ಕುಂದಾಪುರ: ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಶ್ರೀ ಗಣೇಶೋತ್ಸವವನ್ನು ವಿಜೃಂಭಣೆಯಿಂದ ನಡೆಸಲಾಯಿತು. ಕೊನೆಯ ದಿನ ನಡೆಸಲಾದ ಧಾರ್ಮಿಕ ಸಭೆಯಲ್ಲಿ ಧರ್ಮದರ್ಶಿ ವೇ. ಹೆಚ್. ರಾಮಚಂದ್ರ ಭಟ್ಟರು ಸರ್ವರನ್ನೂ ಸ್ವಾಗತಿಸುತ್ತಾ, ಪ್ರಾಸ್ತಾವಿಕವಾಗಿ ಮಾತನಾಡಿ ದೇವಸ್ಥಾನವು ಹಂತಹಂತವಾಗಿ ಬೆಳೆದು ಬಂದ ರೀತಿ ಹಾಗೂ ದೇವಸ್ಥಾನದಿಂದ ತಾವು ನಡೆಸುವ ಸಮಾಜಮುಖಿ ಕಾರ್ಯಗಳನ್ನು ವಿವರಿಸಿದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾದ ಬೆಂಗಳೂರಿನ ಅರುಣ ಕುಮಾರ ಇವರು ತಾಲೂಕು ಮಟ್ಟದಲ್ಲಿ ನಡೆದ ಕಲೆ, ಸಾಹಿತ್ಯ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಣೆಯನ್ನು ನೆರವೇರಿಸಿ ಮಕ್ಕಳನ್ನು ಹುರಿದುಂಬಿಸಿದರು. ಈ ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ಗುರುಕುಲ ಪಬ್ಲಿಕ್ ಸ್ಕೂಲ್, ವಕ್ವಾಡಿ ಹಾಗೂ ಪ್ರಾಥಮಿಕಶಾಲಾ ವಿಭಾಗದಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ, ಹಟ್ಟಿಅಂಗಡಿ ಈ ಶಾಲೆಗಳು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡವು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ ಧರ್ಮದರ್ಶಿಗಳಾದ ಕೃಷ್ಣಪ್ರಸಾದ ಅಡ್ಯಂತಾಯ ಅವರು ಸಭೆಯ ಅಧ್ಯಕ್ಷತೆಯನ್ನು ವಹಿಸಿ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ವ್ಯಕ್ತಿಯ ಅಭಿವೃದ್ಧಿ ಸಮಾಜಕ್ಕೆ ಪೂರಕವಾಗಿರಬೇಕು, ಸಾಧನೆ ಮಾಡಲು…
Author: ಸುನಿಲ್ ಹೆಚ್. ಜಿ. ಬೈಂದೂರು
ಕುಂದಾಪುರ: ರೋಟರಿ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ಹಂಗಳೂರಿನ ಸೈಂಟ್ ಪಿಯುಸ್ ಆಂಗ್ಲ ಮಾಧ್ಯಮ ಶಾಲೆಯ ಇಂಟರ್ಯಾಕ್ಟ್ ಕ್ಲಬ್ನ ಪದಪ್ರದಾನ ಸಮಾರಂಭ ಜರುಗಿತು. ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಅವರು ಇಂಟರ್ಯಾಕ್ಟ್ ಕ್ಲಬ್ ಅಧ್ಯಕ್ಷ ಸುಹಾಸಿನಿ ಕಾರ್ಯದರ್ಶಿ ಅಜೆಟನ್ ನಜರೆಲ್ಅವರಿಗೆ ಪದಪ್ರದಾನ ನೆರವೇರಿಸಿ ಪ್ರಮಾಣ ವಚನ ಭೋಧಿಸಿದರು. ಶಾಲಾ ಮುಖ್ಯೋಪಧ್ಯಾಯಿನಿ ಸಿಸ್ಟರ್ ಐರಿನ್ ಕ್ರಾಸ್ತಾ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ರೋಟರಿ ಕ್ಲಬ್ ಕುಂದಾಪುರದ ಕಾರ್ಯದರ್ಶಿ ಸಂತೋಷ ಕೋಣಿ, ಇಂಟರ್ಯಾಕ್ಟ್ ಚೇರ್ಮೆನ್ ವೆಂಕಟೇಶ ಪ್ರಭು ಉಪಸ್ಥಿತರಿದ್ದರು. ಶ್ರೇಯಾ ಸ್ವಾಗತಿಸಿದರು. ಸೋನಾಲಿ ಎಸ್. ಕೆ. ಕಾರ್ಯಕ್ರಮ ನಿರೂಪಿಸಿದರು. ಶಾಲಾ ವಿಧ್ಯಾರ್ಥಿ ನಾಯಕಿ ಪ್ರತೀಕ್ಷಾ ಬಿಲ್ಲವ ವಂದಿಸಿದರು. ಶಿಕ್ಷಕ ವೃಂದದವರು ಸಹಕರಿಸಿದರು.
ಕುಂದಾಪುರ: ಜೇಸಿಐ ಕುಂದಾಪುರ ಸಿಟಿ ಆಶ್ರಯದಲ್ಲಿ ಕುಂದಾಪುರದ ರೋಟರಿ ಲಕ್ಷ್ಮೀನರಸಿಂಹ ಕಲಾಮಂದಿರದಲ್ಲಿ ನಡೆಯುತ್ತಿರುವ ಜೇಸಿ ಸಪ್ತಾಹದ ೪ನೇ ದಿನದ ಸಭಾ ಕಾರ್ಯಕ್ರಮದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿರುವ ಧೀರಜ್ ಹೆಜಮಾಡಿ ಅವರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿ ಕುಂದಾಪುರ ತಾ. ಪಂ. ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ಮಾತನಾಡಿ ಸಮಾಜದ ಒಳಿತಿಗಾಗಿ ನಿಸ್ವಾರ್ಥ ಮನೋಭಾವದಿಂದ ಮಾಡುವ ಸೇವೆಯಿಂದ ದೇಶದ ಅಭ್ಯುದಯ ಸಾಧ್ಯ. ಈ ನಿಟ್ಟಿನಲ್ಲಿ ಉತ್ತಮ ಯುವಕರ ಪಡೆಯನ್ನು ಹೊಂದಿರುವ ಜೇಸಿ ಸಂಘಟನೆಯಿಂದ ಸಮಾಜದಲ್ಲಿ ಬದಲಾವಣೆ ತರುವಂತಹ ಉತ್ತಮ ಕಾರ್ಯಗಳು ಮೂಡಿ ಬರಲಿ ಎಂದು ಹೇಳಿದರು. ಸಮಾರಂಭದ ಅಧ್ಯಕ್ಷತೆಯನ್ನು ಜೇಸಿಐ ಕುಂದಾಪುರ ಸಿಟಿ ಅಧ್ಯಕ್ಷ ಚಂದ್ರಕಾಂತ ವಹಿಸಿದ್ದರು. ಈ ಸಂದರ್ಭದಲ್ಲಿ ಕುಂದಾಪುರ ನ್ಯೂ ಮೆಡಿಕಲ್ ಮಾಲಕ ದಿನಕರ ಕೆ. ಶೆಟ್ಟಿ, ರೋಟರಿ ವಲಯ 1ರ ಅಸಿಸ್ಟೆಂಟ್ ಗವರ್ನರ್ ಸತೀಶ್ ಎನ್. ಶೇರೆಗಾರ್, ಗುತ್ತಿಗೆದಾರರಾದ ಮಹೇಶ್ ಪೂಜಾರಿ, ವಿದ್ಯುತ್ ಗುತ್ತಿಗೆದಾರರಾದ ಪ್ರಕಾಶ್ ಆನಗಳ್ಳಿ, ಕುಂದಾಪುರ ಪುರಸಭೆ ಸದಸ್ಯ ಎ. ಸಂದೀಪ ಪೂಜಾರಿ ಕೋಡಿ,…
ಬೈಂದೂರು: ನಮ್ಮ ಸಹಕಾರಿ ಸಂಘವು ಕಳೆದ 13 ವರ್ಷಗಳಿಂದ ಗ್ರಾಮೀಣ ಭಾಗದಲ್ಲಿ ಸಮಾಜದ ಎಲ್ಲಾ ವರ್ಗದವರಿಗೂ ಆರ್ಥಿಕ ಸಹಕಾರ ನೀಡುವುದರ ಅವರ ಅರ್ಥಿಕ ಪರಿಸ್ಥಿತಿಯನ್ನು ಉತ್ತಮಗೊಳಿಸುವುದಲ್ಲದೇ ಅದರೊಂದಿಗೆ ತಾನು ಅಭಿವೃದ್ಧಿಯತ್ತ ದಾಪುಗಾಲಿಟ್ಟಿದೆ. ಈ ಸಾಲಿನಲ್ಲಿ ಗರಿಷ್ಠ 68.07 ಲಕ್ಷ ರೂ. ನಿವ್ವಳ ಲಾಭ ಹೊಂದುವ ಮೂಲಕ ಅಭೂತಪೂರ್ವ ಸಾಧನೆ ಮಾಡಿ, ತನ್ನ ಸದಸ್ಯರಿಗೆ ಶೇ. 13 ಡಿವಿಡೆಂಟ್ ಘೋಷಣೆ ಮಾಡಿದೆ ಎಂದು ಬೈಂದೂರು ಸಾಗರ್ ಕ್ರೆಡಿಟ್ ಕೋ ಆಪ್ರೇಟಿವ್ ಸೊಸೈಟಿಯ ಉಪಾಧ್ಯಕ್ಷ ರಾಜು ಪೂಜಾರಿ ಹೇಳಿದರು. ಇಲ್ಲಿನ ಸಂಘದ ಪ್ರಧಾನ ಕಛೇರಿ ಆವರಣದಲ್ಲಿ ನಡೆದ 13ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಮ್ಮ ಸಂಘವು 46.69 ಕೋಟಿ ರೂ. ಠೇವಣಿ ಸಂಗ್ರಹಿಸಿದ್ದು, 42.25 ಕೋಟಿ ರೂ. ಮರುಪಾವತಿ ಮಾಡಿದೆ. ವರದಿ ವರ್ಷದ ಅಂತ್ಯಕ್ಕೆ 20.21 ಕೋಟಿ ರೂ. ಠೇವಣೆ ಹೊಂದಿದ್ದು, 19.67 ಕೋಟಿ ರೂ. ಸಾಲ ನೀಡಿದೆ, ಈ ಸಾಲಿನಲ್ಲಿ 193.42 ಕೋಟಿ ವಾರ್ಷಿಕ ವ್ಯವಹಾರ ನಡೆಸಿ, 24.65 ಕೋಟಿ…
ಕುಂದಾಪುರ: ಇತ್ತೀಚೆಗೆ ಉಳ್ಳೂರು11 ಇಲ್ಲಿ ನಡೆದ 2015-16ನೇ ಸಾಲಿನ ಬೈಂದೂರು ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ವಾಲಿಬಾಲ್ ಪಂದ್ಯಾಟದಲ್ಲಿ ಸ.ಹಿ.ಪ್ರಾ.ಶಾಲೆ ಇಡೂರು ಕುಂಜ್ಞಾಡಿ ಇಲ್ಲಿನ ಬಾಲಕಿಯರ ತಂಡವು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಎಸ್.ಡಿ.ಎಂಸಿ ಅಧ್ಯಕ್ಷ ಸಂತೋಷ್ ಶೆಟ್ಟಿ, ಶಾಲಾ ಪ್ರಭಾರ ಮುಖ್ಯಶಿಕ್ಷಕಿ ಗೀತಾ ಬಿ., ದೈಹಿಕ ಶಿಕ್ಷಣ ಶಿಕ್ಷಕಿ ಜಯಂತಿ ಉಪಸ್ಥಿತರಿದ್ದರು.
ಕುಂದಾಪುರ: ಈ ಬಾರಿ ಕೋಟತಟ್ಟು ಗ್ರಾಮ ಪಂಚಾಯಿತಿ, ಡಾ.ಶಿವರಾಮ ಕಾರಂತ ಟ್ರಸ್ಟ್(ರಿ.) ಉಡುಪಿ, ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ(ರಿ.) ಕೋಟ ಸಾರಥ್ಯದಲ್ಲಿ ಡಾ.ಶಿವರಾಮ ಕಾರಂತ ಜನ್ಮದಿನೋತ್ಸವದ ಅಂಗವಾಗಿ ಅಕ್ಟೋಬರ್ 1 ರಿಂದ 10ರ ವರೆಗೆ ಸಾಹಿತ್ಯಿಕ ಸಾಂಸ್ಕೃತಿಕ ದಿಬ್ಬಣ ಚಿತ್ತಾರ 2015 ಕಾರ್ಯಕ್ರಮಗಳು ನಡೆಯಲಿದೆ. ಅಕ್ಟೋಬರ್ 1ರಂದು ಮಹಿಳಾ ಸಾಹಿತ್ಯ ಸಾಮವೇಶ ಚೇತನ, 2ರಂದು ನೃತ್ಯ ಮತ್ತು ನಾಟಕ ಕಾರ್ಯಕ್ರಮ, 3ರಂದು ತಾಳಮದ್ದಳೆ, 4ರಂದು ಪುಟಾಣಿಗಳ ಸಮಾವೇಶ ಅಕ್ರೂಟ್, 5ರಂದು ಉಡುಪಿ ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಮಾವೇಶ ಪ್ರೇರಣ, 6ರಂದು ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಮ್ಮಟ, 7ರಂದು ಪ್ರಗತಿಪರ ಸಮಾವೇಶ ಒತ್ತಾಸೆ, 8ರಂದು ಉರಗ ಪ್ರದರ್ಶನ- ಪ್ರಾತ್ಯಕ್ಷಿಕೆ ಹಾವು ನಾವು, 9ರಂದು ಪಂಚಾಯಿತಿ ಹಬ್ಬ ಮತ್ತು 10ರಂದು ಕಾರಂತರ ಹುಟ್ಟೂರ ಪ್ರಶಸ್ತಿ ಪ್ರಧಾನ , ಯಕ್ಷನಾಟ್ಯ ವೈಭವ ಸಂಗೀತ ಸುಧೆ ಚಿತ್ತ ಚಿತ್ತಾರ ನಡೆಯಲಿದೆ. ಅಲ್ಲದೇ ಅಂತರಾಷ್ಟ್ರೀಯ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ ಕುಂದಾಪುರ ಅವರಿಂದ ಕಾರ್ಟೂನ್ ಹಬ್ಬ ಮತ್ತು ಕಾರಂತ…
ಕುಂದಾಪುರ: ಮುಂಬೈನ ರಂಗನಟ, ನಿರ್ದೇಶಕ, ರಂಗ ಸಂಯೋಜಕ, ಟಿ.ವಿ, ಸೀರಿಯಲ್, ಸಾಕ್ಷ್ಯಚಿತ್ರ ಮತ್ತು ಚಲನಚಿತ್ರಗಳ ನಿರ್ಮಾಪಕ, ನಾಟಕ, ಕಥೆ, ಕಾದಂಬರಿಗಳ ಲೇಖಕ, ಪ್ರಕಾಶಕ, ಹಲವು ಪ್ರತಿಷ್ಠಾನಗಳಿಗೆ ಪ್ರಾಯೋಜಕ, ನಾಟಕರಂಗಕಲೆಯ ತರಬೇತಿಗಾರನಾಗಿ ಸೇವೆ ಸಲ್ಲಿಸುತ್ತಿರುವ ಸದಾನಂದ ಸುವರ್ಣ ಅವರಿಗೆ ಈ ಬಾರಿಯ ಕಾರಂತ ಹುಟ್ಟೂರ ಪ್ರಶಸ್ತಿಗೆ ಆಯ್ಕೆ ಸಮಿತಿ ಆಯ್ಕೆ ಮಾಡಿರುವುದಾಗಿ ಕೋಟತಟ್ಟು ಪಂಚಾಯಿತಿ ಅಧ್ಯಕ್ಷರು ಮತ್ತು ಕಾರಂತ ಪ್ರತಿಷ್ಠಾನದ ಅಧ್ಯಕ್ಷ ಎಚ್.ಪ್ರಮೋದ್ ಹಂದೆ ತಿಳಿಸಿದರು. ಅವರು ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಾ, ಕಾರಂತರ ಸಮಕಾಲೀನರಾದ ಸದಾನಂದ ಸುವರ್ಣರ ಈ ಬಾರಿಯ ಕಾರಂತ ಹುಟ್ಟೂರ ಪ್ರಶಸ್ತಿಗೆ ಸೂಕ್ತ ವ್ಯಕ್ತಿ ಎಂದು ಪ್ರಶಸ್ತಿ ಆಯ್ಕೆ ಸಮಿತಿ ಆಯ್ಕೆ ಮಾಡಿದೆ. ಕನ್ನಡ, ತುಳು, ಬೆಂಗಾಲಿ ಭಾಷೆಗೆ ಸಂಬಂಧಪಟ್ಟ ಹಲವು ಸಾಕ್ಷ್ಯಚಿತ್ರಗಳ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ರೂಪ ದರ್ಶನ, ಗುಡ್ಡದ ಭೂತ, ಕಣ್ಣು ತೆರೆಯಿತು, ಕುರುಡನ ಸಂಗೀತ, ವಿಷಮ ಗಳಿಗೆ ಮೊದಲಾದ ಧಾರವಾಹಿಗಳಿಗೆ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಘಟಶ್ರಾದ್ಧ ಚಿತ್ರ ನಿರ್ಮಾಣಕ್ಕಾಗಿ ಸುವರ್ಣ ಅವರಿಗೆ…
ಕುಂದಾಪುರ: ವಿಶ್ವ ಹೃದಯ ದಿನದ ಅಂಗವಾಗಿ ಕುಂದಾಪುರದಲ್ಲಿ ಪ್ರಪ್ರಥಮ ಬಾರಿಗೆ ’ಆರೋಗ್ಯಕ್ಕಾಗಿ ಓಟ-2015’ ವಿಶಿಷ್ಟ ಕಾರ್ಯಕ್ರಮವನ್ನು ಸೆ.27ರಂದು ಆದಿತ್ಯವಾರ ಬೆಳಿಗ್ಗೆ 7ಕ್ಕೆ ಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿದೆ. ಹೃದಯದ ಬಗೆಗೆ ಅರಿವು ಹಾಗೂ ಉತ್ತಮ ಆರೋಗ್ಯವನ್ನು ಕಾಯುಕೊಳ್ಳಲು ರೋಟರಿ ಕ್ಲಬ್ ಕುಂದಾಪುರ ಮತ್ತು ಕುಂದಾಪುರದ ನ್ಯೂ ಮೆಡಿಕಲ್ ಸೆಂಟರ್ ಜಂಟಿಯಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಬಗ್ಗೆ ನ್ಯೂ ಮೆಡಿಕಲ್ ಸೆಂಟರ್ ನಿರ್ದೇಶಕ ಡಾ.ರಂಜನ್ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಕುಂದಾಪುರದ ಗಾಂಧಿ ಮೈದಾನದಿಂದ ಆರಂಭಗೊಳ್ಳುವ ಓಟ ಶಾಸ್ತ್ರೀವೃತ್ತ, ಯಡ್ತರೆ ಮಂಜಯ್ಯ ಶೆಟ್ಟಿ ರಸ್ತೆ(ಪಶ್ಚಿಮ) ಮೂಲಕ ಹೊಸ ಬಸ್ ನಿಲ್ದಾಣ ತಲುಪಿ, ಅಲ್ಲಿಂದ ಪುರಸಭೆ ರಸ್ತೆ ಮೂಲಕ ಶಾಸ್ತ್ರೀಸರ್ಕಲ್ ಹಾದು ಗಾಂಧಿ ಮೈದಾನ ತಲುಪಲಿದೆ. ಒಟ್ಟು 3.2 ಕಿ.ಮೀ ದೂರವನ್ನು ಓಟಗಾರ ಕ್ರಮಿಸಬೇಕಾಗುತ್ತದೆ ಎಂದರು. ಶೇ.೯೦ರಷ್ಟು ಹೃದಯ ಸಂಬಂಧಿ ತೊಂದರೆಗಳಿಗೆ ದೈಹಿಕ ವ್ಯಾಯಾಮದ ಕೊರತೆಯೂ ಕಾರಣ. ದಿನಕ್ಕೆ 20 ನಿಮಿಷ ನಡೆದರೆ ಹೃದಯ ತೊಂದರೆಗಳನ್ನು ತಡೆಗಟ್ಟಬಹುದು. ವಾರಕ್ಕೆ 5 ದಿನ 20 ನಿಮಿಷ…
ಕುಂದಾಪುರ: ಇಲ್ಲಿನ ಡಾ| ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಪೊಲೀಸ್ ಇಲಾಖೆಯ ಕಾನೂನು, ನೀತಿ-ನಿಯಮಗಳ ಬಗೆಗೆ ಅರಿವು ಮೂಡಿಸಲು ಕುಂದಾಪುರ ಪೊಲೀಸರ ಸಾರಥ್ಯದಲ್ಲಿ ಮಾಹಿತಿ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಕುಂದಾಪುರ ವಲಯ ಉಪಅಧೀಕ್ಷಕ ಮಂಜುನಾಥ ಶೆಟ್ಟಿ ಮಾತನಾಡಿ, ಕುಂದಾಪುರ ನಗರದ ವಿವಿಧ ಶಾಲಾ ಕಾಲೇಜುಗಳಿಗೆ ಪ್ರತಿನಿತ್ಯ ಸುಮಾರು ಹತ್ತರಿಂದ ಹನ್ನೊಂದು ಸಾವಿರದ ತನಕ ವಿದ್ಯಾರ್ಥಿಗಳು ಬಂದು ಹೋಗುತ್ತಿದ್ದಾರೆ. ಈ ಸಮಯದಲ್ಲಿ ಟ್ರಾಫಿಕ್ ನಿಯಮಗಳನ್ನು ಅರಿತು ಅನುಸರಿಸಬೇಕಾದುದು ಪ್ರತಿಯೊಬ್ಬರ ಕರ್ತವ್ಯ ಎಂದರು. ವಿದ್ಯಾರ್ಥಿಗಳು ಮದ್ಯಪಾನ ಮುಂತಾದ ದುಷ್ಚಟಗಳಿಂದ ಸಾಧ್ಯವಾದಷ್ಟು ದೂರವಿದ್ದು ಕಲಿಕೆಯಲ್ಲಿ ಉತ್ತಮವಾದ ಪ್ರಗತಿಯನ್ನು ತೋರುವತ್ತ ಗಮನಹರಿಸಬೇಕಿದೆ ಎಂದರು. ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ಬಿ. ಎಂ. ಸುಕುಮಾರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲೆ ಸೀಮಾ ಪಿ. ಶೆಟ್ಟಿ, ಕುಂದಾಪುರ ಠಾಣಾಧಿಕಾರಿ ನಾಸೀರ್ ಹುಸೇನ್, ಸಂಚಾರಿ ಪೊಲೀಸ್ ಠಾಣೆಯ ಎಸ್.ಐ.ಗಳಾದ ದೇವೆಂದ್ರ ಹಾಗೂ ಜಯ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಾಯಿತು. ವಿದ್ಯಾರ್ಥಿಗಳ ಪ್ರಶ್ನೆಗಳಿಗೆ…
ಕುಂದಾಪುರ: ನಗರದ ಇಲ್ಲಿನ ಪಾರಿಜಾತ ವೃತ್ತದ ಬಳಿ ಇರುವ ಹೂವಿನ ಮಾರುಕಟ್ಟೆಯಲ್ಲಿ 6-7 ವರ್ಷದಿಂದ ಕರವನ್ನು ಕಟ್ಟದ ಹೂವಿನ ಟೇಬಲ್ ತೆರವು ಕಾರ್ಯಾಚರಣೆ ಕುಂದಾಪುರ ಪುರಸಭೆಯಿಂದ ನಡೆಯಿತು. ಪುರಸಭೆಯ ಮುಖ್ಯಾಧಿಕಾರಿ ಗೋಪಾಲ ಶೆಟ್ಟಿ ಅವರ ನೇತೃತ್ವದಲ್ಲಿ ಪೌರಕಾರ್ಮಿಕರು ಕರವನ್ನು ಕಟ್ಟದ ನಾಲ್ಕು ಟೇಬಲ್ಗಳನ್ನು ತೆರವುಗೊಳಿಸಿದರು. ಏಳು ಟೇಬಲುಗಳ ಹೂವಿನ ವ್ಯಾಪಾರಿಗಳು ಕಳೆದ ಏಳು ವರ್ಷಗಳಿಂದ ಪುರಸಭೆಗೆ ಕರವನ್ನು ಕಟ್ಟುತ್ತಿರಲಿಲ್ಲ. ಈ ಬಗ್ಗೆ ಪುರಸಭೆ ಬಹಳ ಹಿಂದೆಯೇ ನೋಟಿಸು ನೀಡಿ ಎಚ್ಚರಿಸಿತ್ತು. ಆದಾಗ್ಯೂ ಕರವನ್ನು ಕಟ್ಟಿರಲಿಲ್ಲ. ಕೊನೆಯ ಕ್ರಮವಾಗಿ ಈ ತೆರವು ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಬೇಕಾಯಿತು. ಏಳು ಜನರ ಪೈಕಿ ಮೂವರು ಸ್ಥಳದಲ್ಲಿಯೇ ಹಣವನ್ನು ಕಟ್ಟಿದ್ದರಿಂದ ನಾಲ್ಕು ಟೇಬಲುಗಳನ್ನು ತೆರವುಗೊಳಿಸಲಾಗಿದೆ ಎಂದು ಮುಖ್ಯಾಧಿಕಾರಿ ಕುಂದಾಪ್ರ ಡಾಟ್ ಕಾಂ ಗೆ ತಿಳಿಸಿದ್ದಾರೆ. ಹೂವಿನ ಟೇಬಲ್ ವಿಷಯವಾಗಿ ಪುರಸಭೆಯ ಸಾಮಾನ್ಯ ಸಭೆಯಲ್ಲಿಯೂ ಚರ್ಚೆಗಳಾಗಿ, ತೆರವುಗೊಳಿಸುವ ನಿರ್ಣಯವನ್ನು ಕೈಗೊಳ್ಳಲಾಗಿತ್ತು.
