ಕುಂದಾಪ್ರ ಡಾಟ್ ಕಾಂ’ ಸುದ್ದಿ ಭಾರತೀಯ ದೂತಾವಾಸದಡಿಯಲ್ಲಿ ಕಾರ್ಯವಹಿಸುತ್ತಿರುವ ಭಾರತೀಯ ಸಮುದಾಯದ ಸೇವಾ ಸಂಸ್ಥೆಯ ಅಡಿಯಲ್ಲಿ (ಇಂಡಿಯನ್ ಕಮ್ಯೂನಿಟಿ ಬೇನೆವೋಲೆಂಟ್ ಫೋರಮ್-Iಅಃಈ ) ಪ್ರವಾಹ ಪೀಡಿತ ಕೇರಳ ಮತ್ತು ಕರ್ನಾಟಕದ ಕೊಡಗು ಜಿಲ್ಲೆಯ ಪ್ರವಾಹ ಪೀಡಿತರಿಗೆ ಧನ ಸಂಗ್ರಹಣೆ ಮಾಡಿ ದೇಣಿಗೆ ನೀಡುವ ಮೂಲಕ ಕತಾರ್ ದೇಶದಲ್ಲಿರುವ ಭಾರತದ ರಾಜ್ಯಗಳ ಸಂಘ ಸಂಸ್ಥೆಗಳು ಹೃದಯವಂತಿಕೆ ಮೆರೆದಿದ್ದಾರೆ. ಭಾರತೀಯ ರಾಯಭಾರಿಯಾದ ಪಿ. ಕುಮರನ್ ಅವರ ಮಾರ್ಗದರ್ಶನದಲ್ಲಿ ನಡೆದ ಈ ಅಭಿಯಾನಕ್ಕೆ ಭಾರತದ ನಾಗರೀಕರೆಲ್ಲ ಉದಾರವಾಗಿ ಸಹಾಯ ಹಸ್ತ ಚಾಚಿದ್ದಾರೆ. ಕತಾರ್ ದೇಶದಿಂದ ಆಗಮಿಸಿದ್ದ ಪ್ರತಿನಿಧಿಗಳಾದ ಐಸಿಬಿಎಫ್ ಕಾರ್ಯದರ್ಶಿ ಮಹೇಶ್ ಗೌಡ ಮುಂದಾಳತ್ವದಲ್ಲಿ ಅವರ ಜೊತೆಯಾಗಿ ಮಿಲನ್ ಅರುಣ್, ಅಧ್ಯಕ್ಷರು ಭಾರತೀಯ ಸಾಂಸ್ಕೃತಿಕ ಸಂಸ್ಥೆ, ಐಸಿಬಿಎಫ್ ಮತ್ತು ಕರ್ನಾಟಕ ಸಂಘದ ಮಾಜಿ ಅಧ್ಯಕ್ಷರೂ ಆದ ಅರವಿಂದ್ ಪಾಟೀಲ್, ಕರ್ನಾಟಕ ಸಂಘದ ಉಪಾಧ್ಯಕ್ಷರಾದ ರವಿ ಶೆಟ್ಟಿ ಹಾಗೂ ಕರ್ನಾಟಕ ಸಂಘ ಕತಾರ್ ಮಾಜಿ ಉಪಾಧ್ಯಕ್ಷರೂ ಹಾಗೂ ಕತಾರ್‌ದಲ್ಲಿ ಕನ್ನಡ ಚಲನಚಿತ್ರಗಳ ವಿತರಕರಾದ ಸುಬ್ರಮಣ್ಯ ಹೆಬ್ಬಾಗಿಲು ಇವರೆಲ್ಲರೂ…
Author: ಸುನಿಲ್ ಹೆಚ್. ಜಿ. ಬೈಂದೂರು
ಕುಂದಾಪ್ರ ಡಾಟ್ ಕಾಂ ಸುದ್ದಿ. ಪ್ರಕರಣವೊಂದರ ಇತ್ಯರ್ಥಕ್ಕಾಗಿ ಬೈಂದೂರು ಪೋಲಿಸ್ ಠಾಣೆಗೆ ತೆರಳಿದ್ದ ಶಿರೂರು ಜಿಲ್ಲಾ ಪಂಚಾಯತ್ ಸದಸ್ಯ ಸುರೇಶ್ ಬಟವಾಡಿ ಅವರನ್ನು ಠಾಣಾಧಿಕಾರಿ ಬಿ.ಎನ್. ತಿಮ್ಮೇಶ್ ಅವರು ಸಾರ್ವಜನಿಕವಾಗಿಯೇ ನಿಂದಿಸಿ ತಲ್ಲಾಟ ನಡೆಸಿದ್ದಾರೆ ಎಂದು ಆರೋಪಿಸಿ, ಘಟನೆಯನ್ನು ಖಂಡಿಸಿ ಬೈಂದೂರು ಪೋಲಿಸ್ ಠಾಣೆಯ ಎದುರು ಬೈಂದೂರು ಬಿಜೆಪಿ ಪಕ್ಷದ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಮಾತನಾಡಿ ಬೈಂದೂರು ಠಾಣಾಧಿಕಾರಿ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ಚಕಾರವೆತ್ತುತ್ತಿಲ್ಲ. ಮಟ್ಕ ದಂಧೆಗೆ ಕಡಿವಾಣ ಹಾಕುವಂತೆ ಸೂಚಿಸಿದ್ದರೂ ಅಕ್ರಮ ವ್ಯವಹಾರಗಳಿಗೆ ಹಿಂಬಾಗಿಲಿನಿಂದ ಬೆಂಬಲಿಸುತ್ತಿದ್ದಾರೆ. ಜನರ ಸಮಸ್ಯೆಯನ್ನಿಟ್ಟು ಕೊಂಡುಠಾಣೆಗೆ ಬಂದ ಜಿಲ್ಲಾ ಪಂಚಾಯತ್ ಸದಸ್ಯರ ಮೇಲೆ ಅಧಿಕಾರದ ದರ್ಪ ತೋರುವುದು ತಕ್ಕುದಲ್ಲ. ಪೊಲೀಸ್ ಠಾಣೆಯಲ್ಲಿ ಬ್ರಿಟಿಷರಕಾಲದ ವ್ಯವಸ್ಥೆ ಇನ್ನೂ ಮುಂದುವರಿಸಿಕೊಂಡು ಹೋಗುತ್ತಿರುವುದು ವಿಷಾದನೀಯ. ಠಾಣಾಧಿಕಾರಿಯ ಮೇಲೆ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದವರು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕುಂದಾಪುರ ಡಿವೈಎಸ್ಪಿ ಬಿ. ಪಿ. ದಿನೇಶ್ ಕುಮಾರ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಅ.10ರಿಂದ-19ರ ತನಕ ನಡೆಯಲಿರುವ ನವರಾತ್ರಿ ಉತ್ಸವಕ್ಕೆ ಸಕಲ ಸಿದ್ದತೆಗಳು ನಡೆದಿದೆ.ದೇವಳವು ಸಂಪೂರ್ಣ ಹೊಸ ವಿನ್ಯಾಸಗಳಿಂದ ಕೂಡಿದ ಪುಷ್ಪಾಲಂಕಾರ ಹಾಗೂ ವಿದ್ಯುದ್ದೀಪಗಳಿಂದ ಅಲಂಕೃತಗೊಂಡು ಕಂಗೊಳಿಸುತ್ತಿದೆ. ಅ.18ರ ಮಹಾನವಮಿಯಂದು ಬೆಳಿಗ್ಗೆ ಚಂಡಿಕಾಯಾಗ, ಮಧ್ಯಾಹ್ನ 01:00ಕ್ಕೆ ರಥೋತ್ಸವ ನಡೆಯಲಿದೆ. ಅ.19ರ ವಿಜಯದಶಮಿಯಂದು ಬೆಳಿಗ್ಗೆ 4ರಿಂದ ವಿದ್ಯಾರಂಭ, ಅಪರಾಹ್ನ ನವಾನ್ನಪ್ರಾಶನ ಸಂಜೆ ೫.೩೦ಕ್ಕೆ ಶ್ರೀ ಮೂಕಾಂಬಿಕೆಯ ವಿಜಯೋತ್ಸವ ಜರುಗಲಿದೆ. ಪ್ರತಿದಿನ ಆಹ್ವಾನಿತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ದೇವಳದ ಸೌಪರ್ಣಿಕಾ ಮತ್ತು ಕಾಶೀ ಸ್ನಾನ ಘಟ್ಟದಲ್ಲಿ ಹೆಚ್ಚಿನ ಬೆಳಕಿನ ವ್ಯವಸ್ಥೆ ಹಾಗೂ ಭದ್ರತಾ ಸಿಬ್ಬಂದಿಗಳ ನಿಯೋಜನೆ, ಸಭಾಭವನದಲ್ಲಿ ಹೆಚ್ಚುವರಿ ಊಟದ ವ್ಯವಸ್ಥೆ ಜೊತೆಗೆ ವಾಹನ ನಿಲುಗಡೆ ಹಾಗೂ ಸುಗಮ ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವುದು, ಸಿಸಿ ಕ್ಯಾಮೆರಾ ಮೇಲೆ ಹದ್ದಿನ ಕಣ್ಗಾವಲು ಇಂತಹ ಹಲವಾರು ವಿಚಾರಗಳ ಬಗ್ಗೆ ಈಗಾಗಲೇ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಎಂ. ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ, ಅ.07: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ತೆರವಾದ ಸ್ಥಾನಕ್ಕೆ ನಡೆಯಲಿರುವ ಉಪ ಚುನಾವಣೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಗೂ ಅನ್ವಹಿಸುವಂತೆ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ. ಬೈಂದೂರು ವಿಧಾನಸಭಾ ಕ್ಷೇತ್ರವನ್ನೊಳಗೊಂಡಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ನವೆಂಬರ್ 3ರಂದು ಮತದಾನ ನಡೆಯಲಿದೆ. ಬೈಂದೂರು ತಹಶೀಲ್ದಾರರ ಕಛೇರಿಯಲ್ಲಿ ಭಾನುವಾರ ಸಂಜೆ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಕುಂದಾಪುರ ಉಪವಿಭಾಗಾಧಿಕಾರಿ ಟಿ. ಭೂಬಾಲನ್ ಅವರು ಈ ಬಗ್ಗೆ ಮಾಹಿತಿ ನೀಡಿದರು. ಅ.9 ಮಂಗಳವಾರ ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ಅ.16ರ ಮಂಗಳವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರುತ್ತದೆ. ಅ.17ರಂದು ನಾಮಪತ್ರ ಪರಿಶೀಲನೆ, ಅ.20ರಂದು ನಾಮಪತ್ರ ಹಿಂದೆಗೆದುಕೊಳ್ಳಲು ಕೊನೆಯ ದಿನವಾಗಿದ್ದು, ನ.03ರಂದು ಮತದಾನ ನಡೆಯಲಿದೆ. ನ.06ರಂದು ಮತ ಎಣಿಕೆ, ನ.11ರಂದು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಅಲ್ಲಿಯ ತನಕ ಬೈಂದೂರು ವಿಧಾನಸಭಾ ಕ್ಷೇತ್ರವನ್ನು ಒಳಗೊಂಡಿರುವ ಉಡುಪಿ ಜಿಲ್ಲೆಯಲ್ಲಿಯೂ ನೀತಿಸಂಹಿತೆ ಜಾರಿಯಲ್ಲಿರಲಿದೆ. ಮತದಾರ ಪಟ್ಟಿ ಪರಿಷ್ಕರಣೆಗೆ 2 ದಿನ ಅವಕಾಶ: ದಿ. 01.01.2018 ಅನ್ವಯಿಸುವಂತೆ ಮತದಾನ ಮಾಡಲು ಅರ್ಹರಿರುವ ಮತದಾರರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮನುಷ್ಯನ ಆರೋಗ್ಯ ಅತಿ ಮುಖ್ಯವಾಗಿದ್ದು, ಅದನ್ನು ಕಾಪಾಡಿಕೊಳ್ಳುವುದು ಕೂಡ ಆತನ ಜವಾಬ್ದಾರಿ. ದೇಹದ ಎಲ್ಲಾ ಅಂಗಾಂಗಗಳು ಪ್ರಮುಖ್ಯತೆ ಹೊಂದಿದ್ದು, ಕಣ್ಣುಗಳು ಆ ಪೈಕಿ ಅಗ್ರಸ್ಥಾನದಲ್ಲಿದೆ. ಬದುಕಿದ್ದಾಗ ಅದರ ರಕ್ಷಣೆಯ ಜೊತೆಗೆ ಮರಣೋತ್ತರವೂ ಕಣ್ಣುಗಳು ಮತ್ತೊಬ್ಬರಿಗೆ ಬೆಳಕು ನೀಡುವಂತೆ ಮಾಡುವ ಜವಾಬ್ದಾರಿ ನಮ್ಮೆಲ್ಲರದ್ದೂ ಆಗಿದೆ ಎಂದು ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಐ. ನಾರಾಯಣ ಹೇಳಿದರು. ಅವರು ಶನಿವಾರ ತಗ್ಗರ್ಸೆ ಶ್ರೀ ಬ್ರಹ್ಮಲಿಂಗೇಶ್ವರ ಫ್ರೆಂಡ್ಸ್ ಇವರ ಆಶ್ರಯದಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಸವಿ ಸವಿ ನೆನಪು ಕಲಾ ಸಂಸ್ಥೆ ರಿ. ಕಳವಾಡಿ, ಶ್ರೀ ಮಾರಿಕಾಂಬಾ ಹವ್ಯಾಸಿ ಕಲಾ ತಂಡ ರಿ. ಕಳವಾಡಿ, ರೋಟರಿ ಕ್ಲಬ್ ಬೈಂದೂರು ಮೊದಲಾದ ಸಂಘಟನೆಗಳ ಸಹಯೋಗದೊಂದಿಗೆ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ತಗ್ಗರ್ಸೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮೊಕ್ತೇಸರ ಟಿ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ರಂಗ ಸುರಭಿಯ ಆಶ್ರಯದಲ್ಲಿ ಕರ್ನಾಟಕ ನಾಟಕ ಅಕಾಡೆಮಿಯ ಸಹಕಾರದಲ್ಲಿ ರಂಗ ನಿರ್ದೇಶಕ ಗಣೇಶ್ ಎಂ ನಿರ್ದೇಶನದಲ್ಲಿ ನಡೆಯುತ್ತಿದ್ದ ರಂಗ ತರಬೇತಿ ಶಿಬಿರದ ಸಮಾರೋಪ ಕಾರ್ಯಕ್ರಮವು ಯಳಜಿತ್‌ದ ಕಪ್ಸೆಯ ನಾರಾಯಣ ಉಡುಪರ ಮನೆಯ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾರಾಯಣ ಉಡುಪ ವಹಿಸಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಅತಿಥಿಗಳಾಗಿ ಬೈಂದೂರು ಶ್ರೀರಾಮ ಸೌಹಾರ್ದ ಕೋ-ಆಪರೇಟಿವ್‌ನ ಮುಖ್ಯಕಾರ್ಯನಿರ್ವಹಣಾಧಿಕಾರಿ ನಾಗರಾಜ ಪಿ. ಯಡ್ತರೆ ಹಾಗೂ ರಂಗ ನಿರ್ದೇಶಕ ಗಣೇಶ ಮುಂಡಾಡಿ ಇದ್ದರು. ಸುರಭಿಯ ವ್ಯವಸ್ಥಾಪಕ ಕೃಷ್ಣಮೂರ್ತಿ ಉಡುಪ ಸ್ವಾಗತಿಸಿ, ಕಾರ್ಯದರ್ಶಿ ಲಕ್ಷ್ಮಣ ಕೊರಗ ವಂದಿಸಿ ನಿರ್ದೇಶಕ ಸುಧಾಕರ ಪಿ ಬೈಂದೂರು ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ರಂಗ ಶಿಬಿರದ ಸದಸ್ಯರಿಂದ ಜ್ಞಾನಪೀಠ ಪ್ರಶಸ್ತಿ ಪುರಸ್ಕ್ರತ ಡಾ. ಕೆ. ಶಿವರಾಮ ಕಾರಂತರ ಕಾದಂಬರಿಯಾದಾರಿತ ನಾಟಕ ಚೋಮನದುಡಿಯ ಪ್ರಾಥಮಿಕ ಪ್ರದರ್ಶನ ನಡೆಯಿತು.
ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ ಬೈಂದೂರು: ಅಜ್ಜನಿಂದ ಬಳುವಳಿಯಾಗಿ ಬಂದ ಕಲೆ ಮೊಮ್ಮಕ್ಕಳ ಕೈಯಲ್ಲಿ ಇಂದಿಗೂ ಮೂರ್ತರೂಪ ಪಡೆಯುತ್ತಿದೆ. ನೂರಾರು ವರ್ಷಗಳಿಂದಲೂ ನಡೆದು ಬಂದ ಗಣಪತಿಯ ವಿಗ್ರಹ ತಯಾರಿಸುವ ಕಾಯಕ ಅಷ್ಟೆ ನಿಷ್ಠೆಯಿಂದ ಮುಂದುವರಿದಿದೆ. ದೇವರ ಕೈಂಕರ್ಯವೆಂದು ಪ್ರತಿವರ್ಷವೂ ಬೇಡಿಕೆಗನುಸಾರವಾಗಿ ಗಣಪತಿ ವಿಗ್ರಹವನ್ನು ರಚಿಸುತ್ತಾ ಸಂತೃಪ್ತಿಯನ್ನು ಕಾಣಿತ್ತಿದೆ ಬೈಂದೂರು ಬಂಕೇಶ್ವರ ಶಿಲ್ಪಿ ದಿ. ವೆಂಕಟರಮಣ ಆಚಾರರ ಕುಟುಂಬ. ಶತಮಾನದ ಹಿನ್ನೆಲೆ: ಬೈಂದೂರಿನ ಬಂಕೇಶ್ವರದಲ್ಲಿರುವ ಶಿಲ್ಪಿ ದಿ. ವೆಂಕಟರಮಣ ಆಚಾರ್ ಅವರ ಕುಟುಂಬಕ್ಕೆ ಶತಮಾನದಿಂದ ಗಣಪತಿ ವಿಗ್ರಹವನ್ನು ತಯಾರಿಸಿದ ಹಿನ್ನೆಲೆಯಿದೆ. ವೆಂಕಟರಮಣ ಅವರ ತಂದೆ ಬಂಕೇಶ್ವರದ ದಿ. ನಾಗಪ್ಪ ಆಚಾರ್ ಅವರಿಂದ ಆರಂಭಗೊಂಡ ಸೇವಾ ಕೈಂಕರ್ಯವನ್ನು ವೆಂಕಟರಮಣ ಆಚಾರ್ ಅವರು ಮುಂದುವರಿಸಿಕೊಂಡು ಬಂದಿದ್ದು, ಇಂದು ಅವರ ಮಕ್ಕಳಾದ ನಾಗರಾಜ, ಗಂಗಾಧರ ಮತ್ತು ಗಣೇಶ ಅವರಿಂದ ಮೂಲಕ ಜೀವಸೆಲೆ ಪಡೆದಿದೆ. ಇವರ ಕುಟುಂಬ ನೂರು ವರ್ಷಕ್ಕೂ ಹೆಚ್ಚುಕಾಲ ಮೂರ್ತಿ ರಚನೆಯಲ್ಲಿ ತೊಡಗಿಸಿಕೊಂಡದ್ದರೇ, ವೆಂಕಟರಮಣ ಆಚಾರ್ಯರು 65 ವರ್ಷಗಳಿಂದ ಮೂರ್ತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಕ್ಷೇತ್ರಾದ್ಯಂತ ಹೆದ್ದಾರಿ ಕಾಮಗಾರಿಯ ಅವ್ಯವಸ್ಥೆಯಿಂದ ಕೃಷಿಕರು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಕೆಲವೆಡೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಏಕಾಏಕಿ ನಿಲ್ಲಿಸಿದ್ದರ ಪರಿಣಾಮ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ದೀನದಯಾಳು ಯೋಜನೆಯಡಿ ವಿದ್ಯುತ್ ಸಂಪರ್ಕ ವಿಳಂಬಕ್ಕೆ ಅಧಿಕಾರಿಗಳು ನೀತಿ ಸಂಹಿತೆಯ ನೆಪ ಹೇಳಿದ್ದಾರೆ. ಈ ಎಲ್ಲಾ ಸಮಸ್ಯೆಗಳೂ ಶೀಘ್ರ ಪರಿಹಾರ ಕಂಡುಕೊಳ್ಳು ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದೇನೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಅವರು ಹೇಳಿದರು. ಬೈಂದೂರು ಕ್ಷೇತ್ರ ವ್ಯಾಕ್ತಿಯಲ್ಲಿ ನಡೆಯುತ್ತಿರುವ ಹೆದ್ದಾರಿ ಕಾಮಗಾರಿಯಿಂದಾಗಿ ಹಲವೆಡೆ ಕೃಷಿಭೂಮಿಗಳಿಗೆ ಹೆದ್ದಾರಿಯ ಮಣ್ಣು ನುಗ್ಗುವ ಸ್ಥಿತಿ ಇದೆ. ಸೂಕ್ತ ಚರಂಡಿ ವ್ಯವಸ್ಥೆ ಇದ್ದಲ್ಲರಿಂದ ರಸ್ತೆಯ ಮೇಲೆಯೇ ನೀರು ಹರಿಯುತ್ತಿದೆ. ಬೈಂದೂರು ಒತ್ತಿನಣೆಯಲ್ಲಿ ನಡೆಸಲಾಗಿರುವ ಕಾಮಗಾರಿಯ ಮತ್ತೆ ಕುಸಿಯುವ ಭೀತಿಯಲ್ಲಿದೆ. ಈ ಎಲ್ಲಾ ಸಮಸ್ಯೆಗಳ ಬಗ್ಗೆ ಈಗಾಗಲೇ ಕಾಮಗಾರಿ ನಡೆಸುತ್ತಿರುವ ಕಂಪೆನಿಯ ಅಧಿಕಾರಿಗಳೊಂದಿಗೆ ಮಾತನಾಡಿ ಎಚ್ಚರಿಕೆಯನ್ನೂ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿಯ ಪ್ರಾಜೆಕ್ಟ್ ಮ್ಯಾನೆಜರ್ ಅವರೊಂದಿಗೂ ಸಮಾಲೋಚನೆ ನಡೆಸಿದ್ದೇನೆ…
ಅಪಾರ ಉಜಿರೆ | ಕುಂದಾಪ್ರ ಡಾಟ್ ಕಾಂ ಶಾಲೆಯಲ್ಲಿ ದೊಡ್ಡವರಾದ ಮೇಲೆ ಏನಾಗುತ್ತೀರಿ ಎಂದು ಕೇಳಿದಾಗ ಲಾರಿ ಡ್ರೈವರ್ ಆಗುತ್ತೇನೆಂದು ಉತ್ತರಿಸಿದ್ದೆ; ಅಲ್ಲದೆ ಅದು ನನ್ನ ಕನಸೂ ಆಗಿತ್ತು ಎಂಬುದಾಗಿ ನಾಗತಿಹಳ್ಳಿ ಚಂದ್ರಶೇಖರ್ ತಮ್ಮ ನೆನಪುಗಳನ್ನು ತೆರೆದಿಟ್ಟರು. ಆಳ್ವಾಸ್ ನುಡಿಸಿರಿಯ ಎರಡನೆ ದಿನ ನಡೆದ ಸಮ್ಮೇಳನಾಧ್ಯಕ್ಷರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಅವರು ಪ್ರೇಕ್ಷಕರ ಪ್ರಶ್ನೆಗಳಿಗೆ ಉತ್ತರಿಸಿದರು. ನಾಗತಿಹಳ್ಳಿಗೆ ಸೇರಿಕೊಂಡೇ ಹಾದುಹೋಗಿದ್ದ ಹೆದ್ದಾರಿಯಲ್ಲಿ ದಿನನಿತ್ಯವೂ ನೂರಾರು ಲಾರಿಗಳು ಸಂಚರಿಸುತ್ತಿದ್ದುದರಿಂದ ಚಾಲಕನಾದರೆ ಎಲ್ಲ ರಾಜ್ಯಗಳನ್ನು ನೋಡಬಹುದು ಎಂದು ಕನಸು ಕಂಡಿದ್ದೇ ಈ ಕನಸೇ ಮುಂದೆ ನನಗೆ ದೇಶ ವಿದೇಶಗಳನ್ನು ಪಚಿiಟನೆ ಮಾಡಲು ಬುನಾದಿಯಾಯಿತು. ಇದರ ಫಲವಾಗಿಯೇ ಭಾರತದ ಎಲ್ಲ ರಾಜ್ಯಗಳೂ ಸೇರಿದಂತೆ ವಿಶ್ವದ ೪೦ ದೇಶಗಳಿಗೆ ಸ್ವಂತ ಖರ್ಚಿನಲ್ಲಿ ಪ್ರವಾಸ ಕೈಗೊಂಡಿದ್ದೇನೆ. ಮಾತ್ರವಲ್ಲದೆ ಮೂರು ಬಾಗಿ ಭೂಮಿಚಿiನ್ನು ಪಚಿiಟನೆ ಮಾಡಿದ್ದೇನೆ ಎಂದರು. ಇಂದು ಮೊಬೈಲ್‌ಗಳ ಹಾವಳಿಗೆ ಮಕ್ಕಳು ಮಾತ್ರವಲ್ಲದೆ ಪೋಷಕರೂ ಬಲಿಯಾಗಿರುವುದರಿಂದ ಮಕ್ಕಳಲ್ಲಿ ಕುತೂಹಲ ಮೂಡಿಸುವಂತ ಅಂಶಗಳನ್ನು ರೂಢಿಸಿಕೊಳ್ಳುವಂತ ಶಿಕ್ಷಣ ನೀಡಲು ಸಾಧ್ಯವಾಗುತ್ತಿಲ್ಲ, ಈ ಬೆಳವಣಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಕ್ಷೇತ್ರದ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ತಾಂತ್ರಿಕ ಸಮಸ್ಯೆಗಳು ಬಗೆಹರಿದ ಬಳಿಕ ಬಿಜೆಪಿ ಸೇರ್ಪಡೆ ಖಚಿತವಾಗಿ, ಅವರ ಮರಳಿ ಬಿಜೆಪಿ ಸೇರ್ಪಡೆಯನ್ನು ವಿರೋಧಿಸುವವರು ಪಕ್ಷ ಬಿಟ್ಟು ಹೊರನಡೆಯಲಿ. ಮುಂದಿನ ಕುಂದಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಲಾಡಿಯವರೇ ಆಗಲಿದ್ದಾರೆ ಎಂದು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪ ಹೇಳಿದರು. ಅವರು ಕುಂದಾಪುರದಲ್ಲಿ ಜರುಗಿದ ಬಿಜೆಪಿ ಪರಿವರ್ತನಾ ಯಾತ್ರೆಯನ್ನು ಉದ್ಘಾಟಿಸಿದ ಬಳಿಕ ಮಾತನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಸ್ವತಃ ಮುಖ್ಯಮಂತ್ರಿಗಳೇ ಹಲವು ಹಗರಣಗಳಲ್ಲಿ ಭಾಗಿಯಾಗಿದ್ದಾರೆ. ಅಧಿವೇಶನದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರದ ಹಗರಣಗಳನ್ನು ದಾಖಲೆ ಸಹಿತ ಬಹಿರಂಗ ಮಾಡಲಾಗುವುದು. ಭ್ರಷ್ಟಾಚಾರದಲ್ಲಿ ತೊಡಗಿರುವ ಕಾಂಗ್ರೆಸ್‌ಗೆ ಅತ್ಯಾಚಾರದ ಆರೋಪ ಹೊತ್ತಿರುವ ವೇಣುಗೋಪಾಲ ಉಸ್ತುವಾರಿಯಾಗಿ ಬಂದಿರುವುದು ದುರಂತವೇ ಸರಿ. ಕಾಂಗ್ರೆಸ್‌ನ ಸದ್ದಡಗಿಸಲು ಮತ್ತೆ ರಾಜ್ಯದಲ್ಲಿ ಬಹುಮತದಿಂದ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವಂತೆ ಮಾಡುವ ಜವಾಬ್ದಾರಿ ಕಾರ್ಯಕರ್ತರಿಗಿದೆ ಎಂದರು. ರಾಜ್ಯದಲ್ಲಿ ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ…
