ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರಾವಳಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಒತ್ತು ಕೊಡುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ನಿರ್ಧಾರವನ್ನು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಸ್ವಾಗತಿಸಿದ್ದಾರೆ. ಗೋವಾ ಹಾಗೂ ಕೇರಳ ಕರಾವಳಿಗಿಂತ ಕರ್ನಾಟಕದ ಕರಾವಳಿ ಪ್ರವಾಸೋದ್ಯಮಕ್ಕೆ ಅತ್ಯಂತ ಹೆಚ್ಚು ಅವಕಾಶಗಳನ್ನು ಹೊಂದಿದೆ. ಕರ್ನಾಟಕದ ಕರಾವಳಿಯ ಸಮುದ್ರ ಕಿನಾರೆಗಳು ಮಾತ್ರವಲ್ಲದೆ ನದಿಗಳ ಹಿನ್ನಿರು ಕೂಡ ಪ್ರವಾಸೋದ್ಯಮ ಅಭಿವೃದ್ಧಿಗೆ ಉಪಯುಕ್ತವಾಗಿವೆ. ಇವತ್ತು ಹಿನ್ನಿರು ಪ್ರವಾಸೋದ್ಯಮದಲ್ಲಿ ದೇಶದಲ್ಲೇ ಹೆಸರುವಾಸಿಯಾಗಿರುವ ಪ್ರದೇಶ ಕೇರಳದ ಕುಮಾರಗಂ. ಆದರೆ ಕರ್ನಾಟಕದ ಕರಾವಳಿಯಲ್ಲಿ ಕುಮಾರಗಂಕ್ಕಿಂತ ಹೆಚ್ಚು ಹಿನ್ನಿರು ಪ್ರವಾಸೋದ್ಯಮಕ್ಕೆ ಉಪಯುಕ್ತವಾದ ನದಿಗಳು ಇವೆ. ಇವುಗಳನ್ನು ಪ್ರವಾಸೋದ್ಯಮ ಕೇಂದ್ರಗಳಾಗಿ ಮಾರ್ಪಾಡು ಮಾಡುವ ಮಾನ್ಯ ಮುಖ್ಯಮಂತ್ರಿಗಳ ನಿರ್ಧಾರ ಕೇವಲ ಪ್ರವಾಸೋದ್ಯಮ ಅಭಿವೃದ್ಧಿ ಮಾತ್ರವಲ್ಲದೆ ಕರಾವಳಿಯ ಆರ್ಥಿಕ ಅಭಿವೃದ್ಧಿ ಕೂಡ ಸಹಾಯವಾಗುತ್ತದೆ. ಅದರ ಜೊತೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಉದ್ಯೋಗ ಸೃಷ್ಟಿಯಾಗುವುದರಿಂದ ಲಕ್ಷಾಂತರ ದುಡಿಯುವ ಕೈಗಳಿಗೆ ಶಕ್ತಿ ಸಿಗುತ್ತದೆ. ಮಾನ್ಯ ಮುಖ್ಯಮಂತ್ರಿಗಳು ಕರಾವಳಿ ಪ್ರವಾಸೋದ್ಯಮದ ರೂಪುರೆಷೆಗಳನ್ನು ರಚಿಸುವಾಗ ಕರಾವಳಿಯ ಸಂಸ್ಕಾರ ಮತ್ತು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಕ್ತದಾನವು ಜೀವ ಉಳಿಸುವ ಮಹತ್ವದ ಕಾರ್ಯವಾಗಿದೆ. ಅತ್ಯಮೂಲ್ಯ ರಕ್ತವನ್ನು ಸಂಗ್ರಹಿಸುವ ಮಹತ್ವದ ಕಾರ್ಯದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ ಸೇವೆ ಶ್ಲಾಘನೀಯ ಎಂದು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಶನಿವಾರ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮತ್ತು ಭಂಡಾರ್ಕಾರ್ಸ್ ಕಾಲೇಜಿನ ಸಹಯೋಗದಲ್ಲಿ ನಡೆದ ರಕ್ತದಾನಿಗಳ ದಿನಾಚರಣೆ – 2026ನ್ನು ಉದ್ಘಾಟಿಸಿ ಮಾತನಾಡಿದರು. ರಕ್ತದಾನವು ಜೀವ ಉಳಿಸುವ ನಿಟ್ಟಿನಲ್ಲಿ ಅತ್ಯಂತ ಪ್ರಾಮಾಣಿಕ ಕಾರ್ಯವಾಗಿದೆ., ಯುದ್ಧ ಹಾಗೂ ಅವಘಡಗಳ ಸಂದರ್ಭದಲ್ಲಿ ಅಗತ್ಯ ರಕ್ತವನ್ನು ನೀಡುವುದು ಮತ್ತು ಆರೋಗ್ಯ ಸೇವೆಗಳ ಮೂಲಕ ರೆಡ್ ಕ್ರಾಸ್ ಸಂಸ್ಥೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುತ್ತಿದೆ. ಜಗತ್ತಿನಲ್ಲಿ ಶಾಂತಿ, ನೆಮ್ಮದಿ, ಪ್ರೀತಿ, ಮತ್ತು ಮಾನವೀಯತೆಯನ್ನು ಪಸರಿಸುವ ಕೆಲಸವನ್ನು ರೆಡ್ ಕ್ರಾಸ್ ಸಂಸ್ಥೆ ಮಾಡುತ್ತಿದೆ. ರಕ್ತದಾನದ ಬಗ್ಗೆ ಸಾಕಷ್ಟು ಜಾಗೃತಿ, ಮೂಡಿಸುವುದು ಮತ್ತು ರಕ್ತದಾನಿಗಳ ಸಂಖ್ಯೆ ಹೆಚ್ಚಾಗಲಿ ಎಂದು ಆಶಿಸಿದರು. …
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿಯ ಉಪ್ಪೂರು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಮೆಕೆಟ್ರಾನಿಕ್ಸ್ ತರಗತಿಗಳನ್ನು ನಡೆಸಲು ಎಂ.ಟೆಕ್ / ಬಿ.ಇ ( ಮೆಕ್ಯಾನಿಕಲ್ ಇಂಜಿನಿಯರಿಂಗ್, ಇ&ಇ, ಇ&ಸಿ) ಎಂ.ಎಸ್ಸಿ (ಎಲೆಕ್ಟಾçನಿಕ್ಸ್, ಫಿಸಿಕ್ಸ್) ವಿದ್ಯಾರ್ಹತೆ ಹೊಂದಿರುವ ಅತಿಥಿ ಉಪನ್ಯಾಸಕರ ಅವಶ್ಯಕತೆ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಸರ್ಕಾರಿ ಪ್ರೌಢಶಾಲೆ ಹತ್ತಿರ, ಕೊಳಲಗಿರಿ ಉಪ್ಪೂರು ಉಡುಪಿ, ದೂರವಾಣಿ ಸಂಖ್ಯೆ: 9880510585, 8618760169, ಇ-ಮೇಲ್: gttcudupi@gmail.com ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿಯಲ್ಲಿ ಜಿಲ್ಲೆಯ ಕಂದಾಯ ಉಪವಿಭಾಗಕ್ಕೆ ಒಂದರಂತೆ ವೃದ್ಧಾಶ್ರಮವನ್ನು ಪ್ರಾರಂಭಿಸಲು ಅರ್ಹ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವೃದ್ಧಾಶ್ರಮ ಪ್ರಾರಂಭಿಸುವ ಸ್ವಯಂ ಸೇವಾ ಸಂಸ್ಥೆಯು ಅಸ್ತಿತ್ವಕ್ಕೆ ಬಂದು ಕನಿಷ್ಠ 2 ವರ್ಷಗಳಾಗಿರಬೇಕು ಹಾಗೂ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಹೊಂದಿರುವ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಯನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ಕಛೇರಿ, ರಜತಾದ್ರಿ, ಮಣಿಪಾಲ ಇಲ್ಲಿಂದ ಪಡೆದು ಸೂಕ್ತ ಲಗತ್ತುಗಳೊಂದಿಗೆ ಭರ್ತಿ ಮಾಡಿ ದ್ವಿಪ್ರತಿಯಲ್ಲಿ ಈ ಕಚೇರಿಗೆ ಜೂನ್.30 ರ ಒಳಗಾಗಿ ಸಲ್ಲಿಸಬಹುಧಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://dwdsc.karnataka.gov.in ಅಥವಾ ಇಲಾಖೆಯ ದೂರವಾಣಿ ಸಂಖ್ಯೆ: 0820-2574810, 2574811 ಗೆ ಕರೆಮಾಡಿ ಮಾಹಿತಿಯನ್ನು ಪಡೆಯಬಹುದಾಗಿದೆ ಅಥವಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳಮಹಡಿ, ಕೆನರಾ ಬ್ಯಾಂಕ್ ಹತ್ತಿರ, ಜಿಲ್ಲಾ ಪಂಚಾಯತ್ ವಿಭಾಗ, ರಜತಾದ್ರಿ, ಮಣಿಪಾಲ ಕಛೇರಿಯನ್ನು ಖುದ್ದಾಗಿಯೂ ಸಂಪರ್ಕಿಸಬಹುದಾಗಿದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಶಿಕ್ಷಕರಾದ ಚಂದ್ರಶೇಖರ್ ಲಗಳೂರು ಅವರಿಗೆ 2006-07 ಹಳೆ ವಿದ್ಯಾರ್ಥಿಗಳಿಂದ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭ ಇತ್ತೀಚಿಗೆ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಸುಜಾತ ಅವರು ಅಧ್ಯಕ್ಷತೆ ವಹಿದ್ದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಶ್ರೀ ಲಕ್ಷ್ಮಿ ಹಾಗೂ ವೀರೇಶ್ ಮತ್ತು 2006-2007 ಬ್ಯಾಚಿನ ಹಳೆ ವಿದ್ಯಾರ್ಥಿಗಳಾದ ಶ್ರೀಕಾಂತ್, ನಾಗರಾಜ್, ರಾಘವೇಂದ್ರ, ವಿಘ್ನೇಶ್, ಯೋಗೇಶ್, ಗಿರೀಶ್, ಪ್ರಸನ್ನ, ಸತೀಶ್, ಮನಿಷಾ, ಆಶಾ, ಸುಮಿತ್ರ, ಶರಾವತಿ, ಅಶ್ವಿನಿ, ಪೂರ್ಣಿಮಾ ಉಪಸ್ಥಿತರಿದ್ದರು. ಉಪನ್ಯಾಸಕ ಗಣೇಶ್ ಅವರು ಕಾರ್ಯಕ್ರಮವನ್ನು ನಿರೂಸಿ, ಉಪನ್ಯಾಕಿ ಸಾವಿತ್ರಿ ಸ್ವಾಗತಿಸಿ, ಉಪನ್ಯಾಸಕ ನಾಗೇಶ್ ಧನ್ಯವಾದ ಗೈದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕು ಉಪವಿಭಾಗೀಯ ಸಾರ್ವಜನಿಕ ಆಸ್ಪತ್ರೆಯಲ್ಲಿರುವ ಶಿಥಿಲಗೊಂಡ ಹಳೆ ಕಟ್ಟಡ ತೆರವು ಮಾಡಿ, ಹೊಸ ಕಟ್ಟಡ ನಿರ್ಮಾಣ ಹಾಗೂ ಹೆಚ್ಚುವರಿ ಅಗತ್ಯದ 30 ಕೆಎಲ್‌ಡಿ ಸಾಮರ್ಥ್ಯದ ಎಸ್‌ಟಿಪಿ ರಚನೆ ಸಂಬಂಧ ಇಲಾಖೆಯ ಎಂಜಿನಿಯರ್‌ಗಳು ಪರಿಶೀಲಿಸಿ, ಅಂದಾಜು ಪಟ್ಟಿಯ ವರದಿ ಸಲ್ಲಿಸಬೇಕು ಎಂದು ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದ್ದಾರೆ. ಅವರು ಕುಂದಾಪುರದ ಉಪ ವಿಭಾಗೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಶುಕ್ರವಾರ ಆರೋಗ್ಯ ರಕ್ಷಾ ಸಮಿತಿಯ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯ ಮಾಲಿನ್ಯ ಮಂಡಳಿಯ ಕಾರ್ಯಸೂಚಿ ಪ್ರಕಾರ 55 ಕೆಎಲ್ ಡಿ ಸಾಮರ್ಥ್ಯದ ಎಸ್‌ಟಿಪಿ ಇರಬೇಕು. ಸದ್ಯ 25 ಕೆಎಲ್‌ಡಿ ನಿರ್ವಹಣೆಯಲ್ಲಿದೆ. ಅದಕ್ಕಿಂತ ಹಿಂದಿನ 30 ಕೆಎಲ್‌ಡಿಯ ಎಸ್‌ಟಿಪಿ ಕಾರ್ಯ ನಿರ್ವಹಿಸುತ್ತಿಲ್ಲ. ಅದರ ದುರಸ್ತಿ, ಮೋಟಾರು, ಪೈಪ್‌ಲೈನ್‌ಗೆ ಅಂದಾಜು 20 ಲಕ್ಷ ರೂ. ಅಗತ್ಯವಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಚಂದ್ರ ಮರಕಾಲ ಸಭೆಗೆ ತಿಳಿಸಿದರು. ಈ ಬಗ್ಗೆ ಇಂಜಿನಿಯರ್‌ಗಳು ವರದಿ ಸಲ್ಲಿಸಲಿ. ಆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸುಜ್ಞಾನ ನ್ಯಾಷನಲ್ ಪಿಯು ಕಾಲೇಜಿನಲ್ಲಿ ಇತ್ತೀಚೆಗೆ ಸಂಸ್ಕೃತ ಭಾಷಾ ಮಾಹಿತಿ ಕಾರ್ಯಾಗಾರವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಬಾರಕೂರಿನ ನ್ಯಾಷನಲ್ ಹೈಸ್ಕೂಲಿನ ಮುಖ್ಯ ಶಿಕ್ಷಕಿಯಾದ ಹೇಮಾವತಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಬಾರಕೂರಿನ ನ್ಯಾಷನಲ್ ಹೈಸ್ಕೂಲು, ಸಂಸ್ಕೃತ ಹಾಗೂ ಇಂಗ್ಲಿಷ್ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಜಿ.ಪಿ. ಪ್ರಭಾಕರ ತುಮರಿ ಅವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಉಪಯುಕ್ತವಾದ ಮಾಹಿತಿಯನ್ನು ನೀಡಿದರು. ಸುಮಾರು ಒಂದು ಗಂಟೆಗಳ ಕಾಲ ನಡೆದ ತಮ್ಮ ಉಪನ್ಯಾಸದಲ್ಲಿ ಸಂಸ್ಕೃತ ಭಾಷೆಯ ಇತಿಹಾಸ, ಅದರ ಬೆಳವಣಿಗೆಯ ಪಥ, ಇತರೆ ಭಾಷೆಗಳ ಮೇಲೆ ಸಂಸ್ಕೃತದ ಪ್ರಭಾವ, ಭಾರತೀಯ ಜ್ಞಾನ ಪರಂಪರೆಯಲ್ಲಿ ಸಂಸ್ಕೃತದ ಸ್ಥಾನಮಾನ, ನಿಸರ್ಗಸ್ನೇಹಿ ಜೀವನಕ್ಕೆ ಪೂರಕವಾದ ಆಯುರ್ವೇದದ ಅಂಶಗಳು ಹಾಗೂ ನಮ್ಮ ದೈನಂದಿನ ಜೀವನದಲ್ಲಿ ಬಳಕೆಯಾಗುವ ಸಂಸ್ಕೃತ ಪದಗಳ ಮಹತ್ವದ ಕುರಿತು ವಿವರವಾಗಿ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರಕಾಶ್ ಆಚಾರ್ಯ ಅವರು ಸಂಸ್ಕೃತ ಶ್ಲೋಕವನ್ನು ಪಠಿಸುವ ಮೂಲಕ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಾಗಾರದ ರೂಪುರೇಷೆಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ವೈಪರಿತ್ಯದಿಂದಾಗಿ ಉಂಟಾಗುವ ಬೆಳೆ ನಷ್ಟಕ್ಕೆ ಪ್ರಸಕ್ತ ಸಾಲಿನ ಮರು ವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆ ವಿಮೆ ಕಾರ್ಯಕ್ರಮದಡಿ ನೊಂದಣಿ ಮಾಡಿಕೊಳ್ಳಲು ರೈತರಿಗೆ ಅವಕಾಶ ಕಲ್ಪಿಸಲಾಗಿದ್ದು, ರೈತರ ಪಹಣಿಯಲ್ಲಿ ಬೆಳೆ ಸಮೀಕ್ಷೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ನಮೂದಾಗಿರು ವ ಬೆಳೆ ವಿಸ್ತೀರ್ಣಕ್ಕೆ ಅನುಗುಣವಾಗಿ ವಿಮಾ ಮೊತ್ತವನ್ನು ಪಾವತಿಸಿ ಯೋಜನೆಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಯೋಜನೆಯಡಿ ನೊಂದಣಿ ಮಾಡಿಸಲು ಜೂನ್ 30 ಕೊನೆಯ ದಿನವಾಗಿದ್ದು, ರೈತರು ವಿಮಾ ಕಂತುಗಳನ್ನು ಪಾವತಿಸಲು ನಿಗದಿತ ದಾಖಲೆಗಳೊಂದಿಗೆ ಹತ್ತಿರದ ಬ್ಯಾಂಕ್, ವ್ಯವಸಾಯ ಸೇವಾ ಸಹಕಾರಿ ಸಂಘ, ಸಿ.ಎಸ್.ಸಿ ಹಾಗೂ ಗ್ರಾಮ ಒನ್ -ಸೇವಾ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ. ಈ ಬೆಳೆ ವಿಮಾ ಯೋಜನೆಯಲ್ಲಿ ಗ್ರಾಮ ಪಂಚಾಯತ್‌ಗಳನ್ನು ವಿಮಾ ಘಟಕಗಳಾಗಿ ಸರ್ಕಾರದ ಆದೇಶದಲ್ಲಿ ಅಧಿಸೂಚಿಸಲಾಗಿದ್ದು, ಅಡಿಕೆ ಹಾಗೂ ಕಾಳುಮೆಣಸು ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರು ಪಾಲ್ಗೊಳ್ಳಬಹುದಾಗಿದ್ದು, ಬೆಳೆ ಸಾಲ ಪಡೆಯದ ರೈತರಿಗೆ ಈ ಯೋಜನೆಯು ಐಚ್ಚಿಕವಾಗಿರುತ್ತದೆ. ಬೆಳೆ ಸಾಲ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಹಂಗಳೂರು ಗ್ರಾಮದ ಅಲಂಕಾರ್ ಬಾರ್ ಎದುರುಗಡೆ ರಾಷ್ಟ್ರೀಯಹೆದ್ದಾರಿ 66ರಲ್ಲಿ ನಡೆದಿದೆ. ಮೃತರನ್ನು ಸ್ಕೂಟರ್ ಸವಾರ ಅವದೇಶ ಎಂದು ಗುರುತಿಸಲಾಗಿದೆ. ಕೊಟೇಶ್ವರ ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಸ್ಕೂಟರ್, ರಸ್ತೆ ದಾಟುತ್ತಿದ್ದ ಯಲ್ಲಪ್ಪ ಎಂಬವರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಅವದೇಶ ಸ್ಕೂಟರ್ ಸಮೇತ ರಸ್ತೆಯಲ್ಲಿ ಬಿದ್ದು ಗಾಯಗೊಂಡರು. ಗಂಭೀರ ಸ್ಥಿತಿಯಲ್ಲಿದ್ದ ಅವದೇಶ, ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ಅಪಘಾತ ದಿಂದ ತೀವ್ರವಾಗಿ ಗಾಯಗೊಂಡ ಯಲ್ಲಪ್ಪ ಅವರನ್ನುಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ವ್ಯಕ್ತಿಯೊಬ್ಬರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ನಂಚಾರು ಗ್ರಾಮದ ತಾರೇಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ನಂಚಾರು ಗ್ರಾಮದ ಮಹೇಶ ನಾಯರಿ (53) ಎಂದು ಗುರುತಿಸಲಾಗಿದೆ. ಅವರು ಮನೆಯ ಹತ್ತಿರದ ತೋಟಕ್ಕೆ ಹೋಗಿ ಕೆರೆಯ ಪಕ್ಕದ ಕಾಲು ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದು, ಈ ವೇಳೆ ಅವರು ಆವರಣ ಗೋಡೆಯಿಲ್ಲದ ತೋಟದ ಕೆರೆಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
