Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿಕ್ಷಣ ವ್ಯಕ್ತಿಯಲ್ಲಿ ಸಂಸ್ಕಾರ ಹಾಗೂ ಸ್ವಾಭಿಮಾನವನ್ನು ಬೆಳೆಸುತ್ತದೆ. ಶಿಕ್ಷಣದ ಜೊತೆಗೆ ಕಲಾಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರಿಂದ ಆತ ಮತ್ತಷ್ಟು ಕ್ರೀಯಾಶೀಲನಾಗುತ್ತಾನೆ. ಕಲೆ, ಶಿಕ್ಷಣ ಎಲ್ಲದರ ಮೂಲ ಉದ್ದೇಶ ಸಮಾಜವನ್ನು ಪ್ರಗತಿಯತ್ತ ಕೊಂಡೊಯ್ಯುವುದಾಗಿದೆ ಎಂದು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು. ಅವರು ಪರಿಶಿಷ್ಟ ಪಂಗಡದ ರಂಗತಂಡ ಸಂಚಲನ ರಿ. ಹೊಸೂರು ಆಶ್ರಯದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಭಾನುವಾರ ಹೊಸೂರಿನ ಕೆ.ವಿ ಸುಬ್ಬಣ್ಣ ವನರಂಗದಲ್ಲಿ ಆಯೋಜಿಸಲಾದ ಹನ್ನೆರಡನೇ ವರ್ಷದ ವಾರ್ಷಿಕ ಸಂಭ್ರಮ ವನಸಿರಿಯಲ್ಲೊಂದು ರಂಗಸುಗ್ಗಿ ಕಾರ್ಯಕ್ರಮವನ್ನು ದೀಪ ಬೆಳಗಿ, ಮಡಿಕೆಗೆ ಹಾಲೆರೆದು ಉದ್ಘಾಟಿಸಿ ಮಾತನಾಡಿದರು. ಪರಿಶಿಷ್ಟ ಪಂಗಡ ಸಮುದಾಯದ ಅಭ್ಯುದಯಕ್ಕೆ ಬದ್ಧನಾಗಿದ್ದು, ಸಮುದಾಯಕ್ಕೆ ಅಗತ್ಯವಾದ ಎಲ್ಲಾ ಸೌಕರ್ಯಗಳನ್ನು ಒದಗಿಸಿಕೊಡಲಾಗುವುದು. ತೂದಳ್ಳಿ ಕಿಂಡಿ ಅಣೆಕಟ್ಟಿಗೆ 3.75 ಲಕ್ಷ ರೂ., ಅತ್ಯಾಡಿ ತೂದಳ್ಳಿ ರಸ್ತೆಗೆ 1.64 ಲಕ್ಷ ರೂ. ಅನುದಾನ ಬಿಡುಗಡೆಗೊಂಡಿದ್ದು ಯಡ್ತರೆ ಗ್ರಾಮಕ್ಕೆ ಒಟ್ಟು8 ಕೋಟಿ ಅನುದಾನ ಈಗಾಗಲೇ ಬಿಡುಗಡೆಯಾಗಿದೆ ಎಂದರು. ಜಿಲ್ಲಾ ಕನ್ನಡ ಸಾಹಿತ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಳವಾಡಿ ಶ್ರೀ ಈಶ್ವರ ಮಾರಿಕಾಂಬ ದೇವಸ್ಥಾನದಲ್ಲಿ ಮಾ.೨೭ ರಿಂದ ಎ.೪ರ ವರೆಗೆ ನಡೆಯುವ ನವೀಕೃತ ಗರ್ಭಗುಡಿ ಮತ್ತು ನೂತನ ಶಿಲಾಮಯ ತೀರ್ಥ ಮಂಟಪ ಸಮರ್ಪಣೆ ಹಾಗೂ ಅಷಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ನಿವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಬಿ. ಜಗನ್ನಾಥ ಶೆಟ್ಟಿ ಬಿಡುಗಡೆಗೊಳಿಸಿದರು. ಧಾರ್ಮಿಕ ಮುಖಂಡರಾದ ಬಿ. ಅಪ್ಪಣ್ಣ ಹೆಗ್ಡೆ, ಶ್ರೀ ಈಶ್ವರ ಮಾರಿಕಾಂಬ ದೇವಸ್ಥಾನದ ಆಡಳಿತ ಮಂಡಳಿ ಅನುವಂಶಿಯ ಮೊಕ್ತೇಸರರು ಕೆ ಚಂದ್ರಶೇಖರ ಶೆಟ್ಟಿ ಹಾಗು ಕೆ ವಸಂತ ಕುಮಾರ್ ಶೆಟ್ಟಿ ಕಾರಿಕಟ್ಟೆ, ಉತ್ಸವ ಸಮಿತಿ ಅಧ್ಯಕ್ಷರಾದ ಎಚ್ ವಸಂತ ಹೆಗ್ಡೆ ಕಳವಾಡಿ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾದ ದಿವಾಕರ್ ಹೆಗ್ಡೆ ಕಳವಾಡಿ, ಆಡಳಿತ ಮಂಡಳಿ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಕಾರಿಕಟ್ಟೆ, ತಗ್ಗರ್ಸೆ ಟಿ. ನಾರಾಯಣ ಹೆಗ್ಡೆ, ವೆಂಕ್ಟ ಪೂಜಾರಿ ಸಸಿಹಿತ್ಲು, ವತ್ತಿನಕಟ್ಟೆ ದೇವಳದ ಗೌರವಾಧ್ಯಕ್ಷರಾದ ರಾಜು ಪೂಜಾರಿ ಯಡ್ತರೆ, ಅಧ್ಯಕ್ಷರಾದ ನಾಗರಾಜ ಶೆಟ್ಟಿ ನಾಕಟ್ಟೆ, ಜಗನ್ನಾಥ ಶೆಟ್ಟಿ, ವೆಂಕಟಾಚಲ ಮಯ್ಯ ಮತ್ತು ಗಣಪಯ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸ್ವಾವಲಂಬಿ ಜೀವನ ನಡೆಸಲು ಅನುಕೂಲ ಮಾಡಿಕೊಟ್ಟಿದೆ. ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡಬೇಕೆನ್ನುವ ಉದ್ದೇಶದಿಂದ ಸಂಘದ ಸದಸ್ಯರ ಮಕ್ಕಳ ಉನ್ನತ ಶಿಕ್ಷಣಕ್ಕೆ ಸುಜ್ಞಾನ ನಿಧಿ ಮೂಲಕ ಸಹಾಯ ಮಾಡಲಾಗುತ್ತಿದೆ. ಈ ಯೋಜನೆಯ ಸದುಪಯೋಗ ಪಡೆದುಕೊಂಡು ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕಾದ ಜವಾಬ್ದಾರಿ ಸ್ವಸಹಾಯ ಸಂಘದ ಸದಸ್ಯರದ್ದಾಗಿದೆ ಎಂದು ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಸತೀಶ ಎಂ.ನಾಯಕ್ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಾಡ-ಸೇನಾಪುರ ಒಕ್ಕೂಟದ ಆಶ್ರಯದಲ್ಲಿ ನಾಡ-ಗುಡ್ಡೆ ಅಂಗಡಿಯ ಶ್ರೀ ಸೀತಾರಾಮ ಕಲ್ಯಾಣ ಮಂಟಪದಲ್ಲಿ ಭಾನುವಾರ ಜರಗಿದ ಸುಜ್ಞಾನ ನಿಧಿ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಾಡ ಒಕ್ಕೂಟದ ಅಧ್ಯಕ್ಷೆ ವೀಣಾ ಆಚಾರ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಯೋಜನೆಯ ಬೈಂದೂರು ತಾಲೂಕು ಯೋಜನಾಧಿಕಾರಿ ಶಶಿರೇಖಾ ಪಿ. ಶುಭ ಹಾರೈಸಿದರು. ಒಕ್ಕೂಟದ ಎಂಟು ಮಂದಿ ಸದಸ್ಯರಿಗೆ ಸುಜ್ಞಾನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ನದಿ ಹಾಗೂ ಸಮುದ್ರದಲ್ಲಿ ತ್ಯಾಜ್ಯ, ಪ್ಲಾಸ್ಟಿಕ್ ಮತ್ತಿತರ ವಸ್ತುಗಳನ್ನು ಎಸೆಯಲಾಗುತ್ತಿದ್ದು ಇದರಿಂದ ಜಲಚರ ಜೀವಿಗಳಿಗೆ ಹಾನಿಯಾಗುತ್ತಿದೆ. ತ್ಯಾಜ್ಯಗಳನ್ನು ನದಿ, ಸಮುದ್ರ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಎಸೆಯುವುದರಿಂದ ಆಗುವ ಅನಾಹುತಗಳು, ತೊಂದರೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಸ್ವಚ್ಛತೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿ ಸಮಾಜದಲ್ಲಿ ಬದಲಾವಣೆ ತರುವ ಪ್ರಯತ್ನ ನಡೆಸಬೇಕು ಎಂದು ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದೀಪ ಜಿ.ಎಸ್. ಹೇಳಿದರು. ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆ, ಲಯನ್ಸ್ ಕ್ಲಬ್ ತ್ರಾಸಿ-ಗಂಗೊಳ್ಳಿ ಆಶ್ರಯದಲ್ಲಿ ಖಾರ್ವಿ ಆನ್‌ಲೈನ್ ಸಹಯೋಗದೊಂದಿಗೆ ಭಾನುವಾರ ಜರಗಿದ ತ್ರಾಸಿ ಬೀಚ್ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿಯವರ ಸ್ವಚ್ಛ ಭಾರತ ಕಾರ್ಯಕ್ರಮ ಯಶಸ್ವಿಯಾಗುತ್ತಿದ್ದು, ಎಲ್ಲರೂ ಸ್ವಯಂಪ್ರೇರಿತರಾಗಿ ತಮ್ಮ ಮನೆ ವಠಾರ, ಬೀದಿಯನ್ನು ಸ್ವಚ್ಛಗೊಳಿಸಿ ಸ್ವಚ್ಛ, ಸದೃಢ ದೇಶ ನಿರ್ಮಿಸಲು ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು. ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ನೇರಿ ಕಾರ್ನೆಲಿಯೋ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ನಮ್ಮ ದೇಶ ಸ್ವಾತಂತ್ರ್ಯ ಪಡೆಯುವಲ್ಲಿ ಸಂಗೀತ ಮಹತ್ತರ ಪಾತ್ರ ವಹಿಸಿದೆ. ಸಂಗೀತಕ್ಕೆ ಅದ್ಭುತವಾದ ಶಕ್ತಿಯಿದ್ದು, ಶಾಂತಿ, ಸಾಮರಸ್ಯ, ಸಹಬಾಳ್ವೆ ನಡೆಸಲು ಸಂಗೀತ ಸಹಕಾರಿಯಾಗುತ್ತದೆ. ಬಾಲ್ಯದಲ್ಲಿಯೇ ಮಕ್ಕಳಲ್ಲಿನ ಪ್ರತಿಭೆಗಳನ್ನು ಗುರುತಿಸಿ ಅವರ ಆಸಕ್ತಿಯ ಕ್ಷೇತ್ರದಲ್ಲಿ ಅವರನ್ನು ಬೆಳೆಯಲು ಬಿಡಬೇಕು. ಶಿಕ್ಷಣದ ಜೊತೆಗೆ ಪಾಠೇತರ ಚಟುವಟಿಕೆಯಲ್ಲಿ ಮಕ್ಕಳು ಸಕ್ರಿಯರಾದರೆ ಅವರ ಭವಿಷ್ಯ ಉಜ್ವಲವಾಗುತ್ತದೆ ಎಂದು ಕುಂದಾಪುರದ ವಕೀಲ ರವಿಕಿರಣ್ ಮುರ್ಡೇಶ್ವರ ಹೇಳಿದರು. ಶ್ರೀ ಸಿಂಗಧೂರೇಶ್ವರಿ ಡಾನ್ಸ್ ಅಕಾಡೆಮಿ ಗಂಗೊಳ್ಳಿ ಮತ್ತು ಸನ್ನಿಧಿ ಎಂಟರ್‌ಪ್ರೈಸಸ್ ತ್ರಾಸಿ ಇವರ ಸಂಯುಕ್ತ ಆಶ್ರಯದಲ್ಲಿ ಪಂಚಗಂಗಾವಳಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಗಂಗೊಳ್ಳಿ ಪ್ರಾಯೋಜಕತ್ವದಲ್ಲಿ ಗಂಗೊಳ್ಳಿಯ ಸ.ವಿ.ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಶನಿವಾರ ಸಂಜೆ ಜರಗಿದ ವಾಯ್ಸ್ ಆಫ್ ಕರಾವಳಿ ಕೋಗಿಲೆ -೨೦೨೦ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತನಾಡಿದರು. ನಮ್ಮ ನಡುವೆ ಅನೇಕ ಪ್ರತಿಭೆಗಳಿದ್ದು ಅವರನ್ನು ಗುರುತಿಸಿ ಸೂಕ್ತ ವೇದಿಕೆ ನೀಡುವಲ್ಲಿ ವಿಫಲರಾಗುತ್ತಿದ್ದೇವೆ. ಹೀಗಾಗಿ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸೂಕ್ತ ಅವಕಾಶ ಕಲ್ಪಿಸಿಕೊಟ್ಟು ಅವರ ಭವಿಷ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ಉತ್ತರದಾಯಿತ್ವಗಳು ಪ್ರತಿಯೊಬ್ಬರ ಆಲೋಚನೆಗಳನ್ನು ಭಿನ್ನವಾಗಿಸುತ್ತದೆ. ವಿದ್ಯಾರ್ಥಿಗಳು ಯಾವಾಗಲೂ ನಕಾರಾತ್ಮಕ ವಿಷಯಗಳಿಗೆ ಕಿವಿಗೊಡದೆ, ಧನಾತ್ಮಕ ವಿಚಾರಗಳತ್ತ ಗಮನಹರಿಸಿದರೆ ಅವರೊಳಗಿನ ಮಾನಸಿಕ ತುಮುಲಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಅಂತಾರಾಷ್ಟ್ರೀಯ ಖ್ಯಾತೀಯ ವಾಗ್ಮಿ ದೀಕ್ಷಿತ್ ಪರಶ್ಶಿನಿ ಹೇಳಿದರು. ಆಳ್ವಾಸ್ ಕಾಲೇಜಿನ ಮನಃಶಾಸ್ತ್ರ ವಿಭಾಗದ ಸೈಕಾಲಜಿ ಸ್ಟುಡೆಂಟ್ ಕೌನ್ಸಿಲ್ ’EUNOIA’ ವತಿಯಿಂದ ಹಮ್ಮಿಕೊಂಡಿದ್ದ ’ಲೈಫ್ ಈಸ್ ಪಾಸಿಟಿವ್’ ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕರಾಗಿ ಮಾತನಾಡಿದರು. ಜೀವನದಲ್ಲಿ ಸೋಲನ್ನು ಗೆಲ್ಲಬೇಕೆಂಬ ಹಠವಿದ್ದರೆ ಸಮಸ್ಯೆಗಳೇ ಇರುವುದಿಲ್ಲ. ಎಲ್ಲಿ ನಾವು ಸೋಲನ್ನು ಒಪ್ಪಿಕೊಂಡು, ನಕಾರಾತ್ಮಕ ಭಾವನೆಯಿಂದ ಮುಂದುವರಿಯುತ್ತೇವೆಯೋ ಅಲ್ಲಿ ನಾವು ನಿಜವಾಗಿ ಸೋಲನ್ನು ಕಾಣುತ್ತೇವೆ ಎಂದರು. ಮೋಟಿವೇಶನ್ ಪಾಠಗಳು ಬದುಕಿಗೆ ಹೊಸ ತಿರುವುಗಳನ್ನು ಕೊಡುವುದು ಸತ್ಯ.. ಆದರೆ, ಇಂದಿನ ದಿನಗಳಲ್ಲಿ ಮೋಟಿವೇಶನ್ ತರಗತಿಗಳು ಮನರಂಜನೆಯ ರೂಪವನ್ನು ಪಡೆದುಕೊಳ್ಳುತ್ತಿದೆ. ಮಗು ಹುಟ್ಟುವಾಗ ಎಷ್ಟು ಮುಗ್ಧವಾಗಿರುತ್ತೋ, ಆ ಮುಗ್ಧತೆಯು ಮರಣದವರೆಗೂ ನಮ್ಮೊಳಗಿದ್ದರೆ ಎಲ್ಲರ ಮನಗಳನ್ನೂ ಗೆಲ್ಲಲು ಸಾಧ್ಯವಾಗುತ್ತದೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಮ್ಯಾನೇಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಜಾತಿ, ಮತ ಬೇಧವಿಲ್ಲದೆ ಎಲ್ಲರೂ ಪ್ರೀತಿ ವಿಶ್ವಾಸದಿಂದ ಭಜನೆ ಮಾಡಬೇಕು ಹಾಗೂ ಊರಿನ ಸ್ವಾಸ್ಥ್ಯವನ್ನು ಕಾಪಾಡಬೇಕು. ದೇವರ ಅನುಗ್ರಹ ಪ್ರಾಪ್ತಿಗೆ ಭಜನೆ ಸರಳ ಮಾರ್ಗವಾಗಿದೆ. ಶ್ರೀ ಇಂದುಧರ ದೇವಸ್ಥಾನದ ವತಿಯಿಂದ ಭಜನೆಯಿಂದ ದೇವರೆಡೆಗೆ ಎಂಬ ಪರಿಕಲ್ಪನೆಯೊಂದಿಗೆ ಆಯೋಜಿಸಲಾಗಿರುವ ನಗರ ಭಜನೆ ಕಾರ್ಯಕ್ರಮದಿಂದ ಊರಿನ ಸಾಮರಸ್ಯ ಉತ್ತಮವಾಗಿ, ಸಂಘಟನೆ ಹಾಗೂ ನಾಯಕತ್ವ ಬೆಳೆಯಬೇಕು ಎಂದು ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಶಿವಾನಂದ ಪೂಜಾರಿ ಹೇಳಿದರು. ಅಮೃತ ಮಹೋತ್ಸವ ವರ್ಷಾಚರಣೆಯ ಸಂಭ್ರಮದಲ್ಲಿರುವ ಗಂಗೊಳ್ಳಿಯ ಶ್ರೀ ಇಂದುಧರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ ಅಂಗವಾಗಿ ಶುಕ್ರವಾರ ಸಂಜೆ ಜರಗಿದ ’ಭಜನೆಯಿಂದ ದೇವರೆಡೆಗೆ’ ಬೃಹತ್ ನಗರ ಭಜನೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಶ್ರೀ ಇಂದುಧರ ದೇವಸ್ಥಾನದ ಬಳಿಯಿಂದ ಆರಂಭಗೊಂಡ ’ಭಜನೆಯಿಂದ ದೇವರೆಡೆಗೆ’ ಬೃಹತ್ ನಗರ ಭಜನೋತ್ಸವ ಶ್ರೀ ವೀರೇಶ್ವರ ದೇವಸ್ಥಾನದವರೆಗೆ ಸಾಗಿ ಸಮಾಪನಗೊಂಡಿತು. ವಿವಿಧ ಭಜನಾ ಮಂಡಳಿಗಳ ಸಹಕಾರದೊಂದಿಗೆ ವಿಜೃಂಭಣೆಯಿಂದ ಜರಗಿತು. ಗಂಗೊಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ನೀರಿನ ದುರ್ಬಳಕೆ ಸಾಮಾಜಿಕ ಅಪರಾಧವಾಗಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಜೈಲಿಗಟ್ಟುವಂತಹ ಕಠಿಣ ಕಾನೂನು ಬಂದರೂ ಅಚ್ಚರಿ ಇಲ್ಲವೆಂದು ಜಲತಜ್ಞ, ಅಡಿಕೆ ಪತ್ರಿಕೆ ಸಂಪಾದಕ ಡಾ. ಶ್ರೀ ಪಡ್ರೆ ಎಚ್ಚರಿಸಿದ್ದಾರೆ. ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಆಳ್ವಾಸ್ ಕಾಲೇಜಿನ ಎನ್‌ಸಿಸಿ ನೇವಲ್ ವಿಂಗ್, ಮಾನವಿಕ ಸಂಘ ಹಾಗೂ ರಾಜ್ಯಶಾಸ್ತ್ರ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ “ಮಳೆ ಕೊಯ್ಲು: ಏನು, ಏಕೆ ಮತ್ತು ಹೇಗೆ” ಎಂಬ ವಿಷಯದ ಕುರಿತು ಮಾತಾನಾಡಿದರು. ನೀರು ಸಮಾಜದ ಸಂಪತ್ತು. ಬತ್ತಿ ಹೋದ ನದಿ, ಬಾವಿ, ಕೆರೆಗಳನ್ನು ಸಾಮುದಾಯಿಕ ಪಾಲ್ಗೊಳ್ಳುವಿಕೆ ಮೂಲಕ ಪುನರುಜ್ಜೀವನಗೊಳಿಸಿ ನೀರಿನ ಸಮಸ್ಯೆ ನಿವಾರಿಸಬಹುದಾಗಿದೆ. ಈ ನಿಟ್ಟಿನಲ್ಲಿ ದೇಶದ ವಿವಿಧ ಭಾಗಗಳಲ್ಲಿ ನಡೆದ ಅನೇಕ ಯಶಸ್ವಿ ಪ್ರಯೋಗಗಳು ನಮ್ಮ ಕಣ್ಣ ಮುಂದಿವೆ ಎಂದರು. ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಮಾತನಾಡಿ, ಅಂಕಿ ಅಂಶಗಳ ಪ್ರಕಾರ ಮೂಡುಬಿದಿರೆಯಲಿ ಕಳೆದ ೨೫ ವರ್ಷಗಳಿಂದ ೫೦೦ ಅಡಿಗಳಷ್ಟು ಜಲಮಟ್ಟ ಕುಸಿತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ಜೈವಿಕ ತಂತ್ರಜ್ಞಾನ ಮಾನವನ ವಿಕಾಸಕ್ಕೆ ಮಾತ್ರವಲ್ಲದೆ ಪ್ರಾಣಿ, ಸಸ್ಯ ಮತ್ತು ಪರಿಸರದ ಏಳಿಗೆಗಾಗಿ ಹುಟ್ಟಿಕೊಂಡಿದ್ದಾಗಿದೆ ಎಂದು ಹಾಸನದ ಕರ್ನಾಟಕ ಪಶುವೈದ್ಯ ಮತ್ತು ಪ್ರಾಣಿವಿಜ್ಞಾನ ವಿಶ್ವವಿದ್ಯಾಲಯದ ಅಸಿಸ್ಟೆಂಟ್ ಪ್ರೋಫೆಸರ್ ಡಾ. ಗೀರೀಶ್ ಬಿ. ಚಂದ್ರಶೇಖರ್ ಅಭಿಪ್ರಾಯಪಟ್ಟರು. ಆಳ್ವಾಸ್ ಕಾಲೇಜಿನಲ್ಲಿ ಜೈವಿಕ ತಂತ್ರಜ್ಞಾನ ವಿಭಾಗ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ವಿಭಾಗದ ಹಳೆ ವಿದ್ಯಾರ್ಥಿಗಳ ಪ್ರಾಯೋಜಿತ ಒಂದು ದಿನದ ರಾಷ್ಟ್ರಮಟ್ಟದ ವಿಚಾರಗೋಷ್ಠಿ ’ಕರೆಂಟ್ ಅಡ್ವಾನ್ಸ್‌ಸ್ ಇನ್ ಮೆಡಿಕಲ್ ಆಂಡ್ ಇಂಡಷ್ಟ್ರಿಯಲ್ ಬಯೋಟೆಕ್ನಾಲಜಿ’ ನ್ನು ಉದ್ಘಾಟಿಸಿ ಮಾತನಾಡಿದರು. ಜೀವನದ ಸುಧಾರಣೆ ಎಂದಾಗ ಕೇವಲ ಮನುಷ್ಯನ ಜೀವನ ಸುಧಾರಣೆಗೆ ಸೀಮಿತವಾಗಿರದೆ ಪ್ರಾಣಿ, ಪಕ್ಷಿ, ಸಸ್ಯ ಮತ್ತು ಪರಿಸರದ ಸುಧಾರಣೆಯ ಅಂಶಗಳನ್ನು ಒಬ್ಬ ಜೈವಿಕ ತಂತ್ರಜ್ಞಾನಿ ಗಣನೆಗೆ ತೆಗೆದುಕೊಳ್ಳಬೇಕು ಎಂದರು. ಪ್ರಸ್ತುತ ಕೊರೋನಾ ವೈರಸ್ ಜಗತ್ತಿನಾದ್ಯಂತ ಸಂಚಲನ ಸೃಷ್ಟಿಮಾಡಿದೆ ಆದರೆ ಇದರೆ ಬಗ್ಗೆ ಜನರು ಚಿಂತೆಗೆ ಒಳಗಾಗಬೇಕಿಲ್ಲ ಏಕೆಂದರೆ ಹಿಂದೆಯು ಹಲವು ಮಾರಕ ರೋಗಗಳಿಗೆ ವಿಜ್ಞಾನಿಗಳು ಪರಿಹಾರ ನೀಡಿದ್ದಾರೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಗಂಗೊಳ್ಳಿ ಶ್ರೀ ಇಂದುಧರ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ೭೫ನೇ ಮಹೋತ್ಸವದ ಪ್ರಯುಕ್ತ ಆಹ್ವಾನಿತ ಶಾಲಾ ಬಾಲಕ-ಬಾಲಕಿಯರ ತಂಡಗಳ ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆ ಹಾಗೂ ಧಾರ್ಮಿಕ ಸಭೆ ಗಂಗೊಳ್ಳಿ ಶ್ರೀ ಇಂದುಧರ ದೇವಸ್ಥಾನದ ಸಭಾಂಗಣದಲ್ಲಿ ಶುಕ್ರವಾರ ಜರಗಿತು. ಭಜನಾ ಸ್ಪರ್ಧೆ ಹಾಗೂ ಧಾರ್ಮಿಕ ಸಭೆ ಉದ್ಘಾಟಿಸಿ ಮಾತನಾಡಿದ ಗಂಗೊಳ್ಳಿಯ ಉದ್ಯಮಿ ಎಚ್.ಗಣೇಶ ಕಾಮತ್, ಭಜನೆಯಿಂದ ಮನಸ್ಸಿಗೆ ಶಾಂತಿ ನೆಮ್ಮದಿ ದೊರೆಯುತ್ತದೆ ಅಲ್ಲದೆ ಪರಿಸರದಲ್ಲಿ ಶಾಂತಿ ನೆಮ್ಮದಿ ನೆಲೆಸುತ್ತದೆ. ಪರಿಶುದ್ಧ ಮನಸ್ಸಿನಿಂದ ಭಜನೆ ಮಾಡಿದರೆ ಆಧ್ಯಾತ್ಮಿಕ ಚೈತನ್ಯ ಜಾಗೃತವಾಗಿ ಭಗವಂತನ ಸಾಕ್ಷಾತ್ಕಾರವಾಗುತ್ತದೆ. ಕಳೆದ ೭೫ ವರ್ಷಗಳಿಂದ ನಿರಂತರವಾಗಿ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುತ್ತಾ, ಸಮಾಜದಲ್ಲಿ ಧಾರ್ಮಿಕ ಪ್ರಜ್ಞೆ ಬೆಳೆಸುತ್ತಿರುವ ಶ್ರೀ ಇಂದುಧರ ದೇವಸ್ಥಾನದ ಕೆಲಸ ಶ್ಲಾಘನೀಯ ಎಂದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸದ್ದರು. ಮುಖ್ಯ ಅತಿಥಿಯಾಗಿದ್ದ ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಶಿವಾನಂದ ಪೂಜಾರಿ ಶುಭ ಹಾರೈಸಿದರು. ಗ್ರಾಮ ಪಂಚಾಯತ್…

Read More