Author: ಸುನಿಲ್ ಹೆಚ್. ಜಿ. ಬೈಂದೂರು

ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

ಗಂಗೊಳ್ಳಿ: ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಆಶ್ರಯದಲ್ಲಿ ನಡೆಯಲಿರುವ 41ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವದ ಪ್ರಯುಕ್ತ ಗಂಗೊಳ್ಳಿಯಲ್ಲಿ ವಿಶೇಷ ದಸರಾ ಸ್ಪರ್ಧಾ ಕೂಟ ಆಯೋಜಿಸಲಾಗಿದೆ. ಪುರುಷರಿಗಾಗಿ ಅ.20ರಂದು ತ್ರಾಸಿಯಿಂದ ಗಂಗೊಳ್ಳಿಯ ಬಂದರ್ ಬಸ್ ನಿಲ್ದಾಣದವರೆಗೆ ಸೈಕಲ್ ರೇಸ್ ಸ್ಪರ್ಧೆ, ಅ.21ರಂದು ತ್ರಾಸಿಯಿಂದ ಗಂಗೊಳ್ಳಿಯ ಬಂದರ್ ಬಸ್ ನಿಲ್ದಾಣದವರೆಗೆ ಕ್ರಾಸ್ ಕಂಟ್ರಿ ರೇಸ್ ಏರ್ಪಡಿಸಲಾಗಿದೆ. ಅ.17ರಂದು ಮಧ್ಯಾಹ್ನ 2 ಗಂಟೆಯಿಂದ ಮಹಿಳೆಯರು ಹಾಗೂ ಮಕ್ಕಳಿಗಾಗಿ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ರಂಗೋಲಿ ಸ್ಪರ್ಧೆ, ಅ.22ರಂದು ಬೆಳಿಗ್ಗೆ 9 ಗಂಟೆಯಿಂದ ಸಾರ್ವಜನಿಕ ಮಹಿಳೆಯರಿಗಾಗಿ ಆಟೋಟ ಸ್ಪರ್ಧೆ, ಅ.23ರಂದು ಬೆಳಿಗ್ಗೆ 9 ಗಂಟೆಯಿಂದ ಮಹಿಳೆಯರು ಹಾಗೂ ಮಕ್ಕಳಿಗಾಗಿ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಭಕ್ತಿಗೀತೆ ಸ್ಪರ್ಧೆ, ಮಧ್ಯಾಹ್ನ 2 ಗಂಟೆಯಿಂದ ಭಾಷಣ ಸ್ಪರ್ಧೆ, ನಾಡಗೀತೆ ಹಾಡುವ ಸ್ಪರ್ಧೆ ಮತ್ತು ಅ.24ರಂದು ಪುರುಷರು ಮತ್ತು ಮಹಿಳೆಯರಿಗಾಗಿ ಹೂಮಾಲೆ ಕಟ್ಟುವ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸತೀಶ್ ಜಿ. (೯೪೮೨೨೫೦೮೦೧), ಸವಿತಾ ಯು.ದೇವಾಡಿಗ (೭೩೫೩೬೨೨೩೫೭) ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Read More

ಕುಂದಾಪುರ: ಕಳೆದ ನಾಲ್ಕು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಗಂಗೊಳ್ಳಿಯ ಮೆಸ್ಕಾಂ ಸಬ್‌ಸ್ಟೇಶನ್ ಕಾರ್ಯಾರಂಭಕ್ಕೆ ಆಗ್ರಹಿಸಿ ಗಂಗೊಳ್ಳಿ ಮೆಸ್ಕಾಂ ಸಬ್‌ಸ್ಟೇಶನ್ ಹೋರಾಟ ಸಮಿತಿ ವತಿಯಿಂದ ಬೈಂದೂರು ಶಾಸಕರಿಗೆ ಮನವಿ ಸಲ್ಲಿಸಲಾಯಿತು. ಇಂದು ಕಟ್‌ಬೇಲ್ತೂರಿನ ಶಾಸಕರ ನಿವಾಸದಲ್ಲಿ ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಅವರನ್ನು ಭೇಟಿ ಮಾಡಿದ ಹೋರಾಟ ಸಮಿತಿಯ ನಿಯೋಗವು ಶಾಸಕರಿಗೆ ಸಬ್‌ಸ್ಟೇಶನ್‌ನ ಇಲ್ಲಿಯವರೆಗಿನ ಸಂಪೂರ್ಣ ಬೆಳವಣಿಗೆಯ ಬಗ್ಗೆ ಮಾಹಿತಿ ನೀಡಿತು. ಗಂಗೊಳ್ಳಿಯಲ್ಲಿ ಮೆಸ್ಕಾಂ ಸಬ್‌ಸ್ಟೇಶನ್ ಕಾರ್ಯಾರಂಭಗೊಂಡಲ್ಲಿ ಗಂಗೊಳ್ಳಿ, ಗುಜ್ಜಾಡಿ, ತ್ರಾಸಿ ಹಾಗೂ ಹೊಸಾಡು ಗ್ರಾಮಗಳ ಸಹಸ್ರಾರು ಸಂಖ್ಯೆಯ ಗ್ರಾಹಕರಿಗೆ, ಉದ್ಯಮಿಗಳಿಗೆ ಹಾಗೂ ಸಣ್ಣ ಮತ್ತು ದೊಡ್ಡ ಉದ್ದಿಮೆದಾರರಿಗೆ ಬಹಳಷ್ಟು ಅನುಕೂಲವಾಗಲಿದೆ ಅಲ್ಲದೆ ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಮಂಡಳಿಗೆ ಬಹಳಷ್ಟು ವಿದ್ಯುತ್ ಉಳಿತಾಯದ ಜೊತೆಗೆ ಹೆಚ್ಚಿನ ಆದಾಯ ಕೂಡ ಬರಲಿದೆ. ಆದರೆ ಕಳೆದ ನಾಲ್ಕು ವರ್ಷಗಳಿಂದ ಗಂಗೊಳ್ಳಿ ಸಬ್‌ಸ್ಟೇಶನ್ ಕಾರ್ಯಾರಂಭಕ್ಕೆ ಅರಣ್ಯ ಇಲಾಖೆ ಅನಗತ್ಯ ಕ್ಯಾತೆ ತೆಗೆದು ಅಡ್ಡಪಡಿಸುತ್ತಿರುವುದು ಖಂಡನೀಯ. ಈ ವಿಚಾರವಾಗಿ ತಾವು ಈಗಾಗಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಸಚಿವರನ್ನು…

Read More

ಬೈಂದೂರು: ಇಲ್ಲಿನ ತಗ್ಗರ್ಸೆ ಶ್ರೀ ಬ್ರಹ್ಮದೇವರ ವಠಾರದ ಶ್ರೀ ನಾಗಬನದಲ್ಲಿ ಅ.19ರಿಂದ 21ರವರೆಗೆ ಜರುಗುವ 26ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವದ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾಗಿ ಗೋವಿಂದರಾಜ್ ಆಚಾರ್ಯ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮಂಜುನಾಥ ದಾಸ್, ಗುರುರಾಜ್ ಆಚಾರ್ಯ, ಮಂಜುನಾಥ ಹಾಡಿಮನೆ, ಸುಬ್ರಮಣ್ಯ ಆಚಾರ್ಯ, ದಯಾನಂದ ಚಂದನ್ ಆಯ್ಕೆಯಾಗಿದ್ದರೇ, ಕಾರ್ಯದರ್ಶಿಯಾಗಿ ದೇವರಾಜ ಆಚಾರ್ಯ, ಪ್ರದೀಪ್ ಶೆಟ್ಟಿ, ಪ್ರದೀಪ್ ಆಚಾರ್ಯ, ಮಂಜುನಾಥ ಆಚಾರ್ಯ ಆಯ್ಕೆಯಾಗಿದ್ದಾರೆ. (ಕುಂದಾಪ್ರ ಡಾಟ್ ಕಾಂ ವರದಿ) ಜೊತೆ ಕಾರ್ಯದರ್ಶಿಯಾಗಿ ಪ್ರಭಾಕರ ಮೊಗವೀರ, ಸೋಮಶೇಖರ, ಪ್ರಮೋದ್ ಆಚಾರ್ಯ, ಪ್ರಶಾಂತ ಆಚಾರ್ಯ, ಶಿವಾನಂದ ಚಂದನ್, ಸಂತೋಷ ಆಚಾರ್ಯ, ಸಂಘಟನಾ ಕಾರ್ಯದರ್ಶಿಯಾಗಿ ನಟರಾಜ ಆಚಾರ್ಯ, ರಾಜಶೇಖರ, ನಾಗರಾಜ ಚಂದನ್, ರಾಘವೇಂದ್ರ ಎಂ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ವಿಕ್ರಮ್, ಅಕ್ಷಯ ಶೆಟ್ಟಿ, ಪ್ರವೀಣ ಆಚಾರ್ಯ, ಶ್ರೀನಿವಾಸ ಗುಜ್ಜಾಡಿ, ಗಿರೀಶ್ ಎನ್, ಅಂಜನ ಕುಮಾರ್, ಕ್ರೀಡಾ ಕಾರ್ಯದರ್ಶಿಯಾಗಿ ನಾಗೇಂದ್ರ ಶೆಟ್ಟಿ, ಹರೀಶ್ ಎನ್, ನವೀನ್, ಪ್ರಸನ್ನ, ಅಣ್ಣಪ್ಪ, ನಿತಿನ್ ಶೆಟ್ಟಿ, ಶ್ರೀನಿವಾಸ ಆಚಾರ್ಯ, ಕೋಶಾಧಿಕಾರಿಯಾಗಿ ಲಕ್ಷ್ಮಣ ಚಂದನ್, ಮಹೇಶ್,…

Read More

ಶಿರೂರಿನಲ್ಲಿ ಸಂಸದರ ಆದರ್ಶ ಗ್ರಾಮ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ಬೈಂದೂರು: ಶಿರೂರು ಗ್ರಾಮದಲ್ಲಿನ ಹಿಂದುಳಿದ ವರ್ಗ, ಅಲ್ಪಸಂಖ್ಯಾತರು, ಅಂಗವಿಕಲರು, ನಿರ್ಗತಿಕರು, ಅಶಿಕ್ಷಿತ ಮಕ್ಕಳು ಹಾಗೂ ಇತರೆ ಫಲಾನುಭವಿಗಳಿಗೆ ನೂರಕ್ಕೆ ನೂರರಷ್ಟು ಸರಕಾರಿ ಸೌಲಭ್ಯಗಳು ದೊರೆತಾಗ ಮಾತ್ರ ಆದರ್ಶ ಗ್ರಾಮ ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತದೆ. ಆ ನಿಟ್ಟಿನಲ್ಲಿ ಇಲ್ಲಿನ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕೆಲಸ ಮಾಡಬೇಕಾಗಿದೆ ಎಂದು ರಾಜ್ಯಸಭಾ ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಹೇಳಿದರು. ಅವರು ಶಿರೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಂಸದರ ಆದರ್ಶ ಗ್ರಾಮ ಯೋಜನೆಯ ಪ್ರಗತಿಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆದರ್ಶ ಗ್ರಾಮ ಯೋಜನೆಯಡಿಯಲ್ಲಿ ಈಗಾಗಲೇ ಶಿರೂರು ಗ್ರಾಮದ ಆಸ್ಪತ್ರೆ, ರಸ್ತೆ, ಸೇತುವೆ, ಕುಡಿಯುವ ನೀರು, ಮೀನುಗಾರಿಕಾ ಜಟ್ಟಿ ಮುಂತಾದವುಗಳಿಗೆ ಅನುದಾನ ಮಂಜೂರು ಮಾಡಲಾಗಿದ್ದು ಕೆಲಸ ಪ್ರಗತಿಯಲ್ಲಿದೆ. ಗ್ರಾಮದ ಜನರು ಆರ್ಥಿಕವಾಗಿ ಸಬಲರಾಗುವ ನಿಟ್ಟಿನಲ್ಲಿ ಹೈನುಗಾರಿಕೆ, ಕೋಳಿ ಸಾಕಣೆಯಂತಹ ಸಣ್ಣ ಉದ್ದಿಮೆಗಳತ್ತ ಗಮನಹರಿಸಬೇಕು. ಮಹಿಳಾ ಸಂಘಟನೆ, ಯುವ ಸಂಘಟನೆಗಳ ಬಲವರ್ಧನೆಯಾಗಬೇಕು. ಇವೆಲ್ಲವೂ…

Read More

ಸದಾನಂದ ಸುವರ್ಣರಿಗೆ ಡಾ| ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿ ಪ್ರದಾನ.  ಚಿತ್ತಾರ 15ರ ಸಮಾರೋಪ ಕುಂದಾಪುರ: ಕರಾವಳಿಯ ಆಗು-ಹೋಗುಗಳ ಕುರಿತು ಸದಾ ಸ್ಪಂದಿಸುತ್ತಿದ್ದ ಡಾ| ಶಿವರಾಮ ಕಾರಂತರು ಕರಾವಳಿ ಕರ್ನಾಟಕದ ಸಾಕ್ಷಿಪ್ರಜ್ಞೆಯಂತಿದ್ದರು. ಅವರು 20ನೇ ಶತಮಾನದ ಅದ್ಭುತ ವ್ಯಕ್ತಿ ಎಂಬುದರಲ್ಲಿ ಎರಡು ಮಾತಿಲ್ಲ ಎಂದು ರಂಗಕರ್ಮಿ ಸದಾನಂದ ಸುವರ್ಣ ಅಭಿಪ್ರಾಯಪಟ್ಟರು. ಅವರು ಕೋಟ ಕಾರಂತಭವನದಲ್ಲಿ ಕೋಟತಟ್ಟು ಗ್ರಾ.ಪಂ. ಸಾರಥ್ಯದಲ್ಲಿ, ಕಾರಂತ ಹುಟ್ಟೂರು ಪ್ರತಿಷ್ಠಾನ, ಕಾರಂತ ಟ್ರಸ್ಟ್‌ ಉಡುಪಿ ಸಹಕಾರದೊಂದಿಗೆ ಜರಗಿದ ಡಾ| ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿ ಪ್ರದಾನ – ಚಿತ್ತಾರ 15ರ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು. ಕಾರಂತರಿಗೆ ಜ್ಞಾನದ ಹಸಿವೆಂಬುದಿತ್ತು. ಆದ್ದರಿಂದಲೇ ಅವರು ಕಾಲೇಜು ತೊರೆದು, ಕೌಟುಂಬಿಕ ಸಂಬಂಧಗಳನ್ನು ಮೀರಿ ವಿಶ್ವವೆಂಬ ಕಾಲೇಜಿಗೆ ತನ್ನನ್ನು ತಾನು ತೆರೆದುಕೊಂಡರು. ಅವರು ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಕೆಲಸ ಮುಂದಿನ ಪೀಳಿಗೆಗೆ ಪ್ರೇರಕ ಶಕ್ತಿಯಾಗಿ ಉಳಿದಿದೆ ಎಂದರು. ಕೋಟದ ಕಾರಂತ ಭವನದ ಮೂಲಕ ಕಾರಂತರ ನೆನಪುಗಳು ಈ ಪರಿಸರದಲ್ಲಿ ಚಿರನೂತವಾಗಿರಿಸಿದ ಈ ಊರಿನವರ…

Read More

ಕುಂದಾಪುರ: ಸ್ವಚ್ಛ ಭಾರತ್ ಮಿಶನ್ ಅನುಷ್ಠಾನದ ಸ್ವಚ್ಛ ಭಾರತ್ ಪಾಕ್ಷಿಕ ಕಾರ್ಯಕ್ರಮ ಅಂಗವಾಗಿ ಕುಂದಾಪುರ ಪುರಸಭೆಯ ವತಿಯಿಂದ ಕೋಡಿ ಕಡಲ ಕಿನಾರೆಯ ಸ್ವಚ್ಛತಾ ಕಾರ್ಯಕ್ರಮ ಕೋಡಿ ಲೈಟ್ ಹೌಸ್ ಬಳಿ ಜರುಗಿತು. ಕುಂದಾಪುರದ ಭಂಡಾರ್ಸಕಾರ್ಸ್ ಕಾಲೇಜು, ಕೋಡಿ ಬ್ಯಾರೀಸ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ವಿದೇಶಿ ಸ್ವಯಂ ಸೇವಕರುಗಳ ಸಹಕಾರದೊಂದಿಗೆ ಈ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ಪುಸಭಾ ಅಧ್ಯಕ್ಷೆ ಕಲಾವತಿ ಯು.ಎಸ್., ಮುಖ್ಯಾಧಿಕಾರಿ ಗೋಪಾಲ ಶೆಟ್ಟಿ, ಕುಂದಾಪುರ ರೋಟರಿ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಕುಂದಾಪುರ ವಕೀಲ ಸಂಘದ ಕಾರ್ಯದರ್ಶಿ ಮುರಳೀಧರ ಶೆಟ್ಟಿ ಶಿರಿಯಾರ, ಪುರಸಭಾ ಸದಸ್ಯರಾದ ಸಂದೀಪ್ ಕೋಡಿ, ಪ್ರಭಾಕರ, ಜ್ಯೋತಿ ಉಪಸ್ಥಿತರಿದ್ದರು. ಸ್ವಚ್ಛತಾ ಕಾರ್ಯಕ್ರಮದಲ್ಲಿ ಪುರಸಭಾ ಸದಸ್ಯರಾದ ರಾಜೇಶ್ ಕಾವೇರಿ, ಶ್ರೀಧರ್ ಶೇರುಗಾರ್, ಚಂದ್ರಶೇಖರ್, ಪುಷ್ಪಾ ಶೇಟ್, ದೇವಕಿ ಸಣ್ಣಯ್ಯ, ಗುಣರತ್ನಾ, ರವಿರಾಜ ಖಾರ್ವಿ, ರವಿಕಲಾ, ವಿಜಯ ಎಸ್. ಪೂಜಾರಿ, ಸಿಸಿಲಿ ಕೋಟ್ಯಾನ್ ಮೊದಲಾದವರು ಭಾಗವಹಿಸಿದ್ದರು.

Read More

ಗಂಗೊಳ್ಳಿ: ನಮ್ಮ ಅಂಗೈಯಲ್ಲಿಯೇ ನಮ್ಮ ಆರೋಗ್ಯವಿದೆ. ಪ್ರತಿನಿತ್ಯ ನಮ್ಮ ಹಸ್ತ ಮತ್ತು ಪಾದಗಳನ್ನು ನಿರ್ದಿಷ್ಟ ರೀತಿಯಲ್ಲಿ ಸ್ಪರ್ಶಿಸುವ ಮೂಲಕ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಿದೆ. ನಿಯಮಿತ ಆಹಾರ ಪದ್ಧತಿ ಹಾಗೂ ಅಕ್ಯೂಪ್ರೆಶರ್ ಪದ್ಧತಿ ನಮ್ಮ ಆರೋಗ್ಯವನ್ನು ಉತ್ತಮವಾಗಿರಿಸಿಕೊಳ್ಳಲು ಸಹಕಾರಿಯಾಗುತ್ತದೆ. ಪ್ರತಿನಿತ್ಯ ಇದನ್ನು ಮಾಡುವುದರಿಂದ ನಮ್ಮ ಆರೋಗ್ಯದಲ್ಲಿ ಮತ್ತು ದೈನಂದಿನ ಚಟುವಟಿಕೆಗಳಲ್ಲಿ ಸಾಕಷ್ಟು ಬದಲಾವಣೆ ಕಂಡುಕೊಳ್ಳಲು ಸಾಧ್ಯವಿದೆ ಎಂದು ನಾರಾಯಣ ಆಚಾರ್ ಸಾಲಿಗ್ರಾಮ ಹೇಳಿದರು. ಅವರು ಗಂಗೊಳ್ಳಿಯ ಸೇವಾಸಂಗಮ ನಿವೇದಿತಾ ಶಿಶು ಮಂದಿರದ ಆಶ್ರಯದಲ್ಲಿ ಶಿಶು ಮಂದಿರದ ನಗರ ಜಯವಂತ ನಾಯಕ್ ಸಭಾಭವನದಲ್ಲಿ ಜರಗಿದ ಮಾತೆಯ ದಸರಾ ಶಿಬಿರದಲ್ಲಿ ’ಅಂಗೈಯಲ್ಲಿ ಆರೋಗ್ಯ – ಅಕ್ಯೂಪ್ರೆಶರ್’ ಕುರಿತ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಶಿಶು ಮಂದಿರದ ಅಧ್ಯಕ್ಷ ಶ್ರೀನಿವಾಸ ಎಂ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಶು ಮಂದಿರದ ಸಂಚಾಲಕ ಡಾ.ಕಾಶೀನಾಥ ಪೈ, ಕಾರ್ಯದರ್ಶಿ ಸವಿತಾ ಯು.ದೇವಾಡಿಗ, ಶಿಶು ಮಂದಿರದ ಸದಸ್ಯರಾದ ಬಿ.ರಾಘವೇಂದ್ರ ಪೈ, ಉಷಾ ಪಿ.ಮಡಿವಾಳ, ವಸಂತಿ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು. ಮಾತಾಜಿ ಶೈಲಾ ಸ್ವಾಗತಿಸಿದರು. ಮಾತಾಜಿ…

Read More

ಕುಂದಾಪುರ: ವ್ಯಾಯಾಮ ಆಸನಗಳಿಗಿಂತ ಮುಂದುವರಿದು ದೇಹ, ಮನಸ್ಸು ಮತ್ತು ಉಸಿರಿನ ಮೇಲೆ ನಿಯಂತ್ರಣ ಸಾಧಿಸುವುದೇ ಯೋಗ, ಮನಸ್ಸನ್ನು ಒಂದೆಡೆ ತಡೆಗಟ್ಟಿ ಅಂತರಾತ್ಮದ ಕಡೆಗೆ ತಿರುಗಿಸಿ ಆತ್ಮಾಭಿಮುಖವಾಗಿ ಶರೀರ ರೋಮಾಂಚನ ಸ್ಥಿತಿಯತ್ತ ಸಾಗುವುದೇ ಕುಂಡಲಿನಿ ಜಾಗೃತಿ ಎಂದು ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಧಾಕರ ವಕ್ವಾಡಿ ಹೇಳಿದರು. ಅವರು ಶಂಕರನಾರಾಯಣ ಮಾವಿನಕೊಡ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ.ಪೂ ಶಿಕ್ಷಣ ಇಲಾಖೆ ಬೆಂಗಳೂರು, ಶ್ರೀ ಮೂಕಾಂಬಿಕ ಪ.ಪೂ.ಕಾಲೇಜು ಕೊಲ್ಲೂರು ಇವರ ಆಶ್ರಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರದ ಶೈಕ್ಷಣಿಕ ಕಾರ್ಯಕ್ರಮದಲ್ಲಿ ‘ಕುಂಡಲಿನಿ ಯೋಗದಿಂದ ವ್ಯಕ್ತಿತ್ವ ವಿಕಸನ’ ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸ ನೀಡಿದರು. ನಿವೃತ್ತ ಮುಖ್ಯ ಶಿಕ್ಷಕ ಮಂಜಯ್ಯ ಹೆಗ್ಡೆ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಅರುಣ ಪ್ರಕಾಶ ಶೆಟ್ಟಿ ಮಾತನಾಡಿ, ಸದೃಢವಾದ ದೇಹದಲ್ಲಿ ಉತ್ತಮ ಮನಸ್ಸನ್ನು ಸೇರಿದಾಗ ಮನೋಬಲ ಸಾಧಿಸಲು ಸಾದ್ಯ ಎಂದರು. ಅಂಗನವಾಡಿ ಶಿಕ್ಷಕಿ ಸುಜಾತ, ಆಶಾ ಕಾರ್ಯರ್ತೆ ವಸಂತಿ, ಶಿಬಿರಾಧಿಕಾರಿ ನಾಗರಾಜ ಅಡಿಗ, ವಾಸುದೇವ…

Read More