Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜು.22: ಎಸ್‌ಎಸ್‌ಎಲ್‌ಸಿ ಎರಡನೇ ದಿನದ ಪರೀಕ್ಷೆಯನ್ನು ಕುಂದಾಪುರ ಹಾಗೂ ಬೈಂದೂರು ತಾಲೂಕು ಸೇರಿದಂತೆ ಉಡುಪಿ ಜಿಲ್ಲಾದ್ಯಂತ ವಿದ್ಯಾರ್ಥಿಗಳು ನಿರ್ಭಯವಾಗಿ ಬರೆದಿದ್ದಾರೆ. ಈ ನಡುವೆ ತುಂಬಿ ಹರಿಯುತ್ತಿದ್ದರಿಂದ ಸೌಪರ್ಣಿಕಾ ನದಿಯ ನಡುವಿನ ಕುರು ದ್ವೀಪದಲ್ಲಿ ಪರೀಕ್ಷೆ ಬರೆಯಲಾಗದ ಆತಂಕದಲ್ಲಿದ್ದ ವಿದ್ಯಾರ್ಥಿಗಳನ್ನು ಸ್ವಯಃ ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮೀ ಹೆಚ್. ಎಸ್ ಹಾಗೂ ಉಡುಪಿ ಡಿ.ಎಚ್.ಓ ಎನ್. ಎಚ್ ನಾಗೂರು ದೋಣಿಯಲ್ಲಿ ಕರೆತಂದ ಪ್ರಸಂಗ ನಡೆದಿದೆ. ಸೌಪರ್ಣಿಕ ನದಿಯ ನಡುವಿನ ಕುರು ದ್ವೀಪದ ನಿವಾಸಿಗಳು ದೋಣಿಯನ್ನೇ ನಂಬಿ ಬದುಕು ಸವೆಸುತ್ತಿದ್ದಾರೆ. ಮಳೆಯಿಂದಾಗಿ ನೀರಿನ ಹರಿವು ಹೆಚ್ಚಿದ್ದರಿಂದ ದ್ವೀಪದ ನಿವಾಸಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಾದ ಶಿಲ್ಪಾ ಹಾಗೂ ಸಂಜನಾ ಆತಂಕದಲ್ಲಿದ್ದರು. ಪರೀಕ್ಷಾ ಸಂಯೋಜಕರ ಮೂಲಕ ವಿಷಯ ತಿಳಿದ ಶಿಕ್ಷಣಾಧಿಕಾರಿಗಳು ಹಾಗೂ ತಹಶೀಲ್ದಾರ್ ವಿದ್ಯಾರ್ಥಿಗಳ ಮನೆಗೆ ತೆರಳಿ ದೋಣಿಯಲ್ಲಿ ಅವರನ್ನು ಕರೆತಂದಿದ್ದು, ಬಳಿಕ ಡಿಡಿಪಿಐ ಅವರ ವಾಹನದಲ್ಲಿ ನಾವುಂದ ಪರೀಕ್ಷಾ ಕೇಂದ್ರಕ್ಕೆ ಕರೆದೊಯ್ದಿದ್ದು ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಈ ಸಂದರ್ಭ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಮುಂದಿನಮನಿ,…

Read More

ಮಳೆಗಾಲ ಶುರುವಾಗಿದೆ. ಜೋರಾಗಿ ಸುರಿಯುವ ಮಳೆ ಖುಷಿ, ಸಂತೋಷ, ಆತಂಕವನ್ನು ತರುವುದರ ಜೊತೆಗೆ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೂ ಆಹ್ವಾನ ನೀಡುತ್ತದೆ. ಕೊರೊನಾದಂತಹ ಸಾಂಕ್ರಾಮಿಕದ ನಡುವೆ ಈ ಮಳೆಗಾಲದ ರೋಗಗಳು ನಮ್ಮನ್ನ ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸುತ್ತವೆ. ಆದ್ದರಿಂದ ಇಂತಹ ರೋಗಗಳಿಂದ ಮಳೆಗಾಲದಲ್ಲಿ ನಮ್ಮ ಸುರಕ್ಷತೆಯ ಬಗ್ಗೆಯೂ ಕಾಳಜಿ ವಹಿಸಬೇಕು. ಸೊಳ್ಳೆಯಿಂದ ಹರಡುವ ರೋಗಗಳು:ಮಳೆಗಾಲ ಸೊಳ್ಳೆಗಳ ಸಂತಾನೋತ್ಪತ್ತಿ ಕಾಲ. ಆದ್ದರಿಂದ ಈ ಕಾಲದಲ್ಲಿ ಹಲವಾರು ರೋಗಗಳಿಗೆ ಕಾರಣವಾಗಬಹುದು. ಮಲೇರಿಯಾ: ಮಲೇರಿಯಾವು ಪ್ಲಾಸ್ಮೋಡಿಯಮ್ ಎಂಬ ಏಕಕೋಶೀಯ ಪರಾವಲಂಬಿಯಿಂದ ಬರುವುದು. ಇದು ಮಳೆಗಾಲದಲ್ಲಿ ಕಂಡುಬರುವ ಆರೋಗ್ಯದ ಪ್ರಮುಖ ಸಮಸ್ಯೆಗಳಲ್ಲಿ ಒಂದಾಗಿದೆ. ನೀರಿನ ಕಾಲುವೆಗಳು ಮತ್ತು ತೊರೆಗಳಲ್ಲಿ ಸೊಳ್ಳೆಗಳ ಉತ್ಪತ್ತಿಯಿಂದ ಉಂಟಾಗುತ್ತಿದ್ದು, ಹಲವಾರು ದಿನಗಳವರೆಗೆ ಜ್ವರ ಬರುತ್ತದೆ. ಡೆಂಗ್ಯೂ: ಡೆಂಗ್ಯೂವು ಈಡಿಸ್ ಈಜಿಪ್ಟಿ ಸೊಳ್ಳೆಯಿಂದ ಉಂಟಾಗುತ್ತದೆ. ಇದು ನಿಂತ ಅಥವಾ ಶೇಖರಣೆಯಾದ ನೀರಿನಲ್ಲಿ (ಬಕೆಟ್, ಡ್ರಮ್ಸ್, ಬಾವಿಗಳು, ಮರದ ರಂಧ್ರಗಳು ಮತ್ತು ಹೂವಿನ ಮಡಿಕೆಗಳು) ಸಂತಾನೋತ್ಪತ್ತಿ ಮಾಡುತ್ತದೆ. ಕಚ್ಚಿದ ನಾಲ್ಕರಿಂದ ಏಳು ದಿನಗಳ ನಂತರ ಡೆಂಗ್ಯೂ ಬರಲಿದ್ದು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸರಕಾರದ ಅಕ್ಷರ ದಾಸೋಹ – ಬಿಸಿಯೂಟ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಲಾಗುವ ಅಡುಗೆ ಎಣ್ಣೆ ದಿನಸಿ ಅಂಗಡಿಗಳಲ್ಲಿ ಮಾರಾಟ ಮಾಡಿರುವ ಬಗ್ಗೆ ಆರೋಪ ಕೇಳಿಬಂದಿದೆ. ಕೋವಿಡ್-19 ಸಂದರ್ಭ ಸರಕಾರ ವಿದ್ಯಾರ್ಥಿಗಳಿಗೆ ವಿತರಿಸಲು ಸರಬರಾಜು ಮಾಡಿದ್ದ ಅಡುಗೆ ಎಣ್ಣೆ, ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ತಗ್ಗರ್ಸೆಯ ಅಂಗಡಿಯೊಂದರಲ್ಲಿ ಪತ್ತೆಯಾಗಿರುವುದು ಸಂಶಯಗಳಿಗೆ ಎಡೆಮಾಡಿಕೊಟ್ಟಿತ್ತು. ಗ್ರಾಹಕರೋರ್ವರು ಎಣ್ಣೆ ಪ್ಯಾಕೇಟ್ ಪರಿಶೀಲಿಸಿದಾಗ ಈ ಅಂಶ ಬೆಳಕಿಗೆ ಬಂದಿದೆ. ಬಿಸಿಯೂಟ ಯೋಜನೆಯ ಎಣ್ಣೆ ಅಂಗಡಿಗಳಲ್ಲಿ ಮಾರಾಟಕ್ಕೆ ಬಂದಿದ್ದು ಹೇಗೆ ಎಂಬುದು ತನಿಕೆಯಿಂದ ತಿಳಿದುಬರಬೇಕಿದೆ. ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮೀ ಹೆಚ್. ಅವರು ಸ್ಥಳಕ್ಕೆ ಭೇಟಿ ನೀಡಿ ತನಿಕೆ ನಡೆಸಿದ್ದಾರೆ /ಕುಂದಾಪ್ರ ಡಾಟ್ ಕಾಂ ಸುದ್ದಿ/ ಸರಕಾರದ ಉಚಿತ ಅಡುಗೆ ಎಣ್ಣೆ ವಿಕ್ರಯವಾಗುತ್ತಿರುವ ಬಗ್ಗೆ ದೂರ ಬಂದ ತಕ್ಷಣ, ತಗ್ಗರ್ಸೆಯ ಅಂಗಡಿ ಹಾಗೂ ಸಮೀಪದ ಎರಡು ಸರಕಾರಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಲಾಗಿರುವ ಪಟ್ಟಿ ಹಾಗೂ ಬಾಕಿ ಇರುವ ಸ್ಟಾಕ್ ಚೆಕ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಇದರ ಆಶ್ರಯದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಬೈಂದೂರು ತಾಲೂಕಿನ ಜ್ಞಾನ ವಿಕಾಸ ಕೇಂದ್ರದ ಸೇವಾ ಪ್ರತಿನಿಧಿ ಮತ್ತು ಸಂಯೋಜಕಿಯರ ಸಭೆ ತ್ರಾಸಿಯಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೈಂದೂರು ತಾಲೂಕು ಯೋಜನಾ ಕಛೇರಿಯಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಯೋಜನೆಯ ಹಿರಿಯ ಜಿಲ್ಲಾ ನಿರ್ದೇಶಕ ಗಣೇಶ್ ಬಿ., ಜ್ಞಾನವಿಕಾಸ ಕಾರ್ಯಕ್ರಮದ ಮಹತ್ವ, ಕಾರ್ಯಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಜ್ಞಾನವಿಕಾಸ ಕಾರ್ಯಕ್ರಮದ ಅನುಷ್ಠಾನ ಹಾಗೂ ಈ ವರ್ಷದ ಕಾರ್ಯಕ್ರಮನ್ನು ಉತ್ತಮವಾಗಿ ಪರಿಣಾಮಕಾರಿಯಾಗಿ ಮಾಡುವ ಬಗ್ಗೆ ಮಾಹಿತಿ ನೀಡಿದರು. ತಾಲೂಕಿನ ಯೋಜನಾಧಿಕಾರಿ ಶಶಿರೇಖಾ ಪಿ ಅವರು ಕೇಂದ್ರದ ಸದಸ್ಯರಲ್ಲಿ ಹೆಚ್ಚಿನ ಆಸಕ್ತಿ ಬರುವ ಕಾರ್ಯಕ್ರಮ ಹಮ್ಮಿಕ್ಕೊಳ್ಳುವ ಬಗ್ಗೆ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಕೇಂದ್ರದಲ್ಲಿ ಮಾಹಿತಿ ಹಮ್ಮಿಕೊಳ್ಳುವಂತೆ ತಿಳಿಸಿದರು. ಆಂತರಿಕ ಲೆಕ್ಕ ಪರಿಶೋಧಕ ರಾಘವೇಂದ್ರ ಕೇಂದ್ರದಲ್ಲಿ ನಿರ್ವಹಿಸಬೇಕಾದ ದಾಖಲಾತಿಗಳ ಬಗ್ಗೆ ಕೇಂದ್ರದ ಶ್ರೇಣಿಕರಣ ಹಾಗೂ ಗ್ರಂಥಾಲಯ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು. ಕೇಂದ್ರದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಾದ್ಯಂತ ಜುಲೈ 26ರಿಂದ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಿ, ಈ ಕಾರ್ಯಕ್ರಮದಲ್ಲಿ ರೈತರಿಗೆ ಕೃಷಿ ಮತ್ತು ತೋಟಗಾರಿಕಾ ಇಲಾಖೆಯಿಂದ ದೊರೆಯುವ ವಿವಿಧ ಸೌಲಭ್ಯಗಳ ಕುರಿತು ಸಮಗ್ರ ಮಾಹಿತಿಯನ್ನು ನೀಡುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು. ಅವರು ನಗರದ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ 2021-22 ನೇ ಸಾಲಿನ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮದ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಗ್ರ ಕೃಷಿ ಅಭಿಯಾನವನ್ನು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಜುಲೈ 26 ರಿಂದ ಆಗಸ್ಟ್ 7 ರವರೆಗೆ ಏರ್ಪಡಿಸಿ, ಕೃಷಿ ಮತ್ತು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಹಾಗೂ ಕೃಷಿ ವಿಜ್ಞಾನಿಗಳ ತಂಡ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿ , ಸಮಗ್ರ ಕೃಷಿ ಅಭಿವೃಧ್ದಿ ಕುರಿತು ರೈತರಿಗೆ ವಿವರವಾದ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಕೃಷಿಕರನ್ನು ಸ್ವಾವಲಂಬಿಗಳಾಗಿ,ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸದೃಢಗೊಳಿಸಲು ಪ್ರಸುತ್ತ ಸಾಲಿನಲ್ಲಿ , ಕೇಂದ್ರ ಸರಕಾರವು ಕೃಷಿ ಯೋಜನೆಗಳಿಗೆ ಹೆಚ್ಚು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ : ಉಡುಪಿ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ, ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ ಮತ್ತು ಗ್ರಾಮ ಪಂಚಾಯತ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಆಯೋಜಿಸಲಾಗಿದ್ದ ಉಚಿತ ಯೋಗ ಶಿಬಿರವನ್ನು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಮಿತಾ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಯೋಗದಿಂದ ನಮ್ಮ ಜೀವನದಲ್ಲಿ ಬಹಳಷ್ಟು ಪ್ರಯೋಜನ ಪಡೆದುಕೊಳ್ಳಬಹದು. ದೈಹಿಕ ಹಾಗೂ ಮಾನಸಿಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ದೇಹದಲ್ಲಿ ರೋಗ ನಿರೋಧಕ ಶಕ್ತಿಯ ವರ್ಧನೆಗೆ ಯೋಗ ಸಹಕಾರಿಯಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಯೋಗಾಭ್ಯಾಸವನ್ನು ಜೀವನದಲ್ಲಿ ಅಳವಡಿಸಿಕೊಂಡು, ಪ್ರತಿನಿತ್ಯ ಸ್ವಲ್ಪ ಸಮಯವನ್ನಾದರೂ ಯೋಗಾಭ್ಯಾಸಕ್ಕೆ ಮೀಸಲಿಡಬೇಕು ಎಂದರು. ಗಂಗೊಳ್ಳಿ ಗ್ರಾಪಂ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಸದಸ್ಯರಾದ ನಾಗರಾಜ ಖಾರ್ವಿ ಗುಡ್ಡೆಕೇರಿ, ಶಾಂತಿ ಖಾರ್ವಿ, ಶ್ರೀ ಶಾರದೋತ್ಸವ ಸಮಿತಿ ಕಾರ್ಯದರ್ಶಿ ಗೋಪಾಲ ಖಾರ್ವಿ ದಾವನಮನೆ, ಯೋಗ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಕಾರಂತರು ತಮ್ಮ ಸಾಹಿತ್ಯ ಭಂಡಾರದಲ್ಲಿ ಹಾಗೂ ತಮ್ಮ ಜೀವಿತ ಅವಧಿಯಲ್ಲಿ ಬಾಳಿ ಬದುಕಿದ ರೀತಿ ನಮಗೆಲ್ಲ ದಾರಿದೀಪವಾಗಿದ್ದು, ಅವರು ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ ಕಣ್ಮಣಿ ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರವೀಂದ್ರ ಎಮ್ ಜೋಷಿ ಅವರು ಹೇಳಿದರು. ಅವರು ಕೋಟದ ಡಾ ಶಿವರಾಮ ಕಾರಂತ ಥೀಮ್ ಪಾರ್ಕ್‌ಗೆ ಭೇಟಿ ನೀಡಿ ಕಾರಂತರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ರಂಗಮಂದಿರ, ಗ್ರಂಥಾಲಯ, ಆರ್ಟ್ ಗ್ಯಾಲರಿ, ಮಿನಿ ಸಭಾಂಗಣ, ವೀಕ್ಷಿಸಿದರು. ಥೀಮ್ ಪಾರ್ಕ್‌ನ ನಿರ್ವಹಣೆ ಕುರಿತು ಶ್ಲಾಘಿಸಿ ಇನ್ನಷ್ಟೂ ಅಭಿವೃದ್ಧಿ ಹೊಂದುವಂತಾಗಿ ಮಕ್ಕಳಿಗೆ ಚಟುವಟಿಕೆಯ ಕೇಂದ್ರವಾಗಿ ಬೆಳೆಯಲಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಅವರ ಪತ್ನಿ, ಮಕ್ಕಳು, ಕೋಟ ಪೋಲಿಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ರಾಮ ದೇವಾಡಿಗ, ಥೀಮ್ ಪಾರ್ಕ್ ಮೇಲ್ವಿಚಾರಕ ಪ್ರಶಾಂತ್ ಸಿಬ್ಬಂದಿ ಸುಜಾತ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ : ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ್ದು, ರಾಜ್ಯದಲ್ಲೇ ಅತೀ ಹೆಚ್ಚು ವಿದ್ಯಾರ್ಥಿಗಳು 600ಕ್ಕೆ 600 ಅಂಕ ಪಡೆಯುವ ಮೂಲಕ ಆಳ್ವಾಸ್ ಪದವಿ ಪೂರ್ವ ಕಾಲೇಜು ಸಾರ್ವತ್ರಿಕ ದಾಖಲೆ ಸೃಷ್ಟಿಸಿದೆ. 600ಕ್ಕೆ 600 ಅಂಕ ಗಳಿಸಿದ ದ.ಕ ಜಿಲ್ಲೆಯ 445 ವಿದ್ಯಾರ್ಥಿಗಳಲ್ಲಿ 190 ವಿದ್ಯಾರ್ಥಿಗಳು ಆಳ್ವಾಸ್ ಸಂಸ್ಥೆಯ ವಿದ್ಯಾರ್ಥಿಗಳು. ಇವರಲ್ಲಿ 13 ವಿದ್ಯಾರ್ಥಿಗಳು ಆಳ್ವಾಸ್ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳೆಂಬುದು ಗಮನಾರ್ಹವಾಗಿದೆ. ಪರೀಕ್ಷೆಗೆ ಹಾಜರಾದ 2510 ವಿದ್ಯಾರ್ಥಿಗಳಲ್ಲಿ 1637 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗದ 19 ವಿಷಯವಾರು ಫಲಿತಾಂಶದಲ್ಲಿ ಒಟ್ಟು 3016 ವಿದ್ಯಾರ್ಥಿಗಳು 100ಕ್ಕೆ 100 ಅಂಕಗಳನ್ನು ಗಳಿಸಿದ್ದಾರೆ. ಗಣಿತ ಹಾಗೂ ಇಂಗ್ಲೀಷ್ ನಲ್ಲಿ ಕ್ರಮವಾಗಿ 542 ಮತ್ತು 514 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಪಡೆದಿದ್ದಾರೆ. ಬಯೋಲಜಿ, ಭೌತಶಾಸ್ತ್ರ ಹಾಗೂ ರಸಾಯನ ಶಾಸ್ತ್ರ, ಅಕೌಂಟೆನ್ಸಿಯಲ್ಲಿ ಕ್ರಮವಾಗಿ 403,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಶ್ರೀ ಇಂದುಧರ ದೇವಸ್ಥಾನ ಗಂಗೊಳ್ಳಿ ಇದರ 2021-22ನೇ ಸಾಲಿನ ನೂತನ ಅಧ್ಯಕ್ಷರಾಗಿ ಅರುಣ್ ಕುಮಾರ್ ಜಿ. ಆಯ್ಕೆಯಾಗಿದ್ದಾರೆ. ಗುರುರಾಜ್ ಬಿ. (ಉಪಾಧ್ಯಕ್ಷರು), ಶ್ರೀಕಾಂತ ಎಸ್. (ಕಾರ್ಯದರ್ಶಿ), ಅಶ್ವಥ್ ಕುಮಾರ್ ಬಿ. (ಜತೆ ಕಾರ್ಯದರ್ಶಿ), ಕರುಣಾಕರ ಮರವಂತೆ (ಖಜಾಂಚಿ), ಸಂಜೀವ ಜಿ.ಟಿ. (ಮೊಕ್ತೇಸರ), ಶಿವ ಜಿ.ಟಿ., ಶ್ರೀಕಾಂತ ಎನ್., ಕುಮಾರ ಜಿ.ಟಿ. (ಅರ್ಚಕರು), ಶಶಿಧರ ಜಿ.ಟಿ., ಪಾಂಡು ಎನ್., ಸಂದೇಶ ಜಿ.ಟಿ., ಲಕ್ಷ್ಮಣ, ಚಂದ್ರ, ಸುರೇಶ ಡಿ., ನರಸಿಂಹ ಜಿ.ಎಂ., ಅಣ್ಣಯ್ಯ ಜಿ.ಎಂ., ಶ್ರೀನಿವಾಸ ಬಿ., ಸುಂದರ ಬಿ., ಶ್ರೀನಿವಾಸ ಎಂ.ಜಿ. (ಕಾರ್ಯಕಾರಿ ಸಮಿತಿ ಸದಸ್ಯರು) ಆಯ್ಕೆಯಾಗಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : 2021ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರಸನ್ನಾ ಪೈ 600ರಲ್ಲಿ 600 ಅಂಕ ಗಳಿಸಿ ಅದ್ಭುತ ಸಾಧನೆ ಮಾಡಿದ್ದಾರೆ. ಇಂಗ್ಲೀಷ್-100, ಸಂಸ್ಕೃತ-100, ಭೌತಶಾಸ್ತ್ರ-100, ರಸಾಯನಶಾಸ್ತ್ರ-100, ಗಣಿತ-100 ಮತ್ತು ಜೀವಶಾಸ್ತ್ರದಲ್ಲಿ-100ಅಂಕಗಳೊಂದಿಗೆ ಒಟ್ಟು600 ಅಂಕಗಳಿಸಿ ಕಾಲೇಜಿಗೆ ಹಾಗೂ ಗಂಗೊಳ್ಳಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕೂಡ ಈಕೆ ಶಾಲೆಗೆ ಮತ್ತು ಗಂಗೊಳ್ಳಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಳು. ಈಕೆ ಗಂಗೊಳ್ಳಿಯ ಪತ್ರಕರ್ತ ಬಿ.ರಾಘವೇಂದ್ರ ಪೈ ಮತ್ತು ರಾಧಿಕಾ ಆರ್.ಪೈ ದಂಪತಿಯ ಪುತ್ರಿ. ಈಕೆಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸರು ಹಾಗೂ ಕುಟುಂಬಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

Read More