Author: ಸುನಿಲ್ ಹೆಚ್. ಜಿ. ಬೈಂದೂರು

ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಆಹಾರ ಮತ್ತು ಅತಿಥಿ ಸತ್ಕಾರ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡುತ್ತಿರುವ ಶೆಫ್‌ಟಾಕ್ ಸಂಸ್ಥೆಯ ಆಡಳಿತ ನಿರ್ದೆಶಕ ಗೋವಿಂದ ಬಾಬು ಪೂಜಾರಿ ಅವರಿಗೆ ’ಆಹಾರೋದ್ಯಮ ಸಾಧನಾಶ್ರೀ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಮಂಗಳೂರು ಟೌನ್ ಹಾಲ್‌ನಲ್ಲಿ ಸೋಮವಾರ ಜರುಗಿದ ದಕ್ಷಿಣ ಕನ್ನಡ ಕ್ಯಾಟರಿಂಗ್ ಮಾಲಕರ ಅಸೋಸಿಯೇಶನ್ ರಿ. ಇದರ ಉದ್ಘಾಟನಾ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಯೆನೆಪೋಯ ವಿಶ್ವವಿದ್ಯಾನಿಲಯದ ಕುಲಪತಿ ಯೆನೆಪಪೋಯ ಅಬ್ದುಲ್ ಕುಂಞ ಪ್ರಶಸ್ತಿ ಪ್ರದಾನ ಮಾಡಿದರು. ಶ್ರೀ ದೇವಿ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಎ. ಸದಾನಂದ ಶೆಟ್ಟಿ, ಎ.ಜೆ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ. ಎ. ಜನಾರ್ದನ ಶೆಟ್ಟಿ, ಮುಂಬೈ ಕೆಇವೈಎಸ್ ಗ್ರೂಪ್ ಆಫ್ ಹೋಟೆಲ್ಸ್‌ನ ಹರೀಶ್ ಅಮೀನ್, ಮಂಗಳೂರು ಮಾಂಡ್ ಸೊಭಾಣ್ ಅಧ್ಯಕ್ಷ ಲುವಿ ಜೆ. ಪಿಂಟೋ, ಚಲನಚಿತ್ರ ನಿರ್ಮಾಪಕ, ನಟ ಡಾ. ರಾಜಶೇಖರ್ ಕೋಟ್ಯಾನ್, ದ.ಕ ಕ್ಯಾಟರಿಂಗ್ ಮಾಲಕರ ಎಸೋಸಿಯೇಶನ್ ರಿ. ಮಂಗಳೂರು ಇದರ ಗೌರವಾಧ್ಯಕ್ಷ ಸುಧಾಕರ ಕಾಮತ್,…

Read More

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ ಆಧುನಿಕತೆಯತ್ತ ಮುಖಮಾಡಿರುವ ಮಾನವರು ತಮ್ಮ ಸಂಸ್ಕೃತಿ-ಸಂಪ್ರದಾಯಗಳನ್ನು ಮರೆತು ನಡೆಯುತ್ತಿರುವ ಹೊತ್ತಿನಲ್ಲಿಯೂ ಮರಾಠಿ, ಗೊಂಡ ಸಮುದಾಯದ ಹೋಳಿಕುಣಿತ ಹಾಗೂ ಹೊಳಿ ಹಬ್ಬ ಇಂದಿಗೂ ನಮ್ಮ ನಡುವಿನ ಸಂಪ್ರದಾಯ ಕೊಂಡಿಯಾಗಿ ಉಳಿದಿದೆ. ಈ ಜನಾಂಗದ ಹೊಳಿ ಕುಣಿತ ಒಂದು ವಿಶಿಷ್ಟ ಜನಪದ ಕಲೆ. ಕುಂದಾಪುರ ತಾಲೂಕಿನ ಬೇರೆ ಬೇರೆ ಭಾಗಗಳಲ್ಲಿ ನೆಲೆಸಿರುವ ಮರಾಠಿಗರು ವರ್ಷಂಪ್ರತಿ ಶಿವರಾತ್ರಿಯ ಬಳಿಕ ನಿಷ್ಠೆಯಿಂದ ಹೋಳಿ ಆಚರಿಸುತ್ತಾರೆ. ಎಲ್ಲೂರು ಬಾಳಕೊಡ್ಲುವಿನ ಮರಾಠಿ ಸಮುದಾಯದವರು ಏಳು ದಿನಗಳ ಕಾಲ ಹೊಳಿಯನ್ನು ಸಂಭ್ರಮಿಸುತ್ತಾರೆ. ಎಲ್ಲೂರು ಸುತ್ತಲಿನ 47 ಮರಾಠಿ ಕುಟುಂಬಿಕರು ತಮ್ಮ ಗುರಿಕಾರರ ಮನೆಯಲ್ಲಿ ಸೇರಿ ಹಬ್ಬ ಆಚರಿಸುವ ಬಗ್ಗೆ ತಿರ್ಮಾನ ಕೈಗೊಂಡು, ಅದರಂತೆ ಸಮುದಾಯದ ದೇವರಾದ ಶ್ರೀ ಸಿದ್ದೇಶ್ವರನಿಗೆ ಪೂಜೆ ಸಲ್ಲಿಸಿ ದೇವರ ಅಣತಿಯಂತೆ ಮುಂದುವರಿಯುತ್ತಾರೆ.  ಕುಂದಾಪ್ರ ಡಾಟ್ ಕಾಂ ವರದಿ ಮನೆ ಮನೆ ತಿರುಗಾಟ, ಹಾಡು: ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಹೋಳಿ ಕುಣಿತಕ್ಕೆ ಮೂರು ತಂಡಗಳನ್ನು ರಚಿಸಿಕೊಂಡು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಸಮಾಜದ ಕಟ್ಟಕಡೆಯ ಮಗುವಿಗೂ ಶಿಕ್ಷಣ ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ಕನ್ನಡ ಶಾಲೆಗಳು ಕಾರ್ಯಪ್ರವೃತಗೊಂಡು ಕನ್ನಡ ಮಾಧ್ಯಮ ಶಾಲೆಗಳಲ್ಲಿ ಆಂಗ್ಲ ಮಾಧ್ಯಮಕ್ಕೂ ಅವಕಾಶ ನೀಡಬೇಕು. ಸರಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸರಕಾರ ಗಂಭೀರ ಪ್ರಯತ್ನ ನಡೆಸುತ್ತಿದ್ದು, ವಿದ್ಯಾಭಿಮಾನಿಗಳು ಹಾಗೂ ಹಳೆ ವಿದ್ಯಾರ್ಥಿಗಳು ಕನ್ನಡ ಮಾಧ್ಯಮ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಿಸಲು ಯೋಜನೆ ರೂಪಿಸಬೇಕು ಎಂದು ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್ ಹೇಳಿದರು. ಅವರು ಮೇಲ್‌ಗಂಗೊಳ್ಳಿ ಸರಕಾರಿ ಕಿರಿಯ ಪ್ರಾಥಮಿಕ (ಹವೇ) ಶಾಲೆಯಲ್ಲಿ ಆಯೋಜಿಸಲಾಗಿದ್ದ ಮಕ್ಕಳ ಹಬ್ಬ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು. ಗಂಗೊಳ್ಳಿ ಉದ್ಯಮಿ ಎಚ್.ಗಣೇಶ ಕಾಮತ್ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ನಟರಾಜ್, ಶಕುಂತಲಾ ಮತ್ತು ಬಸವರಾಜ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯೆ ಶಾಂತಿ ಖಾರ್ವಿ, ಅಕ್ಕಮ್ಮ, ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ, ಶಿಕ್ಷಣ ಸಂಯೋಜಕಿ ದೇವಕುಮಾರಿ, ಮಹಾಬಲ…

Read More

ಕುಂದಾಪ್ರ ಡಾಟ್ ಕಾಂ’ ಸುದ್ದಿ ಭಾರತೀಯ ದೂತಾವಾಸದಡಿಯಲ್ಲಿ ಕಾರ್ಯವಹಿಸುತ್ತಿರುವ ಭಾರತೀಯ ಸಮುದಾಯದ ಸೇವಾ ಸಂಸ್ಥೆಯ ಅಡಿಯಲ್ಲಿ (ಇಂಡಿಯನ್ ಕಮ್ಯೂನಿಟಿ ಬೇನೆವೋಲೆಂಟ್ ಫೋರಮ್-Iಅಃಈ ) ಪ್ರವಾಹ ಪೀಡಿತ ಕೇರಳ ಮತ್ತು ಕರ್ನಾಟಕದ ಕೊಡಗು ಜಿಲ್ಲೆಯ ಪ್ರವಾಹ ಪೀಡಿತರಿಗೆ ಧನ ಸಂಗ್ರಹಣೆ ಮಾಡಿ ದೇಣಿಗೆ ನೀಡುವ ಮೂಲಕ ಕತಾರ್ ದೇಶದಲ್ಲಿರುವ ಭಾರತದ ರಾಜ್ಯಗಳ ಸಂಘ ಸಂಸ್ಥೆಗಳು ಹೃದಯವಂತಿಕೆ ಮೆರೆದಿದ್ದಾರೆ. ಭಾರತೀಯ ರಾಯಭಾರಿಯಾದ ಪಿ. ಕುಮರನ್ ಅವರ ಮಾರ್ಗದರ್ಶನದಲ್ಲಿ ನಡೆದ ಈ ಅಭಿಯಾನಕ್ಕೆ ಭಾರತದ ನಾಗರೀಕರೆಲ್ಲ ಉದಾರವಾಗಿ ಸಹಾಯ ಹಸ್ತ ಚಾಚಿದ್ದಾರೆ. ಕತಾರ್ ದೇಶದಿಂದ ಆಗಮಿಸಿದ್ದ ಪ್ರತಿನಿಧಿಗಳಾದ ಐಸಿಬಿಎಫ್ ಕಾರ್ಯದರ್ಶಿ ಮಹೇಶ್ ಗೌಡ ಮುಂದಾಳತ್ವದಲ್ಲಿ ಅವರ ಜೊತೆಯಾಗಿ ಮಿಲನ್ ಅರುಣ್, ಅಧ್ಯಕ್ಷರು ಭಾರತೀಯ ಸಾಂಸ್ಕೃತಿಕ ಸಂಸ್ಥೆ, ಐಸಿಬಿಎಫ್ ಮತ್ತು ಕರ್ನಾಟಕ ಸಂಘದ ಮಾಜಿ ಅಧ್ಯಕ್ಷರೂ ಆದ ಅರವಿಂದ್ ಪಾಟೀಲ್, ಕರ್ನಾಟಕ ಸಂಘದ ಉಪಾಧ್ಯಕ್ಷರಾದ ರವಿ ಶೆಟ್ಟಿ ಹಾಗೂ ಕರ್ನಾಟಕ ಸಂಘ ಕತಾರ್ ಮಾಜಿ ಉಪಾಧ್ಯಕ್ಷರೂ ಹಾಗೂ ಕತಾರ್‌ದಲ್ಲಿ ಕನ್ನಡ ಚಲನಚಿತ್ರಗಳ ವಿತರಕರಾದ ಸುಬ್ರಮಣ್ಯ ಹೆಬ್ಬಾಗಿಲು ಇವರೆಲ್ಲರೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಪ್ರಕರಣವೊಂದರ ಇತ್ಯರ್ಥಕ್ಕಾಗಿ ಬೈಂದೂರು ಪೋಲಿಸ್ ಠಾಣೆಗೆ ತೆರಳಿದ್ದ ಶಿರೂರು ಜಿಲ್ಲಾ ಪಂಚಾಯತ್ ಸದಸ್ಯ ಸುರೇಶ್ ಬಟವಾಡಿ ಅವರನ್ನು ಠಾಣಾಧಿಕಾರಿ ಬಿ.ಎನ್. ತಿಮ್ಮೇಶ್ ಅವರು ಸಾರ್ವಜನಿಕವಾಗಿಯೇ ನಿಂದಿಸಿ ತಲ್ಲಾಟ ನಡೆಸಿದ್ದಾರೆ ಎಂದು ಆರೋಪಿಸಿ, ಘಟನೆಯನ್ನು ಖಂಡಿಸಿ ಬೈಂದೂರು ಪೋಲಿಸ್ ಠಾಣೆಯ ಎದುರು ಬೈಂದೂರು ಬಿಜೆಪಿ ಪಕ್ಷದ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಮಾತನಾಡಿ ಬೈಂದೂರು ಠಾಣಾಧಿಕಾರಿ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ಚಕಾರವೆತ್ತುತ್ತಿಲ್ಲ. ಮಟ್ಕ ದಂಧೆಗೆ ಕಡಿವಾಣ ಹಾಕುವಂತೆ ಸೂಚಿಸಿದ್ದರೂ ಅಕ್ರಮ ವ್ಯವಹಾರಗಳಿಗೆ ಹಿಂಬಾಗಿಲಿನಿಂದ ಬೆಂಬಲಿಸುತ್ತಿದ್ದಾರೆ. ಜನರ ಸಮಸ್ಯೆಯನ್ನಿಟ್ಟು ಕೊಂಡುಠಾಣೆಗೆ ಬಂದ ಜಿಲ್ಲಾ ಪಂಚಾಯತ್ ಸದಸ್ಯರ ಮೇಲೆ ಅಧಿಕಾರದ ದರ್ಪ ತೋರುವುದು ತಕ್ಕುದಲ್ಲ. ಪೊಲೀಸ್ ಠಾಣೆಯಲ್ಲಿ ಬ್ರಿಟಿಷರಕಾಲದ ವ್ಯವಸ್ಥೆ ಇನ್ನೂ ಮುಂದುವರಿಸಿಕೊಂಡು ಹೋಗುತ್ತಿರುವುದು ವಿಷಾದನೀಯ. ಠಾಣಾಧಿಕಾರಿಯ ಮೇಲೆ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದವರು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕುಂದಾಪುರ ಡಿವೈಎಸ್ಪಿ ಬಿ. ಪಿ. ದಿನೇಶ್ ಕುಮಾರ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಅ.10ರಿಂದ-19ರ ತನಕ ನಡೆಯಲಿರುವ ನವರಾತ್ರಿ ಉತ್ಸವಕ್ಕೆ ಸಕಲ ಸಿದ್ದತೆಗಳು ನಡೆದಿದೆ.ದೇವಳವು ಸಂಪೂರ್ಣ ಹೊಸ ವಿನ್ಯಾಸಗಳಿಂದ ಕೂಡಿದ ಪುಷ್ಪಾಲಂಕಾರ ಹಾಗೂ ವಿದ್ಯುದ್ದೀಪಗಳಿಂದ ಅಲಂಕೃತಗೊಂಡು ಕಂಗೊಳಿಸುತ್ತಿದೆ. ಅ.18ರ ಮಹಾನವಮಿಯಂದು ಬೆಳಿಗ್ಗೆ ಚಂಡಿಕಾಯಾಗ, ಮಧ್ಯಾಹ್ನ 01:00ಕ್ಕೆ ರಥೋತ್ಸವ ನಡೆಯಲಿದೆ. ಅ.19ರ ವಿಜಯದಶಮಿಯಂದು ಬೆಳಿಗ್ಗೆ 4ರಿಂದ ವಿದ್ಯಾರಂಭ, ಅಪರಾಹ್ನ ನವಾನ್ನಪ್ರಾಶನ ಸಂಜೆ ೫.೩೦ಕ್ಕೆ ಶ್ರೀ ಮೂಕಾಂಬಿಕೆಯ ವಿಜಯೋತ್ಸವ ಜರುಗಲಿದೆ. ಪ್ರತಿದಿನ ಆಹ್ವಾನಿತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ದೇವಳದ ಸೌಪರ್ಣಿಕಾ ಮತ್ತು ಕಾಶೀ ಸ್ನಾನ ಘಟ್ಟದಲ್ಲಿ ಹೆಚ್ಚಿನ ಬೆಳಕಿನ ವ್ಯವಸ್ಥೆ ಹಾಗೂ ಭದ್ರತಾ ಸಿಬ್ಬಂದಿಗಳ ನಿಯೋಜನೆ, ಸಭಾಭವನದಲ್ಲಿ ಹೆಚ್ಚುವರಿ ಊಟದ ವ್ಯವಸ್ಥೆ ಜೊತೆಗೆ ವಾಹನ ನಿಲುಗಡೆ ಹಾಗೂ ಸುಗಮ ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವುದು, ಸಿಸಿ ಕ್ಯಾಮೆರಾ ಮೇಲೆ ಹದ್ದಿನ ಕಣ್ಗಾವಲು ಇಂತಹ ಹಲವಾರು ವಿಚಾರಗಳ ಬಗ್ಗೆ ಈಗಾಗಲೇ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಎಂ. ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ, ಅ.07: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ತೆರವಾದ ಸ್ಥಾನಕ್ಕೆ ನಡೆಯಲಿರುವ ಉಪ ಚುನಾವಣೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಗೂ ಅನ್ವಹಿಸುವಂತೆ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ.  ಬೈಂದೂರು ವಿಧಾನಸಭಾ ಕ್ಷೇತ್ರವನ್ನೊಳಗೊಂಡಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ನವೆಂಬರ್ 3ರಂದು ಮತದಾನ ನಡೆಯಲಿದೆ. ಬೈಂದೂರು ತಹಶೀಲ್ದಾರರ ಕಛೇರಿಯಲ್ಲಿ ಭಾನುವಾರ ಸಂಜೆ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಕುಂದಾಪುರ ಉಪವಿಭಾಗಾಧಿಕಾರಿ ಟಿ. ಭೂಬಾಲನ್ ಅವರು ಈ ಬಗ್ಗೆ ಮಾಹಿತಿ ನೀಡಿದರು. ಅ.9 ಮಂಗಳವಾರ ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ಅ.16ರ ಮಂಗಳವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರುತ್ತದೆ. ಅ.17ರಂದು ನಾಮಪತ್ರ ಪರಿಶೀಲನೆ, ಅ.20ರಂದು ನಾಮಪತ್ರ ಹಿಂದೆಗೆದುಕೊಳ್ಳಲು ಕೊನೆಯ ದಿನವಾಗಿದ್ದು, ನ.03ರಂದು ಮತದಾನ ನಡೆಯಲಿದೆ. ನ.06ರಂದು ಮತ ಎಣಿಕೆ, ನ.11ರಂದು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಅಲ್ಲಿಯ ತನಕ ಬೈಂದೂರು ವಿಧಾನಸಭಾ ಕ್ಷೇತ್ರವನ್ನು ಒಳಗೊಂಡಿರುವ ಉಡುಪಿ ಜಿಲ್ಲೆಯಲ್ಲಿಯೂ ನೀತಿಸಂಹಿತೆ ಜಾರಿಯಲ್ಲಿರಲಿದೆ. ಮತದಾರ ಪಟ್ಟಿ ಪರಿಷ್ಕರಣೆಗೆ 2 ದಿನ ಅವಕಾಶ: ದಿ. 01.01.2018 ಅನ್ವಯಿಸುವಂತೆ ಮತದಾನ ಮಾಡಲು ಅರ್ಹರಿರುವ ಮತದಾರರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮನುಷ್ಯನ ಆರೋಗ್ಯ ಅತಿ ಮುಖ್ಯವಾಗಿದ್ದು, ಅದನ್ನು ಕಾಪಾಡಿಕೊಳ್ಳುವುದು ಕೂಡ ಆತನ ಜವಾಬ್ದಾರಿ. ದೇಹದ ಎಲ್ಲಾ ಅಂಗಾಂಗಗಳು ಪ್ರಮುಖ್ಯತೆ ಹೊಂದಿದ್ದು, ಕಣ್ಣುಗಳು ಆ ಪೈಕಿ ಅಗ್ರಸ್ಥಾನದಲ್ಲಿದೆ. ಬದುಕಿದ್ದಾಗ ಅದರ ರಕ್ಷಣೆಯ ಜೊತೆಗೆ ಮರಣೋತ್ತರವೂ ಕಣ್ಣುಗಳು ಮತ್ತೊಬ್ಬರಿಗೆ ಬೆಳಕು ನೀಡುವಂತೆ ಮಾಡುವ ಜವಾಬ್ದಾರಿ ನಮ್ಮೆಲ್ಲರದ್ದೂ ಆಗಿದೆ ಎಂದು ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಐ. ನಾರಾಯಣ ಹೇಳಿದರು. ಅವರು ಶನಿವಾರ ತಗ್ಗರ್ಸೆ ಶ್ರೀ ಬ್ರಹ್ಮಲಿಂಗೇಶ್ವರ ಫ್ರೆಂಡ್ಸ್ ಇವರ ಆಶ್ರಯದಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಸವಿ ಸವಿ ನೆನಪು ಕಲಾ ಸಂಸ್ಥೆ ರಿ. ಕಳವಾಡಿ, ಶ್ರೀ ಮಾರಿಕಾಂಬಾ ಹವ್ಯಾಸಿ ಕಲಾ ತಂಡ ರಿ. ಕಳವಾಡಿ, ರೋಟರಿ ಕ್ಲಬ್ ಬೈಂದೂರು ಮೊದಲಾದ ಸಂಘಟನೆಗಳ ಸಹಯೋಗದೊಂದಿಗೆ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ತಗ್ಗರ್ಸೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮೊಕ್ತೇಸರ ಟಿ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ರಂಗ ಸುರಭಿಯ ಆಶ್ರಯದಲ್ಲಿ ಕರ್ನಾಟಕ ನಾಟಕ ಅಕಾಡೆಮಿಯ ಸಹಕಾರದಲ್ಲಿ ರಂಗ ನಿರ್ದೇಶಕ ಗಣೇಶ್ ಎಂ ನಿರ್ದೇಶನದಲ್ಲಿ ನಡೆಯುತ್ತಿದ್ದ ರಂಗ ತರಬೇತಿ ಶಿಬಿರದ ಸಮಾರೋಪ ಕಾರ್ಯಕ್ರಮವು ಯಳಜಿತ್‌ದ ಕಪ್ಸೆಯ ನಾರಾಯಣ ಉಡುಪರ ಮನೆಯ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾರಾಯಣ ಉಡುಪ ವಹಿಸಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಅತಿಥಿಗಳಾಗಿ ಬೈಂದೂರು ಶ್ರೀರಾಮ ಸೌಹಾರ್ದ ಕೋ-ಆಪರೇಟಿವ್‌ನ ಮುಖ್ಯಕಾರ್ಯನಿರ್ವಹಣಾಧಿಕಾರಿ ನಾಗರಾಜ ಪಿ. ಯಡ್ತರೆ ಹಾಗೂ ರಂಗ ನಿರ್ದೇಶಕ ಗಣೇಶ ಮುಂಡಾಡಿ ಇದ್ದರು. ಸುರಭಿಯ ವ್ಯವಸ್ಥಾಪಕ ಕೃಷ್ಣಮೂರ್ತಿ ಉಡುಪ ಸ್ವಾಗತಿಸಿ, ಕಾರ್ಯದರ್ಶಿ ಲಕ್ಷ್ಮಣ ಕೊರಗ ವಂದಿಸಿ ನಿರ್ದೇಶಕ ಸುಧಾಕರ ಪಿ ಬೈಂದೂರು ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ರಂಗ ಶಿಬಿರದ ಸದಸ್ಯರಿಂದ ಜ್ಞಾನಪೀಠ ಪ್ರಶಸ್ತಿ ಪುರಸ್ಕ್ರತ ಡಾ. ಕೆ. ಶಿವರಾಮ ಕಾರಂತರ ಕಾದಂಬರಿಯಾದಾರಿತ ನಾಟಕ ಚೋಮನದುಡಿಯ ಪ್ರಾಥಮಿಕ ಪ್ರದರ್ಶನ ನಡೆಯಿತು.

Read More

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ ಬೈಂದೂರು: ಅಜ್ಜನಿಂದ ಬಳುವಳಿಯಾಗಿ ಬಂದ ಕಲೆ ಮೊಮ್ಮಕ್ಕಳ ಕೈಯಲ್ಲಿ ಇಂದಿಗೂ ಮೂರ್ತರೂಪ ಪಡೆಯುತ್ತಿದೆ. ನೂರಾರು ವರ್ಷಗಳಿಂದಲೂ ನಡೆದು ಬಂದ ಗಣಪತಿಯ ವಿಗ್ರಹ ತಯಾರಿಸುವ ಕಾಯಕ ಅಷ್ಟೆ ನಿಷ್ಠೆಯಿಂದ ಮುಂದುವರಿದಿದೆ. ದೇವರ ಕೈಂಕರ್ಯವೆಂದು ಪ್ರತಿವರ್ಷವೂ ಬೇಡಿಕೆಗನುಸಾರವಾಗಿ ಗಣಪತಿ ವಿಗ್ರಹವನ್ನು ರಚಿಸುತ್ತಾ ಸಂತೃಪ್ತಿಯನ್ನು ಕಾಣಿತ್ತಿದೆ ಬೈಂದೂರು ಬಂಕೇಶ್ವರ ಶಿಲ್ಪಿ ದಿ. ವೆಂಕಟರಮಣ ಆಚಾರರ ಕುಟುಂಬ. ಶತಮಾನದ ಹಿನ್ನೆಲೆ: ಬೈಂದೂರಿನ ಬಂಕೇಶ್ವರದಲ್ಲಿರುವ ಶಿಲ್ಪಿ ದಿ. ವೆಂಕಟರಮಣ ಆಚಾರ್ ಅವರ ಕುಟುಂಬಕ್ಕೆ ಶತಮಾನದಿಂದ ಗಣಪತಿ ವಿಗ್ರಹವನ್ನು ತಯಾರಿಸಿದ ಹಿನ್ನೆಲೆಯಿದೆ. ವೆಂಕಟರಮಣ ಅವರ ತಂದೆ ಬಂಕೇಶ್ವರದ ದಿ. ನಾಗಪ್ಪ ಆಚಾರ್ ಅವರಿಂದ ಆರಂಭಗೊಂಡ ಸೇವಾ ಕೈಂಕರ್ಯವನ್ನು ವೆಂಕಟರಮಣ ಆಚಾರ್ ಅವರು ಮುಂದುವರಿಸಿಕೊಂಡು ಬಂದಿದ್ದು, ಇಂದು ಅವರ ಮಕ್ಕಳಾದ ನಾಗರಾಜ, ಗಂಗಾಧರ ಮತ್ತು ಗಣೇಶ ಅವರಿಂದ ಮೂಲಕ ಜೀವಸೆಲೆ ಪಡೆದಿದೆ. ಇವರ ಕುಟುಂಬ ನೂರು ವರ್ಷಕ್ಕೂ ಹೆಚ್ಚುಕಾಲ ಮೂರ್ತಿ ರಚನೆಯಲ್ಲಿ ತೊಡಗಿಸಿಕೊಂಡದ್ದರೇ, ವೆಂಕಟರಮಣ ಆಚಾರ್ಯರು 65 ವರ್ಷಗಳಿಂದ ಮೂರ್ತಿ…

Read More