ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಬಸ್ರೂರು ಇವರ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಇತ್ತೀಚಿಗೆ ಜರುಗಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕುಂದಾಪುರ ಸರ್ಕಾರಿ ವಿಭಾಗೀಯ ಆಸ್ಪತ್ರೆಯ ಆಪ್ತ ಸಮಾಲೋಚಕರಾದ ನಳಿನಾಕ್ಷೀ ಎಂ. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಎಚ್.ಐ.ವಿ ಸೋಂಕು ಪ್ರಸ್ತುತ ಗುಣಪಡಿಸಲಾಗದ ಕಾರಣ ಏಡ್ಸ್ ಜಾಗೃತಿ ದಿನದ ಅವಶ್ಯಕತೆ ಇದ್ದು ಎಚ್.ಐ.ವಿ ಸೋಂಕಿತರನ್ನು ಸಮಾನವಾಗಿ ಕಾಣುವ ಮೂಲಕ ಸ್ವಾಸ್ತ್ಯ ಆರೋಗ್ಯಯುತ ಸಮಾಜನ್ನು ನಿರ್ಮಾಣ ಮಾಡುವುದರಲ್ಲಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ವಿದ್ಯಾರ್ಥಿಗಳಿಗೆ ಎಚ್.ಐ.ವಿ ಏಡ್ಸ್ ಹರಡುವಿಕೆ, ತಡೆಗಟ್ಟುವಿಕೆ ಮತ್ತು ಮುಂಜಾಗ್ರತ ಕ್ರಮಗಳ ಬಗ್ಗೆ ಮಾಹಿತಿ ಒದಗಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದ ಸಂಯೋಜಕರಾದ ಡಾ. ರವಿಚಂದ್ರ ಸ್ವಾಗತಿಸಿ, ವಿದ್ಯಾರ್ಥಿನಿ ಸಾಕ್ಷಿ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕಿ ಮನವಿ ಕೆ. ವಂದಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಸ್ಸಿ ನರ್ಸಿಂಗ್ ಮತ್ತು ಜಿ.ಎನ್.ಎಂ ನರ್ಸಿಂಗ್ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನ ಸೌಲಭ್ಯ ಪಡೆಯಲು https://sevasindhu.karnataka.gov.in/sevasindhu/departmentservice ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು 2026ರ ಜನವರಿ 31ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ನೆಲ ಮಹಡಿ, ಮೌಲಾನಾ ಅಜಾದ್ ಭವನ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574596 ಅಥವಾ ಕಾರ್ಕಳ ದೂರವಾಣಿ ಸಂಖ್ಯೆ: 08258-231101 ಹಾಗೂ ಕುಂದಾಪುರ ದೂರವಾಣಿ ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಂಘರ್ಷ, ಮನಸ್ತಾಪ, ಕೋಪ, ದ್ವೇಷ ಇವೆಲ್ಲವನ್ನು ಬದುಕಿನಿಂದ ದೂರವಿಟ್ಟು ಪ್ರೀತಿ, ಸೌಹಾರ್ದ, ಸಹಾಯ, ಕಾರುಣ್ಯ ಮತ್ತು ಹಸನ್ಮುಖದಿಂದ ನಡೆಸುವ ಬದುಕು ಸಾರ್ಥಕ ಬದುಕೆಂದು ಕರೆಯಲ್ಪಡುತ್ತದೆ. ಬಾಳಿನಲ್ಲಿ ಕಷ್ಟ-ಕಾರ್ಪಣ್ಯ, ನೋವು-ನಲಿವು, ಆಸೆ-ನಿರಾಸೆ, ಸುಖಃ-ದುಃಖ ಮುಂತಾದ ಏಳು-ಬೀಳುಗಳ ನಡುವೆ ಆಹ್ಲಾದದಿಂದ, ನಾವೆಲ್ಲರೂ ಬದುಕಬೇಕು ಎಂಬೆಲ್ಲಾ ಮೌಲ್ಯಗಳನ್ನು ಸಾಹಿತ್ಯ ಲೋಖದ ಧ್ರುವ ತಾರೆ ಎಸ್.ಎಲ್ ಬೈರಪ್ಪರವರ ಎಲ್ಲಾ ಕೃತಿಗಳಲ್ಲೂ ಹಾಸುಹೊಕ್ಕಾಗಿತ್ತೆಂದು ಮೂಡಬಿದಿರೆ ಆಳ್ವಾಸ್ ಕಾಲೇಜಿನ ಹರೀಶ್ ಟಿ.ಜಿ. ಅಭಿಪ್ರಾಯಪಟ್ಟರು. ಅವರು ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಇಲ್ಲಿನ ಐಕ್ಯೂಎಸಿ ಹಾಗೂ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ಎಸ್.ಎಲ್. ಭೈರಪ್ಪನವರಿಗೆ ನುಡಿ-ನಮನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಈ ನುಡಿಗಳನ್ನಾಡಿದರು ಎಸ್.ಎಲ್. ಭೈರಪ್ಪನವರು ತಮ್ಮ ಆತ್ಮ ವೃತ್ತಾಂತ, ಸಾಹಿತ್ಯ, ಚಿಂತನೆ, ಗ್ರಾಮೀಣ ಸಂಸ್ಕೃತಿ ಮುಂತಾದ ಚಿಂತನಾಶೀಲ ಕೃತಿಗಳಿಂದ ಭಾರತೀಯ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದವರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಡ್ನಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿಶೇಷ ಪ್ರೋತ್ಸಾಹ ಧನ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ 24*7 ಸಹಾಯವಾಣಿ ಸಂಖ್ಯೆ:8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕುಂದಾಪುರ ದೂ.ಸಂಖ್ಯೆ: 08254-23070 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಊರೊಂದು ಸಾಂಸ್ಕೃತಿಕವಾಗಿ ಬೆಳೆಯಬೇಕಾದರೆ ಅಲ್ಲಿರುವ ಸಂಘ ಸಂಸ್ಥೆಗಳು ಹಾಗೂ ಅದರ ಕಾರ್ಯಚಟುವಟಿಕೆಗಳನ್ನು ನೋಡಬೇಕು. ಮಹಾಲಿಂಗೇಶ್ವರ ದೇವಸ್ಥಾನವು ಕೇವಲ ಧಾರ್ಮಿಕ ಶ್ರದ್ದಾ ಕೇಂದ್ರವಾಗಿರದೆ, ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರ ಬಿಂಧುವಾಗಿದ್ದು ಇಲ್ಲಿನ ಕಲಾರಂಗದ ಕಲಾವಿದರು ತಾವು ಬೆಳೆಯುವುದರ ಜೊತೆಗೆ ಕಳೆದ ಎಂಟತ್ತು ವರ್ಷಗಳಿಂದ ತಮ್ಮ ಸುತ್ತಮುತ್ತಲ ಪರಿಸರದ ಸುಮಾರು ಅರವತ್ತಕ್ಕೂ ಮಿಕ್ಕಿ ಮಕ್ಕಳಿಗೆ ಯಕ್ಷ ಶಿಕ್ಷಣ ವನ್ನು ನೀಡುತ್ತಾ ಆ ಮಕ್ಕಳಿಂದ ಪ್ರತಿ ವರ್ಷ ಪ್ರದರ್ಶನವನ್ನು ಏರ್ಪಡಿಸುತ್ತಾ ಬಂದಿರುವುದು ಯಕ್ಷಗಾನ ಕ್ಷೇತ್ರಕ್ಕೆ ಸಲ್ಲಿಸಿದ ಅಭೂತಪೂರ್ವ ಕೊಡುಗೆಯಾಗಿದ್ದು ಇದನ್ನು ಪದಗಳಲ್ಲಿ ಬಣ್ಣಿಸಲಾಗದೆಂದು ಖ್ಯಾತ ಹವ್ಯಾಸಿ ಯಕ್ಷಗಾನ ಕಲಾವಿದ, ಲೇಖಕ ಡಾ. ಪ್ರದೀಪ್ ವಿ. ಸಾಮಗ ಹೇಳಿದರು. ಅವರು ಇತ್ತೀಚೆಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಡ್ಡರ್ಸೆ ಇದರ ದೀಪೋತ್ಸವದ ಪ್ರಯುಕ್ತ ಕಲಾರಂಗದ ಬಾಲ ಕಲಾವಿದರಿಂದ ನಡೆದ ಎಂಟನೇ ವರ್ಷದ ಚಿಣ್ಣರ ಒಡ್ಡೋಲಗ ಯಕ್ಷಗಾನದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಯಕ್ಷಗುರು ದಶಾವತಾರಿ ಪ್ರಸಾದ್ ಕುಮಾರ್ ಮೊಗೆಬೆಟ್ಟು ಅವರು ತಮ್ಮ ನಿರ್ದೇಶನದಲ್ಲಿ ಕಲಾರಂಗದ ಹಿರಿಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಹಾಗೂ ಲಯನ್ಸ್ ಕ್ಲಬ್ ಕುಂದಾಪುರ ಇವರ ಸಹಭಾಗಿತ್ವದಲ್ಲಿ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಕೋಟೇಶ್ವರ ಇಲ್ಲಿನ ಐಕ್ಯೂಎಸಿ, ವಿದ್ಯಾರ್ಥಿ ವೇದಿಕೆ, ಯುವ ರೆಡ್ಕ್ರಾಸ್, ಎನ್.ಎಸ್.ಎಸ್., ರೆಂಜರ್ಸ್ ಮತ್ತು ರೋಜರ್ಸ್ ಘಟಕಗಳ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು. ಭಾರತೀಯ ರೆಡ್ಕ್ರಾಸ್ ಘಟಕದ ಅಧ್ಯಕ್ಷರಾದ ಜಯಕರ ಶೆಟ್ಟಿ ಅವರು ಶಿಬಿರವನ್ನು ಉದ್ಘಾಟಿಸಿ ರಕ್ತದಾನದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಲಯನ್ ರಾಜೀವ್ ಕೋಟ್ಯಾನ್ ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಿವರಾಮ ಶೆಟ್ಟಿ, ಸದಾನಂದ ನಾವಡ, ನಾಗರಾಜ ವೈದ್ಯ ಎಂ., ನಾಗರಾಜ ಯು., ಉಪಸ್ಥಿತರಿದ್ದರು. ರೆಡ್ಕ್ರಾಸ್ ಘಟಕದ ಸಂಚಾಲಕರಾದ ಡಾ. ಚೇತನಾ ಎಂ. ಅತಿಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮವನ್ನು ಸಂಯೋಜಿಸಿದರು. ರೇಜರ್ಸ್ ಸಂಚಾಲಕರಾದ ರೋಹಿಣಿ ಕಾರ್ಯಕ್ರಮವನ್ನು ನಿರೂಪಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತೋಟಕ್ಕೆ ನೀರು ಬಿಡಲು ಹೋದ ವ್ಯಕ್ತಿ ಶವವಾಗಿ ಪತ್ತೆಯಾದ ಘಟನೆ ಬಡಾಕೆರೆಯಲ್ಲಿ ಇತ್ತೀಚಿಗೆ ಸಂಭವಿಸಿದೆ. ಬಡಾಕೆರೆ ಗ್ರಾಮದ ನಿವಾಸಿ ಜಯಶೀಲ ಶೆಟ್ಟಿ (69) ಅವರು ಮೃತಪಟ್ಟವರು. ಕೃಷಿರಾಗಿದ್ದ ಅವರು ಸೋಮವಾರ ಬೆಳಿಗ್ಗೆ ಮನೆಯಿಂದ ತೋಟಕ್ಕೆ ಬಿಡಲೆಂದು ಹೋಗಿದ್ದರು. ಮಧ್ಯಾಹ್ನವಾದರೂ ಮನೆಗೆ ಬಾರದೆ ಇದ್ದಾಗ ಮನೆಯವರು ಹುಡುಕುತ್ತಾ ತೋಟದ ಕಡೆಗೆ ಹೋಗುವಾಗ ಗುಲಾಬಿ ಶೆಡ್ತಿ ಅವರ ತೆಂಗಿನ ತೋಟದಲ್ಲಿರುವ ಕಾಯಿ ಹಾಕುವ ಉಗ್ರಾಣದ ಒಳಗೆ ಗೊಬ್ಬರದ ಚೀಲದ ಬಳಿ ಮಲಗಿದ ಸ್ಥಿತಿಯಲ್ಲಿ ಮೃತಪಟ್ಟಿದ್ದಾರೆ. ಅವರಿಗೆ ಕೆಲವು ವರ್ಷಗಳಿಂದ ರಕ್ತದೊತ್ತಡ ಮತ್ತು ಮಧುಮೇಹ ಕಾಯಿಲೆ ಇರುವುದಾಗಿ ತಿಳಿದು ಬಂದಿದೆ.ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ : ಯಾವುದೇ ಸರಕಾರಕ್ಕೂ ಅಥವಾ ಯಾವುದೇ ಸಂಸ್ಥೆಗಳಿಗೆ ನೂರಕ್ಕೆ ನೂರರಷ್ಟು ಉದ್ಯೋಗ ನೀಡಲು ಸಾಧ್ಯವಿಲ್ಲ. ಬಹಳಷ್ಟು ಮಂದಿಗೆ ಸ್ವಂತ ಉದ್ಯೋಗ ಮಾಡಲು ಅನುಭವದ ಕೊರತೆ ಇದೆ ಎಂದು ಬೈಂದೂರು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸುಧಾಕರ ಆಚಾರ್ಯ ತ್ರಾಸಿ ಹೇಳಿದರು. ಅವರು ಮಂಗಳವಾರ ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಪ್ರವರ್ತಿತ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಮಕ್ಕಳ ಸಂತೆ – ಬ್ಯುಸಿನೆಸ್ ಡೇ ಇದು ಆವಿಷ್ಕಾರವಲ್ಲ, ಗಂಗೊಳ್ಳಿಯ ಜನ್ಮದತ್ತ ಕಲೆಯ ಸಾಕ್ಷಾತ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ಈ ಪ್ರಾಯದಲ್ಲಿ ಸ್ವಂತ ಉದ್ಯೋಗ ಮಾಡುವ ಬಗ್ಗೆ ಮಾಹಿತಿ ಮತ್ತು ಅನುಭವ ದೊರೆತರೆ ಸ್ವಂತ ಉದ್ಯೋಗ ಮಾಡಲು ಸಹಕಾರಿಯಾಗುತ್ತದೆ. ಆರ್ಥಿಕ ಅಭಿವೃದ್ಧಿಗೆ ಊರಿಗೆ, ಸಮಾಜಕ್ಕೆ ದೇಣಿಗೆ, ಪರೋಪಕಾರಿ ಸೇವೆ ಮಾಡಲು ಸ್ವಉದ್ಯೋಗ ಸಹಾಯವಾಗುತ್ತದೆ. ಸರಕಾರಿ ಉದ್ಯೋಗ ಮತ್ತಿತರ ಉದ್ಯೋಗಳಿಗಾಗಿ ಅಲೆದಾಡುವ ಬದಲು ಸ್ವ ಉದ್ಯೋಗದತ್ತ ಗಮನ ಹರಿಸಬೇಕು. ಇದರ ಬಗ್ಗೆ ವಿದ್ಯಾರ್ಥಿಗಳಿಗೆ ಜ್ಞಾನ ಹಾಗೂ ಅನುಭವ ನೀಡುವ ಉದ್ದೇಶದಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಟ್ರೈ ಗ್ರಾಹಕರ ಹಕ್ಕುಗಳನ್ನು ಕಾಪಾಡುವ ಪ್ರಮುಖ ಸಂಸ್ಥೆಯಾಗಿದ್ದು, ಗ್ರಾಹಕರು ತಮ್ಮ ಹಕ್ಕುಗಳನ್ನು ತಿಳಿದುಕೊಂಡು ದೂರು ಸಲ್ಲಿಸಿದರೆ ಉತ್ತಮ ಸೇವೆಗಳನ್ನು ಪಡೆಯಲು ಸಾಧ್ಯವೆಂದು ಕರ್ನಾಟಕದ ಗ್ರಾಹಕ ಮತ್ತು ಸ್ವಯಂ ಸೇವಾ ಸಂಸ್ಥೆಗಳ ಸಂಘಟಿತ ಒಕ್ಕೂಟದ ಮುಖ್ಯ ಪೋಷಕ ಹಾಗೂ ಸ್ಥಾಪಕ ಸೋಮಶೇಖರ್ ವಿ.ಕೆ. ತಿಳಿಸಿದರು. ಅವರು ಆಳ್ವಾಸ್ ಸಂಸ್ಥೆಯ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಕರ್ನಾಟಕದ ಗ್ರಾಹಕ ಮತ್ತು ಸ್ವಯಂಸೇವಾ ಸಂಸ್ಥೆಗಳ ಸಂಘಟಿತ ಒಕ್ಕೂಟ ಹಾಗೂ ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (TRAI) ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಗ್ರಾಹಕರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ದೂರಸಂಪರ್ಕ ಸೇವೆಗಳ ಕುರಿತ ಅನೇಕ ಮಾಹಿತಿಗಳನ್ನು ನೀಡಿದ ಅವರು, ನೆಟ್ವರ್ಕ್ ತೊಂದರೆಗಳು, ನಿಧಾನಗತಿಯ ಇಂಟರ್ನೆಟ್, ಹೆಚ್ಚುವರಿ ಶುಲ್ಕ ವಿಧಿಸುವುದು, ಅನುಮತಿ ಇಲ್ಲದೆ ಸಿಮ್ ಸಕ್ರಿಯಗೊಳ್ಳುವುದು, ಕೆವೈಸಿ (ಏಙಅ) ಸಮಸ್ಯೆಗಳು, ಮೊಬೈಲ್ ನಂಬರ್ ಪೋರ್ಟಿಂಗ್ ವಿಳಂಬವಾದರೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿಸಿದರು. ಗ್ರಾಹಕರಿಗೆ ಟ್ರೈ ನೀಡಿರುವ ಮುಖ್ಯ ಹಕ್ಕುಗಳಾದ ಗುಣಮಟ್ಟದ ಸೇವೆ ಪಡೆಯುವ ಹಕ್ಕು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ ಬ್ರಹ್ಮಾವರ ಇವರ ಆಶ್ರಯದಲ್ಲಿ ಮಹಿಳೆಯರ ಬ್ಯೂಟಿ ಪಾರ್ಲರ್ ತರಬೇತಿಯ ಉದ್ಘಾಟನಾ ಸಮಾರಂಭ ಕಾರ್ಯಕ್ರಮವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬ್ರಹ್ಮಾವರ ಕ್ಯೂಟ್ ಬ್ಯೂಟಿ ಪಾರ್ಲರ್ ಮಾಲಕರು ಹಾಗೂ ಬ್ರಹ್ಮಾವರ ಬ್ಯೂಟಿ ಪಾರ್ಲರ್ ಅಸೋಸಿಯೇಷನ್ ಗೌರವಾಧ್ಯಕ್ಷರಾದ ಸುಜಾತಾ ಅಡ್ಡೆಂತಾಯ, ಅವರು ಮಹಿಳೆಯರ ಬ್ಯೂಟಿ ಪಾರ್ಲರ್ ತರಬೇತಿಯ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಮಹಿಳೆಯರ ತುಂಬಾ ಆಸಕ್ತಿದಾಯಕ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದೀರಿ. ಮಹಿಳೆಯರಿಗೆ ಬಹಳ ಮುಖ್ಯವಾಗಿ ಬಾಹ್ಯ ಸೌಂದರ್ಯದ ಜೊತೆಗೆ ಆಂತರಿಕ ಸೌಂದರ್ಯವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ. ಹಾಗಾಗಿ ಬಹಳ ಬೇಡಿಕೆ ಹಾಗೂ ಆಸಕ್ತಿದಾಯಕ ಉದ್ಯಮ ಇದಾಗಿದೆ. ಅವರು 37 ವರ್ಷಗಳ ಅನುಭವವನ್ನು ಪಡೆದುಕೊಂಡಿರುವುದು, ಅವರ ಉದ್ಯಮದ ಮೇಲಿನ ಆಸಕ್ತಿ ಹಾಗೂ ಶ್ರದ್ಧೆಯನ್ನು ತೋರಿಸುತ್ತದೆ. ಬ್ರಹ್ಮಾವರದಲ್ಲಿ ಪ್ರಥಮ ಬಾರಿಗೆ ಬ್ಯೂಟಿ ಪಾರ್ಲರ್ ಪ್ರಾರಂಭಿಸಿರುವುದು, ಹೆಮ್ಮೆಯ ವಿಷಯವಾಗಿದೆ ಎಂದು ಅವರ ಪ್ರಾರಂಭದ ದಿನಗಳನ್ನು ಮೆಲುಕು ಹಾಕಿದರು. ಹಾಗೆಯೇ ದಿನದಿಂದ ದಿನಕ್ಕೆ ಉದ್ಯಮದಲ್ಲಿ…
