Author: ಸುನಿಲ್ ಹೆಚ್. ಜಿ. ಬೈಂದೂರು

ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

ಗಂಗೊಳ್ಳಿ: ಇತ್ತೀಚಿಗೆ ಆಕಸ್ಮಿಕವಾಗಿ ಮೃತಪಟ್ಟ ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘದ ಸದಸ್ಯ ಕಂಚುಗೋಡು ಭಗತ್ ನಗರದ ನಿವಾಸಿ ಕೃಷ್ಣ ಖಾರ್ವಿ ಕುಟುಂಬಕ್ಕೆ ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘದ ವತಿಯಿಂದ ಪರಿಹಾರ ವಿತರಿಸಲಾಯಿತು. ಸಂಘದ ಅಧ್ಯಕ್ಷ ಎಚ್.ಮಂಜು ಬಿಲ್ಲವ ಅವರು ಪರಿಹಾರದ ಚೆಕ್‌ನ್ನು ಮೃತರ ಪತ್ನಿ ಮಾಲತಿ ಕೃಷ್ಣ ಖಾರ್ವಿ ಅವರಿಗೆ ವಿತರಿಸಿದರು. ಸಂಘದ ಮಾಜಿ ಅಧ್ಯಕ್ಷ ಡಿ.ಚಂದ್ರ ಖಾರ್ವಿ, ಕಾರ್ಯದರ್ಶಿ ಚೌಕಿ ವಿಠೋಬ ಖಾರ್ವಿ, ತ್ರಾಸಿ ಗ್ರಾಪಂ ಮಾಜಿ ಉಪಾಧ್ಯಕ್ಷ ಕೃಷ್ಣ ಎನ್.ಖಾರ್ವಿ, ಗಣೇಶ ಖಾರ್ವಿ ಕೋಡಿ ಮತ್ತು ನಾಗಪ್ಪಯ್ಯ ಪಟೇಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More

ಕುಂದಾಪುರ: ಇತಿಹಾಸ ಪ್ರಸಿದ್ಧ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿ ಮಹೋತ್ಸವವು ಸಕಲ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಾಂಗವಾಗಿ ನೆರವೇರಿತು. ಸೆ.17ರಂದು ಬೆಳಿಗ್ಗೆ 8ರಿಂದ ಶ್ರೀ ಮಹಾಗಣಪತಿ ಹೋಮ ಸಂಕಲ್ಪ, ಮಧ್ಯಾಹ್ನ 12ಕ್ಕೆ 1008 ತೆಂಗಿನ ಕಾಯಿ ಮಹಾಗಣಪತಿ ಹವನದ ಪೂರ್ಣಾಹುತಿ, ಮಹಾ ಪೂಜೆ ವಿದ್ಯುಕ್ತವಾಗಿ ಋತ್ವಿಜರ ವೇದ ಮಂತ್ರಘೋಷಗಳೊಂದಿಗೆ ದೇವಳದ ಧರ್ಮದರ್ಶಿ ಹೆಚ್. ರಾಮಚಂದ್ರ ಭಟ್ ಅವರ ಮಾರ್ಗದರ್ಶನದಲ್ಲಿ ನಡೆಯಿತು. ರಾತ್ರಿ ರಂಗಪೂಜಾದಿ ಸೇವೆಗಳು ಜರುಗಿತು. ಸತ್ಯಗಣಪತಿ ವ್ರತ : ಸೆ. 18ರಂದು ಬೆಳಿಗ್ಗೆ 10ಕ್ಕೆ 108 ಶ್ರೀ ಸತ್ಯಗಣಪತಿ ವ್ರತ ಹಾಗೂ ಕಥಾ ನಿರೂಪಣೆ ಧಾರ್ಮಿಕ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಶ್ರೀ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಸಂಜೆ ಸೃಷ್ಠಿ ಕಲಾಕುಟೀರ, ಉಡುಪಿ ಇವರಿಂದ ನೃತ್ಯ ವೈವಿಧ್ಯ, ಭಸ್ಮಾಸುರ ಮೋಹಿನಿ ನೃತ್ಯ ರೂಪಕ, ಕೂಚುಪುಡಿ, ಜಾನಪದ ನೃತ್ಯಗಳು ಕಲಾತ್ಮಕವಾಗಿ ಮೂಡಿ ಬಂದವು.

Read More

ಕುಂದಾಪುರ: ಅವಿಭಜಿತ ದ.ಕ ಜಿಲ್ಲೆಯ ಪ್ರತಿಷ್ಠಿತ ಸಂಘಗಳಲ್ಲಿ ಒಂದಾದ ಉಪ್ಪುಂದದಲ್ಲಿ ಪ್ರಧಾನ ಕಛೇರಿ ಹೊಂದಿರುವ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಜಿಲ್ಲೆಯ ಮೂರು ಸಹಕಾರಿ ಸಂಘಗಳಲ್ಲಿ ಒಂದು ಎಂದು ಗುರುತಿಸಿ ಕೊಂಡು ತನ್ನ ಸದಸ್ಯರಿಗೆ ಗ್ರಾಹಕರಿಗೆ ಉತ್ತಮ ಸೇವೆ ನೀಡುವುದರೊಂದಿಗೆ ೧೫ ವರ್ಷಗಳಿಂದ ಸತತವಾಗಿ ಪ್ರಶಸ್ತಿ ಪಡೆಯುವುದರಲ್ಲಿ ನಿರಂತರ ಸಾಧನೆ ಬಗ್ಗೆ ಆಡಿಟ್ ಎ ವರ್ಗಿಕರಣ ಹೊಂದಿದ್ದು, ಜಿಲ್ಲೆಯಲ್ಲೇ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ, ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿದೆ. ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಎಂ.ಎನ್. ರಾಜೇಂದ್ರ ಕುಮಾರ್ ಇವರು ಸಂಘದ ಅಧ್ಯಕ್ಷರಾದ ಶ್ರೀ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಸತೀಶ ಪೈ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಬಿ. ರಘುರಾಮ ಶೆಟ್ಟಿ, ಕೆ. ಮೋಹನ ಪೂಜಾರಿ, ಗುರುರಾಜ ಹೆಬ್ಬಾರ್,…

Read More

ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಪ್ರಸಕ್ತ ಸಾಲಿನ ವಾರ್ಷಿಕ ಮಹಾಸಭೆಯು ಉಪ್ಪುಂದ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಉಭಯ ಜಿಲ್ಲೆಗಳ ಪ್ರತಿಷ್ಠಿತ ಸಹಕಾರಿ ಸಂಸ್ಥೆಯೆಂದು ಗುರುತಿಸಲ್ಪಟ್ಟಿರುವ ಸಂಘವು ಪ್ರಸಕ್ತ ವರ್ಷದಲ್ಲಿ ರೂ. 370 ಕೋಟಿ ವ್ಯವಹಾರ ನಡೆಸಿ, ರೂ. 2.22 ಕೋಟಿ ನಿವ್ವಳ ಲಾಭ ಗಳಿಸಿದೆ. ಮುಂದಿನ ಸಾಲಿನಲ್ಲಿ ವ್ಯವಹಾರವನ್ನು ರೂ. 400 ಕೋಟಿಗೆ ಹೆಚ್ಚಿಸುವ ಗುರಿ ಹೊಂದಿದೆ. ಈಗಿನ ಠೇವಣಿ ರೂ. 70.99 ಕೋಟಿ ಇದ್ದರೆ, ಮುಂದಿನ ಸಾಲಿನಲ್ಲಿ ರೂ. 85 ಕೋಟಿ ಸಂಗ್ರಹಿಸುವ ಗುರಿ ಇರಿಸಿಕೊಳ್ಳಲಾಗಿದೆ. ಸದಸ್ಯರಿಗೆ ಶೇ. 15 ಲಾಭಾಂಶ ನೀಡಲಾಗುವುದು. ರೂ. 2.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾರ್ಯಾಲಯ ಸಂಕೀರ್ಣದಲ್ಲಿ ಸದಸ್ಯರಿಗೆ, ಗ್ರಾಹಕರಿಗೆ ಗುಣಮಟ್ಟದ ಸೇವೆ ಒದಗಿಸಲು ಸಾಧ್ಯವಾಗುವಂತೆ ಅದನ್ನು ಸುಸಜ್ಜಿತಗೊಳಿಸಲಾಗುವುದು ಎಂದು ಹೇಳಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ ಪೈ ಸ್ವಾಗತಿಸಿದರು. ವಿಷ್ಣು ಪೈ ಮಹಾಸಭೆಯ ನೋಟಿಸು ಓದಿದರು. ನಾಗರತ್ನಾ ಡಿ. ವಾರ್ಷಿಕ ಆಡಳಿತ ವರದಿ ಮಂಡಿಸಿದರು. ಚರ್ಚೆಯಲ್ಲಿ ಭಾಗವಹಿಸಿ ಸದಸ್ಯರು ಸಲಹೆಯಿತ್ತರು.…

Read More

ಕುಂದಾಪುರ: ನಗರದ ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನದ ಗಣೇಶೋತ್ಸವ ಸಮಿತಿ ರಜತ ಮಹೋತ್ಸವವನ್ನು ಮಹಾಕಾಳಿ ದೇವಸ್ಥಾನದ ಅಧ್ಯಕ್ಷ ಜಯಾನಂದ ಖಾರ್ವಿ ಉದ್ಘಾಟಿಸಿದರು. ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಸಂದೀಪ್ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಮಹಾಕಾಳಿ ದೇವಳದ ಮೊಕ್ತೇಸರ ಶಂಕರ ನಾಕ್, ಬೆಂಗಳೂರು ಕೊಂಕಣಿ ವಿದ್ಯಾ ವೇದಿಕೆಯ ಅಧ್ಯಕ್ಷ ಶ್ರೀನಿವಾಸ ಕೆ. ನಾಕ್, ಕೆ.ಕೆ. ಫಿಶರೀಸ್ ನ ಕೃಷ್ಣ ಖಾರ್ವಿ, ಕುಂದಾಪುರ ವಿದ್ಯಾರಂಗ ಮಿತ್ರ ಮಂಡಳಿಯ ಅರುಣ್ ಖಾರ್ವಿ, ಗಣೇಶೋತ್ಸವ ಸಮಿತಿಯ ಸ್ಥಾಪಕಾಧ್ಯಕ್ಷ ವೆಂಕಟೇಶ ಸಾರಂಗ್ ಮೊದಲಾದವರು ಉಪಸ್ಥಿತರಿದ್ದರು. ರವಿರಾಜ ಖಾರ್ವಿ ಸ್ವಾಗತಿಸಿ, ಹರ್ಷವರ್ಧನ ಕಾರ್ಯಕ್ರಮ ನಿರೂಪಿಸಿದರು. ಬಳಿಕ ತಾಲೂಕು ಮಟ್ಟದ ಗಣೇಶನ ಚಿತ್ರ ಬಿಡಿಸುವ ಸ್ವರ್ಧೆ, ತಾಲೂಕು ಮಟ್ಟದ ಭಕ್ತಗೀತೆ ಸ್ವರ್ಧೆ, ಕುಂದಾಪುರ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ, ರಾತ್ರಿ ಸಂಪೂರ್ಣ ದೇವಿ ಮಹಾತ್ಮೆ ಯಕ್ಷಗಾನ ಜರುಗಿತು. ಗಣಪತಿಯನ್ನು ತಂದು ಪೀಠದಲ್ಲಿ ಪ್ರತಿಷ್ಠಾಪಿಸಿದ ಬಳಿಕ ಪ್ರಾಣ ಪ್ರತಿಷ್ಠೆ, ಗಣಹೋಮ, ಮಹಾಪೂಜೆ, ರಂಗಪೂಜೆ, ಪ್ರಸಾದ ವಿತರಣೆ ನಡೆಯಿತು.

Read More

ಕುಂದಾಪುರ: ರಾಮಕ್ಷತ್ರೀಯ ಸಮಾಜದಲ್ಲಿ ಕುಂದಾಪುರದವರು ಮಾದರಿಯಾಗಿ ಗಣೇಶೋತ್ಸವವನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ಈ ಭಾರಿ ಸುವರ್ಣ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿರುವ ಯುವಕ ಮಂಡಳಿಯು ಸಮಾಜದ ಅಭಿವೃದ್ಧಿಗಾಗಿ ಮತ್ತಷ್ಟು ಶ್ರಮಿಸಲಿ ಎಂದು ಉದ್ಯಮಿ ದತ್ತಾನಂದ ಜಿ. ಹೇಳಿದರು. ಅವರು ಕುಂದಾಪುರ ರಾಮಕ್ಷತ್ರಿಯ ಯವಕ ಮಂಡಳಿಯ ಶ್ರೀ ಗಣೇಶೋತ್ಸವದ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ರಾಮಕ್ಷತ್ರಿಯ ಯುವಕ ಮಂಡಳಿಯ ಸ್ಥಾಪಕಾಧ್ಯಕ್ಷ ಡಿ. ಕೆ. ರತ್ನಾಕರ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಯುವಕ ಮಂಡಳಿಗೆ ಸ್ಮರಣೀಯ ಸೇವೆ ಸಲ್ಲಿಸಿದ ಚಂದ್ರಶೇಖರ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉದ್ಯಮಿ ರವೀಂದ್ರ ಶೇರುಗಾರ್, ಕೊಲ್ಲೂರು ಮೂಕಾಂಬಿಕಾ ದೇವಳದ ಧರ್ಮದರ್ಶಿ ಜಯಾನಂದ ಹೋಬಳಿದಾರ್ ಉಪಸ್ಥಿತರಿದ್ದರು. ಕುಂದಾಪುರ ರಾಮಕ್ಷತ್ರಿಯ ಸಂಘದ ಅಧ್ಯಕ್ಷ ಸುರೇಶ್ ಬೆಟ್ಟಿನ್, ಸುವರ್ಣ ಸಂಭ್ರಮ ಸಮಿತಿಯ ಗೌರವಾಧ್ಯಕ್ಷ ಅಜೀತ್ ಕುಮಾರ್ ಬಾಣ, ಯುವಕ ಮಂಡಳಿಯ ಪೂವಾಧ್ಯಕ್ಷರುಗಳು ವೇದಿಕೆಯಲ್ಲಿದ್ದರು. ರಾಮಕ್ಷತ್ರಿಯ ಯುವಕ ಮಂಡಳಿ ಸುವರ್ಣ ಸಂಭ್ರಮ ಸಮಿತಿಯ ಅಧ್ಯಕ್ಷ ರಾಧಾಕೃಷ್ಣ ಯು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ರಾಜಶೇಖರ ಹೆಗ್ಡೆ ಧನ್ಯವಾದಗೈದರು.…

Read More

ಕುಂದಾಪುರ: ಇಲ್ಲಿನ ಖಾರ್ವಿಕೇರಿ  ಶ್ರೀಮಹಾಕಾಳಿ ಗಣೇಶೋತ್ಸವ ಸಮಿತಿಯ ರಜತ ಮಹೋತ್ಸವ ಕಾರ್ಯಕ್ರಮಕ್ಕೆ ಹಾಗೂ ರಾಮಕ್ಷತ್ರೀಯ ಯುವಕ ಮಂಡಳಿ ಕುಂದಾಪುರ ಇವರ ಗಣೇಶೋತ್ಸವ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಪೂಜನೀಯ ಡಾ| ಡಿ ವೀರೇಂದ್ರ ಹೆಗ್ಗಡೆಯವರು ಕ್ರಮವಾಗಿ 5:30 ಹಾಗೂ 7ಗಂಟೆಗೆ ಆಗಮಿಸಲಿದ್ದಾರೆ ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.

Read More

ಕುಂದಾಪುರ: ವಿಘ್ನನಿವಾರಕ ಶ್ರೀ ವಿಫ್ನೇಶ್ವರನ ಆರಾಧನೆ ಎಲ್ಲೆಡೆಯೂ ಸಂಭ್ರಮ, ಸಡಗರದಿಂದ ಜರುಗುತ್ತಿದೆ. ತಾಲೂಕಿನ ಪ್ರಮುಖ ವಿನಾಯಕ ದೇವಸ್ಥಾನಗಳಾದ ಆನೆಗುಡ್ಡೆ, ಹಟ್ಟಿಯಂಗಡಿ ಸೇರಿದಂತೆ ಇತರ ಗಣಪತಿ ದೇವಾಲಯಗಳಲ್ಲಿ ವಿಶೇಷ ಹೋಮ, ಹವನ, ಪೂಜಾಕೈಂಕರ್ಯಗಳು ಜರುಗುತ್ತಿದ್ದೇ, ಸಾರ್ವಜನಿಕ ಗಣೇಶೋತ್ಸವದಲ್ಲೂ ಗಣಪತಿಯನ್ನು ಪ್ರತಿಷ್ಠಾಪಿಸಿ ಭಕ್ತಿಭಾವದಿಂದ ಪೂಜಿಸಲಾಗುತ್ತಿದೆ. ಕುಂದಾಪುರ ತಾಲೂಕಿನಲ್ಲಿ ಸುಮಾರು 80ಕ್ಕೂ ಹೆಚ್ಚು ಕಡೆಗಳಲ್ಲಿ ಸಾರ್ವಜನಿಕವಾಗಿ ಗಣಪತಿಗಳನ್ನು ಪ್ರತಿಷ್ಠಾಪಿಸಿದ್ದರೇ, ಹಲವು ಮನೆ, ಅಂಗಡಿಗಳಲ್ಲಿಯೂ ಗಣಪನನ್ನು ಪ್ರತಿಷ್ಠಾಪಿಸಲಾಗಿದೆ. ಆನೆಗುಡ್ಡೆ, ಹಟ್ಟಿಯಂಗಡಿ ಮುಂತಾದೆಡೆಗಳಲ್ಲಿ ಭಕ್ತರ ಅಧಿಕ ಸಂಖ್ಯೆಯಲ್ಲಿ ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದ ದೃಷ್ಯ ಸಾಮಾನ್ಯವಾಗಿತ್ತು. ಕುಂದಾಪುರದ ರಾಮಕ್ಷತ್ರಿಯ ಯುವಕ ಮಂಡಲದ ಗಣೇಶೋತ್ಸವವು ಸುವರ್ಣ ಮಹೋತ್ಸವವನ್ನು ಆಚರಿಸುತ್ತಿದ್ದರೇ, ಖಾರ್ವಿಕೇರಿಯ ಶ್ರೀ ಮಹಾಕಾಳಿ ದೇವಳದ ಗಣೇಶೋತ್ಸವ ರಜತ ಮಹೋತ್ಸವದ ಸಂಭ್ರಮದಲ್ಲಿದ್ದು ಕುಂದಾಪುರ ನಗರವನ್ನು ಸಿಂಗರಿಸಲಾಗಿದೆ. *** ಕುಂದಾಪುರದ ಶ್ರೀ ಮಹಾಕಾಳಿ ದೇವಸ್ಥಾನ, ರಾಮಕ್ಷತ್ರಿಯ ಯುವಕ ಮಂಡಳಿ, ಕುಂದೇಶ್ವರ ದೇವಸ್ಥಾನ, ನೇರಂಬಳ್ಳಿ ವಿಫ್ನೇಶ್ವರ ಯುವಕ ಮಂಡಲ, ಹಂಗಳೂರು ವಿನಾಯಕ ಮಿತ್ರವೃಂದ, ವಂಡೇರಹೋಬಳಿ ಬಿ.ಸಿ. ರಸ್ತೆ ಶ್ರೀ ವಿಘ್ನೇಶ್ವರ ಯುವಕ ಮಂಡಳಿ, ಕೋಟೇಶ್ವರ,…

Read More