ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟೇಶ್ವರ: ಕರ್ನಾಟಕ ಕರಾವಳಿಯ ಸಪ್ತ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೋಟೇಶ್ವರದಲ್ಲಿ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಮನ್ಮಹಾರಥೋತ್ಸವ ಸಡಗರ ಸಂಭ್ರಮದಿಂದ ಜರುಗಿತು. ಧನುರ್ ಲಗ್ನ ಸುಮೂಹರ್ತದಲ್ಲಿ ಬೆಳಗ್ಗೆ 10.45ರಿಂದ ಶ್ರೀದೇವರ ರಥಾರೋಹಣ ಪೂರ್ವ ವಿಧಿಗಳು ಆರಂಭಗೊಂಡವು. ತಂತ್ರಿ ಪ್ರಸನ್ನ ಕುಮಾರ ಐತಾಳ್ ಧಾರ್ಮಿಕ ವಿಧಿ ನೆರವೇರಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು. ಶ್ರೀದೇವರಿಗೆ ಶತರುದ್ರಾಭಿಷೇಕ ಇನ್ನಿತರ ಧಾರ್ಮಿಕ ವಿಧಿ ನಡೆದ ಬಳಿಕ ಸಹಸ್ರಾರು ಭಕ್ತರ ಜಯಘೋಷದೊಂದಿಗೆ ಭವ್ಯ ರಥೋತ್ಸವ ನಡೆಯಿತು. ಸಂಜೆ 5.15ಗಂಟೆಗೆ ಬಸವನಗುಡಿ ಸನ್ನಿಧಿಯಿಂದ ಶ್ರೀದೇವರಿಗೆ ಅಭಿಮುಖವಾಗಿ ರಥ ಏಳೆದ ಬಳಿಕ ರಥಾಅವರೋಹಣದ ವಿಧಿ ಸಮಾಪನಗೊಳ್ಳುತ್ತದೆ. ಅಲೆವೂರು ಶ್ರೀ ವಿಷ್ಟುಪೂರ್ತಿ ಸೇವಾ ಬಳಗದವರ ಚಂಡೆ ವಾದನ, ಹಾಗೂ ಕೆರಳ ಚಂಡೆ ವಾದನ, ಉಡುಪಿಯ ಮಂಜುಷಾ ಮಹಿಳಾ ಚಂಡೆ ಬಳಗ ರಥೋತ್ಸವದ ಮೆರಗು ಹೆಚ್ಚಿಸಿದ್ದವು. ಅಪಾರ ಸಂಖ್ಯೆಯ ಜನಸ್ತೋಮ ರಥೋತ್ಸವದಲ್ಲಿ ಪಾಲ್ಗೊಂಡು ಶ್ರೀಕೋಟಿಲಿಂಗೇಶ್ವರ ದೇವರ ದರ್ಶನ ಪಡೆದು ಪುನೀತರಾದರು. ದಾವಣಗರೆಯ ಕೆ.ವಿ. ಆನಂದರಾವ್ ಮತ್ತು ಮಕ್ಕಳಿಂದ ಉಚಿತ ಪಾನಕ…
Author: ಸುನಿಲ್ ಹೆಚ್. ಜಿ. ಬೈಂದೂರು
ಕುಂದಾಪುರ: ಕಳೆದ ಸರಿ ಸುಮಾರು ಐದು ತಿಂಗಳ ಹಿಂದೆ ಮನೆಯಿಂದ ನಿಗೂಢವಾಗಿ ನಾಪತ್ತೆಯಾದ ಕುಂದಾಪುರ ತಾಲೂಕಿನ ಕೊರ್ಗಿ ಗ್ರಾಮದ ಮಾಲತಿ ಬಿ. ಶೆಟ್ಟಿ (65) ಅವರ ಪತ್ತೆಗೆ ಸಂಬಂಧಿಸಿದಂತೆ ಸಾಕಷ್ಟು ಹುಡುಕಾಟದ ನಂತರವೂ ಯಾವುದೇ ಪ್ರಯೋಜನ ಇಲ್ಲದಿರುವುದರಿಂದ ಅವರ ಪುತ್ರ ಅಮೇರಿಕಾದ ಕಂಪೆನಿಯೊಂದರಲ್ಲಿ ಸಿ.ಇ.ಓ. ಆಗಿರುವ ಸತೀಶ್ ಶೆಟ್ಟಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸುವ ಮೂಲಕ ತಾಯಿಯನ್ನು ಹುಡುಕಿಕೊಡುವಂತೆ ತಮ್ಮ ಬಾವ ರಾಮಮನೋಹರ ಶೆಟ್ಟಿ ಮೂಲಕವಾಗಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆನ್ನಲಾಗಿದೆ. ಕುಂದಾಪುರ ತಾಲೂಕಿನ ಕೊರ್ಗಿ ಗ್ರಾಮದ ತನ್ನ ಮನೆಯಲ್ಲಿ ನೆಲೆಸಿದ್ದ ಮಾಲತಿ ಬಿ.ಶೆಟ್ಟಿ ಅವರು 2015ರ ಜೂನ್ 24 ರಂದು ಮಧ್ಯಾಹ್ನ ಊಟದ ಬಳಿಕ ಮನೆಯಿಂದ ನಿಗೂಢವಾಗಿ ನಾಪತ್ತೆಯಾಗಿದ್ದರು. ಒಂದೆರಡು ದಿನ ಸುತ್ತಮುತ್ತಲು ಹುಡುಕಾಟ ನಡೆಸಿದ ಕುಟುಂಬಿಕರು ಕೊನೆಗೆ ಜೂನ್ 26ರಂದು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ತಾಯಿ ನಾಪತ್ತೆಯಾಗುವ ಒಂದೆರಡು ದಿನಗಳ ಹಿಂದಷ್ಟೇ ಅಮೇರಿಕಾಗೆ ತೆರಳಿದ್ದ ಸತೀಶ್ ಶೆಟ್ಟಿ ತಾಯಿ ನಾಪತ್ತೆಯಾದ ಸುದ್ದಿ ಕೇಳಿ ಊರಿಗೆ ಬಂದವರು ಆಕಾಶ ಭೂಮಿ…
ಕುಂದಾಪುರ: ಇಲ್ಲಿನ ಅಂಕದಕಟ್ಟೆಯಲ್ಲಿ ಸರ್ಜನ್ ಆಸ್ಪತ್ರೆಯ ಸಮೀಪ ರಿಕ್ಷಾವೊಂದು ಸೈಕಲ್ ಸವಾರನಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸೈಕಲ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಇಂದು ಸಂಜೆ ವರದಿಯಾಗಿದೆ. ಅಂಕದಕಟ್ಟೆಯ ನಿವಾಸಿ ರಮಾನಂದ ಹೆಬ್ಬಾರ್ (55) ಅಪಘಾತದಲ್ಲಿ ಮೃತ ದುರ್ದೈವಿ. ಅಂಕದಕಟ್ಟೆಯಲ್ಲಿ ದಿನಸಿ ಅಂಗಡಿ ಹೊಂದಿದ್ದ ರಮಾನಂದ ಹೆಬ್ಬಾರ್ ಹತ್ತಿರದ ಅಂಗಡಿಯೊಂದರಿಂದ ಹಾಲಿನ ಪ್ಯಾಕೇಟ್ ಖರೀದಿಸಿ ಸೈಕಲಿನಲ್ಲಿ ಸರ್ಜನ್ ಆಸ್ಪತ್ರೆ ಬಳಿಯ ಡಿವೈಡರ್ ದಾಟುತ್ತಿದ್ದ ವೇಳೆ ಕೋಟೇಶ್ವರ ಕಡೆಯಿಂದ ಬಂದ ರಿಕ್ಷಾ ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ರಭಸಕ್ಕೆ ತಲೆಗೆ ಗಂಭೀರ ಏಟು ತಗಲಿದ್ದ ಅವರನ್ನುಕೂಡಲೇ ಆಸ್ಪತ್ರೆಗೆ ಸಾಗಿಸಿದರಾದರೂ ಅಷ್ಟರಲ್ಲೇ ಅವರು ಮೃತಪಟ್ಟಿದ್ದರು. ಸ್ಥಳಕ್ಕೆ ಕುಂದಾಪುರ ಡಿವೈಎಸ್ಪಿ ಮಂಜುನಾಥ ಶೆಟ್ಟಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಟ: ಕಸಾಯಿಖಾನೆಗೆ ಸಾಗಿಸಲು ಪ್ರಯತ್ನಿಸುತ್ತಿದ್ದ ಮೂರು ಜಾನುವಾರುಗಳನ್ನು ರಕ್ಷಿಸಿ, ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದ ಪ್ರಕರಣ ಬೆಳಗಿನ ಜಾವ ಶಿರಿಯಾರ ಸಮೀಪ ನೈಲಾಡಿಯಲ್ಲಿ ನಡೆದಿದೆ. ಇಲ್ಲಿನ ಚಿಕ್ಕು ದೇವಸ್ಥಾನಕ್ಕೆ ಹೋಗುವ ಕ್ರಾಸ್ ಬಳಿ ಹಾಡಿಯಲ್ಲಿ ಅಕ್ರಮವಾಗಿ ಮೂರು ಹೆಣ್ಣು ಕರುಗಳನ್ನು ಕಟ್ಟಿ ಹಾಕಿಕೊಂಡಿರುವ ಬಗ್ಗೆ ಖಚಿತ ವರ್ತಮಾನ ಪಡೆದ ಕೋಟ ಠಾಣಾಧಿಕಾರಿ ಕಬ್ಟಾಳ್ರಾಜ್ ಅವರು ತಮ್ಮ ಸಿಬಂದಿಗಳೊಂದಿಗೆ ದಾಳಿ ನಡೆಸಿದ್ದು, ಈ ಸಂದರ್ಭ ಮೂವರು ಆರೋಪಿಗಳಲ್ಲಿ ಸಂತೋಷ್ ಶೆಟ್ಟಿ ಹಾಗೂ ರಜಾಕ್ ಪರಾರಿಯಾಗಿದ್ದು ಕೃಷ್ಣ ಗಿಳಿಯಾರು ಎಂಬಾತನನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಬಜಾಜ್ ಡಿಸ್ಕವರ್ ಬೈಕ್, ವ್ಯಾಪಾರಕ್ಕೆ ಬಳಿಸಿದ 3200ರೂ ನಗದು ಹಾಗೂ 3 ಮೊಬೆ„ಲ್ ಪೋನ್ ವಶಪಡಿಸಿಕೊಳ್ಳಲಾಗಿದೆ. ರಕ್ಷಿಸಿದ ಗೋವುಗಳನ್ನು ಗೋಶಾಲೆ ಹಸ್ತಾಂತರಿಸಲಾಗಿದ್ದು, ಕೋಟ ಠಾಣಾಧಿಕಾರಿಗಳ ಈ ಯಶಸ್ವಿ ಕಾರ್ಯಾಚರಣೆಗೆ ಹಿಂದೂಜಾಗರಣಾ ವೇದಿಕೆ ಕೋಟ ಹಾಗೂ ಶಿರಿಯಾರ ಘಟಕ ಶ್ಲಾಘನೆ ವ್ಯಕ್ತಪಡಿಸಿದೆ.
ಕುಂದಾಪುರ: ಈ ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದೆ. ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಮಾಹಿತಿ, ತಿಳುವಳಿಕೆಗಳನ್ನು ಪಡೆದುಕೊಂಡು ಸತ್ಪ್ರಜೆಗಳಾಗಿ ಮೂಡಿಬರಬೇಕು. ಉನ್ನತ ವಿದ್ಯಾಭ್ಯಾಸಕ್ಕೆ ಪೂರಕವಾಗಿ ಸೂಕ್ತ ತರಬೇತಿಗಳನ್ನು ಪಡೆದುಕೊಳ್ಳುವ ಮೂಲಕ ಮುಂದಿನ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬಾಲ್ಯದಿಂದಲೇ ಸಿದ್ಧರಾಗಬೇಕು. ಆ ನೆಲೆಯಲ್ಲಿ ಇಂಥಹ ತರಬೇತಿಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕುಂದಾಪುರ ತಾ.ಪಂ.ಅಧ್ಯಕ್ಷರಾದ ಭಾಸ್ಕರ ಬಿಲ್ಲವ ಹೇಳಿದರು. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಕುಂದಾಪುರ ತಾಲೂಕು ಶಾಖೆಯ ನೇತೃತ್ವದಲ್ಲಿ ಸಂಘದ ನೇತಾಜಿ ಸಭಾಭವನದಲ್ಲಿ ನವೋದಯ ವಿದ್ಯಾರ್ಥಿಗಳ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭಾರತ ದೇಶದ ಸಂಸ್ಕೃತಿ-ಸಂಸ್ಕಾರ ಶ್ರೇಷ್ಠವಾದುದು. ಈ ದೇಶವನ್ನು ಸಂಪದ್ಭರಿತಗೊಳಿಸಲು ಆನೇಕ ಮಹನೀಯರು ಅಮೂಲ್ಯ ಕೊಡುಗೆಗಳನ್ನು ನೀಡಿದ್ದಾರೆ. ದೇಶಕ್ಕಾಗಿ ಪ್ರಾಣದ ಹಂಗನ್ನೇ ತೋರೆದು ದೇಶ ಕಾಯುವ ಸೈನಿಕರು ನಮಗಿಂದು ನಿಜವಾದ ನಾಯಕರು. ದೇಶಪ್ರೇಮವನ್ನು ಬೆಳೆಸಿಕೊಳ್ಳುವ ಮೂಲಕ ದೇಶಕ್ಕೆ ನಮ್ಮಿಂದಾದ ಕೊಡುಗೆ ನೀಡಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಮುಖ್ಯ ಅತಿಥಿ ಮುಂಬಯಿ ಥಾಣೆಯ ಉದ್ಯಮಿ ರತ್ನಾಕರ ಶೆಟ್ಟಿ ಮಾತನಾಡಿ, ತಮ್ಮ ಮಕ್ಕಳಿಗೆ ನವೋದಯ…
ಬೈಂದೂರು: ಉರ್ದು ಭಾಷೆಯ ಜನಪ್ರಿಯ ಸಂಗೀತ ಪ್ರಕಾರದಲ್ಲೊಂದಾದ ಕವ್ವಾಲಿ ಹಾಡುವಿಕೆಯಲ್ಲಿ ಜಿಲ್ಲಾ ಮಟ್ಟದ ಸಮೂಹ ಗಾನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಪಡೆದ ನಾಗೂರಿನ ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ನಾಗೂರಿನಲ್ಲಿ ಜರುಗಿದ ೫ವಲಯಗಳ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಪ್ರೌಢಶಾಲಾ ವಿಭಾಗದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಾದ ಅಜಿತ್, ಅನುಷಾ ಪೈ, ವಿಜೇತಾ ಪ್ರಭು ಗಾಯನದಲ್ಲಿ, ಗೌರವ್ ಕಾಮತ್ ತಬಲಾ, ಹಾಗೂ ಅಜಿತ್ ಭಂಡಾರ್ಕಾರ್ ಹಾರ್ಮೋನಿಯಂನಲ್ಲಿದ್ದರು. ವಾದನ ಗಾಯನ ಹಾಗೂ ಅಭಿನಯದಲ್ಲಿ ಒಂದಾಗಿ ಉತ್ತಮವಾದ ಪ್ರತಿಭೆ ಪ್ರದರ್ಶಿಸಿ ಪ್ರಥಮ ಸ್ಥಾನಕ್ಕೆ ಆಯ್ಕೆಯಾಗಿದ್ದರು. ಈ ತಂಡದ ಎಲ್ಲಾ ವಿದ್ಯಾರ್ಥಿಗಳ ಮಾತೃ ಭಾಷೆ ಕೊಂಕಣಿಯಾಗಿದ್ದರೂ ಉರ್ದುವಿನಲ್ಲಿ ಸ್ಪರ್ಧಿಸಿ ಗೆದ್ದರುವುದು ವಿಶೇಷವಾಗಿದೆ. 10 ನಿಮಿಷ ಅವಧಿಯ ಈ ಸುಧೀರ್ಘ ಸ್ಪರ್ದೆಗೆ ಕವ್ವಾಲಿ ಹಾಡಿನ ಹೊಂದಾಣಿಕೆ ಅಭಿನಯ ಮತ್ತು ವಿನ್ಯಾಸವನ್ನು ಶಿಕ್ಷಕಿ ಶ್ರೀಮತಿ ವರ್ಷಾ ಆರ್ ನಾಯಕ್ ಹಾಗೂ ಶಿಕ್ಷಕ ಶ್ರೀನಿವಾಸ ಪ್ರಭು ಸಂಗೀತ ನಿರ್ದೇಶನ ನೀಡಿದ್ದರು.
ಕುಂದಾಪುರ: ಕಾರವಾರ-ಬೆಂಗಳೂರು ರೈಲು ವೇಗ ಹೆಚ್ಚಳಕ್ಕಾಗಿ ಕಾರವಾರದಿಂದ ಹಾಸನ – ಅರಸಿಕೆರೆ ಮಾರ್ಗವಾಗಿ ನೇರ ಬೆಂಗಳೂರಿಗೆ ಮತ್ತೊಂದು ರೈಲು ಆರಂಭಿಸಲು ಆಗ್ರಹಿಸಿ, ರದ್ದು ಮಾಡಿರುವ ಇಂಟರ್ಸಿಟಿ ರೈಲನ್ನು ಓಡಿಸಲು, ರೈಲು ಸೌಲಭ್ಯಗಳಿಂದ ವಂಚಿತರಾಗಿರುವ ಉಡುಪಿ ಜನತೆಗೆ ನ್ಯಾಯ ಒದಗಿಸಬೇಕೆಂದು ಸಿಪಿಎಂ ಪಕ್ಷ ಕಾರವಾರ-ಬೆಂಗಳೂರಿನ ರೈಲಿನಲ್ಲಿ ಪ್ರಯಾಣಿಕರಿಂದ ಕುಂದಾಪುರದಿಂದ ಚಲಿಸುವ ರೈಲಿನಲ್ಲಿ ಸಹಿ ಸಂಗ್ರಹ ಮಾಡಲಾಯಿತು. ಸುಮಾರು ೩೦೦ ಜನರು ಸಹಿ ಸಂಗ್ರಹದಲ್ಲಿ ಪಾಲ್ಗೊಂಡು ತಮ್ಮ ಆಕ್ರೋಶ ಹೊರಗೆಡಹವಿದರು. ಸಹಿ ಸಂಗ್ರಹ ಚಳುವಳಿಯ ನೇತೃತ್ವವನ್ನು ಕುಂದಾಪುರ ವಲಯ ಕಾರ್ಯದರ್ಶಿ ಹೆಚ್. ನರಸಿಂಹ, ಬೈಂದೂರು ವಲಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಬಲ್ಕೀಸ್, ರಾಜು ದೇವಾಡಿಗ, ಗಣೇಶ್ ಬೈಂದೂರು, ಪ್ರಕಾಶ ಕೋಣಿ, ಲಕ್ಷ್ಮಣ ಡಿ. ಶ್ರೀಧರ ಉಪ್ಪುಂದ, ವೆಂಕಟೇಶ ಕೋಣಿ ಉಪಸ್ಥಿತರಿದ್ದರು.
ಗಂಗೊಳ್ಳಿ: ಹೃದಯರೋಗ, ಕ್ಯಾನ್ಸರ್, ನರರೋಗ, ಮೂತ್ರಪಿಂಡ ಖಾಯಿಲೆ, ನವಜಾತ ಶಿಶುಗಳ ಶಸ್ತ್ರಚಿಕಿತ್ಸೆ, ಸುಟ್ಟಗಾಯ ಮೊದಲಾದವುಗಳಿಗೆ ರಾಜ್ಯ ಸರಕಾರ ವಾಜಪೇಯಿ ಆರೋಗ್ಯಶ್ರೀ ಯೋಜನೆಯಡಿ ಬಿಪಿಎಲ್ ಕಾರ್ಡ್ ಹೊಂದಿದ ರೋಗಿಗಳಿಗೆ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ನ ಉಡುಪಿ ಜಿಲ್ಲಾ ವ್ಯವಸ್ಥಾಪಕ ಸಚ್ಚಿದಾನಂದ ಹೇಳಿದರು. ಅವರು ಮೇಲ್ಗಂಗೊಳ್ಳಿಯ ಅಂಬೇಡ್ಕರ್ ಭನದ ವಠಾರದಲ್ಲಿ ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಬೆಂಗಳೂರು, ಆದರ್ಶ ಆಸ್ಪತ್ರೆ ಉಡುಪಿ ಇವರ ಆಶ್ರಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಯುವಕ ಮಂಡಲ ಮೇಲ್ಗಂಗೊಳ್ಳಿ, ಅಮೃತಾ ಯುವತಿ ಮಂಡಲ ಹಾಗೂ ಅರ್ಚನಾ ಯುವತಿ ಮಂಡಲ ಇವರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು. ಶಾಲಾ ಮಕ್ಕಳಿಗೂ ರಾಜ್ಯ ಸರಕಾರ ಉಚಿತ ಚಿಕಿತ್ಸೆ ನೀಡುವ ಯೋಜನೆ ಜಾರಿಗೊಳಿಸಿದ್ದು, ಇದೀಗ ಮುಖ್ಯಮಂತ್ರಿ ಸಾಂತ್ವನ ಯೋಜನೆಯ ಮೂಲಕ ಇನ್ನಷ್ಟು ಸೌಲಭ್ಯ ನೀಡಲು ಸರಕಾರ ಮುಂದಾಗಿದೆ. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೇಷ್ಮಾ…
ಕುಂದಾಪುರ: ವಂಡ್ಸೆ ತಿರುಮಲ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವಂಡ್ಸೆ ಒಕ್ಕೊಟದ ಸವಿನಯ ಸ್ವ-ಸಹಾಯ ಸಂಘ 10ನೇ ವರ್ಷದ ವಾರ್ಷಿಕೋತ್ಸವ ಇತ್ತೀಚೆಗೆ ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ತಿರುಮಲ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಜಿ. ಶ್ರೀಧರ ಶೆಟ್ಟಿ ಅವರು ಮಾತನಾಡಿ, 2005ರಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವಂಡ್ಸೆಗೆ ಕಾಲಿಟ್ಟಂದಿನಿಂದ ವಂಡ್ಸೆಯಲ್ಲಿ ಬದಲಾವಣೆ ಆರಂಭವಾಗಿದೆ. ಯೋಜನೆಯಿಂದ ಜನಸೇವಾ ಮನೋಭಾವನೆ, ಧಾರ್ಮಿಕ ಪ್ರಜ್ಞೆ ಜಾಗೃತವಾಗಿದೆ. ಆರ್ಥಿಕ ಪ್ರಗತಿ, ಸಮಯಪ್ರಜ್ಞೆ ಮೂಡಿದೆ ಎಂದರು. ಸಭೆಯ ಅಧ್ಯಕ್ಷತೆಯನ್ನು ವಂಡ್ಸೆ ಒಕ್ಕೂಟದ ಅಧ್ಯಕ್ಷೆ ಜಯಂತಿ ಪಿ.ಶೆಟ್ಟಿ ವಹಿಸಿದ್ದರು. ತಿರುಮಲ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಶ್ವರರಾದ ವಿ.ಕೆ.ಶಿವರಾಮ ಶೆಟ್ಟಿ , ತಾಲೂಕು ಜನ ಜಾಗೃತಿ ಸಮಿತಿ ಸದಸ್ಯರಾದ ತ್ಯಾಂಪಣ್ಣ ಶೆಟ್ಟಿ, ಅರ್ಚಕರಾದ ಗೋಪಾಲಕೃಷ್ಣ ಉಪಾಧ್ಯಾಯ, ರಾಜಶೇಖರ ಉಪಾಧ್ಯಾಯ, ವಂಡ್ಸೆ ಸಿ.ಎ. ಬ್ಯಾಂಕ್ ನಿರ್ದೆಶಕರಾದ ಸಂಜೀವ ಪೂಜಾರಿ, ಜಡ್ಕಲ್ ಗ್ರಾಮ ಪಂಚಾಐತ್ ಪಿ ಡಿ ಓ…
ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಕಟ್ಟಡ ಗೊಂಬೆಮನೆಯಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ನವೆಂಬರ್ ತಿಂಗಳ ಕಾರ್ಯಕ್ರಮದ ಸಂದರ್ಭದಲ್ಲಿ ಕಲಾ ಪ್ರೋತ್ಸಾಹಕ ಉಪ್ಪಿನಕುದ್ರು ವಾಸುದೇವ ಐತಾಳ್ ಮತ್ತು ಗಣೇಶ್ ಐತಾಳ್ ಅವರನ್ನು ಸನ್ಮಾನಿಸಲಾಯಿತು. ಸಾಲಿಗ್ರಾಮ ಮಕ್ಕಳ ಮೇಳದ ಸಂಚಾಲಕರಾದ ಶ್ರೀಧರ ಹಂದೆ ಮಾತನಾಡಿ 350 ವರ್ಷಗಳ ಹಿನ್ನೆಲೆಯ ಉಪ್ಪಿನಕುದ್ರು ಗೊಂಬೆಯಾಟ ಪರಂಪರೆ ಇಂದು ಆರನೇ ತಲಾಂತರದಲ್ಲಿ ನಡೆಯುತ್ತಿರುವುದೇ ಒಂದು ದಾಖಲೆ. ಇಂತಹ ಒಂದು ಅಕಾಡೆಮಿಯಲ್ಲಿ ಪರಂಪರೆಯ ಮಕ್ಕಳ ಮೇಳಕ್ಕೂ ಅವಕಾಶ ಸಿಕ್ಕಿರುವುದು ಸಂತೋಷದ ವಿಷಯ. ಸಂಪ್ರದಾಯ, ಪರಂಪರೆ ಉಳಿಸಬೇಕಾದವರು ಪ್ರೇಕ್ಷಕರು ಎಂದು ತಿಳಿಸಿದರು. ತಿಂಗಳ ಗೊಂಬೆ ಮನೆ ಅತಿಥಿಯಾಗಿ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ ಗಂಗೊಳ್ಳಿ ಭಾಗವಹಿಸಿದ್ದರು. ಗೊಂಬೆಯಾಟ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಸ್ವಾಗತಿಸಿದರು. ಶ್ರೀಧರ ಹಂದೆಯವರ ನೇತೃತ್ವದಲ್ಲಿ ಸಾಲಿಗ್ರಾಮ ಮಕ್ಕಳ ಮೇಳದವರಿಂದ ಸಂಪ್ರದಾಯದ ಚೌಕಟ್ಟಿನಲ್ಲಿ ವೀರ ವೃಷಸೇನ ಯಕ್ಷಗಾನ ಬಯಲಾಟ ಜರುಗಿತು. ಮಕ್ಕಳ ಯಕ್ಷಗಾನ ನೆರದ ಪ್ರೇಕ್ಷಕರನ್ನು ರಂಜಿಸಿತು. ನಾಗೇಶ್ ಶ್ಯಾನುಭಾಗ್ ಕಾರ್ಯಕ್ರಮ ನಿರ್ವಹಿಸಿದರು.
