ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪೊಲೀಸರಿಗೆ ಅಪರಾಧ ನಿಯಂತ್ರಣದ ಹೊಣೆಯ ಜತೆಗೆ ಸಾಮಾಜಿಕ ಜವಾಬ್ದಾರಿಯೂ ಇದೆ. ಆ ಹಿನ್ನೆಲೆಯಲ್ಲಿ ಪೊಲೀಸ್ ವ್ಯವಸ್ಥೆಯನ್ನು ಸಮಾಜಮುಖಿಯಾಗಿ ಮಾಡುವತ್ತ ಸರ್ಕಾರ ಗಮನ ಹರಿಸಲಿದೆ ಎಂದು ರಾಜ್ಯ ಗೃಹ ಹಾಗೂ ಸಹಕಾರ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಶುಕ್ರವಾರ ರೂ. 41 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಬೈಂದೂರು ಪೊಲೀಸ್ ವೃತ್ತ ಕಚೇರಿಯ ನೂತನ ಕಟ್ಟಡವನ್ನು ಉದ್ಘಾಟಿಸಿದ ಬಳಿಕ ಮಾತನಾಡಿ ಸಮಾಜದಲ್ಲಿ ಕೆಲವೇ ಜನರು ಅಪರಾಧ ಪ್ರವೃತ್ತಿಯ ಜನರು ಇರುತ್ತಾರೆ. ಪೊಲೀಸರು ನಾಗರಿಕರ ಜತೆ ನಿಕಟ ಸಂಪರ್ಕ, ಸಂಬಂಧ ಸಾಧಿಸಿದರೆ ಅಪರಾಧ ನಿಯಂತ್ರಣ ಮತ್ತು ಪತ್ತೆ ಸುಲಭವಾಗುತ್ತದೆ. ಇದರ ಇನ್ನೊಂದು ಮುಖವಾಗಿ ಸರ್ಕಾರವು ಪೊಲೀಸ್ ಸಿಬ್ಬಂದಿಯ ಸೇವಾ ಸ್ಥಿತಿ, ಕರ್ತವ್ಯದ ಸ್ಥಳ, ಅಗತ್ಯ ಸೌಲಭ್ಯಗಳ ಸುಧಾರಣೆಯನ್ನೂ ಮಾಡಲಿದೆ ಎಂದರು. ಯಾಂತ್ರಿಕ ಉಪಕರಣಗಳ ಬಳಕೆಯ ಹೆಚ್ಚಳದ ಪರಿಣಾಮವಾಗಿ ಅವುಗಳಿಗೆ ಸಂಬಂಧಿಸಿದ ಅಪರಾಧ ಹೆಚ್ಚಿದೆ. ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕಲಾಗುತ್ತಿದೆ. ಬ್ಯಾಂಕ್ ಮತ್ತು ಪೊಲೀಸ್ ಹಿರಿಯ ಅಧಿಕಾರಿಗಳ ಸಭೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಬ್ಲಡ್ ಕ್ಯಾನ್ಸರ್‌ಗೆ ತುತ್ತಾಗಿರುವ ಬೈಂದೂರು ತಾಲೂಕಿನ ಕಳವಾಡಿಯ ನಿವಾಸಿ ಸುಜನ್ ದೇವಾಡಿಗ ಅವರ ಚಿಕಿತ್ಸೆಗೆ ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ ಅವರು ರೂ. 50,000 ನೆರವು ನೀಡಿದರು. ಸುಜನ್ ಅವರ ತಂದೆ ಸಂಜೀವ ಅವರಿಗೆ ಚೆಕ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶೆಫ್‌ಟಾಕ್ ಸಂಸ್ಥೆಯ ಅಕೌಂಟೆಂಟ್ ರಾಜೇಶ್ ಪೂಜಾರಿ ಹಾಗೂ ಇತರರು ಇದ್ದರು.
ಸುನಿಲ್ ಹೆಚ್. ಜಿ. | ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಬೈಂದೂರು ತಾಲೂಕು ಪಡುವರಿ ಗ್ರಾಮದ ಸೋಮೇಶ್ವರ ಬೀಚ್ ಅಭಿವೃದ್ಧಿಗೆ ಪ್ರವಾಸೋದ್ಯಮ ಇಲಾಖೆಯಿಂದ ಮೊದಲ ಹಂತದ ಅನುದಾನ ಮಂಜೂರಾಗಿದ್ದು, ಸೋಮೇಶ್ವರದಲ್ಲಿ ಸೀವಾಕ್, ರೋಪ್ ಬ್ರಿಜ್ ಹಾಗೂ ಇನ್ನಿತರ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಚಾಲನೆ ದೊರೆಯಲಿದೆ. ಬೈಂದೂರು ಪ್ರವಾಸೋದ್ಯಮ ಅಭಿವೃದ್ಧಿಗೆ ಈ ಹಿಂದೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಮೊದಲ ಹಂತದಲ್ಲಿ ಸೋಮೇಶ್ವರ ಬೀಚ್ ಅಭಿವೃದ್ಧಿಗೆ 5 ಕೋಟಿ ರೂ. ಅನುದಾನ ಮಂಜೂರಾಗಿದೆ. ಈ ಅನುದಾನದಲ್ಲಿ ರೋಪ್‌ಬ್ರಿಜ್ (ತೂಗು ಸೇತುವೆ) ಶೌಚಾಲಯ, ಸೀವಾಕ್, ಪಾರ್ಕಿಂಗ್, ವಾಣಿಜ್ಯ ಸಂಕೀರ್ಣ ಕಾಮಗಾರಿಗಳು ನಡೆಯಲಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುವ ಪ್ರಯಾಣಿಕರಿಗೆ ಸೋಮೇಶ್ವರ ಕಡಲ ಕಿನಾರೆ ಬಗ್ಗೆ ಮಾಹಿತಿ ನೀಡಲು ಶಿರೂರಿನಲ್ಲಿ ದೊಡ್ಡ ಸ್ವಾಗತ ಕಮಾನು ನಿರ್ಮಿಸಲಾಗುತ್ತದೆ. ಕಾಮಗಾರಿ ಎರಡು ವರ್ಷದೊಳಗೆ ಪೂರ್ಣಗೊಳ್ಳಲಿದ್ದು, ಎರಡನೇ ಹಂತದ ಕಾಮಗಾರಿಗೆ 20 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗಿದೆ. ಬೈಂದೂರು ತಾಲೂಕಿನ ಪ್ರವಾಸಿ ತಾಣಗಳನ್ನೊಮ್ಮೆ ನೋಡಿ (Video) ಬೈಂದೂರು ತಾಲೂಕಿನ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿಗಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: 2019ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗೊಂಡಿದ್ದು, ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಎಂಟು ಮಂದಿ ಸಾಧಕರು ಸೇರಿದಂತೆ ಜಿಲ್ಲೆಯ 32 ಸಾಧಕರಿಗೆ ಪ್ರಶಸ್ತಿ ಘೋಷಣೆಯಾಗಿದೆ. ಯಕ್ಷಗಾನ ಕ್ಷೇತ್ರದಲ್ಲಿ ಹಕ್ಲಾಡಿಯ ಆನಂದ ಶೆಟ್ಟಿ, ಶಿಲ್ಪಕಲೆ ಕ್ಷೇತ್ರದಲ್ಲಿ ಅರಾಟೆಯ ಎಸ್. ಸುಬ್ರಹ್ಮಣ್ಯ ಆಚಾರ್ಯ, ಕರಕುಶಲ ಕಲೆ ಕ್ಷೇತ್ರದಲ್ಲಿ ಕೊರವಡಿಯ ಲಲಿತಾ ಕೊರವಡಿ, ಛಾಯಾಗ್ರಹಣ ಕ್ಷೇತ್ರದಲ್ಲಿ ಕುಂದಾಪುರದ ಸಂತೋಷ ಕುಂದೇಶ್ವರ, ವೈದ್ಯಕೀಯ ಕ್ಷೇತ್ರದಲ್ಲಿ ಬೇಳೂರಿನ ಡಾ. ಕುಸುಮಾಕರ ಶೆಟ್ಟಿ, ಯೋಗ, ನೃತ್ಯ ಕ್ಷೇತ್ರದಲ್ಲಿ ಮರವಂತೆಯ ಧನ್ವಿ ಪೂಜಾರಿ, ಕೃಷಿ, ಹೈನುಗಾರಿಕೆ ಕ್ಷೇತ್ರದಲ್ಲಿ ಶಂಕರನಾರಾಯಣದ ದಯಾನಂದ ರಾವ್, ಸಮಾಜ ಸೇವೆ ಕ್ಷೇತ್ರದಲ್ಲಿ ಕೋಟೇಶ್ವರದ ಡೇವಿಡ್ ಸಿಕ್ವೇರಾ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ. 2019ರ ಪ್ರಶಸ್ತಿ ಪುರಸ್ಕೃತ ಜಿಲ್ಲೆಯ ಸಾಧಕರು: ಯಕ್ಷಗಾನ: ಪುಂಡರೀಕಾಕ್ಷ ಉಪಾಧ್ಯಾಯ, ಆನಂದ್ ಶೆಟ್ಟಿ, ಬಡಾನಿಡಿಯೂರು ಕೇಶವರಾವ್ ದೈವಾರಾಧನೆ: ನಾರಾಯಣ ನಲಿಕೆ, ಕೋಟಿ ಪೂಜಾರಿ, ಸಾಧು ಪಾಣರ ರಂಗಭೂಮಿ: ವಿಜಯ್ ನಾಯಕ್, ದಿನೇಶ್ ಪ್ರಭು ಕಲ್ಲೊಟ್ಟೆ ಪತ್ರಿಕೋದ್ಯಮ: ಎಸ್.ಜಿ.ಕುರ್ಯ ಸಂಗೀತ:…
ಕುಂದಾಪ್ರ ಡಾಟ್ ಕಾಂ’ ಸುದ್ದಿ ಕುಂದಾಪುರ: ‘ದೇಶದಲ್ಲಿನ ಸ್ವಾರ್ಥ ಹಾಗೂ ರಾಜಕೀಯ ಉದ್ದೇಶಗಳಿಗಾಗಿ ಮಹಾತ್ಮ ಗಾಂಧೀಜಿ ಅವರನ್ನು ಒಂದು ರಾಜಕೀಯ ಪಕ್ಷ ಬಳಸಿಕೊಂಡಿದೆ. ಆದರೆ, ಗಾಂಧೀಜಿ ಕಂಡಿದ್ದ ಕನಸುಗಳನ್ನು ನನಸು ಮಾಡುವ ಯಾವ ಪ್ರಯತ್ನಗಳೂ ಈವರೆಗೂ ಪರಿಣಾಮಕಾರಿಯಾಗಿ ನಡೆದಿಲ್ಲ’ ಎಂದು ಉಡುಪಿ–ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಟೀಕಿಸಿದರು. ಜನ್ನಾಡಿಯಲ್ಲಿ ಬುಧವಾರ ಮಹಾತ್ಮ ಗಾಂಧೀಜಿ ಅವರ 150 ನೇ ಜನ್ಮ ದಿನಾಚರಣೆ ಅಂಗವಾಗಿ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜನ್ನಾಡಿಯಿಂದ ಬಿದ್ಕಲ್‌ಕಟ್ಟೆಯವರೆಗೆ ನಡೆದ ’ಮಹಾತ್ಮ ಗಾಂಧಿ ಸಂಕಲ್ಪ ಯಾತ್ರೆ’ ನೇತೃತ್ವ ವಹಿಸಿ ಅವರು ಮಾತನಾಡಿದರು. ಸ್ವಚ್ಛ ಭಾರತ, ಪ್ಲಾಸ್ಟಿಕ್ ಮುಕ್ತ ಭಾರತ, ಶೌಚಾಲಯ ನಿರ್ಮಾಣ ದಂತಹ ಕಾರ್ಯಕ್ರಮಗಳ ಮೂಲಕ ದೇಶವಾಸಿಗಳ ಗಮನ ಸೆಳೆದಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಮಹಾತ್ಮ ಗಾಂಧೀಜಿ ಕಂಡಿದ್ದ ರಾಮರಾಜ್ಯದ ಕನಸನ್ನು ನನಸು ಮಾಡುವಲ್ಲಿ ಅವಿರತವಾಗಿ ದುಡಿ ವ ಪ್ರಧಾನಿ ಮೋದಿ ಅವರಿಗೆ ದೇಶದ ಎಲ್ಲ ವರ್ಗದ ಜನರು ಸ್ಪಂದಿಸಬೇಕು ಎಂದರು. ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸುಂದರ ಕಾಷ್ಠಶಿಲ್ಪದೊಂದಿಗೆ ನಿರ್ಮಾಣವಾಗುತ್ತಿರುವ ಕೋಟಿ ಚೆನ್ನಯ್ಯರ ಕೊನೆಯ ಗರಡಿಯು ಜೀರ್ಣೋದ್ಧಾರದ ಬಳಿಕ ಕಾರಣಿಕ ಸ್ಥಳವಾಗಿ ಮಾರ್ಪಡಲಿದೆ ಎಂದು ಶ್ರೀ ವಿಶ್ವನಾಥ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಕಟಪಾಡಿ ಬಿ. ಎನ್. ಶಂಕರ ಪೂಜಾರಿ ಹೇಳಿದರು. ಅವರು ಯಡ್ತರೆ ಗ್ರಾಮದ ನಾಕಟ್ಟೆಯಲ್ಲಿ ಜೀರ್ಣೋದ್ಧಾರಗೊಳ್ಳುತ್ತಿರುವ ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿಗೆ ಭೇಟಿ ನೀಡಿ ಬಳಿಕ ಮಾತನಾಡಿ ಇಲ್ಲಿನ ಪ್ರತಿ ಕೆತ್ತನೆಯೂ ಗಮನ ಸೆಳೆಯುವಂತಿದೆ. ಶೀಘ್ರವಾಗಿ ಭಕ್ತರ ಸಹಕಾರದಿಂದ ಜೀರ್ಣೋದ್ಧಾರ ಕಾರ್ಯ ಪೂರ್ಣಗೊಳ್ಳಲಿ ಎಂದರು. ಈ ಸಂದರ್ಭ ಉಡುಪಿ ಜಿಲ್ಲಾ ಪಂಚಾಯತ್ ಸದಸ್ಯ ಜನಾರ್ದನ ತೋನ್ಸೆ, ಗರಡಿ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಕಾರ್ಯದರ್ಶಿ ಶಿವರಾಮ ಪೂಜಾರಿ, ಸ್ಥಳೀಯರಾದ ಸುಬ್ರಹ್ಮಣ್ಯ ಬಿಜೂರು, ಸೀತಾರಾಮ್, ಅಣ್ಣಪ್ಪ ಪೂಜಾರಿ ಯಡ್ತರೆ ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಟೋಲ್ ಪ್ಲಾಜಾದ ಆಚೆ ಮತ್ತು ಈಚೆಗೆ ಇರುವ ಕೃಷಿ ಭೂಮಿಗೆ, ಅಕ್ಕಪಕ್ಕದ ಗ್ರಾಮಗಳಿಗೆ ತೆರಳಲು ಟೋಲ್ ನೀಡುವ ಸ್ಥಿತಿ ಇದೆ. ಸಮೀಪದ ಭಟ್ಕಳದ ಹೋಟೆಲುಗಳಿಗೆ ಕುಟುಂಬಿಕರೊಂದಿಗೆ 35ರೂ ಹಾಪ್ ಬಿರಿಯಾನಿ ತಿಂದು ಬರಲು 70ರೂ ಟೋಲ್ ನೀಡಲು ಸಾಧ್ಯವೆ? ಎಲ್ಲಿಯೂ ಹೆದ್ದಾರಿ ಕಾಮಗಾರಿ ಪೂರ್ಣಗೊಂಡಿಲ್ಲ. ಸರ್ವಿಸ್ ರಸ್ತೆಗಳು ಸಮರ್ಪಕವಾಗಿಲ್ಲ. ಬಸ್ ನಿಲ್ದಾಣ ನಿರ್ಮಾಣಗೊಂಡಿಲ್ಲ. ಆದಾಗ್ಯೂ ಟೋಲ್ ಪ್ಲಾಜಾ ಮಾತ್ರಾ ತ್ವರಿತಗತಿಯಲ್ಲಿ ನಿರ್ಮಾಣವಾಗುತ್ತಿದೆ. ಇದು ಶಿರೂರು ಹೆದ್ದಾರಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಬುಧವಾರ ಟೋಲ್ ಚಲೋ ಪ್ರತಿಭಟನಾ ಸಭೆಯಲ್ಲಿ ಕೇಳಿಬಂದ ಮಾತುಗಳು. ಈ ಸಂದರ್ಭ ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಮಾತನಾಡಿ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಕುಂದಾಪುರ-ಶಿರೂರು ನಡುವಿನ ಚತುಷ್ಪಥ ಹೆದ್ದಾರಿ ಕಾಮಗಾರಿಯ ಗುಣಮಟ್ಟ ಕಳಪೆಯಾಗಿದೆ. ಅದರೊಂದಿಗೆ ಅಗತ್ಯ ಮೂಲ ಸೌಕರ್ಯವನ್ನು ಒದಗಿಸುವ ಮುನ್ನವೇ ಶಿರೂರಿನಲ್ಲಿ ವಾಹನ ಶುಲ್ಕ ಸಂಗ್ರಹಿಸಲು ಸಿದ್ಧತೆ ನಡೆಯುತ್ತಿದೆ ಎಂಬ ಗುಮಾನಿ ಸಾರ್ವಜನಿಕರಲ್ಲಿ ಮೂಡಿದೆ. ಅದು…
ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ತನ್ನ ಕುಟುಂಬದ ಬಗೆಗೆ ಇನ್ನಿಲ್ಲದ ಅಕ್ಕರೆ, ಎಲ್ಲದಕ್ಕೂ ಪ್ರೀತಿಯಿಂದಲೇ ಸ್ಪಂದಿಸುವ ಗುಣ, ಇನ್ನಿಲ್ಲದ ಭರವಸೆ, ಭವಿಷ್ಯದಲ್ಲಿ ಏನನ್ನಾದರೂ ಸಾಧಿಸಬೇಕು ಎಂಬ ಕನಸು ಕಂಗಳ ಆ ಮುದ್ದಾದ ಹುಡುಗನಿಗೆ ಕ್ಯಾನ್ಸರ್ ಎಂಬ ಮಹಾಮಾರಿಯೊಂದು ಬಂದಪ್ಪಳಿಸಿದೆ. ಸುಜನ್ ದೇವಾಡಿಗ ಎಂಬ ಈ ಬೈಂದೂರು ತಾಲೂಕಿನ ಕಳವಾಡಿಯ ಹುಡುಗ ಅಕ್ಷರಶಃ ಬ್ಲಡ್ ಕ್ಯಾನ್ಸರ್ ಎಂಬ ಮಹಾಮಾರಿಗೆ ಈಗ ನಲುಗಿ ಹೋಗಿದ್ದಾನೆ. ಆದರೆ ಆತನನ್ನು ಬದುಕಿಸಿಕೊಳ್ಳಲು ಸಾಧ್ಯವಿದೆ ಎಂಬ ವೈದ್ಯರ ಸಲಹೆ ಸದ್ಯ ಕುಟುಂಬದಲ್ಲೊಂದು ಭರವಸೆಯನ್ನು ಹುಟ್ಟುಹಾಕಿದೆ. ಈ ಮಧ್ಯೆ ತನ್ನ ಮಗನನ್ನು ಹೇಗಾದರೂ ಮಾಡಿ ಬದುಕಿಸಿಕೊಳ್ಳಬೇಕೆಂಬ ಬಡ ಕುಟುಂಬಕ್ಕೆ ಸದ್ಯ ಆರ್ಥಿಕ ಅಡಚಣೆ ಎದುರಾಗಿದೆ. ಚಿಕಿತ್ಸೆಗೆ ಸುಮಾರು ರೂ. 15 ರಿಂದ 20 ಲಕ್ಷಕ್ಕೂ ಅಧಿಕ ಹಣದ ಅಗತ್ಯವಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹತ್ತಾರು ಸಹೃದಯಿಗಳು ಕೈಜೋಡಿಸುತ್ತಿದ್ದಾರೆ. ನಾವುಗಳೂ ಕೂಡ ಆ ಕುಟುಂಬದ ಬೆನ್ನಿಗೆ ನಿಂತು, ನಮ್ಮಲ್ಲಾದ ಸಣ್ಣ ಸಹಕಾರವನ್ನು ತುರ್ತಾಗಿ ಮಾಡಬೇಕಾದ ಅಗತ್ಯವಿದೆ. ಸುಜನ್ ದೇವಾಡಿಗ – ಸಂಜೀವ…
ಸುನಿಲ್ ಹೆಚ್. ಜಿ. | ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ವೆಯ್ಟ್ ಲಿಫ್ಟಿಂಗ್ ಹಾಗೂ ಪವರ್ ಲಿಫ್ಟಿಂಗ್ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ತೋರಿದ, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಇತ್ತಿಚಿಗಷ್ಟೇ ಚಿನ್ನ ಗೆದ್ದು ಭಾರತದ ಕೀರ್ತಿ ಪತಾಕೆ ಹಾರಿಸಿದ್ದ ವಿಶ್ವನಾಥ ಭಾಸ್ಕರ ಗಾಣಿಗ ಅವರಿಗೆ ರಾಜ್ಯ ಸರಕಾರ 2019ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ಕುಂದಾಪುರ ತಾಲೂಕಿನ ದೇವಲ್ಕುಂದ ಗ್ರಾಮದ ಬಾಳಿಕೆರೆಯ ಭಾಸ್ಕರ ಗಾಣಿಗ ಹಾಗೂ ಪದ್ಮಾವತಿ ದಂಪತಿಗಳ ಪುತ್ರರಾದ ವಿಶ್ವನಾಥ ಗಾಣಿಗ ಅವರು ಸತತ ಪರಿಶ್ರಮದಿಂದ ಸಾಧನೆಯ ಮೆಟ್ಟಿಲೇರಿದವರು. ಪ್ರಾಥಮಿಕ ಶಿಕ್ಷಣವನ್ನು ಬಳ್ಳಾರಿಯಲ್ಲಿ, ಬಳಿಕ ಕಾಲೇಜು ವರೆಗಿನ ಶಿಕ್ಷಣವನ್ನು ನೆಂಪುವಿನಲ್ಲಿ, ಬಿಸಿಎ ಪದವಿಯನ್ನು ಕುಂದಾಪುರದ ಭಂಡಾರ್‌ಕಾರ‍್ಸ್ ಕಾಲೇಜಿನಲ್ಲಿ ಮುಗಿಸಿ ಬೆಂಗಳೂರಿನ ಜೈನ್ ಕಾಲೇಜಿನಲ್ಲಿ ಎಂಎಸ್ ಇನ್ ಐಟಿ ಮಾಡಿ ಬಳಿಕ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿರುವ ವಿಶ್ವನಾಥ್ ಅವರು ಈವರೆಗೆ ಹತ್ತು ಹಲವು ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಸ್ವರ್ಧೆಗಳಲ್ಲಿ ಭಾಗವಹಿಸಿ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ. ಸಾಧನೆಗಳು: 1.2019 ಕೆನಡಾ…
ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ವಿದೇಶದಲ್ಲಿ ನೆಲೆಸಿ ಕನ್ನಡ ಹಾಗೂ ಕನ್ನಡಿಗರ ಪರವಾಗಿ ಹತ್ತು ಹಲವು ಸಂಘಟನೆಗಳ ಮೂಲಕ ನಿರಂತರವಾಗಿ ಶ್ರಮಿಸಿದ ಬಿ. ಜಿ. ಮೋಹನದಾಸ್ ಅವರಿಗೆ 2019ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಒಲಿದು ಬಂದಿದೆ. ಸ್ನೇಹಿತರ ವಲಯದದಲ್ಲಿ ಬೀಜಿ ಎಂದೇ ಪರಿಚಿತರಾಗಿರುವ ಬಿಜೂರು ಗೋವಿಂದಪ್ಪ ಮೋಹನ್ ದಾಸ್ ಅವರು ಜನರ ಸೇವೆಯೇ ಜನಾರ್ಧನ ಸೇವೆ ಎಂಬ ತತ್ವವನ್ನು ಬಲವಾಗಿ ನಂಬಿದವರು. ಎಂಭತ್ತರ ದಶಕದಲ್ಲಿ ಕೊಲ್ಲಿ ರಾಷ್ಟ್ರಕ್ಕೆ ವಲಸೆ ಹೋದ ಬೀಜಿಯವರು, ಫಾರ್ಮಸಿಯ ವಿವಿಧ ಸಂಸ್ಥೆಗಳಲ್ಲಿ ಅವಿರತವಾಗಿ ದುಡಿದಿದ್ದು ತಮ್ಮ ಬಿಡುವಿನ ವೇಲೆಯಲ್ಲಿ ಅಧಿಕ ಸಮಯವನ್ನು ಸಮಾಜ ಸೇವೆಗೆ ಮುಡಿಪಾಗಿಟ್ಟಿದ್ದಾರೆ. ಮಣಿಪಾಲದಿಂದ ಫಾರ್ಮಸಿ ವಿಭಾಗದಲ್ಲಿ ಸ್ನಾತಕೋತರ ಪದವಿ ಪಡೆದಿರುವ ಬೀಜಿಯವರು ಗಲ್ಫ್ನಾಡಿಗೆ ವಲಸೆ ಬರುವ ಮುನ್ನ ಮಣಿಪಾಲದಲ್ಲಿ ಫಾರ್ಮಸಿ ವಿಭಾಗದ ಸಹಾಯಕ ಪ್ರೊಪೆಸರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. 1985ರಲ್ಲಿ ದುಬೈ ಕರ್ನಾಟಕ ಸಂಘದ ಸಂಸ್ಥಾಪಕರ ಬಳಗ ಸೇರಿ ಮುಂದೆ 1988 ರಲ್ಲಿ ಸಂಘದ ಸಂವಿಧಾನ ರೂಪಿಸಿದ ರೂವಾರಿಗಳಲ್ಲೊಬ್ಬರಾದರು. 1989…
