Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ, ಅ.09: ಜಿಲ್ಲಾದ್ಯಂತ ವಿಪರಿತ ಮಳೆ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಅಗಸ್ಟ್ 10ರ ಶನಿವಾರವೂ ಶಾಲಾ ಕಾಲೇಜುಗಳಿಗೆ ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ರಜೆ ಘೋಷಿಸಿದ್ದಾರೆ.  ಒಟ್ಟು ಮೂರು ದಿನಗಳ ಕಾಲ ನಿರಂತರ ರಜೆ ನೀಡಿದಂತಾಗಿದೆ. ವಿಪರೀತ ಮಳೆ ಹಾಗೂ ಗಾಳಿಯ ಮುನ್ಸೂಚನೆ ಇರುವುದರಿಂದ ಮುಂದಿನ ಎರಡು ದಿನ ಸುಮಾರು 205ಮಿ.ಮಿ ಮಳೆಯಾಗುವ  ಬಗ್ಗೆ ಮನ್ಸೂಚನೆಯನ್ನು ಹವಮಾನ ಇಲಾಖೆ ನೀಡಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಅವರು ರಜೆ ನಿರ್ಧಾರವನ್ನು ಕೈಗೊಂಡಿದ್ದಾರೆ. ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ/ಖಾಸಗಿ ಪ್ರಾಥಮಿಕ ಶಾಲೆ, ಪೌಢಶಾಲೆ, ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ರಜೆ ಇರಲಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಮಲಶಿಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಯೊಳಕ್ಕೆ ಕುಬ್ಜಾ ನದಿ ನೀರು ನುಗ್ಗಿದ್ದು, ಭಕ್ತರು ನೀರಲ್ಲಿ ನಿಂತು ಪೂಜೆ ಸಲ್ಲಿಸಿದರು. ವರ್ಷಂಪ್ರತಿಯೂ ನೈಸರ್ಗಿಕ ನದಿ ನೀರಿನ ಅಭಿಷೇಕ ಇಲ್ಲಿ ಸಾಮಾನ್ಯಾವಾಗಿದ್ದು ಸುತ್ತಲೂ ಜಲಾವೃತವಾಗಿ ನೀರಿನ ಮಧ್ಯೆ ಕುಳಿತಿರುವ ದೇವಿಯನ್ನು ಕಣ್ತುಂಬಿಸಿಕೊಳ್ಳಲು ನೂರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ದೇವಳದ ಗರ್ಭಗುಡಿ ಜಲಾವೃತ ಆಗುತ್ತಿದ್ದಂತೆ ದೇವಿಗೆ ಅರ್ಚಕರು ಆರತಿ ಬೆಳಗಿದರು. ವರ್ಷಕ್ಕೊಮ್ಮೆ ದೇವಿಗೆ ನೈಸರ್ಗಿಕ ಅಭಿಷೇಕವಾಗುತ್ತದೆ. ನೀರು ಬಂದ ಹಿನ್ನಲೆ ಭಕ್ತರು ನೀರಿನಲ್ಲೇ ತೆರಳಿ ದೇವಿಯ ದರ್ಶನ ಪಡೆದರು. ಬಳಿಕ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಅಮ್ಮನವರ ತೆಪ್ಪೋತ್ಸವನ್ನು ನಡೆಯಿತು. ಕುಂದಾಪ್ರ ಡಾಟ್ ಕಾಂ ಸುದ್ದಿ. ವಾಡಿಕೆಯಂತೆ ಗರ್ಭಗುಡಿಗೆ ಬಂದ ನೀರು ಹರಿದು ಬಂದಿದ್ದು, ಇಲ್ಲಿ ವರ್ಷಕ್ಕೊಮ್ಮೆ ದೇವಿಗೆ ನೈಸರ್ಗಿಕ ನದಿ ನೀರಿನ ಅಭಿಷೇಕ ಸಾಮಾನ್ಯ. ನದಿ ನೀರು ಬಂದ ಹಿನ್ನಲೆಯಲ್ಲಿ ಭಕ್ತರು ಪುಳಕಗೊಂಡಿದ್ದರು. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಚ್ಚಹಸಿರಿನ ಕಾಡಿನ ಮಧ್ಯಭಾಗದಲ್ಲಿರುವ ಕಮಲಶಿಲೆ ಇದೆ.  ಅರಣ್ಯದ ತಪ್ಪಲಿನಲ್ಲಿ ಪವಿತ್ರವಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ, ಅ.06: ಜಿಲ್ಲಾದ್ಯಂತ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಗಸ್ಟ್ 7ರ ಬುಧವಾರ ಶಾಲಾ ಕಾಲೇಜುಗಳಿಗೆ ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ರಜೆ ಘೋಷಿಸಿದ್ದಾರೆ. ರಾಜ್ಯದ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಅಗಸ್ಟ್ 7 ರಿಂದ 9ರ ತನಕ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ 72 ಗಂಟೆಗಳಲ್ಲಿ ಸುಮಾರು 205ಮಿ.ಮಿ ಮಳೆಯಾಗುವ ಹಾಗೂ ಭಾರಿ ಗಾಳಿ ಬೀಸುವ ಸಂಭವ ಇರುವ ಬಗ್ಗೆ ಮನ್ಸೂಚನೆಯನ್ನು ಹವಮಾನ ಇಲಾಖೆ ನೀಡಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಅವರು ರಜೆ ನಿರ್ಧಾರವನ್ನು ಕೈಗೊಂಡಿದ್ದಾರೆ. ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ/ಖಾಸಗಿ ಪ್ರಾಥಮಿಕ ಶಾಲೆ, ಪೌಢಶಾಲೆ, ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ರಜೆ ಇರಲಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರಾವಳಿಯ ಬಹುದೊಡ್ಡ ಹಬ್ಬವಾದ ನಾಗರಪಂಚಮಿಯನ್ನು ಕುಂದಾಪುರ ತಾಲೂಕಿನೆಲ್ಲೆಡೆ ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆನಿಂದಲೇ ನಾಗಬನ, ಹಾಗೂ ತಾಲೂಕಿನ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ಭಕ್ತಾದಿಗಳು ನಾಗನಿಗೆ ಹಾಲು, ಏಳನೀರು, ಕೇದಿಗೆ ಹೂವನ್ನು ಸಮರ್ಪಿಸಿ ಪುನೀತರಾದರು. ತಾಲೂಕಿನ ಪ್ರಸಿದ್ಧ ದೇವಾಲಯವಾದ ಗುಡ್ಡಮ್ಮಾಡಿ, ಕಾಳಾವರ, ಉಳ್ಳೂರು ಕಾರ್ತಿಕೇಯ ದೇವಸ್ಥಾನ ಸೇರಿದಂತೆ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜಾವಿಧಿಗಳು ನೆರವೇರಿದರು. ಸೇನಾಪುರ ಗ್ರಾಮದ ಗುಡ್ಡಾಮ್ಮಾಡಿಯಲ್ಲಿ ಹಾಲುಹಿಟ್ಟು ಸೇವೆ, ಅಭಿಷೇಕ ಹಾಗೂ ವಿಶೇಷ ಪೂಜೆ ನಡೆಯಿತು. ಭಟ್ಕಳ, ಬೈಂದೂರು, ಕುಂದಾಪುರದಿಂದ ನೂರಾರು ಭಕ್ತಾದಿಗಳು ಆಗಮಿಸಿ ದೇವರ ಕೃಪೆಗೆ ಪಾತ್ರರಾದರು. ಭಕ್ತಾದಿಗಳಿಗೆ ನೈವೇದ್ಯದ ಪ್ರಸಾದ ವಿತರಣೆ ಮಾಡುವ ವ್ಯವಸ್ಥೆ ಮಾಡಲಾಗಿತ್ತು. ಕುಂದಾಪ್ರ ಡಾಟ್ ಕಾಂ. ಬೈಂದೂರಿನ ಸೋಮೇಶ್ವರದಲ್ಲಿನ ದೇವಸ್ಥಾನದಲ್ಲಿನ ನಾಗಬನ, ಕುಂದಾಪುರದ ಭಟ್ರಹಾಡಿಯ ನಾಗಬನ, ರೋಯಲ್ ಸಭಾಭವನದ ಬಳಿಯ ನಾಗಬನ ಸೇರಿದಂತೆ ಎಲ್ಲಾ ನಾಗಬನದಲ್ಲಿಯೂ ನಾಗನಿಗೆ ವಿಶೇಷಪೂಜೆ ಸಲ್ಲಿಸಲಾಯಿತು.  

Read More

ಕುಂದಾಪ್ರ ಡಾಟ್ ಕಾಂ ಸುದ್ದಿ, ಕುಂದಾಪುರ: ಪುರಾಣ ಪ್ರಸಿದ್ಧ ಮರವಂತೆ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದದಲ್ಲಿ,  ಬೈಂದೂರು ಪಡುವರಿಯ ಸೋಮೇಶ್ವರನ ಸನ್ನಿಧಿಯಲ್ಲಿ ಕರ್ಕಾಟಕ ಅಮಾವಾಸ್ಯೆಯ ಜಾತ್ರಾ ಮಹೋತ್ಸವವು ಸಕಲ ಧಾರ್ಮಿಕ ಪೂಜಾ ಕಾರ್ಯಕ್ರಮಗಳೊಂದಿಗೆ ನೆರವೇರಿತು. ವಿವಿಧ ಭಾಗಗಳಿಂದ ಭಕ್ತರು ಸಹಸ್ರಾರು ಸಂಖ್ಯೆಯಲ್ಲಿ ನಸುಕಿನಲ್ಲಿಯೇ ದೇಗುಲಕ್ಕೆ ಬಂದು ಸಮುದ್ರ ಹಾಗೂ ಸೌರ್ಪಣಿಕಾ ನದಿಯಲ್ಲಿ ಸ್ನಾನ ಮಾಡಿ ಶ್ರೀ ದೇವರ ದರ್ಶನ ಪಡೆದು ಹರಕೆಗಳನ್ನು ಸಲ್ಲಿಸಿದರು. ಭೂಮಾತೆಯನ್ನು ದುಷ್ಟ ರಕ್ಕಸರಿಂದ ರಕ್ಷಿಸಿದ ಶ್ರೀ ವರಾಹ ಸ್ವಾಮಿಯು ಲೋಕಕ್ಕೆ ಕಲ್ಯಾಣ ವನ್ನು ಉಂಟುಮಾಡಿ ಸಕಲ ಜೀವರಾಶಿಗಳನ್ನು ಕಾಯುವವನು. ಆದರಿಂದ ಸಂಪ್ರದಾಯದಂತೆ ವಿವಾಹಿತ ನವಜೋಡಿಗಳು ದೇವಸ್ಥಾನಕ್ಕೆ ಬಂದು ವಿಶೇಷ ಪೂಜೆಗಳನ್ನು ಸಲ್ಲಿಸಿದ್ದರು. ಶ್ರೀ ದೇವರು ಪ್ರಕೃತಿ ವಿಕೋಪದಿಂದ ಹಾಗೂ ಕಷ್ಟಕಾರ್ಪಣಗಳಿಂದ ರಕ್ಷಿಸಿ ಪೊರೆಯುವ ಮಹಿಮಾ ನ್ವಿತನೂ, ಅಭಯದಾತನೂ ಆಗಿ ಭಕ್ತ ಕೋಟಿ ಜನರನ್ನು ಕಾಯುತ್ತಿರುವ ದೇವರಲ್ಲಿ ಕರಾವಳಿಯ ಭಾಗದ ಮೀನುಗಾರರು ಮೀನುಗಾರಿಕೆಯಲ್ಲಿ ಸಮೃದ್ಧಿಯನ್ನು ಕರುಣಿಸು ಎಂದು ಪ್ರಾರ್ಥನೆಗೈದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರಾವಳಿಯ ಚುರುಕುತನ ಹಾಗೂ ಪಶ್ಚಿಮ ಘಟ್ಟ ಭಾಗದ ನಯವಂತಿಕೆ ಕುಂದಾಪ್ರ ಕನ್ನಡಿಗರಲ್ಲಿ ಬೆರೆತಿದ್ದು ವಿಶ್ವದಾದ್ಯಂತ ಉದ್ಯಮ ಹಾಗೂ ಕಲಾ ಜಗತ್ತಿನ ಮೂಲಕ ಹೆಸರು ಮಾಡಲು ಸಾಧ್ಯವಾಗಿದೆ ಎಂದು ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು. ಅವರು ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ಇಲ್ಲಿನ ಹೋಟೆಲ್ ಅಂಬಿಕಾ ಇಂಟರ್‌ನ್ಯಾಶನಲ್‌ನ ಶಾರದಾ ಕನ್ವೆನ್ಷನ್ ಹಾಲ್‌ನಲ್ಲಿ ಗುರುವಾರ ಜರುಗಿದ ಹ್ವಾಯ್ ಬನಿ ಕೂಕಣಿ ಸ್ನೇಹ ಸಮ್ಮಿಲನ – 2019ನ್ನು ಉದ್ಘಾಟಿಸಿ ಮಾತನಾಡಿದರು. ಭಾಷೆಯ ಕಾರಣದಿಂದಾಗಿ ವಿಶ್ವದ ಎಲ್ಲಿಗೇ ಹೋದರು ಅವಿಭಜಿತ ಕುಂದಾಪುರದವರನ್ನು ಗುರುತಿಸುತ್ತಾರೆ. ಇಲ್ಲಿನ ಹತ್ತಾರು ಸಾಧಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಸಾಧನೆಗೈದಿದ್ದಾರೆ. ಕುಂದಾಪುರ ಕ್ಷೇತ್ರದಂತೆಯೇ ಬೈಂದೂರು ಕ್ಷೇತ್ರವೂ ಮೂಲಭೂತ ಸೌಕರ್ಯಗಳನ್ನು ಹೊಂದುವುದಲ್ಲದೇ ಎಲ್ಲಾ ಆಯಾಮಗಳಲ್ಲಿಯೂ ಪ್ರಗತಿ ಸಾಧಿಸಬೇಕಿದೆ. ಅದಕ್ಕಾಗಿ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದವರು ಭರವಸೆಯಿತ್ತರು. ಗಲ್ಫ್ ನಮ್ಮ ಕುಂದಾಪ್ರ ಕನ್ನಡ ಬಳಗದ ಅಧ್ಯಕ್ಷ ಸಾದನ್ ದಾಸ್ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ತಾಲೂಕು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದನಾಡಿನ ಜೀವನ ಸಂಸ್ಕೃತಿಯ ಪ್ರತೀಕವಾಗಿಹ ನೆಲಪರ – ಜೀವಪರವಾದ ಕುಂದಾಪ್ರ ಕನ್ನಡದ ಭಾಷಾ ಪರಂಪರೆಯು, ಆಧುನಿಕತೆಯ ನಾಗಾಲೋಟದಲ್ಲಿ ತನ್ನ ಮೂಲ ಸೊಗಡನ್ನು ಕಳಚಿಕೊಳ್ಳುತ್ತಿರುವುದು ದುರಂತ. ಯಥೇಚ್ಚ ಬಳಕೆಯೊಂದಿಗೆ ಪದಗುಚ್ಚಗಳ ಸಂಗ್ರಹಕಾರ್ಯ ನಡೆದಾಗಲೇ ಕುಂದಾಪ್ರ ಕನ್ನಡ ಬರಡಾಗದೇ ಸದಾ ಫಲವತ್ತಾಗಿರಲು ಸಾಧ್ಯ ಎಂದು ಕುಂದಾಪುರದ ಹಿರಿಯ ನ್ಯಾಯವಾದಿ ಎ. ಎಸ್. ಎನ್ ಹೆಬ್ಬಾರ್ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯ ಆಶ್ರಯದಲ್ಲಿ ನಡೆದ ’ವಿಶ್ವ ಕುಂದಾಪ್ರ ದಿನ’ ಕಾರ್ಯಕ್ರಮದಲ್ಲಿ ಮಾತನಾಡಿದರು. ಬೈಂದೂರು ವಿಧಾನಸಭಾ ಕ್ಷೇತದ ಶಾಸಕ ಹಾಗೂ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಬಿ.ಎಮ್. ಸುಕುಮಾರ ಶೆಟ್ಟಿ ಮಾತನಾಡಿ .ಪ್ರಕೃತಿ ಸಹಜವಾಗಿಯೇ ಗಡಸುತನ – ಚುರುಕುತನವನ್ನು ತನ್ನೊಳಗೆ ಆಲಂಗಿಸಿಕೊಂಡಿರುವ ಕುಂದಾಪ್ರ ಕನ್ನಡವು ಆಡಂಬರರಹಿತವಾದ ಹೃದಯಾಂತರಾಳದ ಭಾಷೆ ಎಂದರು. ಕಾಲೇಜು ಪ್ರಾಂಶುಪಾಲ ಪ್ರೊ. ಕೊತ್ತಾಡಿ ಉಮೇಶ್ ಶೆಟ್ಟಿ ಶುಭಶಂಸನೆ ಗೈದರು. ಕುಂದಾಪುರ ಎಜ್ಯುಕೇಶನ್ ಸೊಸೈಟಿಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪಾಶ್ಚಾಮಾತ್ಯ ಆಹಾರ ಪದ್ದತಿಯ ಅತೀಯಾದ ಆಕ್ರಮಣದಿಂದಾಗಿ ನಮ್ಮ ಪರಂಪರಾಗತ ಮತ್ತು ಸಾಂಪ್ರಾದಾಯಿಕ ಆಹಾರ ಶೈಲಿಯಲ್ಲಿ ಗಣನೀಯ ಬದಲಾವಣೆ ಕಂಡು ಬಿರುತ್ತಿರುವುದು ಬೇಸರದ ಸಂಗತಿಯಾಗಿದೆ. ಇದಕ್ಕಾಗಿ ದೇಶಿಯ ಆಹಾರ ಪದ್ಧತಿಯ ಜಾಗ್ರತ ಕಾರ್ಯಕ್ರಮ ಅತ್ಯಂತ ಅನಿವಾರ್ಯ ಮತ್ತು ಉಪಯುಕ್ತ ಎಂದು ಡಾ. ರಾಜೇಶ್ ಬಾಯರಿ ಹೇಳಿದರು. ಗುರುಕುಲ ವಿದ್ಯಾಸಂಸ್ಥೆಯ ೭ನೇ ವರ್ಷ ಆಯೋಜಿಸಿದ್ದ ಸಸ್ಯಾಮೃತ ಕಾರ್ಯಕ್ರಮದಲ್ಲಿ ಮಾತನಾಡಿ ನಮ್ಮ ದೇಶಿಯ ಆಹಾರ ಪದಾರ್ಥಗಳಲ್ಲಿ ಸಸ್ಯಗಳು ಎಲೆಗಳು ಬೇರುಗಳು ಮುಂತಾದವುಗಳು ಪ್ರದಾನ ಪಾತ್ರವನ್ನು ವಹಿಸುತ್ತಿವೆ. ನಮ್ಮ ಮನೆಯಂಗಳದಲ್ಲಿ ಕಾಣುವ ಅನೇಕ ಔಷಧಿಯುಕ್ತ ಮತ್ತು ಆಹಾರ ಪದಾರ್ಥಗಳನ್ನು ತಯಾರಿಸುವಲ್ಲಿ ವಿಶಿಷ್ಟವಾದ ಪಾತ್ರವನ್ನು ನಿರ್ವಹಿಸುತ್ತಿದೆ. ಪ್ರತಿಯೊಂದು ರೋಗಕ್ಕೂ ಅದಕ್ಕೆ ಸಂಬಂಧಪಟ್ಟ ಸಸ್ಯ ನೇರ ಮತ್ತು ಪರೋಕ್ಷ ನಿರ್ಮೂಲನಾ ಗುಣವನ್ನು ಹೊಂದಿದೆ. ಪ್ರತಿನಿತ್ಯವೂ ನಾವು ಸಸ್ಯಗಳಿಂದ ತಯಾರಿಸಿದ ಪದಾರ್ಥಗಳನ್ನು ಸೇವಿಸುವುದರಿಂದ ಆರೋಗ್ಯ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯಕಾರಿಯಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಗುರುಕುಲ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ಬಸ್ರೂರು ಅಪ್ಪಣ್ಣ ಹೆಗ್ಡೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮನುಷ್ಯ ಸಂಬಂಧಗಳು ಮೂಲೆ ಗುಂಪಾಗುತ್ತಿರುವ ಈ ಕಾಲಘಟ್ಟದಲ್ಲಿ ಧಾರ್ಮಿಕ – ಸಾಮಾಜಿಕ – ಸಾಂಸ್ಕೃತಿಕ ಸಮಾನತೆಯನ್ನು ಕಾಯ್ದುಕೊಳ್ಳಲು ಬಸವಾದಿ ಶಿವಶರಣರು ಪ್ರತಿಪಾದಿಸಿದ ಮಾನವೀಯ ಹೋರಾmದ ಅನಿವಾರ್ಯತೆ ಇದೆ ಎಂದು ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಡಾ. ಕೆ. ಕಿಶೋರ್ ಕುಮಾರ್ ಶೆಟ್ಟಿ ಹೇಳಿದರು. ಇವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಹಾಗೂ ಸಹಮತ ವೇದಿಕೆಯ ಸಹಯೋಗದಲ್ಲಿ ನಡೆದ ‘ಮತ್ತೆ ಕಲ್ಯಾಣ’ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿ ಬಹುತ್ವದ ಪರಿಕಲ್ಪನೆ ತನ್ನ ಅಸ್ಮಿತೆಯನ್ನು ಕಳೆದುಕೊಳ್ಳುತ್ತಿರುವ ಜಾಗತೀಕರಣದ ಈ ಸಂದರ್ಭ, ಸಂಕುಚಿತಗೊಂಡ ಮನಸ್ಸುಗಳು ಇದಿರುಗೊಳ್ಳಬೇಕಾದದ್ದು ಅಂತರಂಗದ ಪ್ರತಿಭಟನೆಗೇ ವಿನಃ ಬಹಿರಂಗದ ಪ್ರತಿಭಟನೆಗಲ್ಲ ಎಂದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಕೊತ್ತಾಡಿ ಉಮೇಶ್ ಶೆಟ್ಟಿ ಮಾತನಾಡಿ, ಡಾಂಬಿಕ ಬದುಕಿಗೆ ತೆರೆದುಕೊಂಡ ಪ್ರಸ್ತುತ ಸಮಾಜದಲ್ಲಿ ಮಠ-ಮಂದಿರ – ಮಸೀದಿಗಳ ನಿರ್ಮಾಣದ ಬದಲಾಗಿ ವೈಚಾರಿಕ ಮನಸ್ಸುಗಳು ನಿರ್ಮಾಣಗೊಳ್ಳಬೇಕಿದೆ. ಮಾನವೀಯತೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರಿನ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ರಘು ನಾಯ್ಕರವರು ರೋಲ್ ಎಂಡ್ ರಿಲೆವೆನ್ಸ್ ಆಪ್ ಕಾರ್ಪೋರೇಟ್ ಇ-ಲರ್ನಿಂಗ್ ಇನ್ ಎನ್‌ಹೆನ್ಸಿಂಗ್ ದಿ ಇಫೆಕ್ಟಿವ್‌ನೆಸ್ ಆಪ್ ಟ್ರೈನಿಂಗ್ ಎಂಡ್ ಡೆವಲಪ್‌ಮೆಂಟ್ : ಎ ಸ್ಟಡಿ ವಿದ್ ರೆಫರೆನ್ಸ್ ಟು ಸೆಲೆಕ್ಟೆಡ್ ಕಂಪ್ಯೂಟರ್ ಸಾಪ್ಟ್‌ವೇರ್ ಎಂಡ್ ಸರ್ವೀಸಸ್ ಫರ್ಮ್ಸ್ ಇನ್ ಕರ್ನಾಟಕ ಮಹಾ ಪ್ರಬಂದಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಅವರು ಮಂಗಳೂರು ವಿಶ್ವವಿದ್ಯಾನಿಲಯ ವಾಣಿಜ್ಯಶಾಸ್ತ್ರ ವಿಭಾಗದ ಪ್ರೊ. ಪಿ.ಎಸ್ ಯಡಪಡಿತ್ತಾಯರವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿರುತ್ತಾರೆ. ಇವರು ಬೈಂದೂರು ತಾಲೂಕು ಗೋಳಿಹೊಳೆ ಗ್ರಾಮದ ಕುಪ್ಪಯ್ಯ ನಾಯ್ಕ  ಸುಶೀಲ ದಂಪತಿಯ ಪುತ್ರ.

Read More