Author: ಸುನಿಲ್ ಹೆಚ್. ಜಿ. ಬೈಂದೂರು

ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಕಾರ್ಯಕ್ಷೇತ್ರ ಹೊಂದಿರುವ ಮಹಾಸತಿ ಪ್ರಾಥಮಿಕ ಮೀನುಗಾರರ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತಿವರ್ಷ ಉತ್ತಮವಾಗಿ ಕಾರ್ಯನಿರ್ವಹಿಸಿ ಅಧಿಕ ಲಾಭ ಗಳಿಸುತ್ತಿದೆ. ಪ್ರಸಕ್ತ ಸಾಲಿನಲ್ಲಿ ಸಹಕಾರಿ ಸಂಘದ ಪಾಲುದಾರರಿಗೆ ಶೇ.10 ಡಿವಿಡೆಂಡ್ ನೀಡಲಾಗುವುದು ಎಂದು ಸಂಘದ ಅಧ್ಯಕ್ಷೆ ನೀಲಾವತಿ ಎಸ್.ಖಾರ್ವಿ ಹೇಳಿದರು. ಅವರು ಇತ್ತೀಚಿಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಜರಗಿದ ಗಂಗೊಳ್ಳಿಯ ಮಹಾಸತಿ ಪ್ರಾಥಮಿಕ ಮೀನುಗಾರರ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ 2014-15ನೇ ಸಾಲಿನ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಘದ ಉಪಾಧ್ಯಕ್ಷೆ ಸುಶೀಲಾ ಎ.ಖಾರ್ವಿ, ನಿರ್ದೇಶಕಿಯರಾದ ಶಾರದಾ ಎಸ್.ಖಾರ್ವಿ, ಸರಸ್ವತಿ ಎಲ್.ಖಾರ್ವಿ, ಶಾರದಾ ಆರ್.ಹೆಗ್ಡೆ, ಮಾಲತಿ ಜಿ.ಖಾರ್ವಿ, ಶೈಲಾ ಎಂ.ಖಾರ್ವಿ ಉಪಸ್ಥಿತರಿದ್ದರು. ಸಂಘದ ನಿರ್ದೇಶಕಿ ಜಯಂತಿ ಆರ್.ಖಾರ್ವಿ ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ಗಣಪತಿ ಖಾರ್ವಿ ಕಾರ್ಯಕ್ರಮ ನಿರ್ವಹಿಸಿದರು. ನಿರ್ದೇಶಕಿ ಪಾರ್ವತಿ ಬಿ.ಖಾರ್ವಿ ವಂದಿಸಿದರು.

Read More

ಗಂಗೊಳ್ಳಿ: ಗಂಗೊಳ್ಳಿ ಬೆಳೆಯುತ್ತಿರುವ ಮೀನುಗಾರಿಕಾ ಬಂದರು ಪ್ರದೇಶವಾಗಿದ್ದು, ಗಂಗೊಳ್ಳಿ ಬಂದರಿನ ಅಭಿವೃದ್ಧಿಗೆ, ಬ್ರೇಕ್ ವಾಟರ್ ಕಾಮಗಾರಿಗೆ ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ಮಂಜೂರಾಗಿರುವ ೧೦೨ ಕೋಟಿ ರೂ. ವೆಚ್ಚದ ಕಾಮಗಾರಿಗೆ ಅತೀ ಶೀಘ್ರದಲ್ಲಿ ಶಿಲಾನ್ಯಾಸ ನೆರವೇರಿಸಲು ನಿರ್ಧರಿಸಲಾಗಿದ್ದು, ರಾಜ್ಯದ ಮುಖ್ಯಮಂತ್ರಿಗಳನ್ನು ಕಾರ್ಯಕ್ರಮಕ್ಕೆ ಕರೆತರುವ ಪ್ರಯತ್ನ ನಡೆಯುತ್ತಿದೆ ಎಂದು ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಗಂಗೊಳ್ಳಿ ಸ್ಟೆಲ್ಲಾ ಮಾರೀಸ್ ಪ್ರೌಢಶಾಲೆಯ ಕ್ರೀಡಾಂಗಣ ಅಭಿವೃದ್ಧಿಗೆ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ಸಂಸದರ ಪ್ರದೇಶಾಭಿವೃದ್ಧಿ ನಿಧಿ ಯೋಜನೆಯಡಿ ಮಂಜೂರಾಗಿರುವ ೫ ಲಕ್ಷ ರೂ. ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ಗಂಗೊಳ್ಳಿಯ ಹಲವು ರಸ್ತೆಗಳ ಕಾಂಕ್ರೀಟಿಕರಣ ಕಾಮಗಾರಿ ನಡೆಯುತ್ತಿದ್ದು, ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ. ಮುಂದೆ ಜಿಲ್ಲಾ ಪಂಚಾಯತ್ ಕ್ಷೇತ್ರವಾಗಿ ರೂಪುಗೊಳ್ಳಲಿರುವ ಗಂಗೊಳ್ಳಿಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಅವರು ಹೇಳಿದರು. ಗಂಗೊಳ್ಳಿ ಚರ್ಚಿನ ಧರ್ಮಗುರು ರೆ.ಫಾ. ಅಲ್ಬರ್ಟ್ ಕ್ರಾಸ್ತಾ, ತಾಪಂ ಸದಸ್ಯೆ ಪೂರ್ಣಿಮಾ ಎಂ.ಖಾರ್ವಿ, ಗಂಗೊಳ್ಳಿ ಗ್ರಾಪಂ…

Read More

ಗಂಗೊಳ್ಳಿ: ಸರಕಾರ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುತ್ತಿದ್ದು, ಅನುದಾನಿತ ಶಾಲೆಗಳ ಅಭಿವೃದ್ಧಿಗೂ ಸಹಕಾರ ನೀಡುತ್ತಿದೆ. ಈಲ್ಲೆಯ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾಗಿರುವ ಎಸ್.ವಿ.ಪದವಿಪೂರ್ವ ಕಾಲೇಜಿನ ಅಭಿವೃದ್ಧಿ ದೃಷ್ಟಿಯಿಂದ ಶಾಲೆಯ ಪ್ರಾಂಗಣದಲ್ಲಿ ಇಂಟರ್‌ಲಾಕ್ ಅಳವಡಿಸಲು ಅನುದಾನ ನೀಡಲಾಗಿದೆ ಎಂದು ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಮಂಜೂರಾಗಿರುವ ಸುಮಾರು 3.5ಲಕ್ಷ ರೂ. ವೆಚ್ಚದ ಇಂಟರ್‌ಲಾಕ್ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ಜಿಎಸ್‌ವಿಎಸ್ ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ, ಕಾರ್ಯದರ್ಶಿ ಎಚ್.ಗಣೇಶ ಕಾಮತ್, ಶಾಲೆಯ ಸಂಚಾಲಕ ಎನ್.ಸದಾಶಿವ ನಾಯಕ್, ಗಂಗೊಳ್ಳಿ ಗ್ರಾಪಂ ಅಧ್ಯಕ್ಷೆ ರೇಷ್ಮಾ ಆರ್.ಖಾರ್ವಿ, ಉಪಾಧ್ಯಕ್ಷ ಮಹೇಶ್‌ರಾಜ್ ಪೂಜಾರಿ, ಶಾಲೆಯ ಪ್ರಾಂಶುಪಾಲ ಆರ್.ಎನ್.ರೇವಣ್‌ಕರ್, ಜಿಪಂ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ, ಜಿಪಂ ಇಂಜಿನಿಯರ್ ರಾಜ್‌ಕುಮಾರ್, ಗ್ರಾಮ ಪಂಚಾಯತ್ ಸದಸ್ಯರು, ಮಾಜಿ ಗ್ರಾಪಂ ಸದಸ್ಯರು, ಶಾಲೆಯ ಉಪನ್ಯಾಸಕರು, ಅಧ್ಯಾಪಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಪುರೋಹಿತರಾದ ವೇದಮೂರ್ತಿ ಜಿ.ಅನಂತಕೃಷ್ಣ…

Read More

ಅಪಘಾತವಾದಾಗ ನಾಗರಿಕರು ಜವಾಬ್ದಾರಿಯಿಂದ ವರ್ತಿಸಬೇಕು: ಎಎಸ್ಪಿ ಸಂತೋಷ್ ಕುಮಾರ್ ಕುಂದಾಪುರ: ವಿದ್ಯಾರ್ಥಿಗಳು ತಿಳಿದೋ ತಿಳಿಯದೆಯೋ ಅಪರಾಧ ಕೃತ್ಯಗಳಲ್ಲಿ ತೊಡಗಿಕೊಳ್ಳುವುದರಿಂದ ಭವಿಷ್ಯದಲ್ಲಿ ಅವರು ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಈ ಬಗ್ಗೆ ಅರಿತು ಎಚ್ಚರ ವಹಿಸುವುದು ಅತೀ ಅಗತ್ಯ ಎಂದು ಉಡುಪಿ ಜಿಲ್ಲಾ ಹೆಚ್ಚುವರಿ ಎಸ್ಪಿ ಸಂತೋಷ್ ಕುಮಾರ್ ಹೇಳಿದರು. ಅವರು ಉಡುಪಿ ಜಿಲ್ಲಾ ಪೊಲೀಸ್ ಹಾಗೂ ರೋಟರಿ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ಮಂಗಳೂರಿನ ರೆಡ್ ಎಫ್.ಎಮ್ 93.5, ಇಲ್ಲಿನ ಹೋಟೆಲ್ ಪಾರಿಜಾತದ ಪ್ರಾಯೋಜಕತ್ವದೊಂದಿಗೆ ಕುಂದಾಪುರದ ರೋಟರಿ ಲಕ್ಷ್ಮೀನರಸಿಂಹ ಕಲಾ ಮಂದಿರದಲ್ಲಿ ಆಯೋಜಿಸಿದ ರೆಡ್ ಸುರಕ್ಷಾ ಅಭಿಯಾನ ಸೀಸನ್-2 ಉಡುಪಿ ಜಿಲ್ಲಾ ಮಟ್ಟದ ಅಂತರ್‌ಕಾಲೇಜು ಕಿರು ಪ್ರಹಸನ ಸ್ವರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ಅಪಘಾತ ಸಂಭವಿಸಿದಾಗ ಅಪಘಾತಕ್ಕೀಡಾದವರನ್ನು ರಕ್ಷಿಸುವುದು ನಮ್ಮ ಮೊದಲ ಆದ್ಯತೆಯಾಗಬೇಕು. ಈ ಸಂದರ್ಭದಲ್ಲಿ ನಾಗರೀಕರು ಜವಾಬ್ದಾರಿಯುತವಾಗಿ ವರ್ತಿಸಿ ಪೊಲೀಸರೊಂದಿಗೆ ಸ್ಪಂದಿಸುವುದರಿಂದ ಅಮೂಲ್ಯ ಜೀವವನ್ನು ಉಳಿಸಬಹುದು ಎಂದವರು ಸಲಹೆಯಿತ್ತರು. ಉಡುಪಿ ಜಿಲ್ಲೆಯ 28 ಕಾಲೇಜುಗಳು ಸ್ವರ್ಧೆಯಲ್ಲಿ ಭಾಗವಹಿಸಿದ್ದು ಆ ಪೈಕಿ ಕಾರ್ಕಳದ ಭುವನೇಂದ್ರ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಬಹುಮಾನ, ಕೋಟ ಪಡುಕೆರೆ ಸರಕಾರಿ…

Read More

ಕುಂದಾಪುರ: ತಾಲೂಕಿನ ಕೆರಾಡಿ ಗ್ರಾಮದ ತನ್ನ ತಾಯಿಯ ಮನೆಯಲ್ಲಿ ವಾಸವಿದ್ದ ನವ ವಿವಾಹಿತೆಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವಿದೇಶದಲ್ಲಿ ವೃತ್ತಿಯಲ್ಲಿರುವರುವ ಸತೀಶ್ ಶೆಟ್ಟಿ ಅವರ ಮಡದಿ ಪವಿತ್ರಾ ಶೆಟ್ಟಿ (23) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಚಿತ್ತೂರಿನ ನಿವಾಸಿ ಸತೀಶ್ ಶೆಟ್ಟಿ ಅವರೊಂದಿಗೆ ಕಳೆದ ಆರು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಪವಿತ್ರಾ ಕೆರಾಡಿಯ ತಾಯಿ ಮನೆಯಲ್ಲಿ ವಾಸಿಸುತ್ತಿದ್ದರು. ಪತಿ ಸತೀಶ್ ಶೆಟ್ಟಿ ದುಬೈನಲ್ಲಿ ಉದ್ಯೋಗಿಯಾಗಿದ್ದು ಇಬ್ಬರು ಅನೋನ್ಯವಾಗಿದ್ದರು ಎನ್ನಲಾಗಿದೆ. ಬೆಳಗ್ಗೆ ಘಟನೆಗೆ ಮುನ್ನ ತನ್ನ ಪತಿಯೊಂದಿಗೆ ಪವಿತ್ರ ಮೊಬೈಲ್ ಕರೆ ಮಾಡಿ ಮಾತನಾಡಿದ್ದರು ಎನ್ನಲಾಗಿದೆ. ಆದರೆ ನಂತರ ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ನೋಡಿದ ಪವಿತ್ರಾ ಶೆಟ್ಟಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಕುಂದಾಪುರ ಸರ್ಕಾರೀ ಆಸ್ಪತ್ರೆಗೆ ಮರಣೋತ್ತರ ಶವ ಪರೀಕ್ಷೆ ನಡೆಸಿ ಮನೆಯವರಿಗೆ ಒಪ್ಪಿಸಲಾಗಿದೆ. ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪುರ: ಸಿಹಿನೀರಿನ ಮರಳುಗಾರಿಕೆ ಟೆಂಡರ್ ಕರೆಯಲು ವಿಳಂಬ ಮಾಡುತ್ತಿರುವ ಜಿಲ್ಲಾಡಳಿತ ಕ್ರಮ ಖಂಡಿಸಿ ಹಿಂದಿನ ಬೆಲೆಗಿಂತ ದುಪ್ಪಟ್ಟು ಬೆಲೆಯಲ್ಲಿ ಮರಳನ್ನು ಮಾರಾಟ ಮಾಡುತ್ತಿರುವ ಕಾಳಸಂತೆಕೋರರ ಮೇಲೆ ಕ್ರಮ ಜರುಗಿಸಲು ವಿಫಲವಾಗಿರುವ ಜಿಲ್ಲಾಡಳಿತದ ವೈಪಲ್ಯ ವಿರೋಧಿಸಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಅಕ್ಟೋಬರ್ 05 ರಿಂದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಛೇರಿ ಎದುರುಗಡೆ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ. ಕಳೆದ ಹಲವಾರು ತಿಂಗಳುಗಳಿಂದ ಜಿಲ್ಲೆಯಲ್ಲಿ ಸಹಿನೀರಿನ ಮರಳುಗಾರಿಕೆಗೆ ನಿರ್ಬಂಧ ಹೇರಲಾಗಿದ್ದು, ಇಂದಿಗೂ ತೆರವುಗೊಳಿಸದೇ ಮರಳು ನೀತಿಯ ಹೆಸರಲ್ಲಿ ವಿಳಂಬ ಮಾಡುತ್ತಿದ್ದು, ಮಧ್ಯವರ್ತಿಗಳಿಗೆ ಕೃತಕ ಅಭಾವ ಸೃಷ್ಠಿಸಲು ಅನುಕೂಲ ಮಾಡಿಕೊಟ್ಟಿದೆ. ಇದರಿಂದಾಗಿ ಮರಳು ಕಾಳ ಸಂತೆಯಲ್ಲಿ ದುಪ್ಪಟ್ಟು ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಈ ಹಿಂದೆ 407 ಒಂದು ಲಾರಿ ಯೂನಿಟ್‌ಗೆ ಇದ್ದರೂ. 2,000/- ಇಂದು ಬರೋಬ್ಬರಿ 2800 ರೂಪಾಯಿಗಳನ್ನು ವಸೂಲಿಮಾಡಲಾಗುತ್ತಿದೆ. ಇದರಿಂದ ಕಟ್ಟಡ ಕಾರ್ಮಿಕರಿಗೆ, ಜನಸಾಮಾನ್ಯರಿಗೆ ಮನೆಕಟ್ಟಲು ಮರಳು ಖರೀದಿಸಲಾಗದೆ ನಿರ್ಮಾಣ ಕೆಲಸಗಳು ಕುಂಠಿತಗೊಂಡಿದೆ. ಸಪ್ಟೆಂಬರ್ ತಿಂಗಳಿನಲ್ಲಿ ಉಡುಪಿ ಜಿಲ್ಲಾ ಕಟ್ಟಡ ಮತ್ತು…

Read More

ಕೋಟ: ನಾವು ಬದುಕುವ ವಿಧಾನವನ್ನು ಸಂಸ್ಕೃತಿ ಎನ್ನಬಹುದು. ಒಳ್ಳೆಯದಕ್ಕೆ ಹತ್ತಿರವಾಗಿ ಕೆಟ್ಟದರಿಂದ ದೂರ ಉಳಿದು ಬದುಕುವುದು ಸಂಸ್ಕೃತಿ. ಸಂಸ್ಕೃತಿಯ ಪ್ರೀತಿ ನಮಗೆ ಬದುಕಿನಲ್ಲಿ ಜೀವನ ಪ್ರೀತಿಯನ್ನು ನೀಡುತ್ತದೆ. ನಮ್ಮಲ್ಲಿ ಒಳ್ಳೆಯ ತನವನ್ನು ವೃದ್ಧಿಕೊಳ್ಳಲು ಸಹಕಾರ ಮಾಡುತ್ತದೆ ಎಂದು ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಶ್ರೀಮತಿ ಜಾನಕಿ ಎಂ. ಹೇಳಿದರು. ಅವರು ಗುರುವಾರ ಕೋಟ ಕಾರಂತ ಥೀಂ ಪಾರ್ಕನಲ್ಲಿ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಸಮಾರಂಭದ ಮೊದಲನೇ ದಿನವಾಗಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ಜಿಲ್ಲಾ ಲೇಖಕಿಯರ ಸಂಘ ಉಡುಪಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ.) ಉಡುಪಿ, ವಿವೇಕ ಬಾಲಕಿಯರ ಪ್ರೌಢಶಾಲೆ ಕೋಟ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಮಹಿಳಾ ಸಾಹಿತ್ಯ ಸಮಾವೇಶ ಚೇತನಾ ಮೃದು ಮಾತಿನ ರಿಂಗಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಾಂಸ್ಕೃತಿಕ ಚಿಂತಕಿ ತ್ರಿಪುರ ಸುಂದರಿ ಬಲ್ಲಾಳ ಅವರು ಚೆಂಡೆ ಬಾರಿಸುವ ಮೂಲಕ ಸಾಂಸ್ಕೃತಿಕ ಸುಗ್ಗಿ ಅನಾವರಣಗೊಳಿಸಿ ಮಾತನಾಡಿ, ಮಕ್ಕಳ ಎಳವೆಯಿಂದಲೇ ನಮ್ಮ ಸಂಸ್ಕೃತಿ, ದೇವರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಇಂದು ಆಸ್ಟ್ರೇಲಿಯಾದಲ್ಲಿ ನಡೆದ ಅಂತರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಸ್ವರ್ಧೆಯಲ್ಲಿ ಮುಂಬೈ ದೇವಾಡಿಗ ಸಂಘದ ಮಹಿಳಾ ವಿಭಾಗ ಕಾರ್ಯದರ್ಶಿ ಜಯಂತಿ ಎಂ. ದೇವಾಡಿಗ ಲಾಂಗ್ ಜಂಪ್ ವಿಭಾಗದಲ್ಲಿ ತೃತೀಯ ಬಹುಮಾನ ಗಳಿಸಿದ್ದಾರೆ. ಜಯಂತಿ ಮೂಲತಃ ದಕ್ಷಿಣಕನ್ನಡ ಜಿಲ್ಲೆಯ ಶಿಬರೂರಿನವರು. ಅವರು ಇತ್ತಿಚಿಗೆ ಮುಂಬೈ ವಿಶ್ವವಿದ್ಯಾಲಯ ಕ್ರೀಡಾಂಗಣದಲ್ಲಿ ಜರುಗಿದ ಮೊದಲ ರಾಷ್ಟ್ರೀಯ ಮರ್ಕೆಂಟೈಲ್-ಕಾರ್ಪೊರೇಟ್ ಮಾಸ್ಟರ್ಸ್ ಟ್ರಾಕ್ ಮತ್ತು ಫಿಲ್ಡ್ -2015 ಇದರಲ್ಲಿ ಮೂರು ಚಿನ್ನದ ಪದಕ ಹಾಗೂ 2 ಬೆಳ್ಳಿಯ ಪದಕಗಳನ್ನು ಗಳಿಸಿ, ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದ ಪ್ರೇಮಾ ಅವರೊಂದಿಗೆ ಚಾಂಪಿಯನ್ ಶಿಪ್ ಹಂಚಿಕೊಂಡಿದ್ದರು. ಹಲವು ಅಲ್ಲದೇ ಅಂತರಾಜ್ಯ ಕ್ರೀಡಾಕೂಟಗಳಲ್ಲೂ ಭಾಗವಹಿಸಿ ಪದಕ ಗಳಿಸಿದ್ದರು. ಮುಂಬೈನಲ್ಲಿಯೇ ವಾಸವಿರುವ ಮಾಧವ ದೇವಾಡಿಗ ಅವರ ಪತ್ನಿಯಾದ ಜಯಂತಿ ದೇವಾಡಿಗ ಅವರಿಗೆ ಮೂವರು ಮಕ್ಕಳಿದ್ದಾರೆ. ಜಯಂತಿ ಅವರ ಕ್ರೀಡಾಕ್ಷೇತ್ರದಲ್ಲಿ ಈ ಸಾಧನೆಯನ್ನು ಅವರ ಬಂಧುಗಳು, ಸಮಾಜದ ಗಣ್ಯರು, ಅಭಿಮಾನಿಗಳು ಅಭಿನಂದಿಸಿದ್ದಾರೆ. ವರದಿ: ಚರಣ್ ಬೈಂದೂರು

Read More

ಕೋಟ: ಇಲ್ಲಿನ ಡಾ. ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಸಂಭ್ರಮದಲ್ಲಿರುವ ಕೋಟ ಕಾರಂತ ಥೀಂ ಪಾರ್ಕಗೆ ಕಡೂರು ಶಾಸಕ, ಜೆಡಿಎಸ್ ಧುರೀಣ ವೈ.ಎಸ್.ವಿ.ದತ್ತ ಭೇಟಿ ನೀಡಿದರು.. ಕಾರಂತರ ಹುಟ್ಟೂರಿನಲ್ಲಿ ನಿರ್ಮಾಣವಾಗಿ ಸಾಂಸ್ಕೃತಿಕ ಸಾಹಿತ್ಯಿಕ ಸಿಂಚನವನ್ನು ನೀಡುತ್ತಿರುವ ಥೀಂ ಪಾರ್ಕನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಶ್ರೀಯುತರನ್ನು ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ ಸಿ. ಕುಂದರ್, ಥೀಂ ಪಾರ್ಕಗೆ ಬರಮಾಡಿಕೊಂಡ ಶಾಲು ಹೊದಿಸಿ ಸನ್ಮಾನಸಿ ಗೌರವಿಸಿದರು. ಈ ಸಂದರ್ಭ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕೋಟತಟ್ಟು ಪಂಚಾಯಿತಿ ಉಪಾಧ್ಯಕ್ಷ ಲೋಕೇಶ್ ಶೆಟ್ಟಿ, ಸದಸ್ಯರಾದ ಜಯಪ್ರಕಾಶ್, ಪ್ರತಿಷ್ಠಾನದ ಸುಬ್ರಾಯ ಆಚಾರ್ಯ, ಕುಂದಾಪುರ ಬಿಜೆಪಿ ಕ್ಷೇತ್ರಾಧ್ಯಕ್ಷ ರಾಜೇಶ್ ಕಾವೇರಿ, ಪ್ರತಿಷ್ಢಾನದ ಕಾರ್ಯದರ್ಶಿ ಶಿಕ್ಷಕ ಸಾಹಿತಿ ನರೇಂದ್ರ ಕುಮಾರ್ ಕೋಟ, ಕೋಟ ಪಂಚಾಯಿತಿ ಸದಸ್ಯ ಸಂತೋಷ ಪ್ರಭು ಮೊದಲಾದವರು ಉಪಸ್ಥಿತರಿದ್ದರು.

Read More

ಕುಂದಾಪುರ: ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರು ಪ್ರಜ್ಞಾವಂತರಾಗಿ ಕಾರ್ಯವೆಸಗಿದರೆ ಉತ್ತಮ ನಾಯಕರನ್ನು ಆರಿಸಲು ಸಾಧ್ಯವಿದೆ. ವ್ಯವಸ್ಥೆ ಸಂಪೂರ್ಣವಾಗಿ ಆರೋಗ್ಯಕರವಾಗಬೇಕಾದಲ್ಲಿ ರಾಜಕಾರಣಿಗಳ ಜೊತೆಗೆ ಮತದಾರರ ಕೊಡುಗೆ ಕೂಡ ಅಮೂಲ್ಯವಾದದು ಎಂದು ಕಡೂರು ಶಾಸಕ ಜೆಡಿಎಸ್ ಧುರೀಣ ವೈ.ಎಸ್.ವಿ.ದತ್ತ ಹೇಳಿದರು. ಅವರು ಗುಂಡ್ಮಿಯ ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರದಲ್ಲಿ ಗಾಂಧಿ ಜಯಂತಿಯ ಪ್ರಯುಕ್ತ ಬಹುಮಖಿ ಸಾಲಿಗ್ರಾಮ ಸಂಸ್ಥೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಸಂಸದೀಯ ಪ್ರಜಾಪ್ರಭುತ್ವ ಮತ್ತು ವರ್ತಮಾನ ಪ್ರಸ್ತುತತೆ ಎಂಬ ವಿಷಯ ಕುರಿತು ಉಪನ್ಯಾಸ ನೀಡಿ, ಗಾಂಧಿ ಯುಗ ಅಂತ್ಯವಾಗಿದೆ ಪ್ರಾಮಾಣಿಕವಾಗಿ ರಾಜಕೀಯದಲ್ಲಿರುವ ನಾವು ನೀವು ವಾನಪ್ರಸ್ಥಾಶ್ರಮಕ್ಕೆ ತೆರಳುವ ಸಂದರ್ಭ ಬಂದಿದೆ. ಆದರೆ ನಿರಾಶೆಯಲ್ಲಿಯೂ ಕ್ರಿಯಾಶೀಲತೆಯನ್ನು ನಂಬಿ ಬಂದಿರುವ ನಾನು ವ್ಯವಸ್ಥೆಯ ಬದಲಾವಣೆಯ ಬಗ್ಗೆ ಇನ್ನೂ ಆಶಾವಾದಿಯಾಗಿ ಎದುರು ನೋಡುತ್ತಿದ್ದೇನೆ. ೧೨೧೫ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅತ್ಯಂತ ಮಹತ್ವದ ದಿನ ಇಂಗ್ಲೇಂಡ್‌ನ ರಾಜ ಜಾನ್‌ನ ಆಡಳಿತ ವ್ಯವಸ್ಥೆ ವಿರುದ್ಧ ಜನಾದೋಲನವಾಗಿ ಮ್ಯಾಗ್ನಾ ಕಾರ್ಟಾ ನೀಡಿದಾಗ, ಆಡಳಿತ ವ್ಯವಸ್ಥೆ ಜನ ಶಕ್ತಿಯ ಮನವಿಗೆ ಬಾಗಿದ ದಿನವಾಗಿದೆ. ಆದರೆ ಇಂದು ಅಂತಹ…

Read More