ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ದಿ ಕನ್ಸರ‍್ನ್ಡ್ ಫಾರ್ ವರ್ಕಿಂಗ್ ಚಿಲ್ಡ್ರನ್ ಸಂಸ್ಥೆಯ ಪ್ರಾದೇಶಿಕ ಸಂಪನ್ಮೂಲ ಕೇಂದ್ರ ನಮ್ಮಭೂಮಿ ಇಲ್ಲಿನ ಎಲೆಕ್ಟ್ರಿಕಲ್ ಮತ್ತು ಪ್ಲಂಬಿಂಗ್ ವೃತ್ತಿ ತರಬೇತಿಯ ಮಕ್ಕಳು ಉಡುಪಿ ಜಿಲ್ಲೆಯ ಹೊಸಂಗಡಿಯಲ್ಲಿರುವ ವಾರಾಹಿ ಅಂಡರ್ ಗ್ರೌಂಡ್ ಪವರ್ ಹೌಸ್‌ಗೆ ಅಧ್ಯಯನ ಪ್ರವಾಸವನ್ನು ಕೈಗೊಂಡಿದ್ದರು. ಈ ಸಂದರ್ಭದಲ್ಲಿ ವಾರಾಹಿ ಪವರ್ ಹೌಸ್‌ನ ಕಿರಿಯ ಅಭಿಯಂತರರಾದ ಸಂತೋಷರವರೊಂದಿಗೆ ಸಂವಾದ ನಡೆಸಿದರು. ಇವರು ವಾರಾಹಿ ಜಲ ವಿದ್ಯುತ್ ಯೋಜನೆಯನ್ನು ಮಕ್ಕಳಿಗೆ ಪರಿಚಯಿಸಿ, ಮಕ್ಕಳು ಕೇಳುವ ಪ್ರಶ್ನೆಗಳಿಗೆ ಸರಳವಾದ ಉತ್ತರಗಳನ್ನು ನೀಡುತ್ತಾ, ವೀಕ್ಷಣೆಯ ಸಂದರ್ಭದಲ್ಲಿ ವಾರಾಹಿ ಜಲ ವಿದ್ಯುತ್ ಯೋಜನೆಯು 1989ರಲ್ಲಿ ಪ್ರಾರಂಭವಾದ ಬಗ್ಗೆ ಮತ್ತು ಈ ಯೋಜನೆಯಲ್ಲಿರುವ ಘಟಕಗಳು ಹಾಗೂ ಅವುಗಳ ವಿದ್ಯುತ್ ಉತ್ಪಾದನಾ ಸಾಮರ್ಥ್ಯಗಳ ಕುರಿತಾಗಿ ಮಾಹಿತಿಯನ್ನು ಹಂಚಿಕೊಂಡರು. ಅದರಲ್ಲೂ ಇತ್ತೀಚಿನ ಯುಗದಲ್ಲಿ ಸೋಲಾರ್ ಶಕ್ತಿಗೆ ಪ್ರಮುಖ್ಯತೆಯನ್ನು ನೀಡುತ್ತಿದ್ದರೂ ಸಹ ಜಲವಿದ್ಯುತ್ ಶಕ್ತಿಗೆ ಇರುವ ಬೇಡಿಕೆಯ ಕುರಿತು ಹಾಗೂ ಪರಿಸರ ಸಂರಕ್ಷಣೆಯ ಕಾಳಜಿಯಲ್ಲಿ ಈ ಯೋಜನೆಗೆ ನೀಡಿರುವ ಮಹತ್ವದ ಕುರಿತಾಗಿ ಚರ್ಚಿಸಿದರು.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಉಡುಪಿ ಜಿಲ್ಲೆಯ ಕರಾವಳಿ ನಿಯಂತ್ರಣ ವಲಯ ಪ್ರದೇಶದ (CRZ) ಪಾಪನಾಶಿನಿ ನದಿ ಪಾತ್ರದ 01, ಸ್ವರ್ಣಾ ನದಿ ಪಾತ್ರದ 06, ಸೀತಾ ನದಿ ಪಾತ್ರದ 03 ಮರಳು ದಿಬ್ಬಗಳಲ್ಲಿ ಒಟ್ಟು 7,13,090 ಮೆ.ಟನ್ ಮರಳನ್ನು ತೆರವುಗೊಳಿಸಲು ಕರ್ನಾಟಕ ರಾಜ್ಯ ಕರಾವಳಿ ವಲಯ ನಿರ್ವಹಣಾ ಪ್ರಾಧಿಕಾರದಿಂದ (KSCZMA) ಕರಾವಳಿ ನಿಯಂತ್ರಣ ವಲಯ ನಿರಾಕ್ಷೇಪಣಾ ಪತ್ರ (CRZ Clearence) ದೊರೆತಿರುತ್ತದೆ. ಈ ಸಂಬಂಧ ಮಾ. 16 ರ ಸೋಮವಾರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ 07 ಸದಸ್ಯರ ಸಮಿತಿ ಸಭೆಯಲ್ಲಿ ಸಾಂಪ್ರದಾಯಿಕ ಮರಳು ಪರವಾನಿಗೆದಾರರಿಗೆ ಸದರಿ ಮರಳು ದಿಬ್ಬಗಳನ್ನು ತೆರವುಗೊಳಿಸಲು ತಾತ್ಕಾಲಿಕ ಪರವಾನಿಗೆಯನ್ನು ನೀಡಲು ತೀರ್ಮಾನಿಸಲಾಗಿರುತ್ತದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಪ್ರಕಟಣಾ ಫಲಕದಲ್ಲಿ ಮರಳು ದಿಬ್ಬಗಳ ವಿವರಗಳನ್ನು ಈಗಾಗಲೇ ಪ್ರಕಟಿಸಿದ್ದು,2019 ರ ಸೆಪ್ಟಂಬರ್ 17 ಮತ್ತು 30 ರಂದು ನಡೆದ ಜಿಲ್ಲಾ 07 ಸದಸ್ಯರ ಸಮಿತಿ ಸಭೆಗಳಲ್ಲಿ ನಿರ್ಣಯಿಸಿದಂತೆ, ಅರ್ಹ ಸಾಂಪ್ರದಾಯಿಕ ಮರಳು ಪರವಾನಿಗೆದಾರರು ಮರಳು…
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋಳಿ ಶೀತ ಜ್ವರ ಕಾಣಿಸಿಕೊಂಡಿದ್ದು, ಜಿಲ್ಲೆಯಲ್ಲಿ ಈ ಬಗ್ಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ ಕಛೇರಿಯಲ್ಲಿ ನಡೆದ ಕೋಳಿ ಶೀತ ಜ್ವರದ ಕಣ್ಗಾವಲಿನ ಕ್ರಮ ಕೈಗೊಳ್ಳುವ ಸರ್ವೇಕ್ಷಣಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋಳಿಶೀತ ಜ್ವರವು ಈಗಾಗಲೇ ಮೈಸೂರು ಮತ್ತು ದಾವಣಗೆರೆಯಲ್ಲಿ ಕಂಡು ಬಂದಿದ್ದು, ಜಿಲ್ಲೆಯ ಕೋಳಿ ಮಾರಾಟಗಾರರು, ಈ ಜಿಲ್ಲೆಗಳಿಂದ ಕೋಳಿಗಳನ್ನು ತರಿಸದಂತೆ ಸೂಚನೆಯನ್ನು ನೀಡಿದ ಜಿಲ್ಲಾಧಿಕಾರಿ, ಜಿಲ್ಲೆಯಲ್ಲಿ ಕೋಳಿ ಸಾಕಾಣಿಕ ಕೇಂದ್ರಗಳು, ಕೋಳಿ ಮಾಂಸ ಮಾರಾಟ ಕೇಂದ್ರಗಳು ಹಾಗೂ ಕೋಳಿ ಸಾಗಾಣಿಕೆ ವಾಹನಗಳ ಚಲನ-ವಲನಗಳ ಮೇಲೆ ನಿಗಾವಹಿಸಲಾಗುತ್ತಿದೆ, ಫಾರಂ ಮಾಲೀಕರು ಕೋಳಿ ಸಾಕಾಣಿಕೆ ಸ್ಥಳದ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು, ಫಾರಂಗಳಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿ ಅಗತ್ಯ ಸುರಕ್ಷಾ ವಸ್ತ್ರಗಳನ್ನು ಧರಿಸುವಂತೆ ಸೂಚಿಸಿದರು. ಕೋಳಿ ಸಾಕಾಣಿದಾರರಿಗೆ, ಫಾರಂ ಮಾಲೀಕರಿಗೆ, ಕೆಲಸಗಾರರಿಗೆ, ಪಕ್ಷಿಧಾಮಗಳ ಹತ್ತಿರವಿರುವ ಸಾರ್ವಜನಿಕರಿಗೆ ಹಾಗೂ ರೈತರಿಗೆ ಹಕ್ಕಿ ಜ್ವರದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಡುಪಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ, ರೆಡ್ ಕ್ರಾಸ್ ಘಟಕ, ಕಮಲಶಿಲೆ ಮಾನಂಜೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್, ರಿವರ್ ಸೈಡ್ ರೋಟರಿ ಆಶ್ರಯದಲ್ಲಿ ಕುಂದಾಪುರ ಮಿನಿ ವಿಧಾನ ಸೌಧ ಎದುರು ಮಂಗಳವಾರ ನಡೆದ ಕರೋನಾ, ಹೆಚ್1 ಎನ್1, ಹಕ್ಕಿ ಜ್ವರ, ಮಂಗನ ಕಾಯಿಲೆ ಜಾಗೃತಿ ರಥಕ್ಕೆ ಚಾಲನೆ ನೀಡಲಾಯಿತು. ಚಾಲನೆ ನೀಡಿದ ಕುಂದಾಪುರ ಉಪ ವಿಭಾಗಾಧಿಕಾರಿ ಕೆ. ರಾಜು ಮಾತನಾಡಿ ಕರೋನಾ ಬಗ್ಗೆ ಪ್ರಸಕ್ತ ಮಾಧ್ಯಮ ಯಾವ ರೀತಿ ಕೆಲಸ ಮಾಡುತ್ತಿದೆ ಎನ್ನುವುದನ್ನು ಎಲ್ಲರೂ ಗಮನಿಸುತ್ತಿದ್ದಾರೆ. ಸತ್ಯ ಸುಳ್ಳುಗಳು ಜನರ ನಡುವೆ ಹರಿದಾಡುವಂತಾಗಿದೆ. ಯಾರೂ ದೈರ್ಯ ಕಳೆದುಕೊಳ್ಳಬಾರದು. ಕರೋನಾ ಬಗ್ಗೆ ಜಾಗೃತಿ ಬೇಕು, ಭಯ ಬೇಡ. ಎಲ್ಲರೂ ಒಟ್ಟಾಗಿ ಕರೋನ ವಿರುದ್ಧ ಹೋರಾಡುವ ಮೂಲಕ ಹಿಮ್ಮೆಟ್ಟಿಸೋಣ ಎಂದರು. ಜಾಗೃತಿ ರಥ ಎಲ್ಲಾ ಕಡೆ ಸಂಚರಿಸಿ ಮಾಹಿತಿ ನೀಡಲಿದೆ. ತಾಲೂಕು ಆರೋಗ್ಯ ಅಧಿಕಾರಿ ನೇತೃತ್ವದಲ್ಲಿ ಜಾಗೃತಿ ರಥಕ್ಕೆ ಚಾಲನೆ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಯಡ್ತರೆ ನೇತಾಜಿ ಯುವಕ ಮಂಡಲದ ಟೀ-ಶರ್ಟ್ ಅನ್ನು ಯುವಕ ಮಂಡಲದ ಗೌರವ ಅಧ್ಯಕ್ಷ ಹೇರಿಯ ದೇವಾಡಿಗ ಹಾಗೂ ಸಂಘ ಅಧ್ಯಕ್ಷ ರಾಘವೇಂದ್ರ ಪೂಜಾರಿ ಸಂಘದ ಕಛೇರಿ ಆವರಣದಲ್ಲಿ ಅನಾವರಣ ಮಾಡಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ವಿಶ್ವನಾಥ ದೇವಾಡಿಗ, ವೀರೇಂದ್ರ ಪೂಜಾರಿ, ಅರುಣ್ ಕುಮಾರ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರದ ಸೂಚನೆಯಂತೆ ಹಲವು ಕ್ರಮಗಳನ್ನು ಕೈಗೊಂಡಿದ್ದು, ಜಿಲ್ಲೆಯ ಯಾವುದೇ ಅಧಿಕಾರಿ/ಸಿಬ್ಬಂದಿಗಳಿಗೆ ಈ ಅವಧಿಯಲ್ಲಿ ರಜೆ ಮಂಜೂರು ಮಾಡದಂತೆ ಮತ್ತು ಜಿಲ್ಲಾಧಿಕಾರಿ, ಎಸ್.ಪಿ.ಸಿಇಓ ಇವರ ಅನುಮತಿ ಇಲ್ಲದೇ ಕೇಂದ್ರಸ್ಥಾನ ಬಿಟ್ಟು ತೆರಳದಂತೆ ಹಾಗೂ ತಪ್ಪಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ. ಅವರು ಸೋಮವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕೊರೋನ ನಿಯಂತ್ರಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿನ ಲಾಡ್ಜ್‌ಗಳಲ್ಲಿರುವ ಪ್ರವಾಸಿಗರ ವಿವರಗಳನ್ನು ಪಡೆಯುವಂತೆ ಮತ್ತು ಪ್ಲಾಟ್‌ಗಳಿಗೆ ಹೊಸದಾಗಿ ಬರುವವರ ಮಾಹಿತಿ ಪಡೆದು ಅವರ ಸ್ವ-ಹೇಳಿಕೆ ಪಡೆಯುವಂತೆ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ಮತ್ತು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು. ಜಿಲ್ಲೆಯಲ್ಲಿ ಮಾಸ್ಕ್‌ಗಳ ಕೊರತೆ ಸೃಷ್ಠಿಸುವುದು ಮತ್ತು ಅವುಗಳನ್ನು ಹೆಚ್ಚು ಬೆಲೆಗೆ ಮಾರಾಟ ಮಾಡುವುದು ಕಂಡುಬಂದಲ್ಲಿ ಅಂತಹವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: 2020-21 ನೇ ಸಾಲಿನಲ್ಲಿ ಡಾ| ಬಾಬು ಜಗಜೀವನ ರಾಮ ರವರ 113 ನೇ ಹಾಗೂ ಡಾ| ಬಿ.ಆರ್ ಅಂಬೇಡ್ಕರ್ ರವರ 129 ನೇ ಜನ್ಮ ದಿನಾಚರಣೆ ಅಂಗವಾಗಿ ಪ್ರಶಸ್ತಿ ನೀಡುವ ಬಗ್ಗೆ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೊತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ, 2020-21 ರ ಸಾಲಿನ ಡಾ| ಬಾಬು ಜಗಜೀವನ ರಾಮ ಹಾಗೂ ಡಾ| ಬಿ.ಆರ್ ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡಿ ಗೌರವಿಸಲು ಉದ್ದೇಶಿಸಲಾಗಿರುತ್ತದೆ. ಜಿಲ್ಲೆಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳು ತಮ್ಮ ಸವಿವರವುಳ್ಳ ಅರ್ಜಿ ನಮೂನೆಯನ್ನು ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲೆಯಿಂದ ಪಡೆದು ಭರ್ತಿ ಮಾಡಿ, ಮಾರ್ಚ್ 19 ರ ಒಳಗೆ ಉಪನಿರ್ದೇಶಕರು ಹಾಗೂ ಸದಸ್ಯ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಜಿಲ್ಲೆ,…
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಕರ್ನಾಟಕ ಲೋಕಾಯುಕ್ತ ಕಾಯ್ದೆ ಅಡಿಯಲ್ಲಿ ವಿಚಾರಣೆ ಬಯಸುವ ಸಾರ್ವಜನಿಕರು ನಿಗದಿತ ಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದು. ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಠಿಯಿಂದ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವ ದೃಷ್ಠಿಯಿಂದ ದೂರು ಅರ್ಜಿಗಳ ಪ್ರಪತ್ರಗಳನ್ನು ಮಾರ್ಚ್ 19 ರಂದು ಬೆಳಿಗ್ಗೆ 11 ರಿಂದ 12.30 ರವರೆಗೆ ಬೈಂದೂರು ತಾಲೂಕು ಕಚೇರಿ, ಮಾರ್ಚ್ 20 ರಂದು ಬೆಳಿಗ್ಗೆ 11 ರಿಂದ 12.30 ರವರೆಗೆ ಕಾಪು ತಾಲೂಕು ಕಚೇರಿ, ಮಾರ್ಚ್ 21 ರಂದು ಬೆಳಿಗ್ಗೆ 11 ರಿಂದ 12.30 ರವರೆಗೆ ಕುಂದಾಪುರ ಪ್ರವಾಸಿ ಮಂದಿರ, ಮಾರ್ಚ್ 23 ರಂದು ಬೆಳಿಗ್ಗೆ 11 ರಿಂದ 12.30 ರವರೆಗೆ ಕಾರ್ಕಳ ಪ್ರವಾಸಿ ಮಂದಿರ, ಮಾರ್ಚ್ 24 ರಂದು ಬೆಳಿಗ್ಗೆ 11 ರಿಂದ 12.30 ರವರೆಗೆ ಹೆಬ್ರಿ ತಾಲೂಕು ಕಚೇರಿ, ಮಾರ್ಚ್ 26 ರಂದು ಬೆಳಿಗ್ಗೆ 11 ರಿಂದ 12.30 ರವರೆಗೆ ಬ್ರಹ್ಮಾವರ ತಾಲೂಕು ಕಚೇರಿ, ಮಾರ್ಚ್ 30 ರಂದು ಬೆಳಿಗ್ಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: 2019-20 ನೇ ಸಾಲಿನ ಸ್ವಯಂ ಉದ್ಯೋಗ, ಸಮೃದ್ಧಿ, ಉನ್ನತಿ, ಐರಾವತ, ಪ್ರೇರಣಾ, ಸ್ಪೂರ್ತಿ, ಭೂ ಒಡೆತನ, ಗಂಗಾ ಕಲ್ಯಾಣ ಯೋಜನೆಗಳಿಗೆ ಸಂಬಂಧಿಸಿದಂತೆ, ಅರ್ಹ ಸಫಾಯಿ ಕರ್ಮಚಾರಿ / ಮ್ಯಾನುವಲ್ ಸ್ಕಾವೆಂಜರ‍್ಸ್ ಹಾಗೂ ಅವರ ಅವಲಂಬಿತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳವರು ನಿಗಮದ ವೆಬ್‌ಸೈಟ್ www.ksskdc.kar.nic.in ಮುಖಪುಟ ಮೆನುವಿನಲ್ಲಿ ಆನ್‌ಲೈನ್ ಮೂಲಕ ಏಪ್ರಿಲ್ ೩೦ ರ ಒಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ, ಜಿಲ್ಲಾಡಳಿತ ಕಚೇರಿಗಳ ಸಂಕೀರ್ಣ, ರಜತಾದ್ರಿ, ಮಣಿಪಾಲ ಇವರನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ಆಶ್ರಯದಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿಜಯಾ ಕಾಲೇಜು, ಮೂಲ್ಕಿ ಇಲ್ಲಿನ ಪ್ರಾಧ್ಯಾಪಕರಾದ ಅಶ್ವಿನ್ ಎಂ ಅವರು ಮಾತನಾಡಿ ಸಂಸ್ಕೃತ ಭಾಷೆಯ ಹಾಗೂ ಸಂಸ್ಕೃತಿಯ ರಕ್ಷಕರಾಗೋಣ. ಸಂಸ್ಕೃತ ಭಾಷೆಯು ಭಾರತೀಯತೆಯನ್ನು ಉಳಿಸುತ್ತದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು. ಸಂಸ್ಕೃತ ವಿಭಾಗ ಮುಖ್ಯಸ್ಥೆ ಡಾ.ಯಶವಂತಿ ಸ್ವಾಗತಿಸಿದರು. ಉಪನ್ಯಾಸಕಿ ಗಾಯತ್ರಿ ಸುವರ್ಣ ಕಾರ್ಯಕ್ರಮ ನಿರ್ವಹಿಸಿದರು. ಸಂಸ್ಕೃತೋತ್ಸವ ಪ್ರಯುಕ್ತ ನಡೆದ ವಿವಿಧ ಸ್ಪರ್ಧಾ ವಿಜೇತರರಾದ ಮತ್ತು ಚಟುವಟಿಕೆಗಳಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿನಿ ಮೇಘನಾ ಪ್ರಭು ವಂದಿಸಿದರು.
