ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ದುಡಿಮೆಯ ಒಂದು ಭಾಗವನ್ನಾದರೂ ಸಮಾಜಕ್ಕೆ ಮೀಸಲಿರಿಸಬೇಕು ಎನ್ನುವ ಮನೋಭಾವ ಹೆಚ್ಚಬೇಕು. ಹಾಗಿದ್ದಾಗಲೇ ಸಮಾಜ ಉದ್ದಾರವಾಗುತ್ತದೆ, ದಾನ ಮಾಡಿವುದರಿಂದ ಮನಸ್ಸಿಗೂ ಸಂತೋಷವುಂಟಾವುತ್ತದೆ ಎಂದು ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ಹೇಳಿದರು. ಅವರು ಭಾನುವಾರ ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್ ರಇ. ಬೈಂದೂರು ಇದರ ೭ನೇ ವರ್ಷದ ಟ್ರಸ್ಟ್ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿ ಟ್ರಸ್ಟ್ ಮೂಲಕ ಮನೆ, ವಿದ್ಯುತ್, ವಿದ್ಯಾಭ್ಯಾಸಕ್ಕೆ ಸಹಕಾರ ಮುಂತಾದ ಯೋಜನೆಗಳು ಯಶಸ್ವಿಯಾಗಿ ಅನುಷ್ಠಾನಗೊಂಡು ರಾಮಕ್ಷತ್ರಿಯ ಸಮುದಾಯದ ಜನರ ಹೇಳಿಗೆಗೆ ನೆರವಾಗುತ್ತಿರುವುದು ಸಂತೋಷದ ಸಂಗತಿ ಎಂದು ಶ್ಲಾಘೀಸಿದರು. ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್‌ನ ಆಡಳಿತ ಟ್ರಸ್ಟೀ ಬಿ. ರಾಮಕೃಷ್ಣ ಶೇರುಗಾರ್ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರು ದಿನೇಶ್ ಪ್ರಿಂಟರ‍್ಸ್‌ನ ದಿನೇಶ್ ಕುಂದಾಪುರ, ಮಲ್ಲಿಕ್ ಇಂಜಿನಿಯರಿಂಗ್ ಇಂಡಿಯಾ ಪ್ರೈ. ಲಿನ ಕೆ. ಲಕ್ಷ್ಮೀನಾರಾಯಣ, ಕದಂಬ ಗ್ರೂಫ್ ಆಫ್ ಹೋಟೆಲ್ಸ್‌ನ ದಿನೇಶ್ ನೆರಂಬಳ್ಳಿ, ಶ್ರೀ ರಕ್ಷಾ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಕೆ. ಚಂದ್ರಶೇಖರ್, ಕುಂದಾಪುರ ರಾಮಕ್ಷತ್ರಿಯ ಸಂಘದ ಅಧ್ಯಕ್ಷ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಕೊಡಮಾಡುವ ಮುಂಗಾರು ಪತ್ರಿಕೆಯ ಸಂಪಾದಕ ದಿ| ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಈ ಬಾರಿ ಮುಂಬೈನ ಪ್ರತಿಷ್ಠಿತ ಕರ್ನಾಟಕ ಮಲ್ಲ ಪತ್ರಿಕೆಯ ಸಂಪಾದಕ ಚಂದ್ರಶೇಖರ್ ಪಾಲೆತ್ತಾಡಿ ಆಯ್ಕೆಯಾಗಿದ್ದಾರೆ ಈ ಬಗ್ಗೆ ಬ್ರಹ್ಮಾವರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ತಿಳಿಸಿದರು. ದಕ್ಷಿಣಕನ್ನಡ ಜಿಲ್ಲೆಯ ಮಲೆನಾಡು ಪುತ್ತೂರಿನ ಬಜತ್ತೂರು ಗ್ರಾಮದವರಾದ ಚಂದ್ರಶೇಖರ್ ಪಾಲೆತ್ತಾಡಿಯವರು ರೈತಪರ ಚಳವಳಿ, ನಾಟಕ,ಯಕ್ಷಗಾನ, ಭಾಷಣ ಹೀಗೆ ನಾನಾ ರೂಪದಲ್ಲಿ ತನ್ನ ಬಹುತ್ವಗಳಲ್ಲಿ ಕಾಣಿಸಿಕೊಂಡವರು. ವಡ್ಡರ್ಸೆ ರಘುರಾಮ ಶೆಟ್ಟರಂತೆಯೇ ಪತ್ರಿಕಾರಂಗದಲ್ಲಿ ಭಿನ್ನ ದೃಷ್ಠಿಕೋನದೊಂದಿಗೆ ಸಾಗಿದ ಇವರು, ಹೊಸದಿಗಂತ, ಮಂಗಳೂರು ಮಿತ್ರ, ಕರ್ನಾಟಕ ಮಲ್ಲ, ಉದಯದೀಪ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿ ಅನಂತರ ಕರ್ನಾಟಕ ಮಲ್ಲ ಪತ್ರಿಕೆಯ ಸಂಪಾದಕರಾದರು. ಮರಾಠಿ ಮಣ್ಣು ಮುಂಬೈನಲ್ಲಿ ಕನ್ನಡದ ಕಂಪನ್ನು ಧಟ್ಟವಾಗಿ ಹಲವಾರು ಸವಾಲುಗಳ ನಡುವೆಯೂ ಪಸರಿಸಿದ ಪಾಲೆತ್ತಾಡಿಯವರು ಪರರಾಜ್ಯವೊಂದರಲ್ಲಿ ಕನ್ನಡ ಭಾಷೆಯ ಪ್ರಾದೇಶಿಕ ಪತ್ರಿಕೆಯೊಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕನಿಷ್ಠ ೫೦ ಸ್ವದೇಶಿ ಜಾನುವಾರುಗಳನ್ನು ಕಳೆದ ೩ ವರ್ಷಗಳಿಂದ ಪೋಷಿಸುತ್ತಿದ್ದು, ನೋಂದಾಯಿತ ಟ್ರಸ್ಟ್‌ನ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಗೋಶಾಲೆಯವರಿಂದ ಮೈಸೂರಿನ ಪಿಂಜರಾಪೋಲ್ ಹಾಗೂ ಇತರ ಗೋಶಾಲೆಗಳಿಗೆ ಬೆಂಬಲ ನೀಡುವ ಯೋಜನೆಯಡಿ ೨೦೧೯-೨೦ ನೇ ಸಾಲಿನಲ್ಲಿ ಅರ್ಜಿಗಳನ್ನು ಸ್ವೀಕರಿಸಲಿದ್ದು, ಆಸಕ್ತ ಗೋಶಾಲೆಯವರು ಜುಲೈ ೨೨ ರ ಒಳಗೆ ಉಪ ನಿರ್ದೇಶಕರು, ಪಶುಪಾಲನಾ ಇಲಾಖೆ, ಉಡುಪಿ ಕಚೇರಿಗೆ ಅವಶ್ಯಕ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಉಪ ನಿರ್ದೇಶಕರು, ಪಶುಪಾಲನಾ ಇಲಾಖೆ, ಉಡುಪಿಯ ಕಚೇರಿ ದೂರವಾಣಿ ಸಂಖ್ಯೆ: 0820-2534024ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಪಶುಪಾಲನಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ’ ಸುದ್ದಿ ಬೈಂದೂರು: ಕತಾರ್ ಇಂಡಿಯನ್ ಕಮ್ಯುನಿಟಿ ಬೆನ್‌ವೆಲೆಂಟ್ (ಐ.ಸಿ.ಬಿ.ಎಫ್)ಸದಸ್ಯರಾಗಿ ಬೈಂದೂರಿನ ಸುಬ್ರಹ್ಮಣ್ಯ ಹೆಬ್ಬಾಗಿಲು ಆಯ್ಕೆಯಾಗಿದ್ದಾರೆ. ಬೈಂದೂರು ತಗ್ಗರ್ಸೆಯ ಗುರುದತ್ತ ಶೇರುಗಾರ್ ಹಾಗೂ ಮೂಕಾಂಬು ದಂಪತಿಗಳ ಪುತ್ರರಾದ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರದ್ದು ಬಹಮುಖ ವ್ಯಕ್ತಿತ್ವ. ಮಯ್ಯಾಡಿ ಧ.ಮ.ಹಿ.ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ದಾವಣಗೆರೆ ಬಾಪೂಜಿ ಫ್ರೌಢಶಾಲೆಯಲ್ಲಿ ಫ್ರೌಢಶಿಕ್ಷಣ ಬಳಿಕ ಸಿವಿಲ್ ಇಂಜಿನಿಯರಿಂಗ್ ಪದವಿ ಮುಗಿಸಿ ರಾಷ್ಟ್ರೀಯ ಹೆದ್ದಾರಿ ೮ರಲ್ಲಿ ಮೇಲುಸ್ತುವಾರಿ ಅಭಿಯಂತರಾಗಿ ಸೇವೆ ಸಲ್ಲಿಸಿ ಬಳಿಕ ಕತಾರ್‌ನ ಗಲ್ಪಾರ್ ಆಲ್ ಮಿಸ್ನಾದ್ ಕಂಪೆನಿಯಲ್ಲಿ ಅಭಿಯಂತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕತಾರ್ ಸೇರಿದಂತೆ ಜಾಗತಿಕ ಮಟ್ಟದ ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಇವರು ಕರ್ನಾಟಕ ಸಂಘ ಕತಾರ್ ಉಪಾಧ್ಯಕ್ಷರಾಗಿ ಹಾಗೂ ಖಜಾಂಚಿಯಾಗಿ,ತುಳುಕೂಟ,ಭಾರತೀಯ ಸಾಂಸ್ಕ್ರತಿಕ ಕೇಂದ್ರ, ಕತಾರ್ ಕರ್ನಾಟಕ ಪ್ರೆಂಡ್ಸ್‌ನ ಸದಸ್ಯರಾಗಿದ್ದಾರೆ. ನಾಟಕ, ಸಾಂಸ್ಕ್ರತಿಕ ಕಾರ್ಯಕ್ರಮ, ಶೈಕ್ಷಣಿಕ ಹಾಗೂ ಮನೋರಂಜನಾ ಕಾರ್ಯಕ್ರಮದ ಆಯೋಜನೆ ವಿವಿಧ ಸಂಘ ಸಂಸ್ಥೆಗಳ ಸಮನ್ವಯತೆಯೊಂದಿಗೆ ಕಾರ್ಯಕ್ರಮ ಪ್ರಸ್ತುತಿ, ಕತಾರ್ ಚಲನಚಿತ್ರೋತ್ಸವ ಸೇರಿದಂತೆ ವಿವಿಧ ಗಣ್ಯರ ಕಾರ್ಯಕ್ರಮದ ಪ್ರಮುಖ ಉಸ್ತುವಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ಜಿಲ್ಲಾಡಳಿತ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಮಹಾನಗರಪಾಲಿಕೆ, ಅರಣ್ಯ ಇಲಾಖೆ , ಮಂಗಳೂರು ಸ್ಮಾಟ್ ಸಿಟಿ ಲಿ.. ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾಲಯ, ಭಾರತ್ ಸ್ಕೌಟ್ಸ್ ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕಾರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ 2019 ಪರಿಸರ ಜಾಥಾ ಹಾಗೂ ಪರಿಸರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಶೋಭಾವನಕ್ಕೆ ಆಳ್ವಾಸ್‍ಗೆ ಗ್ರೀನ್ ಕ್ಯಾಂಪಸ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಸ್ಥೆಯ ಆವರಣದಲ್ಲಿ ಉತ್ತಮ ಹಸಿರು ವಲಯ ನಿರ್ವಹಣೆಗಾಗಿ ಸ್ವಚ್ಛ ಭಾರತ ಅಭಿಯಾನಕ್ಕೆ ನೀಡಿದ ಕೊಡುಗೆಗಾಗಿ ಮತ್ತು ಪರಿಸರ ಸಂರಕ್ಷಣ ಜಾಗೃತಿಗಾಗಿ ಶಿಕ್ಷಣ ಸಂಸ್ಥೆಗಳ ವಿಭಾಗದಲ್ಲಿ ಗ್ರೀನ್ ಕ್ಯಾಂಪಸ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಶೋಭಾವನ ವಿಶೇಷತೆ: ಮಿಜಾರು ಶೋಭಾವನ ಕ್ಯಾಂಪಸ್‍ನಲ್ಲಿ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು, ಆಳ್ವಾಸ್ ನ್ಯಾಚುರೋಪತಿ ಎಂಡ್ ಯೋಗಿಕ್ ಸೈನ್ಸ್ ಕಾಲೇಜು ಮತ್ತು ಆಳ್ವಾಸ್ ಹೋಮಿಯೊಪತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಉದ್ಯೋಗಸ್ಥ ಮಹಿಳೆಯರು ವಿವಿಧ ಪಿಜಿಗಳಲ್ಲಿ ಆಶ್ರಯ ಪಡೆದಿದ್ದು, ಮಹಿಳೆಯರ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಪಿ.ಜಿ.ಗಳನ್ನು ಆಗಸ್ಟ್ ಅಂತ್ಯದೊಳಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೊಂದಣಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚನೆ ನೀಡಿದ್ದಾರೆ. ಅವರು, ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ, ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು. ಮಣಿಪಾಲದ ಉದ್ಯೋಗಸ್ಥ ಮಹಿಳೆಯರ ವಸತಿ ಗೃಹವೊಂದರ ಕಟ್ಟಡ ದುರಸ್ಥಿ ನಡೆಯುತ್ತಿದ್ದು, ಮಹಿಳೆಯರ ಸುರಕ್ಷತೆಗೆ ಸಿಸಿ ಟಿವಿ ಅಳವಡಿಕೆಗೆ ಸೂಚಿಸಿದ್ದರೂ ಈವರೆಗೆ ಸಿಸಿಟಿವಿ ಅಳವಡಿಸದಿರುವ ಬಗ್ಗೆ ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿ, ತಕ್ಷಣದಲ್ಲಿ ಸಿಸಿಟಿವಿ ಅಳವಡಿಸುವಂತೆ ಹಾಸ್ಟೆಲ್ ವಾರ್ಡನ್‌ಗೆ ಸೂಚನೆ ನೀಡಿ, ಆಗಸ್ಟ್ ೧೫ ರ ಒಳಗೆ ಹಾಸ್ಟೆಲ್‌ನಲ್ಲಿರುವ ಇತರ ಮೂಲ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಂಡಾರ್‌ಕಾರ‍್ಸ್ ಕಾಲೇಜಿನ ಯೂತ್ ರೆಡ್‌ಕ್ರಾಸ್ ಘಟಕದ ಆಶ್ರಯದಲ್ಲಿ ’ಆರೋಗ್ಯ ಮತ್ತು ನೈರ್ಮಲ್ಯ’ ಎಂಬ ವಿಷಯದ ಕುರಿತಂತೆ ಉಪನ್ಯಾಸ ಕಾರ್ಯಕ್ರಮವನ್ನು ಕಾಲೇಜಿನ ಆರ್. ಎನ್. ಶೆಟ್ಟಿ ಸಭಾಂಗಣದಲ್ಲಿಆಯೋಜಿಸಲಾಗಿತ್ತು. ಕಾರ್ಯಕ್ರಮದ ಪೂರ್ವಭಾವಿಯಾಗಿ ವಿದ್ಯಾರಾಣಿಯವರಿಂದ ’ಅಭಿವಿನ್ಯಾಸ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಆರೋಗ್ಯ ಮತ್ತು ನೈರ್ಮಲ್ಯ ಕಾರ್ಯಕ್ರಮದಲ್ಲಿ ಕುಂದಾಪುರದ ಪ್ರತಿಷ್ಠಿತ ಆಸ್ಪತ್ರೆಯ ನಿರ್ದೇಶಕಿಯಾದ ಡಾ. ಪ್ರಮೀಳಾ ನಾಯಕ್‌ರವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ನೈರ್ಮಲ್ಯದಿಂದ ಆರೋಗ್ಯ ಎನ್ನುವ ಮಾತನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿಕೊಟ್ಟರು. ಕಾರ್ಯಕ್ರಮವನ್ನು ಪ್ರೊ. ಸತ್ಯನಾರಾಯಣ ಸಂಯೋಜಿಸಿದರು. ಸ್ವಾತಿ ಸ್ವಾಗತಿಸಿ, ಅನುಷಾ ನಿರೂಪಿಸಿ, ಅಮೃತಾ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಮಾನವ ಹಕ್ಕು ಘಟಕ, ಭ್ರಷ್ಟಾಚಾರ ನಿಗ್ರಹ ದಳ, ಪೊಲೀಸ್ ಠಾಣೆ, ಉಡುಪಿ ಜಿಲ್ಲೆ ಹಾಗೂ ಯುವ ಸ್ಪಂದನ ಕೇಂದ್ರ, ಉಡುಪಿ ಇವರ ಜಂಟಿ ಆಶ್ರಯದಲ್ಲಿ ’ಭ್ರಷ್ಟಾಚಾರ ನಿರ್ಮೂಲನೆಯಲ್ಲಿ ಯುವ ಜನತೆಯ ಪಾತ್ರ’ದ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ಭ್ರಷ್ಟಾಚಾರ ನಿಗ್ರಹ ದಳದ ನಿರೀಕ್ಷಕ ಶ್ರೀ ಜಯರಾಮ ಡಿ. ಗೌಡ ಮಾತನಾಡಿ, ಭ್ರಷ್ಟಾಚಾರದ ಪರಿಕಲ್ಪನೆ ಕೇವಲ ಲಂಚಕ್ಕೆ ಸೀಮಿತವಾಗಿರದೆ, ಬದುಕಿನ ಪ್ರತಿ ಮಜಲುಗಳಲ್ಲೂ ಪ್ರಚುರಗೊಳ್ಳುವುದು. ಯುವ ಸಮುದಾಯ ಸಾಮಾಜಿಕ ತತ್ವ – ಮೌಲ್ಯಗಳಿಗನುಗುಣವಾಗಿ ಬದುಕನ್ನು ರೂಪಿಸಿಕೊಂಡು, ಅನ್ಯಾಯದ ವಿರುದ್ಧ ದನಿಯೆತ್ತ ಬೇಕಿದೆ ಎಂದರು. ಸತೀಶ್ ಬಿ. ಭ್ರಷ್ಟಾಚಾರ ನಿಗ್ರಹ ದಳದ ನಿರೀಕ್ಷಕ, ಮಾತನಾಡಿ, ಭ್ರಷ್ಟಾಚಾರ ಮುಕ್ತ ಭಾರತ ನಿರ್ಮಾಣವು ಶಿಕ್ಷಿತ, ನೈತಿಕ ಬಲ ಹಾಗೂ ಸಾಮಾಜಿಕ ಜವಾಬ್ದಾರಿಯುಳ್ಳ ಯುವ ಶಕ್ತಿಯನ್ನು ಆಧರಿಸಿದೆ ಎಂದರು. ಬಳಿಕ ಅಧಿಕಾರಿಗಳು ವಿದ್ಯಾರ್ಥಿಗಳೊಂದಿಗೆ ಸಂವಾದಿಸಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ಕೊತ್ತಾಡಿ ಉಮೇಶ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಬಾಲ್ಯದಲ್ಲಿ ಪ್ರಪಂಚ ಆಕರ್ಷಣಿಯವಾಗಿ ಕಾಣುತ್ತದೆ. ಅದರ ನಡುವೆ ಸವಾಲುಗಳನ್ನು ಎದುರಿಸಲು ಅಣಿಯಾಗದೇ ಕುಳಿತರೆ ಭವಿಷ್ಯ ಕಠಿಣವಾಗುತ್ತದೆ. ವಿದ್ಯಾರ್ಥಿಗಳು ಸದಾ ಅಧ್ಯಯನಶೀಲರಾಗಬೇಕು. ಆತ್ಮವಿಶ್ವಾಸ ಅಚಲವಾಗಿರಬೇಕು. ಹಾಗಿದ್ದಾಗಲೇ ಬದುಕು ಹಸನಾಗಲು ಸಾಧ್ಯ ಎಂದು ನಿಟ್ಟೂರಿನ ನಿವೃತ್ತ ಉಪನ್ಯಾಸಕ ಡಾ. ಶಾಂತಾರಾಮ ಪ್ರಭು ಹೇಳಿದರು. ಅವರು ಶುಕ್ರವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ಸಭಾಭವನದಲ್ಲಿ ಶ್ರೀ ಮುಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜು ಇದರ 2019-20ನೇ ಸಾಲಿನ ವಿವಿಧ ಸಂಘಗಳ ಚಟುವಟಿಕೆಗಳ ಉದ್ಘಾಟನಾ ಹಾಗೂ ವಿದ್ಯಾರ್ಥಿಗಳ ಸಂಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಯಕ್ಷಗಾನ ಸಂಘವನ್ನು ಉದ್ಘಾಟಿಸಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಐರೋಡಿ ಗೋವಿಂದಪ್ಪ ಮಾತನಾಡಿ ಮನುಷ್ಯ ವಿದ್ಯಾವಂತನಾದರೆ ಸಾಲದು. ವಿನಯ ಸಂಪನ್ನನೂ ಆಗಿರಬೇಕು. ವಿದ್ಯಾವಂತ ದುರಹಂಕಾರಿಯಾದರೆ ಕಲಿತ ವಿದ್ಯೆಗೂ ಬೆಲೆ ಸಿಗಲಾರದು ಎಂದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಶೆಟ್ಟಿ ಕೊಲ್ಲೂರು ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ದೇವಳದ ಕಾರ್ಯನಿರ್ವಹಣಾಧಿಕಾರಿ ಎಚ್.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯವು ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯದ ಸಹಯೋಗದೊಂದಿಗೆ ಆಯೋಜಿಸುತ್ತಿರುವ 2019-20ನೇ ಸಾಲಿನ ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಸ್ವರ್ಧೆಗಳ ಭಾಗವಾಗಿ ಕುಂದಾಪುರದ ಭಂಡಾರ್ಕಾರ‍್ಸ್ ಕಾಲೇಜಿನಲ್ಲಿ ಅಂತರ್ ಕಾಲೇಜು ಮಟ್ಟದ ರಂಗಭೂಮಿ ಆಗಸ್ಟ್ 19 ಮತ್ತು 20 ರಂದು ಜರುಗಲಿದೆ. ಈ ಬಗ್ಗೆ ಭಂಡಾರ್‌ಕಾರ‍್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್.ಪಿ ನಾರಾಯಣ ಶೆಟ್ಟಿ ಅವರು ಮಾಹಿತಿ ನೀಡಿ, ಎರಡು ದಿನದ ಕಾರ್ಯಕ್ರಮದ ಆಯೋಜನೆ ಹಾಗೂ ಆತಿಥ್ಯವನ್ನು ಭಂಡಾರ್‌ಕಾರ‍್ಸ್ ಕಾಲೇಜು ವಹಿಸಲಿದ್ದು ರಂಗಭೂಮಿ ಕಲಾ ಸ್ವರ್ಧೆಯಲ್ಲಿ ಏಕಾಂಕ ನಾಟಕ, ಮೂಕಾಭಿನಯ, ಪ್ರಹಸನ ಹಾಗೂ ಅನುಕರಣೆ ಎಂಬ ನಾಲ್ಕು ವಿಭಾಗಗಳಿರಲಿದ್ದು ಎರಡು ದಿನವೂ ಬೆಳಿಗ್ಗೆ 9:30ರಿಂದ ಸಂಜೆ 6ರ ತನಕ ಪ್ರತ್ಯೇಕ ವೇದಿಕೆಗಳಲ್ಲಿ ಸ್ವರ್ಧೆಗಳು ಜರುಗಲಿದೆ ಎಂದರು. ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಕಾಲೇಜುಗಳಿಗೆ ಸ್ವರ್ಧೆಯ ಬಗ್ಗೆ ಆಮಂತ್ರಣ ಕಳುಹಿಸಲಾಗುತ್ತಿದ್ದು, ಸುಮಾರು ೪೦ಕ್ಕೂ ಹೆಚ್ಚಿನ ಕಾಲೇಜುಗಳ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ವಿಶ್ವವಿದ್ಯಾನಿಲಯ ಮಟ್ಟದ ಈ ಸ್ವರ್ಧೆಯಲ್ಲಿ…
