Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತೆಕ್ಕಟ್ಟೆಯ ವಿಶ್ವ ವಿನಾಯಕ ಸಿ.ಬಿ.ಎಸ್‌ಇ ಸ್ಕೂಲ್‌ನಲ್ಲಿ ಯು.ಕೆ.ಜಿ. ಮಕ್ಕಳ ಗ್ರಾಜುಯೇಷನ್ ಡೇ ಕಾರ್ಯಕ್ರಮವನ್ನು ಇತ್ತೀಚಿಗೆ ಆಯೋಜಿಸಲಾಗಿತ್ತು. ಅತಿಥಿಗಳಾಗಿ ಆಗಮಿಸಿದ ವರ್ಷಿಣಿ ಪೈ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳ ಬಾಲ್ಯದಲ್ಲಿ ಹೆತ್ತವರು ಬಹಳಷ್ಟು ಮುತುವರ್ಜಿ ವಹಿಸಿ. ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಪೂರಕವಾಗಬೇಕು. ಮಕ್ಕಳ ಪ್ರಾರಂಭಿಕ ಬೆಳವಣಿಗೆ ಹಾಗೂ ಕಲಿಕೆಯಲ್ಲಿ ಹೆತ್ತವರ ಪಾತ್ರ ಮಹತ್ತರವಾಗಿರುತ್ತದೆ. ಮಕ್ಕಳ ಸೂಕ್ಷ್ಮ ಮನಸ್ಸಿನ ಬೆಳವಣಿಗೆಗೆ ಉತ್ತಮ ವಾತಾವರಣ ಕಲ್ಪಿಸಿ ಕೊಡುವುದು ಪೋಷಕರ ಕರ್ತವ್ಯವಾಗಿದೆ ಎಂದು ತಿಳಿಸಿದರು. ಪ್ರಾಂಶುಪಾಲ ನಿತಿನ್ ಡಿ’ ಆಲ್ಮೇಡಾ ಪ್ರಾಸ್ತಾವಿಕ ಮಾತುಗಳನ್ನಾಡಿ, ಶಾಲಾ ಶೈಕ್ಷಣಿಕ ಚಟುವಟಿಕೆಗಳ ಕುರಿತು ವಿವರಿಸಿದರು. ಪೋಷಕರು ಮಕ್ಕಳೊಂದಿಗೆ ಸಮಯವನ್ನು ವ್ಯಯಿಸಿ ಅವರ ಸಂತೋಷದಲ್ಲಿ ಭಾಗವಹಿಸಿ ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು. ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪದವಿ ಸ್ವೀಕರಿಸಿದ ವಿದ್ಯಾರ್ಥಿಗಳಿಗೆ ಶುಭ ಕೋರಿ ಪೋಷಕರ ಸಹಕಾರವನ್ನು ಸ್ಮರಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಮಣೂರು ಮಹಾಲಿಂಗೇಶ್ವರ ಜಾತ್ರೋತ್ಸವದ ಅಂಗವಾಗಿ ಗೀತಾನಂದ ವೇದಿಕೆಯಲ್ಲಿ ಮಣೂರು ಫ್ರೆಂಡ್ಸ್ ಮಣೂರು ಇದರ ರಜತ ಸಂಭ್ರಮ ಕಾರ್ಯಕ್ರಮದಲ್ಲಿ ಕೋಟದ ಪಂಚವರ್ಣ ಸಂಘಟನೆಗೆ ಅತ್ಯುತ್ತಮ ಸಂಘಟನಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಈ ಪುರಸ್ಕಾರವನ್ನು ಸಂಘದ ಅಧ್ಯಕ್ಷರಾದ ಮನೋಹರ್ ಪೂಜಾರಿ, ಮಹಿಳಾಧ್ಯಕ್ಷೆ ಲಲಿತಾ ಪೂಜಾರಿ ಸ್ವೀಕರಿಸಿದರು. ಗಣ್ಯರಾದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್, ಮಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ್ ಹೆಚ್. ಕುಂದರ್, ಮಣೂರು ಫ್ರೆಂಡ್ಸ್‌ನ ಗೌರವ ಸಲಹೆಗಾರ ಸುಬ್ರಾಯ ಆಚಾರ್, ಸಮಾಜಸೇವಕ ಮಲ್ಯಾಡಿ ಶಿವರಾಮ ಶೆಟ್ಟಿ, ಉದ್ಯಮಿ ಗಣೇಶ್ ಸೀಲ್ಕ್ಸ್ ಅನಂತ್ ನಾಯಕ್, ಮಣೂರು ಫ್ರೆಂಡ್ಸ್ ಅಧ್ಯಕ್ಷ ರಾಘವೇಂದ್ರ ಆಚಾರ್ ಇದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ ಬಹುಮಾನಕ್ಕಾಗಿ ಲೇಖಕರು, ಪ್ರಕಾಶಕರು, ಸಾಹಿತ್ಯಾಸಕ್ತ ಸಾರ್ವಜನಿಕರು ಪುಸ್ತಕದ ನಾಲ್ಕು ಪ್ರತಿಗಳನ್ನು ರಿಜಿಸ್ಟಾçರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಜೆ.ಸಿ ರಸ್ತೆ, ಬೆಂಗಳೂರು ವಿಳಾಸಕ್ಕೆ ಅಂಚೆ / ಕೊರಿಯರ್ ಮೂಲಕ ಅಥವಾ ಖುದ್ದಾಗಿ ಜೂನ್ 30ರ ತಲುಪಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‌ಸೈಟ್ www.sahithyaacademy.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟಾçರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಲಲ್ಲಿ 2026-27 ನೇ ಸಾಲಿನ 6ನೇ ತರಗತಿ ಪ್ರವೇಶಾತಿಗಾಗಿ, ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯು ಏಪ್ರಿಲ್ 12 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1ರ ವರೆಗೆ ಬೈಂದೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಡೆಯಲಿದೆ. ಪ್ರವೇಶ ಪತ್ರಗಳನ್ನು ಆನ್‌ಲೈನ್ https://dom.karnataka.gov.in ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು ಅಥವಾ ಜಿಲ್ಲಾ ಕಚೇರಿ, ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಹಾಗೂ ಸಂಬAಧಪಟ್ಟ ವಸತಿ ಶಾಲೆಗಳ ಪ್ರಾಂಶುಪಾಲರನ್ನು ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2573596, 2574596, 08258-231101 ಮತ್ತು 08254-230370 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸುತ್ತಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವರಿಗೆ, ಬೆಂಗಳೂರಿನ ನಗರ ವಿಶ್ವವಿದ್ಯಾಲಯ (ಡಾ. ಮನಮೋಹನ್‌ಸಿಂಗ್ ವಿಶ್ವವಿದ್ಯಾಲಯ) ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದೆ. ಏಪ್ರಿಲ್ 04ರಂದು ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯಲಿರುವ 5ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಈ ಗೌರವ ಪ್ರದಾನ ನೇರವೇರಲಿದೆ. ಡಾ. ಎಂ. ಮೋಹನ್ ಆಳ್ವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸ್ಥಾಪಕ ಅಧ್ಯಕ್ಷರಾಗಿದ್ದು, ಕರಾವಳಿ ಕರ್ನಾಟಕದಲ್ಲಿ ಗುಣಮಟ್ಟದ ಶಿಕ್ಷಣವನ್ನು ಗ್ರಾಮೀಣ ಪ್ರದೇಶಗಳಿಗೆ ತಲುಪಿಸಿದ ಪ್ರಮುಖರಲ್ಲಿ ಅಗ್ರ ಗಣ್ಯರು. ಮೂಡುಬಿದಿರೆ ಕೇಂದ್ರವಾಗಿ ಕಾರ್ಯನಿರ್ವಹಿಸುವ ಆಳ್ವಾಸ್ ಸಂಸ್ಥೆಗಳ ಮೂಲಕ ಪ್ರಾಥಮಿಕದಿಂದ ಉನ್ನತ ಶಿಕ್ಷಣದವರೆಗೆ ನೂರಾರು ಕೋರ್ಸ್ಗಳನ್ನು ಪ್ರಾರಂಭಿಸಿ ಸಾವಿರಾರು ವಿದ್ಯಾರ್ಥಿಗಳ ಬದುಕನ್ನು ರೂಪಿಸಿದ್ದಾರೆ. ಅವರ ನೇತೃತ್ವದಲ್ಲಿ ಶಿಕ್ಷಣ ಮಾತ್ರವಲ್ಲದೆ ಕಲೆ, ಸಂಸ್ಕೃತಿ, ಕ್ರೀಡೆ ಮತ್ತು ವ್ಯಕ್ತಿತ್ವ ವಿಕಸನಕ್ಕೂ ಸಮಾನ ಮಹತ್ವ ನೀಡಲಾಗಿದೆ. “ಆಳ್ವಾಸ್ ನುಡಿಸಿರಿ ವಿರಾಸತ್” ಮೊದಲಾದ ಮಹತ್ವದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೋಡಿ ಕನ್ಯಾಣದಲ್ಲಿ ಕೊಂಕಣಿ ಖಾರ್ವಿ ಲೋಕವೇದ್ ಕಲಾ ಮಾಂಡ್ ಬ್ರಹ್ಮಾವರ ಇದರ ಪ್ರಸ್ತುತಿಯಲ್ಲಿ ಸಮಾಜಸೇವಕ ನರಸಿಂಹ ಆರ್ಕಾಟಿ ಜೀವನ ಚರಿತ್ರೆ, ಪುಸ್ತಕ ಬಿಡುಗಡೆ ಕಾರ್ಯಕ್ರಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ರಂಗಮಂಟಪದಲ್ಲಿ ನೆರವೇರಿತು. ಸಭಾಧ್ಯಕ್ಷತೆಯನ್ನು ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಹಾಗೂ ಗುರುವಂದನಾ ಸಮಿತಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಇದರ ಅಧ್ಯಕ್ಷ ಬಿ. ಮಾಧವ ಖಾರ್ವಿ ವಹಿಸಿದರು. ಕ.ಸಾ.ಪ. ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆಯನ್ನು ನೀಡಿದರು. ಅಖಿಲ ಭಾರತ ಕೊಂಕಣಿ ಖಾರ್ವಿ ಮಹಾಜನ ಸಂಘ ಇದರ ಅಧ್ಯಕ್ಷ ರವಿ ಟಿ. ನಾಯಕ್  ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ನೆರವೇರಿಸಿದರು. ಪುಸ್ತಕದ ಸಂಕಲನಕಾರ ಆಲ್ಫೋನ್ಸಸ್ ಡಿಸೋಜಾ ಇವರನ್ನು ಗೌರವಿಸಲಾಯಿತು. ಖಜಾಂಚಿ ಸದಾನಂದ ಖಾರ್ವಿ ಮಾತನಾಡಿ, ಸ್ವಾತಂತ್ರ್ಯ ಪೂರ್ವ ಕಾಂಗ್ರೆಸ್‌ನ ಕರಾವಳಿಯ ಮುತ್ಸದ್ದಿ ಹಾಗೂ ಕರಾವಳಿಯ ಗಾಂಧಿ ಎಂದು ಸಂಭೋದಿಸಲ್ಪಡುವ ಕೀರ್ತಿಶೇಷ್ಠ ನರಸಿಂಹ ಆರ್ಕಾಟಿ ಅವರ ಬಗ್ಗೆ ಸಂಸ್ಥೆ ಉದಯವಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಿತ್ರ ಮಂಡಳಿ, ಕೋಟ ಇವರ ವತಿಯಿಂದ ಏಪ್ರಿಲ್ 04ರಂದು ಕೋಟದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿನಿ ರಿಷಿಕಾ ದೇವಾಡಿಗ ಅವರಿಗೆ “ಅಣ್ಣಾಜಿ ಬಲ್ಲಾಳ ಬಾಲ ಪುರಸ್ಕಾರ” ಪ್ರದಾನ ಮಾಡಲಾಗುತ್ತಿದೆ. ಕುಂದಾಪುರ ತಾಲೂಕಿನ ಹಟ್ಟಿಅಂಗಡಿಯ ಶ್ರೀ ಸಿದ್ದಿವಿನಾಯಕ ವಸತಿ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ರಿಷಿಕಾ ಅವರು ಬೈಂದೂರಿನ ರಾಮ ದೇವಾಡಿಗ ಮತ್ತು ರೂಪಾ ದಂಪತಿಯ ಸುಪುತ್ರಿ. ಅತಿ ಚಿಕ್ಕ ವಯಸ್ಸಿನಲ್ಲಿ ಸಾಹಿತ್ಯ, ಸಂಸ್ಕೃತಿ ಮತ್ತು ಕಲಾ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆಗಳನ್ನು ಮಾಡಿರುವ ಅವರು ರಾಜ್ಯಮಟ್ಟದಿಂದ ಶಾಲಾಮಟ್ಟದವರೆಗೆ ಅನೇಕ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. 2025ರ ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆಯಾಗಿರುವುದು ಅವರ ಸಾಹಿತ್ಯಾಸಕ್ತಿ ಮತ್ತು ನಾಯಕತ್ವವನ್ನು ತೋರಿಸುತ್ತದೆ. ‘ಮೊದಲ ಹೆಜ್ಜೆ’ ಕಥಾಸಂಕಲನ ಪುಸ್ತಕವನ್ನು ಪ್ರಕಟಿಸಿರುವ ಅವರು ಕಾರ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ‘ಬಾಲ ವಿದ್ಯಾರ್ಥಿ ಸಾಹಿತಿ’ ಪ್ರಶಸ್ತಿಯನ್ನೂ ಪಡೆದಿದ್ದಾರೆ. ಭಾಷಣ, ದೇಶಭಕ್ತಿ ಗೀತಾ ವಾಚನ, ಏಕಪಾತ್ರಾಭಿನಯ ಮತ್ತು ಪುಸ್ತಕ ವಿಮರ್ಶೆ ಸೇರಿದಂತೆ ಹಲವು ಸ್ಪರ್ಧೆಗಳಲ್ಲಿ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿರುವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಮಣೂರು ರಾಷ್ಟ್ರೀಯ ಹೆದ್ದಾರಿಯ ಸನಿಹದಲ್ಲಿರುವ ಮಣೂರು ಶ್ರೀ ಮಹಾಲಿಂಗೇಶ್ವರ ಪಂಚಮುಖಿ ಹೇರಂಭ ಮಹಾಗಣಪತಿ ದೇಗುಲದ ವಾರ್ಷಿಕ ರಥೋತ್ಸವ ಕಾರ್ಯಕ್ರಮ ಗುರುವಾರ ಸಂಪನ್ನಗೊಂಡಿತು. ರಥೋತ್ಸವವು ಕೋಟ ರಾಷ್ಟ್ರೀಯ ಹೆದ್ದಾರಿಯ ಮೂಲಕ ಅಮೃತೇಶ್ವರಿ ದೇಗುಲದ ಸಮೀಪ ತೆರಳಿ ಮುಂದುವರಿಯಿತು. ಭಕ್ತ ಸಮುದಾಯ ಮಹಾಲಿಂಗೇಶ್ವರನ ತೇರನೆಳೆದು ಸಂಭ್ರಮಿಸಿಕೊoಡರು. ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ಹೆಚ್ ಕುಂದರ್ ರಥೋತ್ಸವಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ವೈಭವದ ರಥೋತ್ಸವ ಸುಮಾರು ಒಂದು ವರೆ ಕಿ.ಮೀ ಸಂಚರಿಸಿದ ರಥೋತ್ಸವದಲ್ಲಿ ಕೀಲು ಕುದುರೆ, ವಿವಿಧ ರೀತಿಯ ಗೊಂಬೆಗಳು, ಸ್ತಬ್ಧ ಚಿತ್ರಗಳು, ಕೇರಳ ಚೆಂಡೆ, ವಾದ್ಯಘೋಷಗಳು, ತಟ್ಟಿರಾಯ ಹೀಗೆ ನಾನಾ ರೀತಿಯ ವಿಶೇಷತೆಗಳು ರಥೋತ್ಸವದಲ್ಲಿ ಕಂಡುಬoತು. ದೇಗುಲದ ಅಧ್ಯಕ್ಷ ಸತೀಶ್ ಹೆಚ್ ಕುಂದರ್,ಟ್ರಸ್ಟಿಗಳಾದ ರವಿ ಐತಾಳ್,ಅಶೋಕ್ ಶೆಟ್ಟಿ, ದಿವ್ಯ ಪ್ರಭು,ಅಚ್ಯುತ್ ಹಂದೆ,ಸುಫಲ ಶೆಟ್ಟಿ,ದಿನೇಶ್ ಆಚಾರ್, ಚಂದ್ರ ಹರ್ತಟ್ಟು,ಜೀರ್ಣೋದ್ಧಾರ ಸಮಿತಿಯ ಪ್ರಮುಖರಾದ ಅರುಣಾಚಲ ಮಯ್ಯ,ವಿಷ್ಣುಮೂರ್ತಿ ಮಯ್ಯ, ಮಹೇಶ್ ಹೊಳ್ಳ, ಗೋಪಾಲ ಪೈ, ರಾಜೇಂದ್ರ ಉರಾಳ, ಸೇರಿದಂತೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಭಾರತೀಯ ಜೀವ ವಿಮಾ ನಿಗಮ ಮೈಕ್ರೋ ಇನ್ಸೂರೆನ್ಸ್ ವಿಭಾಗುಡುಪಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬ್ರಹ್ಮಾವರ ತಾಲೂಕು ಇವರ ಆಶ್ರಯದಲ್ಲಿ ವಿಮಾ ಗ್ರಾಮ 2024-25 ಅಂಗವಾಗಿ ಕೋಟದ ಕಾಸನಗುಂದು ಅಂಗನವಾಡಿಗೆ ಸೋಲಾರ್ ದಾರಿದೀಪ ಹಾಗೂ ವಾಟರ್ ಫಿಲ್ಟರ್‌ನ್ನು ಕೊಡುಗೆಯಾಗಿ ನೀಡಿದ್ದು ಅದನ್ನು ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಮಾ ವಿಭಾಗದ ಪ್ರಾದೇಶಿಕ ನಿರ್ದೇಶಕ ಗಣೇಶ ಬಿ. ಲೋಕಾರ್ಪಣೆಗೊಳಿಸಿದರು. ಭಾರತೀಯ ಜೀವವಿಮಾ ಸಂಸ್ಥೆಯ ದಿನೇಶ್ ಪ್ರಭು ಸೋಲಾರ್ ದೀಪವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಮಾ ವಿಭಾಗದ ಯೋಜನಾಧಿಕಾರಿ ಸತೀಶ್, ಕೋಟ ಗ್ರಾಮಪಂಚಾಯತ್ ಮಾಜಿ ಸದಸ್ಯ ಚಂದ್ರ ಪೂಜಾರಿ, ಲೆಕ್ಕಪರಿಶೋಧಕ ಶೇಖರ್, ಸ್ಥಳೀಯ ಕೃಷಿಕ ರಾಘವೇಂದ್ರ ಮಡಿವಾಳ, ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ ಸೇವಾಪ್ರತಿನಿಧಿ ಸರೋಜ ಪೂಜಾರಿ, ಒಕ್ಕೂಟದ ಉಪಾಧ್ಯಕ್ಷೆ ಸ್ಮಿತಾ ರಾಘವೇಂದ್ರ, ಅಂಗನವಾಡಿ ಕಾರ್ಯಕರ್ತೆ ನೇತ್ರಾ, ಸಹಾಯಕಿ ಜಲಜ ಮತ್ತಿತರರು ಉಪಸ್ಥಿತರಿದ್ದರು. ಗ್ರಾ.ಯೋ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಯುವ ಜನಾಂಗ ಸಂಘಟನೆಯ ಮೂಲಕ ಸಮಾಜ ಕಟ್ಟುವ ಕಾಯಕದಲ್ಲಿ ನಿರತರಾಗಿದ್ದಾರೆ ಇದಕ್ಕೆ ಮಣೂರು ಫ್ರೆಂಡ್ಸ್ ಸಾಕ್ಷಿ ಎಂದು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ಹೇಳಿದರು. ಅವರು ಮಣೂರು ಮಹಾಲಿಂಗೇಶ್ವರ ಜಾತ್ರೋತ್ಸವದ ಅಂಗವಾಗಿ ಗೀತಾನಂದ ವೇದಿಕೆಯಲ್ಲಿ ಮಣೂರು ಫ್ರೆಂಡ್ಸ್ ಮಣೂರು ಇದರ ರಜತ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಹಬ್ಬ ಹರಿದಿನಗಳನ್ನು ವೇದಿಕೆಯಾಗಿರಿಸಿಕೊಂಡು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಂಡ ಸಾಧಕರನ್ನು ಗುರುತಿಸುವ ಕಾರ್ಯ ಅತ್ಯಂತ ಪ್ರಶಂಸನೀಯ, ಸಮಾಜದ ಬಗ್ಗೆ ಆಗಾಗ ತುಡಿತ ಹೊಂದಿ ತಮ್ಮೂರ ಅಭಿವೃದ್ಧಿಗೆ ಶ್ರಮಿಸುವ ಸಂಘಟನೆಗಳು ಮತ್ತಷ್ಟು ಹುಟ್ಟಿಕೊಳ್ಳಲಿ ರಜತ ಸಂಭ್ರಮದಲ್ಲಿರುವ ಮಣೂರು ಫ್ರೆಂಡ್ಸ್ ಕಾರ್ಯದಲ್ಲಿ ಸದಾ ಕೈಜೋಡಿಸುವುದಾಗಿ ಅಭಯ ನೀಡಿದರು. ಈ ಸಂದರ್ಭದಲ್ಲಿ ಅಕ್ಷರ ಸಂತ ಡಾ. ಹರೇಕಳ ಹಾಜಬ್ಬ ಅವರಿಗೆ ರಜತ ಸಂಭ್ರಮ ಪುರಸ್ಕಾರ ನೀಡಿ ಗೌರವಿಸಲಾಯಿತು. ಸ್ಥಳೀಯರಾದ ರವೀಂದ್ರ ಪೈ ಅವರಿಗೆ ಸಾಧಕ ಪುರಸ್ಕಾರ, ನಿಧಿ ಪೈಗೆ ಪ್ರತಿಭಾ ಪುರಸ್ಕಾರ, ಸ್ಥಳೀಯ ಸಾಧಕರಾದ ಕಂಬಳ ಕ್ಷೇತ್ರದ ರಘುರಾಮ ಶೆಟ್ಟಿ,ಶಿವರಾಮ…

Read More