Author: ಸುನಿಲ್ ಹೆಚ್. ಜಿ. ಬೈಂದೂರು

ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಂಗಕರ್ಮಿ, ಸಂಗೀತಗಾರ ಯು. ಶ್ರೀನಿವಾಸ ಪ್ರಭು ಅವರಿಗೆ ಕರ್ನಾಟಕ ನಾಟಕ ಅಕಾಡೆಮಿಯ 2020ನೇ ಸಾಲಿನ ವಾರ್ಷಿಕ ರಂಗಪ್ರಶಸ್ತಿ ಲಭಿಸಿದೆ. ಬೈಂದೂರಿನ ಹೆಸರಾಂತ ರಂಗ ಸಂಸ್ಥೆ ಲಾವಣ್ಯದ ಸ್ಥಾಪಕಾಧ್ಯಕ್ಷರಾದ ಯು. ಶ್ರೀನಿವಾಸ ಪ್ರಭು ಅವರು ಹತ್ತು ಹಲವು ನಾಟಕ ರಚನೆ, ನಿರ್ದೇಶನ, ಸಂಗೀತ ನಿರ್ದೇಶನ ಸೇರಿದಂತೆ ರಂಗಭೂಮಿ ಕ್ಷೇತ್ರದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ. ಉಪ್ಪುಂದದ ಯ ದೇವಿದಾಸ ಪ್ರಭುಗಳ ಮಗನಾಗಿ 1952ರಲ್ಲಿ ಜನಿಸಿದ ಶ್ರೀನಿವಾಸ ಪ್ರಭು ತಮ್ಮ ಶಿಕ್ಷಣವನ್ನು ಉಪ್ಪುಂದ ಹಾಗೂ ಬೈಂದೂರಿನಲ್ಲಿ ಮುಗಿಸಿದರು. ತನ್ನ ಬಾಲ್ಯದಿಂದಲೇ ಹರಿಕಥೆ, ಭಜನೆ, ಯಕ್ಷಗಾನ, ನಾಟಕಗಳ ಕಡೆಗೆ ಆಕರ್ಷಿತರಾಗಿ ವಿದ್ಯಾರ್ಥಿ ಜೀವನದಲ್ಲಿಯೇ ಸಣ್ಣಪುಟ್ಟ ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. ಸಿಂಡಿಕೇಟ್ ಬ್ಯಾಂಕ್‌ನಲ್ಲಿ ಉದ್ಯೋಗಿಯಾಗಿದ್ದಾಗ ಊರಿನ ಸ್ನೇಹಿತರನ್ನು, ಸಹೋದ್ಯೋಗಿಗಳನ್ನು ಕೂಡಿಸಿಕೊಂಡು ಕನ್ನಡ, ಕೊಂಕಣಿ ನಾಟಕಗಳನ್ನು ಆಡುವ ಹವ್ಯಾಸ ಬೆಳೆಸಿಕೊಂಡರು. ಇದರ ಜೊತೆಗೆ ಸಂಗೀತ ಶಾಲೆ ಸೇರಿ ಸಂಗೀತ ಉಪಕರಣಗಳನ್ನು ನುಡಿಸಲು ಕಲಿತರು. ನಾಟಕಗಳಲ್ಲಿ ನಟನೆ, ನಿರ್ದೇಶನ, ಸಂಗೀತ ಸಂಯೋಜನೆಯನ್ನು ಹವ್ಯಾಸವಾಗಿ ಬೆಳೆಸಿಕೊಂಡರು. ಕುಂದಾಪ್ರ ಡಾಟ್ ಕಾಂ…

Read More

ಸುನಿಲ್ ಹೆಚ್. ಜಿ. | ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಮದುವೆ ಮನೆ ಅಂದ ಮೇಲೆ ಬಂಧು ಬಳಗ ಸ್ನೇಹಿತರೆಲ್ಲಾ ಸೇರಿ ಸಂಭ್ರಮ ಸಡಗರದಲ್ಲಿ ಪಾಲ್ಗೊಳ್ಳೋದು ಮಾಮೂಲು. ಆದರೆ ಕುಂದಾಪುರದಲ್ಲಿ ನಡೆದ ಮದುವೆಯೊಂದು ಇವೆಲ್ಲದಕ್ಕೂ ಸಾಕ್ಷಿಯಾಗುವುದರ ಜೊತೆಗೆ ತೀರಾ ಭಿನ್ನವಾಗಿ ನಡೆದು ಸಂಬಂಧಗಳ ಬಂಧ ಗಟ್ಟಿಗೊಳಿಸಿದ್ದು ಮಾತ್ರವಲ್ಲದೇ ಸಮಾಜಕ್ಕೂ ಉತ್ತಮ ಸಂದೇಶ ನೀಡಿದೆ. ಹೌದು ಇಂತಹದ್ದೊಂದು ಮಾದರಿ ಮದುವೆ ನಡೆದದ್ದು ಕಲಾಕ್ಷೇತ್ರ ಕುಂದಾಪುರದ ಅಧ್ಯಕ್ಷ ಕಿಶೋರ್ ಕುಮಾರ್ ಅವರ ಕುಟುಂಬದಲ್ಲಿ. ಕಿಶೋರ್ ಅವರ ಸಹೋದರ ಚಂದ್ರಶೇಖರ್ ಹಾಗೂ ಶೈಲಾ ದಂಪತಿಗಳ ಪುತ್ರ ಸಾತ್ವಿಕ್ ಅವರ ವಿವಾಹ ಶ್ರೀದೇವಿ ಅವರೊಂದಿಗೆ ಜನವರಿ 20ರಂದು ಸಂಭ್ರಮದಿಂದ ನಡೆಯಿತು. ಅದು ಇತರ ಮದುವೆಗಳಂತೆ ತೋರಿಕೆಯ, ಪ್ರತಿಷ್ಠೆ ಪ್ರದರ್ಶನದ ಮದುವೆ ಆಗಿರದೇ ಸಂಬಂಧಗಳನ್ನು ಬೆಸೆದ, ನಿಜಾರ್ಥದಲ್ಲಿ ಸಂಭ್ರಮವನ್ನು ತುಂಬಿದ, ಕೌಟುಂಬಿಕ ಮೌಲ್ಯಗಳನ್ನು ಎತ್ತಿಹಿಡಿದ ಮುದುವೆಯಾಗಿತ್ತು. ನಮ್ಮನಿ ಮದಿ! ನಮ್ಮನಿ ಮದಿ ಒಂದೆರಡು ದಿನದ ಸಂಭ್ರಮಕ್ಕಷ್ಟೇ ಸೀಮಿತವಾಗಿರಲಿಲ್ಲ. ವಾರ ಪೂರ್ತಿ ತಿಂಡಿ, ತಿನಿಸು, ಅಲಂಕಾರ, ಮಾತು, ಕಥೆ, ನಾಟಕ,…

Read More

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ರಾಮ ಮಂದಿರಕ್ಕೆ ಕುಂದಾಪುರ ತಾಲೂಕಿನ ಕೋಟೇಶ್ವರ ಪ್ರಸಿದ್ಧ ಶಿಲ್ಪಕಲಾ ಶಾಲೆಯಲ್ಲಿ ರಥ ನಿರ್ಮಿಸುವ ಸಿದ್ಧತೆಗಳು ಸದ್ದಿಲ್ಲದೆ ನಡೆಯುತ್ತಿದೆ. ಕಳೆದ ಕೆಲ ತಿಂಗಳುಗಳ ಹಿಂದೆ ಅಯೋಧ್ಯೆ ಶ್ರೀ ರಾಮ ಮಂದಿರದ ರಥ ನಿರ್ಮಾಣದ ಮಾತುಕತೆ ನಡೆದಿದ್ದು, ಕೋಟೇಶ್ವರದ ರಥಶಿಲ್ಪಿ, ಜಕಣಾಚಾರಿ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀನಾರಾಯಣ ಆಚಾರ್ಯ ಅವರ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಶಾಲೆಯಲ್ಲಿಯೇ ಅಯೋಧ್ಯೆ ರಥ ನಿರ್ಮಾಣವಾಗುವುದು ಬಹುತೇಕ ಖಚಿತವಾಗಿದೆ. ಕುಂದಾಪ್ರ ಡಾಟ್ ಕಾಂ. ಅಯೋಧ್ಯೆ ರಾಮ ಮಂದಿರದ ರಥ ನಿರ್ಮಾಣದ ಕುರಿತು ಚರ್ಚೆ ಬಂದಾಗ ಲಕ್ಷ್ಮೀನಾರಾಯಣ ಆಚಾರ್ಯ ಅವರ ಹೆಸರು ಕೇಳಿಬಂದಿದ್ದು, ಇದಕ್ಕೆ ಪೂರಕವೆಂಬಂತೆ ವಿನ್ಯಾಸ ಸಮಿತಿಯಲ್ಲಿ ಪ್ರಮುಖರಾಗಿರುವ ಲೇಖಕಿ ಹಾಗೂ ಅಂಕಣಕಾರ್ತಿ ಶೇಫಾಲಿ ವೈದ್ಯ ಅವರು ಕೋಟೇಶ್ವರ ರಥಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯರ ಮನೆಗೆ ಭೇಟಿ ನೀಡಿ ಹಲವು ದೇವಾಲಯಗಳಿಗೆ ಸುಂದರ ರಥ ನಿರ್ಮಿಸಿರುವುದನ್ನು ತಿಳಿದು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಆ ಬಳಿಕ ಉತ್ತರ ಭಾರತದ ಶೈಲಿ ಹಾಗೂ ದಕ್ಷಿಣ ಭಾರತದ ಶೈಲಿ…

Read More

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಒಂದೇ ನೋಟಕ್ಕೆ ಮನತುಂಬಿದ ನಗು. ಬಾಗುವ ರೇಖೆಗೆ ತಕ್ಕಂತೆ ಬದಲಾಗುವ ಭಾವಲಹರಿ. ಕಾರ್ಟೂನ್ ಎಂದರೆ ಹಾಗೆ. ಆಳುವವರಿ ಗೊಂದು ಚಾಟಿ. ಜನಸಾಮಾನ್ಯರಿಗೆ ನಗುವಿನ ಚಟಾಕಿ. ವಾಸ್ತವದ ಅನಾವರಣ. ನೂರು ಪದಗಳಲ್ಲಿ ಹೇಳಬಹುದಾದದ್ದನ್ನು ಒಂದು ರೇಖೆಯಲ್ಲಿ ಹೇಳಿ ಮುಗಿಸುವ ಛಾತಿ. ಇಂತಹ ಕಾರ್ಟೂನಿಷ್ಠರನ್ನು ಕಾರ್ಟೂನಿಷ್ಠರ ತವರು, ಕುಂದಾಪುರದಲ್ಲಿ ಒಗ್ಗೂಡಿಸಿ ಕಳೆದ 6 ವರ್ಷಗಳಿಂದ ಆಯೋಜಿಸುತ್ತಿರುವ ಕಾರ್ಟೂನು ಹಬ್ಬ, ಈ ಭಾರಿ ಡಿ.12 ಹಾಗೂ 13ರಂದು ನಡೆಯಲಿದೆ. ಖ್ಯಾತ ವ್ಯಂಗ್ಯಚಿತ್ರಕಾರ ಕುಂದಾಪುರದ ಸತೀಶ್ ಆಚಾರ್ಯರ ಅವರ ಸಾರಥ್ಯದಲ್ಲಿ ವಿಭಿನ್ನ ಐಡಿಯಾಸ್ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಟೂನು ಹಬ್ಬ ಹತ್ತಾರು ವಿಶೇಷತೆಗಳೊಂದಿಗೆ ಕುಂದಾಪುರದ ಕಲಾಮಂದಿರದಲ್ಲಿ ನಡೆಯಲಿದ್ದು, ಈ ಭಾರಿ ಆನ್ಲೈನ್ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಡಿ. 12ರಂದು ಮುಂಬೈನಿಂದ ಕೊರೋನಾ ಯೋಧ, ನಟ ಸೋನು ಸೂದ್ ಕಾರ್ಟೂನು ಹಬ್ಬ ಹಾಗೂ ‘ಗೋ ಕರೋನಾ ಗೋ’ ಪುಸ್ತಕವನ್ನು ಬಿಡುಗಡೆಗೊಳಿಸಲಿದ್ದಾರೆ. ವಿವಿಧ ಗಣ್ಯರು ಉದ್ಘಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಅಂದು ಮಧ್ಯಾಹ್ನ 12:30ರಿಂದ…

Read More

ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ಮದುವೆಯಾದ ಹೊಸತರಲ್ಲಿ ಸುತ್ತಾಟ, ಹನಿಮೂನ್ ಎನ್ನುವವರ ನಡುವೆ ಈ ಜೋಡಿ ಮಾತ್ರ ಭಿನ್ನವಾಗಿ ನಿಲ್ಲುತ್ತದೆ. ಬೈಂದೂರು ಸೋಮೇಶ್ವರದ ಕಡಲತೀರ ಸ್ವಚ್ಛಗೊಳಿಸಬೇಕು ಎಂಬ ಸಂಕಲ್ಪತೊಟ್ಟ ನವ ದಂಪತಿಗಳಾದ ಅನುದೀಪ್ ಹೆಗಡೆ ಹಾಗೂ ಮಿನುಷಾ ಕಾಂಚನ್ ಮದುವೆಯ ಸಂಭ್ರಮದೊಂದಿಗೆ ಸಾಮಾಜಿಕ ಬದ್ಧತೆಯನ್ನು ಮೆರೆದು ಇತರರಿಗೂ ಮಾದರಿಯಾಗಿದ್ದಾರೆ. ಬೈಂದೂರು ತಾಲೂಕಿನ ಕಳವಾಡಿಯವರಾದ ಅನುದೀಪ್ ಹೆಗ್ಡೆ ವೃತ್ತಿಯಲ್ಲಿ ಡಿಜಿಟಲ್ ಮಾರ್ಕೆಟರ್. ತಮ್ಮದೇ ಸ್ವುಡಿಯೋ1 ಪ್ರೊಡಕ್ಷನ್ ಮೂಲಕ ಈ ಉದ್ಯಮದಲ್ಲಿ ತೊಡಗಿಕೊಂಡಿದ್ದಾರೆ. ಮಿನುಷಾ ಫಾರ್ಮಾಸಿಟಿಕಲ್ ಕಂಪನಿ ಉದ್ಯೋಗಿ. ಈರ್ವರು ನ.18 ರಂದು ಮದುವೆಯಾಗಿದ್ದರು. ತಮ್ಮ ಮದುವೆಯ ನೆನಪು ಬಹುಕಾಲ ಉಳಿಯಬೇಕು ಎಂದು ನಿರ್ಧರಿಸಿದ್ದ ದಂಪತಿಗಳು, ವೆಡ್ಡಿಂಗ್ ಚಾಲೆಂಜ್ ಆಗಿ ಬೈಂದೂರಿನ ಸೋಮೇಶ್ವರ ಬೀಚ್ ಸ್ವಚ್ಛಗೊಳಿಸುವ ನಿರ್ಧಾರ ಮಾಡಿದರು. ಅದಕ್ಕಾಗಿ ಹನಿಮೂನ್ ಪ್ಲಾನ್ ಕೂಡ ಮುಂದೂಡಿದರು. ಕುಂದಾಪ್ರ ಡಾಟ್ ಕಾಂ. ಬೀಚ್ ಸ್ವಚ್ಛತೆಯ ಪಣತೊಟ್ಟ ದಂಪತಿಗಳು ನ.27ರಿಂದ ಪ್ರತಿದಿನ ಸಂಜೆ 2ಗಂಟೆ ಶ್ರಮದಾನ ಮಾಡಿ ತೀರದಲ್ಲಿ ಬಿದ್ದಿದ್ದ ಮದ್ಯದ ಬಾಟಲಿ, ಪ್ಲಾಸ್ಟಿಕ್, ಚಪ್ಪಲಿ ಹೀಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಮನಿಷಾ ಎಂಬ ಯುವತಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಖಂಡಿಸಿ, ಸೂಕ್ತ ತನಿಖೆಯೊಂದಿಗೆ ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಂದಾಪುರ ವತಿಯಿಂದ ಕುಂದಾಪುರದ ಮಿನಿ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಜ್ವಲ್ “ಯುವತಿಯ ಮೇಲೆ ನಡೆದ ಅಮಾನವೀಯ ಅತ್ಯಾಚಾರ ಪ್ರಕರಣವನ್ನು ಎಬಿವಿಪಿ ತೀವ್ರವಾಗಿ ಖಂಡಿಸುತ್ತದೆ. ಮಹಿಳೆಯರನ್ನು ಪೂಜಿಸುವ ಪರಂಪರೆಯನ್ನು ಹೊಂದಿರುವ ಜಗತ್ತಿನ ಶ್ರೇಷ್ಠ ದೇಶದಲ್ಲಿ ಇಂತಹ ಕ್ರೂರ ಘಟನೆಗಳು ನಡೆಯುತ್ತಿರುವುದು ಅತ್ಯಂತ ದುಃಖಕರ ಮತ್ತು ವಿಷಾದನೀಯ. ಯುವತಿಯು ಸಾವನ್ನಪ್ಪಲು ಕಾರಣರಾದ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಎಬಿವಿಪಿ ಆಗ್ರಹಿಸುತ್ತದೆ” ಎಂದರು. ಪ್ರತಿಭಟನೆಯಲ್ಲಿ ಎಬಿವಿಪಿ ರಾಜ್ಯ ಸಹಕಾರ್ಯದರ್ಶಿ ಸಂದೇಶ್ ರೈ ಮಜಕ್ಕಾರ್ , ತಾಲೂಕಿನ ಕಾರ್ಯಕರ್ತರಾದ ನಿರಂಜನ್ , ದೀಪಕ್ , ಪ್ರಥ್ವಿಕ್ , ಪದ್ಮನಾಭ, ಅಭಿಷೇಕ್ , ಶಶಿಕಿರನ್ ಮುಂತಾದವರು ಉಪಸ್ಥಿರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಡಾ. ನವೀನ್ ಭಟ್ ವೈ ಅಧಿಕಾರ ಸ್ವೀಕರಿಸಿದರು. ಇವರು ಈ ಹಿಂದೆ ಹಾಸನ ಉಪವಿಭಾಗದಲ್ಲಿ ಉಪ ವಿಭಾಗಾಧಿಕಾರಿಯಾಗಿದ್ದರು. ಉಡುಪಿ ಜಿಲ್ಲಾ ಸಿಇಓ ಆಗಿದ್ದ ಪ್ರೀತಿ ಗೆಲ್ಹೋಟ್ ಅಧಿಕಾರ ಹಸ್ತಾಂತರಿಸಿದರು

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ : ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್ , ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಇವರ ಆಶ್ರಯದಲ್ಲಿ ನಡೆಯುವ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಾಗೂ ಹತ್ತು ದಿನಗಳ ಕಾಲ ನಡೆಯುವ ಆನಲೈನ್ ಸಾಹಿತ್ಯಿಕ – ಸಾಂಸ್ಕೃತಿಕ ದಿಬ್ಬಣ ಕಾರ್ಯಕ್ರಮದ ಆಲ್ಮೋರ – 2020 ’ಮರೆಯಲಾಗದ ಶಬ್ಧತೀರ’ ಹೆಸರನ್ನು ಗೀತಾನಂದ ಫೌಂಢೇಶನ್‌ನ ಪ್ರವರ್ತಕ, ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ. ಕುಂದರ್ ಅನಾವರಣಗೊಳಿಸಿದರು. ಅನಾವರಣಗೊಳಿಸಿ ಮಾತನಾಡಿ, ಕಾರಂತರ ಬದುಕಿನ ಚಿತ್ರಣವನ್ನು ಇಂದಿನ ಸಮಾಜಕ್ಕೆ ಪ್ರಸ್ತುತಿ ಪಡಿಸುವ ಜವಾಬ್ದಾರಿ ನಮ್ಮ ಮೇಲಿದೆ ಆದ್ದರಿಂದ ಕಾರಂತರ ವಿಷಯಾಧರಿತ ಕಾರ್ಯಕ್ರಮಗಳನ್ನು ಇನ್ನಷ್ಟೂ ಕಾರಂತ ಥೀಮ್ ಪಾರ್ಕ್‌ನಲ್ಲಿ ಆಯೋಜನೆಗೊಳ್ಳಲಿದೆ ಎಂದರು. ಆಯ್ಕೆ ಸಮಿತಿಯ ಯು. ಎಸ್ ಶೆಣೈ ಮಾತಾನಾಡಿ, ಈ ವರ್ಷ ಸಾಹಿತ್ಯ ಕ್ಷೇತ್ರದಲ್ಲಿ ಅನುಪಮ ಸೇವೆಯನ್ನು ಪರಿಗಣಿಸಿ ನಾಡೋಜ ಡಾ. ಎಸ್ .ಎಲ್. ಭೈರಪ್ಪ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉತ್ತರ ಪ್ರದೇಶದಲ್ಲಿ ಅಮಾಯಕ ದಲಿತ ಯುವತಿ ಮನೀಷಾ ವಾಲ್ಮಿಕಿ ಮೇಲೆ ಅತ್ಯಾಚಾರ ನಡೆಸಿ ಅಮಾನುಷವಾಗಿ ಕೊಲೆ ಮಾಡಿರುವ ಕಾಮಾಂಧರ ಪೈಶಾಚಿಕ ಕುಕೃತ್ಯವನ್ನು ಖಂಡಿಸಿ ಮತ್ತು ಸಂತ್ರಸ್ತ ಕುಟುಂಬಕ್ಕೆ ಸಾಂತ್ವಾನ ಹೇಳಲು ತೆರಳುತ್ತಿದ್ದ ಕಾಂಗ್ರೆಸ್ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿಯವರ ಬಂಧನವನ್ನು ಖಂಡಿಸಿ ಬೈಂದೂರು ಯುವ ಕಾಂಗ್ರೆಸ್ ವತಿಯಿಂದ ಬೈಂದೂರು ಸರ್ಕಲ್ ಬಳಿ ಪ್ರತಿಭಟನೆ ನೆಡೆಸಲಾಯಿತು. ಪ್ರತಿಭಟನೆಗೂ ಮುನ್ನ ಕಾಮಾಂಧರಿಂದ ಅಮಾನುಷವಾಗಿ ಹತ್ಯೆಯಾದ ದಲಿತ ಯುವತಿಯ ಆತ್ಮಕ್ಕೆ ಶಾಂತಿ ಕೋರಿ ಮೌನ ಪ್ರಾರ್ಥನೆ  ಸಲ್ಲಿಸಲಾಯಿತು. ಸಂತೃಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಅತ್ಯಾಚಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳದ ಉತ್ತರ ಪ್ರದೇಶ ಬಿಜೆಪಿ ಸರಕಾರದ ಮುಖ್ಯಮಂತ್ರಿ ಆಧಿತ್ಯನಾಥರ ಪ್ರತಿಕೃತಿ ದಹಿಸಲಾಯಿತು. ಬ್ಲಾಕ್ ಅಧ್ಯಕ್ಷರಾದ ಎಸ್. ಮದನ್ ಕುಮಾರ್, ಪ್ರಧಾನ ಕಾರ್ಯದರ್ಶಿ ನಾಗರಾಜ ಗಾಣಿಗ, ಗಣೇಶ ಪೂಜಾರಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೌರಿ ದೇವಾಡಿಗ, ಶಾಂತಿ ಪೆರೇರಾ, ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಸಂಗಮ್ ಬಳಿ ನೂತನ ಬಿಗ್‌ಬಾಸ್ ಮೆನ್ಸ್ ಎಕ್ಸ್‌ಕ್ಲ್ಯೂಸಿವ್ ಫ್ಯಾಶನ್ ವೇರ್ ಮಳಿಗೆಯನ್ನು ಬಿಗ್‌ಬಾಸ್ ಸೀಸನ್ – 7ನ ವೀಜೇತ, ನಟ ಶೈನ್ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭ ಪುರಸಭಾ ಸದಸ್ಯರಾದ ಅಬು ಬಾಯಿ, ಉದ್ಯಮಿಗಳಾದ ಕಾಳವಾರ ಉದಯ ಕುಮಾರ್ ಶೆಟ್ಟಿ, ಕೆ. ನಾಗರಾಜ, ರೋಹಿದಾಸ್ ನಾಯಕ್ ಮೋಹಂ ಸಾಹೇಬ್, ಪಾಲ್ಲಿ ಹುಸ್ಮಾನ್, ವಿಜಯ್ ಕುಂದರ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಯಕೂಬ್ ಖಾದರ್ ಗುಲ್ವಾಡಿ ನಿರೂಪಿಸಿದರು

Read More