Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ವತಿಯಿಂದ 100 ಮಂದಿ ಅಶಕ್ತರಿಗೆ ವೈದ್ಯಕೀಯ ನೆರವು ವಿತರಿಸುವ ಕಾರ‍್ಯಕ್ರಮ ನಡೆಯಿತು. ಆಡಳಿತ ಧರ್ಮದರ್ಶಿ ಶ್ರೀರಮಣ ಉಪಾಧ್ಯಾಯ ಮತ್ತು ಹಿರಿಯ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾದ್ಯಾಯ ಅಶಕ್ತರಿಗೆ ವೈದ್ಯಕೀಯ ನೆರವು ವಿತರಿಸಿ ದೇವರ ಪ್ರಸಾದವನ್ನು ನೀಡಿ ಹಾರೈಸಿದರು. ಈ ಸಂದರ್ಭ ದೇವರ ದರ್ಶನಕ್ಕೆ ಆಗಮಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಪರ್ಯಾಯ ಅರ್ಚಕ ವೆಂಕಟನಾರಾಯಣ ಉಪಾಧ್ಯಾಯ ಮತ್ತು ಸಹೋದರರು ಅರ್ಚಕ ಮಂಡಳಿ ಸದಸ್ಯರು, ದೇಗುಲದ ಮ್ಯಾನೇಜರ್ ನಟೇಶ್ ಕಾರಂತ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಕ್ವಾಡಿ ವಿಶ್ವ ಬ್ರಾಹ್ಮಣ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ವಿ.ಎಸ್. ಆನಂದ ಆಚಾರ್, ಕಾರ್ಯದರ್ಶಿಯಾಗಿ ಮನೋಹರ ಆಚಾರ್ಯ ಆಯ್ಕೆಯಾಗಿದ್ದಾರೆ ಗೌರವಾಧ್ಯಕ್ಷರಾಗಿ ದಯಾನಂದ ಆಚಾರ್ಯ, ಉಪಾಧ್ಯಕ್ಷರಾಗಿ ವಕ್ವಾಡಿ ನಾಗರಾಜ್ ಆಚಾರ್, ವಿ.ಎನ್ ಶ್ರೀನಿವಾಸ ಆಚಾರ್, ಜೊತೆ ಕಾರ್ಯದರ್ಶಿಯಾಗಿ ರಾಘವೇಂದ್ರ ಆಚಾರ್ ಜಿ, ಕೋಶಾಧಿಕಾರಿಯಾಗಿ ಸಿ. ಸುರೇಶ್ ಆಚಾರ್, ಸಂಘಟನಾ ಕಾರ್ಯದರ್ಶಿಯಾಗಿ ಶಿವಪ್ರಸಾದ್ ಆಚಾರ್, ಜಗದೀಶ್ ಆಚಾರ್, ವಿ.ಬಿ ನಾಗರಾಜ ಆಚಾರ್, ಅವಿನಾಶ್ ಆಚಾರ್, ಕ್ರೀಡಾ ಕಾರ್ಯದರ್ಶಿ: ಗಿರೀಶ್ ಆಚಾರ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ವಿ.ಜಿ. ರಾಘವೇಂದ್ರ ಆಚಾರ್ ಆಯ್ಕೆಯಾಗಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜಾಮೀಯ ಮಸೀದಿ ಹಾಗೂ ಅಂಜುಮಾನ್ ಶಬಾಬುಲ್ ಇಸ್ಲಾಂ ವೆಲ್ಫೇರ್ ಟ್ರಸ್ಟ್ ವತಿಯಿಂದ ಈದ್ ಮಿಲಾದ್ ಆಚರಣೆ ಪ್ರಯುಕ್ತ ಸಯ್ಯದ್ ಅಲಿ ಕೋಯಾ ಅವರ ನೇತೃತ್ವದಲ್ಲಿ ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಲಾಯಿತು. ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಗೆ, ಸಾರ್ವಜನಿಕರಿಗೆ ಹಾಗೂ ಪೋಲಿಸ್ ಸ್ಟೇಷನ್ ಸಿಬ್ಬಂದಿಗಳಿಗೆ ಸಿಹಿ ಹಂಚಿ ಈದ್ ಮಿಲಾದ್ ಆಚರಿಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕು ಉಪ್ಪುಂದ ಗ್ರಾಮದ ಸಂಕದ ಬಾಗಿಲು ಗೋವಿಂದ ಖಾವಿ೯ ಅವರ ಮನೆಗೆ ನಾಮಫಲಕ ಅನಾವರಣ ಕಾರ್ಯಕ್ರಮ ನಡೆಯಿತು. ಸಾಹಿತಿಗಳಾದ ಉಪ್ಪುಂದ ರಮೇಶ್ ವೈದ್ಯ ಅವರು ಉದ್ಘಾಟನೆಯೊಂದಿಗೆ ನಾಮಫಲಕ ಅನಾವರಣಗೊಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ನಿವೃತ್ತ ಸೈನಿಕರಾದ ಚಂದ್ರಶೇಖರ ನಾವುಡರು ‘ಭಾರತ ಸ್ವಾತಂತ್ರ್ಯಕ್ಕೆ ಕರಾವಳಿಗರ ಕೊಡುಗೆ ಮತ್ತು ಉಪ್ಪುಂದ ಗೋವಿಂದ ಖಾವಿ೯ ಅವರ ಸೇವೆ’ ಎನ್ನುವ ವಿಚಾರದಲ್ಲಿ ಉಪನ್ಯಾಸ ನೀಡಿದರು. ಕಾಯ೯ಕ್ರಮದ ಅಧ್ಯಕ್ಷತೆಯನ್ನು ಉಪ್ಪುಂದ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲಕ್ಷ್ಮೀ ಖಾವಿ೯ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಉದ್ಯಮಿ ಶರತ್ ಶೆಟ್ಟಿ ಉಪಸ್ಥಿತರಿದ್ದರು. ಕಾಯ೯ಕ್ರಮಕ್ಕೆ ಸೇವಾ ಟ್ರಸ್ಟ್ (ರಿ) ಮೂಡುಗಿಳಿಯಾರು ಹಾಗೂ ಗೋವಿಂದ ಖಾರ್ವಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಸಹಕಾರ ನೀಡಿದರು. ಅಧ್ಯಾಪಕ ರವೀಂದ್ರ ಹೆಚ್ ಕಾರ್ಯಕ್ರಮ ನಿರೂಪಿಸಿದರು. ಸ್ವರಾಜ್ಯ 75 ಕಾಯ೯ಕ್ರಮ ಸಂಚಾಲಕರಾದ ಪ್ರದೀಪ ಕುಮಾರ್ ಬಸ್ರೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಸನ್ನ ಖಾರ್ವಿ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ಇದರ ವತಿಯಿಂದ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ನಡೆಯುತ್ತಿರುವ 47ನೇ ವರ್ಷದ ಶ್ರೀ ಶಾರದೋತ್ಸವ ಸಮಾರಂಭಕ್ಕೆ ಶನಿವಾರ ಭೇಟಿ ನೀಡಿದ ಕೆನರಾ ಬ್ಯಾಂಕಿನ ಉಡುಪಿ ವಿಭಾಗೀಯ ಕಛೇರಿಯ ಸಹಾಯಕ ಮಹಾಪ್ರಬಂಧಕ ಕೆ. ಕಾಳಿ ಅವರನ್ನು ಶ್ರೀ ಶಾರದೋತ್ಸವ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಶ್ರೀ ಶಾರದೋತ್ಸವ ಸಮಿತಿ ಗೌರವಾಧ್ಯಕ್ಷ ಜಿ.ನಾರಾಯಣ ಆಚಾರ್ಯ, ಅಧ್ಯಕ್ಷ ಸತೀಶ ಜಿ., ಕೆನರಾ ಬ್ಯಾಂಕಿನ ಡಿವಿಜನಲ್ ಮ್ಯಾನೇಜರ್ ರತ್ನಾಕರ ಗಾಣಿಗ, ಗಂಗೊಳ್ಳಿ ಶಾಖಾ ಪ್ರಬಂಧಕ ವಿಷ್ಣುಮೂರ್ತಿ ಯಾಜಿ, ಶ್ರೀ ಶಾರದೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ರವೀಂದ್ರ ಪಟೇಲ್, ಕಾರ್ಯದರ್ಶಿ ಗೋಪಾಲ ಖಾರ್ವಿ ದಾವನಮನೆ, ಮಹಿಳಾ ಮಂಡಳಿ ಅಧ್ಯಕ್ಷೆ ಅನಿತಾ ನಾಗರಾಜ ಶೇಟ್, ಕಾರ್ಯದರ್ಶಿ ಸ್ವಾತಿ ಮಡಿವಾಳ, ಸಮಿತಿಯ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇತಿಹಾಸ ಪ್ರಸಿದ್ಧ ಬಸ್ರೂರು ಶ್ರೀ ಮಹಾಲಸಾ ನಾರಾಯಣಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ವಾಡಿಕೆಯಂತೆ ನಡೆಯುವ ಚಂಡಿಕಾಹವನವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಬೆಳಗ್ಗೆ ಶ್ರೀ ದೇವತಾ ಪ್ರಾರ್ಥನೆಯೊಂದಿಗೆ ಯಜ್ಞ ಅನು?ನಗಳು ಪ್ರಾರಂಭಗೊಂಡಿತು. ಮಧ್ಯಾಹ್ನ ಯಜ್ಞ ಪೂರ್ಣಾಹುತಿ, ಮಹಾಮಂಗಳಾರತಿ, ಶ್ರೀ ದೇವಿಗೆ ಸಮರ್ಪಿಸಿದ ಹರಕೆ ಸೀರೆಗಳ ಏಲಂ ಹಾಗೂ ಮಹಾ ಸಮಾರಾಧನೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ಪುರೋಹಿತರ ನೇತೃತ್ವದಲ್ಲಿ ನಡೆಯಿತು. ದೇವಳದ ಧರ್ಮದರ್ಶಿಗಳು, ಅರ್ಚಕರು, ಸೇವಾದಾರರು, ಕುಳಾವಿ ಭಜಕರು, ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀದೇವರ ಪ್ರಸಾದ ಸ್ವೀಕರಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕೆನರಾ ಬ್ಯಾಂಕ್ ವತಿಯಿಂದ ಶ್ರೀ ಶಾರದಾ ಮಂಟಪಕ್ಕೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೊಡುಗೆಯಾಗಿ ನೀಡಲಾಯಿತು. ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕಿನ ಉಡುಪಿ ವಿಭಾಗೀಯ ಕಛೇರಿಯ ಸಹಾಯಕ ಮಹಾಪ್ರಬಂಧಕ ಕೆ.ಕಾಳಿ ಅವರು ಕೆನರಾ ಬ್ಯಾಂಕ್ ವತಿಯಿಂದ ಕೊಡಮಾಡಿದ ಶುದ್ಧ ಕುಡಿಯವ ನೀರಿನ ಘಟಕವನ್ನು ಶ್ರೀ ಶಾರದೋತ್ಸವ ಸಮಿತಿ ಗೌರವಾಧ್ಯಕ್ಷ ಜಿ.ನಾರಾಯಣ ಆಚಾರ್ಯ ಮತ್ತು ಅಧ್ಯಕ್ಷ ಸತೀಶ ಜಿ. ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಕೆನರಾ ಬ್ಯಾಂಕಿನ ಡಿವಿಜನಲ್ ಮ್ಯಾನೇಜರ್ ರತ್ನಾಕರ ಗಾಣಿಗ, ಗಂಗೊಳ್ಳಿ ಶಾಖಾ ಪ್ರಬಂಧಕ ವಿಷ್ಣುಮೂರ್ತಿ ಯಾಜಿ, ಶ್ರೀ ಶಾರದೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ರವೀಂದ್ರ ಪಟೇಲ್, ಕಾರ್ಯದರ್ಶಿ ಗೋಪಾಲ ಖಾರ್ವಿ ದಾವನಮನೆ, ಮಹಿಳಾ ಮಂಡಳಿ ಅಧ್ಯಕ್ಷೆ ಅನಿತಾ ನಾಗರಾಜ ಶೇಟ್, ಕಾರ್ಯದರ್ಶಿ ಸ್ವಾತಿ ಮಡಿವಾಳ, ಸಮಿತಿಯ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾಡಳಿತದ ವತಿಯಿಂದ, ಭಾರತೀಯ ನಾಗರೀಕ ಸೇವಾ ಪರೀಕ್ಷೆ ( ಯುಪಿಎಸ್ಸಿ) ಮತ್ತು ಕರ್ನಾಟಕ ನಾಗರೀಕ ಸೇವಾ ಪರೀಕ್ಷೆ (ಕೆಪಿಎಸ್ಸಿ) ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಇಚ್ಛಿಸುವ ಉಡುಪಿ ಜಿಲ್ಲೆಯ ಅಭ್ಯರ್ಥಿಗಳಿಗೆ, ಜಿಲ್ಲಾಡಳಿತ ವತಿಯಿಂದ ತರಬೇತಿಯನ್ನು ಶೀಘ್ರದಲ್ಲಿ ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಕೊನೆಯ ವರ್ಷದ ಪದವಿಯನ್ನು (ಯಾವುದೇ ಪದವಿ) ವ್ಯಾಸಂಗ ಮಾಡುತ್ತಿರುವ ಅಥವಾ ಪದವೀಧರರಾಗಿದ್ದು, ಉದ್ಯೋಗದಲ್ಲಿರುವ / ನಿರುದ್ಯೋಗಿ ವಿದ್ಯಾರ್ಥಿಗಳು ತರಬೇತಿಗೆ ಅರ್ಹರಾಗಿರುತ್ತಾರೆ. ಉಡುಪಿ ನಗರದ ಸಾರ್ವಜನಿಕ ಗ್ರಂಥಾಲಯನ್ನು ತರಬೇತಿ ಕೇಂದ್ರವಾಗಿಸಿಕೊAಡು, ನಿಗಧಿಯಾಗಿರುವ ಪಠ್ಯಾನುಸಾರ ತರಗತಿಗಳು, ಗ್ರಂಥಾಲಯ, ಪುಸ್ತಕಗಳು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯವಿರುವ ಪತ್ರಿಕೆಗಳು, ನಿಯತಕಾಲಿಕೆಗಳು, ಅಂರ್ತಜಾಲದ ವ್ಯಾಪಕ ಬಳಕೆ, ಗುಂಪು ಚರ್ಚೆಗಳು, ಇತ್ಯಾದಿ ಮೂಲಸೌಕರ್ಯ ಮತ್ತು ಅವಕಾಶಗಳನ್ನು ಕಲ್ಪಿಸಿಕೊಡಲಾಗುವುದು. ಈ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಯುಪಿಎಸ್ಸಿ/ ಕೆಪಿಎಸ್ಸಿ ಸೇರಿದಂತೆ ಯಾವುದೇ ಸ್ಪರ್ಧಾತ್ಮಕ ವಿಷಯಗಳಲ್ಲಿ ಪರಿಣಿತಿ ಪಡೆಯಬಹುದಾಗಿದೆ. ಆಸಕ್ತ ವಿದ್ಯಾರ್ಥಿಗಳಿಗೆ ಆನ್ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಲು https://udupi.nic.in/ ವೆಬ್‌ಸೈಟ್‌ನಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಅಕ್ಟೋಬರ್ 21 ರ ಒಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಭತ್ತದ ಕಟಾವು ಸನ್ನಿಹಿತವಾಗಿದ್ದು, ಹೊರಜಿಲ್ಲೆ ಹಾಗೂ ರಾಜ್ಯಗಳಿಂದ ಕಂಬೈನ್ಡ್ ಹಾರ್ವೆಸ್ಟರ್ಗಳು ಜಿಲ್ಲೆಗೆ ಆಗಮಿಸುತ್ತಿವೆ. ಜಿಲ್ಲೆಯಲ್ಲಿ ಕೂಲಿಯಾಳುಗಳ ಸಮಸ್ಯೆಯಿದ್ದು, ಕಟಾವಿನ ಅವಧಿಯಲ್ಲಿ ಮಳೆ ಸಹ ಬರುವುದರಿಂದ ರೈತರು ಭತ್ತದ ಬೆಳೆ ಕಟಾವಿಗೆ ಅನಿವಾರ್ಯವಾಗಿ ಕಂಬೈನ್ಡ್ ಹಾರ್ವೆಸ್ಟರ್ಗಳನ್ನು ಅವಲಂಬಿಸಿದ್ದಾರೆ. ಪೂರಕವಾಗಿ ಜಿಲ್ಲಾಡಳಿತ ಸರ್ಕಾರದ ನೆರವಿನೊಂದಿಗೆ ಸ್ಥಾಪಿಸಲ್ಪಟ್ಟ ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ಲಭ್ಯವಿರುವ ಕರ್ತಾರ್ ಮಾದರಿ ಕಂಬೈನ್ಡ್ ಹಾರ್ವೆಸ್ಟರ್ನ ಕಟಾವಿಗೆ ಜಿಲ್ಲಾ ಸಮಿತಿಯಿಂದ ಪ್ರತಿ ಗಂಟೆಗೆ ರೂ. 1,800 ಬಾಡಿಗೆ ದರವನ್ನು ನಿಗದಿಪಡಿಸಲಾಗಿದೆ. ಕೆಲವೊಂದು ಖಾಸಗಿ ಕಂಬೈನ್ಡ್ ಹಾರ್ವೆಸ್ಟರ್ ಮಾಲಕರು ಸ್ಥಳೀಯ ಮಧ್ಯವರ್ತಿಗಳೊಂದಿಗೆ ಸೇರಿ ರೈತರಿಂದ ಭತ್ತ ಕಟಾವಿಗೆ ಹೆಚ್ಚಿನ ಬಾಡಿಗೆ ದರವನ್ನು ಪಡೆಯುತ್ತಿರುವ ಬಗ್ಗೆ ರೈತ ಸಂಘಟನೆಗಳು ಹಾಗೂ ರೈತರಿಂದ ನಿರಂತರವಾಗಿ ಜಿಲ್ಲಾಡಳಿತಕ್ಕೆ ದೂರುಗಳು ಬರುತ್ತಿದ್ದು ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ. ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ಕೇವಲ 8 ಸಂಖ್ಯೆಯ ಕಟಾವು ಯಂತ್ರಗಳು ಮಾತ್ರ ಲಭ್ಯವಿದ್ದು, ಜಿಲ್ಲೆಯ ರೈತರ ಬೇಡಿಕೆಯನ್ನು ಪೂರೈಸಲು ಖಾಸಗಿಯಾಗಿ ಬರುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ವಿಶ್ವ ಅಂಚೆ ದಿನಾಚರಣೆ ಪ್ರಯುಕ್ತ ಗುಜ್ಜಾಡಿ ಅಂಚೆ ಕಛೇರಿಯಲ್ಲಿ ಪೋಸ್ಟ್‌ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಪಾಂಡುರಂಗ ಅವರನ್ನು ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಗುಜ್ಜಾಡಿ ಅಂಚೆ ಕಛೇರಿ ಸಮೀಪ ನಡೆದ ಸರಳ ಕಾರ್ಯಕ್ರಮದಲ್ಲಿ ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ ಎಂ.ಜಿ. ಅವರು ಪಾಂಡುರಂಗ ಅವರನ್ನು ಸನ್ಮಾನಿಸಿದರು. ಗುಜ್ಜಾಡಿ ಅಂಚೆ ಕಛೇರಿಯ ಪೋಸ್ಟ್ ಮಾಸ್ಟರ್ ಕುಮಾರ್, ಝೋನಲ್ ಲೆಫ್ಟಿನೆಂಟ್ ಕೆ.ರಾಮನಾಥ ನಾಯಕ್, ಮಾಜಿ ಅಧ್ಯಕ್ಷ ಲಕ್ಷ್ಮೀಕಾಂತ ಮಡಿವಾಳ ಮತ್ತಿತರರು ಉಪಸ್ಥಿತರಿದ್ದರು.

Read More