ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ದೇವರಿಗೆ ಭಕ್ತಿ ಪ್ರಧಾನವೇ ಹೊರತು ನಾವು ಅರ್ಪಿಸುವ ವಸ್ತುಗಳಲ್ಲ. ಸಂಸ್ಕಾರ, ಸಂಸ್ಕೃತಿಯನ್ನು ಜೀವನದಲ್ಲಿ ರೂಢಿಸಿಕೊಳ್ಳಬೇಕು. ಮನುಷ್ಯನಿಗೆ ಜಾತಿ ಮುಖ್ಯವಲ್ಲ ನೀತಿ ಮುಖ್ಯ. ದೇವರ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಭಜನೆಯಿಂದ ಭಗವಂತ ಒಲಿದು ಸುಖ ಶಾಂತಿ ನೆಮ್ಮದಿ ಲಭಿಸಿ ಸಮಾಜದ ಏಳಿಗೆ ಸಾಧ್ಯವಾಗುತ್ತದೆ ಎಂದು ಬಾರ್ಕೂರು ಸಂಸ್ಥಾನ ಮಠಾಧೀಶರಾದ ವಿದ್ಯಾವಾಚಸ್ಪತಿ ಡಾ. ಶ್ರೀ ಸಂತೋಷ ಗುರೂಜಿ ಹೇಳಿದರು. ಅವರು ನಾಯಕವಾಡಿಯ ಶ್ರೀ ಸಂಗಮೇಶ್ವರ ದೇವಸ್ಥಾನದ ಶಿವರಾತ್ರಿ ಮಹೋತ್ಸವ, ಶ್ರೀ ಚೆನ್ನಬಸವೇಶ್ವರ ಭಜನಾ ಮಂಡಳಿಯ ೬೩ನೇ ವಾರ್ಷಿಕೋತ್ಸವ ಹಾಗೂ ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲದ ೪೩ನೇ ವಾರ್ಷಿಕೋತ್ಸವ ಸಮಾರಂಭದ ಅಂಗವಾಗಿ ಆಯೋಜಿಸಲಾಗಿದ್ದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿ ಮಾತನಾಡಿದರು. ದೇವಸ್ಥಾನದ ಅಧ್ಯಕ್ಷ ಸದಾಶಿವ ಜಿ.ಕೆ. ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್ ಸದಸ್ಯ ರಾಜು ದೇವಾಡಿಗ ಶುಭ ಹಾರೈಸಿದರು. ಕುಂದಾಪುರ ಯುವಜನ ಸೇವಾ ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಾಗೂ ಅಂಗನವಾಡಿ ಪುಟಾಣಿಗಳಿಗೆ ಬಹುಮಾನ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಮರವಂತೆ: ಮೀನುಗಾರಿಕಾ ಹೊರಬಂದರು ಕಾಮಗಾರಿ ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ. ಇದರಿಂದ ಮೀನುಗಾರರು ಬೇರೆಬೇರೆ ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಈ ಸಂಬಂಧ ಗುತ್ತಿಗೆದಾರರಿಗೆ ನೋಟೀಸು ನೀಡಿ ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಬಂದರು ನಿರ್ಮಾಣ ಪ್ರದೇಶಕ್ಕೆ ರವಿವಾರ ಭೇಟಿನೀಡಿದ ಅವರು ಸ್ಥಳೀಯ ಮೀನುಗಾರರನ್ನು ಉದ್ದೇಶಿಸಿ ಮಾತನಾಡಿದರು. ನಿಧಾನಗತಿಯ ಕಾಮಗಾರಿಯಿಂದ ಮೀನುಗಾರರಿಗೆ ಬಂದರಿನ ಲಾಭ ದೊರೆಯದಂತಾಗಿದೆ. ಅದರ ಪಶ್ಚಿಮದ ತಡೆಗೋಡೆ ಪೂರ್ತಿಯಾಗದಿರುವ ಕಾರಣ ಇಲ್ಲಿ ವರ್ಷವಿಡೀ ಕಡಲ್ಕೊರೆತ ಸಂಭವಿಸಿ ಮರಮಟ್ಟ, ಜಮೀನು ಸಮುದ್ರ ಪಾಲಾಗಿದೆ. ಮಳೆಗಾಲದಲ್ಲಿ ಪರಿಸ್ಥಿತಿ ಗಂಭೀರ ಸ್ವರೂಪ ತಾಳಿ ರಸ್ತೆ, ಮನೆಗಳಿಗೆ ಅಪಾಯ ಸಂಭವಿಸಲಿದೆ. ಗುತ್ತಿಗೆದಾರರ ವಾಹನ ಓಡಾಟದಿಂದ ಕರಾವಳಿ ಮಾರ್ಗ ಸಂಪೂರ್ಣ ಕೆಟ್ಟುಹೋಗಿದೆ. ಇವುಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂದು ಮೀನುಗಾರರು ಆಗ್ರಹಿಸಿದರು. ಉಪಸ್ಥಿತರಿದ್ದ ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಕೆ. ಆರ್. ದಯಾಂದ ಅವರೊಂದಿಗೆ ಚರ್ಚಿಸಿ ಉತ್ತರಿಸಿದ ಶಾಸಕರು ಕಾಮಗಾರಿಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಪುರಾಣ ಪ್ರಸಿದ್ಧ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ಮನ್ಮಹಾರಥೋತ್ಸವವು ಭಾನುವಾರ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರು ಹಾಗೂ ಅವರ ಪಟ್ಟ ಶಿಷ್ಯ ಶ್ರೀಮದ್ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ ವಿಜೃಂಭಣೆಯಿಂದ ಜರಗಿತು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಎಸ್.ವೆಂಕಟರಮಣ ಆಚಾರ್ಯ, ತಾಂತ್ರಿಕ ವೇದಮೂರ್ತಿ ಜಿ.ವಸಂತ ಭಟ್ ನೇತೃತ್ವದಲ್ಲಿ ರಥೋತ್ಸವದ ಧಾರ್ಮಿಕ ವಿಧಿವಿಧಾನಗಳು ಜರಗಿದವು. ದೇವಳದ ಆಡಳಿತ ಮೊಕ್ತೇಸರ ಎನ್.ಸದಾಶಿವ ನಾಯಕ್, ಕಾರ್ಯದರ್ಶಿ ಜಿ.ವೆಂಕಟೇಶ ನಾಯಕ್, ಖಜಾಂಚಿ ವೇದಮೂರ್ತಿ ಜಿ.ವೇದವ್ಯಾಸ ಆಚಾರ್ಯ, ಆಚಾರ್ಯ ಕುಟುಂಬಸ್ಥರು, ಪುರೋಹಿತರು, ಅರ್ಚಕರು, ದೇವಳದ ಆಡಳಿತ ಮಂಡಳಿ ಸದಸ್ಯರು, ಊರಿನ ಹತ್ತು ಸಮಸ್ತರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಾತ್ಯಾತೀತ ಜನತದಳದ ಉಡುಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ರಮೇಶ್ ಕುಂದಾಪುರ ಅವರನ್ನು ನೇಮಕ ಮಾಡಲಾಗಿದೆ. ಪಕ್ಷದ ರಾಜ್ಯಾಧ್ಯಕ್ಷರ ಶೀಪಾರಸ್ಸಿನ ಮೇರೆಗೆ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಅವರು ರಮೇಶ್ ಅವರನ್ನು ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು/ಕುಂದಾಪುರ: ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗದಿಂದ ಮಂಗಳೂರು ಭಟ್ಕಳ ಮಾರ್ಗದಲ್ಲಿ ಹೊಸತಾಗಿ ಆರಂಭಿಸಿದ ವೋಲ್ವೋ ಬಸ್ ಸೇವೆಗೆ ಕೆಎಸ್ಆರ್ಟಿಸಿ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಭಟ್ಕಳ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಿದ ಬಳಿಕ ಶಿರೂರು, ಬೈಂದೂರು ಹಾಗೂ ಕುಂದಾಪುರ ಮೊದಲಾದೆಡೆ ನಾಗರಿಕರು ನೂತನ ಬಸ್ಸನ್ನು ಸ್ವಾಗತಿಸಿದರು. ಶಿರೂರಿನಲ್ಲಿ ಜೆಸಿಐ ಶಿರೂರು ನೇತೃತ್ವದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸನ್ನು ಸ್ವಾಗತಿಸಿಕೊಂಡು ಕೆಎಸ್‌ಆರ್‌ಟಿಸಿ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಅವರನ್ನು ಗೌರವಿಸಲಾಯಿತು. ಬೈಂದೂರಿನ ಸಾರ್ವಜನಿಕರು ಬಸ್ಸುನ್ನು ಬರಮಾಡಿಕೊಂಡ ಬಳಿಕ ಕೆಎಸ್‌ಆರ್‌ಟಿಸಿ ಅಧ್ಯಕ್ಷರನ್ನು ಗೌರವಿಸಿದರು. ಕುಂದಾಪುರದಲ್ಲಿಯೂ ನೂತನ ಬಸ್ಸನ್ನು ಸಾರ್ವಜನಿಕರು ಸ್ವಾಗತಿಸಿಕೊಂಡರು. ► ಮಂಗಳೂರು-ಭಟ್ಕಳ ಕೆಎಸ್‌ಆರ್‌ಟಿಸಿ ವೋಲ್ವೊ ಬಸ್ಸಿಗೆ ಚಾಲನೆ – http://kundapraa.com/?p=21783 ► ಮಾ.5ರಿಂದ ಮಂಗಳೂರು-ಭಟ್ಕಳ ನೂತನ ವೋಲ್ವೋ ಬಸ್ ಸೇವೆ – http://kundapraa.com/?p=21752 =
ಕುಂದಾಪ್ರ ಡಾಟ್ ಕಾಂ ಸುದ್ದಿ. ಭಟ್ಕಳ: ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ ಮಂಗಳೂರು ವಿಭಾಗದಿಂದ ಮಂಗಳೂರು ಭಟ್ಕಳ ಮಾರ್ಗದಲ್ಲಿ ಹೊಸತಾಗಿ ಆರಂಭಿಸಿದ ವೋಲ್ವೋ ಬಸ್ ಸೇವೆಗೆ ಕೆಎಸ್ಆರ್ಟಿಸಿ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಭಟ್ಕಳ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಿದರು. ಬಳಿಕ ಅವರು ಮಾತನಾಡಿ ಈ ಭಾಗದ ಜನರ ಹಲವು ವರ್ಷಗಳ ಬೇಡಿಕೆ ಕೊನೆಗೂ ಸಾಕಾರಗೊಂಡಿದೆ. ಜನರ ಬೇಡಿಕೆಗನುಗುಣವಾಗಿ 9 ವೋಲ್ವೋ ಬಸ್ ನೀಡಿದ್ದು, ಮೊದಲಿಗೆ 6 ಬಸ್ಸುಗಳು ಸಂಚರಿಸಲಿದೆ. ಖಾಸಗಿಯವರ ಲಾಭಿಗೆ ಮಣಿಯದೇ ನೂತನ ವೋಲ್ವೋ ಬಸ್ಸುಗಳನ್ನು ಆರಂಭಿಸಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡಾಗ ಮಾತ್ರ ಇದರ ಯಶಸ್ಸು ಸಾಧ್ಯವಿದೆ ಎಂದರು. ರಾಜ್ಯದಲ್ಲಿ 3,600 ಬಸ್ಸುಗಳಿಗೆ ಟೆಂಡರ್ ಕರೆಯಲಾಗಿದ್ದು ಹೊಸ ಮಾರ್ಗಗಳಿಗೂ ಬಸ್ ಸಂಚರಿಸುವಂತೆ ಮಾಡಿ ಸಂಪರ್ಕ ವ್ಯವಸ್ಥೆಯನ್ನು ಸದೃಢಗೊಳಿಸಲು ಬದ್ಧರಾಗಿದ್ದೇವೆ ಎಂದರು. ಭಟ್ಕಳ ಶಾಸಕ ಮಾಂಕಾಳ ವೈದ್ಯ, ಕುಂದಾಪುರ ತಾ.ಪಂ ಸದಸ್ಯ ರಾಜು ದೇವಾಡಿಗ, ಉಡುಪಿ ಜಿಲ್ಲಾ ಕೆಡಿಪಿ ಸದಸ್ಯ ರಾಜು ಪೂಜಾರಿ, ಕೆಎಸ್ಆರ್ಟಿಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿಕಲತೆಯಿಂದ ಕುಗ್ಗಿದರೆ ಸಮಾಜ ನಮ್ಮನ್ನು ಮತ್ತಷ್ಟು ಕುಗ್ಗಿಸುತ್ತದೆ. ನ್ಯೂನ್ಯತೆ ಮೆಟ್ಟಿನ ನಿಂತು ಸಾಧನೆ ಮಾಡುವ ಛಲವಿಲದ್ದರೆ ಸಾಧನೆಯ ಉತ್ತಂಗಕ್ಕೆ ಏರುವ ಮೂಲಕ ಸಮಾಜ ಕೂಡಾ ನಮ್ಮ ಗುರುತಿಸುತ್ತದೆ. ನ್ಯೂನ್ಯತೆಯನ್ನು ಮೆಟ್ಟಿನಿಲ್ಲುವ ಛಲವಿದ್ದರೆ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ನೇರಂಬಳ್ಳಿ ರಾಘವೇಂದ್ರ ರಾವ್ ಹೇಳಿದರು. ಅವರು ಕುಂದಾಪುರ ಭಂಡಾರ್‌ಕಾರ್ರ‍್ಸ್ ಆರ್ಟ್ಸ್ ಮತ್ತು ಸಾಯನ್ಸ್ ಕಾಲೇಜ್ ಹಳೆ ವಿದ್ಯಾರ್ಥಿ ಸಂಘ ವಾರ್ಷಿಕೋತ್ಸವ ನಿಮಿತ್ತ ಕಾಲೇಜ್ ಮಾಧವ ಮಂಟಪದಲ್ಲಿ ಆಯೋಜಿಸಿದ ಅಂತರ್ ಕಾಲೇಜ್ ಪ್ರತಿಭಾ ಸ್ಪರ್ಧೆ ಉದ್ಘಾಟಿಸಿ ಮಾತನಾಡುತ್ತಿದ್ದರು. ಸರಕಾರದ ಸಹಾಯ ಮಾಡುವುದೆಂದು ಕುಳಿತುಕೊಳ್ಳದೇ ನಮ್ಮಿಂದ ಸಮಾಜಕ್ಕೆ ಸಾಧ್ಯವಾದಷ್ಟು ಸಹಕಾರ ನೀಡಬೇಕು. ಹಳೆ ವಿದ್ಯಾರ್ಥಿಗಳು ಕಾಲೇಜ್ ನೆರವಿಗೆ ಬರುವ ಮೂಲಕ ಅಭಿವೃದ್ಧಿಯಲ್ಲಿ ಕೈ ಜೋಡಿಸಬೇಕು ಎಂದು ಕರೆ ನೀಡಿದ ಅವರು ಕಾಲೇಜ್ ಉಚಿತ ಭೋಜನ ನಿಧಿಗೆ ಅರ್ಥಿಕ ನೆರವು ನೀಡುವುದಾಗಿ ಘೋಷಿಸಿದರು. ಭಂಡಾರ್‌ಕಾರ‍್ಸ್ ಆಡಳಿತ ಮಂಡಳಿ ಅಧ್ಯಕ್ಷ ಡಾ. ಎಚ್. ಶಾಂತಾರಾಮ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೊಲೆಗೆ ಒಂದು ಕೋಟಿ ರೂಪಾಯಿ ಸುಫಾರಿ ನೀಡುವುದಾಗಿ ಪರೋಕ್ಷವಾಗಿ ಹೇಳಿಕೆಕೊಟ್ಟ ಆರ್ ಎಸ್ ಎಸ್ ಮುಖಂಡ ಚಂದ್ರಾವತ್ ಬಂಧನವಾಗದಿರುವುದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿಯಾಗಿದೆ. ಇಂತಹವರನ್ನು ಪ್ರಧಾನಿಗಳು ರಕ್ಷಿಸುತ್ತಿದ್ದಾರೆ. ದೇಶದ ಐಕ್ಯತೆ, ಸಮಗ್ರತೆಗೆ ಕೆಡುಕುಂಟು ಮಾಡುತ್ತಿರುವವರೆ ದೇಶದ ಚುಕ್ಕಾಣಿಯಂತೆ ಹಿಡಿದರೆ ದೇಶವಾಸಿಗಳ ಪರಿಸ್ಥಿತಿ ಏನಾಗಬಹುದು ಎಂಬುವುದು ಸೂಚನೆ ದಿನದಿಂದ ದಿನಕ್ಕೆ ಗೋಚರಿಸುತ್ತಿದೆ. ಇಂತಹ ಕೊಲೆಗಡುಕ ಸಂಸ್ಕೃತಿ ಯನ್ನು ಎಲ್ಲರೂ ವಿರೋಧಿಸಬೇಕಾಗಿದೆ ಎಂದು ಕುಂದಾಪುರ ಸಿಪಿಎಂ ಮುಖಂಡ ಕಾಂ.ಹೆಚ್ ನರಸಿಂಹ ಹೇಳಿದರು. ಅವರು ಕುಂದಾಪುರ ಶಾಸ್ತ್ರೀವೃತ್ತದಲ್ಲಿ ಭಾರತ ಕಮ್ಯೂನಿಷ್ಟ್ ಪಕ್ಷ ಕುಂದಾಪುರದ ನೇತೃತ್ವದಲ್ಲಿ ಪಿಣರಾಯಿ ವಿಜಯನ್ ಕೊಲೆಗೆ ಸುಫಾರಿ ನೀಡುವುದಾಗಿ ಹೇಳಿದ ಆರ್ ಎಸ್ ಎಸ್ ಮುಖಂಡನ ಹೇಳಿಕೆಯನ್ನು ಖಂಡಿಸಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡುತ್ತಿದ್ದರು. ಸಿಪಿಎಂ ಕುಂದಾಪುರ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮಾತನಾಡಿ ಕೇರಳವು ದೇಶದಲ್ಲೇ ಕೋಮು ಸೌಹಾರ್ದತೆಗೆ ಹೆಸರಾದ ರಾಜ್ಯವಾಗಿದೆ. ಈ ಸೌಹಾರ್ದತೆಗೆ ಸಿಪಿಎಂ ಪಕ್ಷದ ತ್ಯಾಗದಿಂದಾಗಿ ನೆಲೆಗೊಂಡಿದೆ. ಇಂತಹ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿವಮೊಗ್ಗ ಬೈಂದೂರು ಸಂಸದ ಬಿ. ಎಸ್. ಯಡಿಯೂರಪ್ಪರ ಅವರನ್ನು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಬಿ.ಎಂ ಸುಕುಮಾರ ಶೆಟ್ಟಿ ನೇತೃತ್ವದ ತಂಡ ಭೇಟಿ ಮಾಡಿ ಮರವಂತೆ ಕಡಲ್ಕೊರೆತ, ಬೈಂದೂರು ಮೇಲ್ಸೆತುವೆ ಹಾಗೂ ಕೆರಾಡಿ ದತ್ತುಗ್ರಾಮಕ್ಕೆ ಅನುದಾನ ಬಿಡುಗಡೆ ಮುಂತಾದ ವಿಷಯಗಳ ಬಗೆಗೆ ಮನವಿ ಸಲ್ಲಿಸಿತು. ಮರವಂತೆಯಲ್ಲಿ ಕಡಲ್ಕೊರೆತದಿಂದ ರಸ್ತೆ ಹಾಗೂ ಮನೆಗಳನ್ನು ಕಳೆದುಕೊಳ್ಳುವ ಹಂತಕ್ಕೆ ಬಂದಿದ್ದು ಕಡಲ್ಕೊರೆತಕ್ಕೆ ಸೂಕ್ತ ವ್ಯವಸ್ಥೆ ಮಾರ್ಗೋಪಾಯಗಳನ್ನು ಕಂಡುಕೊಳ್ಳುವುದು. ಬೈಂದೂರು ವೃತ್ತದಲ್ಲಿ ಅಂಡರ್ ಪಾಸ್ ಮಾಡಲು ರಾಷ್ಟೀಯ ಹೆದ್ದಾರಿಯವರು ಯೋಚಿಸಿದ್ದು ಸದರಿ ಯೋಜನೆಯನ್ನು ಕೈಬಿಟ್ಟು ಮೇಲ್ಸೆತುವೆ ಒಪ್ಪಿಗೆ ನೀಡುವಂತೆ ಶೀಪಾರಸ್ಸು ಮಾಡುವುದು ಹಾಗೂ ಕೆರಾಡಿ ದತ್ತು ಗ್ರಾಮಕ್ಕೆ ವಾರಾಹಿ ಯೋಜನೆಯಡಿ ಅನುದಾನ ಬಿಡುಗಡೆ ಮಾಡಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಒತ್ತಾಯಿಸಲಾಯಿತು. ಮನವಿಗೆ ಸ್ಪಂದಿಸಿದ ಸಂಸದ ಬಿ.ಎಸ್. ಯಡಿಯೂರಪ್ಪ ಕ್ಷೇತ್ರದ ಅಭಿವೃದ್ಧಿಗೆ ಬದ್ಧನಾಗಿದ್ದು ಕಡಲ್ಕೋರೆತ, ಅಂಡರ್ ಪಾಸ್ ಸಮಸ್ಯೆಗಳ ಬಗೆಗೆ ಇಲಾಖಾಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕ್ರೀಯಾಶೀಲ ಚಿಂತನೆಯೊಂದಿಗೆ ತನ್ನದೇ ವೈಶಿಷ್ಟ್ಯವನ್ನು ಹೊಂದಿರುವ ಮಾತಾ ಮೊಂಟೆಸ್ಟೋರಿಯ ಈ ವರ್ಷದ ಕ್ರೀಡೋತ್ಸವ ಕೋಡಿಯ ದ್ವೀಪ ಸ್ತಂಭದ ಬಳಿ ಕಡಲ ತೀರದಲ್ಲಿ ಜರುಗಿತು. ಕ್ರೀಡೋತ್ಸವವನ್ನು ಉದ್ದೇಶಿಸಿ ಮಾತನಾಡಿದ ಸಂಸ್ಥೆಯ ವ್ಯವಸ್ಥಾಪಕರಾದ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಅವರು ಕಳೆದ ೭ ವರ್ಷಗಳಿಂದ ಸಂಸ್ಥೆಯು ಶಿಕ್ಷಣ ಕ್ಷೇತ್ರದಲ್ಲಿ ತೋರಿದ ಬದ್ಧತೆ ಹಾಗೂ ಅದರ ಉಪಯೋಗವನ್ನು ಪಡೆದ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಮಕ್ಕಳನ್ನು ಕೇವಲ ಪುಸ್ತಕದೊಂದಿಗೆ ಏಕತಾನತೆಗೆ ಒಳಪಡಿಸದೆ ಅವರ ದೈಹಿಕ ಮಾನಸಿಕ ಧೃಢತೆಗೆ ಕ್ರೀಡಾ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡುತ್ತಿರುವ ಪೋಷಕರು ಅಭಿನಂದನಾರ್ಹರು ಎಂದು ನುಡಿದರು. ವಿವಿಧ ವಯೋಮಿತಿಯಲ್ಲಿ ನಡೆದ ಕ್ರೀಡಾ ಸ್ಪರ್ಧೆಯಲ್ಲಿ ಉತ್ಸಾಹದಿಂದ ಭಾಗವಹಿಸಿದ ಪುಟಾಣಿಗಳು ಆನಂದಕ್ಕೆ ಪಾರವೇ ಇರಲಿಲ್ಲ. ಸಂಸ್ಥೆಯಲ್ಲಿ ವಿದ್ಯಾರ್ಜನೆಗೈದ ಹಿರಿಯ ವಿದ್ಯಾರ್ಥಿಗಳಿಗೂ ವಿಶೇಷವಾಗಿ ಕ್ರೀಡಾ ಕೂಟವನ್ನು ಏರ್ಪಡಿಸಲಾಗಿತ್ತು. ಪೋಷಕರಿಗಾಗಿ ಹಮ್ಮಿಕೊಂಡ ಕ್ರೀಡಾ ಚಟುವಟಿಕೆಗಳು ವಿಶೇಷವಾಗಿ ತಂದೆ ತಾಯಿಯರ ಮೂರು ಕಾಲಿನ ಓಟ ಮುದ್ದು ಮಕ್ಕಳ ಮನಸ್ಸಿಗೆ ಇನ್ನಷ್ಟು ಆಹ್ಲಾದ…
