Author: ಸುನಿಲ್ ಹೆಚ್. ಜಿ. ಬೈಂದೂರು

ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು,ಜೂ.12: ಬೈಂದೂರು, ಯಡ್ತರೆ ಹಾಗೂ ಪಡುವರಿ ಗ್ರಾಮ ಪಂಚಾಯಿತಿಗಳನ್ನು ಸೇರಿಸಿ ಬೈಂದೂರನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾಪಕ್ಕೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಗ್ರೀನ್ ಸಿಗ್ನಲ್ ದೊರೆತಿದೆ. ಬೈಂದೂರನ್ನು ಪಟ್ಟಣ ಪಂಚಾಯಿತಿ ಆಗಿ ಮೇಲ್ದರ್ಗೆಜೇರಿಸುವ ನಗರಾಭಿವೃದ್ಧಿ ಸಚಿವಾಲಯದ ಅಧಿಸೂಚನೆ ಡಿ. 31ರ ವಿಶೇಷ ರಾಜ್ಯಪತ್ರದಲ್ಲಿ ಪ್ರಕಟವಾಗಿತ್ತು. ಅಂತಿಮವಾಗಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಪಟ್ಟಣ ಪಂಚಾಯತಿಗೆ ಅಸ್ತು ಎಂದಿದೆ. ಕುಂದಾಪ್ರ ಡಾಟ್ ಕಾಂ ವರದಿ. ಜನಸಂಖ್ಯೆ, ವಾಣಿಜ್ಯ ಚಟುವಟಿಕೆ ಮಾನದಂಡ: ನೂತನ ಪಟ್ಟಣ ಪಂಚಾಯಿತಿ ಪ್ರದೇಶವು 2011ರ ಜನಗಣತಿಯ ಪ್ರಕಾರ 24,957ಜನಸಂಖ್ಯೆ, 433 ಜನಸಾಂದ್ರತೆ ಮತ್ತು ಶೇ. 55 ಕೃಷಿಯೇತರ ಚಟುವಟಿಕೆಗಳ ಉದ್ಯೋಗ ಹೊಂದಿರುವುದರಿಂದ ಪಟ್ಟಣ ಪಂಚಾಯಿತಿ ಆಗುವ ಅರ್ಹತೆ ಪಡೆದಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿತ್ತು. ಹೊಸ ಪಟ್ಟಣ ಪಂಚಾಯಿತಿಯು 54.24 ಚದರ ಕಿಲೋಮೀಟರು ವ್ಯಾಪ್ತಿ ಹೊಂದಿರುತ್ತದೆ. ಪೂರ್ವಕ್ಕೆ ಪಶ್ಚಿಮ ಘಟ್ಟ ಮತ್ತು…

Read More

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಈ ಭಾರಿ ಲಾಕ್‌ಡೌನ್‌ನಿಂದಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಂದೂಡಲಾಗಿತ್ತು. ಆದರೆ ತನ್ನ ವಿದ್ಯಾರ್ಥಿಗಳ ಕಲಿಕೆಗೆ ತೊಡಕಾಗಬಾರದೆಂಬ ಈ ಶಿಕ್ಷಕನ ಸದಾಶಯ ಮಾತ್ರ ಪೋಸ್ಟ್‌ಪೋನ್ ಆಗಿರಲಿಲ್ಲ. ವಿದ್ಯಾರ್ಥಿಗಳೊಂದಿಗೆ ನಿರಂತರ ಸಂಪರ್ಕದಲ್ಲಿ ಇದ್ದುದಲ್ಲದೇ ಅವರ ಮನೆಗಳಿಗೂ ತೆರಳಿ ಮಾರ್ಗದರ್ಶನ ಮಾಡಿದ್ದ ಹೆಸ್ಕತ್ತೂರು ಪ್ರೌಢಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಬಾಬು ಶೆಟ್ಟಿ ಅವರ ವೃತ್ತಿಪರತೆಗೆ ಶಿಕ್ಷಣ ಸಚಿವರೇ ಭೇಷ್ ಎಂದಿದ್ದಾರೆ. ಲಾಕ್‌ಡೌನ್‌ನಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ: ಹೆಸ್ಕುತ್ತೂರು ಶಾಲೆಯಲ್ಲಿ ಒಟ್ಟು 43 ಮಕ್ಕಳಿದ್ದು, ಲಾಕ್‌ಡೌನ್ ಹಿನ್ನೆಲೆಯಲ್ಲಿ ಶಾಲೆ ರಜೆಯಿದ್ದರೂ ಬಾಬು ಶೆಟ್ಟಿಯವರು ಎಸ್‌ಎಸ್‌ಎಲ್‌ಸಿ ವಿದಾರ್ಥಿಗಳ ಸಂಪರ್ಕದಲ್ಲಿದ್ದು, ಮನೆ ಮನೆಗೆ ತೆರಳಿ ಮಾದರಿ ಪ್ರಶ್ನೆ ಪತ್ರಿಕೆ ನೀಡಿ ಪರೀಕ್ಷೆ ಮಾಡುತ್ತಿದ್ದರು. ಪೋಷಕರಿಂದ ಮಕ್ಕಳ ಶೈಕ್ಷಣಿಕ ಪ್ರಗತಿಯ ಬಗ್ಗೆ ವಿಚಾರಿಸುತ್ತಿದ್ದ ಅವರು ಒಂದೊಂದು ಮಕ್ಕಳ ಮನೆಗೆ ಮೂರ‍್ನಾಲ್ಕು ಬಾರಿ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದ್ದಾರೆ. ಪರೀಕ್ಷೆಯ ಸಮಯದಲ್ಲಿ ಪರಿಪಾಠವನ್ನು ಅವರು ಹಲವು ವರ್ಷದಿಂದ ಮುಂದುವರಿಸುತ್ತಿದ್ದು, ಲಾಕ್‌ಡೌನ್ ಅವಧಿಯಾಗಿದ್ದರಿಂದ ಹೆಚ್ಚಿನ ಸಮಯ ಅದಕ್ಕೆ…

Read More

ಸುನಿಲ್ ಹೆಚ್. ಜಿ. | ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ,ಜೂ.2: ವಿವಿಧ ರಾಜ್ಯ ಹಾಗೂ ದೇಶಗಳಿಂದ ಬಂದು ಸರಕಾರಿ ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದವರ ಕೋವಿಡ್-19 ಪರೀಕ್ಷಾ ವರದಿಗಳು ಈಗ ಬರಲಾರಭಿಸಿದೆ. ಅವುಗಳಲ್ಲಿ ಪಾಸಿಟಿವ್ ಪ್ರಕರಣಗಳು ಏರಿಕೆಯಾಗುತ್ತಿರುವಂತೆ ಜಿಲ್ಲೆಯ ಜನರಲ್ಲಿ ಆತಂಕವೂ ಹೆಚ್ಚುತ್ತಿದೆ. ಕಳೆದೆರಡು ದಿನಗಳಿಂದ ಹೆಚ್ಚಿನ ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿದ್ದು, ಇಂದೂ ಕೂಡ ಗರಿಷ್ಠ ಪ್ರಮಾಣದ ಪಾಸಿಟಿವ್ ಪ್ರಕರಣ ವರದಿಯಾಗುವ ಸೂಚನೆ ದೊರೆತಿದೆ. ಇಲ್ಲಿಯ ತನಕ ಉಡುಪಿ ಜಿಲ್ಲೆಯ ಸುಮಾರು 27 ಕಡೆಗಳಲ್ಲಿ ಸೀಲ್ ಡೌನ್, ಕಂಟೈನ್‌ಮೆಂಟ್ ಝೋನ್ ಮಾಡಲಾಗಿದೆ. ಈ ಪೈಕಿ ಮಂಗಳವಾರ ಬೈಂದೂರು ಹಾಗೂ ಕುಂದಾಪುರ ತಾಲೂಕು 15ಕ್ಕೂ ಹೆಚ್ಚು ಪ್ರದೇಶಗಳನ್ನು ಸೀಲ್‌ಡೌನ್, ಕಂಟೈನ್‌ಮೆಂಟ್ ಝೋನ್ ಮಾಡಲಾಗುತ್ತಿದೆ. ಹೋಮ್ ಕ್ವಾರಂಟೈನ್ ಕಂಟಕ, 6,616 ವರದಿ ಬಾಕಿ: ಉಡುಪಿ ಜಿಲ್ಲೆಯಲ್ಲಿ ಸರಕಾರಿ ಕ್ವಾರಂಟೈನ್ ಮುಗಿಸಿ ಹೋಂ ಕ್ವಾರಂಟೈನಿನಲ್ಲಿ ಇರುವವರಿಗೆ ಪಾಸಿಟಿವ್ ಬರುವ ಪ್ರಕರಣ ಒಂದೆಡೆ ಹೆಚ್ಚುತ್ತಿದ್ದರೇ, ಜಿಲ್ಲೆಯ ಪೊಲೀಸರು ಹಾಗೂ ಇತರರಲ್ಲಿಯೂ ಪಾಸಿಟಿವ್ ಕಾಣಿಸಿಕೊಳ್ಳುತ್ತಿರುವುದರಿಂದ ಸಮುದಾಯಕ್ಕೂ ಹರಡುತ್ತಿರುವ ಭೀತಿ…

Read More

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ಆ ಊರಲ್ಲಿ ಒಂದೆಡೆ ಉಪ್ಪು ನೀರಿನ ಸಮಸ್ಯೆ, ಜೊತೆಗೆ ಹೆಚ್ಚುತ್ತಿರುವ ಬೇಸಿಗೆಯ ಕಾವು. ಕುಡಿಯುವ ನೀರಿಗಾಗಿ ನಿತ್ಯವೂ ಪರದಾಡುವ ಸ್ಥಿತಿ. ಹೀಗಿರುವಾಗಲೇ ಗ್ರಾಮದ ಜನರ ಸಂಕಟ ಅರಿತು ಸ್ಪಂದಿಸಿದವರು ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ಮ್ಯಾನೆಜಿಂಗ್ ಟ್ರಸ್ಟೀ, ಉದ್ಯಮಿ ಗೋವಿಂದ ಬಾಬು ಪೂಜಾರಿ. ಬಿಜೂರು ಗ್ರಾಮದ 3 ಹಾಗೂ 4ನೇ ವಾರ್ಡ್ ವ್ಯಾಪ್ತಿಯ ಗರಡಿ, ನಿಸರ್ಗಕೇರಿ, ಕಳಿಸಾಲು ಸೇರಿದಂತೆ ಹಲವು ಭಾಗಗಳಲ್ಲಿ ವರ್ಷಪೂರ್ತಿ ನೀರಿನ ಸಮಸ್ಯೆ ಇದ್ದೇ ಇದೆ. ಗ್ರಾಮ ಪಂಚಾಯತಿಯಿಂದ ನಳ್ಳಿ ನೀರಿನ ವ್ಯವಸ್ಥೆ ಮಾಡಲಾಗಿದ್ದರೂ ಸದ್ಯ ಬಾವಿಯಲ್ಲಿ ನೀರು ಬತ್ತಿ ಹೋಗಿರುವುದರಿಂದ ಅದನ್ನು ನಿಲ್ಲಿಸಲಾಗಿತ್ತು. ಪಂಚಾಯತ್‌ನಿಂದ ಎರಡು ದಿನಗಳಿಗೊಮ್ಮೆ ಟ್ಯಾಂಕರ್ ನೀರು ಇನ್ನಷ್ಟೇ ಪೂರೈಕೆಯಾಗಬೇಕಿತ್ತು. ಈ ನಡುವೆಯೇ ತನ್ನೂರಿನ ಜನರಿಗೆ ಜಲದಾತವಾಗಿ ಬಂದವರು ಗೋವಿಂದ ಬಾಬು ಪೂಜಾರಿ. ಅವರ ಈ ತಕ್ಷಣದ ಸ್ಪಂದನೆಯಿಂದಾಗಿ ಆ ಭಾಗದ ಜನರಿಗೆ ಕುಡಿಯುವ ನೀರಿನ ಸಮಸ್ಯೆಯಿಂದ ತಾತ್ಕಾಲಿಕ ಮುಕ್ತಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಹಾಗೂ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೊರೋನಾ ವೈರಸ್ ಹರಡುವಿಕೆ ತಡೆಗಟ್ಟಲು ಕೈಗೊಂಡಿರುವ ಕ್ರಮಗಳು ಹಾಗೂ ಅನುಸರಿಸಬೇಕಾದ ಮುಂಜಾಗೃತಾ ಕ್ರಮಗಳ ಬಗ್ಗೆ ಶನಿವಾರ ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ರಾಜ್ಯ ಮುಜರಾಯಿ, ಬಂದರು ಹಾಗೂ ಒಳನಾಡು ಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಯಿತು.   ಈ ಸಂದರ್ಭ ಅವರು ಅಧಿಕಾರಿಗಳಿಂದ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಮಾಹಿತಿ ಪಡೆದುಕೊಂಡರು. ಮಳೆಗಾಲ ಆರಂಭವಾಗುವ ಹಿನ್ನೆಲೆಯಲ್ಲಿ ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ವಿನಾಯಿತಿ. ಈಗಾಗಲೇ ಬೆಳೆದಿರುವ ಬೆಳೆಗಳ ಸಾಗಾಟಕ್ಕೂ ಯಾವುದೇ ಅಡ್ಡಿಪಡಿಸದಿರುವುದು, ತಾಲೂಕಿನಲ್ಲಿ ರಾಜ್ಯ ಸರಕಾರದ ಆದೇಶದಂತೆ ಅಗತ್ಯವಿರುವ ಎಪಿಎಲ್ ಕುಟುಂಬಗಳಿಗೂ ಅಕ್ಕಿ ನೀಡುವುದು. ವಲಸೆ ಕಾರ್ಮಿಕರಿಗೆ ಊಟ ವಸತಿ, ಕಟ್ಟಡ ಹಾಗೂ ಇತರೆ ಕಾರ್ಮಿಕರಿಗೆ ಸರಕಾರದಿಂದ ದೊರೆಯಬೇಕಾದ ಸವಲತ್ತುಗಳು ಶೀಘ್ರ ದೊರೆಯುವಂತೆ ಮಾಡುವುದು, ಭದ್ರತೆಗೆ ಒತ್ತು ನೀಡುವುದು ಹಾಗೂ ವಿನಾಯಿತಿ ಇರುವಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಕಾರ್ಯನಿರ್ವಹಿಸುವುದು ಸೇರಿದಂತೆ ಹಲವು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ,ಎ.18: ಉಡುಪಿ ಜಿಲ್ಲೆ ಸದ್ಯ ಕೊರೋನಾ ಮುಕ್ತ ಜಿಲ್ಲೆ ಎಂದೆನಿಸಿಕೊಂಡಿದೆ. ಈವರೆಗೆ ವರದಿಯಾಗಿದ್ದ 3 ಕೊರೋನಾ ವೈರಸ್ ಸೋಂಕಿತರು ಗುಣಮುಖರಾಗಿದ್ದಾರೆ. ಮೂರನೇ ವ್ಯಕ್ತಿಯು (ಪಿ-83) ಶನಿವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಯಾವುದೇ ಹೊಸ ಸಕ್ರಿಯ ಪ್ರಕರಣ ಈವರೆಗೆ ದಾಖಲಾಗಿಲ್ಲ. ಮಾ. 24ರಂದು ಕೇರಳದಿಂದ ಆಗಮಿಸಿದ್ದ ಉಡುಪಿ ಮೂಲದ 29 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಆತನ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಆ ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದ್ದರಿಂದ ಆತನನ್ನು ಉಡುಪಿಯ ಟಿ.ಎಂ.ಎ ಪೈ ಕೋವಿಡ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿತ್ತು. ಆ ಬಳಿಕದ ಎರಡು ವರದಿಯಲ್ಲಿ ನೆಗೆಟಿವ್ ವರದಿ ಬಂದಿದ್ದರಿಂದ ಶನಿವಾರ ಮಧ್ಯಾಹ್ನ ಆ ವ್ಯಕ್ತಿಯನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಬಿಡುಗಡೆ ಬಳಿಕವೂ 14ದಿನಗಳ ಕಾಲ ಹೋಮ್ ಕ್ವಾರೆಂಟೈನ್‌ನಲ್ಲಿ ಇರುವಂತೆ ಜಿಲ್ಲಾ ಆರೋಗ್ಯಾಧಿಕಾರಿ ಡಾ| ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ. ಜಿಲ್ಲೆಗೆ ದುಬೈನಿಂದ ಬಂದಿದ್ದ ಕೊರೋನಾ ಸೋಂಕಿತ ಮೊದಲು ಹಾಗೂ ಎರಡನೇ ವ್ಯಕ್ತಿಗಳು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಲಾವಣ್ಯ ರಿ. ಬೈಂದೂರು ಸಂಸ್ಥೆಯ ೪೩ನೇ ವಾರ್ಷಿಕೋತ್ಸವ ಹಾಗೂ ದಿ. ಬಿ. ಮಾಧವ ರಾವ್ ಸ್ಮರಣಾರ್ಥ ರಂಗಮಾಧವ ನಾಟಕೋತ್ಸವ ಫೆಬ್ರವರಿ 29ರಿಂದ ಮೂರು ದಿನಗಳ ಕಾಲ ಬೈಂದೂರಿನ ಶಾರದಾ ವೇದಿಕೆಯಲ್ಲಿ ಪ್ರತಿದಿನ ಸಂಜೆ 6:30ಕ್ಕೆ ಜರುಗಲಿದೆ. ಫೆಬ್ರವರಿ 29ರಂದು ಬಾರ್ಕೂರು ಶ್ರೀ ಏಕನಾಥೇಶ್ವರಿ ದೇವಸ್ಥಾನ ಅಧ್ಯಕ್ಷರಾದ ಎ.ಬಿ. ಶೇರಿಗಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಅಂದು ಲಾವಣ್ಯ ಹೋಂ ಥಿಯೇಟರ್‌ನ್ನು ಖ್ಯಾತ ಜ್ಯೋತಿಷಿ ಡಾ. ಮಹೇಂದ್ರ ಭಟ್ ಉದ್ಘಾಟಿಸಲಿದ್ದಾರೆ. ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ ಶುಭಶಂಸನೆಗೈಯಲಿದ್ದು, ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ, ಯಡ್ತರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಮೂಕಾಂಬು ದೇವಾಡಿಗ ಸೇರಿದಂತೆ ವಿವಿಧ ಅತಿಥಿ ಗಣ್ಯರು ಉಪಸ್ಥಿತರಿರಲಿದ್ದಾರೆ. ಮೂರು ದಿನಗಳ ಕಾರ್ಯಕ್ರಮದಲ್ಲಿ ಕರ್ನಾಟಕ ಉದ್ಯಮರತ್ನ ಪ್ರಶಸ್ತಿ ಪುರಸ್ಕೃತ ಬಿ.ಎಸ್. ಸುರೇಶ್ ಶೆಟ್ಟಿ ಹಾಗೂ ಪಾಂಡುರಂಗ ಪಡಿಯಾರ್, ವೈದ್ಯರಾದ ಡಾ. ಕೆ.ಆರ್ ನಂಬಿಯಾರ್, ಡಾ. ಸಚ್ಚಿದಾನಂದ ಶೆಟ್ಟಿ, ಬೈಂದೂರು ಪಶು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮಂಕಿ: ಇಲ್ಲಿನ ಕೊಕ್ಕೇಶ್ವರ ದೇವಸ್ಥಾನ ಎದುರಿನ ಮೈದಾನದಲ್ಲಿ ಆಯೋಜಿಸಲಾಗಿದ್ದ ರಾಮಕ್ಷತ್ರಿಯರ ಬೃಹತ್ ಸಮಾವೇಶಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು, ಹಲವು ಹೆಸರುಗಳಿರುವ ಸಮುದಾಯವನ್ನು ಹಿಂದೂ ಕ್ಷತ್ರಿಯ ಎಂದೂ ಕರೆಯಲಾಗುತ್ತದೆ. ರಾಜ್ಯ ಸರ್ಕಾರದ ಇತರ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಜಾತಿಯ ಹೆಸರು ಸೇರಿದೆ. ಆದರೆ, ಕೇಂದ್ರ ಸರ್ಕಾರದ ಪಟ್ಟಿಯಿಂದ ಕೈಬಿಡಲಾಗಿದೆ ಎಂಬ ವಿಚಾರ ಗಮನಕ್ಕೆ ಬಂದಿದೆ. ಕೇಂದ್ರದ ಪಟ್ಟಿಯಲ್ಲಿ ಇದನ್ನು ಸರಿಪಡಿಸಲು ರಾಜ್ಯ ಸರಕಾರದಿಂದ ಪ್ರಯತ್ನಿಸಲಾಗುವುದು ಎಂದರು. ಸಮುದಾಯದ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಯುವಕರು ಅಗತ್ಯವಾದ ಕೌಶಲ್ಯ ತರಬೇತಿ ಪಡೆಯುವುದು ಅವಶ್ಯವಾಗಿದೆ. ಹೆಣ್ಣು ಮಕ್ಕಳು ಹಿಂದೆ ಉಳಿಯದೇ ಶಿಕ್ಷಣವನ್ನು ಪಡೆದುಕೊಳ್ಳುವುದು ಕೂಡ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಸರಕಾರ ನಿಮ್ಮ ನೆರವಿಗೆ ಬರಲಿದೆ ಎಂದರು. ಮುಂದುವರಿದು ಮಾತನಾಡಿ ರಾಮಕ್ಷತ್ರಿಯ ಸಮಾಜದ ಕೊಕ್ಕೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಒಂದು ಕೋಟಿ ರೂ. ಬಿಡುಗಡೆಗೊಳಿಸುವ ಭರವಸೆ ನೀಡಿದರು. ಮಂಕಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಏತ…

Read More

ಕುಂದಾಪ್ರ ಡಾಟ್ ಕಾಂ ವರದಿ ಬೈಂದೂರು ಭಾಗದ ಕಂಬಳಗಳ ಪೈಕಿ ತಗ್ಗರ್ಸೆ ಕಂಬಳಕ್ಕೆ ತನ್ನದೇ ಆದ ಹೆಸರಿದೆ. ನೂರಾರು ವರ್ಷಗಳು ಇತಿಹಾಸ ಹೊಂದಿರುವ ಈ ಸಾಂಪ್ರದಾಯಿಕ ಕಂಬಳವು ತಗ್ಗರ್ಸೆ ಕಂಠದಮನೆ ಕುಟುಂಬಸ್ಥರಿಗೆ ಸೇರಿದ ಕಂಬಳಗದ್ದೆಯಲ್ಲಿ ಪ್ರತಿವರ್ಷ ದೇವರ ಕಾರ್ಯದಂತೆ ವಿಧಿವತ್ತಾಗಿ, ವಿಜೃಂಭಣೆಯಿಂದ ನಡೆಯುತ್ತದೆ. ಹಲವಾರು ಜೊತೆ ಕೋಣಗಳು ಹರಕೆ ಹಾಗೂ ಸ್ವರ್ಧೆಯಲ್ಲಿ ಭಾಗವಹಿಸಿ ಕಂಬಳದ ಮೆರಗು ಹೆಚ್ಚಿಸುತ್ತವೆ. ನಾಟಿ ಮುಗಿದ ಬಳಿಕ ಕಾರ್ತಿಕ ಮಾಸದ ವೃಶ್ಚಿಕ ಸಂಕ್ರಾಂತಿಯಂದು ಸಾಂಪ್ರದಾಯಿಕ ಕಂಬಳ ನಡೆಯುತ್ತದೆ. ಕಂಬಳಕ್ಕೆ ದಿನ ನಿಗದಿಯಾದಾಗಿನಿಂದ ಕಂಬಳದ ಕೋಣಗಳ ಓಟದ ತಾಲೀಮು ಆರಂಭಗೊಳ್ಳುತ್ತದೆ. ಕಂಬಳದ ಹಿಂದಿನ ದಿನವೇ ಗದ್ದೆಯ ದ್ವಾರವನ್ನು ತೋರಣಗಳಿಂದ ಅಲಂಕರಿಸಲಾಗುತ್ತದೆ. ನಿಯಮಬದ್ಧವಾಗಿ ಖುರ್ಜು ನಿಲ್ಲಿಸಿದ ಬಳಿಕ ಯಾವುದೇ ಕೊಣಗಳನ್ನು ಗದ್ದೆಗೆ ಇಳಿಸುವಂತಿಲ್ಲ. ಕಂಬಳದ ದಿನ ಬೆಳಿಗ್ಗೆ ಗದ್ದೆಯ ಅಲಂಕಾರ, ಡೊಲು ಬಾರಿಸುವುದು, ಪೂಜೆ ಕಾರ್ಯಾದಿಗಳು ನೆರವೇರಿದ ಬಳಿಕ ಕಂಬಳಕ್ಕೆ ಬರುವ ಕೋಣಗಳನ್ನು ವೀಳ್ಯ, ತೆಂಗಿನಕಾಯಿ ನೀಡಿ ಬರಮಾಡಿಕೊಳ್ಳಲಾಗುತ್ತದೆ. ಊರಿನ ಒಂದು ನಿರ್ದಿಷ್ಟ ಕುಟುಂಬದ ಕೋಣಗಳನ್ನು ಗದ್ದೆಗೆ ಇಳಿಸುವ ಮೂಲಕ…

Read More

ಸುನಿಲ್ ಹೆಚ್. ಜಿ. ಬೈಂದೂರು . | ಕುಂದಾಪ್ರ ಡಾಟ್ ಕಾಂ ಲೇಖನ. ನವರಾತ್ರಿಯ ನಡುವೆ ಅಥವಾ ಅನಂತ ಚತುರ್ದಶಿಯಂದು ಕೃಷಿಕ ಸಮುದಾಯದ ಜನ ಆಗತಾನೆ ಬೆಳೆಯುತ್ತಿರುವ ಪೈರನ್ನು (ಕದಿರು) ಕೊಯ್ದು, ಪೂಜಿಸಿ, ಶ್ರದ್ಧೆಯಿಂದ ಆಚರಿಸುವ ಹಬ್ಬ ಹೊಸ್ತು. ಮನೆಯ ಪರಿಸರ ಮುಂತಾದವುಗಳನ್ನು ಸ್ವಚ್ಛವಾಗಿಸಿಕೊಳ್ಳುವ, ನಿತ್ಯದ ಬದುಕಿಗೊಂದು ಹೊಸ ಆಯಾಮವನ್ನು ನೀಡಿ ವರ್ಷದ ಹೊಸ ಬೆಳೆಯನ್ನು ಸಂಭ್ರಮದಿಂದ ಒಳಕರೆದುಕೊಳ್ಳುವ ಪ್ರಕ್ರಿಯೆ ಇದು. ಹೊಸ್ತಿನ ದಿನ ಶುದ್ಧಗೊಂಡು, ಮೇಟಿ (ಹಿಂದೆ ಅಂಗಳದಲ್ಲಿ ಇರುತ್ತಿದ್ದ ಕಂಬ) ಎದುರಿಗೊಂದು ದೀಪ ಹಚ್ಚಿ, ಪೂಜಾ ಸಾಮಾಗ್ರಿಗಳೊಂದಿಗೆ ಮನೆಯ ಯಾಜಮಾನ ಗಂಡುಮಕ್ಕಳನ್ನೊಳಗೊಂಡು ಭತ್ತದ ಗದ್ದೆಗೆ ಹೋಗುವುದು; ಅಲ್ಲಿ ಒಂದಿಷ್ಟು ಪೈರನ್ನು ಒಟ್ಟುಮಾಡಿ ಕಟ್ಟಿ ಬುಡದಲ್ಲಿ ಬಾಳೆ ಎಲೆಯ ಮೇಲೆ ವಿಳ್ಯದೆಲೆಯನ್ನಿಟ್ಟು ಪ್ಶೆರಿಗೆ ಗಂಧ ಬೊಟ್ಟುಗಳನ್ನು ಹಚ್ಚಿ, ಮುಳ್ಳು ಸೌತೆಕಾಯಿ ಬಾಳೆಹಣ್ಣುಗಳನ್ನು ಅರ್ಪಿಸಿ ಮೂರು ಅಥವಾ ಐದು ಹಿಡಿ ಕದಿರನ್ನು ಕೊಯ್ದಿಟ್ಟು ಹಾಲೆರೆದು ನಮಸ್ಕರಿಸಿ ಪೂಜಿಸಿದ ಬಳಿಕ ಪಕ್ಕದ ಐದು ಗದ್ದೆಗಳಿಂದ ಸ್ವಲ್ಪವೇ ಕದಿರನ್ನು ಕೊಯ್ದು ತಲೆಯ ಮೇಲೆ ಹೊತ್ತುಕೊಂಡು…

Read More