ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬಿಜೂರು ನಂದಿಕೇಶ್ವರ ಫ್ರೆಂಡ್ಸ್ ಆಶ್ರಯದಲ್ಲಿ ಬಿಜೂರು ಶಾಲಾ ಮೈದಾನದಲ್ಲಿ ಬುಧವಾರ ಜರುಗಿದ ಕಾರ್ಯಕ್ರಮದಲ್ಲಿ ಉದ್ಯಮ ಕ್ಷೇತ್ರದ ಸಾಧಕ ಗೋವಿಂದ ಬಾಬು ಪೂಜಾರಿ ಹಾಗೂ ಮಾಲತಿ ಗೋವಿಂದ ಪೂಜಾರಿ ದಂಪತಿಗಳನ್ನು ಸನ್ಮಾನಿಸಲಾಯಿತು. ಹುಟ್ಟೂರ ಸನ್ಮಾನ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸಾಧಕ ಬಿಜೂರು ಗೋವಿಂದಪ್ಪ ಮೋಹನ್‌ದಾಸ್, ಮತ್ತು ಕ್ರೀಡಾ ಕ್ಷೇತ್ರದ ಸಾಧಕ ಶಂಕರ ಪೂಜಾರಿ ಕಾಡಿನತಾರು ಅವರುಗಳನ್ನು ಸನ್ಮಾನಿಸಲಾಯಿತು. ನಿವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶ್ರೀ ಏಕನಾಥೇಶ್ವರಿ ದೇವಸ್ಥಾನದ ಅಧ್ಯಕ್ಷರಾದ ಅಣ್ಣಯ್ಯ ಶೇರುಗಾರ್ ಪುಣೆ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಪಂ ಮಾಜಿ ಉಪಾಧ್ಯಕ್ಷೆ ಶಾರದಾ ಬಿಜೂರು, ಬಿಜೆಪಿ ಕ್ಷೇತ್ರಾಧ್ಯಕ್ಷ ಸದಾನಂದ ಉಪ್ಪಿನಕುದ್ರು, ಪ್ರಧಾನ ಕಾರ್ಯದರ್ಶಿ ದೀಪಕ್‌ಕುಮಾರ್ ಶೆಟ್ಟಿ, ಮಾಜಿ ಮಂಡಲ ಪಂಚಾಯತ್ ಸದಸ್ಯೆ ಅನುಸೂಯ ಕೆ. ಬಿಜೂರು, ಶ್ರೀ ಏಕನಾಥೇಶ್ವರಿ ದೇವಸ್ಥಾನದ ವಿಶ್ವಸ್ಥ ಹಿರಿಯಡ್ಕ ಮೋಹನ್‌ದಾಸ್, ಮುಂಬೈ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಇತ್ತಿಚಿಗೆ ಭಾರತದ ಗಣತಂತ್ರ ದಿವಸದ ಪ್ರಯುಕ್ತ ರಾಜ್ಯ ನೆಹರು ಯುವ ಕೇಂದ್ರ ಸಂಘಟನಾದಿಂದ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿನಿಧಿಯಾಗಿ ಭಾಗವಹಿಸಿದ್ದ ಬ್ರಹ್ಮಾವರ ಕ್ರಾಸ್‌ಲ್ಯಾಂಡ್ ಕಾಲೇಜಿನ ಅಂತಿಮ ಬಿಎ ವಿದ್ಯಾರ್ಥಿನಿ ವಫಾ ಪ್ರಥಮ ಸ್ಥಾನ ಪಡೆದಿದ್ದಾರೆ. ನೆಹರು ಯುವ ಕೇಂದ್ರ ಸಂಘಟನೆಯ ರಾಜ್ಯ ನಿರ್ದೆಶಕ ಅತುಲ್ ನಿಕಮ್ ವಫಾಗೆ ರೂ. 25,000 ಮೊತ್ತದ ಮೊದಲ ಬಹುಮಾನ, ಪ್ರಶಸ್ತಿ ಪತ್ರವನ್ನು ಹಸ್ತಾಂತರಿಸಿದರು. ಜನವರಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ವಫಾ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ. ಭಾರತದ ಗಣತಂತ್ರ ದಿವಸದ ಪ್ರಯುಕ್ತ ಹಾಗೂ ಸಂವಿಧಾನ ದಿವಸ ವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ, ದೇಶಭಕ್ತಿ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವಜನರು ಕುರಿತು ಹಿಂದಿ ಅಥವಾ ಇಂಗ್ಲೀಷ್ ಭಾಷೆಗಳಲ್ಲಿ ಭಾಷಣ ಸ್ಪರ್ಧೆಯನ್ನು ತಾಲೂಕು, ಹಾಗೂ ಜಿಲ್ಲಾ ಮಟ್ಟದಲ್ಲಿ ಉಡುಪಿಯ ನೆಹರು ಯುವ ಕೇಂದ್ರ ಭಾರತ ಸರ್ಕಾರದ ವತಿಯಿಂದ ಆಯೋಜಿಸಿತ್ತು. ತಾಲೂಕು ಮಟ್ಟದ ಸ್ಪರ್ಧೆಗಳು ಅಕ್ಟೊಬರ್ 1,2,3 ರಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯ ಧಾರ್ಮಿಕ ಧತ್ತಿ ಇಲಾಖೆ ವ್ಯಾಪ್ತಿಯಲ್ಲಿನ ೨೩ ಎ ದರ್ಜೆಯ ದೇವಾಲಯಗಳಲ್ಲಿ 2020 ರ ಎಪ್ರ್ರಿಲ್ 26 ರಂದು ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಅವರು ಗುರುವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಉಡುಪಿ ಜಿಲ್ಲೆಯ ಎ ವರ್ಗದ ದೇವಾಲಯಗಳಲ್ಲಿ ಸಾಮೂಹಿಕ ವಿವಾಹ ನಡೆಸುವ ಕುರಿತಂತೆ ವಿವಿಧ ದೇವಾಲಯಗಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಹಾಗೂ ಕಾರ್ಯ ನಿರ್ವಹಣಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿ ಜಿಲ್ಲೆಯ ಶ್ರೀ ಮೂಕಾಂಬಿಕಾ ದೇವಾಲಯ ಕೊಲ್ಲೂರು ಬೈಂದೂರು ತಾಲೂಕು, ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಾಲಯ ಚಿತ್ತೂರು ಗ್ರಾಮ ಕುಂದಾಪುರ ತಾಲೂಕು, ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಾಲಯ ಕಮಲಶಿಲೆ ಕುಂದಾಪುರ ತಾಲೂಕು, ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಾಲಯ ಅಂಬಲಪಾಡಿ ಉಡುಪಿ ತಾಲೂಕು, ಶ್ರೀ ಅನಂತೇಶ್ವರ ಮತ್ತು ಚಂದ್ರಮೌಳೀಶ್ವರ ದೇವಾಲಯ ಉಡುಪಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಇಲ್ಲಿನ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಅವರೊಂದಿಗೆ ಸಂವಾದ ಏರ್ಪಡಿಸಲಾಗಿತ್ತು. ಸಂವಾದದಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಕೆ. ಜಯಪ್ರಕಾಶ ಹೆಗ್ಡೆ ಅವರು ಪ್ರತಿಕ್ರಿಯಿಸಿ ಜನಪ್ರತಿನಿಧಿಯಾಗಿ ಮಾಡಿದ ಕಾರ್ಯಕ್ಕಿಂತ ಜನಪರವಾಗಿ ಮಾಡಿದ ಕಾರ್ಯಗಳು ನೆಮ್ಮದಿಗೆ ಕಾರಣವಾಗುತ್ತವೆ. ಜನರ ಕೆಲಸ ಮಾಡಲು ರಾಜಕೀಯವೇ ಬೇಕಿಲ್ಲ. ಕೆಲಸ ಮಾಡದಿದ್ದರೇ ವಯಸ್ಸಾದಂತೆ ಅನ್ನಿಸುತ್ತದೆ ಎಂದ ಅವರು, ಪಕ್ಷದ ಮೂಲಕ ಸ್ವರ್ಧಿಸಿ ಗೆದ್ದಾಗ ಆದ ಖುಷಿಗಿಂತ ಪಕ್ಷೇತರನಾಗಿ ಗೆದ್ದು ಜನಸೇವೆ ಮಾಡಿದ್ದು ಇಂದಿಗೂ ಖುಷಿಯ ಸಂಗತಿ. ರಾಜಕೀಯದಲ್ಲಿ ಎಡವಿದ್ದೇನೆ. ಮುಂಬರುವ ಚುನಾವಣೆಗಳಲ್ಲಿ ಸ್ವರ್ಧಿಸುವ ಇಂಗಿತವಿದೆ. ಆದರೆ ಆ ಕಾರಣಕ್ಕಾಗಿ ಜನಸೇವೆ ಮಾಡುತ್ತಿಲ್ಲ. ಜನಸೇವೆ ಮತವಾಗಿ ಬದಲಾಗುವುದಿಲ್ಲ ಎಂಬುದು ತಿಳಿದಿದೆ ಎಂದು ಮನಬಿಚ್ಚಿ ಮಾತನಾಡಿದರು. ಕುಂದಾಪುರದ ಶಾಸ್ತ್ರಿ ಸರ್ಕಲ್‌ನಲ್ಲಿ ನಿಗದಿ ಅವಧಿ ಒಳಗೆ ಫ್ಲೈ ಓವರ್ ಕಾಮಗಾರಿ ಪೂರ್ತಿಗೊಂಡಿದ್ದರೆ, ಯಾರೂ ಈ ಕುರಿತು ಮಾತನಾಡುತ್ತಿರಲಿಲ್ಲ. ಇದೀಗ ಫ್ಲೈ ಓವರ್ ಬೇಕಿತ್ತೇ ಎನ್ನುವ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬಿಜಿ ಮೋಹನದಾಸ್ ಅವರು ಜೀವನ ಪರ್ಯಂತ ಸಾಧನೆ ಮಾಡುತ್ತಾ ಬಂದವರು. ದುಬೈನಲ್ಲಿ ಇದ್ದುಕೊಂಡು ಸತತವಾಗಿ ಕನ್ನಡ ಕಟ್ಟಿ ಬೆಳೆಸುವ ಕಾರ್ಯದಲ್ಲಿ ಭಾಗಿಯಾದವರು. ಸಮುದಾಯದ ಅಭಿವೃದ್ಧಿಗೆ ಅವರ ಶ್ರಮ ದೊಡ್ಡದಿದೆ ಎಂದು ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಧ್ಯಾಯ ವಿಶ್ವೇಶ್ವರ ಅಡಿಗ ಹೇಳಿದರು. ಅವರು ಬುಧವಾರ ಬಿಜೂರು ಶಾಲಾ ಮೈದಾನದಲ್ಲಿ ಬಿಜೂರು ನಂದಿಕೇಶ್ವರ ಫ್ರೆಂಡ್ಸ್ ಆಶ್ರಯದಲ್ಲಿ ಜರುಗಿದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಪುರಸ್ಕೃತ ಬಿಜೂರು ಗೋವಿಂದಪ್ಪ ಮೋಹನ್‌ದಾಸ್ ಅವರಿಗೆ ಹುಟ್ಟೂರ ಸನ್ಮಾನ ಕಾರ್ಯಕ್ರಮದಲ್ಲಿ ಅಭಿನಂದನಾ ಭಾಷಣ ಮಾಡಿದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತಪುರಸ್ಕೃತ ಸಾಧಕ ಬಿಜೂರು ಗೋವಿಂದಪ್ಪ ಮೋಹನ್‌ದಾಸ್, ಉದ್ಯಮ ಕ್ಷೇತ್ರದ ಸಾಧಕ ಗೋವಿಂದ ಬಾಬು ಪೂಜಾರಿ ಮತ್ತು ಕ್ರೀಡಾ ಕ್ಷೇತ್ರದ ಸಾಧಕ ಶಂಕರ ಪೂಜಾರಿ ಕಾಡಿನತಾರು ಅವರುಗಳನ್ನು ಸನ್ಮಾನಿಸಲಾಯಿತು. ನಿವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶ್ರೀ ಏಕನಾಥೇಶ್ವರಿ ದೇವಸ್ಥಾನದ ಅಧ್ಯಕ್ಷರಾದ ಅಣ್ಣಯ್ಯ ಶೇರುಗಾರ್ ಪುಣೆ ಅಧ್ಯಕ್ಷತೆ ವಹಿಸಿದ್ದರು. ಮಾಜಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಜಾಕಿಸ್ತಾನದಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಏಷ್ಯಾನ್ ಕ್ಲಾಸಿಕ್ ಪವರ್ ಲಿಪ್ಟ್ಂಗ್ ಸ್ಪರ್ಧೆಯಲ್ಲಿ ಭಾರತದ ಪ್ರತಿನಿಧಿಯಾಗಿ ಭಾಗವಹಿಸಿದ್ದ ಕುಂದಾಪುರದ ಸತೀಶ್ ಖಾವಿ೯ ಅವರು ಮೂರು ಚಿನ್ನ ಹಾಗೂ ಒಂದು ಬೆಳ್ಳಿಯ ಪದಕವನ್ನು ಗೆದ್ದುಕೊಂಡಿದ್ದಾರೆ. ಸತೀಶ್ ಖಾರ್ವಿ ಕುಂದಾಪುರದಲ್ಲಿ ನ್ಯೂ ಹರ್ಕ್ಯುಲಸ್ ಜಿಮ್ ನಡೆಸುತ್ತಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು : ಭವಿಷ್ಯದ ಸಾಧನೆಗಳಿಗೆ ಶಿಕ್ಷಣವೇ ಅಡಿಪಾಯ. ಶಿಕ್ಷಣ ಸಂಸ್ಥೆಗಳಿಗೆ ಆಡಳಿತ ಮತ್ತು ಸರ್ಕಾರ ಒದಗಿಸುವ ಸೌಲಭ್ಯಗಳನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಂಡು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುವಂತೆ ನೋಡಿಕೊಳ್ಳಬೇಕಾದ ಹೊಣೆ ಶಾಲೆಗಳ ಮೇಲಿದೆ ಎಂದು ಕುಂದಾಪುರ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಶ್ಯಾಮಲಾ ಎಸ್. ಕುಂದರ್ ಹೇಳಿದರು. ಈಚೆಗೆ ನಡೆದ ಅರೆಶಿರೂರಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ಪ್ರೌಢಶಾಲೆಯ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿ, ಶಾಲೆಯ ನೂತನ ಅಡುಗೆಕೋಣೆಯನ್ನು ಉದ್ಘಾಟಿಸಿದ ದೇವಳ ವ್ಯವಸ್ಥಾಪನಾ ಸಮಿತಿ ಸದಸ್ಯ ವಂಡಬಳ್ಳಿ ಜಯರಾಮ ಶೆಟ್ಟಿ ಶಾಲೆಗೆ ದೇವಳ ಆಡಳಿತದಿಂದ ಎಲ್ಲ ಅಗತ್ಯ ಬೆಂಬಲ ನೀಡಲಾಗುವುದು ಎಂದರು. ಬೈಂದೂರು ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ರಘು ನಾಯ್ಕ್ ಶಿಕ್ಷಣದ ಮಹತ್ವದ ಕುರಿತು ಮಾತನಾಡಿದರು. ಶಾಲೆಯ ಮೊದಲ ಎಸ್ಸೆಸ್ಸೆಲ್ಸಿ ತರಗತಿಯ ವಿದ್ಯಾರ್ಥಿ ಜಾನ್ಸನ್ ಫೆರ್ನಾಂಡೀಸ್ ಸ್ವಸ್ತಿವಾಚನ ಮಾಡಿದರು. ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಡಾ. ಅತುಲ್‌ಕುಮಾರ ಶೆಟ್ಟಿ, ಗ್ರಾಮ ಪಂಚಾಯಿತಿ ಅಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇತ್ತಿಚಿಗೆ ಹಾಸನದಲ್ಲಿ ನಡೆದ ಅಖಿಲ ಭಾರತ ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಉಡುಪಿ ಜಿಲ್ಲೆಯಿಂದ ಪ್ರತಿನಿಧಿಯಾಗಿ ಭಾಗವಹಿಸಿದ್ದ ಬೈಂದೂರು ಸೈಂಟ್ ಥೋಮಸ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಶ್ರೇಯಸ್ ಅವರನ್ನು ಸನ್ಮಾನಿಸಲಾಯಿತು. ಶ್ರೇಯಸ್‌ನ ಕರಾಟೆ ಹಾಗೂ ನೃತ್ಯ ಕ್ಷೇತ್ರದ ಸಾಧನೆಯನ್ನು ಪರಿಗಣಿಸಿ ಸಮ್ಮೇಳನದಲ್ಲಿ ಸನ್ಮಾನಿಸಲಾಯಿತು. ಈತ ಬೈಂದೂರು ತಾಲೂಕಿನ ಯಡ್ತರೆ ಸಸಿಹಿತ್ಲು ಮನೆಯ ಶೋಭಾ ಹಾಗೂ ಸುಧಾಕರ ದಂಪತಿಗಳ ಪುತ್ರ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಶಾಸ್ತ್ರಿ ಸರ್ಕಲ್ ಬಳಿಯಲ್ಲಿ ನಿರ್ಮಾಣವಾಗುತ್ತಿರುವ ಫ್ಲೈ ಓವರ್‌ನ ವಿಳಂಭ ಕಾಮಗಾರಿಯನ್ನು ವಿರೋಧಿಸಿ ಮಂಗಳವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ನೇತ್ರತ್ವದಲ್ಲಿ ಧರಣಿ ಹಾಗೂ ಪ್ರತಿಭಟನಾ ಸಭೆ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಂಸದ ಕೆ.ಜಯಪ್ರಕಾಶ ಹೆಗ್ಡೆ ಮಾತನಾಡಿ ರಾಷ್ಟ್ರೀಯ ಹೆದ್ದಾರಿ ಚತುಷ್ಫಥ ವಿಸ್ತರಣೆಯ ಮೂಲ ಯೋಜನೆಯಲ್ಲಿ ಕುಂದಾಪುರದ ಶಾಸ್ತ್ರಿ ಸರ್ಕಲ್ ಬಳಿಯಲ್ಲಿ ರಸ್ತೆಗೆ ಎಂಬ್ಯಾಕ್‌ಮೆಂಟ್ ನಿರ್ಮಾಣ ಮಾಡಿ ಸಣ್ಣ ಪ್ರಮಾಣದ ಅಂಡರ್ ಪಾಸ್ ನಿರ್ಮಾಣ ಮಾಡುವ ಉದ್ದೇಶ ಇತ್ತು. ಸ್ಥಳೀಯರ ಒತ್ತಾಯದಂತೆ ಕೇಂದ್ರ ಸರ್ಕಾರದ ಗಮನ ಸೆಳೆದು ಫ್ಲೈ ಓವರ್ ನಿರ್ಮಾಣದ ಪ್ರಾಸ್ತಾವನೆಗೆ ಒಪ್ಪಿಗೆ ಪಡೆಯಲಾಗಿತ್ತು ಎಂದು ತಿಳಿಸಿದ್ದಾರೆ. 2016ರಲ್ಲಿ ಬದಲಾದ ಪ್ರಾಸ್ತಾವಿತ ಯೋಜನೆಗೆ 22.24 ಕೋಟಿ ರೂ. ವೆಚ್ಚದಲ್ಲಿ ಮಂಜೂರಾತಿ ದೊರಕಿತ್ತು. ಇದೀಗ ಮಂದಗತಿಯಲ್ಲಿ ಸಾಗುತ್ತಿರುವ ಕಾಮಗಾರಿಗೆ ಹಲವು ಕಾರಣಗಳಿವೆ. ಇದರ ನಿವಾರಣೆಗೆ ದೆಹಲಿ ಹಾಗೂ ಸ್ಥಳೀಯ ಮಟ್ಟದಲ್ಲಿ ಹೋರಾಟ ನಡೆಸಬೇಕಾದ ಅನೀವಾರ್ಯತೆ ಇದೆ. ಹಿಂದೆ ಸಂಸದನಾಗಿದ್ದಾಗ ನಡೆಸಿದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಆಲೂರು ಗ್ರಾಮದ ಕಳಿ ಎಂಬಲ್ಲಿನ ನದಿಯಲ್ಲಿ ಆಮೆ ಹಾಗೂ ಕೂಮಾಗಳನ್ನು ಹಿಡಿದು ಕೊಲ್ಲಲು ಪ್ರಯತ್ನ ನಡೆಸುತ್ತಿರುವಾಗ ದಾಳಿ ನಡೆಸಿದ್ದ ಕೊಲ್ಲೂರು ವನ್ಯಜೀವಿ ಇಲಾಖೆಯ ಸಿಬ್ಬಂದಿಗಳು ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. 50 ಕೂಮಾ ಮತ್ತು ಆಮೆಗಳನ್ನು ವಶಪಡಿಸಿಕೊಂಡಿದ್ದು ಆ ಪೈಕಿ 25 ಕೂಮಾ ಹಾಗೂ 9 ಆಮೆಗಳನ್ನು ಸಂರಕ್ಷಿಸಲಾಗಿದೆ. ಆರೋಪಿಗಳನ್ನು ಕೊಲ್ಲೂರು ನಿವಾಸಿಗಳಾದ ಶೀನ ಕೊರಗ, ಚಂದ್ರ ಹಾಗೂ ಗಣೇಶ್ ಎಂದು ಗುರುತಿಸಲಾಗಿದ್ದು, ಅರಣ್ಯ ಸಂರಕ್ಷಣಾ ಕಾಯ್ದೆಯಡಿಯಲ್ಲಿ ಮೂವರ ವಿರುದ್ಧ ಕೇಸು ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿಕೊಂಡ ದ್ವಿಚಕ್ರ ವಾಹನ, ಕತ್ತಿ, ಕೊಲ್ಲಲಾದ 15 ಆಮೆಗಳ ಚಿಪ್ಪು ಹಾಗೂ ಬ್ಯಾಟರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಸೋಮವಾರ ರಾತ್ರಿ ಗಸ್ತು ನಡೆಸುತ್ತಿದ್ದ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಮಂಗಳವಾರ ಮುಂಜಾನೆ ಆರೋಪಿಗಳು ನಡೆಸುತ್ತಿದ್ದ ಕೃತ್ಯದ ಮಾಹಿತಿ ದೊರೆತು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಗಣಪತಿ ನಾಯ್ಕ್ ಅವರ ನಿರ್ದೇಶನದಂತೆ, ಉಪ ವಲಯ…
