Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಉಡುಪಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯು ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಕಾರ್ಯಕ್ರಮ(ಎನ್‌ಪಿಇಪಿ)ಅಡಿಯಲ್ಲಿ ಪ್ರೌಢಶಾಲಾ ವಿಧ್ಯಾರ್ಥಿಗಳಿಗೆ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಆನ್‌ಲೈನ್ ಜನಪದ ನೃತ್ಯ ಸ್ಪರ್ಧೆಯಲ್ಲಿ ಆಲೂರು ಪ್ರೌಢ ಶಾಲೆ ಪ್ರಥಮ ಸ್ಥಾನಗಳಿಸಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ. ವಿಜೇತ ವಿದ್ಯಾರ್ಥಿಗಳಾದ ಅಂಕಿತಾ, ಸುರಕ್ಷಾ, ಸುಜನಾ, ದೀಪಿಕಾ, ಸಿಂಚನಾ, ಸಹನಾ ಅವರು ನಗದು ಪುರಸ್ಕಾರ ಮತ್ತು ಪ್ರಶಸ್ತಿ ಪತ್ರ ಪಡೆದಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂಭಾಶಿಯ ಫ್ರೆಂಡ್ಸ್ ಕ್ರಿಕೆಟರ್ಸ್ ಆಶ್ರಯದಲ್ಲಿ ನಡೆದ 40 ಗಜಗಳ ಕ್ರಿಕೆಟ್ ಪಂದ್ಯಾಟ ‘ಕುಂಭಾಶಿ ಪ್ರೀಮಿಯರ್ ಲೀಗ್’ನ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಹಾಗೂ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಲಾಯಿತು. ಮುಖ್ಯ ಅತಿಥಿಯಾಗಿ ಸುಧೀರ್ ಶೆಟ್ಟಿ, ಅರ್ಜುನ್ ದಾಸ್, ದಯಾಶಂಕರ್, ಗಿರೀಶ್ ಗಾಣಿಗ, ಶರತ್, ಪ್ರಸನ್ನ ದೇವಾಡಿಗ ಹಾಗೂ ವಸಂತ ಭಾಗವಹಿಸಿದ್ದರು. ಪ್ರಥಮ ಸ್ಥಾನ ಪಡೆದುಕೊಂಡ ‘ರೈನಸ್ ಹೀರೋಸ್’ ಹಾಗೂ ದ್ವಿತೀಯ ಸ್ಥಾನ ಪಡೆದುಕೊಂಡ ‘ಸ್ಯಾಮ್ ಕ್ರಿಕೆಟರ್ಸ್’ ತಂಡಗಳಿಗೆ ಪ್ರಶಸ್ತಿ ಹಾಗೂ ಬಹುಮಾನ ನೀಡಲಾಯಿತು. ರೈನಸ್ ಹಿರೋಸ್ ತಂಡದ ಅಶ್ವಿನ್ ಆಚಾರ್ ಸರಣಿ ಶ್ರೇಷ್ಠ, ಸ್ಯಾಮ್ ಕ್ರಿಕೆಟರ್ಸ್ ತಂಡದ ಶಾನ್ ಉತ್ತಮ ದಾಂಡಿಗ ಹಾಗೂ ದೀಪಕ್ ಉತ್ತಮ ಎಸೆತಗಾರ ಪ್ರಶಸ್ತಿಯನ್ನು ಪಡೆದುಕೊಂಡರು‌. ಪ್ರದೀಪ್ ಆಚಾರ್ ನಿರೂಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ನೋಂದಣಿ ಆಗದ ರಿಕ್ಷಾದಲ್ಲಿ‌ ಶ್ರೀಗಂಧದ ಕೊರಡುಗಳನ್ನು ಆಕ್ರಮವಾಗಿ ದಾಸ್ತಾನು ಇರಿಸಿದ್ದ ಆರೋಪಿ ವಂಡ್ಸೆ ಗ್ರಾಮದ ಹಕ್ಲುಮನೆ ರಾಜೇಶ್ ಎಂಬುವರನ್ನು ಅರಣ್ಯಾಧಿಕಾರಿಗಳ ತಂಡ ಬಂಧಿಸಿದೆ. 3.8 ಕೆ.ಜಿ. ಶ್ರೀಗಂಧ, ರಿಕ್ಷಾ ಮುಟ್ಟುಗೋಲು ಹಾಕಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಕುಂದಾಪುರ ವಲಯ ಅರಣ್ಯಾಧಿಕಾರಿ ಪ್ರಭಾಕರ್ ಕುಲಾಲ್, ಉಪವಲಯ ಅರಣ್ಯಾಧಿಕಾರಿ ಹೇಮಾ, ಶರತ್ ಗಾಣಿಗ, ಅರಣ್ಯ ರಕ್ಷಕ ದೇವಿಪ್ರಸಾದ್, ಉದಯ್ ವಂಡ್ಸೆ ಹಾಗೂ ಚಾಲಕ ಅಶೋಕ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಡಿಸೆಂಬರ್ 22 ಮತ್ತು 27 ರಂದು ನಡೆಯುವ ಎರಡು ಹಂತದ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಯು, ಸುಗಮವಾಗಿ ಮತ್ತು ಯಾವುದೇ ಲೋಪಗಳಿಲ್ಲದೇ ನಡೆಸಲು ಚುನಾವಣಾ ಆಯೋಗ ಸೂಚಿಸಿರುವ ಮಾರ್ಗಸೂಚಿಯಂತೆ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ , ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಯ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಡಿಸೆಂಬರ್ 22 ರಂದು ನಡೆಯುವ ಮೊದಲನೇ ಹಂತದಲ್ಲಿ ಉಡುಪಿ, ಹೆಬ್ರಿ, ಬೈಂದೂರು ಮತ್ತು ಬ್ರಹ್ಮಾವರ ವ್ಯಾಪ್ತಿಯ 67 ಗ್ರಾಮ ಪಂಚಾಯತ್ ಗಳ 415 ಕ್ಷೆತ್ರಗಳಿಗೆ , ಒಟ್ಟು 553 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದ್ದು, 377308 ಮಂದಿ ಮತದಾರರ ಮತ ಚಲಾಯಿಸಲಿದ್ದಾರೆ. ಡಿಸೆಂಬರ್ 27 ರಂದು ನಡೆಯುವ ಎರಡನೇ ಹಂತದಲ್ಲಿ ಕುಂದಾಪುರ, ಕಾರ್ಕಳ ಮತ್ತು ಕಾಪು ವ್ಯಾಪ್ತಿಯ 87 ಗ್ರಾಮ ಪಂಚಾಯತ್ ಗಳ 451 ಕ್ಷೆತ್ರಗಳಿಗೆ , ಒಟ್ಟು 576 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದ್ದು, 794872…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ವ್ಯವಹಾರ ನಿರ್ವಹಣಾ ವಿಭಾಗದ ಸಂಯುಕ್ತ ಆಶ್ರಯದಲ್ಲಿ ’ಅನ್‌ಲೀಶ್ ದಿ ಬೆಸ್ಟ್ ಇನ್ ಯು’ ಎನ್ನುವ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು. ಮನೆಲ್ ಶ್ರೀನಿವಾಸ ನಾಯಕ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಮಂಗಳೂರಿನ ಸಹಾಯಕ ಪ್ರಾಧ್ಯಾಪಕ ಡಾ. ಶರಣ್ ಕುಮಾರ್ ಶೆಟ್ಟಿ ಮಾತನಾಡಿ, ಕೇಳುವ, ಮಾತನಾಡುವ, ಸಂಬಂಧವನ್ನು ಬೆಳೆಸಿಕೊಳ್ಳುವ ಅಭ್ಯಾಸದ ಮೂಲಕ ವಿದ್ಯಾರ್ಥಿಗಳು ತಮ್ಮ ಅಂತರ್ಯದಲ್ಲಿರುವ ಸಾಮರ್ಥ್ಯವನ್ನು ಹೊರತರಬಹುದೆಂದು ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮನೆಲ್ ಶ್ರೀನಿವಾಸ ನಾಯಕ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಮಂಗಳೂರಿನ ನಿರ್ದೇಶಕ ಡಾ. ಮೊಲಿ ಚೌಧರಿ, ಕಾಲೇಜಿನ ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ವಾಣಿಜ್ಯ ಉಪನ್ಯಾಸಕರಾದ ಸತೀಶ್ ಶೆಟ್ಟಿ ಮತ್ತು ಧನಶ್ರೀ ಎಮ್. ಕಿಣಿ ಅತಿಥಿಗಳನ್ನು ಪರಿಚಯಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ವೀಣಾ ಭಟ್ ಸ್ವಾಗತಿಸಿ, ವ್ಯವಹಾರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಇವರ ವತಿಯಿಂದ ಪ್ರಸ್ತುತ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿಯಿರುವ ನೇತ್ರ ತಜ್ಞರು, ತಾಲೂಕು ಆಶಾ ಮೇಲ್ವಿಚಾರಕಿ, ಶುಶ್ರೂಷಕರು, ಎಲ್‌ಎಚ್‌ವಿ, ಡೆಂಟಲ್ ಹೈಜೆನಿಸ್ಟ್, ಎಮ್.ಬಿ.ಬಿ.ಎಸ್ ವೈದ್ಯಾಧಿಕಾರಿಗಳು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು, ಕಿರಿಯ ಪುರುಷ ಆರೋಗ್ಯ ಸಹಾಯಕರ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಡಿಸೆಂಬರ್ 7 ರಂದು ಬೆಳಿಗ್ಗೆ 10.30 ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಛೇರಿ ಉಡುಪಿ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಅಭ್ಯರ್ಥಿಗಳು ಶೈಕ್ಷಣಿಕ ಮೂಲ ದಾಖಲೆಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಎರಡು ಹಂತಗಳಲ್ಲಿ ನಡೆಯುವ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸುವ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳಿಗೆ ಎಚ್ಚರದಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಗ್ರಾಮ ಪಂಚಾಯತ್ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸುವ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಮುಕ್ತ, ಪಾರದರ್ಶಕ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸಲು, ಚುನಾವಣಾ ಆಯೋಗ ಸೂಚಿಸಿರುವ ಮಾರ್ಗಸೂಚಿಗಳನ್ನು ಪಾಲಿಸುವುದರ ಜೊತೆಗೆ ಯಾವುದೇ ಸಂದರ್ಭದಲ್ಲಿಯೂ ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಅವಕಾಶ ನೀಡದೇ ಎಲ್ಲಾ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳು ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಚುನಾವಣಾ ಆಯೋಗವು ಕಾಲ ಕಾಲಕ್ಕೆ ನೀಡುವ ನಿರ್ದೇಶನಗಳನ್ನು ಪಾಲಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಎಲ್ಲಾ ಚುನಾವಣಾಧಿಕಾರಿಗಳು ತಮಗೆ ವಹಿಸಲಾದ ಗ್ರಾಮ ಪಂಚಾಯತ್‌ಗಳಲ್ಲಿ ಕಚೇರಿ ತರೆದು ಕಾರ್ಯನಿರ್ವಹಿಸಲು ಅನುಕೂಲವಾಗುವಂತೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇತಿಹಾಸ ಪ್ರಸಿದ್ಧ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಳದ ವಾರ್ಷಿಕ ಮನ್ಮಹಾ ರಥೋತ್ಸವ – ಉಪ್ಪುಂದದ ಕೊಡಿಹಬ್ಬ ಮಂಗಳವಾರ ಸಂಭ್ರಮ, ಸಡಗರದಿಂದ ಜರುಗಿತು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ದ್ವಿತೀಯ ಜಾತ್ರೆ ಉಪ್ಪುಂದ ಕೊಡಿಹಬ್ಬವಾಗಿದ್ದು, ಇಲ್ಲಿನ ಗ್ರಾಮದೇವತೆ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಧ್ವಜಾರೋಹಣದೊಂದಿಗೆ ಚಾಲನೆ ನೀಡಲಾಗಿತ್ತು. ರಥೋತ್ಸವ ದಿನ ದೇವಳ ತಂತ್ರಿಗಳ ನೇತೃತ್ವದಲ್ಲಿ ದೇವಳದಲ್ಲಿ ಪಂಚಾಮೃತ ಅಭಿಷೇಕ, ವಿಶೇಷ ಭೂತ ಬಲಿ ಸೇರಿದಂತೆ ಹಲವು ಧಾರ್ಮಿಕ ವಿಧಿವಿಧಾನ ನಡೆಯಿತು. ಬಳಿಕ ದೇವಿಗೆ ಹರಕೆ ರೂಪದಲ್ಲಿ ಬಂದ ಸೀರೆಗಳನ್ನು ಬಹಿರಂಗ ಹರಾಜು ಮಾಡಲಾಯಿತು. ಸಂಜೆ ನಡೆದ ರಥೋತ್ಸವದಲ್ಲಿ ಸಹಸ್ರಾರು ಭಕ್ತರು ರಥ ಎಳೆದು ಸಂಭ್ರಮಿಸಲಿದ್ದಾರೆ. ರಾತ್ರಿ ದೇವರ ಅವಭ್ರತಸ್ನಾನ ನಡೆಯಲಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋವಿಡ್ ನಿರ್ಬಂಧ ಹಿನ್ನೆಲೆಯಲ್ಲಿ ಎಂದಿನಂತೆ ಜನಸಂದಣಿ ಇರಲಿಲ್ಲ. ಬೆಳಿಗ್ಗೆಯಿಂದಲೇ ದೇವರಿಗೆ ಪೂಜೆ ಸಲ್ಲಿಸಿ ತೆರಳುವ ದೃಶ್ಯ ಸಾಮಾನ್ಯವಾಗಿತ್ತು. ಜಾತ್ರೆಯ ಅಂಗಡಿಗಳನ್ನು ತೆರೆದಿರಲಿಲ್ಲ. ದೇವಳಕ್ಕೆ ಆಗಮಿಸುವ ಎಲ್ಲಾ ಮಾರ್ಗಗಳಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.  ಬೈಂದೂರು: ದಕ್ಷಿಣ ಕನ್ನಡ ಜಿಲ್ಲೆಯ ಕೊಂಬಾರುವಿನ ಕುಮಾರಪುರ ಪ್ರಕಾಶನ ಬದುಕು ವಿಷಯದ ಕುರಿತಂತೆ ಆಯೋಜಿಸಿದ್ದ ನಾನು ನನ್ನ ಗೀಚು 2020- 21ರ ರಾಜ್ಯಮಟ್ಟದ ಹನಿಗವನ ಸ್ಪರ್ಧೆಯಲ್ಲಿ ಬೈಂದೂರಿನ ಗಾಯತ್ರಿ ಲಕ್ಷ್ಮಣ ದೇವಾಡಿಗ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾಧನಾ ಕಲಾ ಸಂಗಮವು ಪ್ರಾರಂಭವಾದಂದಿನಿಂದ ನಿರಂತರವಾಗಿ ನಡೆಸಿಕೊಂಡು ಬಂದಿರುವ ಬಹುಮುಖ್ಯ ಚಟುವಟಿಕೆಯಲ್ಲಿ ಒಂದಾದ ಗಜವರ್ಣ ಗಣಪತಿ ಚಿತ್ರ ಬಿಡಿಸುವ ಸ್ಪರ್ಧೆ. ಇದು ಪ್ರತಿ ವರ್ಷ ಗಣೇಶ ಚೌತಿಯ ಸಂದರ್ಭದಲ್ಲಿ ನಡೆಯುವಂತಹ ಸ್ಪರ್ಧೆಯಾಗಿತ್ತು. ಆದರೆ ಈ ವರ್ಷ ಕೊರೋನಾ ಸಾಂಕ್ರಾಮಿಕದ ಕಾರಣ ಈ ಸ್ಪರ್ಧೆಯನ್ನು ನಡೆಸಲಾಗಲಿಲ್ಲ. ಈಗ ನಾವು ಮಹಾಚೌತಿಯ ಅಂದರೆ ಆನೆಗುಡ್ಡೆ ರಥೋತ್ಸವದ ಸಂದರ್ಭದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದಿನಂತೆ ಈ ಸ್ಪರ್ಧೆ ಗಜವರ್ಣ 2020 ಕುಂದಾಪುರ/ಬೈಂದೂರು ತಾಲೂಕು ಮಟ್ಟದ ವಿದ್ಯಾರ್ಥಿಗಳಿಗೆ ಹಾಗೂ ಸಾಮಾನ್ಯ ಜನತೆಗೂ. LKG ಯಿಂದ ಹತ್ತನೆ ತರಗತಿಯ ವಿದ್ಯಾರ್ಥಿಗಳು ಹಾಗೂ ಜನಸಾಮಾನ್ಯರಿಗೂ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಈ ಸ್ಪರ್ಧೆಯು 5 ವಿಭಾಗಗಳಲ್ಲಿ ನಡೆಯುತ್ತದೆ. ಆದರೆ ಈ ಬಾರಿ ಗಣಪತಿ ಚಿತ್ರ ರಚನೆಯನ್ನು ನಿಮ್ಮ ಮನೆಯಲ್ಲಿ ರಚಿಸಿ ತಲುಪಿಬೇಕು. ನಿಯಮಗಳು : ಸ್ಪರ್ಧಾಳುಗಳು  21cmx14.50cm ಅಳತೆಯ ಡ್ರಾಯಿಂಗ್ ಹಾಳೆಯಲ್ಲಿ ಗಣಪತಿಯ ಚಿತ್ರವನ್ನು ನಿಮ್ಮ ಮನೆಯಲ್ಲೇ ರಚಿಸಬೇಕು. ಚಿತ್ರದ ಹಿಂಬಾಗದಲ್ಲಿ ಸ್ಪರ್ಧಿಯ ಹೆಸರು ಹಾಗೂ…

Read More