ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯು 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ಸಾರ್ವಕಾಲಿಕ ಸಾಧನೆಯೊಂದಿಗೆ 785 ಕೋಟಿ ರೂ. ವ್ಯವಹಾರ ನಡೆಸಿದ್ದು, 1.50 ಕೋಟಿ ರೂ. ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಜಿ. ವೆಂಕಟೇಶ ಶೆಣೈ ತಿಳಿಸಿದ್ದಾರೆ. ಬುಧವಾರ ಸಂಘದ ಅವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಸಹಕಾರಿಯು ಒಟ್ಟು ಮೂರು ಶಾಖೆಗಳ ಮೂಲಕ 104 ಕೋಟಿ ರೂ. ಠೇವಣಿ ಸಂಗ್ರಹಿಸಿದೆ. ಸಾಲ ಮತ್ತು ಮುಂಗಡ 89.44 ಕೋಟಿ ರೂ., ಪಾಲು ಬಂಡವಾಳ 2.76 ಕೋಟಿ ರೂ., ವಿವಿಧ ಸಹಕಾರಿ ಬ್ಯಾಂಕ್‌ಗಳಲ್ಲಿ 30.93 ಕೋಟಿ ರೂ. ಹೂಡಿಕೆ ಮಾಡಲಾಗಿದೆ. ಮೀಸಲು ನಿಧಿ 6.55 ಕೋಟಿ ಮತ್ತು ಅನುತ್ಪಾದಕ ಸಾಲಗಳಿಗೆ 87.37 ಲಕ್ಷ ರೂ. ಮೀಸಲಿರಿಸಲಾಗಿದೆ ಎಂದು ತಿಳಿಸಿದರು. 1920 ರಲ್ಲಿ ಕಾರ್ಯಾರಂಭವಾದ ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಎಲ್ಲ ಶಾಖೆಗಳು ಪ್ರಸ್ತುತ ಗಣಕೀಕೃತಗೊಂಡು ಕೋರ್ ಸಿಸ್ಟಂ ಸಾಫ್ಟ್‌ವೇರ್ ಅಳವಡಿಸಿದೆ. ಕಳೆದ ವರ್ಷ ಸದಸ್ಯರಿಗೆ ಶೇ.17…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರಮಟ್ಟದಲ್ಲಿ ಶಿಕ್ಷಣ, ಕಲೆ, ಸಾಹಿತ್ಯ ಕ್ಷೇತ್ರಗಳಲ್ಲಿ ತನ್ನದೇ ಛಾಪನ್ನು ಮೂಡಿಸಿರುವ ಕಾರ್ಕಳದ ಪ್ರತಿಷ್ಠಿತ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಹೊಸ ಮೈಲುಗಲ್ಲು ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್‌ನ ಆಶ್ರಯದಲ್ಲಿ ಎಳೆಯ ಮನಸ್ಸುಗಳನ್ನು ಒಗ್ಗೂಡಿಸುವ ‘ಕ್ರಿಯೇಟಿವ್ ಚಿಲಿಪಿಲಿ-2026’ ಮೂರು ದಿನಗಳ ಬೇಸಿಗೆ ಶಿಬಿರವು ಉದ್ಘಾಟನೆಗೊಂಡಿತು. ಸಂಸ್ಥೆಯ ಸಹ ಸಂಸ್ಥಾಪಕರಾದ ಅಶ್ವತ್ ಎಸ್ .ಎಲ್. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ನಾಲ್ಕು ಗೋಡೆಗಳ ಮಧ್ಯೆ ನಡೆಯುವ ಪಾಠ ಪ್ರವಚನಗಳ ಜೊತೆಗೆ ಬದುಕಿನ ಮೌಲ್ಯಗಳನ್ನು ಕಲಿಯಬೇಕು. ಮಕ್ಕಳು ತಮ್ಮ ಸುಂದರ ಬಾಲ್ಯವನ್ನು ಮೊಬೈಲ್‌ನಿಂದ ದೂರವಿದ್ದು ತಮ್ಮ ಬದುಕನ್ನು ಸವಿಯಬೇಕೆಂಬ ಸದಾಶಯವನ್ನಿಟ್ಟುಕೊಂಡು ಈ ಚಿಲಿಪಿಲಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತೇವೆ. ಮಾತ್ರವಲ್ಲದೆ ಕ್ರಿಯೇಟಿವ್ ಸಂಸ್ಥೆಯ ಹೊಸ ಪರಿಕಲ್ಪನೆಯಾದ ಎಳೆಯ ಮನಸ್ಸುಗಳಿಗೆ ಮುಂದೆ ಜಾಗತಿಕ ಮಟ್ಟದಲ್ಲಿ ಸ್ಪರ್ಧೆಯನ್ನು ಎದುರಿಸಲು ಮತ್ತು ನಮ್ಮ ಸಂಸ್ಕೃತಿ, ದೇಶಾಭಿಮಾನವನ್ನು ಹೊಂದಲು ಕ್ರಿಯೇಟಿವ್ ಗ್ಲೋಬಲ್ ಸ್ಕೂಲನ್ನು ಪ್ರಾರಂಭಿಸುತ್ತಿದ್ದೇವೆ. ಇದರ ಮೊದಲ ಹೆಜ್ಜೆಯಾಗಿ ಇಂದು ಬೇಸಿಗೆ ಶಿಬಿರವನ್ನು ಹಮ್ಮಿಕೊಂಡಿದ್ದೇವೆ ಎಂದು ನುಡಿದರು. ಸಹ ಸಂಸ್ಥಾಪಕರಲ್ಲಿ ಓರ್ವರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಡೆದ 2026ನೇ ಸಾಲಿನ ‘ಯುವ’ ಅಂತರ್-ಕಾಲೇಜು ಸಾಂಸ್ಕೃತಿಕ ಮತ್ತು ವ್ಯವಹಾರ ನಿರ್ವಹಣೆ ಸ್ಪರ್ಧೆಯಲ್ಲಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ ತಂಡವು ಸಮಗ್ರ ಪುರಸ್ಕಾರವನ್ನು ಗಳಿಸಿದೆ. ನಿಖಿಲ್ ಮತ್ತು ವೇದಾಂತ ಬ್ಯುಸಿನೆಸ್ ಕ್ವಿಜ್‌ನಲ್ಲಿ ಪ್ರಥಮ ಸ್ಥಾನ ಪಡೆದ ತಂಡದ ಸದಸ್ಯರನ್ನು ಸಂಸ್ಥೆಯ ಅಧ್ಯಕ್ಷರಾದ ಬಿ.ಎಮ್. ಸುಕುಮಾರ ಶೆಟ್ಟಿಯವರು, ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ, ಬೋಧಕ-ಬೋಧಕೇತರರು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಪೊಲೀಸ್ ಧ್ವಜ ದಿನಾಚರಣೆ ಪ್ರಯುಕ್ತ ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಪೊಲೀಸ್ ಧ್ವಜ ದಿನಾಚರಣೆಯನ್ನು ಉಡುಪಿಯ ಚಂದು ಮೈದಾನದಲ್ಲಿ ಆಚರಿಸಲಾಯಿತು. ಪೊಲೀಸ್ ಧ್ವಜ ದಿನಾಚರಣೆಯ ಗೌರವ ವಂದನೆಯನ್ನು ಉಡುಪಿ ನಿವೃತ್ತ ಮಹಿಳಾ ಪೊಲೀಸ್ ನಿರೀಕ್ಷಕರಾದ ಸುಜಾತ ಸಾಲಿಯಾನ್ ಅವರು ಸ್ವೀಕಾರ ಮಾಡಿದರು. ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸುಧಾಕರ ಎಸ್ ನಾಯ್ಕ್ ಅವರು ಹಾಜರಿದ್ದರು. ಇದೇ ಸಮಯದಲ್ಲಿ 2025-26ನೇ ಸಾಲಿನಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳಿಂದ ವೈದ್ಯಕೀಯ ಧನ ಸಹಾಯಕ್ಕಾಗಿ ಸ್ವೀಕರಿಸಲಾದ ಅರ್ಜಿಗಳಲ್ಲಿ ರೂ 13,08,050/- ಗಳನ್ನು ವೈದ್ಯಕೀಯ ಧನ ಸಹಾಯವನ್ನು ವಿತರಿಸಲಾಯಿತು. ಪಥಸಂಚಲನದ ನೇತೃತ್ವವನ್ನು ಉಡುಪಿ ಆರ್‌ಪಿಐ, ಡಿಎಆರ್ ರವಿ ಕುಮಾರ್ ಅವರು ವಹಿಸಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಉಡುಪಿ ಡಿಎಆರ್ ಯೋಗೀಶ್ ನಾಯ್ಕ ಅವರು ನಿರ್ವಹಿಸದರು. ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಹಾಗೂ ನಿವೃತ್ತ ಪೊಲೀಸ್ ಅಧಿಕಾರಿ/ಸಿಬ್ಬಂಧಿಗಳು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಯುವಜನರಲ್ಲಿ ಮಾದಕ ದ್ರವ್ಯ ಸೇವನೆಯಿಂದ ಭವಿಷ್ಯದಲ್ಲಿ ಆಗುವ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವುದರೊಂದಿಗೆ ಅವುಗಳಿಂದ ದೂರ ಉಳಿಯುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎನ್.ಸಿ.ಓ.ಆರ್.ಡಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ನಾಲ್ಕನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾದಕ ದ್ರವ್ಯಗಳ ಸೇವೆನೆಯಿಂದ ಮನುಷ್ಯನಲ್ಲಿ ದೈಹಿಕ, ಮಾನಸಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ನಷ್ಟವಾಗುವುದಲ್ಲದೇ ಹಲವಾರು ರೀತಿಯ ಗಂಭೀರ ಕಾಯಿಲೆಗಳು ಉಂಟಾಗುವುದರ ಜೊತೆಗೆ ಮನುಷ್ಯನ ಶಾರೀರಿಕ ಆರೋಗ್ಯದ ಜೊತೆಗೆ ಮಾನಸಿಕ ಅಸಮತೋಲನ ಉಂಟಾಗಿ ಆರೋಗ್ಯ ಹದಗೆಡುತ್ತದೆ. ಮಾದಕ ವ್ಯಸನಗಳಿಂದ ಉಂಟಾಗುವ ದುಷ್ಪರಿಣಾಮದ ಬಗ್ಗೆ ಯುವಜನರಿಗೆ ಅರಿವು ಮೂಡಿಸಬೇಕು. ಶಾಲಾ ಮತ್ತು ಕಾಲೇಜುಗಳಲ್ಲಿ ಮಾದಕ ದ್ರವ್ಯ ಮುಕ್ತ ವಾತಾವರಣವನನ್ನು ಸೃಷ್ಠಿಸಲು ಒತ್ತು ನೀಡಬೇಕು ಎಂದರು. ಜಿಲ್ಲೆಯ ಪ್ರತೀಯೊಂದು ಔಷಧ ಅಂಗಡಿಗಳಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಹಾಲ್ಕಲ್ ಪೆಟ್ರೋಲ್ ಬಂಕ್ ಬಳಿ ಬೈಕ್‌ಗೆ ಮಿನಿಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಸವಾರ ಸಹಿತ ಮೂವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹುಲ್ಲು ಕತ್ತರಿಸುವ ಕೆಲಸ ಮಾಡುವ ಮುದೂರು ನಿವಾಸಿ ಗಣೇಶ ಅವರು ಸ್ನೇಹಿತ ಸತೀಶ್ ಜತೆ ಬೈಕ್ ನಲ್ಲಿ ಹಾಲ್ಕಲ್ ಪೆಟ್ರೋಲ್ ಬಂಕ್ ಗೆ ಪೆಟ್ರೋಲ್ ತರಲು ಮತ್ತೋರ್ವ ಸಹ ಸವಾರ ಧರ್ಮೇಂದ್ರ ಅವರೊಡನೆ ತೆರಳುವ ಸಂದರ್ಭ ಮಿನಿ ಲಾರಿ ನೇರವಾಗಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರ ಗಾಯಗೊಂಡರು. ಗಾಯಳುಗಳಲ್ಲಿ ಸತೀಶ್ ಹಾಗೂ ಧರ್ಮೇಂದ್ರ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕೊಲ್ಲೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಾಸ್ತಾನದಲ್ಲಿ ನಡೆದ ಯುವಕನ ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು 7 ಮಂದಿಯನ್ನು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಕೊಲ್ಲೂರು ಕೆಳಮನೆಯ ದೇವಿ ಪ್ರಸಾದ್ ಶೆಟ್ಟಿ ಯಾನೆ ದೀಕ್ಷಿತ್ (33), ಹಿರಿಯಡ್ಕದ ಸುಜಿತ್ (27), ಕಾಟಿಪಳ್ಳದ ಸುದೀಪ್ (22), ಕೃಷ್ಣಾಪುರ ಶ್ರೀಷಾ ಆನಂದ ಶೆಟ್ಟಿ (35), ಕೈಕಂಬ ಮಿಥುನ್ ಕೈಕಂಬ (20), ಕೆಮ್ಮಣ್ಣು ಸುಹಾಸ್ (31) ಹಾಗೂ ಹೂಡೆ ಮನೋಜ್ ವಿ. ಕೊಟ್ಯಾನ್ (34) ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಸಿದ್ದಾಪುರ ಗ್ರಾಮದ ಮೋಹನ ದಾಸ್ ಶೆಟ್ಟಿ ಅವರ ಪುತ್ರ ತೇಜಸ್ ಎಂಬವರನ್ನು 2025 ನವೆಂಬರ್ 19ರಂದು ಮಧ್ಯಾಹ್ನ ಸಾಸ್ತಾನದ ಕೋಸ್ಟಲ್ ಪ್ಯಾರಡೈಸ್ ಹೋಟೆಲ್ ಎದುರು ಅಪಹರಣ ಮಾಡಲಾಗಿತ್ತು. ಅಪಹರಣಕ್ಕೊಳಗಾದ ಘಟನೆಗೆ ಸಂಬಂಧಿಸಿದಂತೆ ತೇಜಸ್ ಸ್ನೇಹಿತ ಪ್ರಜ್ವಲ್ ಮಧ್ಯಾಹ್ನ ಫೋನ್ ಮೂಲಕ ಮೋಹನ್ ದಾಸ್ ಶೆಟ್ಟಿಯವರಿಗೆ ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ತೆರಳಿದಾಗ ತೇಜಸ್‌ನ ಕಾರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಬೋಧಕ ಮತ್ತು ಬೋಧಕೇತರ ಸಂಘದ ಆಶ್ರಯದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ಅವರಿಗೆ ಬೀಳ್ಕೊಡುಗೆ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾಲೇಜಿನ ಟ್ರಸ್ಟ್‌ನ ಅಧ್ಯಕ್ಷರಾದ ಕೆ. ಜಯಕರ ಶೆಟ್ಟಿ ಕಾಲೇಜಿಗೆ ಪ್ರಾಂಶುಪಾಲರ ಸಹಕಾರ ಮತ್ತು ಪ್ರೋತ್ಸಾಹದ ಬಗ್ಗೆ ಮಾತನಾಡಿ, ಭವಿಷ್ಯದಲ್ಲಿ ಯಶಸ್ಸನ್ನು ಸಾಧಿಸಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಟ್ರಸ್ಟಿ ಸಂಚಾಲಕರಾದ ಅನುಪಮಾ ಎಸ್. ಶೆಟ್ಟಿ ಮಾತನಾಡಿ, ನೀವು ನಮ್ಮ ಸಂಸ್ಥೆಯನ್ನು ಬಿಡುತ್ತಿದ್ದರೂ ನಮ್ಮ ಹೃದಯದಲ್ಲಿ ಸದಾ ಉಳಿಯುತ್ತೀರಿ. ನಿಮ್ಮ ಮುಂದಿನ ಜೀವನದ ಪ್ರತಿಯೊಂದು ಹೆಜ್ಜೆಯೂ ಯಶಸ್ಸಿನಿಂದ ತುಂಬಿರಲಿ ಎಂದು ಶುಭ ಹಾರೈಸುತ್ತಾ ನಿವೃತ್ತಿಯ ಜೀವನ ಸುಖಕರವಾಗಿರಲಿ ಎಂದು ಶುಭ ಕೋರಿದರು. ಕಾಲೇಜಿನ ಟ್ರಸ್ಟಿ ಸದಸ್ಯರಾದ ಸುಭಾಶ್‌ಚಂದ್ರ ಶೆಟ್ಟಿ, ಗಣೇಶ ಕಾಮತ್, ಅರುಣ್ ಕುಮಾರ್ ಶೆಟ್ಟಿ, ಗಣೇಶ ಶೆಟ್ಟಿ ಮೊಳಹಳ್ಳಿ, ಜಿ.ಎಂ. ಚೆರಿಯಬ್ಬ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕಾಲೇಜಿನಿಂದ ಬೀಳ್ಕೊಡುತ್ತಿರುವ 36 ವರ್ಷಗಳ ಸೇವೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಮಾಜದಲ್ಲಿ ನೈರ್ಮಲ್ಯ ಕಾಪಾಡುವಲ್ಲಿ ಅತ್ಯಮೂಲ್ಯ ಶ್ರಮ ವಹಿಸುವ ಸಫಾಯಿ ಕರ್ಮಚಾರಿಗಳ ಆರೋಗ್ಯ ತಪಾಸಣೆಯನ್ನು ಕಾಲಕಾಲಕ್ಕೆ ನಿಯಮಿತವಾಗಿ ನಡೆಸುವುದರೊಂದಿಗೆ ಅವರ ಆರೋಗ್ಯ ರಕ್ಷಣೆಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿಯ ಮೊದಲನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪೌರಕಾರ್ಮಿಕರ ಆರೋಗ್ಯವನ್ನು ಕಾಪಾಡುವ ಹಿತದೃಷ್ಠಿಯಿಂದ ಪೌರಾಡಳಿತದ ನಿರ್ದೇಶನದಂತೆ ಪ್ರತೀ ಮೂರು ತಿಂಗಳಿಗೊಮ್ಮೆ ಆರೋಗ್ತ ತಪಾಸಣೆ ಹಾಗೂ ವರ್ಷಕ್ಕೆ ಒಂದು ಬಾರಿ ಮಾಸ್ಟರ್ ಹೆಲ್ತ್ ಚೆಕ್ ಮಾಡಿಸಬೇಕು. ಸ್ಥಳೀಯ ಸಂಸ್ಥೆಗಳಲ್ಲಿ ಪೌರ ಕಾರ್ಮಿಕರುಗಳಿಗೆ ಆರೋಗ್ಯ ತಪಾಸಣೆ ನಡೆಸುವ ದಿನ ಹಾಗೂ ಸ್ಥಳಗಳ ಬಗ್ಗೆ ಸೂಚನಾ ಫಕಗಳಲ್ಲಿ ಪ್ರದರ್ಶಿಸಬೇಕು ಎಂದರು. ಮಾನ್ಯುಯಲ್ ಸ್ಕ್ಯಾವೆಂಜರ್ಸ್ ಪದ್ಧತಿಗೆ ಈಗಾಗಲೇ ದೇಶಾದ್ಯಂತ ನಿಷೇಧವಿದೆ. ನಗರ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಾನ್ಯುಯಲ್ ಸ್ಕ್ಯಾವೆಂಜರ್ ಅನ್ನು ನೇಮಿಸಿಕೊಂಡು ಕೆಲಸ…
ಕುಂದಾಪ್ರ ಡಾಟ್ ಕಾಂ ಸುದ್ದಿಕೋಟ: ಇಲ್ಲಿನ ಕೋಟದ ಪೇಟೆ ದೇವಸ್ಥಾನ ಎಂದೆ ಪ್ರಸಿದ್ಧ ಪಡೆದಿರುವ ಕೋಟ ವರುಣತೀರ್ಥ ರಾಜಶೇಖರ ದೇವಸ್ಥಾನ ಇದರ ವಾರ್ಷಿಕ ವರ್ಧಂತಿ ಉತ್ಸವ ಬುಧವಾರ ಸಂಪನ್ನಗೊಂಡಿತು. ದೇಗುಲದಲ್ಲಿ ಶತರುದ್ರಾಭಿಷೇಕ, ಕಲಶಾಭಿಷೇಕ, ಮಹಾಮಂಗಳಾರತಿ, ಸಂಜೆ ರಂಗಪೂಜೆ, ದೀಪೋತ್ಸವ , ಕೋಟ ಪಂಚವರ್ಣ ಮಹಿಳಾ ಮಂಡಳ ಭಜನಾ ತಂಡ ಹಾಗೂ ಶಾರದ ಮಹಿಳಾ ಭಜನಾ ಮಂಡಳಿ ಕದ್ರಿಕಟ್ಟು ಇವರಿಂದ ಭಜನಾ ಕಾರ್ಯಕ್ರಮ ಜರಗಿತು. ಧಾರ್ಮಿಕ ವಿಧಿವಿಧಾನಗಳನ್ನು ದೇಗುಲದ ಅಧ್ಯಕ್ಷ ಜಿ. ಪ್ರಭಾಕರ ಅಡಿಗರ ಸಮ್ಮಖದಲ್ಲಿ ವೇ.ಮೂ ಸುಬ್ರಹ್ಮಣ್ಯ ಅಡಿಗರ ನೇತೃತ್ವದ ಜರಗಿದವು. ಅಪರಾಹ್ನ ಅನ್ನಸಂತರ್ಪಣೆ ಭಕ್ತಾಧಿಗಳು ಭಾಗಿಯಾಗಿ ಅನ್ನಪ್ರಸಾದ ಸ್ವೀಕರಿಸಿದರು. ದೇಗುಲದ ಟ್ರಸ್ಟಿಗಳು,ಅರ್ಚಕರು, ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
