Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿದ್ಯಾರ್ಥಿಗಳು ತಾವು ಕಲಿಯುತ್ತಿರುವ ಸಂಸ್ಥೆ, ಗುರುಗಳು ಮತ್ತು ಅಧ್ಯಯನ ಮಾಡುತ್ತಿರುವ ವಿಷಯದ ಬಗ್ಗೆ ಗೌರವ ಮತ್ತು ಪ್ರೀತಿಯನ್ನು ಹೊಂದಿರಬೇಕು. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರೀಯವಾಗಿ ಪಾಲ್ಗೊಳ್ಳಬೇಕು ಎಂದು ಉಡುಪಿ ಪೂರ್ಣಪ್ರಜ್ಞಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಕೆ. ಸದಾಶಿವ ರಾವ್ ಹೇಳಿದರು. ಅವರು ಕಾಲೇಜಿನ ಸಭಾಂಗಣದಲ್ಲಿ ಶೈಕ್ಷಣಿಕ ವರ್ಷ 2016-17ನೇ ಸಾಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿವಿಧ ವೇದಿಕೆಗಳ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಬಿ. ಎಮ್. ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಆಡಳಿತ ಮಂಡಳಿಯ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ, ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಮತ್ತು ರಾಜೇಶ್ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ವಿಸ್ಮಿತಾ ಪರಿಚಯಿಸಿದರು, ಪ್ರಗತಿ ಸ್ವಾಗತಿಸಿದರು, ತನುಷ್ ಡಿ. ರಾವ್ ವಂದಿಸಿದರು, ಶ್ರೀವಿಭಾ ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಪ್ಪುಂದ: ಸರಕಾರದ ಯೋಜನೆಗಳನ್ನು ಜನರಿಗೆ ಮುಟ್ಟಿಸುವ ನಿಟ್ಟಿನಲ್ಲಿ ಒಂದೇ ಸೂರಿನಡಿ ವಿವಿಧ ಇಲಾಖೆಗಳ ನೂರು ಸೌಲಭ್ಯ ಒದಗಿಸುವ ವ್ಯವಸ್ಥೆಯಿರುವ ಈ ಯೋಜನೆಯನ್ನು ದೇಶದಲ್ಲಿಯೇ ಪ್ರಥಮವಾಗಿ ರಾಜ್ಯದಲ್ಲಿ ಬಾಪುಜಿ ಸೇವಾ ಕೇಂದ್ರ ಆರಂಭಿಸಲಾಗಿದೆ ಎಂದು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಉಪ್ಪುಂದ ಗ್ರಾಪಂ ಸಭಾಭವನದಲ್ಲಿ ಬಾಪೂಜಿ ಸೇವಾ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿ ತಾಲೂಕು ಕಚೇರಿಗಳಲ್ಲಿ ಸರತಿ ಸಾಲು ಕಡಿಮೆ ಮಾಡಲು ಜನಸಾಮಾನ್ಯರ ಸಲಹೆಯಂತೆ ಫಲಾನುಭವಿಗಳ ಕಡತಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡುವ ಉದ್ದೇಶದಿಂದ ಸಂಪುಟ ಸಭೆಯಲ್ಲಿ ಪಂಚಾಯತ್ ರಾಜ್ ತಿದ್ದುಪಡಿ ಮಾಡುವುದರ ಮೂಲಕ ಈ ಯೋಜನೆ ಜಾರಿಗೆ ತರಲಾಗಿದೆ. ಇದರಿಂದ ದೂರದವರಿಗೆ ತಾಲೂಕು ಕೇಂದ್ರದಲ್ಲಿರುವ ತಹಶೀಲ್ದಾರರ ಕಚೇರಿ ಅಲೆದಾಟ ತಪ್ಪಿದಂತಾಗುತ್ತದೆ. ಸಮಯದ ಜತೆಗೆ ಹಣವೂ ಉಳಿತಾಯವಾಗುತ್ತದೆ ಎಂದರು. ಗ್ರಾಪಂ ಅಧ್ಯಕ್ಷೆ ದುರ್ಗಮ್ಮ ಅಧ್ಯಕ್ಷತೆವಹಿಸಿದ್ದರು. ಉಪಾಧ್ಯಕ್ಷೆ ಸಿಂಗಾರಿ ಶೆಟ್ಟಿ, ಹಾಗೂ ಸದಸ್ಯರು, ಜಿಪಂ ಸದಸ್ಯರಾದ ಸುರೇಶ ಬಟ್ವಾಡಿ, ಗೌರಿ ದೇವಾಡಿಗ, ತಾಪಂ ಸದಸ್ಯೆ ಪ್ರಮಿಳಾ ದೇವಾಡಿಗ, ತಾಪಂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಕಾರ್ಕಳದ ಕ್ರಿಸ್ಟ್ ಕಿಂಗ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರಗಿದ ಉಡುಪಿ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಾದ ಪ್ರಿಯಾ ಜಿ.ಪೈ ಮತ್ತು ಅನನ್ಯಾ ಡಿ.ಜಿ. ಅವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ ಮುಖ್ಯ ಶಿಕ್ಷಕ ರಾಘವೇಂದ್ರ ಶೇರುಗಾರ್, ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ ಖಾರ್ವಿ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶಾಂತಿ ಡಿಕೋಸ್ಟಾ ಮತ್ತು ತಂಡದ ವ್ಯವಸ್ಥಾಪಕಿ ಗೀತಾ ಅವರೊಂದಿಗೆ ವಿದ್ಯಾರ್ಥಿನಿಯರು.

Read More

ಸಾಧನೆಯ ಹಾದಿಯಲ್ಲಿ ಯುವ ಉದ್ಯಮಿಗಳು ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೋಟೆಲ್ ಹಾಗೂ ಹಾಸ್ಪಿಟಾಲಿಟಿ ಕ್ಷೇತ್ರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿರುವ ಯುವ ಮೆರಿಡಿಯನ್ ಸಮೂಹ ಸಂಸ್ಥೆಗಳ ಗುಣಮಟ್ಟ ಸೇವೆ ಹಾಗೂ ಉತ್ಕೃಷ್ಟ ಸೌಲಭ್ಯವನ್ನು ಪರಿಗಣಿಸಿ ಪ್ರಶಸ್ತಿಗಳು ಅರಸಿ ಬಂದಿವೆ. ದೆಹಲಿಯ ಡಿಡಿಪಿ ಸಂಸ್ಥೆಯು ಹೋಟೆಲ್ ವಿಭಾಗದಲ್ಲಿ ಪ್ರತಿ ವರ್ಷ ನೀಡುತ್ತಿರುವ ದಕ್ಷಿಣ ಹಾಗೂ ಪಶ್ಚಿಮ ಭಾರತದ ಪ್ರತಿಷ್ಟಿತ ‘ಇಂಡಿಯಾ ಹಾಸ್ಪಿಟಾಲಿಟಿ ಅವಾರ್ಡ್-2016ರ ಬೆಸ್ಟ್ ರೆಸಾರ್ಟ್ & ಸ್ಪಾ’ ಪ್ರಶಸ್ತಿಗೆ ರಾಜ್ಯದ ಪ್ರತಿಷ್ಟಿತ ಸ್ಟಾರ್ ಹೋಟೆಲ್‌ಗಳಲ್ಲಿ ಒಂದಾದ ಕೋಟೇಶ್ವರದ ಯುವ ಮೆರಿಡಿಯನ್ ಬೇ ರೆಸಾರ್ಟ್ & ಸ್ಪಾ ಆಯ್ಕೆಗೊಂಡಿದೆ. ಇದರ ಜೊತೆ ಜೊತೆಗೆ ಯುವ ಮೆರಿಡಿಯನ್ ಸಂಸ್ಥೆಯು ಅಂತಾರಾಷ್ಟ್ರೀಯ ಆಹಾರ ಗುಣಮಟ್ಟ ಹೊಂದಿರುವುದಕ್ಕಾಗಿ ಐಎಸ್‌ಓ 22000 ಪ್ರಮಾಣ ಪತ್ರ ಲಭಿಸಿದೆ. ಕಳೆದ ಮೂರೂವರೆ ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಯುವ ಮೆರಿಡಿಯನ್‌ಗೆ ಕಳೆದ ಒಂದೂವರೆ ವರ್ಷಗಳಿಂದ ನಿರಂತರ ಭೇಟಿ ನೀಡಿ ಪರಿಶೀಲಿಸಿದ ಐಎಸ್‌ಓ ತಂಡ, ಈ ಅಂತರ್ರಾಷ್ಟ್ರೀಯ ಪ್ರಮಾಣ ಪತ್ರ ಐಎಸ್‌ಓ 22000 : 2005…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಕ್ಕಳ ಸಂಖ್ಯೆ ಕಡಿಮೆಯಿರುವ ಹಾಲಾಡಿ ಗ್ರಾ.ಪಂ ವ್ಯಾಪ್ತಿಯಲ್ಲಿನ ಮೂರು ಸರಕಾರಿ ಹಿರಿಯ ಹಾಗೂ ಕಿರಿಯ ಪ್ರಾಥಮಿಕ ಶಾಲೆಗಳನ್ನು ವಿಲೀನಗೊಳಿಸುವ ಮಹತ್ವದ ನಿರ್ಣಯವನ್ನು ಹಾಲಾಡಿ ಗ್ರಾಪಂ ಕೈಗೊಂಡಿದೆ. ಸ.ಕಿ.ಪ್ರಾ ಶಾಲೆ ತಟ್ಟೊಟ್ಟು, ಸ.ಹಿ.ಪ್ರಾ ಶಾಲೆ ಹಾಲಾಡಿ ಇವೆರಡು ಶಾಲೆಯನ್ನು ಪೂರಕ ಶೈಕ್ಷಣಿಕ ವ್ಯವಸ್ಥೆಯಿರುವ ಮೂಡುಹಾಲಾಡಿಯ ಹಿರಿಯ ಪ್ರಾಥಮಿಕ ಶಾಲೆಗೆ ವಿಲಿನಗೊಳಿಸಲು ಗ್ರಾ.ಪಂ ಮುಂದಾಗಿದೆ. ಒಂದೇ ಕಡೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದು, ಶಿಕ್ಷಕರ ಕೊರತೆ ನೀಗಿಸುವುದು, ದೂರದ ಮಕ್ಕಳನ್ನು ಕರೆತರಲು ವಾಹನದ ವ್ಯವಸ್ಥೆ ಹಾಗೂ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸುವ ಸಲುವಾಗಿ ಮೂಡುಹಾಲಾಡಿ ಶಾಲೆಯಲ್ಲಿ ನಡೆದ ಪ್ರಥಮ ಸುತ್ತಿನ ಗ್ರಾಮಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಈ ಬಗ್ಗೆ ಗ್ರಾಮಸಭೆಯಲ್ಲಿ ಮಾತನಾಡಿದ ಹಾಲಾಡಿ ಗ್ರಾಪಂ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಮಕ್ಕಳ ಸಂಖ್ಯೆ ಕಡಿಮೆಯಿರುವುದರಿಂದ ಶಿಕ್ಷಕರು ಹಾಗೂ ಮೂಲಭೂತ ಸೌಲಭ್ಯಗಳ ಕೊರತೆಯನ್ನು ಗಮನಿಸಿ, ಸರಕಾರಿ ಶಾಲೆಗಳಿಗೆ ಅಗತ್ಯ ಸೌಕರ್ಯ ದೊರೆಯಬೇಕು ಎಂಬ ಕಾರಣಕ್ಕೆ ಮೂರು ಶಾಲೆಗಳನ್ನು ವಿಲೀನಗೊಳಿಸುವ ನಿರ್ಣಯಕ್ಕೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್‌ಕಾರ‍್ಸ್ ಕಾಲೇಜು ಶಿಕ್ಷಣ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಡಾ. ಎಚ್. ಎಸ್. ಶಾಂತಾರಾಮ್ ಅವರ ಹೆಸರಿನಲ್ಲಿ ಕಳೆದ 5 ವರ್ಷಗಳಿಂದ ಕನ್ನಡದ ಅತ್ಯುತ್ತಮ ಕೃತಿಗೆ ನೀಡಲಾಗುತ್ತಿರುವ ಡಾ. ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಈ ಭಾರಿ ಲೇಖಕ ವೈ.ಎಸ್ ಹರಗಿ ಅವರ ’ಉರಿವ ಜಲ’ ಕಾದಂಬರಿಗೆ ದೊರೆತಿದೆ. ಕನ್ನಡದ ವಿಮರ್ಶಕರಾದ ಡಾ.ಆಶಾದೇವಿ, ಬೆಂಗಳೂರು, ಡಾ.ರಾಜೇಂದ್ರ ಚೆನ್ನಿ, ಶಿವಮೊಗ್ಗ, ಡಾ.ಎಚ್.ಎಸ್. ರಾಘವೇಂದ್ರ ರಾವ್ ಬೆಂಗಳೂರು ಇವರು ಪ್ರಶಸ್ತಿ ಆಯ್ಕೆ ಸಮಿತಿಯ ನಿರ್ಣಾಯಕರಾಗಿದ್ದರು. ಪ್ರಶಸ್ತಿಯು ಹದಿನೈದು ಸಾವಿರ ರೂಪಾಯಿ ನಗದು ಮತ್ತು ಬೆಳ್ಳಿಯ ಪ್ರಶಸ್ತಿ ಫಲಕಗಳನ್ನೊಳಗೊಂಡಿದೆ. ಆಗಸ್ಟ್ ೧೩ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆಯುವ ಸಾಹಿತ್ಯ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಸಮಿತಿಯ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರಾವಳಿಯ ಬಹುದೊಡ್ಡ ಹಬ್ಬವಾದ ನಾಗರಪಂಚಮಿಯನ್ನು ಕುಂದಾಪುರ ತಾಲೂಕಿನೆಲ್ಲೆಡೆ ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆನಿಂದಲೇ ನಾಗಬನ, ಹಾಗೂ ತಾಲೂಕಿನ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ಭಕ್ತಾದಿಗಳು ನಾಗನಿಗೆ ಹಾಲು, ಏಳನೀರು, ಕೇದಿಗೆ ಹೂವನ್ನು ಸಮರ್ಪಿಸಿ ಪುನೀತರಾದರು. ತಾಲೂಕಿನ ಪ್ರಸಿದ್ಧ ದೇವಾಲಯವಾದ ಗುಡ್ಡಮ್ಮಾಡಿ, ಕಾಳಾವರ, ಉಳ್ಳೂರು ಕಾರ್ತಿಕೇಯ ದೇವಸ್ಥಾನ ಸೇರಿದಂತೆ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜಾವಿಧಿಗಳು ನೆರವೇರಿದರು. ಸೇನಾಪುರ ಗ್ರಾಮದ ಗುಡ್ಡಾಮ್ಮಾಡಿಯಲ್ಲಿ ಹಾಲುಹಿಟ್ಟು ಸೇವೆ, ಅಭಿಷೇಕ ಹಾಗೂ ವಿಶೇಷ ಪೂಜೆ ನಡೆಯಿತು. ಭಟ್ಕಳ, ಬೈಂದೂರು, ಕುಂದಾಪುರದಿಂದ ನೂರಾರು ಭಕ್ತಾದಿಗಳು ಆಗಮಿಸಿ ದೇವರ ಕೃಪೆಗೆ ಪಾತ್ರರಾದರು. ಭಕ್ತಾದಿಗಳಿಗೆ ನೈವೇದ್ಯದ ಪ್ರಸಾದ ವಿತರಣೆ ಮಾಡುವ ವ್ಯವಸ್ಥೆ ಮಾಡಲಾಗಿತ್ತು. ಕುಂದಾಪ್ರ ಡಾಟ್ ಕಾಂ. ಬೈಂದೂರಿನ ಸೋಮೇಶ್ವರದಲ್ಲಿನ ದೇವಸ್ಥಾನದಲ್ಲಿನ ನಾಗಬನ, ಕುಂದಾಪುರದ ಭಟ್ರಹಾಡಿಯ ನಾಗಬನ, ರೋಯಲ್ ಸಭಾಭವನದ ಬಳಿಯ ನಾಗಬನ ಸೇರಿದಂತೆ ಎಲ್ಲಾ ನಾಗಬನದಲ್ಲಿಯೂ ನಾಗನಿಗೆ ವಿಶೇಷಪೂಜೆ ಸಲ್ಲಿಸಲಾಯಿತು.  

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅವೈಜ್ಞಾನಿಕವಾದ ಹೆಚ್ಚುವರಿ ಶಿಕ್ಷಕರ ವರ್ಗಾವಣೆಯಿಂದ ಮಕ್ಕಳ ಶಿಕ್ಷಣದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಯಾವುದೇ ಕಾರಣಕ್ಕೂ ತೆಂಕೊಡಿಗೆ ಶಾಲೆಯಲ್ಲಿ ಗುರುತಿಸಿದ ಹೆಚ್ಚುವರಿ ಶಿಕ್ಷಕರನ್ನು ಈ ಮಧ್ಯಂತರ ಅವಧಿಯಲ್ಲಿ ವರ್ಗಾವಣೆ ಮಾಡಬಾರದೆಂದು ಆಗ್ರಹಿಸಿ ಪೋಷಕರು ಶನಿವಾರ ಪ್ರತಿಭಟನೆ ನಡೆಸಿದ್ದಾರೆ. ವಂಡ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ತೀರಾ ಕುಗ್ರಾಮವಾದ ತೆಂಕೊಡಿಗೆ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ೪೦ ವಿದ್ಯಾರ್ಥಿಗಳು ವಿದ್ಯಾಬ್ಯಾಸ ಮಾಡುತ್ತಿದ್ದು, ಇಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಶಂಕರ ಶೆಟ್ಟಿ ಅವರು ೧೨ ವರ್ಷದಿಂದ ಶಾಲೆಯನ್ನು ಉಳಿಸಿ ಬೆಳೆಸುವಲ್ಲಿ ಶ್ರಮಿಸುತ್ತಿದ್ದಾರೆ. ವಿದ್ಯಾರ್ಥಿಗಳಿಗೂ ಕೂಡಾ ನೆಚ್ಚಿನಶಿಕ್ಷಕರಾಗಿರುವ ಇವರ ವರ್ಗಾವಣೆಯನ್ನು ತಡೆ ಹಿಡಿಯಬೇಕು ಎಂದು ಪೋಷಕರು, ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಬೆಳಿಗ್ಗೆಯಿಂದಲೇ ಪ್ರತಿಭಟನೆ ಆರಂಭವಾದರೂ ಸಂಬಂಧಿಸಿದ ಶಿಕ್ಷಣ ಇಲಾಖೆಯಿಂದ ಯಾವ ಅಧಿಕಾರಿಯೂ ಬಾರದ ಹಿನ್ನೆಲೆಯನ್ನು ಸೋಮವಾರ ಮತ್ತೆ ಪ್ರತಿಭಟನೆ ನಡೆಸುವುದೆಂದು ತೀರ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮನವಿಯನ್ನು ತಾ.ಪಂ.ಸದಸ್ಯ ಉದಯ ಜಿ.ಪೂಜಾರಿ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ ಅಡಿಕೆಕೊಡ್ಲು ಅವರಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಾಡ ಪಡುಕೋಣೆಗೆ ಪ್ರತ್ಯೇಕ ಸರ್ಕಾರಿ ಬಸ್‌ಗಳನ್ನು ಓಡಿಸಿ ಜನಸಾಮಾನ್ಯರಿಗೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಮಾಡಬೇಕು ಹಾಗೂ ಮಾರಸ್ವಾಮಿಯಲ್ಲಿ ಖಾಸಗಿ ಎಕ್ಸ್‌ಪ್ರೆಸ್ ಬಸ್‌ಗಳನ್ನು ಹಾಗೂ ಸರ್ಕಾರಿ ಬಸ್‌ಗಳನ್ನು ನಿಲುಗಡೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಪಡುಕೋಣೆಯಲ್ಲಿ ಸಹಿ ಸಂಗ್ರಹ ಚಳುವಳಿಯನ್ನು ಆರಂಭಿಸಲಾಯಿತು. ಡಿವೈಎಫ್‌ಐನ ಮಾಜಿ ಮುಖಂಡರಾದ ರಾಜೀವ ಪಡುಕೋಣೆ ಸಹಿ ಸಂಗ್ರಹ ಚಳುವಳಿಯನ್ನು ಉದ್ಘಾಟಿಸಿದರು. ಡಿವೈಎಫ್‌ಐನ ತಾಲೂಕು ಉಪಾಧ್ಯಕ್ಷರಾದ ಸುರೇಶ ಕಲ್ಲಾಗರ, ಡಿವೈಎಫ್‌ಐನ ಅಧ್ಯಕ್ಷರಾದ ಸುಬ್ರಹ್ಮಣ್ಯ ಆಚಾರ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಕ್ತದಾನದ ಮಾಡುವ ಬಗೆಗೆ ಆತಂಕಗೊಳ್ಳಬೇಕಾಗಿಲ್ಲ. ವ್ಯಕ್ತಿಯೋರ್ವ ನಿಯಮಿತವಾಗಿ ರಕ್ತದಾನ ಮಾಡಿದರೇ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಿದೆ. ಹಾಗಾಗಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ, ಜೀವ ಉಳಿಸುವ ಕಾರ್ಯಕ್ಕೆ ಮುಂದಾಗಬೇಕಿದೆ ಎಂದು ಕುಂದಾಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಅಧ್ಯಕ್ಷ ಜಯಕರ್ ಶೆಟ್ಟಿ ಹೇಳಿದರು. ಅವರು ಕುಂದಾಪುರ ಬಾರ್ ಅಸೋಸಿಯೇಷನ್ ನೇತೃತ್ವದಲ್ಲಿ ಕುಂದಾಪುರ ಇವರ ಪ್ರಾಯೋಜಕತ್ವದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇವರ ಸಹಕಾರದೊಂದಿಗೆ ಜರುಗಿದ ವಕೀಲರ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಕುಂದಾಪುರದ ವಕೀಲ ಸಂಘದ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ ಮಾತನಾಡಿ ಎಲ್ಲಾ ದಾನಗಳಿಗಿಂತ ರಕ್ತದಾನ ಅತ್ಯಂತ ಶ್ರೇಷ್ಠ ದಾನವಾಗಿದೆ. ಆರೋಗ್ಯವಂತ ಮನುಷ್ಯನ ದೇಹದಲ್ಲಿ 5,000 ಮಿ.ಲಿ ರಕ್ತವಿದ್ದು, ರಕ್ತದಾನ ಮಾಡುವವರಿಂದ ಕೇವಲ 350 ಮಿ.ಲಿ ರಕ್ತವನ್ನು ಮಾತ್ರ ಪಡೆಯಲಾಗುತ್ತದೆ ಎಂದರು. ಕುಂದಾಪುರದ ವಕೀಲ ಸಂಘದ ಪ್ರಧಾನ ಕಾರ್ಯದರ್ಶಿ ಎಚ್. ರವಿಶ್ಚಂದ್ರ ಶೆಟ್ಟಿ, ಕುಂದಾಪುರ ರೆಡ್ ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷ ಡಾ.…

Read More