ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ನಡೆದ ವಾರ್ಷಿಕ ವಿಶೇಷ ಶಿಬಿರದಲ್ಲಿ ಯಕ್ಷಗಾನ ವೇಷಭೂಷಣ ತಯಾರಿ ಮತ್ತು ಮುಖವರ್ಣಿಕೆ ಕುರಿತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ಇತ್ತೀಚೆಗೆ ಯಡಾಡಿ-ಮತ್ಯಾಡಿಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಸುಮಾರು 100 ಎನ್.ಎಸ್.ಎಸ್. ಸ್ವಯಂಸೇವಕರು ಯಕ್ಷಗಾನದ ವೇಷ ಭೂಷಣ ತಯಾರಿ ಮತ್ತು ಮುಖವರ್ಣಿಕೆಯ ಬಗ್ಗೆ ಅರಿತುಕೊಂಡರು. ಯಕ್ಷಗಾನ ವೇಷಭೂಷಣ ಮತ್ತು ಮುಖವರ್ಣಿಕೆಯ ಬಗ್ಗೆ ಗಣೇಶ್ ಬಳೆಗಾರ ಜನ್ನಾಡಿ, ಹಿರಿಯ ಯಕ್ಷಗಾನ ವೇಷದಾರಿ ಅಣ್ಣಪ್ಪ ಕುಲಾಲ್ ಜನ್ನಾಡಿ ಮಾಹಿತಿ ನೀಡಿದರು. ಕಾರ್ಯಕ್ರಮವನ್ನು ಕಾಲೇಜಿನ ಆಡಳಿತ ನಿಕಾಯಕರಾದ ರಕ್ಷಿತ್ ರಾವ್ ಗುಜ್ಜಾಡಿ ನಿರ್ವಹಿಸಿದರು. ಶಿಬಿರಾಧಿಕಾರಿಗಳಾದ ರಾಜೇಶ್ ಶೆಟ್ಟಿ ವಕ್ವಾಡಿ ಮತ್ತು ಪೂಜಾ ಕುಂದರ್, ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕರಾದ ಹರೀಶ್ ಕಾಂಚನ್, ಕನ್ನಡ ಪ್ರಾಧ್ಯಾಪಕಿ ಪ್ರವೀಣಾ ಎಮ್. ಪೂಜಾರಿ, ಕುಶ ಪೂಜಾರಿ ಯಡಾಡಿ, ಮಂಜುನಾಥ್ ಮತ್ಯಾಡಿ ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ವಿದ್ಯಾರ್ಥಿಗಳು ಯಾವುದೇ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಮುಖ್ಯ. ಸ್ಪರ್ಧೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಆದರೆ ಅದು ಬಹುದೊಡ್ಡ ಬದುಕಿನ ಪಾಠವನ್ನು ಕಲಿಸುತ್ತದೆ ಎಂದು ಅಮೇರಿಕನ್ ಏರ್ ಲೈನ್ಸ್ ಕಂಟ್ರಿ ಮ್ಯಾನೇಜರ್ ಸಂಧ್ಯಾ ರಾವ್ ಹೇಳಿದರು. ಅವರು ಇಲ್ಲಿನ ಮದರ್ ತೆರೆಸಾ ಶಾಲೆಯಲ್ಲಿ ಇತ್ತೀಚಿಗೆ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರುವ ಸಲುವಾಗಿ ಹಿರಿಯ ಪ್ರಾಥಮಿಕ ವಿಭಾಗದ ಪ್ರತಿಭಾ ಸ್ಪರ್ಧಾ ಕಾರ್ಯಕ್ರಮವು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥರಾಗಿರುವ ಶಮಿತಾ ರಾವ್ ಹಾಗೂ ರೇನಿಟಾ ಲೋಬೋ ಹಾಗೂ ಕಾರ್ಯಕ್ರಮದ ಮುಖ್ಯ ಅತಿಥಿಗಳು, ತೀರ್ಪುಗಾರರೂ ಆಗಿರುವ ಸಂಧ್ಯಾ ರಾವ್( ಕಂಟ್ರಿ ಮ್ಯಾನೇಜರ್ ಅಮೇರಿಕನ್ ಏರ್ ಲೈನ್ಸ್ ) ಯಶ್ ಆರ್ಯನ್ (ರಾಮಯ್ಯ ಯುನಿವರ್ಸಿಟಿ ಇನ್ ಟರ್ನ್ ಇಂಡಿಯಾ ಓಲ್ಡ್ಸ ಟ್ II ಎಸ್.ಸಿ ಯುವ ಲ್ಯಾಬ್) ಹಾಗೂ ಅಲಿಟಾ ಡೇಸಾ (ಸಂಸ್ಕೃತಿ ಮತ್ತು ಭಾಷಾ ಅಭಿವೃದ್ಧಿ ನಿರ್ದೇಶಕರು) ಮತ್ತು ಶಾಲಾ ಮುಖ್ಯೋಪಾಧ್ಯಾಯಿನಿ ಮಮತಾ ಪೂಜಾರಿ ಅವರು ಉಪಸ್ಥಿತರಿದ್ದರು. ಅದೇ ರೀತಿಯಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿ ಇಲ್ಲಿನ ಮೆಸ್ಕಾಂ ಸಿಬ್ಬಂದಿಯೊಬ್ಬರಿಗೆ ಲಕ್ಷಾಂತರ ರೂ. ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ, ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಾವಿ ಮೂಲದ ಪರಶುರಾಮ್ ಲಮಾಣಿ (29) ಎಂಬವರಿಗೆ ಫೆ.18ರಂದು ಅಪರಿಚಿತರು ಕರೆ ಮಾಡಿ, ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ನೀಡುವುದಾಗಿ ತಿಳಿಸಿದರು. ಇದನ್ನು ನಂಬಿದ ಅವರು, ವಿವಿಧ ಹಂತಗಳಲ್ಲಿ ಬೇರೆ ಬೇರೆ ಖಾತೆಗಳಿಗೆ ಒಟ್ಟು 5,39,200ರೂ. ಹಣವನ್ನು ಹೂಡಿಕೆ ಮಾಡಿದ್ದರು. ಆದರೆ ಆರೋಪಿಗಳು ಪರಶುರಾಮ್ ಅವರಿಗೆ ಯಾವುದೇ ಹಣವನ್ನು ನೀಡದೆ ವಂಚಿಸಿರುವುದಾಗಿ ದೂರಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅನುದಾನದ ಅಲಭ್ಯತೆಯ ನಡುವೆಯೂ ಪ್ರಮುಖ ಅವಶ್ಯತೆಗಳಿಗೆ ಅನುದಾನ ಹೊಂದಿಸಿಕೊಡಲಾಗುತ್ತಿದ್ದು ಈ ಭಾಗದ ಮೂಲಭೂತ ಅಭಿವೃದ್ಧಿ ಕಾಮಗಾರಿಗೆ ಸಾಕಷ್ಟು ಒತ್ತು ನೀಡಲಾಗಿದೆ. ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಆಧ್ಯತೆ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಭಾಗದ ಅವಶ್ಯಕ ಕಾಮಗಾರಿಗಳಿಗೆ ಹೆಚ್ಚಿನ ಅನುದಾನ ಒದಗಿಸಿಕೊಡಲಾಗುವುದು ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ವಂಡ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡಿಕೆಕೊಡ್ಲು ರಸ್ತೆ ಕಾಂಕ್ರೇಟಿಕರಣಕ್ಕೆ ಶಾಸಕರ ಅನುದಾನದಲ್ಲಿ ರೂ.11 ಲಕ್ಷ ರೂ. ಮಂಜೂರಾಗಿದ್ದು, ಕಾಂಕ್ರೀಟಿಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ವಿ.ಕೆ. ಶಿವರಾಮ ಶೆಟ್ಟಿ, ಬಿಜೆಪಿ ಮುಖಂಡರಾದ ದೀಪಕಕುಮಾರ್ ಶೆಟ್ಟಿ, ವೆಂಕಟೇಶ ಶೆಟ್ಟಿ ಅಬ್ಬಿ, ನಿರ್ಮಲ ವಂಡ್ಸೆ, ಸ್ಥಳೀಯ ಬೂತ್ ಅಧ್ಯಕ್ಷ ಗಣೇಶ ದೇವಾಡಿಗ, ಪಾರ್ವತಿ ಗಾಣಿಗ, ನಿತಿನ್ ಶೆಟ್ಟಿ, ಮಂಜುನಾಥ ಗಾಣಿಗ, ನಿವೃತ್ತ ಕೃಷಿ ಅಧಿಕಾರಿ ಸುಧಾಕರ ಶೆಟ್ಟಿ, ಚಂದ್ರ ದೇವಾಡಿಗ, ರಾಜೀವ ಶೆಟ್ಟಿ, ಗಿರಿಜಾ ಗಾಣಿಗ, ಗುಲಾಬಿ ಶೆಟ್ಟಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ರೈತಕಾಯಕದಲ್ಲಿ ಹಿರಿಯ ತಲೆಮಾರಿನ ಕೊಡುಗೆ ಅನನ್ಯ ಎಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಣೂರು ಭಾಸ್ಕರ್ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ರೈತಧ್ವನಿ ಸಂಘ ಕೋಟ, ಸ್ನೇಹಕೂಟ ಮಣೂರು ಇವರುಗಳ ಸಹಯೋಗದೊಂದಿಗೆ 52ನೇ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದಲ್ಲಿ ಅಭಿನಂದನಾ ನುಡಿಗಳನ್ನಾಡಿದರು. ಕೃಷಿ ಕ್ಷೇತ್ರದಲ್ಲಿ ದಾರೋಜ್ಜಿಮನೆ ಕುಟುಂಬಿಕರ ಪಾತ್ರ ಅತ್ಯಂತ ಗಣನೀಯ ಪಾತ್ರ ವಹಿಸಿದೆ. ಅದರಲ್ಲೂ ಆನಂದ ಕಾಂಚನ್ ಎಂಬ ಹಿರಿಯ ಕೃಷಿಕರನ್ನು ಪಂಚವರ್ಣದವರು ಗುರುತಿಸಿ ಕಾರ್ಯಕ್ರಮವನ್ನು ಅರ್ಥಪೂರ್ಣಗೊಳಿಸಿದ್ದಾರೆ. ಒಂದು ಸರಕಾರ ಮಾಡಬೇಕಾದ ಕಾರ್ಯವನ್ನು ಪಂಚವರ್ಣ ಸಂಘಟನೆ ರೈತಾಪಿ ವರ್ಗಕ್ಕೆ ಮನೆಯಂಗಳಕ್ಕೆ ತೆರಳು ಪ್ರೋತ್ಸಾಹಿಸುವ ಕಾರ್ಯ ಅದರಲ್ಲೂ ನಿರಂತರವಾಗಿ ಸರಣಿ ಕಾರ್ಯಕ್ರಮದ ರೂಪದಲ್ಲಿ ನಿರ್ವಹಿಸುವುದು ಶ್ರೇಷ್ಠವಾದ ಕಾರ್ಯವಾಗಿದೆ ಎಂದರು. ಗೋ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಹಾಲಾಡಿ ಗ್ರಾಮದ ಹಿಂದೂ ರುದ್ರಭೂಮಿ ಆವರಣದಲ್ಲಿ ಶ್ರಮದಾನ ಆಯೋಜಿಸಲಾಗಿತ್ತು. ಜೆಸಿಐ ಸದಸ್ಯರು ಸ್ಮಶಾನದ ಆವರಣದಲ್ಲಿ ಬೆಳೆದಿದ್ದ ತ್ಯಾಜ್ಯ ಗಿಡಗಳನ್ನು ಕಡಿದು, ಕಟ್ಟಿಗೆಗಳನ್ನು ಕೂಡಿ ಇಟ್ಟರು ಮತ್ತು ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ ಶುಚಿಗೊಳಿದರು. ಜೆಸಿಐ ಹಾಲಾಡಿ ವಾರಾಹಿ ಘಟಕದ ಅಧ್ಯಕ್ಷರಾದ ಪ್ರದೀಪ್ ಹಾಲಾಡಿ ಮಾತನಾಡಿ, ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಪ್ರತಿ ತಿಂಗಳು ಸ್ವಚ್ಛತಾ ಆಂದೋಲನ ಹಮ್ಮಿಕೊಳ್ಳಲಾಗುತ್ತಿದೆ. ಆ ಮೂಲಕ ಸುಂದರ ಪರಿಸರ ನಿರ್ಮಾಣ ಮಾಡಲು ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು. ಜೆಸಿಐ ಉಪಾಧ್ಯಕ್ಷರಾದ ಗುರುಪ್ರಸಾದ್ ಶೆಟ್ಟಿ ಹಾಲಾಡಿ ಮಾತನಾಡಿ, ಜೆಸಿಐ ಹಾಲಾಡಿ ವಾರಾಹಿ ಸ್ವಚ್ಛತಾ ಅಭಿಯಾನದ ಮೂಲಕ ಜಾಗೃತಿ ಮೂಡಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಜೆಸಿಐ ಘಟಕದ ಕಾರ್ಯದರ್ಶಿ ಅಶೋಕ್ ಆಚಾರಿ ಹಾಲಾಡಿ, ಕೋಶಾಧಿಕಾರಿಯಾದ ಮಹೇಶ್ ಹಾಲಾಡಿ, ಪದಾಧಿಕಾರಿಗಳಾದ ಕೃಷ್ಣ ಭಟ್, ನಾಗೇಶ್ ಕಿಣಿ, ರಾಘವೇಂದ್ರ ಕುದ್ರುಬೆಟ್ಟು, ಮಂಜುಳ ಶೆಟ್ಟಿ, ಆಶಾ ಕುಲಾಲ್, ಜೆಸಿಐ ಸದಸ್ಯರು ಪಾಲ್ಗೊಂಡಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರೈತರು ಕೃಷಿ ಚಟುವಟಿಕೆಗಳಿಗೆ ತಮ್ಮ ಜಮೀನಿನ ಮಣ್ಣನ್ನು ಬಳಸಲು ಸಾಗಾಣಿಕೆ ಮಾಡುತ್ತಿರುವಾಗ ತೊಂದರೆ ಆಗುತ್ತಿದೆ ಎಂಬ ದೂರುಗಳು ಬರುತ್ತಿವೆ, ಈ ಸಮಸ್ಯೆಯನ್ನು ಬಗೆಹರಿಸಿ ರೈತರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಕೃಷಿ ಉದ್ದೇಶಕ್ಕಾಗಿ ಮಣ್ಣು ಸಾಗಾಣಿಕೆ ಮಾಡುತ್ತಿರುವಾಗ ಅಡ್ಡಗಟ್ಟುತ್ತಿರುವ ಸಮಸ್ಯೆಯ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಅನೇಕ ವರ್ಷಗಳಿಂದ ರೈತರುಗಳು ತಮ್ಮ ಕೃಷಿ ಚಟುವಟಿಕೆಗಳಿಗೆ ತಮ್ಮ ಖಾಸಗಿ ಜಮೀನುಗಳಿಂದ ಮಣ್ಣುಗಳನ್ನು ಸಾಗಾಟ ಮಾಡಿ ಇನ್ನೊಂದು ಜಮೀನಿಗೆ ಬಳಸುತ್ತಿದ್ದಾರೆ. ಆದರೆ ಇನ್ಯಾವುದೋ ಅನ್ಯ ಉದ್ದೇಶಕ್ಕೆ ಬಳಸುತ್ತಿಲ್ಲ. ನಿಯಮಾನುಸಾರ ಅವರುಗಳಿಗೆ ಸಮಸ್ಯೆ ಉಂಟಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದರು. ಶಾಸಕ ಸುನಿಲ್ ಕುಮಾರ್ ಮಾತನಾಡಿ, ರೈತರು ತಮ್ಮ ಕೃಷಿ ಜಮೀನುಗಳಿಗೆ ಮಣ್ಣು ಸಾಗಾಟ ಮಾಡುತ್ತಿರುವ ಬಗ್ಗೆ ದೂರುಗಳನ್ನು ಕೆಲವರು ತಮ್ಮ ಲಾಭಕ್ಕಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ನಾಗಮಂಡಲೋತ್ಸವ ಇದೇ ಮೊದಲಲ್ಲ ಬದಲಾಗಿ ಕೆಲವರ್ಷಗಳ ಹಿಂದೆ ಅಮೃತೇಶ್ವರೀ ದೇಗುಲ ನಾಗಮಂಡಲೋತ್ಸವ ಯಶಸ್ವಿಯಾಗಿ ಪೂರೈಸಿದೆ ಆದರೆ ಪ್ರಸ್ತುತ ನಾಗಮಂಡಲೋತ್ಸವ ಒಂದು ರೀತಿಯಲ್ಲಿ ಭಕ್ತರ ನಿರ್ವಣೆಯೇ ದೊಡ್ಡ ಸವಾಲಿನ ಕಾರ್ಯ. ಈ ದಿಸೆಯಲ್ಲಿ ಸ್ವಯಂಸೇವಕರ ಪಾತ್ರ ಮಹತ್ವವಾದದ್ದು ಎಂದು ಅಮೃತೇಶ್ವರೀ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಆನಂದ್ ಸಿ. ಕುಂದರ್ ನುಡಿದರು. ಇದೇ ಬರುವ ಮಾಚ್೯ 1ರಂದು ಕೋಟ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕಃ ಪವಿತ್ರ ನಾಗಮಂಡಲೋತ್ಸವ ಇದರ ಪೂರ್ವ ಸಿದ್ಧತಾ ಸಭೆಯಲ್ಲಿ ಮಾಹಿತಿ ನೀಡಿ ಸುಮಾರು 30ಸಾವಿರಕ್ಕೂ ಅಧಿಕ ಭಕ್ತಾಧಿಗಳು ಸೇರುವ ನಿರೀಕ್ಷೆಯಿದ್ದು ಕೋಟದ ಗಾಂಧಿ ಮೈದಾನದಲ್ಲಿ ಊಟೋಪಚಾರ ಹಾಗೂ ನಾಗಮಂಡಲೋತ್ಸವ ನಡೆಯುವ ಸ್ಥಳವಾಗಿದ್ದು ಕೋಟದ ಶಾಂಭವೀ ಶಾಲಾ ಮೈದಾನ, ಕೋಟ ಪೋಲಿಸ್ ಸ್ಟೇಷನ್ ಮೈದಾನ, ಕೋಟದ ಬ್ರಹ್ಮಶ್ರೀ ನಾರಾಯಣಗುರು ಮಂದಿರ ಸ್ಥಳವನ್ನು ಪಾರ್ಕಿಂಗ್ ಸ್ಥಳವಾಗಿ ಗುರುತಿಸಲಾಗಿದೆ. ಜನದಟ್ಟಣೆಯನ್ನು ಸಮರ್ಥವಾಗಿ ಭೋಜನಶಾಲೆಗೆ ಕೊಂಡ್ಯೋಯುವ ಮಾರ್ಗೋಪಾಯಗಳ ಬಗ್ಗೆ ಸಭೆಗೆ ತಿಳಿಸಿದರಲ್ಲದೆ ಅಮೃತೇಶ್ವರೀ ದೇಗುಲದ ಸಂಬಂಧಿಸಿದ ಹದಿನಾಲ್ಕು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಾಧಕರ ಸಾಧನೆ ಕಿರಿಯರಿಗೆ ಪ್ರೇರಣೆಯಾಗಬೇಕು. ಗ್ರಾಮೀಣ ಭಾಗದಲ್ಲಿ ವಿದ್ಯಾಭ್ಯಾಸ ಮಾಡಿ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ ವ್ಯಕ್ತಿಗಳ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಬೇಕು ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು. ಅವರು ಶನಿವಾರ ಬೈಂದೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಗೋಪಾಲಕೃಷ್ಣ ಅಡಿಗ ಸ್ಮಾರಕ ಟ್ರಸ್ಟ್ ರಿ. ಬೆಂಗಳೂರು ಇವರ ಸಹಯೋಗದಲ್ಲಿ ಕವಿ ಗೋಪಾಲಕೃಷ್ಣ ಅಡಿಗರ 108ನೇ ಜನ್ಮ ದಿನೋತ್ಸವದ ಪ್ರಯುಕ್ತ ಅಡಿಗ ಸಂಸ್ಮರಣೆ ಮತ್ತು ಕಾರಂತರ ಕುರಿತು ಉಪನ್ಯಾಸ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪುರಸ್ಕರಿಸಿ ಮಾತನಾಡಿದರು. ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಗಣನಾಥ ಎಕ್ಕಾರು ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಶತಮಾನ ಪೂರೈಸಿದ ಅಡಿಗರು ಕಲಿತ ಮಾಧ್ಯಮಿಕ ಶಾಲೆ ವಿಷಯದ ಕುರಿತು ಶಾಲಾ ಮುಖ್ಯೋಪಾಧ್ಯಾಯ ಗಣಪತಿ ಹೋಬಳಿದಾರ್ ಮಾತನಾಡಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಸಮುದಾಯ ಆರೋಗ್ಯ ನರ್ಸಿಂಗ್ ವಿಭಾಗವು ಫೋರೆನ್ಸಿಕ್ ನರ್ಸಿಂಗ್ ಕುರಿತು ಪ್ರಾದೇಶಿಕ ಸಮ್ಮೇಳನವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು . ಸಮ್ಮೇಳನವು ಔಪಚಾರಿಕ ಉದ್ಘಾಟನಾ ಸಮಾರಂಭದೊಂದಿಗೆ ಪ್ರಾರಂಭವಾಯಿತು. ಈ ಕಾರ್ಯಕ್ರಮವನ್ನು ಮುಖ್ಯ ಅತಿಥಿಯಾಗಿ ಆಗಮಿಸಿದ ಮಾಹೆಯ ಮಣಿಪಾಲ ಕಾಲೇಜ್ ಆಫ್ ನರ್ಸಿಂಗ್‌ನ ಮನೋವೈದ್ಯಶಾಸ್ತ್ರ ನರ್ಸಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ರೆಂಜುಲಾಲ್ ಯೆಶೋಧರನ್ ಅವರು ದೀಪ ಬೆಳಗಿಸಿ ಉದ್ಘಾಟಿಸಿ, ಮಾತನಾಡಿ, ವೈದ್ಯಕೀಯ-ಕಾನೂನು ಪ್ರಕರಣಗಳಲ್ಲಿ ದಾದಿಯರ ನಿರ್ಣಾಯಕ ಪಾತ್ರ, ಸಾಕ್ಷ್ಯ ಸಂರಕ್ಷಣೆ, ಸಂತ್ರಸ್ತರ ಆರೈಕೆ ಮತ್ತು ಕ್ಲಿನಿಕಲ್ ಅಭ್ಯಾಸದಲ್ಲಿ ಕಾನೂನು ಜವಾಬ್ದಾರಿಗಳನ್ನು ಒತ್ತಿ ಹೇಳಿದರು. ಅವರ ಭಾಷಣವು ವಿಧಿವಿಜ್ಞಾನ ನರ್ಸಿಂಗ್‌ನ ವಿಸ್ತರಿಸುತ್ತಿರುವ ವ್ಯಾಪ್ತಿ ಮತ್ತು ಅದರ ಪ್ರಾಯೋಗಿಕ ಪರಿಣಾಮಗಳ ಬಗ್ಗೆ ಅಮೂಲ್ಯವಾದ ಒಳನೋಟಗಳನ್ನು ಒದಗಿಸಿತು. ಕಾರ್ಯಕ್ರಮದಲ್ಲಿ ಐಎಂಜೆ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕರಾದ ಡಾ.ಎಸ್.ಎನ್.ಭಟ್ ಮಾತನಾಡಿ, ಈ ತರಹದ ಸಮ್ಮೇಳನಗಳು ವಿದ್ಯಾರ್ಥಿಗಳ ಹಾಗೂ ಪ್ರಾಧ್ಯಾಪಕರ ಜ್ಞಾನೋನ್ನತಿಗೆ ಸಹಾಯಮಾಡುತ್ತದೆ ಎಂದು ತಿಳಿಸಿದರು. ಸಂಸ್ಥೆಯ ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕರಾದ ಡಾ. ರಾಮಕೃಷ್ಣ…
