಿದ್ದು, ಮೀನುಗಾರರ ಸಹಕಾರ ಸಂಘಗಳು 2021-22ನೇ ಸಾಲಿಗೆ ಸದಸ್ಯರ ಹೊಸ ನೋಂದಣಿ ಮತ್ತು ನವೀಕರಣ ಪ್ರಕ್ರಿಯೆಯನ್ನು ಪ್ರಾರಂಭಿಸಬಹುದಾಗಿದೆ. ಸದರಿ ಯೋಜನೆಯಡಿ ಭಾಗವಹಿಸಲು ಇಚ್ಛಿಸುವ ಫಲಾನುಭವಿಗಳು ಬಿ.ಪಿ.ಎಲ್ ಕಾರ್ಡ್ ಹೊಂದಿರುವವರಾಗಿದ್ದು, 18 ರಿಂದ 60 ವರ್ಷ ವಯೋಮಾನದವರಾಗಿರತಕ್ಕದ್ದು ಹಾಗೂ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಬಿ.ಪಿ.ಎಲ್ ಕಾರ್ಡ್ ಪ್ರತಿ ಹಾಗೂ ಸಂಘದಲ್ಲಿ ಸದಸ್ಯರಾಗಿರುವ ಬಗ್ಗೆ ದೃಢೀಕರಣ ಪತ್ರದೊಂದಿಗೆ ಸದಸ್ಯತನ ಹೊಂದಿದ ಸಹಕಾರ ಸಂಘದ ಮುಖಾಂತರ ತಮ್ಮ ವ್ಯಾಪ್ತಿಯ ತಾಲೂಕು ಮಟ್ಟದ ಮೀನುಗಾರಿಕೆ ಸಹಾಯಕ ನಿರ್ದೇಶಕರು (ಉಡುಪಿ/ಕುಂದಾಪುರ) ಇವರ ಕಛೇರಿಗೆ ಸೆಪ್ಟಂಬರ್ 30 ರೊಳಗೆ ಸಲ್ಲಿಸುವಂತೆ ಜಂಟಿ ನಿರ್ದೇಶಕರು, ಮೀನುಗಾರಿಕೆ ಇಲಾಖೆ, ಉಡುಪಿ ಅವರ ಪ್ರಕಟಣೆ ತಿಳಿಸಿದೆ. /ಕುಂದಾಪ್ರ ಡಾಟ್ ಕಾಂ ಸುದ್ದಿ/ ಮೀನುಗಾರರು ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಸೀಡಿಂಗ್ ಮಾಡುವ ಬಗ್ಗೆ:ಮೀನುಗಾರಿಕೆ ಇಲಾಖೆಯ ಕೇಂದ್ರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಸೆ.24: ಕೌಶಲ್ಯಾಭಿವೃಧ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ, ಮಣಿಪಾಲ್ ರಜತಾದ್ರಿಯ ಉದ್ಯೋಗ ವಿನಿಮಯ ಕಛೇರಿಯಲ್ಲಿ ಸೆಪ್ಟೆಂಬರ್ 30 ರಂದು ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ವಿವಿಧ ಕಂಪೆನಿ ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದು, ಖಾಸಗಿ ವಲಯದಲ್ಲಿನ ಉದ್ಯೋಗಕ್ಕೆ ಆಸಕ್ತರಿರುವ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಯಾವುದೇ ಪದವಿ, ಡಿಪ್ಲೋಮಾ, ಐ.ಟಿ.ಐ, ಸ್ನಾತಕೋತ್ತರ ಹಾಗೂ ಕ್ಷೇತ್ರಕ್ಕೆ ಸಂಬಂಧಿಸಿದ ವಿದ್ಯಾರ್ಹತೆಯನ್ನು ಹೊಂದಿದ ಅಭ್ಯರ್ಥಿಗಳು ಸೂಕ್ತ ದಾಖಲೆಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 9945856670 ಸಂಪರ್ಕಿಸುವಂತೆ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಗೆ ಭೇಟಿ ನೀಡುವಂತೆ ಉದ್ಯೋಗಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ, ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ, ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ, ಗ್ರಾಮ ಪಂಚಾಯತ್ ಗಂಗೊಳ್ಳಿ, ರೋಟರಿ ಕ್ಲಬ್ ಗಂಗೊಳ್ಳಿ, ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತ ಮತ್ತು ಸರಕಾರಿ ಆಯುರ್ವೇದ ಚಿಕಿತ್ಸಾಲಯ ಕಾಲ್ತೋಡು ಇವರ ಜಂಟಿ ಆಶ್ರಯದಲ್ಲಿ ಪೋ?ಣ್ ಅಭಿಯಾನ ಮತ್ತು ಪೌಷ್ಠಿಕ ಆಹಾರ ಮಾಸಾಚರಣೆ ಕಾರ್ಯಕ್ರಮ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಗುರುವಾರ ಜರಗಿತು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ್ ಎಂ. ಜಿ. ಕಾರ್ಯಕ್ರಮ ಉದ್ಘಾಟಿಸಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತ ಅಧ್ಯಕ್ಷ ಎಚ್.ಗಣೇಶ ಕಾಮತ್ ಶುಭಾಶಂಸನೆಗೈದರು. ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಮಿತಾ ಮತ್ತು ಕಾಲ್ತೋಡು ಸರಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ.ವೀಣಾ ಕಾರಂತ್ ಪೌಷ್ಟಿಕ ಆಹಾರದ ಮಾಹಿತಿ, ಪ್ರಾತ್ಯಕ್ಷಿಕೆ ನೀಡಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಆರ್ಥಿಕ ಹಿಂಜರಿತ ಹಾಗೂ ಕೋವಿಡ್-19 ಪರಿಣಾಮದ ಹೊರತಾಗಿಯೂ ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ 2020-21ನೇ ಸಾಲಿನಲ್ಲಿ 24.57 ಲಕ್ಷ ರೂ. ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ. 10 ಪಾಲು ಮುನಾಫೆ ನೀಡಲು ಆಡಳಿತ ಮಂಡಳಿ ನಿರ್ಧರಿಸಿದೆ. ವರ್ಷಾಂತ್ಯಕ್ಕೆ ಬ್ಯಾಂಕಿನ ಪಾಲು ಬಂಡವಾಳ ಸುಮಾರು 1.90 ಕೋಟಿ ರೂ ಮತ್ತು 28.80 ಕೋಟಿ ರೂ. ಠೇವಣಿ ಹೊಂದಿದೆ. ವಿವಿಧ ಸಹಕಾರಿ ಬ್ಯಾಂಕ್‌ಗಳಲ್ಲಿ 17.41 ಕೋಟಿ ಹೂಡಿಕೆ ಮಾಡಲಾಗಿದೆ ಎಂದು ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಆನಂದ ಬಿಲ್ಲವ ಹೇಳಿದರು. ಗಂಗೊಳ್ಳಿಯ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ಬುಧವಾರ ಜರಗಿದ ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಠೇವಣಿ ಸಂಗ್ರಹದಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವುದು, ಸುಸ್ತಿ ಸಾಲಗಳ ಪ್ರಮಾಣ ಕಡಿಮೆ ಮಾಡುವುದು ಸೇರಿದಂತೆ ಬ್ಯಾಂಕಿನ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಚಿದು ಹೇಳಿದರು. ಇದೇ ಸಂದರ್ಭ ಪ್ರಸಕ್ತ ಸಾಲಿನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಶ್ವ ಹಸಿರು ಕಟ್ಟಡ ಸಪ್ತಾಹದ ಅಂಗವಾಗಿ ಬ್ಯಾರೀಸ್ ವಿದ್ಯಾ ಸಂಸ್ಥೆಗಳ ನೇತೃತ್ವದಲ್ಲಿ ಹಸಿರು ಕೋಡಿ ಸಂಕಲ್ಪ ಮಾಡಲಾಗಿದ್ದು, ಅದರ ಮೊದಲ ಹೆಜ್ಜೆಯಾಗಿ ಸೆ.26, ಬೆಳಗ್ಗೆ 7ಕ್ಕೆ ಕೋಡಿ ಕಡಲ ತೀರ ಸ್ವಚ್ಛತಾ ನಡೆಯಲಿದೆ ಎಂದು ಕೋಡಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ಪ್ರೊ. ದೋಮ ಚಂದ್ರಶೇಖರ್ ಹೇಳಿದ್ದಾರೆ. ಗುರುವಾರ ಕುಂದಾಪುರ ಪ್ರೆಸ್ ಕ್ಲಬ್‌ನಲ್ಲಿ ಜರುಗಿದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿ ವರ್ಲ್ಡ್ ಗ್ರೀನ್ ಬಿಲ್ಡಿಂಗ್ ಕೌನ್ಸಿಲ್ 70 ರಾಷ್ಟ್ರಗಳ ಗ್ರೀನ್ ಬಿಲ್ಡಿಂಗ್ ಮಾನ್ಯತೆ ಮಾಡಿದ್ದು, ಅದರಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ. ಪ್ರಸಕ್ತ ಪ್ರಪಂಚದಲ್ಲಿ ಹಸಿರು ಕಟ್ಟಡ ವಿಸ್ತೀರ್ಣವು 7.80 ಬಿಲಿಯನ್ ಇದ್ದು 2022ರ ಹೊತ್ತಿಗೆ ಅದನ್ನು 10 ಬಿಲಿಯನ್‌ಗೆ ಏರಿಸುವ ಗುರಿಯಿದೆ. ಇಂಡಿಯನ್ ಗ್ರೀನ್ ಬಿಲ್ಡಿಂಗ್ ಕೌನ್ಸಿಲ್ ಬೆಂಗಳೂರು ಚಾಪ್ಟರ್ ಅಧ್ಯಕ್ಷ ಮೊಹಮದ್ ಬ್ಯಾರಿ ಬ್ಯಾರೀಸ್ ಗ್ರೂಪ್ ಅಧ್ಯಕ್ಷರಾಗಿದ್ದು, ಕೋಡಿಯಲ್ಲಿ ಗ್ರೀನ್ ಮಸೀದಿ ಮೂಲಕ ರಾಷ್ಟ್ರದ ಗಮನ ಸೆಳೆದಿದ್ದು, ಹಲವಾರು ರಾಷ್ಟ್ರ ಅಂತರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದು, ಅವರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸ್ವಚ್ಚತೆಗಾಗಿ ರಾಷ್ಟ್ರ, ರಾಜ್ಯಮಟ್ಟದ ಪ್ರಶಸ್ತಿ ಹಿಂದೆ ಪೌರಕಾರ್ಮಿಕರ ಪರಿಶ್ರಮವಿದೆ. ಗಡಿಯಲ್ಲಿ ಯೋಧರು ನಮ್ಮ ರಕ್ಷಿಸಿದರೆ, ಪೌರ ಕಾರ್ಮಿಕರು ಸ್ವಚ್ಛತೆ ಮೂಲಕ ನಮ್ಮ ರಕ್ಷಿಸುತ್ತಿದ್ದಾರೆ. ಸುಂದರ ಕುಂದಾಪುರ ನಿರ್ಮಾತೃಗಳು ಪೌರಕಾರ್ಮಿಕರು. ಅವರ ಸೇವೆ ಬೆಲೆ ಕಟ್ಟಲಾಗದು. ಪೌರ ಕಾರ್ಮಿಕರ ದಿನದಂದು ಸ್ಮರಿಸುವ ಮೂಲಕ ಕೃತಜ್ಞರಾಗೋಣ ಎಂದು ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಅಭಿಪ್ರಾಯಪಟ್ಟಿದ್ದಾರೆ. ಕುಂದಾಪುರ ಪುರಸಭೆ ಆಶ್ರಯದಲ್ಲಿ ಇಲ್ಲಿನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಭವನದಲ್ಲಿ ನಡೆದ ಪೌರ ಕಾರ್ಮಿಕರ ದಿನಾಚರಣೆ, ಸನ್ಮಾನ ಹಾಗೂ ಬೀಳ್ಕೊಡುಗೆಯಲ್ಲಿ ಮಾತನಾಡಿದರು. ಪುರಸಭೆ 18 ದಿನಗೂಲಿ ನೌಕರರ ಖಾಯಂ ಮಾಡಿದ್ದು, ಇನ್ನು 12 ಜನರ ಸೇವಾ ನೇಮಕ ಬಾಕಿಯಿದೆ. ಸಮಚಿತ್ತ, ಸಮರ್ಪಣಾ ಭಾವ ಪುರಕಾರ್ಮಿಕರಲ್ಲಿದ್ದು, ಅಂಬೇಡ್ಕರ್ ಕಾಲನಿ ೮ ಕುಟುಂಬಕ್ಕೆ ಜಾಗದ ಹಕ್ಕುಪತ್ರ ಸಿಕ್ಕಿದ್ದು, ಉಳಿದವರಿಗೂ ಹಕ್ಕುಪತ್ರ ನೀಡುವ ಜೊತೆ ತುರ್ತು ಮನೆ ನಿರ್ಮಾಣಕ್ಕೆ ಪುರಸಭೆ 50 ಸಾವಿರ ಮುಂಗಡ ಹಣ ಕೊಡುವ ನಿರ್ಧಾರ ಮಾಡಿದ ಎಂದು ಹೇಳಿದರು. ಪುರಸಭೆ ಅಧ್ಯಕ್ಷ ವೀಣಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಿದ್ಯಾರ್ಜನೆಗೆ ಬಡವ ಶ್ರೀಮಂತ ಎಂಬ ಬೇಧವಿಲ್ಲ. ವಿದ್ಯಾರ್ಥಿಗಳು ಶಿಸ್ತಿನ ಜೀವನವನ್ನು ಅಳವಡಿಸಿಕೊಳ್ಳಬೇಕು. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಭಿಗಳಾಗುವತ್ತ ಗಮನಹರಿಸಬೇಕು ಎಂದು ಬೈಂದೂರು ತಹಶೀಲ್ದಾರ ಶೋಭಾ ಲಕ್ಷ್ಮೀ ಎಚ್ ಎಸ್ ಹೇಳಿದರು. ಗುರುವಾರ ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಿಳಾ ಸಮಿತಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ POSH ACT-2013 ಮತ್ತು ಮಹಿಳಾ ಸಬಲೀಕರಣ ಕುರಿತು ಕಾರ್ಯಾಗಾರದಲ್ಲಿ ಮಾತನಾಡಿದರು. ಎನ್ನೆಸ್ಸೆಸ್ ಯೋಜನಾಧಿಕಾರಿ ಲತಾ ಪೂಜಾರಿ POSH ACT-2013 ಬಗ್ಗೆ ಮಾಹಿತಿ ನೀಡಿದರು. ಆಂಗ್ಲಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ಗೀತಾಂಜಲಿ ಬಿ. ಇವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಅಶ್ವತ್ಥ್ ಡಿ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪನ್ಯಾಸಕರಾದ ಮೋಹನ್ ಕುಮಾರ್ ಹಾಗೂ ಶಿವಕುಮಾರ್ ಪಿ ವಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸೌಮ್ಯ ಕಾರ್ಯಕ್ರಮವನ್ನು ನಿರೂಪಿಸಿದರು. ರಮ್ಯ ನಾಯ್ಕ್ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ಶಿಕ್ಷಣ ವ್ಯಕ್ತಿಯ ಕೊರತೆಯ ಅರ್ಧವನ್ನು ತುಂಬಿಸಿದರೆ, ಉಳಿದರ್ಧವನ್ನು ಕಲೆಗಳು ಭರ್ತಿ ಮಾಡುತ್ತವೆ. ಒಬ್ಬರು ಪೂರ್ಣರೆನಿಸಬೇಕಾದರೆ ಶಿಕ್ಷಣದ ಜತೆಗೆ ಯಾವುದಾರೊಂದ ಕಲೆಯಲ್ಲಿ ನೈಪುಣ್ಯ ಸಾಧಿಸಬೇಕು ಎಂದು ನಿವೃತ್ತ ಉಪನ್ಯಾಸಕ ಎಸ್. . ಜನಾರ್ದನ ಮರವಂತೆ ಹೇಳಿದರು. ಶಿರೂರು ಜ್ಞಾನದಾ ಶಿಕ್ಷಣ ಸಂಸ್ಥೆಯಲ್ಲಿ ಈಚೆಗೆ ವಿವಿಧ ಕಲೆಗಳ ಕಲಿಕೆಗೆ ವೇದಿಕೆ ಒದಗಿಸುವ ಕಲಾವರಣ ಉದ್ಘಾಟಿಸಿ ಅವರು ಮಾತನಾಡಿದರು. ಕಲಾಪ್ರದರ್ಶನದ ವೇಳೆ ಅದಕ್ಕೆ ಶ್ರೋತೃ ಅಥವಾ ಪ್ರೇಕ್ಷಕರ ಅಪನಂಬಿಕೆಯನ್ನು ನಶಿಸುವಂತೆ ಮಾಡುವ ಶಕ್ತಿ ಇದೆ. ಆ ಮೂಲಕ ಅವರು ಅದರಲ್ಲಿ ತನ್ಮಯರಾಗುತ್ತಾರೆ. ಆಗ ಅವರು ಭಾವಪ್ರಪಂಚಕ್ಕೆ ಜಾರುತ್ತಾರೆ. ಅಂತಹ ಜಾರುವಿಕೆ ಅವರನ್ನು ಸಹೃದಯಿಗಳಾಗಿ ಮಾಡುತ್ತದೆ ಎಂದು ಅವರು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಆಡಳಿತ ಮಂಡಳಿ ಉಪಾಧ್ಯಕ್ಷ ರಾಮಚಂದ್ರ ಶಿರೂರ್ಕರ್ ಶಾಲೆಯಲ್ಲಿ 9 ಮತ್ತು 10ನೆ ತರಗತಿ ಆರಂಭಿಸಲು ಅನುಮತಿ ದೊರಕಿರುವುದಕ್ಕೆ ಸಂತಸ ವ್ಯಕ್ತಪಡಿಸಿ, ಶಿಕ್ಷಕರು ಶಾಲೆಯ ಗುಣಮಟ್ಟ ಎತ್ತರಿಸುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದರು. ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೊಬೈಲ್ ಅಂಗಡಿಯ ಮಾಲಿಕನನ್ನು ಅಪಹರಿಸಿ ಅವರಿಂದ ನಗದು ಹಾಗೂ ಮೊಬೈಲ್ ಸೇರಿದಂತೆ ಸುಮಾರು 5.5 ಲಕ್ಷ ಮೌಲ್ಯದ ಸೊತ್ತುಗಳನ್ನು ಸುಲಿಗೆ ಮಾಡಿದ ಘಟನೆ ಇತ್ತಿಚಿಗೆ ನಡೆದಿದೆ. ಕುಂದಾಪುರದ ಫ್ಲ್ಯಾಟ್’ನಲ್ಲಿ ವಾಸವಿರುವ ಮುಸ್ತಾಫ್ (34) ಅಪಹರಣಕ್ಕೊಳಗಾದವರು. ಮುಕ್ತಾರ್ ಹಾಗೂ ಇತರ ಐವರು ಅಪಹರಣ ಮಾಡಿ 4 ಲಕ್ಷದ 64 ಸಾವಿರದ ನೂರ ಎಪ್ಪತ್ತೈದು ರೂಪಾಯಿ ಹಣ ಹಾಗೂ 1 ಲಕ್ಷ ಮೌಲ್ಯದ ಸೊತ್ತುಗಳು ಮತ್ತು ಅಮೂಲ್ಯ ದಾಖಲಾತಿಗಳನ್ನು ಸುಲಿಗೆ ಮಾಡಿ ಬಳಿಕ ಬಿಟ್ಟು ಕಳುಹಿಸಿರುವ ಬಗ್ಗೆ ಮೊಬೈಲ್ ಅಂಗಡಿ ಮಾಲಿಕ ಮುಸ್ತಾಫ್ ಕುಂದಾಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನೆ ವಿವರ:ಕುಂದಾಪುರದ ಚಿಕನ್ ಸಾಲ್ ರಸ್ತೆಯಲ್ಲಿ ಮೊಬೈಲ್ ಏಕ್ಸ್ ಎಂಬ ಮೊಬೈಲ್ ಅಂಗಡಿಯನ್ನು ಹೊಂದಿರುವ ಮುಸ್ತಾಪ್ ಸೆ.17 ರಂದು ರಾತ್ರಿ 9.30ಕ್ಕೆ ಅಂಗಡಿ ವ್ಯವಹಾರ ಮುಗಿಸಿ ವ್ಯವಹಾರದ ಹಣ 50 ಸಾವಿರ ನಗದು, ಆಧಾರ್ ಕಾರ್ಡ್, ಪಾನ್ ಕಾರ್ಡ್ 3-4 ಬ್ಯಾಂಕ್ಗಳ ಚೆಕ್ ಪುಸ್ತಕಗಳು ಹಾಗೂ ಇನ್ನಿತರ ಅಮೂಲ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಸೆ.22: ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದ ವತಿಯಿಂದ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ನಡೆದ ಪದವಿ/ಸ್ನಾತಕೋತ್ತರ, ಪದವಿ/ ಮೆಡಿಕಲ್ ಇಂಜಿನಿಯರಿಂಗ್ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪ.ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಬಹುಮಾನ ಹಣವನ್ನು ಮಂಜೂರು ಮಾಡುವ ಸಲುವಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ತಮ್ಮ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ, (ಉಡುಪಿ-0820-258884), ಕುಂದಾಪುರ-08254-234609), (ಕಾರ್ಕಳ-08258-232133) ಅಥವಾ ವೆಬ್ಸೈಟ್ www.tw.kar.nic.in ಅನ್ನು ಸಂಪರ್ಕಿಸುವAತೆ ಸಮಗ್ರ ಗಿರಿಜನ ಅಭಿವೃದ್ದಿ ಯೋಜನಾ ಸಮನ್ವಯಾಧಿಕಾರಿಯ ಪ್ರಕಟಣೆ ತಿಳಿಸಿದೆ.

Read More