[quote font_size=”14″ color=”#ff1000″ bgcolor=”#ffffff” bcolor=”#f9e900″ arrow=”yes” align=”right”]ನವೆಂಬರ್ 1 ರ ಭಾನುವಾರದ ಕಾರ್ಯಕ್ರಮ: ಸಂಜೆ 4.00 ರಿಂದ ಪುರಮೆವಣಿಗೆ ನಂತರ ಬಸ್ರೂರು ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ರಸೋಲ್ಲಾಸದ ಬಳಿಕ ಸಂಜೆ 5.00 ಕ್ಕೆ ಕನ್ನಡ ತಂತ್ರಾಂಶ ಜನಕರಾದ ನಾಡೋಜ ಶ್ರೀ ಕೆ.ಪಿ. ರಾವ್ ರವರಿಂದ ಡಿಂಡಿಮ ಉದ್ಘಾಟನೆಗೊಳ್ಳಲಿದೆ. ಪ್ರೋ. ವರದೇಶ ಹಿರೇಗಂಗೆ ಮತ್ತು ಡಾ. ಪಾರ್ವತಿ ಐತಾಳ್ ಇವರ ಮಾತಿನರಮನೆ. ಜನಾನುರಾಗಿ ಬಸ್ ಚಾಲಕರಾದ ಶ್ರೀ ಎಚ್. ಹಂಝಾ ವಕ್ವಾಡಿ ಇವರಿಗೆ ಕನ್ನಡದ ನುಡಿ ಗೌರವ. ನಾಟ್ಯ ನಿಲಯಂ ಮಂಜೇಶ್ವರ ಕಾಸರಗೋಡು ಇವರ ನಾಟ್ಯೋಲ್ಲಾಸ ಕಾರ್ಯಕ್ರಮದ ಮೂಲಕ ಮೊದಲ ರವಿವಾರದ ಕಾರ್ಯಕ್ರಮ ಮುಕ್ತಾಯಗೊಳ್ಳಲಿದೆ[/quote] ಕುಂದಾಪುರ: ವರ್ಷವಿಡೀ ಕನ್ನಡದ ಕಂಪನ್ನು ಪಸರಿಸುವ ಕಾರ್ಯಗಳ ನಡುವೆ, ಕನ್ನಡ ಮಾಸ ನವೆಂಬರ್ ತಿಂಗಳು ಪೂರ್ತಿ ಕನ್ನಡಿಗರ ಕರತಾಡನದ ಸದ್ದು ಕುಂದಾಪುರವೆಂಬ ಕಡುಕನ್ನಡದ ಪಟ್ಟಣದಲ್ಲಿ ಸ್ಥಾಯಿಯಾಗಿ ಉಳಿಯುವಂತೆ ಮಾಡಲು ಕುಂದಾಪುರದ ಕನ್ನಡ ವೇದಿಕೆ ಸಜ್ಜಾಗಿ ನಿಂತಿದೆ. `ಡಿಂಡಿಮ’ ಎಂಬ ಶಿರೋನಾಮೆಯಲ್ಲಿ…
Author: ಸುನಿಲ್ ಹೆಚ್. ಜಿ. ಬೈಂದೂರು
ಕುಂದಾಪುರ: ಬಡಗುತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ, ಸ್ತ್ರೀಪಾತ್ರಗಳ ಮೂಲಕ ತನ್ನ ಕಲಾವರ್ಚಸ್ಸನ್ನು ಅಸಂಖ್ಯ ಯಕ್ಷಪ್ರೀಯರಿಗೆ ಉಣಬಡಿಸಿದ ಕಲಾವಿದ ಕುಂದಾಪುರ ತಾಲೂಕಿನ ಮಾರ್ಗೋಳಿ ಗೋವಿಂದ ಶೇರುಗಾರ್ ಅವರಿಗೆ 2015ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಂದಿದೆ. ಮಾರ್ಗೋಳಿ ಅವರ ಬದುಕಿನ ಸುತ್ತ: ಐವತ್ತು ವರುಷಗಳ ರಂಗ ಬದುಕಿನಲ್ಲಿ ತೆಂಕು-ಬಡಗಿನುದ್ದಕ್ಕೂ ತಿರುಗಾಟ ಮಾಡಿದ ಮಾರ್ಗೋಳಿಯವರು ಬಡಗು ತಿಟ್ಟಿನ ಪ್ರಾತಿನಿಧಿಕ ಕಲಾವಿದ. ಬಡಗಿನ ಹಳೆಯ ಕ್ರಮಗಳ ಬಗ್ಗೆ ಅಧಿಕೃತ ದನಿ. ನಾಟ್ಯದಿಂದ ರಂಗಸೂಕ್ಷ್ಮದ ವರೆಗಿನ ಸಂಗತಿಗಳಿಗೆ ಈ ಕಾಲಘಟ್ಟದಲ್ಲಿ ಮಾರ್ಗೋಳಿಯವರು ಯಕ್ಷಗಾನಕ್ಕೆ ಅನಿವಾರ್ಯ. ತನ್ನ ಹದಿಮೂರನೇ ವರುಷದಿಂದ ಬಣ್ಣದ ಬದುಕು ಆರಂಭ. ಕುಂದಾಪುರದ ಬಸ್ರೂರಿನಲ್ಲಿ ನಾಲ್ಕನೇ ತರಗತಿ ತನಕ ವಿದ್ಯಾಭ್ಯಾಸ. ಬದುಕಿನ ಅನಿವಾರ್ಯತೆಯೊಂದಿಗೆ ಬೆಳೆದು, ಬಡಗುತಿಟ್ಟಿನ ಬಹುತೇಕ ಖ್ಯಾತರೊಡನೆ ಪಾತ್ರವಹಿಸಿ, ತಾನೂ ಗಟ್ಟಿಯಾಗಿ ರಂಗದ ಸಾರಸರ್ವಸ್ವವನ್ನುಂಡ ಅಪರೂಪದ ಕಲಾಗಾರಿಕೆ. ಅವರ ರಂಗ ಬದುಕಿನ ಉಚ್ಛ್ರಾಯ ಕಾಲದ ನೆನಪು ಅವರ ಇಳಿವಯಸ್ಸಿನ ಲವಲವಿಕೆಯ ಗುಟ್ಟು. ಗುರು ವೀರಭದ್ರ ನಾಯಕ್, ಕೊಕ್ಕರ್ಣೆ ಗುಂಡು ನಾಯಕ್, ನರಸಿಂಹ ಕಮ್ತಿ.. ಮೊದಲಾದ…
ಕುಂದಾಪುರ: ಇಲ್ಲಿನ ನೃತ್ಯ ವಸಂತ ನಾಟ್ಯಾಲಯ ವತಿಯಿಂದ ದಶಾರ್ಪಣಂ ರಾಜ್ಯಮಟ್ಟದ ಭರತನಾಟ್ಯ ಸ್ಪರ್ಧೆ ನವಂಬರ್ ೮ರಂದು ಬೆಳಿಗ್ಗೆ ೯ಕ್ಕೆ ಹಂಗಳೂರಿನ ಅನಂತಪದ್ಮನಾಭ ಸಭಾಗೃಹದಲ್ಲಿ ನಡೆಯಲಿದೆ. ಭರತನಾಟ್ಯ ಅತೀ ಕಿರಿಯ ವಿಭಾಗ, ಕಿರಿಯ ವಿಭಾಗ ಹಿರಿಯ ವಿಭಾಗ ಎಂಬ ಮೂರು ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು, ನೋಂದಣಿಗೆ ನವಂಬರ್ ೪ ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ 9845497206, 9448487789ಗೆ ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
ಗಂಗೊಳ್ಳಿ: ಕಳೆದ ಕೆಲವು ದಿನಗಳಿಂದ ಗಂಗೊಳ್ಳಿ-ಕುಂದಾಪುರ ನಡುವೆ ಸಂಚರಿಸುತ್ತಿರುವ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ಪೈಕಿ ಒಂದು ಬಸ್‌ನ ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತಿದ್ದು, ಇದೇ ರೀತಿ ಮುಂದುವರಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಗಂಗೊಳ್ಳಿ ನಾಗರಿಕ ಹೋರಾಟ ಸಮಿತಿ ಎಚ್ಚರಿಕೆ ನೀಡಿದೆ. ಕಳೆದ ಹಲವು ದಶಕಗಳ ಹೋರಾಟದ ಫಲವಾಗಿ ಮಂಜೂರಾಗಿರುವ ಎರಡು ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಗಂಗೊಳ್ಳಿ ಹಾಗೂ ಸುತ್ತಮುತ್ತಲಿನ ಜನರಿಗೆ ಹೆಚ್ಚು ಅನುಕೂಲಕರವಾಗಿದೆ. ಆದರೆ ಇತ್ತೀಚಿನ ಕೆಲವು ದಿನಗಳಿಂದ ಕುಂದಾಪುರ ಡಿಪೋದ ಅಧಿಕಾರಿಗಳು ಕುಂಟು ನೆಪವೊಡ್ಡಿ ಬಸ್ ಸಂಚಾರವನ್ನು ಸ್ಥಗಿತಗೊಳಿಸುತ್ತಿದ್ದಾರೆ. ಕಳೆದ ಸುಮಾರು ಎರಡು ತಿಂಗಳಿನಿಂದ ಪ್ರತಿ ಆದಿತ್ಯವಾರ ಒಂದು ಬಸ್ ಮಾತ್ರ ಸಂಚರಿಸುತ್ತಿದೆ. ಹೀಗಾಗಿ ನಾಗರಿಕರು ಮತ್ತೊಮ್ಮೆ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಿದೆ ಎಂದು ನಾಗರಿಕರ ಹೋರಾಟ ಸಮಿತಿ ತಿಳಿಸಿದೆ. ಅನೇಕ ಗ್ರಾಮೀಣ ಪ್ರದೇಶಗಳಲ್ಲಿ ಸರಕಾರಿ ಬಸ್‌ಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ಗಂಗೊಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮದ ಜನರ ಅನುಕೂಲಕ್ಕಾಗಿ ಸಂಚರಿಸುತ್ತಿರುವ ಸರಕಾರಿ ಬಸ್‌ಗಳ ಸಂಚಾರವನ್ನು ಮೊಟಕುಗೊಳಿಸಿ ಸಂಚಾರವನ್ನೇ ರದ್ದು ಮಾಡುವ ಹುನ್ನಾರ ನಡೆಯುತ್ತಿರುವ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ತಾಲೂಕಿನ ಬೀಜಾಡಿ ಬೈಪಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ-66 ಇನೋವಾ ಕಾರಿಗೆ ಇನ್ಸುಲೇಟರ್ ಲಾರಿ ಡಿಕ್ಕಿಯಾದ ಪರಿಣಾಮ ಇನೋವಾದಲ್ಲಿದ್ದ ಓರ್ವ ಸ್ಥಳದಲ್ಲಿಯೇ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ಸುಮಾರಿಗೆ ನಡೆದಿದೆ. ಕ್ಲಬ್ ಮಹೇಂದ್ರ ಸಂಸ್ಥೆಯ ಉದ್ಯೋಗಿ ಬಾಲಕೃಷ್ಣ (26) ಮೃತ ದುರ್ದೈವಿ. ಘಟನೆಯ ವಿವರ: ಕಾರವಾರ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಮೀನು ಸಾಗಾಟದ ಇನ್ಸುಲೇಟರ್ ಲಾರಿಯೊಂದು ಚಾಲಕನ ಅಜಾಗರೂಕತೆಯಿಂದ ಬೀಜಾಡಿ ಬೈಪಾಸ್ ಬಳಿಯ ಡಿವೈಡರ್ ಡಿಕ್ಕಿ ಹೊಡೆದು ಪಕ್ಕದ ರಸ್ತೆಯಲ್ಲಿ ಕುಂದಾಪುರ ಕಡೆಗೆ ತೆರಳುತ್ತಿದ್ದ ಇನೋವಾ ಕಾರಿಗೆ ಡಿಕ್ಕಿ ಹೊಡೆದಿತ್ತು. ಡಿಕ್ಕಿಯಾದ ರಭಸಕ್ಕೆ ಇನೋವಾ ಕಾರು ಹಾಗೂ ಲಾರಿ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಇನೋವಾದಲ್ಲಿದ್ದ ಬಾಲಕೃಷ್ಣ ಸ್ಥಳದಲ್ಲಿಯೇ ಮೃತಪಟ್ಟರೇ, ಮಣಿಕಂಠ ಹಾಗೂ ಅರುಣ್ ಎಂಬುವವರಿಗೆ ಗಾಯಗಳಾಗಿದೆ. (ಕುಂದಾಪ್ರ ಡಾಟ್ ಕಾಂ ಸುದ್ದಿ) ಕುಂದಾಪುರದಲ್ಲಿ ಕಂಪೆನಿಯ ಮೀಟಿಂಗ್ ಇದ್ದ ಕಾರಣ ಆರು ಮಂದಿ ಬೆಂಗಳೂರಿನಿಂದ ಆಗಮಿಸಿದ್ದರು. ಮೀಟಿಂಗ್ ಬಳಿಕ ಮೂವರು ಆನೆಗುಡ್ಡೆ ದೇವಳಕ್ಕೆ…
ಕುಂದಾಪುರ: ಕಲ್ಮಶರಹಿತ ಶುದ್ಧ ಮನಸ್ಸು, ಗುರುಹಿರಿಯರ ಆಶಿರ್ವಾದ ಹಾಗೂ ಸ್ಪಷ್ಟ ಗುರಿಯೊಂದಿಗೆ ಮುನ್ನಡೆದರೇ ಮಾತ್ರ ಬದುಕಿನಲ್ಲಿ ಸಾಧನೆಗೈಯಲು ಸಾಧ್ಯ ಎಂದು ಅಬುದಾಬಿಯ ಖ್ಯಾತ ಉದ್ಯಮಿ ಪದ್ಮಶ್ರೀ ಡಾ| ಬಿ. ಆರ್. ಶೆಟ್ಟಿ ಹೇಳಿದರು ಅವರು ಇಲ್ಲಿನ ಆರ್. ಎನ್. ಶೆಟ್ಟಿ ಕಲ್ಯಾಣ ಭವನದಲ್ಲಿ ಕೀರ್ತಿಶೇಷ ಶ್ರೀ ಯಡ್ತರೆ ಮಂಜಯ್ಯ ಶೆಟ್ಟಿ ಸ್ಮಾರಕ ಟ್ರಸ್ಟ್ ನ ಯಡ್ತರೆ ಮಂಜಯ್ಯ ಶೆಟ್ಟಿ ಜಯಂತಿ ಉತ್ಸವ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಯಡ್ತರೆ ಮಂಜಯ್ಯ ಶೆಟ್ಟಿ ಸ್ಮಾರಕ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು. ಕಷ್ಟ-ಸುಖ ಎರಡನ್ನೂ ಅರಿತು ಜೀವನದಲ್ಲಿ ಮೇಲೆ ಬಂದರೆ ಅದಕ್ಕಿಂತ ದೊಡ್ಡ ಸಂತೋಷ ಮತ್ತೊಂದಿರುವುದಿಲ್ಲ. ಬದುಕಿನಲ್ಲಿ ಹಣವೇ ಮುಖ್ಯವಲ್ಲ. ನಿಷ್ಠೆಯಿಂದ ಕೆಲಸ ಮಾಡುವುದೂ ಅಷ್ಟೇ ಮುಖ್ಯ. ನೀವು ನಿಷ್ಠೆಯಿಂದಿದ್ದರೇ, ನಿಮ್ಮನ್ನನುಸರಿಸುವವರೂ ನಿಷ್ಠೆಯಿಂದ ಇರುತ್ತಾರೆ ಮತ್ತು ನೀವು ಎತ್ತರಕ್ಕೆ ಬೆಳೆಯುತ್ತೀರಿ ಎಂದವರು ಹೇಳಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾಜಿ ಶಾಸಕ ಎ.ಜಿ. ಕೊಡ್ಗಿ ಮಾತನಾಡಿ ಯಡ್ತರೆ ಮಂಜಯ್ಯ ಶೆಟ್ಟಿಯವರ ವ್ಯಕ್ತಿತ್ವದಲ್ಲಿ ರಾಜಕೀಯ ಕಾಣಲು ಸಾಧ್ಯವಿಲ್ಲ. ಅವರು ಬದುಕಿನುದ್ದಕ್ಕೂ…
ಕುಂದಾಪುರ: ಚಿಕ್ಕನ್‌ಸಾಲು ರಸ್ತೆಯ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ವಿಧಿವಿದಾನಗಳು ಅಚ್ಚುಕಟ್ಟಾಗಿ ನೆರವೇರಿತು. ಪ್ರತಿದಿನ ಭಜನೆ ವಿವಿಧ ಪೂಜೆ, ಅಲಂಕಾರ ಸೇವೆಗಳು ಪ್ರದಾನ ಅರ್ಚಕ ಗಣಪತಿ ಸುವರ್ಣ ಅವರ ಮಾರ್ಗದರ್ಶನದಲ್ಲಿ ವಿದ್ಯುಕ್ತವಾಗಿ ಜರುಗಿತು. ಈ ಸಂದರ್ಭದಲ್ಲಿ ನಡೆದ ಚಂಡಿಕಾ ಯಾಗದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡರು. ಉತ್ಸವ ಸಮಿತಿ ಅಧ್ಯಕ್ಷ ಸೀತರಾಮ ಹೇರಿಕುದ್ರು, ಗೌರವಾಧ್ಯಕ್ಷ ಕೆ. ಬಿ. ಪ್ರಕಾಶ್ ಮೊದಲಾದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಶಂಕರನಾರಾಯಣ: ಇಲ್ಲಿನ ವ್ಯಾಪ್ತಿಯ ಮಾವಿನಕೊಡ್ಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕೊಲ್ಲೂರು ಶ್ರೀ ಮೂಕಾಂಬಿಕಾ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಎಸ್. ಅರುಣ್‌ಪ್ರಕಾಶ್ ಶೆಟ್ಟಿಯವರನ್ನು ಸ್ಥಳೀಯರು ಸನ್ಮಾನಿಸಿ ಗೌರವಿಸಿದರು.
ಕುಂದಾಪುರ: ರೋಟರ‍್ಯಾಕ್ಟ್ ಕ್ಲಬ್ ಕುಂದಾಪುರ ವೆಲ್‌ಫೇರ್ ಟ್ರಸ್ಟ್ ವತಿಯಿಂದ ಬೆಂಗಳೂರಿನ ಇಂಜಿನಿಯರ್ ಕಿಶೋರ್ ಕೊಡಮಾಡಿದ ವೀಲ್ ಚೇರ್‌ನ್ನು ವೆಂಕಟರಮಣ ಆಚಾರ್ಯ ಅವರಿಗೆ ಹಾಗೂ ವಾಟರ್ ಪ್ಯೂರಿಫಯರ್‌ನ್ನು ಕೋಣಿಯ ಮಾನಸ ಜ್ಯೋತಿ ಸಂಸ್ಥೆಗೆ ಹಸ್ತಾಂತರಿಸಲಾಯಿತು. ಭಾರತೀಯ ಜೀವವಿಮಾ ಪ್ರತಿನಿಧಿ ಶಂಕರ ಐತಾಳ್, ರೋಟರ‍್ಯಾಕ್ಟ್ ಕ್ಲಬ್ ಕುಂದಾಪುರ ಪೂರ್ವಾಧ್ಯಕ್ಷರಾದ ಪ್ರವೀಣ ಕುಮಾರ್ ಟಿ, ಎಚ್. ಎಸ್. ಹತ್ವಾರ್, ಶ್ರೀಧರ ಸುವರ್ಣ, ಕಿಶೋರ್, ದಾಮೋದರ ಪೈ ಉಪಸ್ಥಿತರಿದ್ದರು.
ಕುಂದಾಪುರ: ವಂಡ್ಸೆ ಗ್ರಾಮದ ಹಳಂಡಿಯ ಪುರಾಣ ಪ್ರಸಿದ್ಧ ವನದುರ್ಗಾಪರಮೇಶ್ವರಿ(ಕಾನಮ್ಮ) ದೇವಸ್ಥಾನ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿದ್ದು, ಜೀರ್ಣೋದ್ಧಾರ ಪ್ರಕ್ರಿಯೆಯ ಅಂಗವಾಗಿ ಶಿಲಾ ಕೆತ್ತನೆಗೆ ಅ.22ರಂದು ಚಾಲನೆ ನೀಡಲಾಯಿತು. ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ವಂಡ್ಸೆ ತಿರುಮಲ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಜಿ.ಶ್ರೀಧರ ಶೆಟ್ಟಿ, ವನದುರ್ಗಾಪರಮೇಶ್ವರಿ ದೇವಸ್ಥಾನದ ಮೊಕ್ತೇಸರರಾದ ಚಂದ್ರಶೇಖರ ಹೆಗ್ಡೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಿ.ಕೆ.ಶಿವರಾಮ ಶೆಟ್ಟಿ, ಕಾರ್ಯದರ್ಶಿ ಶಶಿಧರ ಶೆಟ್ಟಿ, ಕೋಶಾಧಿಕಾರಿ ಬೆಳ್ವೆ ಆನಂದ ಶೆಟ್ಟಿ, ಕುಂದಾಪುರ ಭೂ ಬ್ಯಾಂಕ್ ಅಧ್ಯಕ್ಷ ಎಸ್.ದಿನಕರ ಶೆಟ್ಟಿ, ಕಟ್ಟೆಮನೆ ರತ್ನಾಕರ ಶೆಟ್ಟಿ, ತೊಂಭತ್ತು ನಾರಾಯಣ ಶೆಟ್ಟಿ, ಬಿ.ಕರುಣಾಕರ ಶೆಟ್ಟಿ ಶಿರಾ, ವಂಡ್ಸೆ ಗ್ರಾ.ಪಂ.ಅಧ್ಯಕ್ಷ ಉದಯಕುಮಾರ್ ಶೆಟ್ಟಿ, ನಿವೃತ್ತ ಶಿಕ್ಷಕ ಎನ್.ರತ್ನಾಕರ ಶೆಟ್ಟಿ, ತಿರುಮಲ ಲಕ್ಞ್ಮೀವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿಯ ಗಣೇಶ ವಿ.ನಾಯ್ಕ್, ಗೋಪಾಲಕೃಷ್ಣ ಉಪಾದ್ಯ, ಹಾಲು ಉತ್ಪಾದಕರ ಸಹಕಾರಿಸಂಘದ ಅಧ್ಯಕ್ಷ ತ್ಯಾಂಪಣ್ಣ ಶೆಟ್ಟಿ, ಗ್ರಾ.ಪಂ.ಸದಸ್ಯ ಉದಯ ನಾಯ್ಕ್, ಸುರೇಂದ್ರ ಶೆಟ್ಟಿ, ಗುತ್ತಿಗೆದಾರರಾದ ಹರ್ಜಿ ಕರುಣಾಕರ ಶೆಟ್ಟಿ, ರುದ್ರಯ್ಯ ಆಚಾರ್ಯ…
