Author: ಸುನಿಲ್ ಹೆಚ್. ಜಿ. ಬೈಂದೂರು

ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

ಆಳ್ವಾಸ್ ನುಡಿಸಿರಿಯ ರೂವಾರಿ ಡಾ. ಎಂ ಮೋಹನ್ ಆಳ್ವ್ ಅವರೊಂದಿಗೆ ಮಾತುಕತೆ. ಸಂದರ್ಶನ: ಶ್ರೀಗೌರಿ ಎಸ್. ಜೋಶಿ ‘ಕನ್ನಡಭಾಷೆಯನ್ನು ಬೆಳೆಸುವ, ಕನ್ನಡ ಕಟ್ಟುವ ಕಾರ್ಯಗಳನ್ನು ಕೇವಲ ಸರಕಾರ, ಅಕಾಡೆಮಿಗಳೇ ಏಕೆ ಮಾಡಬೇಕು?ಕನ್ನಡ ಮನಸ್ಸುಗಳನ್ನು ಕಟ್ಟುವ ಕೈಂಕರ್ಯ ಒಬ್ಬ ಶ್ರೀಸಾಮಾನ್ಯನಿಂದ ಏಕೆ ಆಗಬಾರದು?’ ಎಂಬ ಆಶಯದೊಂದಿಗೆ ಆರಂಭವಾದ ಕನ್ನಡದ ಹಬ್ಬ ‘ಆಳ್ವಾಸ್ ನುಡಿಸಿರಿ’. ಈ ಕನ್ನಡ ಉತ್ಸವದ ರೂವಾರಿ ‘ಸಂಸ್ಕೃತಿಯ ಹರಿಕಾರ’ ಎಂದೇ ಖ್ಯಾತರಾದ ಡಾ.ಎಂ. ಮೋಹನ್ ಆಳ್ವರು. ಪ್ರಸ್ತುತ ಕಾಲಘಟ್ಟದಲ್ಲಿ ಅವಶ್ಯಕತೆಗಳಿಗೆ ತಕ್ಕಂತೆ ಹೊಸತನಗಳಿಗೆ ಸ್ಪಂದಿಸುವುದು ಅಗತ್ಯವೆಂದು ಹೇಳುವ ಡಾ.ಆಳ್ವರು ‘ಕರ್ನಾಟಕ:ಹೊಸತನದ ಹುಡುಕಾಟ’ ಎಂಬ ಮುಖ್ಯ ಪರಿಕಲ್ಪನೆಯಡಿಯಲ್ಲಿ ಈ ಸಲದ ನುಡಿಸಿರಿಯನ್ನು ಆಯೋಜಿಸಿದ್ದಾರೆ. ಹೊಸತನ ಎಂದರೇನು, ಹೊಸತನದಡಿಯಲ್ಲಿ ನುಡಿಸಿರಿಯ ಆಯಾಮಗಳೇನು ಎಂಬುದರ ಕುರಿತು ಅವರು ತಮ್ಮ ವಿಚಾರಗಳನ್ನು ವ್ಯಕ್ತಪಡಿಸಿದ್ದು ಹೀಗೆ….. 1. ‘ಆಳ್ವಾಸ್ ನುಡಿಸಿರಿ’ ಪ್ರತಿಸಲವೂ ‘ಕನ್ನಡ ಮನಸ್ಸು’ ಎಂಬ ಮುಖ್ಯ ಪರಿಕಲ್ಪನೆಯಡಿಯಲ್ಲಿ ನಡೆಯುತ್ತಿತ್ತು.ಆದರೆ ಈ ಸಲದ ಕೇಂದ್ರ ವಿಷಯವನ್ನು ‘ಕರ್ನಾಟಕ: ಹೊಸತನದ ಹುಡುಕಾಟ’ ಎಂದು ಬದಲಾಯಿಸಿದ್ದೀರಿ. ಈ ಬದಲಾವಣೆಯ ಹಿನ್ನೆಲೆಯೇನು? 12…

Read More

ಬೈಂದೂರು: ಇಂದಿನ ಸೋಲಿನ ಬಗ್ಗೆ ಆತ್ಮ ವಿಮರ್ಶೆ ಮಾಡಿ ಮುಂದಿನ ದಿನಗಳಲ್ಲಿ ಗೆಲುವಿಗಾಗಿ ಶ್ರಮಿಸಬೇಕು. ನಮ್ಮಲ್ಲಿರುವ ಪ್ರತಿಭೆಯನ್ನು ಉಜ್ವಲಗೊಳಿಸಲು ಸರಿಯಾಗಿ ವಿವೇಚಿಸಿ ನ್ಯಾಯವಾದ ರಹದಾರಿಯಲ್ಲಿ ಧೈರ್ಯದಿಂದ ಮುಂದುವರಿದಾಗ ಸಾಧನೆಗೆ ಯಾವ ಅಡ್ಡಿಯೂ ಆಗಲಾರದು ಎಂದು ಆರ್.ಕೆ. ಸಂಜೀವರಾವ್ ಜನ್ಮಶತಾಬ್ದಿ ಆಚರಣಾ ಸಮಿತಿಯ ಗೌರವಾಧ್ಯಕ್ಷ ಬಸ್ರೂರು ಅಪ್ಪಣ್ಣ ಹೆಗ್ಡೆ ಹೇಳಿದರು. ನಾಗೂರು ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆರ್.ಕೆ. ಸಂಜೀವರಾವ್ ಜನ್ಮಶತಾಬ್ದಿ ಆಚರಣಾ ಸಮಿತಿ ಸಹಯೋಗದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಗುರಿಯಿಲ್ಲದಿದ್ದರೆ. ಏನನ್ನೂ ಸಾಧಿಲಾಗದು. ಸುಸ್ಥಿರತೆ ನೆಮ್ಮದಿಯಿಂದ ನಮ್ಮ ಕರ್ತವ್ಯಗಳನ್ನು ಅರಿತು ಭೌತಿಕ ಮತ್ತು ಮಾನಸಿಕವಾಗಿ ಮೊದಲು ಸಧೃಡರಾಗಬೇಕು. ಪ್ರತಿಭೆಯ ಸಾಮರ್ಥ್ಯ ಪ್ರದರ್ಶಿಸಲು ಪ್ರತಿಭಾ ಕಾರಂಜಿಗಳು ಸೂಕ್ತ ವೇದಿಕೆ ಕಲ್ಪಿಸಿಕೊಡುತ್ತಿದೆ. ಬಹುಮುಖ ಪ್ರತಿಭೆಗಳಿಗೆ ಇಲ್ಲಿ ಪೂರಕವಾದ ವ್ಯವಸ್ಥೆ ರೂಪಿಸಲಾಗಿದೆ. ಇದೂ ಕೂಡಾ ನಿಮಗೆ ಸಾಧನೆಯ ಒಂದು ಮೆಟ್ಟಿಲಾಗಿದ್ದು, ಸ್ವಂತ ಪರಿಶ್ರಮದಿಂದ ನಿಮ್ಮಲ್ಲಿರುವ ಪ್ರತಿಭೆಯನ್ನು ಅರಳಿಸಲು ಇಂತಹ ವೇದಿಕೆಗಳಲ್ಲಿ ಸಾಧ್ಯವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು…

Read More

ಕುಂದಾಪುರ: ಎಲ್ಲರ ನಡೆ ಹಾಗೂ ನುಡಿ ಬಹಳ ಅಂತರವನ್ನು ಕಾಣುತ್ತೆವೆ. ಇಂದು ಯಾರೂ ಮಾತನ್ನು ಕೇಳಲು ಸಿದ್ದರಿಲ್ಲ. ಯಾರು ನಡೆದಂತೆ ನುಡಿಯುತ್ತಾರೋ ಅವರ ಮಾತಿಗೆ ಎಂದಿಗೂ ಬೆಲೆಯಿದೆ. ನಮ್ಮ ಮಾತು, ನಗು, ನಡತೆ ಎಲ್ಲವೂ ಬೇರೆಯವರಿಗೆ ನೋವಾಗದಂತಿರಬೇಕು ಎಂದು ಶಿವಮೊಗ್ಗ ಕಸ್ತೂರ್ಬಾ ಬಾಲಿಕಾ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ನಟೇಶ್ ಹೇಳಿದರು. ಅವರು ಇಲ್ಲಿನ ರೋಟರಿ ಲಕ್ಷ್ಮೀನರಸಿಂಹ ಕಲಾಮಂದಿರದಲ್ಲಿ ಕನ್ನಡ ವೇದಿಕೆಯ ಕುಂದಾಪುರದ ಡಿಂಡಿಮ ಮೂರನೇ ಭಾನುವಾರದ ಕಾರ್ಯಕ್ರಮದ ಮಾತಿನರಮನೆಯಲ್ಲಿ ಕಗ್ಗ – ಕನ್ನಡದಲ್ಲಿ ಕಟ್ಟಿದ ಜೀವನ ದರ್ಶನ ಎಂಬ ವಿಷಯದ ಕುರಿತು ಮಾತನಾಡಿದರು.  ಡಿವಿಜಿಯವರ ಕಗ್ಗದಲ್ಲಿ ನಮ್ಮೆಲ್ಲರ ಬದುಕನ್ನು ಸುಂದರವಾಗಿ ಚಿತ್ರಿಸಿದ್ದಾರೆ. ಜೀವನದಲ್ಲಿ ಎದುರಾಗುವ ಪ್ರತಿ ಸಮಸ್ಯೆಗಳನ್ನು ಹಾಗೂ ಅದನ್ನು ಎದುರಿಸುವ ರೀತಿಯನ್ನು ಎಂದೀ ಡಿವಿಜಿ ತೆರೆದಿಟ್ಟಿದ್ದರು. ಅದು ಎಂದಿಗೂ ಪ್ರಸ್ತುತ ಎಂದವರು ಹೇಳಿದರು. ಕುಂದಾಪುರದ ಹಿರಿಯ ಛಾಯಾಚಿತ್ರಕಾರ ಪುಂಡಲೀಕ ಶ್ಯಾನುಭೋಗ್ ಅವರಿಗೆ ನುಡಿ ಗೌರವ ಸಮರ್ಪಿಸಲಾಯಿತು. ಕನ್ನಡ ವೇದಿಕೆಯ ಅಧ್ಯಕ್ಷ ಸುಬ್ರಮಣ್ಯ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸುಮನಾ ಎನ್.…

Read More

ಕೊಲ್ಲೂರು: ಬಹು ಭಾಷಾನಟ ಕನ್ನಡದ ಅರ್ಜುನ್ ಸರ್ಜಾ ಇಂದು ಕುಟುಂಬ ಸಮೇತರಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಅರ್ಜುನ್ ಸರ್ಜಾ ತಮ್ಮ ಪತ್ನಿ ನಿವೇದಿತಾ ಅರ್ಜುನ್, ಹಿರಿಯ ಪುತ್ರಿ ಐಶ್ವರ್ಯ ಅತ್ತೆ ಗೀತಾರೊಂದಿಗೆ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದೇವಸ್ಥಾನದಲ್ಲಿಯೇ ಅನ್ನಪ್ರಸಾದವನ್ನು ಸ್ವೀಕರಿಸಿದರು. ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕ್ರಷ್ಣಪ್ರಸಾದ ಅಡ್ಯಂತಾಯ, ಮುಖ್ಯಕಾರ್ಯನಿರ್ವಹಣಾಧಿಕಾರಿ ಟಿ.ಆರ್. ಉಮಾ ಮೊದಲಾದವರು ಉಪಸ್ಥಿತರಿದ್ದು ಅರ್ಜುನ್ ಸರ್ಜಾ ದಂಪತಿಗಳನ್ನು ಹಾಗೂ ಕುಟುಂಬಿಕರನ್ನು ಬರಮಾಡಿಕೊಂಡರು. ಬಾಲನಟನಾಗಿ ಕನ್ನಡದ ಚಿತ್ರರಂಗ ಪ್ರವೇಶಿಸಿದ ಅರ್ಜುನ್ ಸರ್ಜಾ ಅವರಿಗೆ ಮಂದೆ ತಮಿಳು ಚಿತ್ರರಂಗ ಅವಕಾಶದ ಬಾಗಿಲು ತೆರೆದಿತ್ತು. ಶಿವರಾಜಕುಮಾರ್ ಅವರೊಂದಿಗೆ ನಟಿಸಿದ್ದ ನಿವೇದಿತಾ ಮದುವೆಯ ಬಳಿಕ ನಟನೆಯಿಂದ ದೂರವೇ ಉಳಿದಿದ್ದರು. ಈಗ ಇವರ ಪುತ್ರಿ ಐಶ್ವರ್ಯ ಇತ್ತಿಚಿಗೆ ಕಾಲಿವುಡ್ ಮೂಲಕ ಸಿನೆಮಾ ಜಗತ್ತಿಗೆ ಪ್ರವೇಶಿಸಿದ್ದಳು.

Read More

ಕುಂದಾಪುರ: ಪಕ್ಷ ಬಲವರ್ಧನೆಗೆ ಕಾರ್ಯಕರ್ತರ ಸಹಕಾರ ಅತೀ ಅಗತ್ಯ. ತಳಮಟ್ಟದಲ್ಲಿ ಕಾರ್ಯಕರ್ತರು ದುಡಿದಾಗ ಪಕ್ಷವನ್ನು ಗೆಲ್ಲಿಸಬಹುದು ಎಂದು ಶಾಸಕ ಗೋಪಾಲ ಪೂಜಾರಿ ಅವರು ಹೇಳಿದರು. ಆಲೂರು ರಾಮ ಮಂದಿರ ಸಭಾಂಗಣದಲ್ಲಿ ಸೋಮವಾರ ಸಂಜೆ ಜರಗಿದ ಪಂಚಾಯತ್‌ ವ್ಯಾಪ್ತಿಯ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮೀಣ ಕಾಂಗ್ರೆಸ್‌ ಅಧ್ಯಕ್ಷ ರವಿ ಶೆಟ್ಟಿ ಹಳ್ಳಿ, ಗ್ರಾಮ ಪಂಚಾಯತ್‌ ಸದಸ್ಯರಾದ ಆನಂದ ಗಾಣಿಗ, ಸುರೇಶ್‌ ದೇವಾಡಿಗ, ಬಾಬು ಗೌಡ ಮೊದಲಾದವರು ಉಪಸ್ಥಿತರಿದ್ದರು. ಗ್ರಾಮೀಣ ಕಾಂಗ್ರೆಸ್‌ ಘಟಕ, ಯುವ ಕಾಂಗ್ರೆಸ್‌, ಮಹಿಳಾ ಕಾಂಗ್ರೆಸ್‌, ವಿದ್ಯಾರ್ಥಿ ಕಾಂಗ್ರೆಸ್‌, ಎಸ್‌.ಸಿ./ಎಸ್‌.ಟಿ. ಘಟಕ, ಕಿಸಾನ್‌ ಮೋರ್ಚಾ ಹಾಗೂ ಪಂಚಾಯತ್‌ ವ್ಯಾಪ್ತಿಯ 7 ಬೂತ್‌ಗಳ ನೂತನ ಅಧ್ಯಕ್ಷರನ್ನು ಈ ಸಂದರ್ಭದಲ್ಲಿ ಆಯ್ಕೆ ಮಾಡಲಾಯಿತು. ತಾಲೂಕು ಪಂಚಾಯತ್‌ ಸದಸ್ಯ ಎಚ್‌. ಮಂಜಯ್ಯ ಶೆಟ್ಟಿ ಅವರು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

Read More

ಕುಂದಾಪುರ: ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು, ಭವ್ಯ ಭಾರತವನ್ನು ರೂಪಿಸುವಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿ ಶ್ರಮ ವಹಿಸಬೇಕು. ಪ್ರತಿಯೊಬ್ಬನು ಧನಾತ್ಮಕವಾಗಿ ಚಿಂತನೆಯನ್ನು ಮೈಗೂಡಿಸಿಕೊಂಡು ನಮ್ಮ ಸಂಸ್ಕಾರ, ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಕೆಲಸವನ್ನು ಮಾಡಬೇಕಾಗಿದೆ ಎಂದು ಕುಂದಾಪುರ ತಾ.ಪಂ. ಅಧ್ಯಕ್ಷ ಭಾಸ್ಕರ ಬಿಲ್ಲವ ಹೇಳಿದರು. ಅವರು ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರ ಕುಂದಾಪುರ, ತಾ.ಪಂ. ಕುಂದಾಪುರ, ಸಾರ್ವಜನಿಕ ಶಿಕ್ಷಣ ಇಲಾಖೆ ಕುಂದಾಪುರ, ಸಾರ್ವಜನಿಕ ಶಿಕ್ಷಣ ಇಲಾಖೆ ಬೈಂದೂರು ಮತ್ತು ರೋಟರಿ ಕ್ಲಬ್‌ ಮಿಡ್‌ಟೌನ್‌ ಕುಂದಾಪುರ, ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರ ಉಡುಪಿ, ತಾಲೂಕು ಎಸ್‌. ಡಿ.ಎಂ.ಸಿ. ಸಂಚಲನಾ ಸಮಿತಿ ಕುಂದಾಪುರ ಇವರ ಸಹಯೋಗದಲ್ಲಿ ಸೋಮವಾರ ಕುಂದಾಪುರ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ಜರಗಿದ ತಾಲೂಕು ಮಟ್ಟದ ಮಕ್ಕಳ ಸಂಸತ್‌ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕುಂದಾಪುರ ತಾ| ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷ ಬಾಬು ಪೈ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷ ಗೌರಿ ದೇವಾಡಿಗ, ತಾ.ಪಂ. ಶಿಕ್ಷಣ ಮತ್ತು ಸ್ಥಾಯಿ…

Read More

 ಕುಂದಾಪ್ರ ಡಾಟ್  ಕಾಂ ಸುದ್ದಿ ಕುಂದಾಪುರ: ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರ್ಗೋಳಿ ಗೋವಿಂದ ಶೇರುಗಾರ್ ಅವರಿಗೆ ಶ್ರೀ ರಾಮಕ್ಷತ್ರೀಯ ಗಣೇಶೋತ್ಸವ ಸುವರ್ಣ ಸಮಿತಿ ಹಾಗೂ ಇತರ ಸಮಾಜ ಸೇವ ಸಂಘಟನೆಗಳು ಜತೆಯಾಗಿ ಇಲ್ಲಿನ ಬೋರ್ಡ್ ಹೈಸ್ಕೂಲಿನ ಕಲಾ ಮಂದಿರದಲ್ಲಿ ಪೌರ ಸನ್ಮಾನ ನೀಡಿ ಗೌರವಿಸಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಕುಂದಾಪುರದ ತಹಸೀಲ್ದಾರ್ ಗಾಯತ್ರಿ ನಾಯಕ್ ಮಾತನಾಡಿ, ಆಧುನೀಕತೆಯ ಬದಲಾವಣೆಯನ್ನು ಕಾಣುತ್ತಿರುವ ಕರಾವಳಿ ಜಿಲ್ಲೆಗಳಲ್ಲಿ ನಮ್ಮ ಸಾಂಸ್ಕೃತಿಕ ಸೊಬಗಿನ ರಾಯಭಾರಿಯಂತಿರುವ ಯಕ್ಷಗಾನ ಕಲೆಯ ಬಗ್ಗೆ ಆಸಕ್ತಿ ಉಳಿದುಕೊಂಡಿರುವ ಕಾರಣದಿಂದಾಗಿ ಈ ಭಾಗದ ಯಕ್ಷಗಾನ ಕಲಾವಿದರುಗಳು ಕಲಾ ಶೋತ್ರುಗಳ ಮನದಲ್ಲಿ ಶಾಶ್ವತವಾದ ಸ್ಥಾನವನ್ನು ಪಡೆದುಕೊಂಡಿದ್ದಾರೆ ಎಂದು ಹೇಳಿದರು. ನಮ್ಮ ಪರಂಪರೆಯನ್ನು ಮುಂದಿನ ತಲೆಮಾರಿಗೆ ಉಳಿಸಿ-ಬೆಳೆಸುತ್ತಿರುವ ಯಕ್ಷಗಾನ ಕಲಾವಿದರ ಪರಿಶ್ರಮಕ್ಕೆ ಪದ್ಮಭೂಷಣ, ರಾಜ್ಯೋತ್ಸವ ಮುಂತಾದ ಪ್ರಶಸ್ತಿಗಳನ್ನು ನೀಡುವ ಮೂಲಕ ಈ ಪ್ರಶಸ್ತಿಗಳ ಹಿರಿಮೆ ಹೆಚ್ಚಿದೆ. ಪ್ರಶಸ್ತಿಯನ್ನು ಹುಡುಕಿಕೊಂಡು ಹೋಗುವ ಈ ಕಾಲಘಟ್ಟದಲ್ಲಿ ಅರ್ಹರಿಗೆ ಪ್ರಶಸ್ತಿ ಬರುವುದರಿಂದ ಪ್ರಶಸ್ತಿಯ ಗೌರವ ಹೆಚ್ಚಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.…

Read More

ಬೈಂದೂರು: ಮಹಿಳೆಯೊಂದಿಗೆ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದಾನೆಂದು ಆರೋಪಿಸಿ ಪೋಲೀಸ್ ಪೇದೆಯನ್ನು ಸಾರ್ವಜನಿಕರೇ ಹಿಡಿದು ಥಳಿಸಿ ಪೋಲೀಸರಿಗೊಪ್ಪಿಸಿದ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಬಳಿ ನಡೆದಿದೆ. ಬೈಂದೂರು ಪೋಲೀಸ್ ಠಾಣೆಯ ಪೇದೆ ಕಿರಣ ಬಂಧಿತ ಆರೋಪಿ. ಬೈಂದೂರು ಪೋಲೀಸ್ ಠಾಣೆಯಲ್ಲಿ ಸಮನ್ಸ್ ನೀಡುವ ಕರ್ತವ್ಯ ನಿರ್ವಹಿಸುತ್ತಿದ್ದ, ಪೇದೆ ಕಿರಣ ಎಂಬುವವನಿಗೆ ಕಳೆದ ಕೆಲವು ತಿಂಗಳ ಹಿಂದೆ ಯಾವುದೋ ಒಂದು ವ್ಯಾಜ್ಯ ಸಂಬಂಧಿ ಸಮನ್ಸ್ ನೀಡುವ ವಿಚಾರದಲ್ಲಿ ಶಿರೂರು ಹಡವಿನಕೋಣೆ ಎಂಬಲ್ಲಿನ ಮಹಿಳೆಯೊಂದಿಗೆ ಪರಿಚಯವಾಗಿದೆ. ಈ ಪರಿಚಯ ಸ್ನೇಹಕ್ಕೆ ತಿರುಗಿ ಆಗಾಗ ಆಕೆಯ ಮನೆಗೆ ಬರುತ್ತಿದ್ದಾನೆ ಎನ್ನಲಾಗುತ್ತಿದೆ. ಇದು ಸಾರ್ವಜನಿಕರ ಅನುಮಾನಕ್ಕೆ ಕಾರಣವಾಗಿತ್ತು, ಸೋಮವಾರ ಬೆಳಗ್ಗೆ ಗಂಟೆ 11 ರ ಸುಮಾರಿಗೆ ಪೇದೆ ಮಹಿಳೆಯ ಮನೆಗೆ ಪ್ರವೇಶಿಸಿದ್ದನ್ನು ಗಮನಿಸಿದ ಸಾರ್ವಜನಿಕರು ನೂರಾರು ಸಂಖ್ಯೆಯಲ್ಲಿ ಸೇರಿ ಪೇದೆ ಮಹಿಳೆಯೊಂದಿಗೆ ಮನೆಯ ಒಳಗೆ ಇರುವಾಗಲೇ ಹೊರಗಿನಿಂದ ಬಾಗಿಲಿಗೆ ಚೀಲಕ ಹಾಕಿದ್ದರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದರು. ಸ್ಥಳಕ್ಕೆ ಠಾಣಾಧಿಕಾರಿ ಬರುವುದರೊಳಗೆ ಅದೇಗೋ ಮನೆಯಿಂದ ಹೊರಬಂದ ಕಿರಣ್ ಗೆ ಸಾರ್ವಜನಿಕರೇ…

Read More

[quote font_size=”14″ color=”#ff1000″ bgcolor=”#ffffff” bcolor=”#f9e900″ arrow=”yes” align=”right”]ನವೆಂಬರ್ 1 ರ ಭಾನುವಾರದ ಕಾರ್ಯಕ್ರಮ: ಸಂಜೆ 4.00 ರಿಂದ ಪುರಮೆವಣಿಗೆ ನಂತರ ಬಸ್ರೂರು ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ರಸೋಲ್ಲಾಸದ ಬಳಿಕ ಸಂಜೆ 5.00 ಕ್ಕೆ ಕನ್ನಡ ತಂತ್ರಾಂಶ ಜನಕರಾದ ನಾಡೋಜ ಶ್ರೀ ಕೆ.ಪಿ. ರಾವ್ ರವರಿಂದ ಡಿಂಡಿಮ ಉದ್ಘಾಟನೆಗೊಳ್ಳಲಿದೆ. ಪ್ರೋ. ವರದೇಶ ಹಿರೇಗಂಗೆ ಮತ್ತು ಡಾ. ಪಾರ್ವತಿ ಐತಾಳ್ ಇವರ ಮಾತಿನರಮನೆ. ಜನಾನುರಾಗಿ ಬಸ್ ಚಾಲಕರಾದ ಶ್ರೀ ಎಚ್. ಹಂಝಾ ವಕ್ವಾಡಿ ಇವರಿಗೆ ಕನ್ನಡದ ನುಡಿ ಗೌರವ. ನಾಟ್ಯ ನಿಲಯಂ ಮಂಜೇಶ್ವರ ಕಾಸರಗೋಡು ಇವರ ನಾಟ್ಯೋಲ್ಲಾಸ ಕಾರ್ಯಕ್ರಮದ ಮೂಲಕ ಮೊದಲ ರವಿವಾರದ ಕಾರ್ಯಕ್ರಮ ಮುಕ್ತಾಯಗೊಳ್ಳಲಿದೆ[/quote] ಕುಂದಾಪುರ: ವರ್ಷವಿಡೀ ಕನ್ನಡದ ಕಂಪನ್ನು ಪಸರಿಸುವ ಕಾರ್ಯಗಳ ನಡುವೆ, ಕನ್ನಡ ಮಾಸ ನವೆಂಬರ್ ತಿಂಗಳು ಪೂರ್ತಿ ಕನ್ನಡಿಗರ ಕರತಾಡನದ ಸದ್ದು ಕುಂದಾಪುರವೆಂಬ ಕಡುಕನ್ನಡದ ಪಟ್ಟಣದಲ್ಲಿ ಸ್ಥಾಯಿಯಾಗಿ ಉಳಿಯುವಂತೆ ಮಾಡಲು ಕುಂದಾಪುರದ ಕನ್ನಡ ವೇದಿಕೆ ಸಜ್ಜಾಗಿ ನಿಂತಿದೆ. `ಡಿಂಡಿಮ’ ಎಂಬ ಶಿರೋನಾಮೆಯಲ್ಲಿ…

Read More

ಕುಂದಾಪುರ: ಬಡಗುತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ, ಸ್ತ್ರೀಪಾತ್ರಗಳ ಮೂಲಕ ತನ್ನ ಕಲಾವರ್ಚಸ್ಸನ್ನು ಅಸಂಖ್ಯ ಯಕ್ಷಪ್ರೀಯರಿಗೆ ಉಣಬಡಿಸಿದ ಕಲಾವಿದ ಕುಂದಾಪುರ ತಾಲೂಕಿನ ಮಾರ್ಗೋಳಿ ಗೋವಿಂದ ಶೇರುಗಾರ್ ಅವರಿಗೆ 2015ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಂದಿದೆ. ಮಾರ್ಗೋಳಿ ಅವರ ಬದುಕಿನ ಸುತ್ತ: ಐವತ್ತು ವರುಷಗಳ ರಂಗ ಬದುಕಿನಲ್ಲಿ ತೆಂಕು-ಬಡಗಿನುದ್ದಕ್ಕೂ ತಿರುಗಾಟ ಮಾಡಿದ ಮಾರ್ಗೋಳಿಯವರು ಬಡಗು ತಿಟ್ಟಿನ ಪ್ರಾತಿನಿಧಿಕ ಕಲಾವಿದ. ಬಡಗಿನ ಹಳೆಯ ಕ್ರಮಗಳ ಬಗ್ಗೆ ಅಧಿಕೃತ ದನಿ. ನಾಟ್ಯದಿಂದ ರಂಗಸೂಕ್ಷ್ಮದ ವರೆಗಿನ ಸಂಗತಿಗಳಿಗೆ ಈ ಕಾಲಘಟ್ಟದಲ್ಲಿ ಮಾರ್ಗೋಳಿಯವರು ಯಕ್ಷಗಾನಕ್ಕೆ ಅನಿವಾರ್ಯ. ತನ್ನ ಹದಿಮೂರನೇ ವರುಷದಿಂದ ಬಣ್ಣದ ಬದುಕು ಆರಂಭ. ಕುಂದಾಪುರದ ಬಸ್ರೂರಿನಲ್ಲಿ ನಾಲ್ಕನೇ ತರಗತಿ ತನಕ ವಿದ್ಯಾಭ್ಯಾಸ. ಬದುಕಿನ ಅನಿವಾರ್ಯತೆಯೊಂದಿಗೆ ಬೆಳೆದು, ಬಡಗುತಿಟ್ಟಿನ ಬಹುತೇಕ ಖ್ಯಾತರೊಡನೆ ಪಾತ್ರವಹಿಸಿ, ತಾನೂ ಗಟ್ಟಿಯಾಗಿ ರಂಗದ ಸಾರಸರ್ವಸ್ವವನ್ನುಂಡ ಅಪರೂಪದ ಕಲಾಗಾರಿಕೆ. ಅವರ ರಂಗ ಬದುಕಿನ ಉಚ್ಛ್ರಾಯ ಕಾಲದ ನೆನಪು ಅವರ ಇಳಿವಯಸ್ಸಿನ ಲವಲವಿಕೆಯ ಗುಟ್ಟು. ಗುರು ವೀರಭದ್ರ ನಾಯಕ್, ಕೊಕ್ಕರ್ಣೆ ಗುಂಡು ನಾಯಕ್, ನರಸಿಂಹ ಕಮ್ತಿ.. ಮೊದಲಾದ…

Read More