Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಸಮುದ್ಯತಾ ಗ್ರೂಪ್ಸ್ ಕೋಟ, ಜೆಸಿಐ ಕೋಟ ಸಿನಿಯರ್ ಲಿಜನ್,ಹಂದಟ್ಟು ಮಹಿಳಾ ಬಳಗದ ಸಹಯೋಗದೊಂದಿಗೆ ತೆಕ್ಕಟ್ಟೆ ಗ್ರಾಮಪಂಚಾಯತ್, ಎಸ್‌ಎಲ್‌ಆರ್‌ಎಂ ಘಟಕ ಇವರ ಸಂಯೋಜನೆಯೊಂದಿಗೆ ಬೀಚ್ ಕ್ಲಿನಿಂಗ್ ಭಾಗವಹಿಸಿ ಬಹುಮಾನ ಗೆಲ್ಲಿ ಎಂಬ ವಿನೂತನವಾಗಿ ಬೀಚ್ ಕ್ಲಿನಿಂಗ್ ಅಭಿಯಾನ ಭಾನವಾರ ತೆಕ್ಕಟ್ಟೆ ಗ್ರಾ.ಪಂ ಕೊಮೆ ಹಮ್ಮಿಕೊಂಡಿತು. ಒಂದು ಹೊಸ ಜಾಗೃತಿ ಮೂಡಿಸುವ ಸಲುವಾಗಿ ಬೀಚ್ ಕ್ಲಿನಿಂಗ್ ನಲ್ಲಿ ಭಾಗಿಯಾಗಿ ಬಹುಮಾನ ಗೆಲ್ಲಿ ಎಂಬ ಹೊಸ ಯೋಜನೆ ಕೈಗೆಟ್ಟುಕುವಂತೆ ಮಾಡಿತು. ಯುವ ಸಮುದಾಯದಲ್ಲಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಬೇಕೆಂಬ ತುಡಿತದೊಂದಿಗೆ ಈ ಯೋಜನೆಯನ್ನು ಪಂಚವರ್ಣ ಸಂಘಟನೆ ಜಾರಿಗೊಳಿಸಿತು. ತೆಕ್ಕಟ್ಟೆ ಹಾಗೂ ಸಮೀಪದ ಕೋಟ ಭಾಗದ ಮಕ್ಕಳು ಸ್ವ ಇಚ್ಛೆಯಿಂದ ಭಾಗಿಯಾಗಿದ್ದು ಪಂಚವರ್ಣ ಸಂಘಟನೆ ನಿರಂತರವಾಗಿ 290 ವಾರಗಳ ಕಾಲ ರಸ್ತೆ ಒಳರಸ್ತೆ, ಬೀಚ್,ದೇಗುಲ ಹೀಗೆ ಹಲವು ಭಾಗಗಳನ್ನು ಸ್ವಚ್ಛಗೊಳಿಸುತ್ತಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಯು ಸಬ್ಸಿಡಿ ದರದಲ್ಲಿ ಮೇಲ್ಛಾವಣಿಗೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ಉಚಿತ ವಿದ್ಯುತ್ ಒದಗಿಸುವುದರ ಜೊತೆಗೆ ವಿದ್ಯುತ್ ಶಕ್ತಿಯ ವೆಚ್ಚವನ್ನು ಗಮನಾರ್ಹವಾಗಿ ಕಡಿಮೆ ಮಾಡಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಯೋಜನೆಯಡಿ ಸೌರ ಶಕ್ತಿಗೆ ಪರಿವರ್ತನೆಯ ಇಂಧನ ಉಳಿಸುವಿಕೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದ ಅವರು, ಮನೆಗಳ ತಮ್ಮ ವಿದ್ಯುತ್ ಬಿಲ್‌ಗಳಲ್ಲಿ ಗಮನಾರ್ಹ ಉಳಿತಾಯದಿಂದ ಪ್ರಯೋಜನ ಪಡೆಯುತ್ತವೆ. ಹೆಚ್ಚುವರಿಯಾಗಿ ಅವರು ತಮ್ಮ ಮೇಲ್ಛಾವಣಿ ಸೌರ ಶಕ್ತಿ ವ್ಯವಸ್ಥೆಗಳಿಂದ ಉತ್ಪಾದಿಸುವ ಹೆಚ್ಚುವರಿ ಶಕ್ತಿಯನ್ನು ಮೆಸ್ಕಾಂಗಳಿಗೆ ಮಾರಾಟ ಮಾಡುವ ಮೂಲಕ ಆದಾಯ ಗಳಿಸುವ ಅವಕಾಶ ಹೊಂದಿರುತ್ತದೆ. ತಿಂಗಳಿಗೆ 3 ಕಿಲೋ ವ್ಯಾಟ್ ಸರಾಸರಿ 300 ಯೂನಿಟ್ ಗಳಿಗಿಂತ ಹೆಚ್ಚು ವಿದ್ಯುತ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ವಿದ್ಯಾ ಸಂಸ್ಥೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳು ಕೊಪ್ಪಳ ಜಿಲ್ಲೆಯಲ್ಲಿ ನಡೆದ 2025-26ನೇ ಸಾಲಿನ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಹೈಸ್ಕೂಲ್ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನಗಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮದರ್ ತೆರೇಸಾ ಶಾಲೆಯ 10ನೇ ತರಗತಿಯ ಉದಯೋನ್ಮುಖ ಪ್ರತಿಭೆಗಳಾದ ಪ್ರೀತಮ್ ಜಿ. ಪೂಜಾರಿ ಹಾಗೂ ರಿಷಿ ಶೆಟ್ಟಿ ಈ ವಿಶೇಷ ಸಾಧನೆ ಮಾಡಿ ರಾಜ್ಯಮಟ್ಟದಲ್ಲಿ ಸಂಸ್ಥೆಗೆ ಹೆಸರು ತಂದಿರುತ್ತಾರೆ. ಈ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಸಂಸ್ಥಾಪಕರಾದ ಶಮಿತಾ ರಾವ್ ಹಾಗೂ ರೆನಿಟಾ ಲೋಬೋ, ಕಾಲೇಜಿನ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಶಾಲಾ ಮುಖ್ಯೋಪಾಧ್ಯಾಯಿನಿ, ಬೋಧಕ ಬೋಧಕೇತರ ಸಿಬ್ಬಂದಿಯವರು ಹರ್ಷ ವ್ಯಕ್ತಪಡಿಸಿ ಅವರ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ತಾಲೂಕು ಸರ್ಕಾರಿ ನೌಕರರ ಸಂಘದ ಸಾಮಾನ್ಯ ಸಭೆಯಲ್ಲಿ ಸಂಘದ ನೂತನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸುಬ್ರಹ್ಮಣ್ಯ ಜಿ ಉಪ್ಪುಂದ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸುಬ್ರಹ್ಮಣ್ಯ ಜಿ ಉಪ್ಪುಂದ ಅವರು ಬೈಂದೂರು ತಾಲೂಕು NPS ನೌಕರ ಸಂಘ, ರೋಟರಿ ಕ್ಲಬ್ ಬೈಂದೂರು ಸೇರಿದಂತೆ ಹಲವು ಸಂಘ ಸಂಸ್ಥೆಗಳಲ್ಲಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಅನುಭವವನ್ನು ಹೊಂದಿರುತ್ತಾರೆ ಇದೇ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘಕ್ಕೆ ನಾಗರಾಜ್ ಶೆಟ್ಟಿ ಪ್ರಾಂಶುಪಾಲರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು, ಕರುಣಾಕರ ಶೆಟ್ಟಿ ಪ್ರೌಢಶಾಲಾ ಶಿಕ್ಷಕರು ನಾವುಂದ, ರಾಘವೇಂದ್ರ ಡಿ ಮುಖ್ಯ ಶಿಕ್ಷಕರು ಹೊಸಬಾಳು, ಶಶಿಧರ್ ಗಾಂವ್ಕರ್ ಮುಖ್ಯ ಶಿಕ್ಷಕರು ಭೇಟಿಯಾಣೆ, ಗಣೇಶ ಮೇಸ್ತ ಗ್ರಾಮ ಆಡಳಿತಾಧಿಕಾರಿ ಕಿರಿಮಂಜೇಶ್ವರ, ಆನಂದ ಬಿಲ್ಲವ ಕಾರ್ಯದರ್ಶಿ ಗ್ರಾಮ ಪಂಚಾಯತ್ ಕಾಲ್ತೋಡು, ಸುಚಿತ್ರ ನರ್ಸಿಂಗ್ ಆಫೀಸರ್ ಕೊಲ್ಲೂರು,ಹೀಗೆ ವಿವಿಧ ಇಲಾಖೆಗಳ ಏಳು ಮಂದಿ ನೌಕರರನ್ನು ನಾಮನಿರ್ದೇಶನ ಸದಸ್ಯರಾಗಿ ಆಯ್ಕೆ ಮಾಡಿ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು. ಹಾಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಕಳೆದ ಹಲವು ಸಮಯಗಳಿಂದ ಗ್ರಾಮಸ್ಥರಿಗೆ ಕಗ್ಗಂಟ್ಟಾಗಿರುವ ಇ. ಸ್ವತ್ತು ಸಮಸ್ಯೆಯನ್ನು ಬಗೆಹರಿಸಿ ಅಲ್ಲದೆ ಪಂಚಾಯತ್ ವ್ಯಾಪ್ತಿಯಲ್ಲಿ ಸರಕಾರದ ವಿವಿಧ ವಸತಿ ಯೋಜನೆಗಳ ಹಣ ಬಿಡುಗಡೆಗೊಳಿಸಿ ಎಂಬ ಕೂಗು ಕೋಟತಟ್ಟು ಗ್ರಾಮಪಂಚಾಯತ್‌ನಲ್ಲಿ ಕೇಳಿಬಂತು. ಶನಿವಾರ ಕೋಟತಟ್ಟು ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ ಸಭಾಭವನದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಇದರ ಜಮಾಬಂದಿ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಭಾಗವಹಿಸಿ ಜಮಾಬಂದಿ ಅಧಿಕಾರಿ ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಬಳಿ ತಮ್ಮ ಅಹವಾಲನ್ನು ತೊಡಿಕೊಂಡರು. ಈ ಬಗ್ಗೆ ಮಾಹಿತಿ ನೀಡಿದ ಬಾಯಲ್ ರವರು ಈ ಹಿಂದೆ ಇದ್ದ ಕೆಲವು ಸಮಸ್ಯೆಗಳನ್ನು ಸರಿಪಡಿಸಲು ಹೊಸ ತಂತ್ರಾಂಶಗಳ ಮೂಲಕ ಈ ಸ್ವತ್ತನ್ನು ಜಾರಿಗೊಳಿಸಲಾಗಿದೆ. ಕೆಲವೆ ತಿಂಗಳುಗಳಲ್ಲಿ ಈ ಸಮಸ್ಯೆ ಬಗೆಹರಿಯಲಿದೆ ಎಂದರಲ್ಲದೆ, ಬಸವ ವಸತಿ ಸೇರಿದಂತೆ ಯಾವಾವ ವಸತಿ ಯೋಜನೆಗಳ ಹಣ ಬಾಕಿ ಇರಿಸಲಾಗಿದೆ ಅದರ ಬಗ್ಗೆ ಸಮಗ್ರ ವರದಿ ನೀಡಿ ಈ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ವಿಕಸಿತ ಭಾರತ ನಿರ್ಮಾಣದ ಮಹಾಸಂಕಲ್ಪ ಸಾಕಾರಗೊಳಿಸಲು ಯುವಜನತೆ ಕೇವಲ ಫಲಾನುಭವಿಗಳಾದರೆ ಸಾಲದು, ರಾಷ್ಟ್ರದ ಭವಿಷ್ಯ ರೂಪಿಸುವ ಶಿಲ್ಪಿಗಳಾಗಬೇಕು ಎಂದು ನವದೆಹಲಿಯ ಸಂಸದೆ ಬಾನ್ಸುರಿ ಸ್ವರಾಜ್ ನುಡಿದರು. ಅವರು ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರೋಸ್ಟ್ರಮ್ ಸ್ಪೀರ್ಸ್‌ ಕ್ಲಬ್‌ನ 2026-27 ಸಾಲಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. “ವಂದೇ ಮಾತರಂ’’ ಘೋಷಣೆಯೊಂದಿಗೆ ಭಾಷಣ ಪ್ರಾರಂಭಿಸಿದ ಅವರು, ವಂದೇ ಮಾತರಂ ಕೇವಲ ದೇಶಭಕ್ತಿಯ ಘೋಷಣೆಯಲ್ಲ, ಅದು ಭಾರತದ ಆತ್ಮಸ್ವರವಾಗಿ ಪ್ರತಿಧ್ವನಿಸಬೇಕು. ಸ್ವಾತಂತ್ರಯ ಸಮರದಲ್ಲಿ ಯುವಶಕ್ತಿಗೆ ಸ್ಪೂರ್ತಿ ತುಂಬಿದ ಈ ಘೋಷಣೆ, ಇಂದಿನ ವಿಕಸಿತ ಭಾರತದ ಪಥದಲ್ಲಿ ಪ್ರೇರಣೆಯ ಮಾರ್ಗಸೂಚಿಯಾಗಬೇಕು ಎಂದು ಅಭಿಪ್ರಾಯಪಟ್ಟರು. 2047ರೊಳಗೆ ವಿಕಸಿತ ಭಾರತ ನಿರ್ಮಾಣವು ಕೇವಲ ಕನಸಲ್ಲ, ಅದು ಸಂಕಲ್ಪ. ಇಂದಿನ ಪೀಳಿಗೆ ಅನುಭವಿಸುತ್ತಿರುವ ಸ್ವಾತಂತ್ರ್ಯ ಹಾಗೂ ಅವಕಾಶಗಳು ಹಿಂದಿನ ತಲೆಮಾರಿನ ತ್ಯಾಗಗಳ ಫಲ. ಅದಕ್ಕೆ ಪ್ರತಿಯಾಗಿ ಯುವಕರು ರಾಷ್ಟ್ರ ನಿರ್ಮಾಣದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು  ಕರೆ ಕೊಟ್ಟರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ಘಟಕಗಳ 2025-26ನೇ ಶೈಕ್ಷಣಿಕ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ ಯಡಾಡಿ-ಮತ್ಯಾಡಿಯ ಶ್ರೀ ವಿನಾಯಕ ಸಭಾಭವನದಲ್ಲಿ ನಡೆಯಿತು. ನಿವೃತ್ತ ಮುಖ್ಯ ಶಿಕ್ಷಕರಾದ ಸುಬ್ಬಣ್ಣ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಶಿಬಿರದ ಮುಖ್ಯ ಪ್ರವರ್ತಕರು ಮತ್ತು ಪ್ರಥಮ ದರ್ಜೆ ಗುತ್ತಿಗೆದಾರರಾದ ಲಯನ್ ಬಿ. ಅರುಣ್ ಕುಮಾರ್ ಹೆಗ್ಡೆ ಶುಭ ಹಾರೈಸಿದರು. ಸುಜ್ಞಾನ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಶುಭಾಶಂಸನೆಗೈದರು. ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾದ ಕೆ.ಸಿ. ರಾಜೇಶ್ ಅವರು ಮಾತನಾಡಿ, ಕೃತಕ ಬುದ್ಧಿಮತ್ತೆ ಚಾಲ್ತಿಯಲ್ಲಿರುವ ಈ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳಲ್ಲಿ ಮನುಷ್ಯ ಸಂವೇದನೆಗಳನ್ನು ಬೆಳೆಸಲು ಇಂತಹ ಎನ್.ಎಸ್.ಎಸ್. ಶಿಬಿರಗಳು ಉಪಯುಕ್ತ. ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ಬದುಕಿಗೆ, ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಈ ಶಿಬಿರ ದಾರಿದೀಪವಾಗಲಿ ಎಂದರು. ಕಾರ್ಯಕ್ರಮದಲ್ಲಿ ಹೊಂಬಾಡಿ-ಮಂಡಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ರಸ್ತೆ ದಾಟುತ್ತಿದ್ದ ಮಹಿಳೆಗೆ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಘಟನೆ ಕೋಟದಲ್ಲಿ ಸಂಭವಿಸಿದೆ. ಮಣೂರು ಬಾಳೆಬೆಟ್ಟು ನಿವಾಸಿ ಉಷಾ ಗಾಣಿಗ (53) ಗಂಭೀರ ಗಾಯಗೊಂಡವರು. ಅವರು ಕೋಟ ಬಸ್ ನಿಲ್ದಾಣದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟಲು ನಿಂತಿದ್ದಾಗ ಕುಂದಾಪುರ ಕಡೆಯಿಂದ ಬ್ರಹ್ಮಾವರ ಕಡೆ ಸಂಚರಿಸುತ್ತಿದ್ದ ಬೈಕ್ ಚಾಲಕ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಬೈಕ್‌ ಚಲಾಯಿಸಿ ಢಿಕ್ಕಿ ಹೊಡೆದಿದ್ದ ಪರಿಣಾಮ ಉಷಾ ಅವರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಜೀವನ್ ಮಿತ್ರ ಆ್ಯಂಬುಲೆನ್ಸ್ ನಲ್ಲಿ ಕೋಟೇಶ್ವರ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತು. ಈ ಬಗ್ಗೆ ಕೋಟ ಪೋಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸೇವೆಯಲ್ಲಿ ಪ್ರಾಮಾಣಿಕತೆ ಜನಸ್ನೇಹಿಯಾದರೆ ಅದೇ ನಿಜವಾದ ಭಗವಂತನ ಸೇವೆ ಎಂದು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಆಡಳಿತ ಮಂಡಳಿಯ ಸದಸ್ಯ ಕೆ. ಅನಂತಪದ್ಮನಾಭ ಐತಾಳ್ ಹೇಳಿದರು. ಅವರು ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಇತ್ತೀಚಿಗೆ ಕೋಟ ಕರ್ಣಾಟಕ ಬ್ಯಾಂಕ್‌ನಿಂದ ಬಡ್ತಿಹೊಂದಿ ಹಾಸನ ಜಿಲ್ಲೆಗೆ ವರ್ಗಾವಣೆಗೊಂಡ ಪಂಚವರ್ಣದ ಸದಸ್ಯ ನಾಗೇಶ್ ಮಯ್ಯ ಮಣೂರು ಅವರಿಗೆ ಅಭಿನಂದನಾ ಸಭೆಯಲ್ಲಿ ಮಾತನಾಡಿದರು. ಯಾವುದೇ ಸಂಸ್ಥೆಯಲ್ಲಿ ಸೇವೆ ಸಲ್ಲಿಸಲಿ ಆದರೆ ಆ ಸಂಸ್ಥೆಯ ಕಾರ್ಯವೈಕರಿ ಜನಸಾಮಾನ್ಯರ ಮನಸ್ಸನ್ನು ಗೆಲುವುದೇ ನಿಜವಾದ ಸೇವೆಯ ಅರ್ಥ, ನಾಗೇಶ್ ಮಯ್ಯರು ಅದೇ ರೀತಿಯಲ್ಲಿ ಕೋಟ ಕರ್ಣಾಟಕ ಬ್ಯಾಂಕ್‌ನಲ್ಲಿ ಜನಮಾನಸದಲ್ಲಿ ಅಚ್ಚಳಿಯದೆ ಉಳಿದುಕೊಂಡಿದ್ದಾರೆ. ಇಂತಹ ಸಿಬ್ಬಂದಿಗಳು ಪ್ರತಿಯೊಂದು ಕ್ಷೇತ್ರದಲ್ಲಿ ಇದ್ದರೆ ಆ ಕ್ಷೇತ್ರಗಳು ಅಭಿವೃದ್ಧಿಗೊಳ್ಳುವುದರಲ್ಲಿ ಅನುಮಾನವೇ ಇಲ್ಲ. ಅವರು ಪಂಚವರ್ಣದ ಸದಸ್ಯರೆಂಬುದನ್ನು ಸೇವೆಯ ಮೂಲಕ ಸಾಬೀತುಪಡಿಸಿದ್ದಾರೆ ಎಂದು ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ಗಣ್ಯರು ನಾಗೇಶ್ ಮಯ್ಯರನ್ನು ಅಭಿನಂದಿಸಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದರ ಜೊತೆಗೆ ಅವರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಲ್ಪೆ ಬೀಚ್ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಕುರಿತು ನಿರ್ಮಿತಿ ಕೇಂದ್ರವು ಯೋಜನಾ ಕಾಮಗಾರಿಗಳ ನೀಲನಕ್ಷೆ ಹಾಗೂ ಅಂದಾಜು ಪಟ್ಟಿಯನ್ನು ಪ್ರಸ್ತುತ ಪಡಿಸಿದ್ದು, ಮಲ್ಪೆಯ ಹಾಲಿ ಇರುವ ಬೀಚ್, ಬೀಚ್ ಉತ್ತರ ಭಾಗದಲ್ಲಿರುವ ಜಾಗವನ್ನು ಸ್ವಾಧೀನಪಡಿಸಿಕೊಂಡು ವಲಯವಾರು ಅಭಿವೃದ್ಧಿ ಪಡಿಸಲು ಒತ್ತು ನೀಡಲಾಗಿದೆ ಹಾಗೂ ಸೈಂಟ್ ಮೇರೀಸ್ ದ್ವೀಪದಲ್ಲಿಯೂ ಅಭಿವೃದ್ಧಿ ಪಡಿಸಲು ಇದರಲ್ಲಿ ಕಲ್ಪಿಸಲಾಗಿದೆ. ಮುಂಬರುವ ದಿನಗಳಲ್ಲಿ ಅನುದಾನದ ಲಭ್ಯತೆಯನ್ನು ಆಧರಿಸಿ ಇಲ್ಲಿನ ಅಭಿವೃದ್ಧಿ ಕಾಮಗಾರಿಗಳನ್ನು ಸುರಕ್ಷತೆಗೆ ಒತ್ತು ನೀಡಲಾಗುವುದು ಎಂದರು. ಪ್ರವಾಸಿಗರು ಬೋಟ್ ಗಳಲ್ಲಿ ಸಂಚರಿಸುವಾಗ ಲೈಫ್ ಜಾಕೆಟ್…

Read More