Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಮೇ.13ರಿಂದ ಬಸ್ ಸಂಚಾರ ಪುನರಾರಂಭಿಸಲಾಗುತ್ತಿದ್ದು, ಕೆಲವು ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್‌ಗಳು ರಸ್ತೆಗಿಳಿಯಲಿವೆ. ಬಸ್‌ನಲ್ಲಿ 50 ಪ್ರತಿಶತಕ್ಕಿಂತ ಹೆಚ್ಚಿನ ಜನರನ್ನು ಕರೆದೊಯ್ಯುವಂತಿಲ್ಲ. ಸಾರ್ವಜನಿಕರು ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಕಡ್ಡಾಯವಾಗಿದ್ದು, ತಪ್ಪಿದಲ್ಲಿ ದಂಡ ವಿಧಿಸಲಾಗುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಕೋವಿಡ್ 19 ಲಾಕ್‌ಡೌನ್ ಪ್ರಯುಕ್ತ ಸ್ಥಗಿತಗೊಂಡಿದ್ದ ಬಸ್ ಸಂಚಾರವನ್ನು ಪುನರಾರಂಭಿಸುವ ಬಗ್ಗೆ ಘಟಕ ವ್ಯವಸ್ಥಾಪಕರು, ಕೆಎಸ್‌ಆರ್‌ಟಿಸಿ ಉಡುಪಿ ಮತ್ತು ಮಾಲಕರು, ಭಾರತಿ ಮೋಟಾರ್ಸ್, ಉಡುಪಿ ಇವರು ಜಿಲ್ಲಾ ವ್ಯಾಪ್ತಿಯಲ್ಲಿ ವಿವಿಧ ಮಾರ್ಗಗಳಲ್ಲಿ ಬಸ್ಸು ಸಂಚಾರ ಪ್ರಾರಂಭಿಸುವ ಕುರಿತು , ಪ್ರಾದೇಶಿಕ ಸಾರಿಗೆ ಅಧಿಕಾರಿ, ಉಡುಪಿ ಇವರ ಮೂಲಕ ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ. ಈ ಬಗ್ಗೆ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳಿಂದ ಕಛೇರಿಗಳಿಗೆ ಬರಲು ಬಸ್ಸಿನ ವ್ಯವಸ್ಥೆ ಮಾಡುವಂತೆ ಮನವಿಗಳು ಸ್ವೀಕೃತವಾಗಿರುತ್ತವೆ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ, ಉಡುಪಿ ಇವರ ಕಛೇರಿಗೆ ಸಾರ್ವಜನಿಕರಿಂದ ಮನವಿಗಳು ಬರುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಓಡಾಟ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಮೂಲದ ಕುಟುಂಬವೊಂದು ಟೆಂಪೋ ಟ್ರಾವೆಲ್ಲರ್(ಟಿಟಿ) ಮೂಲಕ ಮುಂಬೈನಿಂದ ಊರಿಗೆ ಮರಳುತ್ತಿರುವ ಸಂದರ್ಭ, ಆಕಸ್ಮಿಕ ಬೆಂಕಿಗಾಹುತಿಯಾದ ಘಟನೆ ಸೋಮವಾರ ಸಂಜೆ ನಡೆದಿದ್ದು, ಟಿಟಿಯಲ್ಲಿ ಪ್ರಯಾಣಿಸುತ್ತಿದ್ದ ಹನ್ನೊಂದು ಮಂದಿಯೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೋಮವಾರ ಮುಂಬೈನ ಭಾಂಡುಪ್‌ನಿಂದ ಊರಿಗೆ ಪ್ರಯಾಣ ಬೆಳಿಸಿದ್ದ ಆಲೂರು ಸಮೀಪ ಹುಯ್ಯಾಣದ ಹನ್ನೊಂದು ಮಂದಿಯಿದ್ದ ಟೆಂಪೋ ಟ್ರಾವೆಲ್ಲರ್ ಲೋನಾವಾಲಾ ಸಮೀಪಿಸುತ್ತಿದ್ದಂತೆಯೇ ಸ್ಟೇರಿಂಗ್ ಸಮೀಪದಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ಇಡೀ ವಾಹನಕ್ಕೆ ವ್ಯಾಪಿಸಿತ್ತು. ಚಾಲಕನ ಸಮಯಪ್ರಜ್ಞೆಯಿಂದಾಗಿ ಟಿಟಿ ಒಳಗಿದ್ದ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ವಾಹನ ಸಂಪೂರ್ಣ ಸುಟ್ಟು ಕರಕಲಾಗಿದೆ. ನೆರವಾದ ಸಚಿವ ಕೋಟ ಶ್ರೀನಿವಾಸ ಪೂಜಾರಿ: ದಾರಿ ಮಧ್ಯೆಯೇ ವಾಹನ ಸುಟ್ಟು ಹೋಗಿದ್ದರಿಂದ ಅತಂತ್ರರಾದ ಕುಟುಂಬ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಸಂಪರ್ಕಿಸಿದ್ದು, ತಕ್ಷಣವೇ ಸ್ಪಂದಿಸಿದ ಅವರು ಸ್ಥಳೀಯ ಸಂಘಟನೆಗಳ ಮುಖಂಡರಿಗೆ ಕರೆ ಮಾಡಿ ನೆರವಾಗುವಂತೆ ಕೋರಿಕೊಂಡರು. ಅಲ್ಲಿನ ಪೊಲೀಸರ ಸಹಕಾರದಿಂದ ಕುಟುಂಬಿಕರನ್ನು ನಿಪ್ಪಾಣಿಯವರೆಗೆ ಬಿಡಲಾಯಿತು. ಅಲ್ಲಿಂದ ಊರಿಗೆ ಸಚಿವ ಕೋಟ ಶ್ರೀನಿವಾಸ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೊರೊನಾ ಸೋಂಕು ವಿರುದ್ಧ ಹೋರಾಡುತ್ತಿರುವ ವಾರಿಯರ‍್ಸ್ ಸೇವೆಗೆ ಕಿರಿಮಂಜೇಶ್ವರದ ನಿವೃತ್ತ ಶಿಕ್ಷಕ ಕೆ. ಸದಾಶಿವ ಶ್ಯಾನುಭಾಗ್ ತಮ್ಮ ಒಂದು ತಿಂಗಳ ಪಿಂಚಣಿ ತೆಗೆದಿರಿಸಿದ್ದಾರೆ. ವಿವಿಧ ಸಂಘಟನೆಗಳು, ದಾನಿಗಳು ಅವರಿಗೆ ಆಹಾರ ಸಾಮಗ್ರಿಯ ಕಿಟ್ ವಿತರಿಸುತ್ತಿದ್ದರೆ, ಶ್ಯಾನುಭಾಗರು ಕಿರಿಮಂಜೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದ ಮತ್ತು ಬೈಂದೂರು ಪೊಲೀಸ್ ಠಾಣೆಯ ಸಿಬ್ಬಂದಿಗೆ ನೀರಿನ ಬಾಟಲಿ ಮತ್ತು ಬಿಸ್ಕಿಟ್ ಕೊಡುತ್ತಿದ್ದಾರೆ. ಬೇಸಿಗೆಯ ಕಡು ಬಿಸಿಲಿನಲ್ಲಿ ಕರ್ತವ್ಯದ ನಿಮಿತ್ತ ಸುತ್ತಾಡಬೇಕಾಗಿರುವ ಅವರಿಗೆ ಈ ವಸ್ತುಗಳ ಅಗತ್ಯ ಹೆಚ್ಚಾಗಿದೆ ಎನ್ನುವುದು ಅವರ ನಿಲುವು. ಹತ್ತು ದಿನಗಳ ಹಿಂದೆ ವಾರಾವಧಿಗಾಗುವ ಮೊದಲ ಕಂತಿನ ವಸ್ತುಗಳನ್ನು ವಿತರಿಸಿದ್ದ ಅವರು ಎರಡು ದಿನಗಳ ಹಿಂದೆ ಎರಡನೆ ಕಂತಿನ ವಿತರಣೆ ನಡೆಸಿದರು. ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಡಾ. ನಿಶಾ ಜೇಮ್ಸ್ ಮತ್ತು ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಸಂಗೀತಾ ಅವುಗಳನ್ನು ಸ್ವೀಕರಿಸಿ, ಶ್ಯಾನುಭಾಗರಿಗೆ ಕೃತಜ್ಞತೆ ಸಲ್ಲಿಸಿದರು. ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್. ಜನಾರ್ದನ, ಸಾಮಾಜಿಕ ಕಾರ್ಯಕರ್ತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ನಡುವೆ ಸಂಚಾರಕ್ಕೆ ಅಂತರ್ಜಿಲ್ಲಾ ಪಾಸ್ ಪಡೆಯದೇ, ಆಯಾ ಸಂಸ್ಥೆಗಳ ಗುರುತು ಪತ್ರದೊಂದಿಗೆ ಬೆಳಿಗ್ಗೆ 7ರಿಂದ ಸಂಜೆ 7 ಗಂಟೆಯ ತನಕ ಸಂಚರಿಸಬಹುದು ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನು ಒಂದೇ ಘಟಕವಾಗಿ ಪರಿಗಣಿಸಲಾಗಿದೆ. ಹಾಗಾಗಿ ಈಗಾಗಲೇ ಅನುಮತಿಸಲಾಗಿರುವ ಚಟುವಟಿಕೆಗಳನ್ನು ಕೈಗೊಳ್ಳಲು ಬೆಳಿಗ್ಗೆ 7ರಿಂದ ಸಂಜೆ 7 ಗಂಟೆಯ ತನಕ ವ್ಯಕ್ತಿಗಳು ಕೆಲಸ ಮಾಡುತ್ತಿರುವ ಸಂಸ್ಥೆಯಿಂದ ನೀಡಲಾಗುವ ಪತ್ರ, ಹಾಗೂ ಸಂಸ್ಥೆಯ ಗುರುತಿನ ಚೀಟಿಯೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದ್ದು, ಪ್ರತ್ಯೇಕ ಪಾಸ್ ಅಗತ್ಯವಿರುವುದಿಲ್ಲ. ಸಂಜೆ 7 ರಿಂದ ಬೆಳಿಗ್ಗೆ 7ರ ತನಕದ ಕರ್ಪ್ಯೂ ಅವಧಿಯಲ್ಲಿ ಈ ಹಿಂದೆ ಅಗತ್ಯ ಚಟುವಟಿಕೆಗಳಿಗೆ ನೀಡಲಾಗಿರುವ ಪಾಸ್‌ನ್ನೇ ಮಾನ್ಯ ಮಾಡಲಾಗಿದೆ. ಉಡುಪಿ ಮಂಗಳೂರು ಹೊರತುಪಡಿಸಿ ಬೇರೆ ಜಿಲ್ಲೆಗಳ ಸಂಚಾರಕ್ಕೆ ಈ ಆದೇಶ ಅನ್ವಯಿಸುವುದಿಲ್ಲ. /ಕುಂದಾಪ್ರ ಡಾಟ್ ಕಾಂ ಸುದ್ದಿ/ ಇದನ್ನೂ ಓದಿ: ►…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೊರೋನಾ ಲಾಕ್ ಡೌನ್ ಸಮಸ್ಯೆಯಿಂದ , ಉಡುಪಿ ಜಿಲ್ಲೆಯಿಂದ ಹೊರರಾಜ್ಯಗಳಿಗೆ ತೆರಳುವ ಪ್ರಯಾಣಿಕರಿಗೆ ಅವರ ರಾಜ್ಯಗಳಿಗೆ ಕಳುಹಿಸಲು ವಾಹನ ಸಂಬಂಧಿತ ವ್ಯವಸ್ಥೆ ಮಾಡಲು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಅಥವಾ ಸರ್ಕಾರ ಯಾವುದೇ ಖಾಸಗಿ ವ್ಯಕ್ತಿಗಳನ್ನು ನೇಮಕ ಮಾಡಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಸ್ಪ?ಪಡಿಸಿದ್ದಾರೆ. ರಾಜ್ಯ ಸರಕಾರವು ಅಂತರ್ ರಾಜ್ಯ ಪ್ರಯಾಣಿಕರಿಗೆ ಸ್ವ ಊರಿಗೆ ಮರಳಲು ಸಹಾಯವಾಗುವಂತೆ ಸೇವಾ ಸಿಂಧು App ತಯಾರಿಸಿದ್ದು, ಇದರಲ್ಲಿ ಈಗಾಗಲೇ ಹಲವಾರು ಮಂದಿ ಈ App ಮೂಲಕ ನೊಂದಣಿ ಮಾಡಿಕೊಂಡಿರುತ್ತಾರೆ. ಆದರೆ ಕೆಲವು ಮಂದಿ, ಉಡುಪಿ ಜಿಲ್ಲೆಯಿಂದ ಹೊರರಾಜ್ಯಗಳಿಗೆ ತೆರಳುವ ಪ್ರಯಾಣಿಕರಿಗೆ ಅವರ ರಾಜ್ಯಕ್ಕೆ ತೆರಳಲು ಮತ್ತು ಅವರು ಪ್ರಯಾಣದ ವ್ಯವಸ್ಥೆಗಳನ್ನು ಮಾಡುವುದಾಗಿ ತಿಳಿಸಿ ಹಣವನ್ನು ವಸೂಲಿ ಮಾಡುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿರುತ್ತದೆ. ಉಡುಪಿ ಜಿಲ್ಲೆಯಲ್ಲಿರುವ ಹೊರರಾಜ್ಯದ ಪ್ರಯಾಣಿಕರು ತಮ್ಮ ಸಂಬಂಧಿತ ರಾಜ್ಯಕ್ಕೆ ತೆರಳಲು ಅಗತ್ಯ ಮಾಹಿತಿ ನೀಡಲು ಮತ್ತು ಸಂದೇಹಗಳನ್ನು ಪರಿಹರಿಸಲು , ಜಿಲ್ಲೆಯ ನೋಡಲ್…

Read More

ಸುನಿಲ್ ಬೈಂದೂರು | ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸೇವಾ ಸಿಂಧುವಿನ ಮೂಲಕ ಪಾಸ್ ಪಡೆದು ಹೊರ ರಾಜ್ಯಗಳಿಂದ ಮರುಳುತ್ತಿರುವವರನ್ನು ಕುಂದಾಪುರ ಹಾಗೂ ಬೈಂದೂರು ತಾಲೂಕಿನ ವಿವಿಧೆಡೆ ಗುರುತಿಸಲಾಗಿರುವ ಸ್ಥಳಗಳಲ್ಲಿ ಕ್ವಾರಂಟೈನ್ ಮಾಡಲಾಗುತ್ತಿದ್ದು, ಕಳೆದ ಸೋಮವಾರದಿಂದ ಇಲ್ಲಿಯ ತನಕ ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಒಟ್ಟು 306 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಕುಂದಾಪುರ ತಾಲೂಕಿಗೆ ಮೇ.4ರಿಂದ ತೆಲಂಗಾಣದಿಂದ 118, ಕೇರಳದಿಂದ 1, ಗುಜರಾತ್‌ನಿಂದ 6, ಗೋವಾದಿಂದ 1, ಮಹಾರಾಷ್ಟ್ರದಿಂದ 39 ಹಾಗೂ ತಮಿಳುನಾಡಿನಿಂದ 7 ಮಂದಿ ಬಂದಿದ್ದಾರೆ. ಬೈಂದೂರು ತಾಲೂಕಿಗೆ ತೆಲಂಗಾಣದಿಂದ 109, ಆಂಧ್ರಪ್ರದೇಶದಿಂದ 6, ಮಹಾರಾಷ್ಟ್ರದಿಂದ 15, ಗೋವಾದಿಂದ 6, ಗುಜರಾತ್‌ನಿಂದ 1 ಮತ್ತು ಕೇರಳದಿಂದ ಒಬ್ಬರು ಬಂದಿದ್ದಾರೆ.  ಇವರೆಲ್ಲರೂ ಬೈಂದೂರು ತಾಲ್ಲೂಕಿನ ಶಿರೂರು, ಕೊಲ್ಲೂರು ಹಾಗೂ ಕುಂದಾಪುರ ತಾಲ್ಲೂಕಿನ ಹೊಸಂಗಡಿ ಮೂಲಕ ಜಿಲ್ಲೆ ಪ್ರವೇಶಿಸಿದ್ದಾರೆ. ಅಲ್ಲಿನ ಚೆಕ್‌ಪೋಸ್ಟ್‌ಗಳಲ್ಲಿ ಪ್ರಾಥಮಿಕ ಆರೋಗ್ಯ ತಪಾಸಣೆಗೆ ಒಳಪಡಿಸಿದ ಅವರಿಗೆ ಹೋಂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಕುಂದಾಪುರ ಹಾಗೂ ಬೈಂದೂರಿನ ಹಿಂದುಳಿದ ಮತ್ತು ಅಲ್ಪಸಂಖ್ಯಾತರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವ ಸಂದರ್ಭ ಹಾಗೂ ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಮಾಸ್ಕ್‌ಗಳನ್ನು (ಮಖ ಗವಸು) ಧರಿಸುವುದು ಕಡ್ಡಾಯವಾಗಿದ್ದು, ನಿಯಮ ಪಾಲಿಸದಿದ್ದಲ್ಲಿ ದಂಡ ವಿಧಿಸಲಾಗುತ್ತದೆ. ಕೋವಿಡ್-19 ಹರಡುವಿಕೆ ತಡೆಗಟ್ಟಲು ಸರಕಾರ ಲಾಕ್‌ಡೌನ್ ಘೋಷಣೆ ಮಾಡಿದ್ದು, ಈ ನಡುವೆ ಜನರಿಗೆ ಕೆಲವು ವಿನಾಯಿತಿಗಳನ್ನು ನೀಡಿದೆ. ಬೆಳಿಗ್ಗೆ 7 ರಿಂದ ಸಂಜೆ 7 ರ ತನಕ ಜನರು ಅಗತ್ಯ ವಸ್ತುಗಳ ಖರೀದಿ ಹಾಗೂ ಈಗಾಗಲೇ ತಿಳಿಸಲಾಗಿರುವ ಕೆಲಸ ನಿರ್ವಹಿಸಲು ಅವಕಾಶ ನೀಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ತಿರುಗಾಡುವಾಗ ಸಂದರ್ಭ ಮತ್ತು ಕೆಲಸದ ನಿರ್ವಹಿಸುವ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ಮಾಸ್ಕ್ ಧರಿಸದವರಿಗೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರೂ.200ಹಾಗೂ ಇತರ ಕಡೆಗಳಲ್ಲಿ ರೂ.100 ದಂಡ ವಿಧಿಸಲು ಪೊಲೀಸ್ ಸಬ್‌ಇಸ್ಪೆಕ್ಟರ್, ಮಹಾನಗರ ಪಾಲಿಕೆಗಳ ಆರೋಗ್ಯ ನಿರೀಕ್ಷಕರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಸರಕಾರದಿಂದ ನಿಯೋಜಿತರಾದ ಇತರ ಅಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಈ ನಿಯಮವನ್ನು ಕಟ್ಟುನಿಟ್ಟಾಗಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರಸ್ತುತ ನಿಲುಗಡೆಗೊಳಿಸಿರುವ ಬೆಂಗಳೂರು-ಕಣ್ಣೂರು-ಕಾರವಾರ ಕಂಬೈನ್ಡ್ ಎಕ್ಸ್‌ಪ್ರೆಸ್ ರೈಲನ್ನು ಕೆಲವು ಹೊಂದಾಣಿಕೆ ಮಾಡಿಕೊಂಡು ಪುನರಾರಂಭಗೊಳಿಸಬೇಕು ಎಂದು ದಕ್ಷಿಣ ಪಶ್ಚಿಮ ರೈಲ್ವೆ ಬಳಕೆದಾರರ ಸಮಾಲೋಚನಾ ಸಮಿತಿಯ ಸದಸ್ಯ ಕೆ. ವೆಂಕಟೇಶ್ ಕಿಣಿ ದಕ್ಷಿಣ ರೈಲ್ವೆಯ ಪ್ರಾದೇಶಿಕ ಮ್ಯಾನೇಜರ್ ಅವರನ್ನು ಒತ್ತಾಯಿಸಿದ್ದಾರೆ. ಕಾರವಾರ-ಯಶವಂತಪುರ ರೈಲು ಆರಂಭಿಸಿದ ಬಳಿಕ ವಾರಕ್ಕೆ ಮೂರು ಬಾರಿ ಮೈಸೂರು ಮೂಲಕ ಓಡಾಡುವ 16523/24 ಸಂಖ್ಯೆಯ ಬೆಂಗಳೂರು-ಕಾರವಾರ ರೈಲನ್ನು ರದ್ದುಪಡಿಸಲಾಗಿದೆ. ಅದರಿಂದಾಗಿ ಕರಾವಳಿ ಮೈಸೂರು ನಡುವೆ ರೈಲು ಸಂಪರ್ಕ ಇಲ್ಲದಂತಾಗಿದೆ. ಸಾಂಸ್ಕೃತಿಕ, ಐತಿಹಾಸಿಕ ಮತ್ತು ಪ್ರವಾಸೋದ್ಯಮ ಮಹತ್ವದ ನಗರವಾದ ಮೈಸೂರು ಮತ್ತು ಇತರ ಸ್ಥಳಗಳಿಗೆ ಕರಾವಳಿಯ ಗಣನೀಯ ಸಂಖ್ಯೆಯ ಪ್ರಯಾಣಿಕರು ನಿಲುಗಡೆಗೊಳಿಸಿದ ರೈಲಿನ ಮೂಲಕ ಸಂಚರಿಸುತ್ತಿದ್ದರು. ಈ ರೈಲು ಮಂಗಳೂರು ಕಾರವಾರ ನಡುವಿನ ನಿತ್ಯ ಪ್ರಯಾಣದ ರೈಲಾಗಿಯೂ ಬಳಕೆಯಾಗುತ್ತಿತ್ತು. ಹಲವು ರೈಲ್ವೆ ಪ್ರಯಾಣಿಕ ಸಂಘಗಳು ಈ ರೈಲಿನ ಪುನರಾರಂಭ ಮಾಡಿ ಮಡಗಾಂವ್ ವರೆಗೆ ವಿಸ್ತರಿಸಲು ಒತ್ತಾಯಿಸುತ್ತಿವೆ. ಬೆಂಗಳೂರು-ಕಣ್ಣೂರು ನಡುವಿನ 16517/18 ಸಂಖ್ಯೆಯ ರೈಲು ಈಗ ಮೈಸೂರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ದೇವಸ್ಥಾನಗಳನ್ನು ಶೀಘ್ರ ತೆರೆಯಬೇಕು ಎಂಬ ಯೋಚನೆ ಇದ್ದರೂ ‘ಎ’ ದರ್ಜೆಯ ದೇವಸ್ಥಾನಗಳಿಗೆ ಸಾರ್ವಜನಿಕ ಪ್ರವೇಶಕ್ಕೆ ಅವಕಾಶ ನೀಡುವುದರಿಂದ ಸಾಮಾಜಿಕ ಅಂತರದ ತೊಂದರೆ ಎದುರಾಗುವುದರಿಂದ, ಪರಿಸ್ಥಿತಿ ಅವಲೋಕಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಶನಿವಾರ ಕೊಲ್ಲೂರಿನಲ್ಲಿ ಯಕ್ಷಗಾನ ಕಲಾವಿದರಿಗೆ ಆಹಾರ ಕಿಟ್‌ಗಳ ವಿತರಣೆಗೆ ಚಾಲನೆ ನೀಡಿ ಮಾತನಾಡಿ ದೇವಸ್ಥಾನಗಳಲ್ಲಿ ತ್ರಿಕಾಲ ಪೂಜೆಯೂ ಸೇರಿದಂತೆ ಎಲ್ಲಾ ಪೂಜೆಗಳು ನಡೆಯುತ್ತಿದೆ. ಆದರೆ ತೆರೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಸಮಸ್ಯೆ ಇದೆ ಎಂದರು. ರಾಜ್ಯದ ಎ ದರ್ಜೆ ದೇವಾಲಯಗಳಿಂದ ಈವರೆಗೆ ಕೋರೋನ ಕಾರಣದಿಂದ ಸಂತ್ರಸ್ಥರಾಗಿರುವವರಿಗೆ ಇಲ್ಲಿಯ ತನಕ 7.5 ಲಕ್ಷ ಊಟ ವಿತರಿಸಲಾಗಿದೆ. ದೇವಸ್ಥಾಗಳಲ್ಲಿ ಪೂಜೆ ಪುರಸ್ಕಾರಗಳಿದ್ದರೂ, ಅರ್ಚಕರಿಗೆ ತಟ್ಟೆಕಾಸಿಲ್ಲದಿರುವುದರಿಂದ ಅರ್ಚಕರಿಗೆ ಕಿಟ್ ವಿತರಿಸಲಾಗುತ್ತಿದೆ. ಜಿಲ್ಲಾಡಳಿತ ಮೂಲಕವೂ ಅಗತ್ಯವುಳ್ಳವರಿಗೆ ಮುಜರಾಯಿ ಇಲಾಖಾ ದೇವಸ್ಥಾಗಳ ಆಹಾರ ಕಿಟ್ ವಿತರಿಸಲಾಗಿದೆ. ಈಗ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಚಿಕ್ಕಮಂಗಳೂರು, ಶಿವಮೊಗ್ಗ ಜಿಲ್ಲೆಯ ಯಕ್ಷಗಾನ ಕಲಾವಿದರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋವಿಡ್-19 ರೋಗವು ವಿಶ್ವದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಪಾನ್ ಮಸಾಲ, ಜರ್ದಾ, ಖೈನಿ, ಇತ್ಯಾದಿ ಬಳಕೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುವುದು ಜೊತೆಗೆ ಸಾಂಕ್ರಾಮಿಕ ರೋಗಗಳಾದ ಕ್ಷಯರೋಗ, ನ್ಯುಮೋನಿಯ ಮತ್ತು ಕೋವಿಡ್-19 ವೈರಸ್ ಒಬ್ಬರಿಂದ ಮತ್ತೊಬ್ಬರಿಗೆ ಹರಡಲು ಕಾರಣವಾಗಬಹುದು. ಬೀಡಿ, ಸಿಗರೇಟ್ ಸೇದುವುದರಿಂದ ಕೈಯಿಂದ ಬಾಯಿಗೆ ವೈರಸ್‌ಗಳು ಮಾನವನ ದೇಹವನ್ನು ಪ್ರವೇಶಿಸುವ ಸಾಧ್ಯತೆ ಇರುವುದರಿಂದ ಹಾಗೂ ದೇಹದ ಇತರೆ ಭಾಗಗಳಿಗೆ ಸೋಂಕು ಹರಡಿ ಶ್ವಾಸಕೋಶ, ಹೃದಯ ಸಂಬಂಧಿತ ಕಾಯಿಲೆಗಳು ಬರಬಹುದು. ಕೋವಿಡ್-19 ಸೋಂಕಿತರು , ಜಗಿಯುವ ಪಾನ್‌ಮಸಾಲ, ತಂಬಾಕು ಹಾಗೂ ತಂಬಾಕು ಉತ್ಪನ್ನಗಳನ್ನು ಬಳಸಿ ಉಗುಳುವುದರಿಂದ ಒಬ್ಬರಿಂದ ಇನ್ನೊಬ್ಬರಿಗೆ ಕೋವಿಡ್-19 ವೈರಸ್ ಹರಡುವ ಭೀತಿ ಇರುತ್ತದೆ. ಆದ್ದರಿಂದ ಸಾರ್ವಜನಿಕರ ಆರೋಗ್ಯ ಹಿತ ದೃಷ್ಟಿಯಿಂದ ಮುಂದಿನ ಆದೇಶದವರೆಗೂ ತಂಬಾಕು ಹಾಗೂ ಪಾನ್ ಮಸಾಲ, ಜರ್ದಾ, ಖೈನಿ, ಉತ್ಪನ್ನಗಳನ್ನು, ಉಡುಪಿ ಜಿಲ್ಲೆಯಾದ್ಯಂತ ಅಂಗಡಿಗಳಲ್ಲಿ ಮಾರಾಟ ಮಾಡುವುದು ಮತ್ತು ಸಾರ್ವಜನಿಕರು ಬಳಸುವುದನ್ನು…

Read More