Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ನಗರ ಭಾಗದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅವ್ಯವಸ್ಥೆಯ ಆಗರವಾಗಿದ್ದು ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬಸ್ರೂರು ಮೂರುಕೈನಿಂದ ವಿನಾಯಕ ಟಾಕೀಸ್ ತನಕ ಕೃತಕ ನೆರೆ ಸೃಷ್ಟಿಯಾಗಿದ್ದಲ್ಲದೇ, ಕಿಲೋ ಮೀಟರ್ ಉದ್ದಕ್ಕೂ ಟ್ರಾಫಿಕ್ ಜಾಮ್ ಉಂಟಾಗಿ ಸಾರ್ವಜನಿಕರು ತೊಂದರೆ ಅನುಭವಿಸುವಂತಾಯಿತು. ಈ ಭಾಗದಲ್ಲಿ ನೀರು ಸರಾಗವಾಗಿ ಹರಿದುಹೋಗಲು ವ್ಯವಸ್ಥೆ ಮಾಡಿಕೊಡದಿರುವುದರಿಂದ ಮಳೆಗಾಲ ಆರಂಭವಾದಾಗಲಿಂದಲೂ ಕೃತಕ ನೆರೆ ಸೃಷ್ಟಿಯಗಿದ್ದು, ವಾಹನ ಸವಾರರು ನಿತ್ಯ ಯಾತನೆ ಅನುಭವಿಸುವಂತಾಗಿತ್ತು. ಬೆಳಿಗ್ಗೆಯಿಂದ ನಿರಂತರವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ಸಂಚಾರ ಕಷ್ಟಸಾಧ್ಯವಾಗಿ ಕಿಲೋಮೀಟರ್ ಉದ್ದಕ್ಕೂ ಜಾಮ್ ಉಂಟಾಗಿತ್ತು. ಇದೇ ವೇಳೆಯಲ್ಲಿ ಕುಂದಾಪುರದಲ್ಲಿ ಕಾರ್ಯಕ್ರಮ ಮುಗಿಸಿ ಹಿಂದಿರುಗುತ್ತಿದ್ದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಕಾರನ್ನು ತಡೆದ ಸಾರ್ವಜನಿಕರು, ಅವ್ಯವಸ್ಥೆಯ ಬಗ್ಗೆ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಸಚಿವರು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಸಮಸ್ಯೆ ಬಗೆಹರಿಸುವಂತೆ ಸೂಚಿಸಿ ತೆರಳಿದ್ದು, ಸಂಜೆಯ ವೇಳೆಗೆ ತಾತ್ಕಾಲಿಕವಾಗಿ ನೀರು ಹರಿದು ಹೋಗಲು ವ್ಯವಸ್ಥೆ ಮಾಡಿಕೊಡಲಾಗಿದೆ. ಈ ಸಂದರ್ಭ ರಾಷ್ಟ್ರೀಯ ಹೆದ್ದಾರಿ ಹೋರಾಟ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೇಂದ್ರ ಸರಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ ರಚಿಸಲ್ಪಟ್ಟಿರುವ “ಪ್ರಧಾನಮಂತ್ರಿ ಜನಕಲ್ಯಾಣಕಾರಿ ಯೋಜನೆ ಪ್ರಚಾರ ಪ್ರಸಾರ ಅಭಿಯಾನದ ಮಹಿಳಾ ವಿಭಾಗ ಅಧ್ಯಕ್ಷರಾಗಿ ಅಕ್ಷತಾ ಗಿರೀಶ್ ಆಯ್ಕೆಯಾಗಿದ್ದಾರೆ. ಅಕ್ಷತಾ ಅವರು ಪತ್ರಕರ್ತೆಯಾಗಿ, ಟಿ.ವಿ. ನಿರೂಪಕರಾಗಿ, ವ್ಯಕ್ತಿತ್ವ ವಿಕಸನ ತರಬೇತುದಾರರಾಗಿ ಸಕ್ರೀಯರಾಗಿದ್ದು, ಜೆಸಿಐ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಮೂಲಕ, ಹತ್ತು ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಸಂಘಟಿಸಿದ ಕೀರ್ತಿ ಹೊಂದಿದ್ದಾರೆ. ಮಹಿಳಾ ವಿಭಾಗದ ಸಂಘಟನಾ ಕಾರ್ಯದರ್ಶಿ ಲಕ್ಷೀ ಪಿ., ಎಸ್ ಸಹ ಕಾರ್ಯದರ್ಶಿ ಕಸ್ತೂರಿ ಆಚಾರ್ಯ ಆಯ್ಕೆಯಾಗಿದ್ದಾರೆ. ಪ್ರಧಾನಮಂತ್ರಿ ಜನಕಲ್ಯಾಣಕಾರಿ ಯೋಜನೆ ಪ್ರಚಾರ ಪ್ರಸಾರ ಅಭಿಯಾನದ ಉಡುಪಿ ಜಿಲ್ಲಾಧ್ಯಕ್ಷರಾಗಿ ಮನ್ ಸುಖ್ ಲಾಲ್ ಜೆ. ಪಟೇಲ್, ಸಂಘಟನಾ ಕಾರ್ಯದರ್ಶಿ ನಟೇಶ್ ವೈ ಆರ್. ಉಡುಪಿ, ಸಹ ಕಾರ್ಯದರ್ಶಿ ಮೋಹನ್ ಭಟ್, ಯುವ ವಿಭಾಗ ಅಧ್ಯಕ್ಷರಾಗಿ ರಘುನಾಥ ಜೆ. ಆಚಾರ್ಯ, ಸಂಘಟನಾಕಾರ್ಯದರ್ಶಿ ಅಶೋಕ್ ಕಿಣಿ, ಗ್ರಾಮ ವಿಕಾಸ ಅಧ್ಯಕ್ಷರಾಗಿ ಮಕರಂದ ಪಡುಬಿದ್ರಿ, ಸಂಘಟನಾ ಕಾರ್ಯದರ್ಶಿ ವಿಜಯಕುಮಾರ್ ಶೆಟ್ಟಿ, ಕಾನೂನು ವಿಭಾಗ ದಿನೇಶ್ ಸಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಆ.08ರ ಶನಿವಾರ 314 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 87, ಉಡುಪಿ ತಾಲೂಕಿನ 192 ಹಾಗೂ ಕಾರ್ಕಳ ತಾಲೂಕಿನ 30 ಮಂದಿಗೆ ಪಾಸಿಟಿವ್ ಬಂದಿದೆ. 5 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 88 ಸಿಂಥಮೇಟಿವ್ ಹಾಗೂ 226 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, 164 ಪುರುಷರು, 150 ಮಹಿಳೆಯರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಇಂದು 59 ಮಂದಿ ಆಸ್ಪತ್ರೆಯಿಂದ ಹಾಗೂ 30 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. ಕುಂದಾಪುರ ತಾಲೂಕಿನ 56 ವರ್ಷದ ವ್ಯಕ್ತಿ, ಉಡುಪಿ ತಾಲೂಕಿನ 76, 65, 77 ಹಾಗೂ 50 ವರ್ಷದ ನಾಲ್ವರು ವ್ಯಕ್ತಿಗಳು ಸೇರಿ ಒಟ್ಟು ಇಂದು 5 ಮಂದಿ ಮೃತಪಟ್ಟಿದ್ದಾರೆ. 1,379 ನೆಗೆಟಿವ್: ಈ ತನಕ ಒಟ್ಟು 43441 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 35982 ನೆಗೆಟಿವ್, 5919 ಪಾಸಿಟಿವ್ ಬಂದಿದ್ದು, 1540 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಆ.07ರ ಶುಕ್ರವಾರ 245 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 92, ಉಡುಪಿ ತಾಲೂಕಿನ 125 ಹಾಗೂ ಕಾರ್ಕಳ ತಾಲೂಕಿನ 25 ಮಂದಿಗೆ ಪಾಸಿಟಿವ್ ಬಂದಿದೆ. 3 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 70 ಸಿಂಥಮೇಟಿವ್ ಹಾಗೂ 175 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, 125 ಪುರುಷರು, 120 ಮಹಿಳೆಯರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಇಂದು 57 ಮಂದಿ ಆಸ್ಪತ್ರೆಯಿಂದ ಹಾಗೂ 44 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. ಕುಂದಾಪುರ ತಾಲೂಕಿನ 75, 70 ಹಾಗೂ 65 ವರ್ಷದ ವ್ಯಕ್ತಿಗಳು, ಉಡುಪಿ ತಾಲೂಕಿನ 78 ವರ್ಷದ ವ್ಯಕ್ತಿ ಹಾಗೂ ಕಾರ್ಕಳ ತಾಲೂಕಿನ 49 ವರ್ಷದ ವ್ಯಕ್ತಿ ಸೇರಿ ಒಟ್ಟು ಇಂದು 5 ಮಂದಿ ಮೃತಪಟ್ಟಿದ್ದಾರೆ. 1148 ನೆಗೆಟಿವ್: ಈ ತನಕ ಒಟ್ಟು 41411 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 34603 ನೆಗೆಟಿವ್, 5605 ಪಾಸಿಟಿವ್ ಬಂದಿದ್ದು, 1203 ಮಂದಿಯ ವರದಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಮಳೆಹಾನಿ ಹಾಗೂ ಪ್ರಕೃತಿ ವಿಕೋಪದಿಂದ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಗದಂತೆ ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವುದರೊಂದಿಗೆ, ಸಾವು ನೋವುಗಳು ಸಂಭವಿಸದಂತೆ ನೋಡಿಕೊಳ್ಳಬೇಕು ಎಂದು ಕಂದಾಯ ಸಚಿವ ಆರ್. ಅಶೋಕ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಶುಕ್ರವಾರ, ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಜಿಲ್ಲೆಯ ಮಳೆ ಹಾನಿ ಹಾಗೂ ಪ್ರಾಕೃತಿಕ ವಿಕೋಪದ ಕುರಿತ ಚರ್ಚೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಾಕೃತಿಕ ವಿಕೋಪ ತಡೆಯಲು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದರಿಂದ ಸಂಭವಿಸಬಹುದಾದ ಅನಾಹುತಗಳನ್ನು ತಪ್ಪಿಸಲು ಸಾಧ್ಯವಿದ್ದು, ಇದಕ್ಕಾಗಿ ಸೂಕ್ತ ಪೂರ್ವ ನಿಯೋಜಿತವಾದ ಯೋಜನೆ ರೂಪಿಸಿಕೊಳ್ಳಿ, ಇಲ್ಲವಾದಲ್ಲಿ ಹೆಚ್ಚಿನ ಪ್ರಮಾಣದ ಅನಾಹುತ ಸಂಭವಿಸುವ ಸಾಧ್ಯತೆಯಿದೆ, ಜಿಲ್ಲೆಯಲ್ಲಿ ವಿಕೋಪ ತಡೆಗೆ ಅಗತ್ಯವಿದ್ದ÷ಲ್ಲಿ ಮಂಗಳೂರಿನಲ್ಲಿರುವ ಎನ್.ಡಿ.ಅರ್.ಎಫ್ ತಂಡದ ನೆರವು ಪಡೆಯುವಂತೆ ಸಚಿವ ಅಶೋಕ್ ತಿಳಿಸಿದರು. ಜಿಲ್ಲೆಯಲ್ಲಿ ಕಳೆದ 10 ವರ್ಷಗಳಿಂದ ಅನಾಹುತಗಳು ಸಂಭವಿಸಿರುವ ಪ್ರದೇಶಗಳನ್ನು ಗುರುತಿಸಿ, ಆ ಪ್ರದೇಶದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕೈಗೊಂಡು ಸಾರ್ವಜನಿಕರಿಗೆ ಹಾನಿಯಾಗದಂತೆ ನೋಡಿಕೊಳ್ಳಿ, ಹಾನಿಗೊಳಗಾದವರಿಗೆ ಪರಿಹರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪ್ರ ಕನ್ನಡ ಮಾತನಾಡುವ ಮಂದಿಯ ನಡೆ ನುಡಿ, ಆಚಾರ ವಿಚಾರದ ಬಗ್ಗೆ ಯುವಪೀಳಿಗೆ ಹೆಚ್ಚೆಚ್ಚು ಆಕರ್ಷಿತರಾಗುತ್ತಿದ್ದಾರೆ. ಯಾವಾಗ ಯುವ ಜನಾಂಗ ನಮ್ಮ ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳುತ್ತಾರೋ ಆಗ ಅದು ಅಮರವಾಗುತ್ತದೆ ಎಂದು ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಹೇಳಿದರು. ಅವರು ಕಲಾಕ್ಷೇತ್ರ-ಕುಂದಾಪುರದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣೆಯ ಸರಳ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅತಿಥಿ ಉದಯ ಶೆಟ್ಟಿ ಪಡುಕೆರೆ ಮಾತನಾಡುತ್ತಾ ಹಲವಾರು ಯಶಸ್ವಿ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಜನರ ಪ್ರಶಂಸೆಗೆ ಪಾತ್ರರಾದ ಕಲಾಕ್ಷೇತ್ರ-ಕುಂದಾಪುರ ಇವರು ಮುಂದಿನ ವರ್ಷ ವಿಶ್ವ ಕುಂದಾಪ್ರ ಕನ್ನಡ ಸಮ್ಮೇಳನವನ್ನು ಆಯೋಜಿಸಬೇಕು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ‘ನೆರ‍್ಮನಿ ಹಾಳಾರೂ ಅಡ್ಡಿಲ್ಲೆ ಕರಿನ್ ಕಟ್ಟುಕೆ ಜಾಗ ಆಯ್ತ್ ಅಂದಿನಂಬ್ರ್’ ಎಂಬ ಚಾಟೋಕ್ತಿಯ ಮೇಲೆ ಎರ್ಪಡಿಸಲಾದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ, ಧ್ವಿತೀಯ ಮತ್ತು ತೃತೀಯ ವಿಜೇತರಾಗಿ ಕ್ರಮವಾಗಿ ಆಯ್ಕೆಯಾದ ಮಂಜುನಾಥ ಹಿಲಿಯಾಣ, ಕೆ. ಸ್ವರಾಜ್ಯ ಲಕ್ಷ್ಮೀ ಮತ್ತು ಮಾನ್ಯತ್ ಶೆಟ್ಟಿ ವಂಡ್ಸೆ ಇವರಿಗೆ ಈ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಆ.06ರ ಗುರುವಾರ 217 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 81, ಉಡುಪಿ ತಾಲೂಕಿನ 90 ಹಾಗೂ ಕಾರ್ಕಳ ತಾಲೂಕಿನ 44 ಮಂದಿಗೆ ಪಾಸಿಟಿವ್ ಬಂದಿದೆ. 2 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 85 ಸಿಂಥಮೇಟಿವ್ ಹಾಗೂ 132 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, 139 ಪುರುಷರು, 88 ಮಹಿಳೆಯರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಇಂದು 34 ಮಂದಿ ಆಸ್ಪತ್ರೆಯಿಂದ ಹಾಗೂ 51 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. ಕುಂದಾಪುರ ತಾಲೂಕಿನ 82 ಹಾಗೂ 52 ವರ್ಷದ ವ್ಯಕ್ತಿಗಳು, ಇಂದು ಉಡುಪಿ ತಾಲೂಕಿನ 55 , 36 ಹಾಗೂ 70 ವರ್ಷದ ವ್ಯಕ್ತಿಗಳು ಹಾಗೂ ಕಾರ್ಕಳ ತಾಲೂಕಿನ 75 ವರ್ಷದ ವ್ಯಕ್ತಿ ಸೇರಿ ಒಟ್ಟು 6 ಮಂದಿ ಮೃತಪಟ್ಟಿದ್ದಾರೆ. 1685 ನೆಗೆಟಿವ್: ಈ ತನಕ ಒಟ್ಟು 40044 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 33455 ನೆಗೆಟಿವ್, 5360 ಪಾಸಿಟಿವ್ ಬಂದಿದ್ದು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸ್ತಕ ಸಾಲಿನ ಸರ್ಕಾರಿ ಹಾಗೂ ಅನುದಾನಿತ ಪಾಲಿಟೆಕ್ನಿಕ್ಗಳಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಶೇ 35 ರಷ್ಟು ಅಂಕ ಪಡೆದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ಡಿಪ್ಲೋಮಾ ಪ್ರವೇಶ ಮಾಡುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಅಥವಾ ಸಮೀಪ ಇರುವ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ “ಸಹಾಯಕೇಂದ್ರ’’ ದಲ್ಲಿ ಪ್ರಾಂಶುಪಾಲರ, ಬೋಧಕ ಸಿಬ್ಬಂದಿಯವರ ನೇತೃತ್ವದಲ್ಲಿ ಆನ್ ಲೈನ್ ನಾನ್-ಇಂಟರಾಕ್ಟೀವ್ ಕೌನ್ಸಿಲಿಂಗ್ ಮೂಲಕ ಆಗಸ್ಟ್ 6 ರಿಂದ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ. ಅರ್ಜಿಯನ್ನು https://dtetech.karnataka.gov.in/kartechnical ಮತ್ತು www.cetonline.karnataka.gov.in/kea  ವೆಬ್ ಸೈಟ್ ಮೂಲಕ ಸಲ್ಲಿಸಬಹುದು. ಆಗಸ್ಟ್ 22 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಪಾಲಿಟೆಕ್ನಿಕ್ ಉಡುಪಿ ಸಂಸ್ಥೆಯ ಪ್ರಾಚಾರ್ಯರನ್ನು (ದೂರವಾಣಿ ಸಂಖ್ಯೆ: 0820-2570244) ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮದ ಪ್ರಯುಕ್ತ ಭಾರತೀಯ ಜನತಾ ಪಕ್ಷದ ಗುಜ್ಜಾಡಿ ಸ್ಥಾನೀಯ ಸಮಿತಿ ವತಿಯಿಂದ ಗುಜ್ಜಾಡಿಯ ವಿವಿಧ ದೇವಾಲಯಗಳಲ್ಲಿ ಬುಧವಾರ ಬೆಳಿಗ್ಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ರಾಮ ಮಂದಿರ ಶಿಲಾನ್ಯಾಸ ಸುಮುರ್ಹೂತದಲ್ಲಿ ಕಾರ್ಯಕ್ರಮದ ನೆನಪಿಗಾಗಿ ಬಿಜೆಪಿ ಕಾರ್ಯಕರ್ತರು ಗುಜ್ಜಾಡಿಯ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನ, ಬೆಣ್ಗೆರೆ ಶ್ರೀ ನಾಗ ದೇವಸ್ಥಾನ ಹಾಗೂ ಕೊಡಪಾಡಿಯ ಶ್ರೀ ಗುಹೇಶ್ವರ ದೇವಸ್ಥಾನದ ವಠಾರದಲ್ಲಿ ಬಿಲ್ವಪತ್ರೆ ಗಿಡವನ್ನು ನೆಟ್ಟು ಮಂದಿರ ನಿರ್ಮಾಣ ಕಾರ್ಯ ನಿರ್ವಿಘ್ನವಾಗಿ ನೆರವೇರಲಿ ಪ್ರಾರ್ಥಿಸಿದರು. ಪುರೋಹಿತರಾದ ಜಿ.ವಸಂತ ಭಟ್, ಜಿ.ಅಜಿತ್ ಭಟ್, ಗುಜ್ಜಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹರೀಶ ಮೇಸ್ತ, ಪಕ್ಷದ ಮುಖಂಡರಾದ ಶೇಖರ ದೇವಾಡಿಗ, ಮೋಹನ ನಾಯ್ಕ್ ಗುಜ್ಜಾಡಿ, ದೇವದಾಸ ಖಾರ್ವಿ, ರೋಹಿದಾಸ ನಾಯಕ್, ಶ್ರೀನಾಥ ಮೊಗವೀರ, ಪ್ರಶಾಂತ ನಾಯ್ಕ್, ಗುರುರಾಜ್ ಗಾಣಿಗ, ಅಶೋಕ ನಾಯ್ಕ್, ಗುಜ್ಜಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು, ಭಜಕರು ಮತ್ತಿತರರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಳೆದ ಮೂರು ದಿನಗಳಿಂದ ಸುರಿಯುತ್ತಿದ್ದ ಗಾಳಿ ಮಳೆಗೆ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ನದಿ ಪಾತ್ರದ ಪ್ರದೇಶಗಳಲ್ಲಿ ನೆರೆ ಕಾಣಿಸಿಕೊಂಡಿದ್ದು, ಅಲ್ಲಲ್ಲಿ ಹಾನಿ ಸಂಭವಿಸಿದೆ. ಮಂಗಳವಾರ ನಡುರಾತ್ರಿಯ ತನಕ ಏರುಗತಿಯಲ್ಲೇ ಇದ್ದ ಮಳೆ, ಗಾಳಿ ಆ ಬಳಿಕ ಕಡಿಮೆಯಾಗಿದೆ. ಬುಧವಾರ ಹಗಲು ದಟ್ಟ ಮೋಡವಿತ್ತಾದರೂ ಮಳೆ ಪ್ರಮಾಣ ಕಡಿಮೆ ಇತ್ತು. ಬಡಾಕೆರೆ, ನಾಡ ಕಡ್ಕೆ, ಪಡುಕೋಣೆ, ತೆಂಗಿನಗುಂಡಿ, ಸೇನಾಪುರ, ಕುಂಬಾರಮಕ್ಕಿ, ಕಟ್ಟು, ಹಕ್ಲಾಡಿ ಗ್ರಾಮದ ಬಟ್ಟೆಕುದ್ರು, ಯಳೂರು, ತಪ್ಲು ಪ್ರದೇಶದಲ್ಲಿ ನೆರೆಯಿಂದ ಆವೃತ್ತವಾಗಿತ್ತು. ಉಭಯ ತಾಲೂಕುಗಳ ಚಕ್ರಾ, ಸೌಪರ್ಣಿಕಾ, ವಾರಾಹಿ, ಕುಬ್ಜಾ. ಖೇಟಕಿ ನದಿಗಳು ತುಂಬಿ ಹರಿದಿತ್ತು. ವಿಪರೀತ ಗಾಳಿಗೆ ವಿದ್ಯುತ್ ಕಂಬಗಳು ಧರೆಗೆ ಉರುಳಿ ರಾತ್ರಿ ಭಾಗಶಃ ಬೈಂದೂರು ಕುಂದಾಪುರ ಕತ್ತಲಲ್ಲಿ ಕಳೆಯುವಂತಾಗಿತ್ತು. ಬುಧವಾರ ಮಧ್ಯಾಹ್ನದ ವೇಳೆಗೆ ಕೆಲವೆಡೆ ವಿದ್ಯುತ್ ಸಂಪರ್ಕ ಸರಿಪಡಿಸಲಾಗಿತ್ತು. ತಗ್ಗಿದ ಪ್ರವಾಹ: ನದಿಗಳಲ್ಲಿ ರಾತ್ರಿಯ ಬಳಿಕ ಪ್ರವಾಹದ ಮಟ್ಟ ಕುಸಿದಿದೆ. ಜಲಾವೃತಗೊಂಡ ನದಿಬದಿಯ ಮತ್ತು ನದಿ ನಡುವಿನ ದ್ವೀಪಗಳ…

Read More