ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಜನತಾ ಸಮೂಹ ಸಂಸ್ಥೆಯ ಆವರಣದಲ್ಲಿ ಕೋಟ ಅಮ್ರತೇಶ್ವರಿ ಹಲವು ಮಕ್ಕಳ ತಾಯಿ ದೇವಸ್ಥಾನದ ದಶವತಾರ ಮೇಳದಿಂದ ರಂಗನಾಯಕಿ ಎನ್ನುವ ಯಕ್ಷಗಾನ ಪ್ರದರ್ಶನ ಹಾಗೂ ಅಭಿನಂದನಾ ಸಮಾರಂಭ ಜರಗಿತು. ಮೇಳದ ವ್ಯವಸ್ಥಾಪಕ ಹಾಗೂ ಪ್ರಧಾನ ಕಲಾವಿದರಾದ ಇತ್ತೀಚಿಗೆ ಕರ್ನಾಟಕ ರಾಜ್ಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೋಟ ಸುರೇಶ ಬಂಗೇರ ಅವರನ್ನು ಅಭಿನಂದಿಸಲಾಯಿತು. ಅಭಿನಂದಿಸಿ ಮಾತನಾಡಿದ ಅಮೃತೇಶ್ವರಿ ದೇವಳದ ಧರ್ಮದರ್ಶಿ ಹಾಗೂ ಮೇಳದ ಯಜಮಾನರಾದ ಆನಂದ ಸಿ. ಕುಂದರ್ ಯಕ್ಷಗಾನ ಪರಂಪರೆ ಸಾಂಪ್ರದಾಯಕ ಶೈಲಿಯನ್ನು ನಡುತಿಟ್ಟಿಗೆ ಕೊಡುಗೆ ನೀಡುವಲ್ಲಿ ಸುರೇಶ್ ಬಂಗೇರರ ಪಾತ್ರ ಗಣನೀಯವಾದದ್ದು ಇಂತಹ ಕಲಾವಿದರು ಯಕ್ಷಗಾನ ಕ್ಷೇತ್ರದಲ್ಲಿ ಇನ್ನಷ್ಟು ಕಲಾವಿದರನ್ನು ಸೃಷ್ಠಿಸುವಂತ್ತಾಗಲಿ ಎಂದು ಹಾರೈಸಿದರು. ಜನತಾ ಸಂಸ್ಥೆಯ ನಿರ್ದೇಶಕರಾದ ರಕ್ಷಿತ್ ಎ.ಕುಂದರ್ ಮತ್ತು ವೈಷ್ಣವಿ ಆರ್. ಕುಂದರ್ ದಂಪತಿಗಳನ್ನು ಸೇವೆ ನೀಡಿದ ಪ್ರಯುಕ್ತ ಅಮೃತೇಶ್ವರಿ ದೇವಳದ ಮೇಳದ ಯಜಮಾನರಾದ ಆನಂದ ಸಿ ಕುಂದರ್ ಮತ್ತು ಅವರ ಪತ್ನಿ ಗೀತಾ ಎ ಕುಂದರ್, ವ್ಯವಸ್ಥಾಪನ ಸಮಿತಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐ.ಟಿ.ಐ) ನಲ್ಲಿ ಉಡುಪಿ ಜಿಲ್ಲಾ ಮಟ್ಟದ ಶಿಶಿಕ್ಷ ಮೇಳವನ್ನು ಡಿಸೆಂಬರ್ 15 ರಂದು ಬೆಳಗ್ಗೆ 9 ಗಂಟೆಗೆ ಆಯೋಜಿಸಲಾಗಿದೆ. ಮೇಳದಲ್ಲಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾಭ್ಯಾಸ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದ್ದು, ವೆಬ್‌ಸೈಟ್ https://www.apprenticeshipindia.gov.in/candidate-login ಲಿಂಕ್ ಮೂಲಕ ಹಾಗೂ ಅಭ್ಯರ್ಥಿಗಳಿಗೆ ಶಿಶಿಕ್ಷ ತರಬೇತಿ ನೀಡಲು ಇಚ್ಛಿಸುವ ಕಂಪನಿಗಳು ಹಾಗೂ ಕೈಗಾರಿಕೆಗಳು ಮೇಳದಲ್ಲಿ ಭಾಗವಹಿಸಲು https://www.apprenticeshipindia.gov.in/establishment-registration ಲಿಂಕ್ ಮೂಲಕ ಅಥವಾ ಶಿಶಿಕ್ಷ ಮೇಳ ನಡೆಯುವ ದಿನದಂದು ಸಂಸ್ಥೆಯಲ್ಲಿಯೇ ನೇರವಾಗಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 9980305173 ಮತ್ತು 9900329668 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಕಚೇರಿ ಪ್ರಕಟಣೆ ತಿಳಿಸಿದೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ 2025-26ನೇ ಸಾಲಿನ ವಾರ್ಷಿಕ ಕ್ರೀಡೋತ್ಸವ ಕಾರ್ಯಕ್ರಮವು ಬುಧವಾರದಂದು ಕಾಲೇಜಿನ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯಅತಿಥಿಗಳಾಗಿ ಆಗಮಿಸಿದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಸುಕೇಶ್ ಶೆಟ್ಟಿ ಕ್ರೀಡಾ ದ್ವಜಾರೋಹಣಗೈದು ಶುಭ ಹಾರೈಸಿ ಮಾತನಾಡಿ, ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಆರೋಗ್ಯಕರ ಬೆಳವಣಿಗೆ ಉತ್ತೇಜಿಸುವುದಲ್ಲದೇ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಜಿಲ್ಲಾ, ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಕ್ರೀಡಾಕೂಟದಲ್ಲಿ ಎಲ್ಲರೂ ಗೆಲ್ಲಲು ಸಾಧ್ಯವಿಲ್ಲ ಸೋತವರು ಮುಂದೆ ಕಠಿಣ ಪರಿಶ್ರಮದೊಂದಿಗೆ ವಿಜಯಿಯಾಗಲು ಪ್ರಯತ್ನ ಪಡಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಅನುಪಮ ಎಸ್. ಶೆಟ್ಟಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಶಾರದಾ ವಿದ್ಯಾಸಂಸ್ಥೆಯು ಪ್ರಾರಂಭವಾದ ದಿನದಿಂದ ಕ್ರೀಡೆಗೆ ಉತ್ತೇಜನ ನೀಡುತ್ತಾ ಬಂದಿರುವುದರಿಂದ ರಾಜ್ಯ, ರಾಷ್ಟ್ರ ಮಟ್ಟದ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತಿದ್ದು ಕಠಿಣ ಪರಿಶ್ರಮವೇ ಕ್ರೀಡಾಸ್ಪೂರ್ತಿಗೆ ದಾರಿ ಮಾಡಿಕೊಡುತ್ತದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹ್ಯೂಮನ್ ವ್ಯಾಲ್ಯೂಸ್ & ಪ್ರೊಫೆಷನಲ್ ಎಥಿಕ್ಸ್ ಘಟಕ ಹಾಗೂ ಮಾನವ ಹಕ್ಕುಗಳ ಘಟಕದ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾನವ ಹಕ್ಕು ದಿನಾಚರಣೆಯನ್ನು ಕಾಲೇಜಿನ ಸಭಾಂಗಣದಲ್ಲಿ ಬುಧವಾರ ಆಚರಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಸಹ ಪ್ರಾಧ್ಯಾಪಕರಾದ ಪ್ರವೀಣ್ ಮೊಗವೀರ ಗಂಗೊಳ್ಳಿ ಅವರು ಮಾತನಾಡಿ, ಮಾನವ ಹಕ್ಕುಗಳ ಅರಿವು ಪ್ರತಿಯೊಬ್ಬ ಮನುಷ್ಯನಿಗೂ ಅತ್ಯವಶ್ಯಕ. ವ್ಯಕ್ತಿ ಗೌರವ, ಹಕ್ಕುಗಳು, ಸ್ವಾತಂತ್ರ್ಯ, ಮಾನವೀಯ ಮೌಲ್ಯಗಳು ಮಾನವ ಹಕ್ಕುಗಳ ಪರಿಕಲ್ಪನೆಯಲ್ಲಿ ಅಡಕವಾಗಿದೆ. ಆ ನಿಟ್ಟಿನಲ್ಲಿ ನಾವೆಲ್ಲರೂ ಮಾನವ ಹಕ್ಕುಗಳ ಕುರಿತು ತಿಳಿದು ಬದುಕಬೇಕಾಗಿದೆ ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದ ಇನ್ನೋರ್ವ ಸಂಯೋಜಕರು ಹಾಗೂ ಡೀನ್ ಅಕಾಡೆಮಿಕ್ ಗಿರಿರಾಜ ಭಟ್, ಮಾನವ ಹಕ್ಕುಗಳ ಘಟಕದ ಸಂಯೋಜಕರಾದ ಸುಧೀರ್ ಕುಮಾರ್ ಹಾಗೂ ಶ್ವೇತಾ ಭಂಡಾರಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಸುಜಯ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಪಡುವರಿ ಗ್ರಾಮದ ದೊಂಬೆ ಕೂಲಿಮನೆ ನಿವಾಸಿ ನರಸಿಂಹ ಪೂಜಾರಿ (62) ಅವರು ಬುಧವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಿ.7ರಂದು ಶಿರಸಿಗೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಸ್ ಬಂದಿರಲಿಲ್ಲ. ಹುಡುಕಾಡುವಾಗ ಮನೆ ಸಮೀಪದ ಹಾಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಮೃತರ ಪುತ್ರ ಹರೀಶ್ ಪೂಜಾರಿ ನೀಡಿದ ದೂರಿನಂತೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಅಮಾಸೆಬೈಲು: ವಿಷಪೂರಿತ ಹಾವು ಕಚ್ಚಿ ಮಹಿಳೆ ಮೃತಪಟ್ಟ ಘಟನೆ ಮಡಾಮಕ್ಕಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಮಾಂಡಿ ಮೂರುಕೈ ನಿವಾಸಿ ಜಲಜಾಕ್ಷಿ ಶೆಡ್ತಿ (76) ಮೃತರು. ಮಂಗಳವಾರ ಮಧ್ಯಾಹ್ನ ಮನೆಯಲ್ಲಿ ತಲೆಕೂದಲಿಗೆ ಹಾಕುವ ಚೌರಿ ತೆಗೆಯಲು ಚೀಲಕ್ಕೆ ಕೈ ಹಾಕಿದಾಗ ಅದರಲ್ಲಿದ್ದ ಹಾವು ಕಡಿದಿತ್ತು. ಅಸ್ವಸ್ಥಗೊಂಡಿದ್ದ ಅವರನ್ನು ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋದರು. ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದರು. ಸಹೋದರ ಭಾಸ್ಕರ ಶೆಟ್ಟಿ ನೀಡಿದ ದೂರಿನಂತೆ ಅಮಾಸೆಬೈಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪಂಚಶಕ್ತಿ ಸಂಘ ಕೋಡಿತಲೆ – ಹೊಸಬೆಂಗ್ರೆ ಸಂಘವು 24ನೇ ವರ್ಷಕ್ಕೆ ಪಾದಾರ್ಪಣೆ ಗೈಯುತ್ತಿದ್ದು ಇದರ 2025-26ರ ಸಾಲಿನ ಆಡಳಿತ ಮಂಡಳಿಯ ನೂತನ ಅಧ್ಯಕ್ಷ ಪ್ರವೀಣ್ ಖಾರ್ವಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಅನಿಲ ಖಾರ್ವಿ, ಕಾರ್ಯದರ್ಶಿಯಾಗಿ ಎಸ್. ಸಂದೀಪ ಖಾರ್ವಿ, ಜೊತೆ ಕಾರ್ಯದರ್ಶಿಯಾಗಿ ಸಂದೀಪ ಬಿ. ಖಾರ್ವಿ, ಕೋಶಾಧಿಕಾರಿಯಾಗಿ ಲಕ್ಷ್ಮಣ ಖಾರ್ವಿ ಮತ್ತು ಪದಾಧಿಕಾರಿಗಳಾಗಿ ವಿಕೇಶ್ ಬಂಗೇರ, ಅನಿಶ ಖಾರ್ವಿ ಹಾಗೂ ಸಂದೇಶ ಖಾರ್ವಿ ಆಯ್ಕೆಯಾಗಿದ್ದಾರೆ ಎಂದು ಸಂಘದ ಗೌರವಾಧ್ಯಕ್ಷ ಮಡಿ ವಿಶ್ವನಾಥ ಖಾರ್ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿಯ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ 12 ತಿಂಗಳ ಅಪ್ರೆಂಟಿಸ್ ತರಬೇತಿಗೆ ಅರ್ಹ ಪತ್ರಿಕೋಧ್ಯಮ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಉಡುಪಿ ಜಿಲ್ಲಾ ಕಚೇರಿಗೆ 2025-26 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್‌ಗೆ ತರಬೇತಿ ಅವಧಿಯಲ್ಲಿ ತಿಂಗಳಿಗೆ 15 ಸಾವಿರ ರೂ.ಗಳ ಸ್ಟೈಪಂಡ್ ನೀಡಲಾಗುವುದು. ತರಬೇತಿಯು 2026 ರ ಜನವರಿ ಮಾಹೆಯಿಂದ ಪ್ರಾರಂಭಗೊಂಡು 2026 ರ ಡಿಸೆಂಬರ್ ಗೆ ಕೊನೆಗೊಳ್ಳಲಿದೆ. ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯ. ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು. ಅಭ್ಯರ್ಥಿಗಳ ವಯಸ್ಸು ಅರ್ಜಿ ಸಲ್ಲಿಸಲು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಳಗಾವಿ: ಕಾರ್ಮಿಕ ರಾಜ್ಯ ವಿಮಾ ಚಿಕಿತ್ಸೆ ಒದಗಿಸುವ (ಕಾರ್ಮಿಕ ರಾಜ್ಯ ವಿಮಾ ಯೋಜನೆ) ಸೇವೆಗಳ ಇಲಾಖೆ ಹಾಗೂ ಆಯ್ದ ಖಾಸಗಿ ಆಸ್ಪತ್ರೆಗಳ ಹೊಂದಾಣಿಕೆ (ಟೈ ಅಪ್) ಮಾಡಿಕೊಂಡ ಒಡಂಬಡಿಕೆಯ ಅವಧಿಯು ಈಗಾಗಲೇ ಡಿ.7ರಂದು ಮುಕ್ತಾಯಗೊಂಡಿದ್ದು ರೋಗಿಗಳಿಗೆ ತುಂಬಾ ತೊಂದರೆಯಾಗುತ್ತಿದ್ದು ಖಾಸಗಿ ಆಸ್ಪತ್ರೆಯ ಒಡಂಬಡಿಕೆ ನವೀಕರಣ ಆಗದ ಕಾರಣ ಚಿಕಿತ್ಸೆಯನ್ನು ನೀಡಲು ನಿರಾಕರಿಸುತ್ತಿದ್ದು ವಿಮಾ ಅರ್ಹ ರೋಗಿಗಳು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಬೆಳಗಾವಿಯ ಅಧಿವೇಶನದ ಸಂದರ್ಭದಲ್ಲಿ ರಾಜ್ಯ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರನ್ನು ಭೇಟಿ ಮಾಡಿ ಮಾತನಾಡಿದರು. ಅತಿ ಜರೂರುರಾಗಿ ಕಾರ್ಮಿಕ ರಾಜ್ಯ ವಿಮಾ ಯೋಜನೆ ಸೇವೆಗಳ ಇಲಾಖೆ ಮತ್ತು ಆಯ್ದ ಖಾಸಗಿ ಆಸ್ಪತ್ರೆಗಳ ಹೊಂದಾಣಿಕೆ (ಟೈ ಅಪ್) ಒಡಂಬಡಿಕೆಯನ್ನು ನವೀಕರಿಸಿ ವಿಮಾ ರೋಗಿಗಳಿಗೆ ಅಗತ್ಯ ಚಿಕಿತ್ಸೆಯನ್ನು ಕ್ಲಪ್ತ ಸಮಯದಲ್ಲಿ ನೀಡುವ ಬಗ್ಗೆ ಶಾಸಕರು ಸಚಿವರೊಂದಿಗೆ ಚರ್ಚೆ ನಡೆಸಿ ಕ್ರಮಕೈಗೊಳ್ಳುವಂತೆ ವಿನಂತಿಸಿದ್ದರು. ಸಚಿವರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾಹೇಬರ ಕಟ್ಟೆ ವೃತ್ತಕ್ಕೆ ನೂತನ ದಾರಿದೀಪ ಊರ ದಾನಿಗಳು ಯುವ ಮನಸ್ಸಿನ ಯುವಕರು ಹಾಗೂ ಜನನಿ ಯುವ ಕನ್ನಡ ಸಂಘ ಇವರ ಸಹಕಾರದೊಂದಿಗೆ ಸ್ಥಳೀಯ ಗ್ರಾಮ ಪಂಚಾಯತ್‌ಗಳಾದ ಶಿರಿಯಾರ ಮತ್ತು ಯಡ್ತಾಡಿ ಇವರ ಸಹಭಾಗಿತ್ವದಲ್ಲಿ ಸಾಹೇಬರ ಕಟ್ಟೆ ವೃತ್ತಕ್ಕೆ ನೂತನ ದಾರಿದೀಪ ಅಳವಡಿಕೆ ಮಾಡಿಲಾಗಿದೆ. ಇದರ ಉದ್ಘಾಟನೆಯನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಸ್ವಿಚ್ ಆನ್ ಮಾಡುವುದರ ಮುಖಿನ ಚಾಲನೆ ನೀಡಿ, ಇದಕ್ಕೆ ಸ್ಪಂದಿಸಿದ ದಾನಿಗಳಿಗೂ ಹಾಗೂ ಸಂಘ ಸಂಸ್ಥೆಯ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಈ ವೇಳೆ ಶಿರಿಯಾರ ಗ್ರಾಮ ಪಂಚಾಯಿತಿನ ಅಧ್ಯಕ್ಷರಾದ ಸುಧೀಂದ್ರ ಶೆಟ್ಟಿ, ಯಡ್ತಾಡಿ ಗ್ರಾಮ ಪಂಚಾಯಿತಿನ ಅಧ್ಯಕ್ಷರಾದ ಪ್ರಕಾಶ್ ಸಿ. ಶೆಟ್ಟಿ. ಬಿಜೆಪಿ ಕ್ಷೇತ್ರ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ, ಜನನಿ ಯುವ ಕನ್ನಡ ಸಂಘ ಸಾಹೇಬರ ಕಟ್ಟೆ ಸದಸ್ಯರು, ಊರಿನ ದಾನಿಗಳು, ಎರಡು ಗ್ರಾಮ ಪಂಚಾಯಿತಿನ ಸದಸ್ಯರು…
