Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದು, 10 ವರ್ಷಗಳ ನಂತರ ಇತ್ತೀಚೆಗಷ್ಟೇ ಪೊಲೀಸರಿಗೆ ಸಿಕ್ಕಿ ಬಿದ್ದ ಆರೋಪಿ ಸಿದ್ದಾಪುರ ಗ್ರಾಮದ ಅಕ್ಕುಂಜೆಯ ಶಶಿಕಾಂತ್ ಶೆಟ್ಟಿ (44) ವಿರುದ್ಧದ ಆರೋಪ ಸಾಬೀತಾಗಿದೆ. ವರದಕ್ಷಿಣೆ ಕಿರುಕುಳಕ್ಕಾಗಿ ಆತನಿಗೆ ಕುಂದಾಪುರ ನ್ಯಾಯಾಲಯವು ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ, ಆದೇಶಿಸಿದೆ. ತಲೆಮರೆಸಿಕೊಂಡಿದ್ದ ಈತನನ್ನು ಮಾ.1 ರಂದು ಪಶ್ಚಿಮ ಬಂಗಾಳದಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದರು. ಪತ್ನಿ ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ► ಕುಂದಾಪುರ: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ ► https://kundapraa.com/?p=96365 .

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಭಾರತ ಸರ್ಕಾರದ ಕರಕುಶಲ ಅಭಿವೃದ್ಧಿ ಹಾಗೂ ಜವಳಿ ಸಚಿವಾಲಯದ ಮಂಗಳೂರು ಆಯುಕ್ತರ ಕಚೇರಿಯಿಂದ ರೂಪುಗೊಂಡ ಯಕ್ಷಗಾನ ಗೊಂಬೆ ಆಟದ ಕುರಿತ ಸಂಶೋಧನಾ ಅಧ್ಯಯನ ವರದಿ ಪುಸ್ತಕ ಅನಾವರಣವು ಬುಧವಾರ ಆಳ್ವಾಸ್ ಕಾಲೇಜಿನಲ್ಲಿ ನೆರವೇರಿತು. ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಜೀವನ್ ರಾಮ್ ಸುಳ್ಯ, ಯಕ್ಷಗಾನ ಗೊಂಬೆ ಆಟವು ಕರಾವಳಿ ಭಾಗದ ಆಕರ್ಷಕ ಕಲೆಯಾಗಿದ್ದು, ಪಪೆಟ್ (ಗೊಂಬೆ)ಗಳ ಮೂಲಕ ಯಕ್ಷಗಾನದ ಕಥಾವಸ್ತುಗಳನ್ನು ಪ್ರದರ್ಶಿಸುವ ಕಲಾರೂಪಕವಾಗಿದೆ. ಈ ಕಲೆ ಪ್ರೇಕ್ಷಕರಿಗೆ ಮನರಂಜನೆಯ ಜೊತೆಗೆ ಸಾಂಸ್ಕೃತಿಕ ಮೌಲ್ಯಗಳನ್ನು ಪರಿಚಯಿಸುವ ಮಹತ್ವದ ಮಾಧ್ಯಮ ಎಂದರು. ಯಕ್ಷಗಾನ ಗೊಂಬೆ ಆಟಕ್ಕೆ ಸುಮಾರು 300 ರಿಂದ 400 ವರ್ಷಗಳ ಇತಿಹಾಸವಿದೆ ಎಂದು ಹೇಳಲಾಗುತ್ತದೆ. ಪುರಾತನ ಕಾಲದಲ್ಲಿ ಜನರಿಗೆ ರಾಮಾಯಣ, ಮಹಾಭಾರತ ಹಾಗೂ ಪುರಾಣಗಳ ಕಥೆಗಳನ್ನು ಸುಲಭವಾಗಿ ತಲುಪಿಸಲು ಈ ಕಲೆಯನ್ನು ಬಳಸಲಾಗುತ್ತಿತ್ತು. ಈ ಗೊಂಬೆಗಳನ್ನು ಸಾಮಾನ್ಯವಾಗಿ ಮರ, ಬಟ್ಟೆ ಮತ್ತು ಚರ್ಮದಿಂದ ತಯಾರಿಸಲಾಗುತ್ತದೆ. ಕಲಾವಿದರು ಬಿದಿರಿನ ಕಡ್ಡಿಗಳ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕೈಗಾರಿಕೆ ಘಟಕಗಳ ಸ್ಥಾಪನೆಯೊಂದಿಗೆ ಸ್ಥಳೀಯ ಜನರಿಗೆ ಉದ್ಯೋಗ ಅವಕಾಶ ಕಲ್ಪಿಸಲು ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿ ಪಡಿಸಿ, ಆಸಕ್ತ ಉದ್ಯಮಿಗಳಿಗೆ ಹಂಚಿಕೆ ಮಾಡಿದ್ದು, ಘಟಕಗಳನ್ನು ನಿಗಧಿತ ಕಾಲಾವಧಿಯ ಒಳಗೆ ಯೋಜನೆಗಳನ್ನು ಪೂರ್ಣಗೊಳಿಸಬೇಕು. ತಪ್ಪಿದ್ದಲ್ಲಿ ಮಂಜೂರಾತಿಯನ್ನು ರದ್ದುಪಡಿಸಿ, ನವ ಉದ್ಯಮಿಗಳಿಗೆ ಹಂಚಿಕೆ ಮಾಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆ ನೀಡಿದರು.  ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ಕೈಗಾರಿಕಾ ಸ್ಪಂದನ, ಜಿಲ್ಲಾ ಮಟ್ಟದ ರಫ್ತು ಉತ್ತೇಜನ ಸಮಿತಿ ಸಭೆ, ಪ್ರಧಾನಮಂತ್ರಿಯವರ ಉದ್ಯೋಗ ಸೃಜನ ಯೋಜನೆಯ ಡಿ.ಎಲ್.ಎಂ.ಸಿ ಸಭೆ ಹಾಗೂ ಪಿ.ಎಂ ವಿಶ್ವಕರ್ಮ ಯೋಜನೆಯ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೈಗಾರಿಕಾ ಪ್ರದೇಶಗಳಲ್ಲಿ ಕೈಗಾರಿಕಾ ಘಟಕ ಸ್ಥಾಪನೆಗೆ ಹೆಚ್ಚಿನ ಕಾಲಾವಕಾಶ ಪಡೆದಿರುವ ಘಟಕಗಳು ನಿಗಧಿತ ಅವಧಿಯಲ್ಲಿ ಯೋಜನೆಯನ್ನು ಪೂರ್ಣಗೊಳಿಸಬೇಕು. ತಪ್ಪಿದ್ದಲ್ಲಿ ಸದ್ರಿರವರಿಗೆ ಮಂಜೂರಾಗಿರುವ ನಿವೇಶನವನ್ನು ರದ್ದುಪಡಿಸಿ, ಹೊಸದಾಗಿ ಅರ್ಜಿ ಸಲ್ಲಿಸಿರುವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಅಖಿಲ ಕರ್ನಾಟಕ ಸೌಂದರ್ಯ ತಜ್ಞರ ಸಂಘ ಉಡುಪಿ ಕುಂದಾಪುರ ವಲಯದ ಮಹಿಳಾ ದಿನಾಚರಣೆಯನ್ನು ಸಾಲಿಗ್ರಾಮದ ಹೊಸ ಬದುಕು ಆಶ್ರಮದಲ್ಲಿ ಅಚರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ವಲಯ ಅಧ್ಯಕ್ಷ ರೇಖಾ.ಆರ್. ಆಚಾರ್ಯ ವಹಿಸಿದ್ದರು. ಆಶ್ರಮದ ನಿವಾಸಿಗಳಿಗೆ ಆಟೋಟ ಸ್ಪರ್ಧೆಯನ್ನು ಏರ್ಪಡಿಸಿ ಬಹುಮಾನ ನೀಡಲಾಯಿತು. ಮುಖ್ಯ ಅಭ್ಯಾಗತರಾಗಿ ಜಿಲ್ಲಾ ಅಧ್ಯಕ್ಷೆ ಸುನಿತಾ ಗಣೇಶ್, ಕಾರ್ಯದರ್ಶಿ ಸಂಧ್ಯಾ ದಿನೇಶ್, ಕೋಶಾಧಿಕಾರಿ ಗೀತಾ ದಯಾನಂದ್, ಸ್ಥಾಪಕ ಕಾರ್ಯದರ್ಶಿ ವೇದಾ ಸುವರ್ಣ, ಜಿಲ್ಲಾ ಕೋರ್ ಕಮಿಟಿ ಸದಸ್ಯರಾದ ದಾಕ್ಷಾಯಿಣಿ ಆಶ್ರಮದ ವ್ಯವಸ್ಥಾಪಕಿ ರಾಜಶ್ರೀ ಹಾಗೂ ಕುಂದಾಪುರ ವಲಯ ಕೋಶಾಧಿಕಾರಿ ಮಾಲತಿ, ಪಿ.ಆರ್. ಓ ಸುನೀತಾ ಶೆಟ್ಟಿ ಹಾಗೂ ಜಿಲ್ಲಾ ಮಾಜಿ ಅಧ್ಯಕ್ಷೆ ಕಿಶ್ವರ್ ಜಹಾನ್, ಬೈಂದೂರು ವಲಯ ಅಧ್ಯಕ್ಷೆ ಭಾರತಿ ಶೆಟ್ಟಿ ಕಾರ್ಯದರ್ಶಿ ಶಾಂತ,ಸಂಘದ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು  ವಲಯ ಕಾರ್ಯದರ್ಶಿ ಪ್ರಮಿಳ ಪುತ್ರನ್ ನಿರೂಪಿಸಿದರು.  ಆಶ್ರಮದ ಮುಖ್ಯಸ್ಥ ವಿನಯಚಂದ್ರ ಕಾರ್ಯಕ್ರಮದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಬಜೆಟ್ ಅಧಿವೇಶನನದಲ್ಲಿ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಡಿ.ಸಿ ಮನ್ನಾ ಭೂ ಮಂಜೂರು ಮಾಡಲು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ  ಸಮುದಾಯದವರು ಆಗ್ರಹ ಪಡಿಸುತ್ತಿರುವ ವಿಚಾರ ಸರಕಾರದ ಗಮನದಲ್ಲಿದೆಯೇ? ಇದ್ದಲ್ಲಿ ಈ ಬಗ್ಗೆ ಈವರೆಗೆ ಕೈಗೊಂಡ ಕ್ರಮವೇನು ಹಾಗೂ ಭೂಮಿಗಳನ್ನು ಅರ್ಹ ಭೂ ರಹಿತರಿಗೆ ನೀಡಲು ಸರಕಾರ ಕೈಗೊಂಡ ಕ್ರಮಗಳ ಕುರಿತು ಪ್ರಶ್ನೆ ಕೇಳಿದ್ದಾರೆ. ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ  ಕಂದಾಯ ಸಚಿವರಾದ ಕೃಷ್ಣ ಬೈರೇ ಗೌಡ ಅವರು  ಕರ್ನಾಟಕ ಭೂ ಮಂಜುರಾತಿ ನಿಯಮ 1969 ರ ನಿಯಮ 5 ರಂತೆ ಶೇಕಡವಾರು 50% ಜಮೀನು ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಿರಿಸಲು ಅವಕಾಶವಿದ್ದು ನಿಯಮ 7 ರಡಿ ಜಮೀನು ಹಂಚಿಕೆ ಮಾಡಲು ಅವಕಾಶವಿರುತ್ತದೆ. ಬಾಕಿ ಉಳಿದಿರುವ ಡಿ.ಸಿ ಮನ್ನಾ ಜಮೀನುಗಳನ್ನು ಅರ್ಹರಿಗೆ ಶೀಘ್ರವಾಗಿ ಹಂಚಿಕೆ ಮಾಡುವ ಉದ್ದೇಶಕ್ಕಾಗಿ ಪರಿಶೀಲಿಸಿ ಪ್ರಸ್ತಾವನೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಮತ್ತು ನ್ಯಾಷನಲ್ ಇನ್ನೋವೇಶನ್ ಫೌಂಡೇಶನ್ ಜಂಟಿಯಾಗಿ ಆಯೋಜಿಸುವ ಇನ್‌ಸ್ಪಾಯರ್‌ ಅವಾರ್ಡ್ ಸ್ಪರ್ಧೆಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಸುಜಯ್  ಕೆ. ಗಾಣಿಗ ಪ್ರದರ್ಶಿಸಿದ್ದ ‘ಸ್ವಯಂಚಾಲಿತ ವಿಸ್ತರಿಸುವ ಕೋಲು ಮಾಡೆಲ್’ ಆಯ್ಕೆಯಾಗಿದೆ. ಈತ ಗಂಗೊಳ್ಳಿಯ ಕೃಷ್ಣ ಗಾಣಿಗ ಹಾಗೂ ಶಾಲಿನಿ ದಂಪತಿಯ ಪುತ್ರ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅಯೋಧ್ಯ ಪಬ್ಲಿಕೇಷನ್ಸ್ ಅವರು ನಡೆಸಿದ ಇಂಗ್ಲೀಷ್ ಒಲಿಂಪಿಯಾಡ್ ಪರೀಕ್ಷೆ – 2026ರಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಅಮೋಘ್ ಎ. ಪೈ ಪ್ರಥಮ ಬಹುಮಾನವನ್ನು ಪಡೆದಿರುತ್ತಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಬಜೆಟ್ ಅಧಿವೇಶನನದಲ್ಲಿ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವುದರಿಂದ ಅಮೃತ್  2.0  ಕುಡಿಯುವ ನೀರಿನ ಯೋಜನೆ ಅನುಷ್ಠಾನ ಸಹಿತ ಕುಡಿಯುವ ನೀರಿನ ಶಾಶ್ವತ ಯೋಜನೆ ಅನುಷ್ಠಾನ ದ ಮೂಲಕ 24/7 ಮಾದರಿಯಲ್ಲಿ ನಾಗರಿಕರಿಗೆ ನೀರು ಪೂರೈಕೆಗೆ ಕ್ರಮ ವಹಿಸಲು ಗಮನ ಸೆಳೆಯುವ ಸೂಚನೆ ಮೂಲಕ ನಿಯಮ 73 ರಡಿ ಸದನದ ಗಮನ ಸೆಳೆದರು. ಇದಕ್ಕೆ ಉತ್ತರಿಸಿದ ನಗರಾಭಿವೃದ್ಧಿ ಸಚಿವರಾದ ಬಿ.ಎಸ್. ಸುರೇಶ್ ಅವರು ಪ್ರಸ್ತುತ ಪಟ್ಟಣಕ್ಕೆ ನದಿ ಮೂಲದಿಂದ ಶಾಶ್ವತವಾದ ನೀರು ಸರಬರಾಜು ಯೋಜನೆ ಇಲ್ಲದಿರುವುದರಿಂದ ಪ್ರಸ್ತುತ ಕೊಳವೆ ಬಾವಿ ಮತ್ತು ತೆರೆದ ಬಾವಿಗಳಿಂದ ಸುಮಾರು 0.60 MLD ಯಷ್ಟು ನೀರು ಸರಬರಾಜು ಮಾಡಲಾಗುತ್ತಿದೆ. ಅಮೃತ್ 2.0 ಯೋಜನೆಯಡಿಯಲ್ಲಿ  ಬೈಂದೂರು ಪಟ್ಟಣಕ್ಕೆ  ರೂ. 47.25 ಕೋಟಿಗಳ ಮೊತ್ತವನ್ನು ನಿಗದಿ ಪಡಿಸಿರುವುರಿಂದ ಲಭ್ಯವಿದ್ದ ಅನುದಾನಕ್ಕೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಆಶ್ರಯದಲ್ಲಿ ಪ್ರಥಮ ವರ್ಷದ ಬಿಬಿಎ ವಿದ್ಯಾರ್ಥಿಗಳಿಗೆ ಪ್ರೊಡಕ್ಷನ್ ಪ್ರೊಸೆಸ್ ಮಾಡೆಲ್ ಮೇಕಿಂಗ್ಸ್ – Prod-vaganza ಸ್ಪರ್ಧೆಯನ್ನು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ವಸ್ತುಗಳ ಉತ್ಪಾದನಾ ಪ್ರಕ್ರಿಯೆ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಹಾಗೂ ಉತ್ಪಾದನಾ ಪ್ರಕ್ರಿಯೆಯ ವಿವಿಧ ಆಯಾಮಗಳ ಮೇಲೆ ಬೆಳಕು ಚೆಲ್ಲುವ ಹಿನ್ನೆಲೆಯಿಂದಾಗಿ ಈ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು.  ಒಟ್ಟು 12 ತಂಡಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ತಮ್ಮ ಆಯ್ಕೆಯ ವಸ್ತುಗಳ ಉತ್ಪಾದನಾ ಪ್ರಕ್ರಿಯೆಗಳ ಕುರಿತು ತಂಡಗಳು ಸವಿಸ್ತಾರವಾಗಿ ಪ್ರಸ್ತುತಪಡಿಸಿದರು.  ಕಾರ್ಯಕ್ರಮದಲ್ಲಿ ಸ್ಪರ್ಧೆಯ ತೀರ್ಪುಗಾರರಾಗಿ ಸತೀಶ್ ಶೆಟ್ಟಿ ಪ್ರಾಧ್ಯಾಪಕರು ವಾಣಿಜ್ಯ ವಿಭಾಗ, ಶ್ರೇಯಸ್ ಪ್ರಾಧ್ಯಾಪಕರು ವಾಣಿಜ್ಯ ವಿಭಾಗ ಹಾಗೂ ಕಾರ್ಯಕ್ರಮದ ಅತಿಥಿ ಮತ್ತು ತೀರ್ಪುಗಾರರಾಗಿ ಪ್ರಾಕ್ತನ ವಿದ್ಯಾರ್ಥಿ ನಿರಂಜನ್ ಶೆಟ್ಟಿ, ಜೊತೆಗೆ ಕಾರ್ಯಕ್ರಮ ಸಂಯೋಜಕರಾದ ಅವಿತಾ ಕೊರಿಯಾ ಪ್ರಾಧ್ಯಾಪಕರು ನಿರ್ವಹಣಾ ವಿಭಾಗ, ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ನಂದಾ ರೈ ಮತ್ತು ನಿರ್ವಹಣಾ ವಿಭಾಗದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ಉಪ್ಪುಂದ ವಲಯದ ವತಿಯಿಂದ ಬಿಜೂರು ಗ್ರಾಮದ ಶ್ರೀ ಮಕ್ಕಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಚಾಂದ್ರಮಾನ ಯುಗಾದಿಯನ್ನು ಆಚರಿಸಲಾಯಿತು. ಪಂಚಾಂಗ ಶ್ರವಣ ಮಾಡಿ ಯುಗಾದಿಯ ಆಚರಣೆಯ ಕುರಿತು ವಿಶೇಷ ಉಪನ್ಯಾನ ನೀಡಿದ ವೇದಮೂರ್ತಿ ಯೋಗೀಶ್ ಭಟ್ ಅವರನ್ನು ಸನ್ಮಾನಿಸಲಾಯಿತು. ವಲಯದ ಮಹಿಳಾ ವೇದಿಕೆಯ ಸದಸ್ಯರು ವಿಷ್ಣು ಸಹಶ್ರನಾಮ ಪಠಿಸಿದರು. ವಲಯಾಧ್ಯಕ್ಷ ಯು. ಸಂದೇಶ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಮಕ್ಕಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮುಕ್ತೇಶ್ವರರಾದ ವೇದಮೂರ್ತಿ ಗುರುರಾಜ್ ಭಟ್, ಕೊಲ್ಲೂರು ಶ್ರೀ ಮುಕಾಂಬಿಕಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ನಾಗರಾಜ ಭಟ್, ದೀಟಿ ಸೀತಾರಾಮ್ ಮಯ್ಯ, ರತ್ನಾಕರ ಉಡುಪ, ಜಗದೀಶ ರಾವ್ ಹೆಚ್, ಗಣೇಶ್ ಮಯ್ಯ, ಯುವ ವೇದಿಕೆಯ ಅಧ್ಯಕ್ಷ ಪದ್ಮನಾಭ ಹೆಬ್ಬಾರ್, ಅರುಣ್ ಶಾನುಭಾಗ್, ಮಹಿಳಾ ವೇದಿಕೆಯ ಅಧ್ಯಕ್ಷೆ ವೀಣಾ ಹೆಬ್ಬಾರ್, ಗುರುರಾಜ್ ಹೆಬ್ಬಾರ್, ಯೋಗೀಶ್ ಕಾರಂತ್ ಮಹಿಳಾ ವೇದಿಕೆಯ ಕಾರ್ಯದರ್ಶಿ ವಿಧ್ಯಾ ಅಡಿಗ ಉಪಸ್ಥಿತರಿದ್ದರು. ವಾರ್ಷಿಕ ಅಧೀವೇಶನದ ಲೆಕ್ಕಾಚಾರವನ್ನು…

Read More