Author: ಸುನಿಲ್ ಹೆಚ್. ಜಿ. ಬೈಂದೂರು

ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

ಕುಂದಾಪುರ: ಜೇಸಿ ಸಂಘಟನೆಯಿಂದ ವ್ಯಕ್ತಿತ್ವದ ನವ ನಿರ್ಮಾಣವಾಗುವ ಜೊತೆಗೆ ಸೇವಾ ಮನೋಭಾವವನ್ನು ವೃದ್ಧಿಸಿ ಸಮಾಜದ ಬೆಳಕಾಗಿ ಕಾರ್ಯನಿರ್ವಹಿಸುತ್ತವೆ ಎಂದು ನಾಗೂರಿನ ಕುಸುಮ ಹೋಮ್ಸ್ ಪ್ರೈ. ಲಿ., ವ್ಯವಸ್ಥಾಪಕ ನಿರ್ದೇಶಕ ನಳಿನ್ ಕುಮಾರ್ ಶೆಟ್ಟಿ ಹೇಳಿದರು. ಅವರು ಜೇಸಿಐ ಕುಂದಾಪುರ ಸಿಟಿ ಆಶ್ರಯದಲ್ಲಿ ಕುಂದಾಪುರದ ರೋಟರಿ ಲಕ್ಷ್ಮೀನರಸಿಂಹ ಕಲಾಮಂದಿರದಲ್ಲಿ ಒಂದು ವಾರಗಳ ಕಾಲ ನಡೆಯುವ ಜೇಸಿ ಸಪ್ತಾಹದ ೨ನೇ ದಿನದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಜೇಸಿಐ ಕುಂದಾಪುರ ಸಿಟಿ ಅಧ್ಯಕ್ಷ ಚಂದ್ರಕಾಂತ ವಹಿಸಿದ್ದರು. ಕುಂದಾಪುರದ ಪ್ರೀತಮ್ ಹೇರ್ ಡ್ರೆಸ್ಸಸ್‌ನ ಮಾಲಕ ಅಣ್ಣಯ್ಯ ಭಂಡಾರಿ ಅವರನ್ನು ಸನ್ಮಾನಿಸಲಾಯಿತು. ಜೇಸಿಐ ಕುಂದಾಪುರ ಸಿಟಿ ದಶಮಾನೋತ್ಸವ ಸಮಿತಿ ಅಧ್ಯಕ್ಷ ಕೆ. ಕಾರ್ತೀಕೇಯ ಮಧ್ಯಸ್ಥ ಅವರು ಸರೋಜಿನಿ ಮಧುಸೂಧನ ಡಿ. ಕುಶೆ ಸರಕಾರಿ ಪ್ರೌಢ ಶಾಲೆ ವಡೇರಹೋಬಳಿಯ ವಿದ್ಯಾರ್ಥಿಗೆ ವಿದ್ಯಾರ್ಥಿ ವೇತನ ವಿತರಿಸಿದರು. ಮಡಿಕೆ ಓಡೆಯುವ ಸ್ಪರ್ಧೆಯ ವಿಜೇತ ಪ್ರಜ್ವಲ್ ಅವರಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮೊಳಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ…

Read More

ಕುಂದಾಪುರ: ಪ್ರತಿಷ್ಠಿತ ಗುಲ್ವಾಡಿ ಸಾಂಸ್ಕೃತಿಕ ಪ್ರತಿಷ್ಠಾನವು ಪತ್ರಕರ್ತ ಸಂತೋಷ ಕುಮಾರ ಗುಲ್ವಾಡಿ ಅವರ ಸ್ಮಾರಕ ನೀಡಲಾಗುತ್ತಿರವು ಗುಲ್ವಾಡಿ ಗೌರವ ಪುರಸ್ಕಾರಕ್ಕೆ ಖ್ಯಾತ ಚಲನಚಿತ್ರ ನಿರ್ದೇಶಕ ಡಾ. ನಾಗತಿಹಳ್ಳಿ ಚಂದ್ರಶೇಖರ್ ಆಯ್ಕೆಯಾಗಿದ್ದರೆ. ಸೆ. 13ರಂದು ಅಪರಾಹ್ನ 2:30ಕ್ಕೆ ಗುಲ್ವಾಡಿಯ ತೋಟದ ಮನೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯ್ಲಿ ಗೌರವ ಪುರಸ್ಕಾರ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳನ್ನು ಸಾಧನೆಗೈದವರಿಗೆ ಪ್ರತಿಷ್ಠಾನದ ಗೌರವ ಪ್ರಧಾನ ಮಾಡಲಾಗುವುತ್ತಿದೆ. ಈ ಸಮಾರಂಭದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿ.ಎ. ಮೊಹಮ್ಮದ್‌ ಹನೀಫ್‌, ಬೈಂದೂರು ಶಾಸಕ ಗೋಪಾಲ ಪೂಜಾರಿ, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎ. ಮೊಹಿದಿನ್‌ ಬಾವಾ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಗುಲ್ವಾಡಿ ಸಾಂಸ್ಕೃತಿಕ ಪ್ರತಿಷ್ಠಾನದ ಪ್ರಧಾನ ಕಾರ್ಯನಿರ್ವಹಕ ಯಾಕೂಬ್‌ ಖಾದರ್‌ ಗುಲ್ವಾಡಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪುರ: ತಾಲೂಕು ಕಾನೂನು ಸೇವಾ ಸಮಿತಿ ಕುಂದಾಪುರ, ವಕೀಲರ ಸಂಘ (ರಿ) ಕುಂದಾಪುರ, ಅಭಿಯೋಗ ಇಲಾಖೆ, ಆರೋಗ್ಯ ಇಲಾಖೆ, ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ತಾ.ಪಂ. ಸಭಾಂಗಣದಲ್ಲಿ ಆತ್ಮಹತ್ಯಾ ವಿರೋಧಿ ದಿನಾಚರಣೆ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕುಂದಾಪುರ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ರಾಜಶೇಖರ ವಿ.ಪಾಟೀಲ್ ಮಾತನಾಡಿ‌, ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನ ಮಾಡುವುದು ಅಪರಾಧ ಆದರೆ ಆತ್ಮಹತ್ಯೆ ಮಾಡಿ ಕೊಳ್ಳುವುದು ಅಪರಾಧವಲ್ಲ. ಆರ್ಥಿಕ, ಮಾನಸಿಕ ಹಾಗೂ ಸಾಮಾಜಿಕ ಒತ್ತಡವೇ ಆತ್ಮಹತ್ಯೆಗೆ ಮುಖ್ಯ ಕಾರಣವಾಗಿದೆ. ಇದಕ್ಕೆ ಪರಿಹಾರಕಂಡುಕೊಳ್ಳಲು ಶೇ.100 ರಷ್ಟು ಸಾಧ್ಯವಿಲ್ಲವಾದರೂ ಇಂಥ ದಿನಾಚರಣೆಗಳ ಮೂಲಕ ಒಂದಷ್ಟು ಜನಜಾಗೃತಿ ಮೂಡಲು ಸಾಧ್ಯ ಎಂದು ಹೇಳಿದರು. ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಎ.ಬಿ.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಿವಿಲ್‌ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಗೌರವ ಉಪಸ್ಥಿತರಿದ್ದರು. ಮುಖ ಅತಿಥಿಗಳಾಗಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಶಿರಿಯಾರ ಮುರಳೀಧರ ಶೆಟ್ಟಿ, ಸಹಾಯಜ ಸರಕಾರಿ ಅಭಿಯೋಜಕ ಸಂದೇಶ ಭಂಡಾರಿ, ತಾಲೂಕು ಆರೋಗ್ಯ…

Read More

ಕುಂದಾಪುರ: ಕುಂದಾಪುರ ತಾಲೂಕು ಮಟ್ಟದ ಎಸ್‌ಡಿಎಂಸಿ ಸಮಾವೇಶ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ  ಜರುಗಿತು. ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ತಾ.ಪಂ. ಅಧ್ಯಕ್ಷ ಭಾಸ್ಕರ ಬಿಲ್ಲವ ಮಾತನಾಡಿ ಶಿಕ್ಷಣ ಕ್ಷೇತ್ರದಲ್ಲಿ ಸಮುದಾಯ ಭಾಗವಹಿಸಿದಾಗ ಮಾತ್ರ ಗುಣಮಟ್ಟದ ಶಿಕ್ಷಣವನ್ನು ಪಡೆಯಲು ಸಾಧ್ಯ ಎನ್ನುವ ನಿಟ್ಟಿನಲ್ಲಿ ಎಸ್‌ಡಿಎಂಸಿಯನ್ನು ರಚಿಸಲಾಗಿದ್ದು, ಎಸ್‌ಡಿಎಂಸಿ ಶಾಲಾ ಅಭಿವೃದ್ಧಿಯ ನಿಟ್ಟಿನಲ್ಲಿ  ಗಮನಾರ್ಹ ಪಾತ್ರ ವಹಿಸಿದೆ. ಗ್ರಾ.ಪಂ.ಗಳ ಅಡಿಯಲ್ಲಿ ಈ ಸಮಿತಿ ಬರುವುದರಿಂದ ಅಭಿವೃದ್ಧಿ ಕಾರ್ಯಗಳನ್ನು ಅವರ ಮೂಲಕ ಮಾಡಲು ಸಾಧ್ಯ ಎಂದರು. ಕುಂದಾಪುರ ತಾಲೂಕು ಎಸ್‌ಡಿಎಂಸಿ ಸಂಚಲನಾ ಸಮಿತಿಯ ಅಧ್ಯಕ್ಷ ಎಸ್‌.ವಿ. ನಾಗರಾಜ್‌ ಸಟ್ವಾಡಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉದ್ಯಮಿ ಅಭಿನಂದನ್‌ ಶೆಟ್ಟಿ, ರೋಟರಿ ಕುಂದಾಪುರ ದಕ್ಷಿಣದ ಅಧ್ಯಕ್ಷ ಡಿ. ವಾಸುದೇವ ಕಾರಂತ್‌, ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷೆ ಗೌರಿ ದೇವಾಡಿಗ, ಜಿ.ಪಂ. ಸದಸ್ಯ ಗಣಪತಿ ಟಿ.ಶ್ರೀಯಾನ್‌, ತಾ.ಪಂ. ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷ ನವೀನ್‌ಚಂದ್ರ ಶೆಟ್ಟಿ, ರಾಜ್ಯ ಎಸ್‌ಡಿಎಂಸಿ ಸಮನ್ವಯ ಸಮಿತಿಯ ಕಾರ್ಯದರ್ಶಿ ಶೋಭಾ ಬಾಸ್ಕರ್‌,…

Read More

ಕುಂದಾಪುರ: ಕರ್ನಾಟಕ ರಾಜ್ಯದಲ್ಲಿ ಸಮಸ್ಯೆಗಳನ್ನು ಬಗೆಹರಿಸುವುದನ್ನು ಬಿಟ್ಟು ಬಿಬಿಎಂಪಿ ಅಧಿಕಾರ ಹಿಡಿಯಲು ರೆಸಾರ್ಟ್ ರಾಜಕಾರಣ ಮಾಡುತ್ತಿರುವ ಸರಕಾರವನ್ನು ಮುಂದಿನ ಚುನಾವಣೆಯಲ್ಲಿ ಕಿತ್ತೆಸೆಯಲು ಬಿಜೆಪಿಯ ಕಾರ್ಯಕರ್ತರು ಪಣತೊಡಬೇಕು ಎಂದು  ಉಡುಪಿಯ ಮಾಜಿ ಶಾಸಕ  ರಘುಪತಿ ಭಟ್‌ ಆರೋಪಿಸಿದರು. ಅವರು  ಉಡುಪಿಯಲ್ಲಿ ನಡೆಯಲಿರುವ ರೈತ ಚೆ„ತನ್ಯ ಯಾತ್ರೆಯ ಸಮಾವೇಶಕ್ಕೆ ಕುಂದಾಪುರ ನಗರದ ಕಾರ್ಯಕರ್ತರನ್ನು ಒಗ್ಗೂಡಿಸಲು ಕುಂದಾಪುರ ಬಿಜೆಪಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಸರಕಾರವನ್ನು ತರಾಟೆಗೆ ತೆಗೆದುಕೊಂಡರು. ರೈತರ ಸಮಸ್ಯೆಗಳಿಗೆ ಸ್ಪಂದಿಸದಿದ್ದರಿಂದ ರಾಜ್ಯದಲ್ಲಿ ಮುನ್ನೂರಕ್ಕೂ  ಹೆಚ್ಚು ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯುತ್ ಕೊರತೆಯನ್ನು ಎದುರಿಸುತ್ತಿದ್ದು ರೈತರು, ಉದ್ಯಮಿಗಳನ್ನು ಸಂಕಷ್ಟಕ್ಕೆ ನೂಕಿದೆ. ಇದಕ್ಕಾಗಿ  ಬಿಜೆಪಿ  ಸೆ. 11ರಂದು  ಉಡುಪಿಯಲ್ಲಿ ನಡೆಯಲಿರುವ ರೈತ ಚೈತನ್ಯ ಯಾತ್ರೆಯಲ್ಲಿ ಕುಂದಾಪುರ ನಗರದ ಕಾರ್ಯಕರ್ತರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿ ಮಾಡಿ ಕೊಡಬೇಕೆಂದು ಮನವಿ ಮಾಡಿದರು. ಕಾಂಗ್ರೆಸ್‌ನ ಹಿರಿಯ ಕಾರ್ಯಕರ್ತ ನಾರಾಯಣ ಖಾರ್ವಿ ಅವರು ಬಿಜೆಪಿಗೆ ಸೇರ್ಪಡೆಗೊಂಡರು. ಸಮಾರಂಭದಲ್ಲಿ ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಪುಂಡಲೀಕ ನಾಯಕ್‌, ರಾಜ್ಯ ಮೀನುಗಾರರ…

Read More

ಕುಂದಾಪುರ: ಕಲಿಯುಗದಲ್ಲಿ ದಾನ, ಧರ್ಮಗಳ ಮೂಲಕ ಮೋಕ್ಷ ಹೊಂದಲು ಸಾಧ್ಯ. ಮಕ್ಕಳಲ್ಲಿ  ಧಾರ್ಮಿಕ ಪ್ರಜ್ಞೆ ಮೂಡಿಸುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು. ಧರ್ಮ ಸಂಸ್ಕೃತಿಯ ಆಚರಣೆಗಳಲ್ಲಿ ಎಲ್ಲರೂ ಒಟ್ಟುಗೂಡಿ ನಡೆಸಿದಾಗ ಪ್ರಾಮುಖ್ಯತೆಯನ್ನು ಹೊಂದಲು ಸಾಧ್ಯವಿದೆ ಎಂದು ಬೆಳ್ವೆ ಉದ್ಯಮಿ ಬಿ. ಗಣೇಶ ಕಿಣಿ ಬೆಳ್ವೆ ಅವರು ಹೇಳಿದರು. ಅವರು ಗೋಳಿಯಂಗಡಿ ಪ್ರಜ್ಞಾ ಯುವಕ ಮಂಡಲ, ಶ್ರೀ ವಿಶ್ವಬ್ರಾಹ್ಮಣ ಸಮಾಜೋದ್ಧಾರಕ ಸಂಘ ಗೋಳಿಯಂಗಡಿ, ನಾರಾಯಗುರು ಬಿಲ್ಲವ ಸೇವಾ ಸಂಘ ಬೆಳ್ವೆ ವಲಯ, ಕುಡುಬಿ ಸಮಾಜೋದ್ಧಾರಕ ಸಂಘ ಹಿಲಿಯಾಣ ಆಮ್ರಕಲ್ಲು, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗೋಳಿಯಂಗಡಿ ಇವರ ಸಂಯುಕ್ತ ಅಶ್ರಯದಲ್ಲಿ ಹಿಲಿಯಾಣ ಆಮ್ರಕಲ್ಲು ಶ್ರೀ ಮಲ್ಲಿಕಾರ್ಜುನ ಸಭಾಭವನದಲ್ಲಿ ಸೆ.6ರಂದು ನಡೆದ 6ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಆವರ್ಸೆ ಗ್ರಾ. ಪಂ. ಅಧ್ಯಕ್ಷ ಚಿತ್ತರಂಜನ್‌ದಾಸ್‌ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಬೆಳ್ವೆ ಗ್ರಾ. ಪಂ. ಉಪಾಧ್ಯಕ್ಷ ಸುರೇಂದ್ರ ನಾಯ್ಕ ಯಳಂತೂರು, ಸದಸ್ಯರಾದ ಚಂದ್ರಶೇಖರ್‌ ಶೆಟ್ಟಿ ಸೂರೊYàಳಿ, ವೈ. ಕರುಣಾಕರ…

Read More

ಕುಂದಾಪುರ: ಇಲ್ಲಿನ ಕಂಡ್ಲೂರು ಬಸ್‌ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಮರದ ಅಡಿಯಲ್ಲಿ ಕ್ರಿಕೆಟ್‌ ಬೆಟ್ಟಿಂಗ್‌ ನಡೆಸುತ್ತಿದ್ದ ಕಾವ್ರಾಡಿ ಗ್ರಾಮದ ದೂಪದಕಟ್ಟೆ ನಿವಾಸಿ ಮಹೇಶ ಆಚಾರಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಕೆ.ಪಿ.ಎಲ್‌ಕ್ರಿಕೆಟ್‌ಪಂದ್ಯಾಟದ ನಮ್ಮ ಶಿವಮೊಗ್ಗ ಹಾಗೂ ಬಿಜಾಪುರ ಬುಲ್ಸ್‌ತಂಡಗಳ ಸೋಲು ಗೆಲುವಿನ ಮೇಲೆ ಬೆಟ್ಟಿಂಗ್‌ನಡೆಸುತ್ತಿದ್ದುದನ್ನು ಖಚಿತಪಡಿಸಿಕೊಂಡು ಗಂಟೆಗೆ ದಾಳಿ ನಡೆಸಿದ ಕುಂದಾಪುರ ವೃತ್ತ ನಿರೀಕ್ಷಕ ದಿವಾಕರ್‌ ಪಿ.ಎಂ. ಅವರು , ಆತನನ್ನು ಬಂಧಿಸಿ ಮೊಬೆ„ಲ್‌, ರೂ.15 ಸಾವಿರ ನಗದು, ಚೆವರ್‌ಲೆಟ್‌ ಕಾರು ಹಾಗೂ ಇತರ ಪರಿಕರಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಸಂಘಟನೆ, ಸ್ವಸ್ಥ ಚಿಂತನೆಯಿಂದ ಉತ್ತಮ ಸಮಾಜ ನಿರ್ಮಾಣ : ಕೋಟ ಶ್ರೀನಿವಾಸ ಪೂಜಾರಿ ಕುಂದಾಪುರ: ಸಮಾಜದ ಸರ್ವಾಂಗೀಣ ವಿಕಾಸದ ದೃಷ್ಠಿಯಿಂದ ಪ್ರತಿಯೊಬ್ಬರು ಸಾಮಾಜಿಕ ಬದ್ಧತೆಯೊಂದಿಗೆ ಕಾರ್ಯನಿರ್ವಹಿಸುವತ್ತ ಆಸಕ್ತಿಯನ್ನು ಬೆಳೆಸಿ ಕೊಂಡಾಗ ಪರಿಸರದಲ್ಲಿ ಪರಿವರ್ತನೆ ಆರಂಭವಾಗುತ್ತದೆ. ಆದುದರಿಂದ ಸಂಘಟನೆ, ಸ್ವಸ್ಥ ಚಿಂತನೆಯಿಂದ ಉತ್ತಮ ಸಮಾಜ ನಿರ್ಮಾಣ ಮಾಡುವ ಕಾಯಕದಲ್ಲಿ ಯುವ ಜನತೆ ಕಾರ್ಯಪ್ರವೃತ್ತರಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಜೇಸಿಐ ಕುಂದಾಪುರ ಸಿಟಿ ಆಶ್ರಯದಲ್ಲಿ ಕುಂದಾಪುರದ ರೋಟರಿ ಲಕ್ಷ್ಮೀನರಸಿಂಹ ಕಲಾಮಂದಿರದಲ್ಲಿ ಒಂದು ವಾರಗಳ ಕಾಲ ನಡೆಯುವ ಜೇಸಿ ಸಪ್ತಾಹವನ್ನು ಉದ್ಘಾಟಿಸಿ ಮಾತನಾಡಿದರು ಸಮಾರಂಭದ ಅಧ್ಯಕ್ಷತೆಯನ್ನು ಜೇಸಿಐ ಕುಂದಾಪುರ ಸಿಟಿ ಅಧ್ಯಕ್ಷ ಚಂದ್ರಕಾಂತ ವಹಿಸಿದ್ದರು. ಸ್ಕೌಟ್ಸ್ ಮತ್ತು ಗೈಡ್ಸ್ ಕುಂದಾಪುರ ವಲಯದ ಅಧ್ಯಕ್ಷೆ ಶ್ರೀಮತಿ ಗುಣರತ್ನ ಅವರನ್ನು ಸನ್ಮಾನಿಸಲಾಯಿತು. ಪುಟಾಣಿ ರಾಜ ರಾಣಿ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ರೋಟರಿ ಗವರ್ನರ್ ಎ. ಎಸ್. ಎನ್. ಹೆಬ್ಬಾರ್, ಕುಂದಾಪುರ ಪುರಸಭೆ ಅಧ್ಯಕ್ಷೆ ಶ್ರೀಮತಿ…

Read More

ಕುಂದಾಪುರ: ಪತ್ರಿಕೆಯೊಂದರ ಸಂಪಾದಕನೆಂದು ಹೇಳಿಕೊಂಡ ವ್ಯಕ್ತಿಯೋರ್ವ ಕುಂದಾಪುರದ ವಿಠಲವಾಡಿಯ ಉದ್ಯಮಿ ಗಣೇಶ ಪೂಜಾರಿ ಎಂಬುವವರಿಗೆ ದೂರವಾಣಿ ಕರೆಮಾಡಿ ಹಣದ ಬೇಡಿಕೆಯಿಟ್ಟು ಬೆದರಿಕೆಯೊಡ್ಡಿದ ಘಟನೆ ನಡೆದಿದ್ದು ಈ ಬಗ್ಗೆ ಕುಂದಾಪುರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನೆಯ ವಿವರ: ‘ಪ್ರಸಿದ್ಧ ಪತ್ರಿಕೆ’ ಯ ಸಂಪಾದಕನೆನ್ನಲಾದ ಸಂತೋಷ್ ಸುವರ್ಣ ಎಂಬುವವರು ಕುಂದಾಪುರದ ಪ್ರಥಮ ದರ್ಜೆ ವಿದ್ಯುತ್ ಗುತ್ತಿಗೆದಾರ ಗಣೇಶ್ ಪೂಜಾರಿ ಎಂಬುವವರಿಗೆ ಸೆ.೧ರಂದು ಕರೆಮಾಡಿ, ತಾವು ಒಂದು ಅನೈತಿಕ ಚಟುವಟಿಕೆಯಲ್ಲಿ ಭಾಗಿಯಾಗಿದ್ದು ಅದಕ್ಕೆ ಪೂರಕವಾಗಿ ಕಾಗದ ಪತ್ರಗಳು ಹಾಗೂ ಪೋನ್ ಕರೆಗಳು ನಮಗೆ ಬರುತ್ತಿದೆ. ಈ ಬಗ್ಗೆ ನಮ್ಮ ಪತ್ರಿಕೆಯಲ್ಲಿ ಬರೆಯುವುದಾಗಿ ಹೇಳಿಕೊಂಡಿದ್ದ. ಇದೆಲ್ಲ ಸುಳ್ಳೆಂದು ಹೇಳಿದರೂ ಮತ್ತೆ ಮತ್ತೆ ಕರೆಮಾಡಿ ಬೇರೆ ಕಾರಣ ರೂ. 30,000ದಿಂದ 1,20,000ದ ವರೆಗೆ ಹಣದ ಬೇಡಿಕೆ ಒಡ್ಡಿದ್ದಾರೆ ಎಂದು ಗಣೇಶ್ ಪೂಜಾರಿ ದೂರು ನೀಡಿದ್ದಾರೆ. ಸಂತೋಷ್ ಸುವರ್ಣ ಕರೆ ಮಾಡಿದಾಗ ಓದುಗರ ಬಳಗ ವಿಠಲವಾಡಿ ಹಾಗೂ ಅಪರಿಚಿತ ಸಂಖ್ಯೆಯಿಂದ ದೂರವಾಣಿ ಕರೆಗಳು ಬರುತ್ತಿದ್ದು ನಿಮ್ಮ ಹಗರಣಗಳ ವರದಿಯನ್ನು…

Read More

ಕುಂದಾಪುರ: ಇಂದಿನ ಯುವಕರು ಖಿನ್ನತೆ ಹಾಗೂ ಇತರೇ ಕಾರಣಕ್ಕಾಗಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಆತ್ಮಹತ್ಯೆಯಿಂದಾಗಿ ಮರಣ ಹೊಂದುತ್ತಿದ್ದಾರೆ. ಇಂದು ಇತರೇ ಮಾರಕ ಕಾಯಿಲೆಗಳಿಂದಾಗಿ ಸಾಯುವವರಿಗಿಂತ ಎರಡು ಪಟ್ಟು ಹೆಚ್ಚು ಜನ ಆತ್ಮಹತ್ಯೆ ಮಾಡಿಕೊಂಡು ಸಾಯುತ್ತಿರುವುದು ಆಘಾತಕಾರಿ. ಆತ್ಮಹತ್ಯೆಗೆ ಪ್ರಯತ್ನಿಸುವವರನ್ನು ತಡೆದು, ಸಮಾಲೋಚನೆ ನಡೆಸುವುದಲ್ಲದೇ ಹೀಗೆ ಪ್ರಯತ್ನಿಸುವವರ ಮೇಲೆ ನಿಗಾ ವಹಿಸುವುದು ಅಗತ್ಯ ಎಂದು ಕುಂದಾಪುರ ಶ್ರೀ ಮಾತಾ ಆಸ್ಪತ್ರೆಯ ಮನೋವೈದ್ಯ ಡಾ| ಪ್ರಕಾಶ್ ಸಿ. ತೋಳಾರ್ ಹೇಳಿದರು. ಅವರು ಶ್ರೀ ಮಾತಾ ಆಸ್ಪತ್ರೆ ಕುಂದಾಪುರ ಹಾಗೂ ಲಯನ್ಸ್ ಮತ್ತು ಲಯನೆಸ್ ಕ್ಲಬ್ ಬ್ರಹ್ಮಾವರ-ಬಾರ್ಕೂರು ಇವರ ಜಂಟಿ ಆಶ್ರಯದಲ್ಲಿ  ಆಸ್ಪತ್ರೆಯಲ್ಲಿ ಆಯೋಜಿಸಲಾದ ವಿಶ್ವ ಆತ್ಮಹತ್ಯಾ ತಡೆ ದಿನಾಚರಣೆಯಲ್ಲಿ ಸಂಪನ್ಮೂಲ ಆತ್ಮಹತ್ಯೆ ಕಾರಣ ಮತ್ತು ತಡೆಯುವ ಬಗ್ಗೆ ಉಪನ್ಯಾಸ ನೀಡಿದರು. 2007ರ ಸಮೀಕ್ಷೆಯ ಪ್ರಕಾರ ವಿಶ್ವದಲ್ಲಿ ಒಂದು ಲಕ್ಷಕ್ಕೆ ೭ಮಂದಿ ಆತ್ಮಹತ್ಯೆ ಮಾಡಿಕೊಂಡರೇ, 2012ರಲ್ಲಿ 12ಮಂದಿಗೆ ಏರಿದೆ. ವಿಶ್ವದಲ್ಲಿ ವರ್ಷಕ್ಕೆ ೮ಲಕ್ಷ ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇ ಕರ್ನಾಟಕದಲ್ಲಿ 15,000 ಮಂದಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಭಾರತದಲ್ಲಿ…

Read More