Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಇಲ್ಲಿನ ಯುವ ರೆಡ್‌ಕ್ರಾಸ್ ಘಟಕ, ರೆಡ್ ರಿಬ್ಬನ್ ಕ್ಲಬ್, ರೋವರ್ ರೇಂಜರ್ ಘಟಕ, ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ರೆಡ್‌ಕ್ರಾಸ್ ಸೊಸೈಟಿ ಕುಂದಾಪುರ ಇವರ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಬಿ.ಎ. ಮೇಳಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ರೆಡ್‌ಕ್ರಾಸ್ ಸಮಿತಿಯ ಅಧ್ಯಕ್ಷರಾದ ಜಯಕರ ಶೆಟ್ಟಿಯವರು, ಖಜಾಂಚಿಗಳಾದ ಶಿವರಾಮ ಶೆಟ್ಟಿ ತಾಲೂಕು ರೆಡ್‌ಕ್ರಾಸ್ ಸಮಿತಿಯ ಸಂಯೋಜನಾಧಿಕಾರಿಗಳಾದ ಎ.ಎಮ್. ಶೆಟ್ಟಿಯವರು ಉಪಸ್ಥಿತರಿದ್ದರು. ಯುವ ರೆಡ್‌ಕ್ರಾಸ್ ಘಟಕದ ಸಂಚಾಲಕರಾದ ಶಿವಕುಮಾರ ಪಿ.ವಿ. ಇವರು ಕಾರ್ಯಕ್ರಮವನ್ನು ನಿರೂಪಿಸಿ ನಿರ್ವಹಿಸದರು, ರೆಡ್ ರಿಬ್ಬನ್ ಕ್ಲಬ್‌ನ ಸಂಯೋಜಕರಾದ ರಘು ನಾಯ್ಕ್ ಸ್ವಾಗತಿಸಿ, ರೋವರ್ ರೇಂಜರ್ ಘಟಕದ ಸಂಯೋಜಕರಾದ ಗಿರೀಶ್ ಕುಮಾರ್ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಲೋಕ ಸಭಾ ಚುನಾವಣೆ ಪ್ರಯುಕ್ತ ಮತದಾನ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಕುಂದಾಪುರ ಪುರಸಭೆಯ ಕಂದಾಯ ನಿರೀಕ್ಷಕರಾದ ಜ್ಯೋತಿ ಎಚ್. ಇವರಿಂದ ಕುಂದಾಪುರ ಪುರಸಭಾ ವ್ಯಾಪ್ತಿಯ ಶಾಸ್ತ್ರಿ ಸರ್ಕಲ್ ಹತ್ತಿರ ರಿಕ್ಷಾ ಚಾಲಕರಿಗೆ ಮತ್ತು ಸಾರ್ವಜನಿಕರಿಗೆ ಮತದಾನದ ಕುರಿತು ಪ್ರತೀಜ್ಞಾ ವಿಧಿಯನ್ನು ಬೋದಿಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಚುನಾವಣಾ ಆಯೋಗವು ಶಿವಮೊಗ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆ 2019ಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಎಪ್ರಿಲ್ 23 ರಂದು ಮತದಾನ ನಡೆಸಲು ಚುನಾವಣಾ ವೇಳಾ ಪಟ್ಟಿಯನ್ನು ಘೋಷಿಸಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಶಾಂತಿಪಾಲನೆ, ಕಾನೂನು ಸುವ್ಯವಸ್ಥೆ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯಸಮ್ಮತವಾಗಿ, ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ, ಮತದಾನ ಪ್ರಾರಂಭವಾಗುವ ದಿನಾಂಕಕ್ಕೆ 48 ಗಂಟೆಗಳ ಮುಂಚಿತವಾಗಿ ಮತ್ತು ಮತದಾನದ ದಿನ ಅಂದರೆ ಎಪ್ರಿಲ್ 21 ರಂದು ಸಂಜೆ 6 ರಿಂದ ಎಪ್ರಿಲ್ 23 ರ ಮಧ್ಯರಾತ್ರಿ 12 ರ ವರೆಗೆ ಉಡುಪಿ ಜಿಲ್ಲೆಯ ಕುಂದಾಪುರ ಹಾಗೂ ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು, ಮದ್ಯ ಮಾರಾಟ ಡಿಪೋಗಳನ್ನು, ಮದ್ಯ ತಯಾರಿಕಾ ಡಿಸ್ಟಿಲರಿಗಳನ್ನು, ಸ್ಟಾರ್ ಹೋಟೆಲ್‌ಗಳನ್ನು, ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಚುನಾವಣಾ ಆಯೋಗವು ಸಾರ್ವತ್ರಿಕ ಲೋಕಸಭಾ ಸಾರ್ವತ್ರಿಕ ಚುನಾವಣೆ 2019 ಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯಲ್ಲಿ ಏಪ್ರಿಲ್ 18 ರಂದು ಮತದಾನ ನಡೆಸಲು ಚುನಾವಣೆ ವೇಳಾಪಟ್ಟಿಯನ್ನು ಘೋಷಿಸಿದೆ. ಈ ಸಂದರ್ಭದಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಮತದಾನ ಪ್ರಾರಂಭವಾಗುವ ದಿನಾಂಕದ ೪೮ ಗಂಟೆಗಳ ಮುಂಚಿತವಾಗಿ ಅಂದರೆ ಎಪ್ರಿಲ್ 16 ರಂದು ಸಂಜೆ 6 ರಿಂದ ಮತದಾನದ ದಿನ ಅಂದರೆ ಎಪ್ರಿಲ್ 18 ರ ಮಧ್ಯರಾತ್ರಿ 12 ರ ವರೆಗೆ ಉಡುಪಿ ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು, ಮದ್ಯ ಮಾರಾಟ ಡಿಪೋಗಳನ್ನು, ಮದ್ಯ ತಯಾರಿಕಾ ಡಿಸ್ಟಿಲರಿಗಳನ್ನು, ಸ್ಟಾರ್ ಹೋಟೆಲ್‌ಗಳನ್ನು, ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶ ಹೊರಡಿಸಿರುತ್ತಾರೆ. ಈ ಆದೇಶದಂತೆ ಸೂಚಿಸಿರುವ ದಿನಗಳಲ್ಲಿ ಜಿಲ್ಲೆಯಾದ್ಯಂತ ಯಾವುದೇ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯು.ಕೆ.ಜಿ. ವಿದ್ಯಾರ್ಥಿಗಳ ಘಟಿಕೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಉದ್ಘಾಟಕರಾಗಿ ಆಗಮಿಸಿದ ಖಂಬದಕೋಣೆ ಸಂವೇದನಾ ಪ್ರಥಮ ದರ್ಜೆ ಕಾಲೇಜಿನ ಅಧ್ಯಕ್ಷ ಡಾ. ಸುಬ್ರಹ್ಮಣ್ಯ ಭಟ್ ಮಾತನಾಡಿ ಪ್ರತಿಯೊಂದು ಮಗುವು ದೇವರುಕೊಟ್ಟ ವರ, ಮಕ್ಕಳನ್ನು ತಮ್ಮ ಮಕ್ಕಳಂತೆ ಪ್ರೀತಿಸಿ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಕೊಡಬೇಕಾಗಿದೆ. ಅವರ ಬುದ್ಧಿಮತ್ತೆಯ ಕುರಿತು ಶಿಕ್ಷಕರು ಹಾಗೂ ಪೋಷಕರಿಗೆ ಅರಿವಿರಬೇಕು. ಅಂಕಗಳಿಂದ ವಿದ್ಯಾರ್ಥಿಗಳ ಬುದ್ಧಿವಂತಿಕೆ ಅಳೆಯದೆ, ಅವರನ್ನು ಸರ್ವತೋಮುಖವಾಗಿ ಪ್ರತಿಭಾವಂತರಾಗುವಂತೆ ಮಾಡಬೇಕು. ಮಕ್ಕಳಿಗೆ ಪ್ರೀತಿಯ ಸ್ಪರ್ಶ ನೀಡಿ ಅವರನ್ನು ಆದರದಿಂದ ನಡೆಸಿಕೊಳ್ಳಬೇಕು ಗುರುಹಿರಿಯರಿಗೆ ಗೌರವಕೊಡುವುದನ್ನು ಮಕ್ಕಳಿಗೆ ತಿಳಿಸಿಕೊಡಬೇಕು. ಶಿಕ್ಷಣವೆಂಬುದು ಹಣಕೊಟ್ಟು ಖರೀದಿಸುವ ಸರಕಲ್ಲ. ಅದು ವಿದ್ಯಾರ್ಥಿಗಳು ಶ್ರಮಪಟ್ಟು ಅಧ್ಯಯನ ಮಾಡಿದಾಗ ದೊರೆಯು ಜ್ಞಾನ ಸಂಪತ್ತು ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಮರವಂತೆಯ ಖ್ಯಾತ ವೈದ್ಯೆ ಡಾ. ರೂಪಶ್ರೀ ಮಗುವಿನ ಸರ್ವಾಂಗೀಣ ಬೆಳವಣಿಗೆಯಲ್ಲಿ ಇಂದಿನ ಶಿಕ್ಷಣದ ಜೊತೆಗೆ ದೈಹಿಕ, ಮಾನಸಿಕ, ಆರೋಗ್ಯ ಕಾಪಾಡಿಕೊಳ್ಳುವುದು ಅತೀ ಅಗತ್ಯ. ಮಕ್ಕಳ ಆರೋಗ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶೋಭಾ ಕರಂದ್ಲಾಜೆ ಯಡಿಯೂರಪ್ಪನವರ ಜೊತೆಗೆ ಕೇರಳದ ದೇವಸ್ಥಾನಕ್ಕೆ ಹೋಗಿ ತಾಳಿ ಕಟ್ಟಿಸಿಕೊಂಡು ಬಂದಿದ್ದಾರೆಂದು ಜನರು ಆಡಿಕೊಳ್ಳುತ್ತಿದ್ದಾರೆ. ಆಗಾಗ್ಗೆ ಯಡಿಯೂರಪ್ಪನವರ ಒಟ್ಟಿಗೆ ಪೂಜೆ ಪುನಸ್ಕಾರಗಳಿಗೆ ತೆರಳುತ್ತಾರೆ. ಆದರೆ ಅವರು ಮಾತ್ರ ತಾನು ಮಗಳು ಎನ್ನುತ್ತಿದ್ದಾರೆ. ಮಗಳಾದರೂ, ಮಡದಿಯಾದರೂ ಅವರದ್ದೂ ವಂಶಪಾರಂಪರ್ಯ ರಾಜಕಾರಣ ಆಗಲಿಲ್ಲವೇ? ಯಡಿಯೂರಪ್ಪನವರ ಕುಟುಂಬದವರಾಗಿದ್ದೂ ಶಿವಮೊಗ್ಗದಲ್ಲಿ ಬಿ.ವೈ. ರಾಘವೇಂದ್ರ ಉಡುಪಿಯಲ್ಲಿ ಶೋಭಾ ಚುನಾವಣೆಗೆ ನಿಲ್ಲಬಹುದೇ ಎಂದು ಎಂಎಲ್‌ಸಿ ಭೋಜೆಗೌಡ ಅವರು ಖಾರವಾಗಿ ತಿವಿದಿದ್ದಾರೆ. ಶೋಭಾ ಕರಂದ್ಲಾಜೆ ಅವರ ಕುಟುಂಬ ರಾಜಕಾರಣ ಹೇಳಿಕೆಗೆ ಬೈಂದೂರಿನಲ್ಲಿ ಪ್ರತಿಕ್ರಿಯಿಸಿದ ಎಂಎಲ್‌ಸಿ ಹಾಗೂ ಜೆಡಿಎಸ್ ವಕ್ತಾರ ಭೋಜೆಗೌಡ ಪ್ರತಿಕ್ರಿಯಿಸಿ ನಿಖಿಲ್ ಹಾಗೂ ಪ್ರಜ್ವಲ್ ದೇವೇಗೌಡರ ಮೊಮ್ಮಕ್ಕಳಾಗಿದ್ದೇ ತಪ್ಪಾಯಿತೆ. ಅವರು ದೇವೆಗೌಡರ ಮೊಮ್ಮಕ್ಕಳಾದರೂ ರಾಜ್ಯಸಭಾ ಸೀಟು ಕೇಳಿಲ್ಲ, ಎಂಎಲ್‌ಸಿ ಸೀಟ್ ತೆಗೆದುಕೊಂಡಿಲ್ಲ, ಕಾರ್ಯಕರ್ತನಿಗೆ ಸಿಗುವ ಸೀಟನ್ನು ತಮಗೆ ಬೇಕೆಂದು ಕೇಳಿಲ್ಲ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಂತೆ ಜನರ ಮುಂದೆ ಹೋಗಿ ಮತ ಕೇಳುತ್ತಿದ್ದಾರೆ. ಜನ ಇಷ್ಟವಾದರೆ ಮತ ಹಾಕುತ್ತಾರೆ. ಇಲ್ಲದಿದ್ದರೆ ತಿರಸ್ಕಾರ ಮಾಡುತ್ತಾರೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ, ಬೈಂದೂರು, ಎ.4: ರಾಜ್ಯದಲ್ಲಿ ಮೈತ್ರಿ ಸರಕಾರ ಭ್ರಷ್ಟಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದರೇ ಬಯಲಿಗೆಳೆಯಲಿ. ಸುಮ್ಮನೆ ಬಾಯಿ ಚಲಪಕ್ಕೆ ಮಾತನಾಡುವುದಲ್ಲ ಎಂದು ಸಿಎಂ ಹೆಚ್. ಡಿ ಕುಮಾರಸ್ವಾಮಿ ಬೈಂದೂರಿನಲ್ಲಿ ಉಡುಪಿ ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಅವರು ಬೈಂದೂರಿನಲ್ಲಿ ಪತ್ರಕರ್ತರ ಪ್ರಶ್ನೆಗೆ ಹೀಗೆ ಪ್ರತಿಕ್ರಿಯಿಸಿದರು. ಕರ್ನಾಟಕದಲ್ಲಿ ಮೈತ್ರಿ ಮಾಡಿಕೊಂಡಿರುವುದು ವಂಶ ಪಾರಂಪರ್ಯವನ್ನು ಮುಂದುವರಿಸಲು ಹಾಗೂ ಭ್ರಷ್ಟಾಚಾರ ನಡೆಸಲು ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ ಬಿಜೆಪಿಯಂತೆ ಈ ಮಟ್ಟಿಗೆ ಕೀಳು ಮಟ್ಟದ ರಾಜಕೀಯ ಯಾರೂ ಮಾಡಿರಲಿಲ್ಲ. ಅಧಿಕಾರ ಹಿಡಿಯುವುದೆಂದರೆ ಆಳ್ವಿಕೆ ಮಾಡುವುದಕ್ಕಷ್ಟೇ ಅಲ್ಲ, ಒಳ್ಳೆಯ ಕೆಲಸಗಳ ಮೂಲಕ ರಾಜ್ಯದ ಜನರಿಗೆ ಒಳ್ಳೆಯದನ್ನು ಮಾಡುವ ಉದ್ದೇಶ ಇರುತ್ತದೆ. ಅಧಿಕಾರದಲ್ಲಿದ್ದಾಗಲೆಲ್ಲಾ ಹಾಗೆ ಮಾಡಿದ್ದೇವೆ ಎಂಬ ಭರವಸೆ ಇದೆ ಎಂದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಹುಮತದಿಂದ ಗೆಲ್ಲುತ್ತೇವೆ. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿಯೂ ಹೆಚ್ಚಿನ ಮತಗಳನ್ನು ಪಡೆದುಕೊಳ್ಳುವಲ್ಲಿ ಯಾವುದೇ ಸಂಶಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು ರಾಜ್ಯದಲ್ಲಿ ಜೆಡಿಎಸ್…

Read More

ಬೈಂದೂರು ಚಂದ್ರಶೇಖರ ನಾವಡ | ಕುಂದಾಪ್ರ ಡಾಟ್ ಕಾಂ ಲೇಖನ. ಪ್ರಾಚೀನ ವೈದ್ಯ ಪರಂಪರೆಯಾದ ಭಾರತೀಯ ಆಯುರ್ವೇದ ಇಂದು ವಿಶ್ವದಾದ್ಯಂತ ಜನಮನ್ನಣೆ ಗಳಿಸುತ್ತಿದೆ. ಆಯುರ್ವೇದ ಚಿಕಿತ್ಸೆಯೊಂದಿಗೆ ಧ್ಯಾನ, ಯೋಗ, ಭಜನೆ, ಸಂಗೀತ, ಕಲೆ, ಆಧ್ಯಾತ್ಮ ಮಾರ್ಗದರ್ಶನ,ಆಯುರ್ವೇದ ಪದ್ಧತಿಯ ಹಿತ-ಮಿತ ಭೋಜನವನ್ನು ಒಳಗೊಂಡ ಸಮಗ್ರ ಭಾರತೀಯ ಜೀವನ ಪದ್ದತಿಯನ್ನು ಪರಿಚಯಿಸುವ ಕೊಲ್ಲೂರಿನ ಅಭಯ ಚಿಕಿತ್ಸಾಲಯ ದೇಶ-ವಿದೇಶೀ ಸ್ವಾಸ್ಥ್ಯ ಆಕಾಂಕ್ಷಿಗಳನ್ನು ಆಕರ್ಷಿಸುತ್ತಿದೆ. ಕೊಲ್ಲೂರಿನಂತಹ ಗ್ರಾಮೀಣ ಪ್ರದೇಶದಲ್ಲಿ ಸದ್ದಿಲ್ಲದೇ ಋಷಿ ಮುನಿಗಳ ಕೊಡುಗೆಯ ಪ್ರಾಚೀನ ಭಾರತದ ಪಾರಂಪರಿಕ ಚಿಕಿತ್ಸಾ ಪದ್ದತಿಯನ್ನು ಪಸರಿಸುತ್ತಿರುವ ಆಯುರ್ವೇದ ವೈದ್ಯ ಡಾ. ಶ್ರೀಕಾಂತ ಕೊಡವೂರು ಅವರ ಅಭಯ ಚಿಕಿತ್ಸಾಲಯದ ಪ್ರಸಿದ್ಧಿ ಅಂತರ್ಜಾಲ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಐರೊಪ್ಯ ದೇಶಗಳವರೆಗೆ ಹರಡಿದೆ. ಚಿಕಿತ್ಸಾಲಯದ ಗೋಡೆಗಳ ಮೇಲೆ ಹಿರಿಯ ಕಲಾವಿದ ಉಪ್ಪುಂದ ಮಂಜುನಾಥ ಮಯ್ಯರ ಕುಂಚದಿಂದ ಹೊಮ್ಮಿದ ಮನಮೋಹಕ ಚಿತ್ತಾರ ಕಣ್ಮನ ಸೆಳೆಯುತ್ತದೆ. Sound mind in sound body ಅರ್ಥಾತ್ ಮನಸ್ಸು ಆರೋಗ್ಯವಾಗಿದ್ದರೆ ಶರೀರ ಆರೋಗ್ಯವಾಗಿರುತ್ತದೆ ಎನ್ನುವ ಮಾತಿನಂತೆ ಈ ಸುಂದರ ಚಿತ್ರಗಳು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರೋವರ್-ರೇಂಜರ‍್ಸ್ ಘಟಕದ ವತಿಯಿಂದ ರೋವರ‍್ಸ್ ಲೀಡರ್ ಗಿರೀಶ್ ಕುಮಾರ್ ರವರ ನೇತೃತ್ವದಲ್ಲಿ ಹಡಿನ್ ಇಕೋ ಬೀಚ್, ಬೆಳ್ಕೆ, ಭಟ್ಕಳ. ಇಲ್ಲಿ ಶನಿವಾರದಂದು ರೋವರ್-ರೇಂಜರ‍್ಸ್ ನಡಿಗೆ ಪರಿಸರದ ಕಡೆಗೆ ಎಂಬ ಒಂದು ದಿನದ ಶಿಬಿರವನ್ನು ಆಯೋಜಿಸಲಾಗಿತ್ತು. ಶಿಬಿರದಲ್ಲಿ ೨೪ ರೋವರ್-ರೇಂಜರ‍್ಸ್ ವಿದ್ಯಾರ್ಥಿಗಳು ಭಾಗವಹಿಸಿ ಹಡಿನ್ ಇಕೋ ಬೀಚ್‌ನಲ್ಲಿ ಸ್ವಚ್ಛತಾ ಕಾರ್ಯವನ್ನು ಕೈಗೊಂಡರು. ನಂತರ ಹಡಿನ್ ಇಕೋ ಪಾರ್ಕನಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಂಜೆ ಅಲ್ಲಿನ ಉಪವಲಯ ಅರಣ್ಯಾಧಿಕಾರಿಗಳಾದ ಪ್ರಮೋದ್ ನಾಯಕ್ ರವರು ಪರಿಸರದ ರಕ್ಷಣೆಯ ಅವಶ್ಯಕತೆಯ ಬಗೆಗೆ ಉಪನ್ಯಾಸ ನೀಡಿ, ಸಾರ್ವಜನಿಕರ ಸಹಕಾರದಿಂದ ಮಾತ್ರ ಪರಿಸರ ಸಂರಕ್ಷಣೆ ಸಾಧ್ಯ ಎಂದು ಅಭಿಪ್ರಾಯ ಪಟ್ಟರು. ಶಿಬಿರದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಸಹ ಕೈ ಜೋಡಿಸಿದರು. ಸಹಾಯಕ ಪ್ರಾಧ್ಯಾಪಕರಾದ ನವೀನ್ ಹೆಚ್.ಜಿ. ಉಪಸ್ಥಿತರಿದ್ದರು.

Read More

ನಾಗೂರಿನ ಕುಸುಮಾ ಫೌಂಡೇಶನ್ ದಂತ ಚಿಕಿತ್ಸಾ ಶಿಬಿರದಲ್ಲಿ ಅಭಿಮತ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು : ಬಾಯಿಯು ದೇಹದ ಹೆಬ್ಬಾಗಿಲು ಎನ್ನುತ್ತಾರೆ. ಬಾಯಿ ಮತ್ತು ಹಲ್ಲುಗಳ ಆರೋಗ್ಯದ ಮೇಲೆ ದೇಹದ ಆರೋಗ್ಯ ಅವಲಂಬಿಸಿರುವುದರಿಂದ ಅದನ್ನು ಎಂದೂ ನಿರ್ಲಕ್ಷಿಸಬಾರದು ಎಂದು ಇಂಡಿಯನ್ ಡೆಂಟಲ್ ಅಸೋಸಿಯೇಶನ್‌ನ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಮನೋಜ್ ಮ್ಯಾಕ್ಷಿಮ್ ಡಿಲಿಮಾ ಹೇಳಿದರು. ನಾಗೂರಿನ ಕುಸುಮಾ ಫೌಂಡೇಶನ್, ಐಡಿಎ ಜಿಲ್ಲಾ ಘಟಕ, ಮಣಿಪಾಲದ ದಂತವಿಜ್ಞಾನ ಮಹಾವಿದ್ಯಾಲಯ, ಉಡುಪಿ ಜಿಲ್ಲಾ ಆಸ್ಪತ್ರೆಯ ದಂತ ಆರೋಗ್ಯ ವಿಭಾಗ, ಕುಂದಾಪುರ ಮಿಡ್‌ಟೌನ್ ರೋಟರಿ ಕ್ಲಬ್ ಮತ್ತು ಬೈಂದೂರು-ಉಪ್ಪುಂದ ಲಯನ್ಸ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ಫೌಂಡೇಶನ್ ದತ್ತು ಪಡೆದಿರುವ ನಾಗೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ, ಶಿಕ್ಷಕ ಮತ್ತು ಪೋಷಕರಿಗಾಗಿ ಮಂಗಳವಾರ ನಡೆದ ಸಮಗ್ರ ಬಾಯಿಯ ಆರೋಗ್ಯ ಕಾರ್ಯಕ್ರಮ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿದ ಬಳಿಕ ಮಾತನಾಡಿದರು. ಹಲ್ಲು ಮತ್ತು ಬಾಯಿಯ ಆರೋಗ್ಯದ ಕುರಿತಾದ ಎಚ್ಚರ ಬಾಲ್ಯದಲ್ಲೇ ಮೂಡಬೇಕು. ಆ…

Read More