Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಧರ್ಮದ ಮೇಲೆ ನಿಷ್ಠೆ ಹೊಂದಿರುವ ಮೇಸ್ತ ಸಮಾಜದ ಅಭಿವೃದ್ಧಿ ಕಾರ್ಯಗಳಿಗೆ ಸರಕಾರದಿಂದ ಈಗಾಗಲೇ ಸುಮಾರು 50 ಲಕ್ಷ ಮಂಜೂರಾಗಿದ್ದು, ಮುಂದಿನ ದಿನಗಳಲ್ಲಿ ಗುಜ್ಜಾಡಿ ಬೆಣ್ಗೆರೆ ಶ್ರೀ ನಾಗ ದೇವಸ್ಥಾನದ ಅಭಿವೃದ್ಧಿಗೆ ಮತ್ತು ಸಮಾಜದ ಅಭಿವೃದ್ಧಿಗೆ ಸರಕಾರದಿಂದ ಅಗತ್ಯ ನೆರವು ನೀಡಲು ಪ್ರಯತ್ನಿಸಲಾಗುವುದು. ಕಳೆದ 46 ವರ್ಷಗಳಿಂದ ನಿರಂತರವಾಗಿ ನಾಗಮಂಡಲೋತ್ಸವವನ್ನು ನಡೆಸಿಕೊಂಡು ಬಂದಿರುವ ಮೇಸ್ತ ಸಮಾಜ ಬಾಂಧವರು ದೇವಸ್ಥಾನದಲ್ಲಿ ನಿರಂತರವಾಗಿ ಧಾರ್ಮಿಕ ಚಟುವಟಿಕೆಗಳನ್ನು ಹಮ್ಮಿಕೊಂಡು ದೇವರ ಸಾನಿಧ್ಯ ವೃದ್ಧಿಗೆ ಶ್ರಮಿಸುತ್ತಿರುವುದು ಮತ್ತು ದೇವಸ್ಥಾನದ ಪ್ರತೀಕವಾಗಿರುವ ಸ್ವಾಗತ ಗೋಪುರ ನಿರ್ಮಿಸಿರುವುದು ಶ್ಲಾಘನೀಯ ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಹೇಳಿದರು. ಗುಜ್ಜಾಡಿ ಗ್ರಾಮದ ಬೆಣ್ಗೆರೆ ಶ್ರೀ ನಾಗ ದೇವಸ್ಥಾನದ ವತಿಯಿಂದ ಗುಜ್ಜಾಡಿ-ಬೆಣ್ಗೆರೆ ರಸ್ತೆ ಸಮೀಪ ನಿರ್ಮಿಸಲಾಗಿರುವ ಸ್ವಾಗತ ಗೋಪುರವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ದೇವಸ್ಥಾನದ ಅಧ್ಯಕ್ಷ ಉಮೇಶ ಎಲ್.ಮೇಸ್ತ, ಕಾರ್ಯದರ್ಶಿ ಶ್ರೀಧರ ಪಿ.ಮೇಸ್ತ, ಗುಜ್ಜಾಡಿ ಗ್ರಾಪಂ ಮಾಜಿ ಅಧ್ಯಕ್ಷ ಹರೀಶ ಮೇಸ್ತ, ಮೇಸ್ತ ಸಮಾಜದ ಹಿರಿಯರಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ಸಿದ್ಢಾರ್ಥ ಜೆ ಶೆಟ್ಟಿ ಕಾಲೇಜಿನ ಸಂಸ್ಥಾಪಕರಾದ ಮಾಜಿ ಸಂಸದ ಐ ಎಂ ಜಯರಾಮ ಶೆಟ್ಟಿಯವರ ಪುತ್ಹಳಿಗೆ ಹಾರಾರ್ಪಣೆ ಮಾಡಿ ಗೌರವವನ್ನು ಸಲ್ಲಿಸಿದರು. ಸಂಸ್ಥಾಪಕರ ಸಾಧನೆ ಮತ್ತು ಸೇವೆಗಳ ಸಾರಾಂಶ ವಿರುವ ವಿಡಿಯೊವನ್ನ ಪ್ರದರ್ಶಿಸಿ, ಶ್ರದ್ಧಾಂಜಲಿ ಅರ್ಪಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಚಂದ್ರರಾವ್ ಮದಾನೆ ಮಾತನಾಡಿ, ದಿ|ಜಯರಾಮ ಶೆಟ್ಟಿ ಇವರ ಜೊತೆಗಿನ ತಮ್ಮ ಒಡನಾಟದ ಮತ್ತು ಅನುಭವವನ್ನು ಹಂಚಿಕೊಂಡರು. ಇದೇ ಸಂದರ್ಭದಲ್ಲಿ ಕಾಲೇಜಿನ ಬೆಳವಣಿಗೆಯಲ್ಲಿ ಶ್ರಮಿಸಿದ ಸಿಬ್ಬಂದಿಗಳಿಗೆ ಐಎಂಜೆ ಪ್ರಶಸ್ತಿ ಮತ್ತು ಫಲಕ ಗಳನ್ನ ನೀಡಿ ಸನ್ಮಾನಿಸಲಾಯಿತು. ಜೊತೆಗೆ ಕಾಲೇಜಿನ ವಿಧ್ಯಾರ್ಥಿಗಳಿಗೆ ಆಯೋಜಿಸಲಾದ ಪೆನ್ಸಿಲ್ ಉಪಯೋಗಿಸಿ ಸಂಸ್ಥಾಪಕರ ಭಾವಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು. ಕಾಲೇಜಿನ ಉಪ ಪ್ರಾಂಶುಪಾಲ ಪ್ರೊ. ಮೆಲ್ವಿನ್ ಡಿ ಸೋಜಾ, ಕಾಲೇಜಿನ ಅಕಾಡೆಮಿಕ್ ಡೀನ್ ಡಾ. ಪ್ರತಿಭಾ ಪಟೇಲ್ ಮತ್ತು ಪ್ಲೇಸ್ಮೆಂಟ್ ಡೀನ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದಾವಣಗೆರೆಯಲ್ಲಿ ನಡೆದ ರಾಜ್ಯಮಟ್ಟದ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ 66 ಕೆಜಿ ವಿಭಾಗದಲ್ಲಿ 115 ಕೆಜಿ ಭಾರವನ್ನು ಎತ್ತುವ ಮೂಲಕ ಸತೀಶ್ ಖಾರ್ವಿ ಅವರು ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಚಿನ್ನದ ಪದಕ ಪಡೆದ ಇವರು ಕುಂದಾಪುರದ ಹರ್ಕುಲಸ್ ಜಿಮ್ನ ವ್ಯವಸ್ಥಾಪಕರು ಹಾಗೂ ತರಬೇತುದಾರರಾಗಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಕೀಲ ಸದಾನಂದ ಶೆಟ್ಟಿ ಅವರು ಬಡ್ಡಿ ವ್ಯವಹಾರ ನಡೆಸಿರುವುದು ಸುಳ್ಳು ಎಂದಾದರೆ ತನಿಕೆ ನಡೆಯಲಿ. ಆಗಲಾದರೂ ಅವರು ನಡೆಸಿದ ಸಂಚು ಹಾಗೂ ಸತ್ಯ ಹೊರಬರಲಿದೆ ಎಂದು ಬಿಜೆಪಿ ಮುಖಂಡ ಸದಾನಂದ ಉಪ್ಪಿನಕುದ್ರು ಹೇಳಿದ್ದಾರೆ. ವಕೀಲ ಸದಾನಂದ ಶೆಟ್ಟಿ ಅವರು ಕುಂದಾಪುರದಲ್ಲಿ ನಡೆಸಿರುವ ಪತ್ರಿಕಾಗೋಷ್ಠಿಯಲ್ಲಿ ಸುಳ್ಳು ಮಾಹಿತಿ ನೀಡಿದ್ದು, ತಾನು ಬಡ್ಡಿ ವ್ಯವಹಾರ ನಡೆಸಿಲ್ಲ ಎಂದಿದ್ದಾರೆ. ಆದರೆ ಅವರು ಅದೇ ವ್ಯವಹಾರದಲ್ಲಿ ತೊಡಗಿಕೊಂಡಿರುವುದಕ್ಕೆ ನನ್ನ ಬಳಿಯು ದಾಖಲೆಗಳಿವೆ. ಸುಖಾಸುಮ್ಮನೆ ಮಾತನಾಡಿಲ್ಲ ಎಂದು ಸದಾನಂದ ಉಪ್ಪಿನಕುದ್ರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನಾನು ಅವರಿಂದ ಬಡ್ಡಿ ಹಣ ಪಡೆಯುವಾಗ ನನ್ನಿಂದ ಬ್ಯ್ಲಾಂಕ್ ಚೆಕ್ ತೆಗೆದುಕೊಂಡು, ಖಾಲಿ ಬಾಂಡ್ ಪೇಪರ್ ಮೇಲೆ ಸಹಿ ಹಾಕಿಸಿಕೊಂಡಿದ್ದರು. ಅವರು ಹಾಗೂ ನನ್ನ ನಡುವೆ ಯಾವುದೇ ಜಾಗದ ವ್ಯವಹಾರ ನಡೆದಿಲ್ಲ. ಖಾಲಿ ಬಾಂಡ್ ಪೇಪರ್ ಮೇಲೆ ಅವರು ಜಾಗ ಮಾರಿದ್ದಾಗಿ ಬರೆದುಕೊಂಡಿರಬಹುದು. ಆದರೆ ನಾನು ಅವರಿಗೆ ಜಾಗ ಮಾರುವ ಪ್ರಸ್ತಾಪವೇ ಮಾಡಿಲ್ಲ. ನಾನು ಹೇಳುವುದು ಸುಳ್ಳು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕನ್ನಡದ ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಭಾನುವಾರ ತಮ್ಮ ಕುಟುಂಬಿಕರೊಂದಿಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಳದಲ್ಲಿ ಗಣಹೋಮ ನೆರವೇರಿಸಿದರು. ಧಾರ್ಮಿಕ ಕ್ಷೇತ್ರಗಳಿಗೆ ಯಾತ್ರೆ ಕೈಗೊಂಡಿರುವ ಅವರು ಕೊಲ್ಲೂರು, ಗುಡ್ಡಟ್ಟು, ಆನೆಗುಡ್ಡೆ, ಮಂದರ್ತಿ, ಮಣಿಕಲ್, ಧರ್ಮಸ್ಥಳ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಭೇಟಿ ನೀಡಿದ್ದಾರೆ. ಕುಂದಾಪುರ ತಾಲೂಕಿನ ಕೆರಾಡಿಯವರಾದ ನಟ ರಿಷಬ್ ಶೆಟ್ಟಿ ಅವರು ಕಿರಿಕ್ ಪಾರ್ಟಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡುವಿನಂತಹ ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿರುವುದಲ್ಲದೇ, ಬೆಲ್ ಬಾಟಂ, ಹೀರೋ ಮೊದಲಾದ ಸಿನೆಮಾಗಳಲ್ಲಿ ನಾಯಕ ನಟನಾಗಿಯೂ ಸೈ ಎನಿಸಿಕೊಂಡಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇತ್ತಿಚಿಗೆ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಕೊಲ್ಲೂರಿನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ವಿರುದ್ಧ ಮಾಡಿದ ಬೆದರಿಕೆ ಹಾಗೂ ಮಾನಸಿಕ ಹಿಂಸೆ ಆರೋಪಗಳು ಮತ್ತು ಅವುಗಳಿಗೆ ಸುಕುಮಾರ ಶೆಟ್ಟಿ ನೀಡಿದ ವಾಸ್ತವ ಅಂಶ ಆಧಾರಿತ ಸ್ಪಷ್ಟನೆಯ ಹಿನ್ನೆಲೆಯಲ್ಲಿ ಪಕ್ಷ ಕಾರ್ಯಕರ್ತರಲ್ಲಿ, ಮತದಾರರಲ್ಲಿ ಗೊಂದಲ ಏರ್ಪಟ್ಟಿದೆ. ಈ ಪ್ರಕರಣವನ್ನು ವಿರೋಧ ಪಕ್ಷಗಳು ತಮ್ಮ ಲಾಭಕ್ಕೆ ಬಳಸಿಕೊಳ್ಳಲು ತೊಡಗಿವೆ. ಈ ಕಾರಣದಿಂದ ಮತ್ತು ಸದಾನಂದ ಕುಟುಂಬದವರ ಮೇಲಿನ ಮಾನವೀಯತೆಯಿಂದ ಅವರ ವಿರುದ್ಧ ದಾಖಲಿಸಿರುವ ಚೆಕ್ ಬೌನ್ಸ್ ಪ್ರಕರಣವನ್ನು ಹಿಂತೆಗೆದುಕೊಳ್ಳಲು ಶಾಸಕರು ನಿರ್ಧರಿಸಿದ್ದಾರೆ ಎಂದು ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್‌ಕುಮಾರ ಶೆಟ್ಟಿ ತಿಳಿಸಿದರು. ಭಾನುವಾರ ಇಲ್ಲಿನ ಪಕ್ಷ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ ಬಿಜೆಪಿ ಶಿಸ್ತಿನ ಪಕ್ಷ. ಅದರಲ್ಲಿ ಹಿರಿಯರು, ಕಿರಿಯರು ಒಂದು ಕುಟುಂಬದ ಸದಸ್ಯರಿದ್ದಂತೆ. ಒಂದು ಕೆಟ್ಟ ಘಳಿಗೆಯಲ್ಲಿ ಈ ಬೆಳವಣಿಗೆ ಆಗಿದೆ. ಇದನ್ನು ಮುಂದುವರಿಸಬಾರದೆಂದು ಪಕ್ಷದ ಜಿಲ್ಲಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಪ್ತಿ ಗ್ರಾಮದ ಸುಣ್ಣಾರಿಯ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಉಡುಪಿ ಜಿಲ್ಲಾ ರೈತ ಸಂಘದ ನೇತೃತ್ವದಲ್ಲಿ ವಾರಾಹಿ ಎಡದಂಡೆ ನೀರಾವರಿ ಯೋಜನೆ ಅಚ್ಚುಕಟ್ಟು ಪ್ರದೇಶದ ರೈತರ ಸಭೆ ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯರಾದ ಕೆ. ಪ್ರತಾಪಚಂದ್ರ ಶೆಟ್ಟಿ ಅವರು ವಾರಾಹಿ ನೀರಾವರಿ ಯೋಜನೆಯ ಉದ್ದೇಶ ರೈತರಿಗೆ ನೀರು ಕೊಡುವುದು. ಮೂಲ ಯೋಜನೆಯಲ್ಲಿರುವಂತೆ ನೀರು ಆರ್ಹ ರೈತರನ್ನು ತಲುಪಬೇಕು. ರೈತರ ತಾಳ್ಮೆಯನ್ನು ಪರೀಕ್ಷೆ ಮಾಡುವುದು ಸರಿಯಲ್ಲ. ಅದಷ್ಟು ಬೇಗ ಮೂಲಯೋಜನೆಯಲ್ಲಿರುವ ಎಲ್ಲ ಗ್ರಾಮಗಳಿಗೂ ನೀರು ಕೊಡುವ ಕೆಲಸ ಆಗಬೇಕು ಎಂದರು. ರೈತ ಸಂಘ ಧರಣಿ ಸತ್ಯಾಗ್ರಹ ನಡೆಸಿ ಆರು ವರ್ಷವಾಯಿತು. ಇನ್ನೂ ಕೂಡಾ ಎಡದಂಡೆ ಯೋಜನೆಯೇ ಪೂರ್ಣವಾಗಿಲ್ಲ. ಇಷ್ಟು ಸಮಯ ಕಾದಿದ್ದೇವೆ. ತಾಂತ್ರಿಕ ಸಮಸ್ಯೆಗಳು, ಹಣಕಾಸು, ಇಂಜಿನಿಯರ್, ಭೂಸ್ವಾಧೀನ ಇತ್ಯಾದಿ ಸಮಸ್ಯೆಗಳು ನಮಗೂ ಅರಿವಿದೆ. ಇನ್ನೂ ಅದೆಷ್ಟು ಬೇಗ ಕೆಲಸ ಪೂರ್ಣಗೊಳಿಸಿ. ಇವತ್ತು ಎಲ್ಲರಿಗೂ ವಾರಾಹಿ ನೀರಾವರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬಿಜೆಪಿ ಮುಖಂಡರಾದ ಸದಾನಂದ ಉಪ್ಪಿನಕುದ್ರು ಅವರಿಗೆ ತಾನು ಬಡ್ಡಿಯಲ್ಲಿ ಸಾಲ ನೀಡಿಲ್ಲ. ಅವರಿಂದ ಯಾವುದೇ ಬ್ಲ್ಯಾಂಕ್ ಚೆಕ್ ಪಡೆದಿಲ್ಲ. ಈ ಹಿಂದೆ ಜಾಗ ಖರೀದಿಯ ವ್ಯವಹಾರದಲ್ಲಿ ಅವರು ನೀಡಿದ ಚೆಕ್ಗಳು ಬೌನ್ಸ್ ಆಗಿದ್ದು ಆ ಪ್ರಕರಣ ಕೋರ್ಟ್ನಲ್ಲಿದೆ ಎಂದು ಕುಂದಾಪುರದ ನ್ಯಾಯವಾದಿ ಸದಾನಂದ ಶೆಟ್ಟಿ ಹೇಳಿದ್ದಾರೆ. ಶನಿವಾರ ಕುಂದಾಪುರ ಪ್ರೆಸ್ ಕ್ಲಬ್ನಲ್ಲಿ ಕರೆದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ ಸದಾನಂದ ಉಪ್ಪಿನಕುದ್ರು ಅವರಿಗೆ ತಾನು ವಂಚನೆ ಮಾಡಿದ್ದಾರೆ ಎಂಬ ಆರೋಪಕ್ಕೆ ಸ್ಪಷನೆ ನೀಡಿ ಸದಾನಂದ ಉಪ್ಪಿನಕುದ್ರು ನನ್ನ ಮೇಲೆ ಮಾನಹಾನಿಕರ ಮತ್ತು ಸುಳ್ಳು ಆರೋಪಗಳನ್ನು ಜಗದ್ವಿಖ್ಯಾತ ಕೊಲ್ಲೂರು ಮೂಕಾಂಬಿಕಾ ದೇಗುಲದಲ್ಲಿ ಮಾಡಿದ್ದಾರೆ. ಇದರ ಹಿನ್ನೆಲೆ ಏನು, ಉದ್ದೇಶವೇನು ಮತ್ತು ಇದರ ಹಿಂದೆ ಯಾರಿದ್ದಾರೆ ಎನ್ನುವುದು ನನಗೆ ತಿಳಿದಿಲ್ಲ. ಆದರೆ ಸದಾನಂದ ಉಪ್ಪಿನಕುದ್ರು ಮಾಡಿರುವ ಆರೋಪಗಳು ಸಂಪೂರ್ಣ ಸತ್ಯಕ್ಕೆ ದೂರವಾಗಿದೆ ಎಂದು ಸದಾನಂದ ಶೆಟ್ಟಿ ಹೇಳಿದ್ದಾರೆ. ಅವರು ಮಾಡಿರುವ ಆರೋಪಕ್ಕೆ ಒಂದೇ ಒಂದು ಸಾಕ್ಷ್ಯವನ್ನು ಅವರು ನೀಡಿಲ್ಲ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ವೈದ್ಯಕೀಯ ವೃತ್ತಿ ಒಂದು ವೃತ್ತಿ ಮಾತ್ರವಲ್ಲದೆ, ಜನರ ನಿಸ್ವಾರ್ಥ ಸೇವೆ ಮಾಡಲು ಇರುವ ಮಾರ್ಗ. ವೈದ್ಯಕೀಯ ಶಿಕ್ಷಣದಲ್ಲಿ ಪ್ರಮಾಣಪತ್ರ ಪಡೆದುಕೊಂಡು ಹೆಸರಿಗೆ ವೈದ್ಯರಾಗದೇ ಜನಸೇವೆ ಮಾಡಿ ಜನರಿಂದ ಮೆಚ್ಚುಗೆ ಪಡೆಯಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದರು. ಮೂಡುಬಿದಿರೆಯ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಆಳ್ವಾಸ್ ಆಯುರ್ವೇದ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ನಡೆದ “ಸಂಪನ್ನಮ್” ಬೀಳ್ಕೊಡುಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಒಬ್ಬ ಜವಾಬ್ದಾರಿಯುತ ವೈದ್ಯನಾಗಿ ಕೆಲಸ ಮಾಡಿದಾಗ ಮಾತ್ರ, ಜನರಿಗೆ ವಿಶ್ವಾಸ ಮೂಡಲು ಸಾಧ್ಯ. ಲಾಭಕ್ಕಾಗಿ ಕೆಲಸ ಮಾಡದೇ ಜನರ ನಂಬಿಕೆ ಉಳಿಸಿಕೊಳ್ಳುವ ವೈದ್ಯರಾಗಬೇಕು ಎಂದು ಕಿವಿಮಾತು ಹೇಳಿದರು. ಮನುಷ್ಯ ಮಾಡುವ ತಪ್ಪಿನಿಂದ ಕೊರೋನಾದಂತಹ ಸಾಂಕ್ರಾಮಿಕ ರೋಗಗಳು ಬರುವುದು ಸಹಜ. ಹಾಗೆಂದು ಭಯಪಟ್ಟು ಪಲಾಯನ ಮಾಡುವುದರ ಬದಲು, ಅದನ್ನು ಎದುರಿಸಬೇಕು. ಓಡಿ ಹೋಗುವವರಾದರೆ, ವೈದ್ಯಕೀಯ ಪದವಿ ಪಡೆಯುವುದೇ ವ್ಯರ್ಥ” ಎಂದು ಹೇಳಿದ ಡಾ. ಆಳ್ವ, ಕೊರೊನಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಸಮೀಪದ ಅಶೋಕ ದೇವಾಡಿಗ ಎನ್ನುವವರ ಅಂದಾಜು ೩೦ ಅಡಿಯ ಬಾವಿಗೆ ಚಿರತೆ ಬಿದ್ದಿರುವುದನ್ನು ಕಂಡ ಮನೆಯವರು ಸ್ಥಳೀಯರ ಸಹಕಾರದಿಂದ ಕಾರ್ಯಾಚರಣೆ ನಡೆಸಿ ಚಿರತೆಯನ್ನು ರಕ್ಷಿಸಿದ್ದಾರೆ. ಚಿರತೆ ಬಾವಿಯೊಳಗೆ ಇರುದನ್ನು ಗಮನಿಸಿ ಸ್ಥಳೀಯರಿಗೆ ತಿಳಿಸಿ ಬಳಿಕ ಅರಣ್ಯ ಇಲಾಖೆಗೆ ತಿಳಿಸಿದರು. ತಕ್ಷಣ ಆಗಮಿಸಿದ ನೇರಳಕಟ್ಟೆ ಉಪವಯ ಅರಣ್ಯಾಧಿಕಾರಿ ಶರತ್ ಗಾಣಿಗ ಹಾಗೂ ಸಿಬ್ಬಂದಿ, ಸ್ಥಳೀಯರ ನೆರವಿನೊಂದಿಗೆ ಕುಂದಾಪುರ ವಲಯ ಅರಣ್ಯಾಧಿಕಾರಿ ಪ್ರಭಾಕರ್ ಕುಲಾಲ್ ಸ್ಥಳಕ್ಕಾಗಮಿಸಿ ಹಗ್ಗ ಹಾಗೂ ಬುಟ್ಟಿಯನ್ನು ಬಳಸಿ ಚಿರತೆಗೆ ಬುಟ್ಟಿಯಲ್ಲಿ ಕುಳಿತುಕೊಳ್ಳಲು ಅವಕಾಶ ಮಾಡಿಕೊಡಲಾಯಿತು. ಸುಮಾರು ಅರ್ಧ ಗಂಟೆ ಕಾರ್ಯಾಚರಣೆ ನಡೆಸಿ ಬೋನಿನ ಸಹಾಯದಿಂದ ಚಿರತೆಯನ್ನು ಮೇಲತ್ತಲಾಯಿತು. ಚಿರತೆ 2 ವರ್ಷ ಪ್ರಾಯ ಎಂದು ಅಂದಾಜಿಸಲಾಗಿದೆ. ಈ ಸಂದರ್ಭ ವಂಡ್ಸೆ ಉಪವಲಯ ಅರಣ್ಯಾಧಿಕಾರಿ ಹೇಮಾ, ಅರಣ್ಯ ರಕ್ಷಕ ಶಿವು ಕುಮಾರ್, ವಿಜಯ, ಬೈಂದೂರು ವಲಯ ಅರಣ್ಯಾಧಿಕಾರಿ ಕಿರಣ್ ಬಾಬು, ಕುಂದಾಪುರ ಉಪವಲಯ ಅರಣ್ಯಾಧಿಕಾರಿ ಉದಯ ಉಪಸ್ಥಿತರಿದ್ದರು.

Read More