ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವ ಸಂದರ್ಭದಲ್ಲಿ ಕೆ.ಪಿ.ಎಂ.ಇ ನವೀಕರಣ ಮಾಡದ ಹಾಗೂ ಕೋವಿಡ್-19 ಮಾರ್ಗಸೂಚಿ ಪಾಲಿಸದ ಉಡುಪಿ ತಾಲೂಕಿನ 16, ಕುಂದಾಪುರ ತಾಲೂಕಿನ 3 ಹಾಗೂ ಕಾರ್ಕಳ ತಾಲೂಕಿನ 7 ಸಂಸ್ಥೆಗಳ ನೋಂದಣಿಯನ್ನು ಕೆ.ಪಿ.ಎಮ್.ಇ ಹಾಗೂ ಎಪಿಡೆಮಿಕ್ ಕಾಯ್ದೆ ಅನ್ವಯ ರದ್ದುಪಡಿಸಲಾಗಿದೆ ಎಂದು ಜಿಲ್ಲಾ ಕೆ.ಪಿ.ಎಮ್.ಇ ಕಮಿಟಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಕಳೆದ ನಾಲ್ಕೈದು ತಿಂಗಳಿನಿಂದ ಮೀನುಗಾರರಿಗೆ ಸೀಮೆಎಣ್ಣೆ ಹಂಚಿಕೆಯಲ್ಲಿ ವ್ಯತ್ಯಯವಾಗುತ್ತಿದ್ದು, ಮೀನುಗಾರಿಕೆಗೆ ತೊಂದರೆಯಾಗುತ್ತಿದೆ. ಹೀಗಾಗಿ ಮೀನುಗಾರರಿಗೆ ಸರಕಾರ ಹಂಚಿಕೆ ಮಾಡಿರುವ ಸೀಮೆಎಣ್ಣೆಯನ್ನು ಸಕಾಲದಲ್ಲಿ ಬಿಡುಗಡೆ ಮಾಡಬೇಕೆಂದು ಗಂಗೊಳ್ಳಿ ಭಾಗದ ಮೀನುಗಾರರು ಆಗ್ರಹಿಸಿದ್ದಾರೆ. ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ 852 ವಿಶೇಷ ರಹದಾರಿಗಳಿದ್ದು 138.876 ಕಿ.ಲೀ ಸೀಮೆಎಣ್ಣೆ ಬೇಡಿಕೆ ಇದೆ. ಇದರಂತೆ ಸರಕಾರ138.876 ಕಿ.ಲೀ. ಸೀಮೆಎಣ್ಣೆಯನ್ನು ಹಂಚಿಕೆ ಮಾಡಿ ಬಿಡುಗಡೆಗೆ ಆದೇಶ ನೀಡಿದೆ. ಆದರೆ ಕೆಎಫ್ಸಿಎಸ್ಸಿ ಯವರು ನ್ಯಾಯಬೆಲೆ ಅಂಗಡಿಗೆ ಕೇವಲ 96.70ಕಿ.ಲೀ ಸೀಮೆಎಣ್ಣೆಯನ್ನು ಮರುಹಂಚಿಕೆ ಮಾಡಿ ಸೀಮೆಎಣ್ಣೆ ಬಿಡುಗಡೆ ಮಾಡಿದ್ದು, ಸುಮಾರು 46 ಕಿ.ಲೀ ಕಡಿಮೆ ಹಂಚಿಕೆ ಮಾಡಿರುವುದು ಗಂಗೊಳ್ಳಿ ಭಾಗದ ಮೀನುಗಾರರ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ ಡಿಸೆಂಬರ್ ತಿಂಗಳಿನಲ್ಲಿ ಸೀಮೆಎಣ್ಣೆ ಬಿಡುಗಡೆ ಮಾಡಿಲ್ಲ. ಜನವರಿ ತಿಂಗಳಿನಲ್ಲಿ ಪ್ರತಿ ರಹದಾರಿಗೆ ಕೇವಲ 87 ಲೀಟರ್, ಮಾರ್ಚ್ನಲ್ಲಿ ಕೂಡ ಕೇವಲ 30 ಲೀಟರ್ ಬಿಡುಗಡೆ ಮಾಡಲಾಗಿದೆ ಅಲ್ಲದೆ ಎಪ್ರಿಲ್ ತಿಂಗಳಿನಲ್ಲಿ ಸುಮಾರು 10 ಸಾವಿರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯ ನಾಗರೀಕರು ಕೋವಿಡ್-19 ರೋಗಕ್ಕೆ ತುತ್ತಾದವರು ರಾಜ್ಯ ಸರಕಾರದ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಉಚಿತವಾಗಿ ಚಿಕಿತ್ಸೆ ಪಡೆಯಲು ಉಡುಪಿ ತಾಲೂಕಿನ ಕಾಲ್ಸೆಂಟರ್ನ ನಂಬರ್ 9663950222/9663957222, ಕುಂದಾಪುರ ತಾಲೂಕಿನ ಕಾಲ್ ಸೆಂಟರ್ನ ನಂಬರ್ 6363862122/7483984733 ಹಾಗೂ ಕಾರ್ಕಳ ತಾಲೂಕಿನ ಕಾಲ್ ಸೆಂಟರ್ ನಂಬರ್ 7411323408/7676227624 ಗೆ ಕರೆ ಮಾಡಿ, ಕಾಲ್ಸೆಂಟರ್ನ ವೈದ್ಯರು ಸೋಂಕಿತರ ತೊಂದರೆಗಳನ್ನು ತಿಳಿಸಿದ್ದಲ್ಲಿ, ಸೂಕ್ತ ಸೌಲಭ್ಯವಿರುವ ಆಸ್ಪತ್ರೆಯನ್ನು ಹಾಗೂ ಆಂಬ್ಯುಲೆನ್ಸ್ನ ವ್ಯವಸ್ಥೆಯನ್ನು ಮಾಡುತ್ತಾರೆ. ಕೋವಿಡ್ ರೋಗಿಗಳು ಕಾಲ್ ಸೆಂಟರ್ನವೈದ್ಯಾಧಿಕಾರಿಗಳ ಸೂಚನೆ ಪಡೆಯದೇ ಖಾಸಗಿ ಆಸ್ಪತ್ರೆಗೆ ಇಲ್ಲವೇ, ನರ್ಸಿಂಗ್ ಹೋಮ್ಗೆ ದಾಖಲಾದರೆ ಅಂತಹ ರೋಗಿಗಳಿಗೆ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಉಚಿತ ಸೌಲಭ್ಯವನ್ನು ಸರಕಾರದ ನಿಯಮದಂತೆ ನೀಡಲು ಸಾಧ್ಯವಾಗುವುದಿಲ್ಲ. ಜಿಲ್ಲೆಯ ಜಿಲ್ಲಾಸ್ಪತ್ರೆ, ಕುಂದಾಪುರ ಮತ್ತು ಕಾರ್ಕಳ ತಾಲೂಕು ಆಸ್ಪತ್ರೆ ಹಾಗೂ 19 ಖಾಸಗಿ ಆಸ್ಪತ್ರೆಗಳು ಅಥವಾ ನರ್ಸಿಂಗ್ ಹೋಮ್ಗಳು ಕೊರೋನಾ ರೋಗಿಗಳಿಗೆ ಉಚಿತ ಚಿಕಿತ್ಸೆಯನ್ನು ನೀಡುತ್ತಿದ್ದು, ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯ ಸೌಲಭ್ಯವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸೋಂಕು ದೃಢಪಟ್ಟವರನ್ನು ಮನವೊಲಿಸುವುದರೊಂದಿಗೆ ಅವರುಗಳನ್ನು ಕೋವಿಡ್ ಕೇರ್ ಸೆಂಟರ್ಗೆ ವರ್ಗಾಯಿಸಿ, ಚಿಕಿತ್ಸೆ ನೀಡಲು ಗ್ರಾಮ ಮಟ್ಟದ ಟಾಸ್ಕ್ಫೋರ್ಸ್ ಸಮಿತಿ ಮುಂದಾಗಬೇಕು ಎಂದು ಮುಜರಾಯಿ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಮಣಿಪಾಲ್ನ ರಜತಾದ್ರಿಯ ಕೆಸ್ವಾನ್ ವೀಡಿಯೋ ಕಾನ್ಫ್ರೆನ್ಸ್ ಹಾಲ್ನಲ್ಲಿ ಕೋವಿಡ್ ನಿಯಂತ್ರಣ ಕುರಿತು ಉಡುಪಿ ಹಾಗೂ ಕಾಪು ತಾಲೂಕಿನ ಗ್ರಾಮ ಮಟ್ಟದ ಟಾಸ್ಕ್ಫೋರ್ಸ್ ಸಮಿತಿ ಸದಸ್ಯರುಗಳೊಂದಿಗೆ ವೀಡಿಯೋ ಸಂವಾದದ ಮೂಲಕ ಪ್ರಗತಿ ಪರಿಶೀಲನೆ ನಡೆಸಿದರು. ಸಾಮಾನ್ಯವಾಗಿ ಗ್ರಾಮೀಣ ಭಾಗಗಳಲ್ಲಿ ವಾಸಿಸುವ ಜನರ ಮನೆಗಳಲ್ಲಿ ಪ್ರತ್ಯೇಕವಾಗಿರಲು ಕೊಠಡಿ ಸೇರಿದಂತೆ ಶೌಚಾಲಯದ ವ್ಯವಸ್ಥೆ ಇರುವುದಿಲ್ಲ. ಗ್ರಾಮೀಣ ಜನರಿಗೆ ಸೋಂಕು ದೃಢಪಟ್ಟಾಗ ಅವರುಗಳ ರೋಗ ಲಕ್ಷಣದ ಬಗ್ಗೆ ಮಾಹಿತಿ ಹೊಂದಿ ಅವಶ್ಯವಿದ್ದಲ್ಲಿ ಆಸ್ಪತ್ರೆಗೆ ವರ್ಗಾಯಿಸಬೇಕು. ತಪ್ಪಿದ್ದಲ್ಲಿ ಅವರುಗಳನ್ನು ಕೋವಿಡ್ ಕೇರ್ ಸೆಂಟರ್ಗಳಿಗೆ ವರ್ಗಾಯಿಸಿ, ಚಿಕಿತ್ಸೆ ನೀಡುವ ಕಾರ್ಯವನ್ನು ಗ್ರಾಮ ಮಟ್ಟದ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮಾಡಬೇಕು ಎಂದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಗಂಗೊಳ್ಳಿ ಪೊಲೀಸರಿಗೆ ಮತ್ತು ಮಾಸ್ಕ್ ಸ್ಯಾನಿಟೈಸರ್ಗಳನ್ನು ನೀಡಲಾಯಿತು. ಸಂಘದ ಅಧ್ಯಕ್ಷರಾದ ರಾಜು ಪೂಜಾರಿ ಅವರು ಗಂಗೊಳ್ಳಿ ಆರಕ್ಷಕ ಠಾಣೆಯ ಉಪನಿರೀಕ್ಷಕರಾದ ನಂಜಾ ನಾಯ್ಕ ಎನ್. ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಸಂಘದ ಉಪಾಧ್ಯಕ್ಷರಾದ ಎಂ.ಚಂದ್ರಶೀಲ ಶೆಟ್ಟಿ, ನಿರ್ದೇಶಕರಾದ ವಿನಾಯಕ ರಾವ್ ಮರವಂತೆ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸುರೇಶ ಅಳಿವೆಗದ್ದೆ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಕೋವಿಡ್ 2ನೇ ಅಲೆಯಲ್ಲಿ ತತ್ತರಿಸುವ ದೇಶವಾಸಿಗಳನ್ನು ಇನ್ನಿಲದಂತೆ ಕಾಡುತ್ತಿರುವ ಬ್ಲಾಕ್ ಫಂಗಸ್ (ಕಪ್ಪು ಶೀಲಿಂದ್ರ) ಕಾಯಿಲೆಯನ್ನು ವಾಸಿ ಮಾಡಲು ಬಳಸುತ್ತಿರುವ ಔಷಧಿಗಳಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿರುವುದು ಲಿಪೊಸೊಮನ್ ಆಂಪೊಟೆರಿಸಿನ್ ಬಿ ಎನ್ನುವ ಔಷಧಿ. ಲಿಪೊಸೊಮನ್ ಆಂಪೊಟೆರಿಸಿನ್ ಕಂಡು ಹಿಡಿಯಲು ಶ್ರಮ ಪಟ್ಟಿರುವ ಭಾರತ ಸೀರಮ್ಸ್ ಎಂಡ್ ವ್ಯಾಕ್ಸಿನ್ಸ್ ಲಿಮಿಟೆಡ್ ಕಂಪೆನಿಯ ಸಂಶೋಧಕ ತಂಡದ ನೇತೃತ್ವ ವಹಿಸಿದವರು ಕುಂದಾಪುರ ಮೂಲದವರಾದ ಬಾಂಡ್ಯ ಶ್ರೀಕಾಂತ ಪೈ. ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಗಂಗೊಳ್ಳಿ ಮೂಲದ ಬಾಂಡ್ಯ ಶ್ರೀಕಾಂತ ಪೈ, ಗಂಗೊಳ್ಳಿ ಹಾಗೂ ಕುಂದಾಪುರದಲ್ಲಿ ಪ್ರೌಢ ಹಾಗೂ ಪಿಯುಸಿ ಶಿಕ್ಷಣವನ್ನು ಮುಗಿಸಿ, ಬೆಂಗಳೂರಿನಲ್ಲಿ 1975ರಲ್ಲಿ ಬಿ. ಫಾರ್ಮ ಮತ್ತು ಮಣಿಪಾಲದಲ್ಲಿ 1977ರಲ್ಲಿ ಎಂ.ಫಾರ್ಮ ಶಿಕ್ಷಣ ಪಡೆದುಕೊಂಡು, ಉದ್ಯೋಗಕ್ಕಾಗಿ ಮುಂಬೈನಲ್ಲಿರುವ ಭಾರತ್ ಸೀರಮ್ಸ್ ಎಂಡ್ ವ್ಯಾಕ್ಸಿನ್ಸ್ ಲಿಮಿಟೆಡ್ ಕಂಪೆನಿ ಸೇರಿದ್ದರು. ವ್ಯಾಪಕ ಸಂಶೋಧನಾ ಕಾರ್ಯಗಳ ಬಳಿಕ ಭಾರತ್ ಸೀರಮ್ಸ್ ಮತ್ತು ವ್ಯಾಕ್ಸಿನ್ ಲಿಮಿಟೆಡ್ನಲ್ಲಿ ಕೆಲಸ ಮಾಡುತ್ತಿದ್ದಾಗ ಆಂಬಿಸೋಮ್ ಔಷಧಿಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ 640 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 4 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 368, ಕುಂದಾಪುರ, ಬೈಂದೂರು ತಾಲೂಕಿನ 155, ಕಾರ್ಕಳ, ಹೆಬ್ರಿ ತಾಲೂಕಿನ 115 ಮಂದಿಗೆ ಹಾಗೂ ಹೊರ ಜಿಲ್ಲೆಯ 2 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 640 ಪ್ರಕರಣಗಳಲ್ಲಿ 18 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 622 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿಯ 33 ವರ್ಷದ ಪುರುಷ, 67 ವರ್ಷದ ವೃದ್ಧೆ, 65 ವರ್ಷದ ವೃದ್ಧ, ಕಾರ್ಕಳದ 54 ವರ್ಷದ ಪುರಷ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 695 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 5792 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 2864 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 6648 ಮಂದಿಗೆ ಮೊದಲನೇ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ 7 ಮಂದಿ ಅರ್ಹ ಫಲಾನುಭವಿಗಳಿಗೆ ತಲಾ 3.90ಲಕ್ಷ ರೂ. ಮೌಲ್ಯದ ದೋಣಿ ಮತ್ತಿತರ ಮೀನುಗಾರಿಕಾ ಸಲಕರಣೆಗಳನ್ನು ಮಂಗಳವಾರ ವಿತರಿಸಲಾಯಿತು. ಗಂಗೊಳ್ಳಿಯ ಮ್ಯಾಂಗನೀಸ್ ವಾರ್ಫ್ ಬಳಿ ಫಲಾನುಭವಿಗಳಿಗೆ ದೋಣಿ ಮತ್ತಿತರ ಮೀನುಗಾರಿಕಾ ಸಲಕರಣೆಗಳನ್ನು ವಿತರಿಸಿ ಮಾತನಾಡಿದ ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ, ಸರಕಾರ ಮೀನುಗಾರರಿಗೆ ನೀಡಿದ ಯೋಜನೆಯ ಸದುಪಯೋಗ ಪಡೆದುಕೊಂಡು ಉತ್ತಮ ಮೀನುಗಾರಿಕೆ ನಡೆಸಬೇಕು. ಮೀನುಗಾರರು ನೆಮ್ಮದಿಯ ಜೀವನ ನಡೆಸುವಂತಾಗಬೇಕು. ಸರಕಾರದಿಂದ ಸಾಧ್ಯವಾದಷ್ಟು ಸಹಾಯವನ್ನು ಮೀನುಗಾರರಿಗೆ ಮಾಡಲು ಪ್ರಯತ್ನಿಸುವುದಾಗಿ ಹೇಳಿದರು. ಸುಮಾರು 3.90ಲಕ್ಷ ರೂ. ಮೌಲ್ಯದ ಮೀನುಗಾರಿಕಾ ದೋಣಿ, ಇಂಜಿನ್, ಬಲೆ, ಲೈಫ್ ಜಾಕೆಟ್, ಶಾಖ ನಿರೋಧಕ ಪೆಟ್ಟಿಗೆಯನ್ನು ಅರ್ಹ ಫಲಾನುಭವಿಗಳಿಗೆ ಹಸ್ತಾಂತರಿಸಲಾಯಿತು. ಉಡುಪಿ ಮೀನುಗಾರಿಕೆ ಇಲಾಖೆ ಹಿರಿಯ ಉಪನಿರ್ದೇಶಕ ಗಣೇಶ ಕೆ., ಕುಂದಾಪುರ ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಸುಮಲತಾ, ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಮಂಗಳವಾರ ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಕ್ಸಿಮೀಟರ್, ಸ್ಯಾನಿಟೈಸರ್ ಮತ್ತು ಮಾಸ್ಕ್ಗಳನ್ನು ನೀಡಲಾಯಿತು. ಸಂಘದ ಅಧ್ಯಕ್ಷರಾದ ರಾಜು ಪೂಜಾರಿ ಮಾತನಾಡಿ, ಕೊರೋನಾ ತಡೆಗಟ್ಟುವಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾರ್ಯ ಪ್ರಮುಖವಾದುದು. ಅವರ ಸೇವೆಯನ್ನು ಗುರುತಿಸಬೇಕಾಗಿದೆ ಎಂದರು ಈ ಸಂದರ್ಭ ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸನ್ಮಾನ್ ಶೆಟ್ಟಿ, ಮರವಂತೆ ಗ್ರಾಮ ಪಂಚಾಯತ್ ಸದಸ್ಯ ಕರುಣಾಕರ ಆಚಾರ್ಯ, ಸಂಘದ ಉಪಾಧ್ಯಕ್ಷರಾದ ಎಂ. ಚಂದ್ರಶೀಲ ಶೆಟ್ಟಿ, ನಿರ್ದೇಶಕರಾದ ವಿನಾಯಕ ರಾವ್ ಮರವಂತೆ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸುರೇಶ ಅಳಿವೆಗದ್ದೆ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜರುಗಿದ ಕುಂದಾಪುರ ವಿಧಾನಸಭಾ ಕ್ಷೇತ್ರ ಮಟ್ಟದ ಸಭೆ ಸೋಮವಾರ ನಡೆಯಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ , ಜನರು ಜವಾಬ್ದಾರಿಯಿಂದ ವರ್ತಿಸಬೇಕು. ಜನರು ಸ್ವರಕ್ಷಣೆ ಮಾಡಿಕೊಳ್ಳುವುದರ ಜತೆಗೆ ಇತರರ ರಕ್ಷಣೆಗೆ ನೆರವಾಗಬೇಕು, ಕುಂದಾಪುರ ವಿಧಾನಸಭಾ ಕ್ಷೇತ್ರದ 37 ಗ್ರಾಮ ಪಂಚಾಯಿತಿ 1 ಪಟ್ಟಣ ಪಂಚಾಯಿತಿ ಮತ್ತು 1 ಪುರಸಭೆ ವ್ಯಾಪ್ತಿಯಲ್ಲಿ ಮೊಬೈಲ್ ಯೂನಿಟ್ ಘಟಕ ಸಂಚರಿಸಲು ಅನುಕೂಲವಾಗುವಂತೆ 19 ವಾಹನಗಳು ಬೇಕಾಗುತ್ತದೆ. ಈ ಬಗ್ಗೆ ಸರಕಾರಕ್ಕೆ ಬರೆಯಲಾಗುವುದು ಎಂದು ಹೇಳಿದರು. ಬಳಿಕ ಸಭೆಯಲ್ಲಿ ಕುಂದಾಪುರ ಸಹಾಯಕ ಕಮಿಷನರ್ ಕೆ. ರಾಜು ಮಾತನಾಡಿ, ಸರಕಾರಿ ನಿರ್ದೇಶನದಂತೆ ಕೋವಿಡ್ ಪರೀಕ್ಷೆಯ ಹಿನ್ನೆಲೆಯಲ್ಲಿ ಗ್ರಾಮಾಂತರದಲ್ಲಿ ಮೊಬೈಲ್ ಕ್ಲಿನಿಕ್ ಯೂನಿಟ್ ಸಂಚರಿಸಲಿದೆ. ಪ್ರತಿಯೊಬ್ಬರು ಕೋವಿಡ್ ಪರಿಕ್ಷೇಗೆ ಒಳಪಟ್ಟು ಸೋಂಕು ಗೆಲ್ಲಲು ಪ್ರಯತ್ನಿಸಬೇಕು ಗ್ರಾಮಕ್ಕೆ ಒಂದು ಆಂಬ್ಯುಲೆನ್ಸ್ ನೀಡುವ ತೀರ್ಮಾನವನ್ನು ಸರಕಾರ ತೆಗೆದುಕೊಂಡಿದೆ. ಗ್ರಾಮ ಮಟ್ಟದ ಟಾಸ್ಕ್ಫೋರ್ಸ್ ಕಾರ್ಯಪಡೆ ಜವಾಬ್ದಾರಿ ನಿರ್ವಹಿಸಬೇಕು.…
