ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪೂನಾ – ಎರ್ನಾಕುಲಂ – ಪುನಾ ಮಾರ್ಗದ ಪೂರ್ಣಾ ಎಕ್ಸ್‌ಪ್ರೆಸ್ ರೈಲಿಗೆ (11097 / 11098) ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣ ಬೈಂದೂರಿನಲ್ಲಿ ನಿಲುಗಡೆ ನೀಡಲಾಗಿದೆ. ಈ ರೈಲು ಪ್ರತಿ ಶನಿವಾರ ರಾತ್ರಿ 23:30ಕ್ಕೆ ಪೂನಾದಿಂದ ಹೊರಟು ಮರುದಿನ ರಾತ್ರಿ 8:45ಕ್ಕೆ ಬೈಂದೂರು ತಲುಪುತ್ತದೆ. ಮತ್ತು ಪ್ರತಿ ಸೋಮವಾರ ರಾತ್ರಿ 23:25ಕ್ಕೆ ಎರ್ನಾಕುಲಂನಿಂದ ಹೊರಟು ಬೆಳಿಗ್ಗೆ 9:20ಕ್ಕೆ ಬೈಂದೂರು ತಲುಪಲಿದೆ. ಬೈಂದೂರಿನಲ್ಲಿ ರೈಲು ನಿಲುಗಡೆಗೆ ಕೋರಿ ಕೇಂದ್ರ ರೈಲ್ವೆ ಸಚಿವರು ಹಾಗೂ ರೈಲ್ವೆ ಬೋರ್ಡ್ ಮೇಲೆ ಒತ್ತಡ ತಂದ ಶಿವಮೊಗ್ಗ ಕ್ಷೇತ್ರದ ಲೋಕಸಭಾ ಸದಸ್ಯ ಬಿ. ವೈ. ರಾಘವೇಂದ್ರ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ರಾಷ್ಟ್ರೀಯ ರೈಲ್ವೆ ಪ್ರಯಾಣಿಕರ ಪರಾಮರ್ಷಕ ಸಮಿತಿ ಸದಸ್ಯ ಕೆ. ವೆಂಕಟೇಶ ಕಿಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನನೆಗುದಿಗೆ ಬಿದ್ದಿರುವ ನಾಗೂರು-ಹೇರೂರು ರಸ್ತೆಯ ದುರಸ್ತಿ ಕಾರ್ಯವನ್ನು ತಕ್ಷಣ ಕೈಗೆತ್ತಿಕೊಳ್ಳುವಂತೆ ಆಗ್ರಹಿಸಿ ಸುತ್ತಲಿನ ಗ್ರಾಮಸ್ಥರು ಬುಧವಾರ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಜನರ ಬೇಡಿಕೆ ಬಗ್ಗೆ ಪತ್ರಕರ್ತರಿಗೆ ವಿವರ ನೀಡಿದ ಹೇರೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಶೋಕಕುಮಾರ ಶೆಟ್ಟಿ ೫ ಕಿಲೋಮೀಟರು ಉದ್ದದ ಈ ರಸ್ತೆಯಲ್ಲಿ ನಡದಾಡಲು ಅಆಧ್ಯವಾಗುವ ರೀತಿಯಲ್ಲಿ ಹಂಡಗುಂಡಿಗಳು ಉಂಟಾಗಿವೆ. ಇದರ ದುರ‍್ಸತಿಗೆ ಎರಡು ವರ್ಷಗಳಿಂದ ಜನ ಆಗ್ರಹಿಸುತ್ತಲೇ ಬಂದಿದ್ದಾರೆ. ಇಲ್ಲಿ ಅನುಮತಿ ಪಡೆದು ಓಡಾಡುತ್ತಿದ್ದ ಎರಡು ಬಸ್‌ಗಳು ಇದೇ ಕಾರಣಕ್ಕೆ ಓಡಾಟ ನಿಲ್ಲಿಸಿವೆ. ಸಂಜೆಯ ಬಳಿಕ ಇಲ್ಲಿ ಆಟೊ ಓಡಿಸುವುದಿಲ್ಲ. ಇಡೀ ರಸ್ತೆಯಲ್ಲಿ ಧೂಳು ಏಳುತ್ತಿದೆ. ಯಡಕಂಟ, ಉಪ್ರಳ್ಳಿ, ಮೇಕೋಡು, ಹೇರೂರು, ನೂಜಾಡಿ, ತಂಕಬೆಟ್ಟು, ಹಳಗೇರಿಯ ೪೦೦೦ ಕುಟುಂಬಗಳು, ರಸ್ತೆಯ ಅಕ್ಕಪಕ್ಕ ಇರುವ ೩ ಹಿರಿಯ ಪ್ರಾಥಮಿಕ, ೨ ಕಿರಿಯ ಪ್ರಾಥಮಿಕ ಶಾಲೆಗಳ, ೪ ಅಂಗನವಾಡಿಗಳ ಸುಮಾರು ೩೦೦ ಮಕ್ಕಳು ಈ ರಸ್ತೆಯನ್ನು ಪ್ರತಿದಿನ ಬಳಸಬೇಕಾಗಿದೆ. ಇವುಗಳ ಜತೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಯಸ್ಕೋರ್ಡ್ ಟ್ರಸ್ಟ್ ರಿ. ಹಾಗೂ ಸುರಭಿ ರಿ. ಬೈಂದೂರು ಆಶ್ರಯದಲ್ಲಿ ತ್ರಿದಿನ ನಾಟಕೋತ್ಸವ ರಂಗ ಸುರಭಿ – ೨೦೧೯ ಮಾರ್ಚ್ ೧೦ರಿಂದ ೧೨ವರೆಗೆ ಬೈಂದೂರಿನ ಶ್ರೀ ಶಾರದಾ ವೇದಿಕೆಯಲ್ಲಿ ಪ್ರತಿದಿನ ಸಂಜೆ ಗಂಟೆ ೬-೩೦ಕ್ಕೆ ಜರುಗಲಿದೆ. ಮಾರ್ಚ್ 10ರ ಭಾನುವಾರ ಡಾ. ಶಿವರಾಮ ಕಾರಂತರ ಕಾದಂಬರಿ ಆಧಾರಿತ ‘ಸುರಭಿ ರಿ. ಬೈಂದೂರು’ ಪ್ರಸ್ತುತಿಯ ಗಣೇಶ್ ಎಂ. ಉಡುಪಿ ನಿರ್ದೇಶನದ ನಾಟಕ ‘ಚೋಮನ ದುಡಿ’ ಪ್ರದರ್ಶನಗೊಳ್ಳಲಿದೆ. ಮಾರ್ಚ್ 11ರ ಸೋಮವಾರ ಎಸ್. ಎನ್. ಸೇತೂರಾಮ್ ಕಥೆ ಸಂಭಾಷಣೆ ಆಧಾರಿತ ಭೂಮಿಕಾ ಹಾರಾಡಿ ಪ್ರಸ್ತುತಿಯ, ಬಿ.ಎಸ್ ರಾಂ ಶೆಟ್ಟಿ ಹಾರಾಡಿ ನಿರ್ದೇಶನದ ’ಕಾತ್ಯಾಯಿನಿ’ ನಾಟಕ ಪ್ರದರ್ಶನಗೊಳ್ಳಲಿದ್ದು, ಮಾಚ್ 12 ಮಂಗಳವಾರ ವಿಜಯ ತೆಂಡುಲ್ಕರ್‌ರವರ ಮರಾಠಿ ಮೂಲಕದ ಕೃತಿ ಆಧಾರಿತ ವೆಂಕಟೇಶ ಪ್ರಸಾದ ಅನುವಾದ ಹಾಗೂ ನಿರ್ದೇಶನದ ’ಬೆಂಗಳೂರು ಥಿಯೇಟರ್ ಕಲೆಕ್ಟಿವ್’ ಪ್ರಸ್ತುತಿಯ ’ಒಂದು ಪ್ರೀತಿಯ ಕಥೆ’ ನಾಟಕ ಪ್ರದರ್ಶನಗೊಳ್ಳಲಿ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿಜಯ ಬ್ಯಾಂಕ್ ವಿಲೀನ ಪ್ರಕ್ರಿಯೆ ವಿರೋಧಿಸಿ ಬೈಂದೂರು ಯುವ ಕಾಂಗ್ರೆಸ್ ನೇತೃತ್ವದಲ್ಲಿ ವಿಜಯ ಬ್ಯಾಂಕ್ ಬೈಂದೂರು ಶಾಖೆಯ ಎದುರು ಪ್ರತಿಭಟನೆ ಜರುಗಿತು. ಪ್ರತಿಭಟನೆಯನ್ನು ಉದ್ದೇಶಿಸಿ ಕೆಪಿಸಿಸಿ ಸದಸ್ಯ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ನಷ್ಟದಲ್ಲಿರುವ ದೇನಾ ಬ್ಯಾಂಕ್ ಹಾಗೂ ಬ್ಯಾಂಕ್ ಆಫ್ ಬರೋಡಾವನ್ನು ಲಾಭದಾಯಕವಾಗಿ ನಡೆಯುತ್ತಿರುವ ವಿಜಯ ಬ್ಯಾಂಕಿನೊಂದಿಗೆ ವಿಲೀನಗೊಳಿಸುತ್ತಿರುವುದು ಅಕ್ಷಮ್ಯ. ವಿಜಯಾ ಬ್ಯಾಂಕ್ ಕರಾವಳಿಯ ಹೆಮ್ಮೆ ಎನ್ನುವುದನ್ನು ಮರೆಯುವಂತಿಲ್ಲ. ಕೋಟಿ ಕೋಟಿ ಸಾಲ ನೀಡಿ ಓಡಿ ಹೋದ ಉದ್ಯಮಿಯಿಂದಾದ ಆರ್ಥಿಕ ನಷ್ಟದ ಹೊರೆಯನ್ನು ತಗ್ಗಿಸಿಕೊಳ್ಳಲು ಇಂತಹ ಕ್ರಮ ಕೈಗೊಂಡಿರುವುದು ಸರಿಯಲ್ಲ ಎಂದರು. ಕೇಂದ್ರ ಸರಕಾರ ಮಾಡುತ್ತಿರುವ ಜನವಿರೋಧಿ ಕೆಲಸಗಳನ್ನು ವಿಪಕ್ಷ ಟೀಕೆ ಮಾಡಿದರೆ ಅದು ದೇಶದ್ರೋಹದ ಕೆಲಸ ಎಂದು ಬಿಂಬಿಸುತ್ತಿರುವುದು ದುರದೃಷ್ಟಕರ ಎಂದು ವಿಷಾದಿಸಿದರು. ಬೈಂದೂರು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರಸ್ ಸಮಿತಿ ಅಧ್ಯಕ್ಷ ಶೇಖರ ಪೂಜಾರಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಮದನಕುಮಾರ್ ಉಪ್ಪುಂದ, ಜಿಲ್ಲಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ನೂತನ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ನೂತನ ಎಸ್ಪಿ ನಿಶಾ ಜೇಮ್ಸ್ ಅವರು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಅವರನ್ನು ಉಡುಪಿ ಅತಿಥಿ ಗೃಹದಲ್ಲಿ ಭೇಟಿಯಾದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ವಲಯದ ಬಿದ್ಕಲ್‌ಕಟ್ಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ ದಂಪತಿ ಚಿತ್ರಾ-ಆನಂದ ಮೊಗವೀರ ಅವರು ತಮ್ಮ ಪುತ್ರಿ ಆದ್ಯಾಳ ಹುಟ್ಟುಹಬ್ಬದ ಪ್ರಯುಕ್ತ ಪ್ರಾಯೋಜಿಸಿ, ರೂಪಿಸಿದ ಮಕ್ಕಳ ಸಾಹಿತ್ಯದೊಲವಿನ ವೇದಿಕೆಯಾದ ಚಾರಣ ಪತ್ರಿಕೆಯ ಮೂರನೇ ಸಂಪುಟದ ಮೊದಲ ಸಂಚಿಕೆ ಅನಾವರಣ, ಶಾಲಾ ಹಳೆವಿದ್ಯಾರ್ಥಿ ಸುದೀಪ ಆಚಾರ್ಯ ಅವರ ಚೊಚ್ಚಲ ಕೃತಿ ಪರಿಚಯ ಕವನಸಂಕಲನ ವಿತರಣೆ, ತಿಂಗಳ ಕಲಿಕಾ ಪ್ರದರ್ಶನ, ಸರ್ವಪೋಷಕರ ಸಭೆ ಹಾಗೂ ಸಂವಿದಾನ ಓದು ಕಾರ್ಯಕ್ರಮವು ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶಾಂತಾರಾಮ ಅಧ್ಯಕ್ಷತೆಯಲ್ಲಿ ಜರುಗಿತು. ನಿವೃತ್ತ ತಹಸೀಲ್ದಾರರಾದ ಶ್ರೀ ಆನಂದ ಶೆಟ್ಟಿಯವರು ಉಪಸ್ಥಿತರಿದ್ದು, ಚಾರಣ ಸಂಚಿಕೆಯನ್ನು ಅನಾವರಣ ಗೊಳಿಸಿ ಚಾರಣ ಸಂಚಿಕೆಯ ಮಹತ್ವ ಮತ್ತು ಅದು ವಿದ್ಯಾರ್ಥಿಗಳ ಕಲಿಕೆಗೆ ಹೇಗೆ ಪೂರಕವಾಗಿದೆ ಎಂಬುದನ್ನು ಸವಿಸ್ತಾರವಾಗಿ ಮಕ್ಕಳ ಮನಮುಟ್ಟುವಂತೆ ತಿಳಿಸಿದರು. ಶಾಲೆಯ ಎಲ್ಲ ಶಿಕ್ಷಕರು ಜೊತೆಗೂಡಿ ಸಂವಿದಾನ ಓದು ಕಾರ್ಯಕ್ರಮವನ್ನು ನಡೆಸಿಕೊಟ್ಟು, ಸಂವಿದಾನದ ಆಶಯ ಮತ್ತು ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ಸುಧಾಕರ, ಪರಿಚಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಹಕಾರಿ ಸಂಸ್ಥೆಗಳು ತನ್ನ ಸದಸ್ಯರಿಗೆ ಕ್ಲಪ್ತ ಸಮಯದಲ್ಲಿ ಸಾಲ ಸೌಲಭ್ಯ, ಠೇವಣಿಗೆ ಉತ್ತಮ ಬಡ್ಡಿದರ ಹಾಗೂ ಇನ್ನಿತರ ಸೇವೆಗಳನ್ನು ಸಸೂತ್ರವಾಗಿ ನೀಡುತ್ತಿರುವುದರಿಂದ ಇಂದು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಗ್ರಾಹಕ ಸ್ನೇಹಿಯಾಗಿ ಮಾರ್ಪಟ್ಟಿವೆ ಎಂದು ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್. ಜನಾರ್ದನ ಮರವಂತೆ ಹೇಳಿದರು. ಅವರು ಸೋಮವಾರ ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಇದರ ನಾವುಂದ ಶಾಖೆ ಒಂದು ವರ್ಷ ಪೂರೈಸಿದ ಅಂಗವಾಗಿ ಶಾಖೆಯ ಆವರಣದಲ್ಲಿ ಆಯೋಜಿಸಲಾದ ಗ್ರಾಹಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವಂತೆ ಸಾಲ ಸೌಲಭ್ಯವನ್ನು ಪಡೆದುಕೊಳ್ಳಲು ಹೆಚ್ಚು ತ್ರಾಸ ಪಡದೇ, ಸರಕಾರಿಗಳ ಸದಸ್ಯರು ಸರಳವಾಗಿ ಸಾಲ ಪಡೆಯುತ್ತಿದ್ದಾರೆ. ಸಹಕಾರಿಗಳ ಅಧ್ಯಕ್ಷ ಹಾಗೂ ನಿರ್ದೇಶಕರುಗಳೂ ಕೂಡ ಸ್ಥಳೀಯರೇ ಆಗುವುದರಿಂದಾಗಿ ಗ್ರಾಹಕರ ಮನೋಧರ್ಮ ಸುಲಭವಾಗಿ ಸಂಸ್ಥೆಗೆ ತಿಳಿಯುವುದಲ್ಲದೇ ಅವರೊಂದಿಗೆ ಉತ್ತಮವಾಗಿ ವ್ಯವಹರಿಸಲು ಸಾಧ್ಯವಾಗುತ್ತಿದೆ ಎಂದವರು ವಿಶ್ಲೇಷಿಸಿದರು. ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್‌ನ ಅಧ್ಯಕ್ಷ ಎಸ್. ರಾಜು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬಿಲ್ಲವ ಸಮಾಜ ಸೇವಾಸಂಘ ರಿ. ಯಡ್ತರೆ ಬೈಂದೂರು ಇದರ ವಾರ್ಷಿಕೋತ್ಸವದ ಅಂಗವಾಗಿ ಭಾನುವಾರ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಎಲ್ಲೆಡೆ ಪಸರಿಸುವ ನಿಟ್ಟಿನಲ್ಲಿ ಗುರು ಸಂದೇಶ ಜಾಥಾ ಹಾಗೂ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ಶೋಭಾಯಾತ್ರೆಯ ಬಳಿಕ ಬೈಂದೂರಿನ ವತ್ತಿನಕಟ್ಟೆ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಬಿಲ್ಲವ ಸಮಾಜ ಶ್ರೀ ಸತ್ಯನಾರಾಯಣ ಮಹಾಪೂಜೆ, ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಿತು. ಶ್ರೀ ಸತ್ಯನಾರಾಯಣ ದೇವರನ್ನು ಪ್ರತಿಷ್ಟಾಪಿಸಿ ಪ್ರಾರ್ಥನೆ ಸಲ್ಲಿಸಲಾಯಿತು. ಅರ್ಚಕ ಕೃಷ್ಣ ಮೂರ್ತಿ ನಾವುಡ ಅವರು ಪೂಜಾಧಿಗಳನ್ನು ನೆರವೇರಿಸಿದರು. ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರಗಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ನೂರಾರು ಮಂದಿ ಸಮಾಜ ಬಾಂಧವರು, ಭಕ್ತಾದಿಗಳು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಬಳಿಕ ಸಂಘದ ಸದಸ್ಯರಿಂದ ಭಜನಾ ಕಾರ್ಯಕ್ರಮ ನೆರವೇರಿತು. ವಾರ್ಷಿಕೋತ್ಸವ ಪ್ರಯುಕ್ತ ನಡೆದ ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿ ದೊಟ್ಟಯ್ಯ ಪೂಜಾರಿಯವರು ವಹಿಸಿದ್ದರು ಮುಖ್ಯ ಅಥಿತಿಗಳಾಗಿ ಮಾಜಿ ಶಾಸಕರಾದ ಕೆ ಗೋಪಾಲ ಪೂಜಾರಿ, ಜಿಲ್ಲಾ ಪಂಚಾಯತ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಲೆಯಲ್ಲಿ ತೊಡಗಿಸಿಕೊಂಡ ಪ್ರತಿಯೊಬ್ಬರಲ್ಲೂ ಸಹೃದಯಿ ಮನೋಭಾವ ಬೆಳೆದಿರುತ್ತದೆ. ಕಲಾವಿದ ಕಲೆಯಲ್ಲಿನ ಸದ್ಗುಣಗಳನ್ನು ಬದುಕಿನಲ್ಲಿಯೂ ಅಳವಡಿಸಿಕೊಂಡು ಬೆಳೆಯುತ್ತಾನೆ ಎಂದು ಜ್ಯೋತಿಷಿ ಮಹೇಂದ್ರ ಭಟ್ ಬೈಂದೂರು ಹೇಳಿದರು. ಅವರು ಬೈಂದೂರು ಶಾರದಾ ವೇದಿಕೆಯಲ್ಲಿ ಶನಿವಾರ ಲಾವಣ್ಯ ರಿ. ಬೈಂದೂರು ಇದರ ೪೨ನೇ ವಾರ್ಷಿಕೋತ್ಸವ ಹಾಗೂ ದಿ. ಕೂರಾಡಿ ಸೀತಾರಾಮ ಶೆಟ್ಟಿ ಸಂಸ್ಮರಣೆಯ ನಾಟಕೋತ್ಸವದಲ್ಲಿ ನಟ ನಿರ್ದೇಶಕ ರಾಜೇಂದ್ರ ಕಾರಂತರ ನಾಟಕ ಕೃತಿಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು. ರಂಗಭೂಮಿಯಿಂದ ಪ್ರತಿಯೊಬ್ಬರೂ ಬದುಕಿನ ಪಾಠಗಳನ್ನು ಕಲಿಯುತ್ತಾರೆ. ಪ್ರೌಡಿಮೆಯನ್ನು ಬೆಳೆಸಿಕೊಳ್ಳುತ್ತಾರೆ. ಅಂತವರು ಸಮಾಜದಲ್ಲಿಯೂ ಉತ್ತಮ ರೀತಿಯಲ್ಲಿ ಬದುಕುತ್ತಾರೆ ಎಂದರು. ಲಾವಣ್ಯದ ಗೌರವಾಧ್ಯಕ್ಷ ಯು. ಶ್ರೀನಿವಾಸ ಪ್ರಭು ಅಧ್ಯಕ್ಷತೆ ವಹಿಸಿದ್ದರು. ಸಿವಿಲ್ ಇಂಜಿನಿಯರ್ ಗುರುರಾಜ್ ರಾವ್ ಶುಭಾಶಂಸನೆಗೈದರು. ರಂಗ ಕಲಾವಿದ ಕೃಷ್ಣಮೂರ್ತಿ ಉಡುಪ ಕಬ್ಸೆ ಅವರನ್ನು ಸನ್ಮಾನಿಸಲಾಯಿತು. ಪ್ರಜಾವಾಣಿ ತುಮಕೂರು ಬ್ಯೂರೋ ಮುಖ್ಯಸ್ಥ ಎನ್. ಸಿದ್ದೇಗೌಡ ತುಮಕೂರು, ಉದ್ಯಮಿ ರಾಮ ಸೋಡಿತಾರ್, ಕುಂದಾಪ್ರ ಡಾಟ್ ಕಾಂ ಸಂಪಾದಕ ಸುನಿಲ್ ಹೆಚ್. ಜಿ. ಬೈಂದೂರು, ಅರಣ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ದೇವಲ್ಕುಂದ ಗ್ರಾಮದ ಎನ್.ಟಿ.ಎಸ್. ಸಾಗರ ಪ್ಯಾಲೇಸ್‌ನಲ್ಲಿ ಭಾನುವಾರ ನಡೆದ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಸಮಿತಿ ಪದಪ್ರದಾನ ಮತ್ತು ಕಾರ್ಯಕರ್ತರ ಸಮಾವೇಶವನ್ನು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದಿನೇಶ್ ಗುಂಡುರಾವ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಐದು ವರ್ಷ ಪೂರೈಸುತ್ತಿರುವ ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷದ ಕೇಂದ್ರ ಸರ್ಕಾರ ಲೋಕಸಭಾ ಚುನಾವಣೆಯ ಪೂರ್ವದಲ್ಲಿ ನೀಡಿದ ಯಾವುದೇ ಆಶ್ವಾಸನೆಗಳನ್ನು ಈಡೇರಿಸಿಲ್ಲ. ಚುನಾವಣೆ ಬಂದೊಡನೆ ಹಿಂದುತ್ವ ಮತ್ತು ರಾಮಮಂದಿರ ನಿರ್ಮಾಣದ ವಿಚಾರವನ್ನು ಎತ್ತಿಕೊಂಡು ಜನರ ಭಾವನೆಗಳನ್ನು ಕೆರಳಿಸಿ ಇನ್ನೊಮ್ಮೆ ಅಧಿಕಾರ ಹಿಡಿಯುವ ಹುನ್ನಾರ ನಡೆಸಿದೆ. ದೇಶದ ಮತದಾರರನ್ನು ಅವರು ಸೃಷ್ಟಿಸಿರುವ ಭ್ರಮಾಲೋಕದಿಂದ ಹೊರತರು ಸವಾಲು ಕಾಂಗ್ರೆಸ್ ಪಕ್ಷದ ಮುಂದಿದೆ ಎಂದು ಹೇಳಿದರು. ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನರಿಗೆ ಹಲವು ಪ್ರಗತಿಪರ ಮತ್ತು ಕ್ರಾಂತಿಕಾರಕ ಕಾರ್ಯಕ್ರಮಗಳನ್ನು ನೀಡಿತ್ತು. ಹಗರಣಮುಕ್ತ ಆಡಳಿತ ನೀಡಿತ್ತು. ಉಡುಪಿ ಜಿಲ್ಲೆಯ ಪಕ್ಷದ ಎಲ್ಲ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಅಭೂತಪೂರ್ವ ಅಭಿವೃದ್ಧಿ…
