Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜು.28ರ ಮಂಗಳವಾರ 109 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. 422 ನೆಗೆಟಿವ್: ಈ ತನಕ ಒಟ್ಟು 29,436 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 25,043 ನೆಗೆಟಿವ್, 3,722 ಪಾಸಿಟಿವ್ ಬಂದಿದ್ದು, 671 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 422 ನೆಗೆಟಿವ್, 109 ಪಾಸಿಟಿವ್ ಬಂದಿದೆ. ಒಟ್ಟು 1,490 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ. 1,461 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು 3,388 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 2,239 ಮಂದಿ ಬಿಡುಗಡೆಯಾಗಿದ್ದು, 1,461 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಕೊರೋನಾ ಪಾಸಿಟಿವ್ ಇದ್ದ 22 ಮಂದಿ ಮೃತಪಟ್ಟಿದ್ದಾರೆ. ಇನ್ನಷ್ಟು ಮಾಹಿತಿಗೆ ಕೆಲವು ಸಮಯದ ನಂತರ ಇದೇ ಲಿಂಕ್ ನೋಡಿ ಇದನ್ನೂ ಓದಿ: ► ಬೈಂದೂರು: ಮೂರು ರಾಷ್ಟ್ರೀಕೃತ ಬ್ಯಾಂಕುಗಳು ಸೀಲ್ ಡೌನ್ – https://kundapraa.com/?p=39929 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: 2020-21ನೇ ಸಾಲಿಗೆ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳ ಪ್ರವರ್ಗ-(1)ರ ಕೋಲಿ, ಗಂಗಾಮತ, ಬೆಸ್ತ, ಕಬ್ಬಲಿಗ, ಮೊಗವೀರ, ಅಂಬಿಗ/ಅಂಬಿ, ಬರ್ಕಿ/ಬಾರಿಕ, ಬೆಸ್ತರ್, ಭೋಯಿ, ರಾಜಬೋಯಿ, ಬುಂಡೆ-ಬೆಸ್ತರ್, ದಾಲ್ಚಿ, ದಾವತ್, ಗಬಿಟ್, ಗಲಾಡಕೊಂಕಣಿ, ಗಂಗೆಮಕ್ಕಳು, ಗಂಗಾಕುಲ, ಗಂಗಾಮತಸ್ಥ, ಗಂಗಾಪುತ್ರ, ಗೌರಿಮತ, ಬುಂಡೆಬೆಸ್ತ/ಗುAಡೆಬೆಸ್ತ, ಹರಿಕಂತ್ರ, ಜಲಗಾರ, ಕಬ್ಬೇರ/ಕಬ್ಬೇರ್, ಕಬ್ಬಿಲಿ, ಕಹರ್, ಖಾರ್ವಿ/ಕೊಂಕಣಿಖಾರ್ವಿ, ಕೋಳಿಮಹದೇವ್, ಮಡ್ಡರ್,ಮೀನಗಾರ್, ಮಗೇರ್, ಮುಕ್ಕವಾನ್, ಪರಿವಾರ, ಸಿವಿಯರ್, ಸುಣಗಾರ್, ಸುಣಗಾರ, ತೊರೆಯ ಜಾತಿಗೆ ಸೇರಿದವರಾಗಿರಬೇಕು. ಸರ್ಕಾರದ/ಯಾವುದಾದರೂ ನಿಗಮಗಳ ಯಾವುದಾದರೂ ಯೋಜನೆಯಡಿಯಲ್ಲಿ ಕುಟುಂಬದ ಯಾರೇ ಆಗಲಿ ಈಗಾಗಲೇ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಒಂದು ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚಿನವರಿಗೆ ಸೌಲಭ್ಯ ಒದಗಿಸಲಾಗುವುದಿಲ್ಲ. ನಿಗಮದ ಯೋಜನೆಗಳ ವಿವರ: 1. ಬ್ಯಾಂಕ್ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, 2. ಸ್ವಯಂ ಉದ್ಯೋಗ ಸಾಲ ಯೋಜನೆ, 3. ಸ್ವಸಹಾಯ ಗುಂಪುಗಳ ಮೂಲಕ ಸಾಲ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ(ನಿ)ದಿಂದ ಮಡಿವಾಳ ಸಮುದಾಯಕ್ಕೆ ಸೇರಿದ (ಅಗಸ, ಚಕಲ, ಧೋಬಿ, ಮಡಿವಾಳ, ಮನ್ನನ್, ಪರಿತ್, ರಾಜಕ, ಸಕಲ, ವನ್ನನ್, ವೆಲ್ಲುತೇಡನ್, ಸಾಕಲವಾಡು) ಜನರ ಆರ್ಥಿಕ ಅಭಿವೃದ್ಧಿಗಾಗಿ 1.ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ 2.ಸ್ವಯಂ ಉದ್ಯೋಗ ಸಾಲ ಯೋಜನೆ 3.ಸ್ವಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ 4. ಅರಿವು ಶೈಕ್ಷಣಿಕ ಸಾಲ ಯೋಜನೆ ಮತ್ತು 5.ಗಂಗಾಕಲ್ಯಾಣ ನೀರಾವರಿ ಯೋಜನೆಗಳಲ್ಲಿ ಸಹಾಯಧನ ಹಾಗೂ ಸಾಲ ಸೌಲಭ್ಯ ಒದಗಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಇಚ್ಚಿಸುವವರು ಉಚಿತವಾಗಿ ಅರ್ಜಿ ನಮೂನೆಯನ್ನು ಜಿಲ್ಲಾ ಕಛೇರಿಯಲ್ಲಿ ಅಥವಾ ನಿಗಮದ ವೆಬ್ಸೈಟ್ www.dbcdc.karnataka.gov.in ನಲ್ಲಿ ಅರ್ಜಿಯೊಂದಿಗೆ ಜಾತಿ ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಫೋಟೋ ಮತ್ತು ಇತರೆ ದಾಖಾಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಅಥವಾ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇದ್ದಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ದಾಖಾಲಾತಿಗಳೊಂದಿಗೆ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಿಥಿಲವಾಗಿದ್ದ ಮರವಂತೆ ಇಲಾಖೇತರ ಉಪ ಅಂಚೆ ಕಚೇರಿ ಕಟ್ಟಡವನ್ನು ಗ್ರಾಮ ಪಂಚಾಯಿತಿ ಮತ್ತು ಸಾರ್ವಜನಿಕರ ನೆರವಿನೊಂದಿಗೆ ರೂ 69,000 ವೆಚ್ಚದಲ್ಲಿ ಹಿಂದೆ ಪೋಸ್ಟ್‌ಮಾಸ್ಟರ್ ಆಗಿದ್ದ ಎಂ. ವಾಸುದೇವ ಭಟ್ ಸ್ಮರಣೆಯಲ್ಲಿ ನವೀಕರಿಸಿದ್ದು, ಅದನ್ನು ಅವರ ಪುತ್ರ ಎಂ. ನಾಗೇಂದ್ರ ಭಟ್ ಬುಧವಾರ ಉದ್ಘಾಟಿಸಿದರು. ಕಚೇರಿಯ ಕೀಲಿಕೈಯನ್ನು ಪೋಸ್ಟ್ ಮಾಸ್ಟರ್ ಮಂದಾಕಿನಿ ಅವರಿಗೆ ಹಸ್ತಾಂತರಿಸಿದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್. ಜನಾರ್ದನ ಅಂಚೆ ಕಚೇರಿ ಊರಿನ ಕೇಂದ್ರ ಸ್ಥಾನದಲ್ಲಿ ಇರಬೇಕೆಂಬ ಕಾರಣಕ್ಕೆ ಹಿಂದೆ ಗ್ರಾಮ ಪಂಚಾಯಿತಿ ತನ್ನ ಕೊಠಡಿಯನ್ನು ಉಚಿತವಾಗಿ ನೀಡಿತ್ತು. ಮುಂದೆಯೂ ಗ್ರಾಮ ಪಂಚಾಯಿತಿ ಅದನ್ನು ಸಾರ್ವಜನಿಕ ಸೇವೆ ಎಂದು ಪರಿಗಣಿಸಿ ಯಾವುದೇ ಬಾಡಿಗೆ ಪಡೆಯದೆ ಬಳಸಲು ಅವಕಾಶ ನೀಡಬೇಕು ಎಂದು ಆಶಿಸಿದರು. ನವೀಕರಣದ ನೇತೃತ್ವ ವಹಿಸಿದ್ದ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಗಣೇಶ ಪೂಜಾರಿ ಸ್ವಾಗತಿಸಿದರು. ಕರಸಂಗ್ರಾಹಕ ಶೇಖರ ಮರವಂತೆ ವಂದಸಿದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಿಯಾಜ್ ಅಹಮದ್, ಕಾರ್ಯದರ್ಶಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜು.27ರ ಸೋಮವಾರ 225 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. 286 ನೆಗೆಟಿವ್: ಈ ತನಕ ಒಟ್ಟು 28,510 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 24,621 ನೆಗೆಟಿವ್, 3,613 ಪಾಸಿಟಿವ್ ಬಂದಿದ್ದು, 276 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 286 ನೆಗೆಟಿವ್, 225 ಪಾಸಿಟಿವ್ ಬಂದಿದೆ. ಒಟ್ಟು 1,7525 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ. 1.415 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು 3,388 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 2,184 ಮಂದಿ ಬಿಡುಗಡೆಯಾಗಿದ್ದು, 1,415 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಕೊರೋನಾ ಪಾಸಿಟಿವ್ ಇದ್ದ 14 ಮಂದಿ ಮೃತಪಟ್ಟಿದ್ದಾರೆ. ಇನ್ನಷ್ಟು ಮಾಹಿತಿಗೆ ಕೆಲವು ಸಮಯದ ನಂತರ ಇದೇ ಲಿಂಕ್ ನೋಡಿ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜು.26ರ ಭಾನುವಾರ 169 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 31, ಉಡುಪಿ ತಾಲೂಕಿನ 86 ಹಾಗೂ ಕಾರ್ಕಳ ತಾಲೂಕಿನ 52 ಮಂದಿಗೆ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ 106 ಪುರುಷರು, 63 ಮಹಿಳೆಯರು ಸೇರಿದ್ದಾರೆ.ಇಂದು 125 ಮಂದಿ ಬಿಡುಗಡೆಗೊಂಡಿದ್ದಾರೆ. ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ. 493 ನೆಗೆಟಿವ್: ಈ ತನಕ ಒಟ್ಟು 28,287 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 24,335 ನೆಗೆಟಿವ್, 3,388 ಪಾಸಿಟಿವ್ ಬಂದಿದ್ದು, 564 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 493 ನೆಗೆಟಿವ್, 182 ಪಾಸಿಟಿವ್ ಬಂದಿದೆ. ಒಟ್ಟು 1,701 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ. 1241 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು 3,388 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 2,134 ಮಂದಿ ಬಿಡುಗಡೆಯಾಗಿದ್ದು, 1,241 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಒಂದು ಪ್ರದೇಶದ ಅಭಿವೃದ್ಧಿ ಆಗಬೇಕಾದರೆ ಅಲ್ಲಿ ಉತ್ತಮ ಸಂಪರ್ಕ, ಸಾರಿಗೆ ಸೌಲಭ್ಯ ಇರಬೇಕು. ಇದನ್ನು ಗಮನದಲ್ಲಿ ಇರಿಸಿಕೊಂಡು ಗ್ರಾಮೀಣ ಪ್ರದೇಶಗಳಿಂದ ಕೂಡಿರುವ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಗುಣಮಟ್ಟದ ರಸ್ತೆಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ ಎಂದು ಶಾಶಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು. ಹೇರೂರು ಗ್ರಾಮದ ನಾಲ್ಕು ರಸ್ತೆಯಿಂದ ಕಾಲ್ತೋಡು ಗ್ರಾಮದ ಜೋಡುಗುಪ್ಪೆ ವರೆಗಿನ ರಸ್ತೆಯನ್ನು ಡಾಂಬರೀಕರಣದ ಮೂಲಕ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶನಿವಾರ ಚಾಲನೆ ನೀಡಿ ಮಾತನಾಡಿದರು. ದೇವಾಲಯದ ಅರ್ಚಕ ಎಂ. ಕೃಷ್ಣ ಭಟ್ ಕಾಮಗಾರಿಯ ಭೂಮಿಪೂಜೆ ನೆರವೇರಿಸಿದರು. ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ನಮ್ಮ ಗ್ರಾಮ ನಮ್ಮ ರಸ್ತೆ ಅಡಿಯಲ್ಲಿ ೫ ಕಿಮೀ ಉದ್ದದ ಈ ರಸ್ತೆಯನ್ನು ರೂ ೧.೬೩ ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಇದರಿಂದ ಹೇರೂರು ಗ್ರಾಮದ ಹಲವು ಜನವಸತಿ ಪ್ರದೇಶಗಳಿಗೆ ಮತ್ತು ಹೇರೂರಿನಿಂದ ಕಾಲ್ತೋಡಿಗೆ ಸರ್ವಋತು ಸಂಪರ್ಕ ಸೌಲಭ್ಯ ಲಭಿಸುತ್ತದೆ ಎಂದು ಅವರು ಹೇಳಿದರು. ಗ್ರಾಮ ಪಂಚಾಯಿತಿ ಮಾಜಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜು.25ರ ಶನಿವಾರ 182 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 37, ಉಡುಪಿ ತಾಲೂಕಿನ 96 ಹಾಗೂ ಕಾರ್ಕಳ ತಾಲೂಕಿನ 49 ಮಂದಿಗೆ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ 109 ಪುರುಷರು, 68 ಮಹಿಳೆಯರು, 5 ಮಕ್ಕಳು ಸೇರಿದ್ದಾರೆ. ಇಂದು 79 ಮಂದಿ ಬಿಡುಗಡೆಗೊಂಡಿದ್ದಾರೆ. 493 ನೆಗೆಟಿವ್: ಈ ತನಕ ಒಟ್ಟು 27,375 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 23,629 ನೆಗೆಟಿವ್, 3,218 ಪಾಸಿಟಿವ್ ಬಂದಿದ್ದು, 528 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 493 ನೆಗೆಟಿವ್, 182 ಪಾಸಿಟಿವ್ ಬಂದಿದೆ. ಒಟ್ಟು 1,611 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ. 1197 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು 3,218 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 2,008 ಮಂದಿ ಬಿಡುಗಡೆಯಾಗಿದ್ದು, 1,197 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಅಧಿಕಾರಿ ಉಡುಪಿ, ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಉಡುಪಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿ ಇವರ ಆಶ್ರಯದಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಇವರ ಸಹಯೋಗದೊಂದಿಗೆ ಮಲೇರಿಯಾ ಮಾಸಾಚರಣೆ ಕಾರ್ಯಕ್ರಮ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುರುವಾರ ಜರಗಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಂಜಿತ್ ಜಿ., ಪರಿಸರದಲ್ಲಿ ಸ್ವಚ್ಛತೆ, ನೈರ್ಮಲ್ಯ ಕಾಪಾಡಿಕೊಳ್ಳುವುದರಿಂದ ಅನೇಕ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬಹುದು. ಮನೆ ವಠಾರ ಹಾಗೂ ಪರಿಸರದಲ್ಲಿ ನೀರು ನಿಲ್ಲದಂತೆ ಕ್ರಮಕೈಗೊಳ್ಳಬೇಕು. ಕರೋನಾ ವೈರಸ್ ಹರಡುತ್ತಿರುವ ಈ ದಿನಗಳಲ್ಲಿ ಎಲ್ಲರೂ ಸ್ವಚ್ಛತೆಗೆ ಹೆಚ್ಚಿನ ಗಮನ ನೀಡಬೇಕು ಎಂದು ಹೇಳಿದರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಬಿ.ಲಕ್ಷ್ಮೀಕಾಂತ ಮಡಿವಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಲೇರಿಯಾ ರೋಗದ ಬಗ್ಗೆ ಮಾಹಿತಿಯುಳ್ಳ ಕರಪತ್ರವನ್ನು ಗಂಗೊಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ ಬಿಡುಗಡೆಗೊಳಿಸಿದರು. ಉದ್ಯಮಿ ರಾಜೇಶ ಎಂ.ಜಿ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್‌ಗೆ ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಪ್ರೀತಿ ಗೆಹ್ಲೋಟ್ ಅವರು ಭೇಟಿ ನೀಡಿದರು. ಕಾರಂತರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ರಂಗ ಮಂದಿರ ಆರ್ಟ್ ಗ್ಯಾಲರಿ, ಗ್ರಂಥಾಲಯ ವೀಕ್ಷಿಸಿದರು. ಥೀಮ್ ಪಾರ್ಕ್‌ನಲ್ಲಿನ ವ್ಯವಸ್ಥೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಗ್ರಂಥಾಲಯವನ್ನು ಮುಂದಿನ ದಿನಗಳಲ್ಲಿ ಪೂರ್ಣ ಪ್ರಮಾಣದ ಈ-ಗ್ರಂಥಾಲಯ ಮಾಡುವ ಬಗ್ಗೆ ಸಹಕಾರ ನೀಡುವುದಾಗಿ ಈ ಸಂದರ್ಭದಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ಕಾರಂತ ಥೀಮ್ ಪಾರ್ಕ್ ವಿಶೇಷ ಕರ್ತವ್ಯಾಧಿಕಾರಿ ಶ್ರೀಮತಿ ಪೂರ್ಣಿಮಾ, ಕೋಟತಟ್ಟು ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಡಾ| ಅರುಣ್ ಕುಮಾರ್ ಶೆಟ್ಟಿ, ಪಿ.ಡಿ.ಓ ಶ್ರೀಮತಿ ಶೈಲಾ ಎಸ್ ಪೂಜಾರಿ, ಕಾರಂತ ಪ್ರತಿಷ್ಠಾನ ಟ್ರಸ್ಟಿ ಸುಬ್ರಾಯ್ ಆಚಾರ್ಯ, ಕೋಟ ಕಂದಾಯ ನಿರೀಕ್ಷಕ ಶ್ರೀ ರಾಜು, ವಿ.ಎ ಚೆಲುವರಾಜು, ಕಾರಂತ ಥೀಮ್ ಪಾರ್ಕ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Read More