Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಆಡಂಬರವಿಲ್ಲದೇ, ಸರಳವಾಗಿ ಸಾಮಾಜದೊಂದಿಗೆ ತೊಡಗಿಸಿಕೊಳ್ಳುತ್ತ ಗ್ರಾಮೀಣ ಭಾಗದ ಧ್ವನಿಯಾಗುವಲ್ಲಿ ಪ್ರೇರಣಾ ವೇದಿಕೆ ಕಾರ್ಯ ಶ್ಲಾಘನೀಯ ಎಂದು ತಾಲೂಕು ಪಂಚಾಯತ್ ಸದಸ್ಯ ಉದಯ ಜಿ ಪೂಜಾರಿಯವರು ಹೇಳಿದರು. ಅವರು ಪ್ರೇರಣಾ ಯುವ ವೇದಿಕೆಯ ಆರನೇ ವಾರ್ಷಿಕೋತ್ಸವದಲ್ಲಿ ಮಾತನಾಡಿದರು. ಉದ್ಘಾಟಕರಾಗಿ ಉಪಸ್ಥಿತರಿದ್ದ ಆಜ್ರಿ ಚೋನಮನೆ ಅಶೋಕ್ ಶೆಟ್ಟಿ, ಧಾರ್ಮಿಕ ವೈಜ್ಞಾನಿಕತೆಯ ಜೊತೆಗೆ ವೇದಿಕೆಯ ಉದ್ಧೇಶಗಳನ್ನು ಸಮಿಕರಿಸಿ ಶುಭ ಹಾರೈಸಿದರು. ರಾಜ್ಯಮಟ್ಟದ ಕ್ರೀಡಾ ಪ್ರತಿನಿಧಿಗಳಾದ ಪ್ರತಿಭಾ ಚೇತನ ಸ್ವಾತಿ, ಸಿಂಚನ, ರಾಜೇಶ ಇವರಿಗೆ ಪ್ರೇರಣಾ ಸಾಧಕ ಮಾಣಿಕ್ಯ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು . ವಾರ್ಷಿಕೋತ್ಸವದ ಅಂಗವಾಗಿ ಪ್ರತಿವರ್ಷದಂತೆ ಅಗಲಿದ ಮಿತ್ರ ಸುರೇಶ ಸವಿನೆನಪಿನಲ್ಲಿ ವಂಡ್ಸೆ ವ್ಯಾಪ್ತಿಯ ಪ್ರಾಥಮಿಕ ಹಾಗೂ ಪ್ರೌಡಶಾಲಾ ಮಕ್ಕಳಿಗೆ ಆಯೋಜಿಸಿದ್ದ ಕೆಸರು ಗದ್ದೆ ಕ್ರೀಡೋತ್ಸವದಲ್ಲಿ ಹತ್ತಕ್ಕೂ ಹೆಚ್ಚು ಶಾಲೆಗಳು ಭಾಗವಹಿಸಿದ್ದವು. ಪ್ರಾಥಮಿಕ ವಿಭಾಗದಲ್ಲಿ ಆಲೂರು ಶಾಲೆ ಸತತ ಮೂರನೇ ವರ್ಷ ಪ್ರಥಮ ಪ್ರಶಸ್ತಿ, ಚಿತ್ತೂರು ಶಾಲೆ ದ್ವಿತೀಯ . ಪ್ರೌಡಶಾಲಾ ವಿಭಾಗದಲ್ಲಿ ಚಿತ್ತೂರು ಹೈಸ್ಕೂಲ್ ಪ್ರಥಮ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಶಾರದಾ ವೇದಿಕೆಯಲ್ಲಿ 19ನೇ ವರ್ಷದ ಸಂಭ್ರಮದಲ್ಲಿರುವ ಸುರಭಿ ರಿ. ಬೈಂದೂರು ಇದರ ’ಸುರಭಿ ಜೈಸಿರಿ’ ಕಾರ್ಯಕ್ರಮದಲ್ಲಿ ಸಂಗೀತ ಕಲಾವಿದೆ ಗೌರಿ ತಗ್ಗರ್ಸೆ ಅವರ ಸಾಧನೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಅಧ್ಯಕ್ಷತೆ ವಹಿಸಿದ್ದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಸನ್ಮಾನಿಸಿದರು. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಬೈಂದೂರು ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್‌ನ ಆಡಳಿತ ಟ್ರಸ್ಟೀ ಬಿ. ರಾಮಕೃಷ್ಣ ಶೇರುಗಾರ್ ಶುಭಶಂಸನೆಗೈದರು. ಜಿಲ್ಲಾ ಪಂಚಾಯತ್ ಸದಸ್ಯ ಸುರೇಶ್ ಬಟವಾಡಿ, ಜೆಸಿಐ ಶಿರೂರು ಅಧ್ಯಕ್ಷ ನಾಗೇಶ್ ಕೆ. ಅತಿಥಿಗಳಾಗಿದ್ದರು. ಸುರಭಿ ಬೈಂದೂರು ನಿರ್ದೇಶಕ ಸುಧಾಕರ ಪಿ. ಬೈಂದೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗಣೇಶ್ ಬೈಂದೂರು ಸನ್ಮಾನಿತರ ಪರಿಚಯ ಮಾಡಿದರು. ಸುರಭಿ ರಿ. ಬೈಂದೂರು ಅಧ್ಯಕ್ಷ ಸತ್ಯನಾ ಕೊಡೇರಿ ಸ್ವಾಗತಿಸಿ, ಕಾರ್ಯದರ್ಶಿ ರಾಮಕೃಷ್ಣ ಉಪ್ಪುಂದ ಧನ್ಯವಾದಗೈದರು. ಕೀರ್ತಿ ಉಪ್ಪುಂದ ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಂದಿನ ದಿನದಲ್ಲಿ ಜನರು ಒತ್ತಡದ ಜೀವನ ಸಾಗಿಸುತ್ತಿದ್ದಾರೆ. ಬಹುತೇಕರು ಬದುಕಿಗಾಗಿ ಹೋರಾಟ ಮಾಡುತ್ತಿದ್ದರೇ, ಕೆಲವರು ಅಧಿಕಾರ ಮತ್ತು ಸಂಪತ್ತಿನ ಬೆನ್ನತ್ತಿದ್ದಾರೆ. ಈ ನಡುವೆ ಕಲೆ, ಸಂಸ್ಕೃತಿ, ಕ್ರೀಡೆಗಳಲ್ಲಿ ತೊಡಗಿಕೊಳ್ಳುವ, ಆಸ್ವಾದಿಸಲು ಸಮಯ ಇಲ್ಲದಾಗಿದೆ ಎಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು. ಅವರು ಬುಧವಾರ ಬೈಂದೂರು ಶಾರದಾ ವೇದಿಕೆಯಲ್ಲಿ ೧೯ನೇ ವರ್ಷದ ಸಂಭ್ರಮದಲ್ಲಿರುವ ಸುರಭಿ ರಿ. ಬೈಂದೂರು ಇದರ ’ಸುರಭಿ ಜೈಸಿರಿ’ ಸಾಂಸ್ಕೃತಿಕ ವರ್ಷಧಾರೆಗೆ ಚಾಲನೆ ನೀಡಿ ಮಾತನಾಡಿದರು. ತಮ್ಮ ಮಕ್ಕಳು ಇಂಜಿನಿಯರ್, ಡಾಕ್ಟರ್ ಆಗಬೇಕು ಮತ್ತು ಮನೆಯಲ್ಲಿ ಬಂಧಿಯಾಗಿರಬೇಕೆಂಬ ಎಂಬ ಆಶಯದೊಂದಿಗೆ ಅವರನ್ನು ಸಲಹುತ್ತಿರುವ ತಂದೆ ತಾಯಂದಿರ ನಡುವೆ ಮಕ್ಕಳ ನೈಜ ಶಿಕ್ಷಣಕ್ಕೆ ಪೂರಕವಾಗಿರುವ ಕಲಾ ಚಟುವಟಿಕೆಯಲ್ಲಿ ಕೆಲವರಾದರೂ ತೊಡಗಿಕೊಳ್ಳುವಂತೆ ಮಾಡಿರುವುದು ನಿಜಕ್ಕೂ ಹೆಮ್ಮೆಯ ವಿಚಾರ ಎಂದು ಸಂತಸ ವ್ಯಕ್ತಪಡಿಸಿದ ಅವರು ಸಮಾಜದ ಸ್ವಾಸ್ಥ್ಯವನ್ನು ಕಾಪಾಡಲು ಕಲಾ ಸಂಘಗಳು ಅಗತ್ಯವೆಂದರು. ಅಧ್ಯಕ್ಷತೆ ವಹಿಸಿದ್ದ ಮಾಜಿ ಶಾಸಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿವಿಧ ಕ್ಷೇತ್ರದ ಸಾಧಕರಿಗೆ ‘ಸುರಭಿ ರಿ. ಬೈಂದೂರು’’ ಸಂಸ್ಥೆಯು ಪ್ರತಿವರ್ಷ ಕೊಡಮಾಡುತ್ತಿರುವ ‘ಬಿಂದಶ್ರೀ’ ಪ್ರಶಸ್ತಿಗೆ ಈ ಭಾರಿ ಪ್ರಸಿದ್ಧ ರಂಗಭೂಮಿ ಮತ್ತು ಚಲನಚಿತ್ರ ಕಲಾವಿದ ರಮೇಶ್ ಭಟ್ ಆಯ್ಕೆಯಾಗಿದ್ದು ಜ.೨೪ರಂದು ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಯು ಹತ್ತು ಸಾವಿರ ರೂ. ನಗದು ಚಿನ್ನದ ಪದಕ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಜನವರಿ 24ರ ಗುರುವಾರ ಸಂಜೆ 6 ಗಂಟೆಗೆ ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದ್ದು, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಬೈಂದೂರು ಶಾಸಕ ಬಿ. ಎಂ ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದು, ಜಿ.ಪಂ ಸದಸ್ಯ ಶಂಕರ ಪೂಜಾರಿ ಶುಭಶಂಸನೆಗೈಯಲಿದ್ದಾರೆ. ಕೊಲ್ಲೂರು ದೇವಳದ ಮಾಜಿ ಧರ್ಮದರ್ಶಿ ಜಯಾನಂದ ಹೋಬಳಿದಾರ್ ಮೊದಲಾದವರು ಉಪಸ್ಥಿತರಿರಲಿದ್ದಾರೆ. ಇದನ್ನೂ ಓದಿ: ► ಸುರಭಿ ಜೈಸಿರಿ ಆಮಂತ್ರಣ ಪತ್ರಿಕೆ ಬಿಡುಗಡೆ – https://kundapraa.com/?p=30847 . ► ಜ.23ರಿಂದ ಸುರಭಿ ಜೈಸಿರಿ – ಬಿಂದುಶ್ರೀ ಪ್ರಶಸ್ತಿ ಪ್ರದಾನ…

Read More

ಕಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಲಾವಣ್ಯ ರಿ. ಬೈಂದೂರು ಇದರ ಮುಂದಿನ ಎರಡು ವರ್ಷಗಳ ಅವಧಿಗೆ ನೂತನ ಕಾರ್ಯಕಾರಿಣಿ ಸಮಿತಿಯನ್ನು ರಚಿಸಲಾಯಿತು. ಸಂಸ್ಥೆಯ ನೂತನ ಅಧ್ಯಕ್ಷರಾಗಿ ಎಚ್. ಉದಯ ಆಚಾರ್, ಗೌರವಧ್ಯಕರಾಗಿ ಯು. ಶ್ರೀನಿವಾಸ ಪ್ರಭು, ಬಾಲಚಂದ್ರ ವಿ. ಆರ್., ಉಪಾಧ್ಯಕ್ಷರಾಗಿ ನರಸಿಂಹ ನಾಯಕ್, ನಾರಾಯಣ ಕೆ., ಪ್ರಧಾನ ಕಾರ್ಯದರ್ಶಿಯಾಗಿ ಮೂರ್ತಿ ಬೈಂದೂರು, ಜೊತೆ ಕಾರ್ಯದರ್ಶಿಗಳಾಗಿ ವಿಶ್ವನಾಥ ಆಚಾರ್ಯ, ಗಣೇಶ ಪರಮಾನಂದ, ರೋಶನ್ ಕುಮಾರ್, ಕೋಶಾಧ್ಯಕ್ಷರಾಗಿ ಸುರೇಶ್ ಹುದಾರ್, ಸಂಘಟನಾ ಕಾರ್ಯದರ್ಶಿಯಾಗಿ ರವೀಂದ್ರ ಶ್ಯಾನುಭಾಗ್, ಸುಮಂತ ಆಚಾರ್, ವ್ಯವಸ್ಥಾಪಕರಾಗಿ ಬಿ. ಗಣೇಶ ಕಾರಂತ್, ರಾಮ ಟೈಲರ್, ಗಣಪತಿ ಎಸ್., ಮುಖ್ಯ ಸಲಹೆಗಾರರಾಗಿ ಗಿರೀಶ್ ಬೈಂದೂರು ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸದಾಶಿವ ಡಿ, ಮೋಹನ್ ಕಾರಂತ್, ಕೃಷ್ಣಮೂರ್ತಿ ಕಾರಂತ್, ಸತ್ಯಪ್ರಸನ್ನ, ಸುನೀಲ್ ಬಿ. ಬಾಲಕೃಷ್ಣ, ವಿಶ್ವನಾಥ ಶೆಟ್ಟಿ, ನಾಗರಾಜ ಕಾರಂತ್, ನಾಗೇಂದ್ರ ಕುಮಾರ್ ಬಂಕೇಶ್ವರ, ರಾಮ ಕೆರೆಕೆಟ್ಟೆ, ನಿತೀನ್ ಶೆಟ್ಟಿ, ಬಿ. ವಿಶ್ವೇಶ್ವರ ಅಡಿಗ, ಮಂಜುನಾಥ್ ಶಿರೂರು, ಸುಬ್ರಹ್ಮಣ್ಯ ಜಿ., ನಾಗರಾಜ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : 50 ವರುಷಗಳನ್ನು ಪೂರೈಸಿರುವ ಗಂಗೊಳ್ಳಿಯ ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯ ಸುವರ್ಣ ಸಂಭ್ರಮಾಚರಣೆಗೆ ಸಂಬಂಧಿಸಿದಂತೆ ಅಲ್ಲಿನ ಹಳೆ ವಿದ್ಯಾರ್ಥಿಗಳ ಪ್ರಾಥಮಿಕ ಸಭೆ ಇತ್ತೀಚೆಗೆ ಗಂಗೊಳ್ಳಿಯ ಚರ್ಚ್ ಹಾಲ್‌ನಲ್ಲಿ ನಡೆಯಿತು. ಸಭೆಯಲ್ಲಿ ಸುವರ್ಣ ಮಹೋತ್ಸವ ಕಾರ‍್ಯಕ್ರಮದ ರೂಪು ರೇಷೆಗಳನ್ನು ಚರ್ಚಿಸಲಾಯಿತು. ಶಾಲೆಯ ಸಂಚಾಲಕರಾದ ರೆ.ಫಾ. ಆಲ್ಬರ್ಟ್ ಕ್ರಾಸ್ತಾ ಅಧ್ಯಕ್ಷತೆ ವಹಿಸಿದ್ದರು. ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಧ್ಯಾಯರಾದ ಝೀಟಾ ರೆಬೆರೊ ಸ್ವಾಗತಿಸಿದರು. ವಿವಿಯನ್ ಕ್ರಾಸ್ತಾ, ಹೆಲನ್ ನಝ್ರತ್, ರಾಮ್ ಸರ್ , ನಾಗಪ್ಪಯ ಪಟೇಲ್ , ಫಿಲೋಮಿನಾ , ಅಬ್ದುಲ್ ಸಲಾಂ ಮೊದಲಾದವರು ಭಾಗವಹಿಸಿದ್ದರು. ಸಹಾಯಕ ಶಿಕ್ಷಕಿ ಫೆಲ್ಸಿ ಡಿ ಸಿಲ್ವಾ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಾಂತ ವಾತಾವರಣದ ಪ್ರಾಕೃತಿಕ ಸೌಂದರ್ಯದ ಸುಂದರ ವಲಯ, ಆರ್ಥಿಕವಾಗಿ ಹಿಂದುಳಿದಿದ್ದರೂ, ಪ್ರೇಕ್ಷಣೀಯ ಪ್ರವಾಸಿತಾಣವಾಗಿ, ಧಾರ್ಮಿಕ ಕ್ಷೇತ್ರವಾಗಿ, ಜನಪದೀಯ ಹಾಗೂ ಸಾಂಸ್ಕೃತಿಕವಾಗಿ ಮುಂದಿದ್ದು ಜಿಲ್ಲೆಯ ಶಿರೂಭಾಗದ ಬೈಂದೂರು ತಾಲೂಕು ಗುರುತಿಸಿಕೊಂಡಿದೆ ಎಂದು ವಿಧಾನಪರಿಷತ್ ವಿರೋಧಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಬೈಂದೂರು ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೆಷನ್ ನೇತೃತ್ವದಲ್ಲಿ ಜಿಲ್ಲೆ ಹಾಗೂ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೆಷನ್ ಸಹಕಾರದಲ್ಲಿ ಬೆಸುಗೆ ಫೌಂಡೇಶನ್ ಬಂದೂರು, ಗ್ರಾಪಂ ಪಡುವರಿ, ಜಿಲ್ಲಾಡಳಿತ ಉಡುಪಿ ಮತ್ತು ಪ್ರವಾಸೋದ್ಯಮ ಇಲಾಖೆ ಇವರ ಸಹಯೋಗದಲ್ಲಿ ಸೋಮೇಶ್ವರ ಕಡಲತಡಿಯಲ್ಲಿ ನಡೆದ ೬ನೇ ಕರ್ನಾಟಕ ರಾಜ್ಯ ಜ್ಯೂನಿಯರ್ ಬಾಲಕ, ಬಾಲಕಿಯರ ಕಬಡ್ಡಿ ಚಾಂಪಿಯನ್‌ಶಿಪ್-೨೦೧೯ರ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮೀಣ ಭಾಗದ ಕ್ರೀಡೆಯಾದ ಕಬಡ್ಡಿ ಇಂದು ಜಾಗತಿಕ ಮುನ್ನಣೆಗಳಿಸಿದೆ. ಯಶಸ್ಸು ಸುಲಭದಲ್ಲಿ ದಕ್ಕುವುದಿಲ್ಲ. ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಬೇಕೆಂದರೆ ಪೂರ್ವಭಾವಿ ತಯಾರಿ, ಕಠಿಣ ಪರಿಶ್ರಮ, ಧನತ್ಮಕ ಗುರಿ ಹಾಗೂ ಸಮರ್ಪಣಾ ಮನೋಭಾವ ಮತ್ತು ಸೋಲು-ಗೆಲುವನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಜನಸೇವಾ ಟ್ರಸ್ಟ್ (ರಿ) ಪ್ರಸ್ತುತಿಯಲ್ಲಿ ಮಾರ್ಚ್ 23ರ ಶನಿವಾರ ಮೂಡುಗಿಳಿಯಾರು ಶಾಲಾ ಮೈದಾನದಲ್ಲಿ ನಡೆಯುವ ಅಭಿಮತ ಸಂಭ್ರಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಿರಿಯಡ್ಕ ಸಮೀಪದಲ್ಲಿರುವ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಗುರುವ ಕೊರಗರ ಮನೆಯಲ್ಲಿ ಜರುಗಿತು. ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಕಾರ್ಯಕ್ರಮಕ್ಕೆ ಗುರುವ ಕೊರಗರು ಶುಭ ಹಾರೈಸಿದರು. ಹೈಕಾಡಿ ವಿಜಯ್ ಕುಮಾರ್ ಶೆಟ್ಟಿಯವರ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಟಿ. ಮಂಜುನಾಥ ಗಿಳಿಯಾರು, ಬೈಂದೂರು ವಲಯ ಸಿ.ಆರ್.ಪಿ. ಸಂತೋಷ್ ಕುಮಾರ್ ಶೆಟ್ಟಿ ಕೊತ್ತಾಡಿ, ಜನಸೇವಾ ಟ್ರಸ್ಟ್ ಕಾರ್ಯದರ್ಶಿ ಅಶೋಕ್ ಶೆಟ್ಟಿ ಬನ್ನಾಡಿ, ಶರತ್ ಶೆಟ್ಟಿ ಕೊತ್ತಾಡಿ, ಕಿರಣ್ ಆಚಾರ್ಯ, ಸಿದ್ದಾಪುರ ಚಕ್ರವರ್ತಿ ಬಳಗದ ಉದಯ ಮಡಿವಾಳ, ಗಣೇಶ್ ಶೆಟ್ಟಿ ತೊಂಬಟ್ಟು ಮತ್ತು ಪ್ರಶಾಂತ್ ಶೆಟ್ಟಿ ಕೊತ್ತಾಡಿ, ಮಂಜುನಾಥ ಶೆಟ್ಟಿ ಕೊತ್ತಾಡಿ, ಪ್ರವೀಣ್ ಯಕ್ಷಿಮಠ, ಸಫಲ್ ಶೆಟ್ಟಿ ಐರೋಡಿ ಉಪಸ್ಥಿತರಿದ್ದರು. ಶಶಿಕಾಂತ್ ಶೆಟ್ಟಿ ಎಣ್ಣೆಹೊಳೆ ಸ್ವಾಗತಿಸಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀ ಮಾರಿಕಾಂಬಾ ಯೂತ್ ಕ್ಲಬ್ ರಿ. ಕಳವಾಡಿ, ಅಖಿಲ ಭಾರತಿಯ ವಿದ್ಯಾರ್ಥಿ ಪರಿಷತ್ ಬೈಂದೂರು ಜಂಟಿ ಆಶ್ರಯದಲ್ಲಿ ದಿ| ಪುನೀತ್ ಪೂಜಾರಿ ಸವಿ ನೆನಪಿಗಾಗಿ ಶ್ರೀ ಈಶ್ವರ ಮಾರಿಕಾಂಬಾ ದೇವಸ್ಥಾನ ಕಳವಾಡಿ ಬೈಂದೂರು ಇಲ್ಲಿ ವರ್ಷಂಪ್ರತಿ ನಡೆಯುವ ಹಾಲು ಹಬ್ಬದ ಅಂಗವಾಗಿವಾಗಿ ವಿಕಲಚೇತನರಿಗೆ ಉಚಿತ ಸೈಕಲ್ ವಿತರಿಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಸಾಂಸ್ಕೃತಿಕ ರಂಗದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಸುರಭಿ ಸಂಸ್ಥೆ, ನೃತ್ಯ, ಕಲೆ, ಸಂಗೀತ, ರಂಗಭೂಮಿ ಮೊದಲಾದ ಕ್ಷೇತ್ರಗಳಲ್ಲಿ ಅವಿರತವಾಗಿ ತೊಡಗಿಕೊಂಡು ಜನರ ಅಭಿರುಚಿಯನ್ನು ಉನ್ನತೀಕರಿಸಿದೆ ಎಂದು ಪತ್ರಕರ್ತ ಎಸ್. ಜನಾರ್ದನ ಮರವಂತೆ ನುಡಿದರು.   ಅವರು 19ನೇ ವರ್ಷದ ಸಂಭ್ರಮದಲ್ಲಿರುವ ಬೈಂದೂರಿನ ಸಾಂಸ್ಕೃತಿಕ ಸೇವಾ ಪ್ರತಿಷ್ಠಾನ ‘ಸುರಭಿ ರಿ. ಬೈಂದೂರು’ ಸಂಸ್ಥೆಯ ಆಶ್ರಯದಲ್ಲಿ ದಿ. 23, 24 ಹಾಗೂ 25 ಜನವರಿ 2018ರಂದು ಮೂರು ದಿನಗಳ ಕಾಲ ಇಲ್ಲಿನ ಶಾರದಾ ವೇದಿಕೆಯಲ್ಲಿ ಜರುಗಲಿರುವ ಸುರಭಿ ಜೈಸಿರಿ ಹಾಗೂ ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು. ಈ ಸಂದರ್ಭ ಸುರಭಿ ರಿ. ಬೈಂದೂರು ಅಧ್ಯಕ್ಷ ಸತ್ಯನಾ ಕೊಡೇರಿ, ಕಾರ್ಯದರ್ಶಿ ರಾಮಕೃಷ್ಣ ಉಪ್ಪುಂದ, ಉಪಾಧ್ಯಕ್ಷ ಆನಂದ ಮದ್ದೋಡಿ, ಸಂಘಟನಾ ಕಾರ್ಯದರ್ಶಿ ಲಕ್ಷ್ಮಣ ವೈ. ಕೊರಗ, ನಿರ್ದೇಶಕ ಸುಧಾಕರ ಪಿ. ಬೈಂದೂರು ಇದ್ದರು.

Read More