ಉಪ್ಪುಂದ: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ., ಉಪ್ಪುಂದ, ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಲಯನ್ಸ್ ಕಣ್ಣಿನ ಆಸ್ಪತ್ರೆ ಕೋಟ, ಲಯನ್ಸ್ ಟ್ರಸ್ಟ್ ಫಾರ್ ಸರ್ವಿಸಸ್ & ಚಾರಿಟೇಸ್ (ರಿ.) ಲಯನ್ಸ್ ಕ್ಲಬ್ ಬ್ರಹ್ಮಾವರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಅಂಧತ್ವ ನಿವಾರಣಾ ವಿಭಾಗ ಉಡುಪಿ, ಲಯನ್ಸ್ & ಲಯನೆಸ್ ಕ್ಲಬ್ ಬ್ರಹ್ಮಾವರ ಇವರ ಜಂಟಿ ಆಶ್ರಯದಲ್ಲಿ ಉಚಿತ ಕಣ್ಣಿನ ಪೊರೆ ತಪಾಸಣಾ ಶಿಬಿರ ಜರಗಿತು. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಎಸ್, ಪ್ರಕಾಶ್ಚಂದ್ರ ಶೆಟ್ಟಿ ಇವರು ಶಿಬಿರದ ಅಧ್ಯಕ್ಷತೆಯನ್ನು ವಹಿಸಿ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರದ ಪ್ರಯೋಜನ ಪಡೆಯುವಲ್ಲಿ ಯಶಸ್ವಿ ಹೊಂದಬೇಕು ಎಂದರು. ಶಿಬಿರವನ್ನು ಚಾಮರ್ಕಿ ನಾರಾಯಣ ಶೆಟ್ಟಿ ಕಣ್ಣಿನ ಆಸ್ಪತ್ರೆಯ ಅಧ್ಯಕ್ಷರಾದ ಸೀತಾರಾಮ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ಆಸ್ಪತ್ರೆಯ ವೈದ್ಯರಾದ ಶ್ರೀಮತಿ ವೀಣಾ ಉಮೇಶ ಇವರು ಕಣ್ಣಿನ ರಕ್ಷಣೆಯ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ…
Author: ಸುನಿಲ್ ಹೆಚ್. ಜಿ. ಬೈಂದೂರು
ಕುಂದಾಪುರ: ಉದಯವಾಣಿಯ ಕುಂದಾಪುರ ಕಛೇರಿಯು ನಗರದ ಮುಖ್ಯರಸ್ತೆಯ ಬಳಿ ಇರುವ ಶ್ರೀಸಾಯಿ ಸೆಂಟರ್ನ ಎರಡನೇ ಮಹಡಿಗೆ ಸ್ಥಳಾಂತರಗೊಂಡಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಅಪ್ಪಣ್ಣ ಹೆಗ್ಡೆ ನೂತನ ಕಚೇರಿಯನ್ನು ಉದ್ಘಾಟಿಸಿ ಶುಭಹಾರೈಸಿದರು. ಮಣಿಪಾಲ ಮೀಡಿಯಾ ನೆಟ್ವರ್ಕ್ ನ ಸಿಇಒ ವಿನೋದ್ ಕುಮಾರ್, ಫೈನಾನ್ಸ್ ಡಿ.ಜಿ.ಎಂ. ಸುದರ್ಶನ್ ಶೇರಿಗಾರ್, ರಾಧಾಕೃಷ್ಣ ಕೊಡವೂರು, ಕೃಷ್ಣಮೂರ್ತಿ, ಉದಯ ಆಚಾರ್ ಸಾಸ್ತಾನ, ಹರೀಶ್ ಜಾಲಾಡಿ, ವಿಶ್ವನಾಥ್, ರಾಘವೇಂದ್ರ ಪ್ರಭು, ಸಂತೋಷ್ ಇಂದ್ರಾಳಿ ಮೊದಲಾದವರು ಉಪಸ್ಥಿತರಿದ್ದರು. ಮಣಿಪಾಲ ಮೀಡಿಯಾ ನೆಟ್ವರ್ಕ್ ಲಿ. ನ ಮ್ಯಾಗಜೀನ್ ವಿಭಾಗದ ರಾಷ್ಟ್ರೀಯ ಮುಖ್ಯಸ್ಥ ರಾಮಚಂದ್ರ ಮಿಜಾರ್ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಸಹ ಉಪಾಧ್ಯಕ್ಷ ಆನಂದ ಕೆ. ವಂದಿಸಿದರು.
ಬೈಂದೂರು: ಇಲ್ಲಿನ ತಗ್ಗರ್ಸೆ ಗ್ರಾಮದ ನೆಲ್ಯಾಡಿ ಅರಳಿಕಟ್ಟೆ ಮನೆಯ ಸುಶೀಲಾ ಮತ್ತು ನಾಗಮ್ಮ ಶೆಡ್ತಿ ಎಂಬುವವರ ಹಂಚಿನ ಮನೆಗೆ ಯಾರೂ ಇಲ್ಲದ ವೇಳೆ ಬೆಂಕಿ ಹಚ್ಚಿದ್ದ ಆರೋಪಿಗಳು, ಮದುವೆ ಸಂಭ್ರಮದಲ್ಲಿದ್ದ ಮನೆಮಂದಿಗೆ ಬಿಸಿ ಶಾಕ್ ನೀಡಿದ ಘಟನೆ ವರದಿಯಾಗಿದೆ. ಘಟನೆಯ ವಿವರ: ತಗ್ಗರ್ಸೆಯ ನೆಲ್ಯಾಡಿ ಅರಳಿಕಟ್ಟೆ ಮನೆ ಸುಶೀಲಾ ಎಂಬುವವರ ಮಗನಿಗೆ ಮದವೆ ನಿಗದಿಯಾಗಿತ್ತು. ಮನೆಯವರೆಲ್ಲರೂ ಮದುವೆ ಸಮಾರಂಭಕ್ಕೆ ಕಲ್ಯಾಣ ಮಂಟಪಕ್ಕೆ ತೆರಳಿದ್ದ ಸಂದರ್ಭವನ್ನು ನೋಡಿಕೊಂಡು ಕುಟುಂಬದ ಹತ್ತಿರದ ಸಂಬಂಧಿಕರಾದ ರಾಘವೇಂದ್ರ ಹಾಗೂ ರಾಜೇಶ ಎಂಬುವವರು ಮಧ್ಯಾಹ್ನ 12ಗಂಟೆಯ ಸುಮಾರಿಗೆ ಸುಶೀಲಾ ಅವರ ಮನೆಗೆ ಬಿಂಕಿ ಹಚ್ಚಿ ಪರಾರಿಯಾಗಿದ್ದರು. ಇವರುಗಳ ನಡುವೆ ಆಸ್ತಿ ವಿಚಾರಕ್ಕೆ ತಕರಾರಿತ್ತು ಎನ್ನಲಾಗಿದ್ದು ಅದೇ ವಿಷಯವನ್ನಿಟ್ಟುಕೊಂಡು ಮನೆಗೆ ಬೆಂಕಿ ಹಚ್ಚಿದ ಬಗ್ಗೆ ತಿಳಿದುಬಂದಿದೆ ಬೆಂಕಿ ಮನೆ ಜಗಲಿಯನ್ನು ಆವರಿಸಿರುವುದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಶಕ್ಕೆ ಪೋನಾಯಿಸಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರಾದರೂ ಅಷ್ಟರಲ್ಲಾಗಲೇ ಸುಮಾರು 3ಲಕ್ಷ ಮೌಲ್ಯದ ಸೊತ್ತುಗಳು ಸುಟ್ಟು ಕರಕಲಾಗಿದ್ದವು. ಪ್ರಕರಣದ ಬೆನ್ನತ್ತಿದ…
ಕೊಲ್ಲೂರು: ವಂಡ್ಸೆ ಸಮೀಪದ ಹಬ್ಬಿ ಹರವರಿ ನಿವಾಸಿ ದಲಿತ ಮಹಿಳೆಯೋರ್ವರಿಗೆ, ಆಕೆ ದುಡಿಯುತ್ತಿರುವ ಗೇರುಬೀಜ ಕಟ್ಟಿಂಗ್ ಉದ್ಯಮಿ ಹಬ್ಬಿ ಹರವರಿಯ ನಿವಾಸಿ ಮನೋಹರ ಗಾಣಿಗ ಎಂಬುವವರು ಆಕೆ ಗೇರುಬೀಜ ಕದ್ದೊಯ್ದಿರುವುದಾಗಿ ಸುಳ್ಳು ಆರೋಪ ಹೊರಿಸಿ ರೀಪಿನಿಂದ ಹೊಡೆದು ಕೈಹಿಡಿದು ಎಳೆದು ದೌರ್ಜನ್ಯ ಎಸಗಿರುವುದಾಗಿ ಕೊಲ್ಲೂರು ಠಾಣೆಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ. ಕೊಲ್ಲೂರು ಎಸ್.ಐ. ಜಯಂತ್ ಅವರು ಪ್ರಕರಣ ದಾಖಲಿಸಿ ಡಿವೈಎಸ್ಪಿ ಮಂಜುನಾಥ ಶೆಟ್ಟಿಯವರು ಪೂರ್ಣ ತನಿಖೆ ನಡೆಸುತ್ತಿದ್ದಾರೆ.
ಇಂಟರ್ನೆಟ್ ಬಳಕೆದಾರರಿಗೆ ಹೊಸ ಕಂಟಕವೊಂದು ಎದುರಾಗಿರುವ ಬಗ್ಗೆ ಸಾಕಷ್ಟು ಚರ್ಚೆಗಳೆದ್ದಿದೆ. ನಿಮ್ಮಿಷ್ಟದ ತಾಣಗಳನ್ನು ವೀಕ್ಷಿಣೆಯನ್ನು ನಿಯಂತ್ರಿಸಲು ಮೊಬೈಲ್ ಸೇವಾ ಕಂಪೆನಿಗಳು ಮುಂದಾಗಿರುವ ಪರಿಣಾಮ ಅಂತರ್ಜಾಲವನ್ನು ಅವಲಂಬಿಸಿರುವ ವ್ಯವಹಾರಗಳು ದುಬಾರಿಯಾಗಬಹುದು ಅಥವಾ ನಿಮ್ಮ ಇಷ್ಟದ ಅಂತರ್ಜಾಲ ತಾಣಗಳು ತೆರೆದುಕೊಳ್ಳದೆ ಇರಬಹುದು. ಒಂದು ವೇಳೆ ಅದು ತೆರೆದುಕೊಂಡರೂ ಹೆಚ್ಚಿಗೆ ಸಮಯ ತೆಗೆದುಕೊಳ್ಳಬಹುದು. ಹೀಗೆ ಜಾಲತಾಣಿಗರ ಸ್ವಾತಂತ್ರ್ಯವನ್ನು ಹಿಡಿದಿಡುವ ಪ್ರಯತ್ನಕ್ಕೆ ಮೊಬೈಲ್ ಸೇವಾ ಕಂಪೆನಿಗಳು ಮುಂದಾಗಿರುವುದಕ್ಕೆ ಭಾರತ ಮಾತ್ರವಲ್ಲದೇ ವಿಶ್ವದ ಹಲವು ದೇಶಗಳಲ್ಲಿ ವಿರೋಧ ವ್ಯಕ್ತವಾಗಿದೆ. ಹೇಗಿದು? ಸೇವಾ ಕಂಪೆನಿಗಳು ತಮಗೆ ಹಣ ನೀಡುವ ಕಂಪೆನಿಗಳ ವೆಬ್ಸೈಟ್ನ್ನು ಉಚಿತವಾಗಿ ನೋಡಲು ಅವಕಾಶ ನೀಡುತ್ತದೆ ಅಥವಾ ವೇಗವಾಗಿ ಓಪನ್ ಆಗುವಂತೆ ಮಾಡುತ್ತದೆ. ಯಾರು ಸೇವಾ ಕಂಪೆನಿಗಳಿಗೆ ಹಣ ನೀಡುವುದಿಲ್ಲವೋ ಆ ಕಂಪೆನಿಗಳ ವೆಬ್ಸೈಟ್ನ್ನು ಬ್ಲಾಕ್ ಮಾಡುತ್ತಾರೆ ಅಥವಾ ತಡವಾಗಿ ಓಪನ್ ಆಗುವಂತೆ ವ್ಯವಸ್ಥೆ ರೂಪಿಸುತ್ತದೆ. ಸೇವಾ ಕಂಪೆನಿಗಳ ಈ ನಿಯಂತ್ರಿತ ನಡೆ ಸಾಮಾಜಿಕ ಜಾಲ ತಾಣಗಳಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು ನೆಟ್ ನ್ಯೂಟ್ರಾಲಿಟಿಗೆ ಆಗ್ರಹಿಸುತ್ತಿದ್ದಾರೆ. ಸರಕಾರದ ನಡೆ…
ಹೆಮ್ಮಾಡಿ: ಸಿಗಡಿ ಕೃಷಿ ಲಾಭದಾಯಕ ಉದ್ಯಮವಾಗಿ ಬೆಳೆದಿದ್ದರೂ ಸಿಗಡಿ ಕೃಷಿಕರು ಹತ್ತು- ಹಲವು ಸವಾಲುಗಳು ಎದುರಿಸುತ್ತಿದ್ದಾರೆ. ಕುಂದಾಪುರ ತಾಲೂಕಿನಲ್ಲಿ 20 ವರ್ಷಗಳ ಹಿಂದೆ ಸಿಗಡಿ ಕೃಷಿ ಪರಿಚಯವಾಗಿದ್ದು, 200ಕ್ಕೂ ಅಧಿಕ ಸಂಖ್ಯೆಯಲ್ಲಿ ಇದ್ದ ಸಿಗಡಿ ಕೃಷಿ ಬೆಳೆಗಾರರ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಗಣನೀಯವಾಗಿ ಇಳಿಮುಖ ಕಂಡಿದೆ. ಸರಕಾರದ ಸಹಾಯಹಸ್ತ, ಉತ್ತೇಜನ ಕ್ಷೀಣವಾಗಿದ್ದರಿಂದ ಸಿಗಡಿ ಕೃಷಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಕೊಲ್ಲೂರು ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೃಷ್ಣಪ್ರಸಾದ್ ಅಡ್ಯಂತಾಯ ಅವರು ಹೇಳಿದರು. ಸಿಗಡಿ ಬೆಳೆಗೆ ಅಗತ್ಯವಾದ ಆಹಾರ ವಿತರಕರಾದ ತ್ರಾಸಿಯ ಮಹಾಗಣಪತಿ ಟ್ರೇಡಿಂಗ್ ಸರ್ವೀಸಸ್ ಇದರ ಆರಂಭೋತ್ಸವ ಅಂಗವಾಗಿ ಆವಂತಿ ಫೀಡ್ಸ್ ಲಿಮಿಟೆಡ್ ಸಂಸ್ಥೆ ಸಹಭಾಗಿತ್ವದೊಂದಿಗೆ ಹೆಮ್ಮಾಡಿಯ ಜಯಶ್ರೀ ಸಭಾಂಗಣದಲ್ಲಿ ಜರಗಿದ ಸಿಗಡಿ ಕೃಷಿಕರ ಸಮ್ಮಿಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಿಗಡಿ ಕೃಷಿಕರ ಹಿತಚಿಂತನೆಗಿಂತ ಕೇವಲ ತಮ್ಮ ಉತ್ಪನ್ನಗಳ ಮಾರುಕಟ್ಟೆಗಾಗಿ ಬರುವ ಕಂಪೆನಿಗಳ ಆಸೆ, ಆಮಿಷಗಳಿಗೆ ಸಿಗಡಿ ಕೃಷಿಕರು ಬಲಿಬೀಳದೇ ಉತ್ತಮ ಗುಣಮಟ್ಟದ ಸಿಗಡಿ ಆಹಾರವನ್ನು ಪೂರೈಸುವ ಡೀಲರುಗಳೊಂದಿಗೆ ಬಾಂಧವ್ಯ…
ಕುಂದಾಪುರ: ಮಣಿಪಾಲ ಅಕಾಡೆಮಿಯ ಆಡಳಿತಾಧಿಕಾರಿ ಡಾ| ಎಚ್. ಶಾಂತಾರಾಮ್ ಅವರ ಹೆಸರಿನಲ್ಲಿ ಭಂಡಾರ್ಕಾರ್ ಕಾಲೇಜು ನೀಡುತ್ತಿರುವ ಅತ್ಯುತ್ತಮ ಕೃತಿ ಪ್ರಶಸ್ತಿಗೆ 2013-2014ರಲ್ಲಿ ಮೊದಲ ಆವೃತ್ತಿಯಾಗಿ ಪ್ರಕಟಗೊಂಡ ಸಣ್ಣ ಕಥಾ ಸಂಕಲನವನ್ನು ಆಹ್ವಾನಿಸಲಾಗಿದೆ. ಡಾ| ಎಚ್. ಶಾಂತಾರಾಮ್ ಅವರು ಶಿಕ್ಷಣ, ಸಾಹಿತ್ಯ, ಸಂಸ್ಕೃತಿಗಳಲ್ಲಿ ಅಪಾರ ಆಸಕ್ತಿ ಉಳ್ಳವರು. ಜತೆಗೆ ಕ್ರಿಯಾಶೀಲ ವ್ಯಕ್ತಿಗಳನ್ನು, ಸೃಜನಶೀಲ ಮನಸ್ಸುಗಳನ್ನು ನಿರಂತರವಾಗಿ ಪ್ರೋತ್ಸಾಹಿಸುತ್ತ ಬಂದಿದ್ದು, ಉಡುಪಿ – ಮಣಿಪಾಲ – ಕುಂದಾಪುರ ಪರಿಸರವನ್ನು ಸಾಹಿತ್ಯಕ ಚಟುವಟಿಕೆ, ನಾಟಕ, ಯಕ್ಷಗಾನ ಪ್ರದರ್ಶನಗಳ ಮೂಲಕ ಸಾಂಸ್ಕೃತಿಕವಾಗಿ ಗಟ್ಟಿಗೊಳ್ಳುವಂತೆ ಮಾಡುವಲ್ಲಿ ಅಪಾರ ಕೊಡುಗೆ ನೀಡಿದ್ದಾರೆ. ಕಥಾ ಸಂಕಲನದ ನಾಲ್ಕು ಪ್ರತಿಗಳನ್ನು ಎ. 30ರೊಳಗೆ ಡಾ| ಎಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ, ಭಂಡಾರ್ಕಾರ್ ಕಾಲೇಜು ಕುಂದಾಪುರ – 576201 ವಿಳಾಸಕ್ಕೆ ಕಳುಹಿಸಿಕೊಡುವಂತೆ ಕೋರಲಾಗಿದೆ. ಪ್ರಶಸ್ತಿಯು 15,000 ರೂ. ನಗದು ಮತ್ತು ಬೆಳ್ಳಿಯ ಫಲಕವನ್ನು ಒಳಗೊಂಡಿದೆ. ಅಗಸ್ಟ್ 13ರಂದು ಕಾಲೇಜಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮಾಹಿತಿಗಾಗಿ 08254-230369 ಅಥವಾ 9449257263 ಸಂಪರ್ಕಿಸಬಹುದು ಎಂದು…
ಕುಂದಾಪುರ: ಅಲ್ಲಿ ಒಂದಿಷ್ಟು ವಿದ್ಯಾರ್ಥಿಗಳು ಹಾಡು ನೃತ್ಯಕ್ಕೆ ಹೆಜ್ಜೆ ಹಾಕುತ್ತಿದ್ದರೆ, ಮತ್ತೊಂದಿಷ್ಟು ಮಂದಿ ಚನ್ನೆಮಣೆಯಂತಹ ಅಪರೂಪದ ಆಟವಾಡುತ್ತಿದ್ದರು. ಕೆಲವರು ಜೇಡಿಮಣ್ಣಿನ ಮಾದರಿಗಳನ್ನು ತಯಾರಿಸುತ್ತಿಸುತ್ತಿದ್ದರೇ, ಕೆಲವರು ಇನ್ನೂ ಮುಂದೆ ಹೋಗಿ ರಗೋಲಿ, ಕುಂಟೆಬಿಲ್ಲೆ ಮುಂತಾದ ಆಟಗಳನ್ನಾಡುವುದರಲ್ಲಿ ಮಗ್ನರಾಗಿದ್ದರು. ಆದರೆ ಇಲ್ಯಾವುದೇ ಸ್ವರ್ಧೆ ಇರಲಿಲ್ಲ. ಬದಲಿಗೆ ವಿದ್ಯಾರ್ಥಿಗಳ ಪ್ರತಿಭೆಯ ಪ್ರದರ್ಶನಕ್ಕೊಂದು ಸಂದರ ವೇದಿಕೆ ನಿರ್ಮಾಣವಾಗಿತ್ತು. ಇಂತಹ ಅಪರೂಪದ ವೇದಿಕೆ ನಿರ್ಮಾಣಗೊಂಡಿದ್ದು ಕುಂದಾಪುರದಲ್ಲಿ ನಡೆದ ‘ಮಕ್ಕಳ ಹಬ್ಬ’ದಲ್ಲಿ. ಇಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ, ಕುಂದಾಪುರ ತಾಲೂಕು ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಕುಂದಾಪುರದ ಪಿ.ವಿ.ಎಸ್. ಸರೋಜಿನಿ ಮಧುಸೂದನ ಕುಶೆ ಸರಕಾರಿ ಪ್ರೌಡಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ‘ಮಕ್ಕಳ ಹಬ್ಬ’ ಹಲವು ವಿಶೇಷತೆಗಳೊಂದಿಗೆ ಸುಂದರವಾಗಿ ಮೂಡಿಬಂದಿತ್ತು. 18ವರ್ಷದೊಳಗಿನವರಿಗಾಗಿ ಆಯೋಜಿಸಿದ್ದ ಮಕ್ಕಳ ಹಬ್ಬದಲ್ಲಿ ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರತರುವ ಪ್ರಯತ್ನವನ್ನು ಮಾಡಲಾಗಿತ್ತು. ಜಿಲ್ಲೆಯ ವಿವಿಧ ಸರಕಾರಿ ಹಾಗೂ ವಸತಿ ಶಾಲೆಗಳಿಂದ ಬಂದಿದ್ದ ವಿದ್ಯಾರ್ಥಿಗಳು ಹಾಡು, ನೃತ್ಯ, ಏಕಪಾತ್ರ…
ಕೋಟ: ಇಲ್ಲಿನ ಡಾ. ಶಿವರಾಂ ಕಾರಂತ ಅವರ ಹೆಸರಿನಲ್ಲಿ ನಿರ್ಮಾಣಗೊಂಡ ಡಾ. ಕೋಟ ಶಿವರಾಂ ಕಾರಂತ ಥೀಂ ಪಾರ್ಕ್ ಅಭೂತಪೂರ್ವ ಕಲ್ಪನೆಯಾಗಿದ್ದು, ಇದರ ನಿರ್ವಹಣೆ ಮಾಡುತ್ತಿರುವ ಸ್ಥಳಿಯ ಪಂಚಾಯತ್ ಕಾರ್ಯ ಅಭಿನಂದನಾರ್ಹ. ಕಾರಂತರ ಆದರ್ಶಗಳು ಎಲ್ಲೆಡೆ ಪಾಲನೆಯಾಗಬೇಕಾಗಿದೆ. ಕೋಟದ ಕಾರಂತ ಥೀಂ ಪಾರ್ಕಿಗೆ ಈ ಸಾಲಿನ ಬಜೇಟಿನಲ್ಲಿ ಬಿಡುಗಡೆಯಾದ 1 ಕೋಟಿ ರೂ.ವನ್ನು ಶೀಘ್ರ ಬಿಡುಗಡೆಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಹಾಗೂ ಪ್ರವಾಸೋಧ್ಯಮ ಸಚಿವ ಆರ್.ವಿ. ದೇಶಪಾಂಡೆ ಹೇಳಿದ್ದಾರೆ. ಅವರು ಬುಧವಾರ ಕೋಟದ ಕಾರಂತ ಥೀಂ ಪಾರ್ಕಿಗೆ ಭೇಟಿ ನೀಡಿದ ಸಂದರ್ಭ ಮಾತನಾಡಿದರು. ಕಾರಂತ ಥೀಂ ಪಾರ್ಕಿನ ಮುಂಭಾಗದಲ್ಲಿರುವ ಡಾ. ಶಿವರಾಮ ಕಾರಂತರ ಪ್ರತಿಮೆಗೆ ಹೂ ಮಾಲೆ ಅರ್ಪಿಸಿದ ಅವರು ಥೀಂ ಪಾರ್ಕಿನ ಒಳಭಾಗದಲ್ಲಿರುವ ಗ್ರಂಥಾಲಯ, ಸಭಾಂಗಣವನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಕೋಟ ಅಮ್ರಥೇಶ್ವರಿ ದೇವಳಕ್ಕೆ ಭೇಟಿ: ಹಲವು ಮಕ್ಕಳ ತಾಯಿ ಎಂದೇ ಕರೆಯಲ್ಪಡುವ ಕೋಟದ ಶ್ರೀ ಅಮ್ರಥೇಶ್ವರೀ ದೇವಳಕ್ಕೆ ಭೇಟಿ ನೀಡಿದ ಸಚಿವರು ದೇವಳದಲ್ಲಿ ವಿಶೇಷ…
ಕುಂದಾಪುರ: ಇನ್ನು ಕೆಲವೇ ವರ್ಷಗಳಲ್ಲಿ ಭಾರತ ಒಂದು ಸೂಪರ್ ಪವರ್ ರಾಷ್ಟ್ರವಾಗುವುದು ಖಚಿತ. ದೇಶದ ಆಸ್ತಿಯಾಗಿರುವ ವಿದ್ಯಾರ್ಥಿಗಳು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ಯಶಸ್ಸನ್ನು ಕಾಣಬೇಕಿದೆ. ಯೋಗ್ಯರಾದವರು ಮಾತ್ರ ಎಲ್ಲವನ್ನೂ ಎದುರಿಸಿ ಗೌರವಯುತವಾಗಿ ಬಾಳುತ್ತಾರೆ ಎಂದು ಕರ್ನಾಟಕ ಸರಕಾರದ ಉನ್ನತ ಶಿಕ್ಷಣ ಹಾಗೂ ಪ್ರವಾಸೋದ್ಯಮ ಸಚಿವ ಆರ್.ವಿ ದೇಶಪಾಂಡೆ ಹೇಳಿದರು. ಅವರು ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಸಂಸ್ಥಾಕರ ದಿನಾಚರಣೆಯಂದು ಕಾಲೇಜಿನ ಸಂಸ್ಥಾಪಕ ಐ.ಎಂ. ಜಯರಾಮ ಶೆಟ್ಟಿ ಅವರ ಪುತ್ಥಳಿ ಅನಾವರಣಗೊಳಿಸಿ ಮಾತನಾಡುತ್ತಿದ್ದರು. ಇಂದು ವಿಶ್ವ ಸಣ್ಣ ಹಳ್ಳಿಯಂತಾಗಿದೆ. ಕ್ಷಣಮಾತ್ರದಲ್ಲಿ ಜಗತ್ತಿನ ಮಾಹಿತಿಗಳನ್ನು ತಿಳಿದುಕೊಳ್ಳಬಹುದಾಗಿದೆ. ವಿದ್ಯಾರ್ಥಿಗಳು ಪುಸ್ತಕದ ಹುಳುವಾಗದೇ ಸಾಮಾನ್ಯ ಜ್ಞಾನವನ್ನೂ ಹೊಂದಿ ಭಾರತ ವಿಶ್ವ ಮಾರುಕಟ್ಟೆಯೊಂದಿಗೆ ನಡೆಯುತ್ತಿರುವ ಸ್ಪರ್ಧೆಯನ್ನು ಸಮರ್ಥವಾಗಿ ಎದುರಿಸಲು ಸಿದ್ಧರಾಬೇಕಿದೆ. ಇದಕ್ಕೆ ಪೂರಕವಾಗಿ ನಾವು ಕೌಶಲಾಭಿವೃದ್ಧಿಗೆ ಅಗತ್ಯವಾದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದೇವೆ ಎಂದರು. ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಐ.ಎಂ.ಜೆ ಫೌಂಡೇಶನ್ ಲೋಕಾರ್ಪಣೆಗೊಳಿಸಿದರು. ಮಾಜಿ ಶಾಸಕ ಬಿ…
