ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: 2020-21 ನೇ ಸಾಲಿನ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿ..ಎಂ.ಇ.ಜಿ.ಪಿ)ಯಡಿ ಉಡುಪಿ ಜಿಲ್ಲೆಯಲ್ಲಿ ಸ್ವ ಉದ್ಯೋಗ ಆರಂಭಿಸಲು ಆಸಕ್ತಿ ಇರುವ ನಿರುದ್ಯೋಗಿ ಯುವಕ/ಯುವತಿಯರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯು ಸ್ವಂತ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಜಾರಿಗೊಳಿಸಲಾಗುತ್ತಿದೆ. ಈ ಯೋಜನೆಯಲ್ಲಿ ನಿರುದ್ಯೋಗಿ ಯುವಕ/ಯುವತಿಯರಿಗೆ ಗರಿಷ್ಠ ಯೋಜನಾ ವೆಚ್ಚ ರೂ.25 ಲಕ್ಷ ಉತ್ಪಾದನೆ ಚಟುವಟಿಕೆ ಮತ್ತು ರೂ.10ಲಕ್ಷ ಆಯ್ದ ಸೇವಾ ಘಟಕಕ್ಕೆ ಬ್ಯಾಂಕ್ ಸಾಲದೊಂದಿಗೆ, ಹೊಸ ಕೈಗಾರಿಕೆ , ಉತ್ಪಾದನೆ ಚಟುವಟಿಕೆ ಹಾಗೂ ಆಯ್ದ ಕೆಲವು ಸೇವಾ ಘಟಕ ಸ್ಥಾಪಿಸುವವರಿಗೆ ಅವಕಾಶವಿದ್ದು, ಯೋಜನಾ ವೆಚ್ಚದ ಮೇಲೆ ಶೇಕಡಾ 25ರಿಂದ 35ರ ವರೆಗೆ ಸಹಾಯಧನ ನೀಡಲಾಗುವುದು. ಉತ್ಪಾದನಾ ಘಟಕವಾಗಿದ್ದಲ್ಲಿ ರೂ.10ಲಕ್ಷ ಮತ್ತು ಸೇವಾ ಘಟಕವಾಗಿದ್ದಲ್ಲಿ ರೂ.5 ಲಕ್ಷ ಗಳಿಗಿಂತ ಮೇಲ್ಪಟ್ಟ ಯೋಜನಾ ವೆಚ್ಚಗಳನ್ನೊಳಗೊಂಡ ಘಟಕಗಳನ್ನು ಸ್ಥಾಪಿಸುವವರು ಕನಿಷ್ಟ 8ನೇ ತರಗತಿ ಉತ್ತಿರ್ಣವಾಗಿರಬೇಕು. ಅರ್ಜಿದಾರರಿಗೆ ಕನಿಷ್ಠ 18 ವರ್ಷ ತುಂಬಿರಬೇಕು . ನಿರುದ್ಯೋಗಿ ಯುವಕ ಯುವತಿಯರು http://www.kviconline.gov.in/pmegpeportal/jsp/pmegponline.jsp ವೆಬ್ ಸೈಟ್ ಮೂಲಕ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಈ ಭಾರಿ ದಾಖಲೆ ಪ್ರಮಾಣದಲ್ಲಿ ಭತ್ತ ಹಾಗೂ ರಸಗೊಬ್ಬರಗಳು ಮಾರಾಟವಾಗುತ್ತಿದ್ದು, ಕೊರೋನಾ ಹೊಡೆತದಿಂದಾಗಿ ಭತ್ತದ ಕೃಷಿಯಲ್ಲಿ ಯುವಕರ ಒಲವು ಹೆಚ್ಚಿದೆ. ಹಡಿಲು ಬಿದ್ದ ಗದ್ದೆಗಳು ಹಸಿರಾಗುವ ಸೂಚನೆ ದೊರೆಯುತ್ತಿದೆ. ಲಾಕ್‌ಡೌನ್‌ನಿಂದಾಗಿ ನಗರಗಳಲ್ಲಿ ಈವರೆಗೂ ವ್ಯಾಪಾರ-ವ್ಯವಹಾರ ಸಸೂತ್ರವಾಗಿ ಆರಂಭವಾಗಿಲ್ಲ. ಮುಂಬೈನಂತಹ ಮಹಾನಗರಿಗಳಲ್ಲಿ ಮತ್ತೆ ವ್ಯವಹಾರ, ಕೆಲಸ ಆರಂಭಿಸಲು ಕೆಲವು ತಿಂಗಳುಗಳೇ ಬೇಕು. ಅಲ್ಲಿಯ ತನಕ ಊರಿನಲ್ಲಿಯೇ ಇರುವುದು ಅನಿವಾರ್ಯ. ಹಾಗಾಗಿ ಸದ್ಯ ಮನೆ ಹಾಗೂ ಕ್ವಾರಂಟೈನ್ ಕೇಂದ್ರಗಳಲ್ಲಿರುವ ಕೆಲವರು ಕೃಷಿಯತ್ತ ಒಲವು ತೋರುವ ಮಾತುಗಳ ಕೇಳಿಬರುತ್ತಿದ್ದು, ಇನ್ನು ಒಂದಿಷ್ಟು ಮಂದಿ ಮತ್ತೆ ನಗರಗಳಿಗೆ ತೆರಳದೇ ಊರಿನಲ್ಲಿಯೇ ಉಳಿಯುವ ನಿರ್ಧಾರಕ್ಕೆ ಬಂದಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ ಉಭಯ ತಾಲೂಕುಗಳಲ್ಲಿ ಹೆಚ್ಚಿನ ಪ್ರಮಾಣದ ಭತ್ತ ಹಾಗೂ ರಸಗೊಬ್ಬರ ಮಾರಾಟವಾಗುತ್ತಿದೆ. ಕುಂದಾಪ್ರ ಡಾಟ್ ಕಾಂ ವರದಿ. 2019ರಲ್ಲಿ 13,725 ಹೆಕ್ಟೇರ್ ಭೂಮಿಯಲ್ಲಿ ಭತ್ತದ ಕೃಷಿ ಮಾಡಿದರೆ, ಈ ಬಾರಿ ಸುಮಾರು 15 ಸಾವಿರ ಹೆಕ್ಟೇರ್ ಭೂಮಿಯಲ್ಲಿ ಭತ್ತದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಸೇನಾಪುರ ಗ್ರಾಮದ ಗುಡ್ಡಮ್ಮಾಡಿಯಲ್ಲಿ ಆಯಾತಪ್ಪಿ ಬಾವಿಗೆ ಬಿದ್ದ ವ್ಯಕ್ತಿಯೋರ್ವ ಸಾವನ್ನಪ್ಪಿದ್ದು, ರಕ್ಷಿಸಲು ಬಾವಿಗೆ ಇಳಿದ ಸಹೋದರನ ಸ್ಥಿತಿಯೂ ಚಿಂತಾಜನಕವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಲ್ಟರ್ ಡಿ’ಆಲ್ಮೇಡಾ(52) ಮೃತ ದುರ್ದೈವಿ. 20 ಅಡಿ ಆಳದ 5 ಅಡಿ ಅಗಲವಿರುವ ಬಾವಿಯ ಆಮ್ಲಜನಕದ ಕೊರತೆ ಇತ್ತು. ವಾಲ್ಟರ್ ಎಂಬುವವರು ಬಾವಿಗೆ ಬಿದ್ದ ತಕ್ಷಣ ಅವರ ರಕ್ಷಣೆಗೆ ಬಾವಿಗೆ ಇಳಿದ ಸಹೋದರ ಅಲ್ಭನ್ ಉಸಿರಾಟದ ಸಮಸ್ಯೆಯಿಂದ ಒದ್ದಾಡಿದ್ದಾರೆ. ಕೂಡಲೇ ಸ್ಥಳೀಯರು ಅಗ್ನಿಶಾಮಕದಳಕ್ಕೆ ಕರೆ ಮಾಡಿದ್ದು, ಅವರು ಈರ್ವರನ್ನೂ ಮೇಲೆತ್ತಿದ್ದಾರೆ. ಅಷ್ಟರಲ್ಲಿಯೇ ವಾಲ್ಟರ್ ಮೃತಪಟ್ಟಿದ್ದು, ಅಲ್ಭನ್ ಸ್ಥೀತಿ ಗಂಭೀವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಮೃತರಿಗೆ ಪತ್ನಿ, ಹಾಗೂ ಮಗು ಇದೆ. ಸ್ಥಳಕ್ಕೆ ಗಂಗೊಳ್ಳಿ ಪೊಲೀಸ್ ಠಾಣಾಧಿಕಾರಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮೇ.27ರ ಮಧ್ಯಾಹ್ನದ ಹೆಲ್ತ್ ಬುಲೆಟಿನ್ ಪ್ರಕಾರ ಒಟ್ಟು 9 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಎಲ್ಲರೂ ಮಂಬೈನಿಂದ ಹಿಂದಿರುಗಿದವರಾಗಿದ್ದು, ಈ ಪೈಕಿ ಓರ್ವ ಬಾಲಕ, 6 ಪುರಷರು ಹಾಗೂ 2 ಮಹಿಳೆಯರು ಸೇರಿದ್ದಾರೆ. ಜಿಲ್ಲೆಯಲ್ಲಿ ಸದ್ಯ ಒಟ್ಟು 120 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ ಮೂವರು ಬಿಡುಗಡೆಯಗಿದ್ದು, 116 ಮಂದಿ ಕೊರೋನಾ ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಮೇ 26: ದ.ಕನ್ನಡ ಹಾಲು ಒಕ್ಕೂಟದ ವ್ಯಾಪ್ತಿಗೆ ಬರುವ ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರುಗಳ ರಾಸುಗಳು ಮರಣ ಹೊಂದಿದ ಸಂಧರ್ಭದಲ್ಲಿ, ಹೈನುಗಾರರಿಗೆ ಆರ್ಥಿಕ ನಷ್ಟವಾಗುತ್ತಿದ್ದು, ಇದರಿಂದ ಹೈನುಗಾರರು ಹೈನುಗಾರಿಕೆಯಲ್ಲಿ ಮುಂದುವರಿಯಲು ಕಷ್ಟವಾಗುತ್ತದೆ. ಆದುದರಿಂದ ಹೈನುಗಾರರನ್ನು ಹೆಚ್ಚಿನ ರೀತಿಯಲ್ಲಿ ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳಲು ಉತ್ತೇಜಿಸುವ ದೃಷ್ಟಿಯಿಂದ ಹಾಗೂ ರಾಸುಗಳ ಆಕಸ್ಮಿಕ ಮರಣದಿಂದಾಗುವ ಅನಿರೀಕ್ಷಿತ ನಷ್ಟಕ್ಕೆ ಪರಿಹಾರ ನೀಡುವ ಉದ್ಧೇಶದಿಂದ, ಹೈನುಗಾರರ ಎಲ್ಲಾ ರಾಸುಗಳಿಗೆ ವಿಮಾ ಸೌಲಭ್ಯ ಒದಗಿಸಲು ಒಕ್ಕೂಟದ ಆಡಳಿತ ಮಂಡಳಿ ತೀರ್ಮಾನಿಸಲಾಗಿರುತ್ತದೆ. ಈ ಯೋಜನೆಯನ್ವಯ ಒಕ್ಕೂಟದಿಂದ 75% ಮತ್ತು ಹೈನುಗಾರರಿಂದ 25% ವಿಮಾ ವಂತಿಕೆಯನ್ನು ಭರಿಸಿ ಸುಮಾರು ಅಂದಾಜು 1 ಲಕ್ಷ ರಾಸುಗಳಿಗೆ ವಿಮಾ ಸೌಲಭ್ಯ ಮಾಡಲು ಉದ್ಧೇಶಿಸಿದ್ದು, ಅದರ ಅಂದಾಜು ಮೌಲ್ಯ ರೂ.೬ ಕೋಟಿಗಳಷ್ಟು ಆಗುತ್ತದೆ. ಈ ಯೋಜನೆಯನ್ನು ಜೂನ್ 1 ರಿಂದ ಜಾರಿಗೊಳಿಸಲಾಗುವುದು. ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಹಾಲು ಉತ್ಪಾದಕರ ಸಹಕಾರಿ ಸಂಘಗಳನ್ನು ಸಂಪರ್ಕಿಸಬಹುದಾಗಿದೆ. ಒಕ್ಕೂಟದ ವ್ಯಾಪ್ತಿಗೆ ಬರುವ ಎಲ್ಲಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸೇವಾ ಭಾರತಿ ಬೈಂದೂರು ಶಾಖೆ ಹಾಗೂ ಬೆಸುಗೆ ಫೌಂಡೇಶನ್ ಬೈಂದೂರು ಸಹಯೋಗದೊಂದಿಗೆ ಬೈಂದೂರಿನ ವಿವಿಧ ಕ್ವಾರಂಟೈನ್ ಕೇಂದ್ರಗಲ್ಲಿರುವ ಮುಂಬೈ ಸೇರಿದಂತೆ ಹೊರರಾಜ್ಯಗಳ ಜನರಿಗೆ ಪ್ರತಿನಿತ್ಯ ಬೆಳಿಗ್ಗೆ ಹಾಗೂ ಸಂಜೆ ತಿಂಡಿ ಹಾಗೂ ಪಾನೀಯಗಳನ್ನು ವಿತರಿಸಲಾಗುತ್ತಿದೆ. ಕಳೆದ ಹತ್ತು ದಿನಗಳಿಂದ ಉದ್ಯಮಿಗಳಾದ ಜಯಾನಂದ ಹೋಬಳಿದಾರ್, ಕೆ. ವೆಂಕಟೇಶ್ ಕಿಣಿ, ವೆಂಕಟರಮಣ ಬಿಜೂರು, ಸದಾಶಿವ ಪಡುವರಿ, ಗೋಪಾಲಕೃಷ್ಣ ಕಲ್ಮಕ್ಕಿ, ರಿಯಾಜ್ ಅಹಮ್ಮದ್, ಪ್ರಶಾಂತ್ ಪೂಜಾರಿ ನ್ಯಾಶನಲ್ ಬೇಕರಿ, ಸಂಸ್ಥೆಗಳಾದ ಶ್ರೀ ರಾಮ ಕ್ರೆಡಿಟ್ ಕೋ-ಆಪರೇಟಿವ್ ಕುಂದಾಪುರ ಹಾಗೂ ಸೈಂಟ್ ಥಾಮಸ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಬೈಂದೂರು ಸಹಕಾರದಿಂದ ನೆರವು ನೀಡಲಾಗಿದೆ. ಪ್ರತಿನಿತ್ಯವೂ ವಿವಿಧ ಬಗೆಯ ತಂಪು ಪಾನೀಯ, ಚಹಾ, ಕಷಾಯ ತಯಾರಿಸಿ, ಸುರಕ್ಷತಾ ಕ್ರಮಗಳನ್ನು ಅನುಸರಿಸಿ ವಿತರಣೆ ಮಾಡಲಾಗುತ್ತಿದೆ. ಬೆಸುಗೆ ಫೌಡೇಶನ್‌ನ ಕಾರ್ಯದರ್ಶಿ ಗಣಪತಿ ಹೋಬಳಿದಾರ್ ನಿರ್ವಹಣೆ ಜವಾಬ್ದಾರಿ ಹೊತ್ತುಕೊಂಡಿದ್ದರೇ, ಸ್ವಯಂಸೇವಕ ಪ್ರಸಾದ್ ಬೈಂದೂರು ಕ್ವಾರಂಟೈನ್ ಕೇಂದ್ರಗಳಿಗೆ ವಿತರಿಸುವ ಜವಾಬ್ದಾರಿ ಹೊತ್ತಿದ್ದಾರೆ. ಇದನ್ನೂ ಓದಿ: ► ಉಡುಪಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕೊರೊನಾ ಸೋಂಕು ಹರಡುವಿಕೆಯನ್ನು ತಡೆಯುವುದರ ಜತೆಗೆ ಆ ಸಂಬಂಧಿ ಸುರಕ್ಷತಾ ಕಾರ್ಯದಲ್ಲಿ ಅವಿರತ ಶ್ರಮಿಸುತ್ತಿರುವ ಬೈಂದೂರು ಸರ್ಕಲ್, ಹೈವೇ ಪ್ಯಾಟ್ರೋಲ್ ಮತ್ತು ಠಾಣೆ ಸಿಬ್ಬಂದಿಗೆ ಕೆರ್ಗಾಲು ಶ್ರೀ ಭಗವತಿ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಬಿ. ಎಸ್. ಶ್ಯಾನುಭೋಗ್ ಸ್ಯಾನಿಟೈಸರ್, ಮಾಸ್ಕ್ ಮತ್ತು ಕುಡಿಯುವ ನೀರಿನ ಬಾಟಲಿಗಳನ್ನು ಮಂಗಳವಾರ ಹಸ್ತಾಂತರಿಸಿ ಬೈಂದೂರು ಪ್ರದೇಶದಲ್ಲಿ ಅವರ ಕಾರ್ಯನಿರ್ವಹಣೆಗೆ ಮೆಚ್ಚುಗೆ ಸೂಚಿಸಿದರು. ಸಾಮಗ್ರಿಗಳನ್ನು ಸ್ವೀಕರಿಸಿದ ಸರ್ಕಲ್ ಇನ್ಸ್‌ಪೆಕ್ಟರ್ ಸುರೇಶ ಜಿ. ನಾಯಕ್ ಮತ್ತು ಸಬ್ ಇನ್ಸ್‌ಪೆಕ್ಟರ್ ಸಂಗೀತಾ ತಮ್ಮ ಮತ್ತು ಸಿಬ್ಬಂದಿ ಪರವಾಗಿ ಕೃತಜ್ಞತೆ ಸಲ್ಲಿಸಿದರು. ಶ್ರೀ ಭಗವತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ. ಪುಂಡಲೀಕ ನಾಯಕ್, ಸಂದೀಪ್ ಭಗವತಿ ಹಾಗೂ ಪೊಲೀಸ್ ಸಿಬ್ಬಂದಿ ಇದ್ದರು. ಇದನ್ನೂ ಓದಿ: ► ಉಡುಪಿ ಜಿಲ್ಲೆ: ಮಂಗಳವಾರ ಮಧ್ಯಾಹ್ನ 3 ಪಾಸಿಟಿವ್. ಒಟ್ಟು 111ಕ್ಕೆ ಏರಿಕೆ – https://kundapraa.com/?p=37916 .
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮೇ.26ರ ಮಧ್ಯಾಹ್ನದ ಹೆಲ್ತ್ ಬುಲೆಟಿನ್ ಪ್ರಕಾರ ಒಟ್ಟು3 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಮಂಬೈನಿಂದ ಬಂದಿರುವ 9 ವರ್ಷದ ಹುಡುಗಿ, 30 ವರ್ಷದ ಮಹಿಳೆ ಹಾಗೂ 27 ವರ್ಷದ ಪುರಷನಿಗೆ ಪಾಸಿಟಿವ್ ದೃಢವಾಗಿದೆ. ಜಿಲ್ಲೆಯಲ್ಲಿ ಸದ್ಯ ಒಟ್ಟು 111 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ ಮೂವರು ಬಿಡುಗಡೆಯಗಿದ್ದು, 107 ಮಂದಿ ಕೊರೋನಾ ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ► ಉಡುಪಿ ಜಿಲ್ಲೆಯಲ್ಲಿ ಶತಕ ದಾಟಿದ ಕೊರೋನಾ: ಒಂದೇ ದಿನ 32 ಪ್ರಕರಣ ದಾಖಲು – https://kundapraa.com/?p=37897 . ► ಕುಂದಾಪುರ ವಿಧಾನಸಭೆ ಕ್ಷೇತ್ರದ ಕ್ವಾರಂಟೈನ್ ಮಾಹಿತಿ-ದೂರಿಗಾಗಿ ಕಂಟ್ರೋಲ್ ರೂಂ – https://kundapraa.com/?p=37760 . ► ಕುಂದಾಪುರದಲ್ಲಿ120 ಬೆಡ್‌ಗಳ ಕೋವಿಡ್-19 ಆಸ್ಪತ್ರೆ ಸಜ್ಜು – https://kundapraa.com/?p=37752 .
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಾಜಿ ಸಂಸದ ಮತ್ತು ಸಮಾಜ ಸೇವಕ ದಿ| ಐ.ಎಂ ಜಯರಾಮ ಶೆಟ್ಟಿ ಸ್ಮರಣಾರ್ಥ ಸ್ಥಾಪಿಸಲ್ಪಟ್ಟ ಐ ಎಂ ಜೆ ಫೌಂಡೇಶನ್ ವತಿಯಿಂದ, ಎಂ ಐ ಟಿ ಕುಂದಾಪುರ ಕಾಲೇಜಿಗೆ ಪ್ರವೇಶ ಪಡೆಯುವ ಪ್ರತಿಭಾನ್ವಿತ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ರೂ. 20000 ದಿಂದ ರೂ. 65000 ವರೆಗೆ ಸ್ಕಾಲರ್‌ಶಿಪ್ ದೊರೆಯಲಿದೆ. ಈ ಸೌಲಭ್ಯವನ್ನ ಪಡೆಯಲು ಕರೆ ಮಾಡಿ ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ. ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳು ಐ ಎಂ ಜೆ ಫೌಂಡೇಶನ್ ನಡೆಸುವ ಕೌನ್ಸೆಲಿಂಗ್ ನಲ್ಲಿ ಭಾಗವಹಿಸ ಬೇಕಾಗುತ್ತದೆ. ಕೌನ್ಸೆಲಿಂಗ್ ನ ಸಂದರ್ಶನದಲ್ಲಿ ಅರ್ಹತೆ ಮತ್ತು ಆದಾಯದ ದಾಖಲೆ ಪರಿಗಣಿಸಿ ಸ್ಕಾಲರ್ಷಿಪ್ ಹಣವನ್ನ ಅಂತಿಮಗೊಳಿಸಲಾಗುವುದು. ಲಾಕ್ ಡೌನ್ ಸಮಯದಲ್ಲಿ ನಷ್ಟ ಅನುಭವಿಸಿದ ಹೆಚ್ಚಿನ ಪೋಷಕರಿಗೆ ಮಕ್ಕಳ ಫೀಸು ಕಟ್ಟಲು ಫೌಂಡೇಶನ್ ಕೊಡುತ್ತಿರುವ ಈ ಸೌಲಭ್ಯ ಬಹಳಷ್ಟು ಸಹಕಾರಿಯಾಗಲಿದೆ. ಕೌನ್ಸೆಲಿಂಗ್ ಹಾಜರಾಗುವುದರಿಂದ ಸ್ಕಾಲರ್ಷಿಪ್ ಜೊತೆಯಲ್ಲಿ ಶಿಕ್ಷಣ ಸಾಲ, ಸರ್ಕಾರದಿಂದ ಸಿಗುವ ಸವಲತ್ತುಗಳು, ಪ್ಲೇಸ್ಮೆಂಟ್, ಮತ್ತು ಉನ್ನತ ವ್ಯಾಸಂಗ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮೇ.25ರಂದು ಸಂಜೆಯ ಹೆಲ್ತ್ ಬುಲೆಟಿನ್ ಪ್ರಕಾರ ಒಟ್ಟು 32 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಈ ಪೈಕಿ ಓರ್ವ 65ವರ್ಷದ ಮಹಿಳೆಗೆ P-1435 ಸಂಪರ್ಕದಿಂದ ಸೋಂಕು ಹರಡಿದ್ದರೆ , ಮತ್ತೋರ್ವ 57 ವರ್ಷದ ವ್ಯಕ್ತಿಗೆ ಕಂಟೋನ್ಮೆಟ್ ಜೋನ್ ನಿಂದ ಸೋಂಕು ಹರಡಿದೆ. ಇಂದು ಪತ್ತೆಯಾದ ಬಾಕಿ ಉಳಿದ ಪ್ರಕರಣಗಳಲ್ಲಿ ಎಲ್ಲರೂ ಮಹಾರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಪ್ರಯಾಣದಿಂದ ಹಿಂತಿರುಗಿದವರಾಗಿದ್ದಾರೆ. ಒಟ್ಟು ಹತ್ತು ಹೆಂಗಸರು, ಹತ್ತು ಗಂಡಸರು ಹಾಗೂ ಹನ್ನೆರಡು ಮಕ್ಕಳು ಸೊಂಕಿತರಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ ಒಟ್ಟು 108 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ ಮೂವರು ಬಿಡುಗಡೆಯಗಿದ್ದು, 104 ಮಂದಿ ಕೊರೋನಾ ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ► ಉಡುಪಿ ಜಿಲ್ಲೆಯಲ್ಲಿ ಸೋಮವಾರ ಮಧ್ಯಾಹ್ನ 16 ಕೊರೋನಾ ಪಾಸಿಟಿವ್ – https://kundapraa.com/?p=37874 . ► ಮುಂಜಾಗೃತಾ ಕ್ರಮವಾಗಿ ಗಂಗೊಳ್ಳಿ ಪೊಲೀಸ್ ಠಾಣೆ ಸ್ಯಾನಿಟೈಸ್…
