ಬೈಂದೂರು: ಸಂಘನೆಗಳು ಸಮಾಜಮುಖಿ ಕೈಂಕರ್ಯಗಳನ್ನು ಹಮ್ಮಿಕೊಳ್ಳುವುದರ ಮೂಲಕ ಸಮಾಜಕ್ಕೆ ನೆರಳಾಗಿ ಕಾರ್ಯಹಿಸಬೇಕು, ಆಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತದೆ. ಮನುಷ್ಯನ ಜೀವಿತದ ಅವಧಿಯಲ್ಲಿ ಅರ್ಪಣಾ ಮನೋಭಾವದ ಸೇವೆ ಅಗತ್ಯವಾಗಿದ್ದು, ಆ ಮೂಲಕ ಸಾರ್ಥಕತೆ ಕಂಡುಕೊಳ್ಳಬಹುದು ಎಂದು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಕಂಬದಕೋಣೆ ಕಂಬಳಗದ್ದೆಯಲ್ಲಿ ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಷಿಯನ್ ಕುಂದಾಪುರ ವಲಯದ ಕೆಸರುಗದ್ದೆ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ತಾಲೂಕಿನಲ್ಲಿ ಪೋಟೋಗ್ರಾಫರ್ಸ್ ಸಂಘಟನೆಯು ಅತ್ಯಂತ ಬಲಿಷ್ಠವಾಗಿದ್ದು, ಹತ್ತಾರು ವರ್ಷಗಳೀಚಿದ ಹಲವು ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಂಡಿದ್ದಾರೆ. ಫೋಟೋಗ್ರಾಫರ್‌ಗಳು ತಮ್ಮ ಒತ್ತಡದ ಕೆಲಸದ ನಡುವೆಯು, ಸಮಾಜದ ಅಭಿವೃದ್ಧಿಯ ಬಗ್ಗೆ ಚಿಂತನೆ ನಡೆಸಿರುವುದು ಸಮಾಜದ ಮೇಲಿರುವ ಅವರಿಗಿರುವ ತುಡಿತ ನಿಜವಾಗಿಯೂ ಶ್ಲಾಘನೀಯವಾಗಿದೆ ಎಂದರು. ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಷಿಯನ್ ಕುಂದಾಪುರ ವಲಯ ಅಧ್ಯಕ್ಷ ನಾಗರಾಜ ರಾಯಪ್ಪನಮಠ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿ.ಪಂ. ಸದಸ್ಯ ಬಾಬು ಶೆಟ್ಟಿ, ತಾ.ಪಂ. ಸದಸ್ಯ ರಾಧಾ ಪೂಜಾರಿ, ಕಂಬದಕೋಣೆ ಗ್ರಾ.ಪಂ. ಅಧ್ಯಕ್ಷ ರಾಜೇಶ್, ಕಂಬದಕೋಣೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ…
Author: Editor Desk
ಕುಂದಾಪುರ: ಮರವಂತೆ ಸರ್ಕಾರಿ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಬೈಂದೂರು ವಲಯ ಮಟ್ಟದ ಪ್ರೌಢಶಾಲೆಗಳ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯದಲ್ಲಿ ಶಿರೂರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ತಂಡ ಮತ್ತು ಕೊಲ್ಲೂರು ಮೂಕಾಂಬಿಕಾ ಪ್ರೌಢಶಾಲೆಯ ತಂಡಗಳು ಮೊದಲ ಸ್ಥಾನ ಗಳಿಸಿದುವು. ಬಾಲಕರ ವಿಭಾಗದಲ್ಲಿ ಶಿರೂರು ತಂಡದ ಎದುರು 36 ಮತ್ತು 28ಅಂಕಗಳ ಅಂತರದಿಂದ ಸೋತ ಗುಜ್ಜಾಡಿ ಸರಕಾರಿ ಪ್ರೌಢಶಾಲೆಯ ತಂಡ ಮತ್ತು ಬಾಲಕಿಯರ ವಿಭಾಗದಲ್ಲಿ ಕೊಲ್ಲೂರು ತಂಡದ ಎದುರು 37 ಮತ್ತು 17 ಅಂಕಗಳ ಅಂತರದಿಂದ ಸೋತ ಆಲೂರು ಸರಕಾರಿ ಪ್ರೌಢಶಾಲೆಯ ತಂಡ ದ್ವಿತೀಯ ಸ್ಥಾನ ಗಳಿಸಿದುವು. ಬಾಲಕರ ವಿಭಾಗದಲ್ಲಿ 14 ಮತ್ತು ಬಾಲಕಿಯರ ವಿಭಾಗದಲ್ಲಿ 9 ತಂಡಗಳು ಸ್ಪರ್ಧೆಯಲ್ಲಿ ಸೆಣಸಿದ್ದುವು.
ಗಂಗೊಳ್ಳಿ: ಮಾಂಸಕ್ಕಾಗಿ ಕೊಟ್ಟಿಗೆಯಿಂದ ಜಾನುವಾರುಗಳನ್ನು ಕಳವು ಮಾಡಿ ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸಿ, ಸಾಗಾಟಕ್ಕೆ ಬಳಸಿದ್ದ ಮಾರುತಿ ಓಮ್ಮಿ ಕಾರನ್ನು ಮತ್ತು ಎರಡು ಜಾನುವಾರುಗಳನ್ನು ಗಂಗೊಳ್ಳಿ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಮಹಮ್ಮದ್ ಹನೀಫ್ ಎಂದು ಗುರುತಿಸಲಾಗಿದ್ದು, ಇನ್ನಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಘಟನೆ ವಿವರ : ಕುಂದಾಪುರ ತಾಲೂಕಿನ ಹರ್ಕೂರು ಗ್ರಾಮದ ಹೊರಣಿ ಚಿತ್ತೇರಿ ಮಂಜುನಾಥ ಕಟ್ಟಿನಮಕ್ಕಿ ಎಂಬುವರ ಕೊಟ್ಟಿಗೆಯಿಂದ ಆರೋಪಿಗಳು ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದ ಎರಡು ಜಾನುವಾರುಗಳನ್ನು ಕಳವು ಮಾಡಿಕೊಂಡು ಮಾರುತಿ ಓಮ್ನಿ ಕಾರಿನಲ್ಲಿ ತುಂಬಿಸಿಕೊಂಡು ಹೋಗುವಾಗ ಎಚ್ಚರಗೊಂಡ ಮಂಜುನಾಥ ಅವರು ಗಂಗೊಳ್ಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ಖಚಿತ ಮಾಹಿತಿ ಆಧರಿಸಿ ಗಂಗೊಳ್ಳಿ ಸಮೀಪದ ಗುಜ್ಜಾಡಿ ಜಂಕ್ಷನ್ ಬಳಿ ಮಾರುತಿ ಕಾರನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದ ಸಂದರ್ಭ ಕಳವು ಮಾಡಿದ ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಇದೇ ಸಂದರ್ಭ ಕಾರಿನಲ್ಲಿದ್ದ ಮಹಮ್ಮದ್ ಹನೀಫ್ ಎಂಬುವರನ್ನು ಬಂಧಿಸಲಾಗಿದ್ದು, ಇನ್ನಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಜಾನುವಾರುಗಳನ್ನು ಕಳವು…
ಗಂಗೊಳ್ಳಿ: ಕಳೆದ ಕೆಲವು ದಿನಗಳಿಂದ ಗಂಗೊಳ್ಳಿ ಗ್ರಾಮ ಪಂಚಾಯತ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ವ್ಯಾಪ್ತಿಯಲ್ಲಿ ಅನಧಿಕೃತ ಲೋಡ್‌ಶೆಡ್ಡಿಂಗ್ ಮತ್ತು ವಿದ್ಯುತ್ ಕಡಿತಗೊಳಿಸುತ್ತಿರುವುದನ್ನು ವಿರೋಧಿಸಿ ಗಂಗೊಳ್ಳಿ ಬಿಜೆಪಿ ಸ್ಥಾನೀಯ ಸಮಿತಿ ಸ್ಥಳೀಯ ಮೆಸ್ಕಾಂ ಶಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಇತ್ತೀಚಿಗೆ ನಿರಂತರವಾಗಿ ಎರಡು ದಿನಗಳ ಕಾಲ ವಿದ್ಯುತ್ ಸಂಪೂರ್ಣ ಕಡಿತಗೊಂಡಿರುವುದಲ್ಲದೆ, ರಾತ್ರಿ ವೇಳೆಯಲ್ಲಿ ನಿರಂತರವಾಗಿ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ರಾತ್ರಿ ಸಮಯದಲ್ಲಿ ವಿದ್ಯುತ್ ಕಡಿತಗೊಂಡರೆ ಅದನ್ನು ಸರಿಪಡಿಸಲು ಯಾವುದೇ ಸಿಬ್ಬಂದಿಗಳಿಲ್ಲ. ಹೀಗಾಗಿ ಜನರು ರಾತ್ರಿ ವೇಳೆಯಲ್ಲಿ ವಿದ್ಯುತ್ ಇಲ್ಲದೆ ತೊಂದರೆ ಅನುಭವಿಸುವಂತಾಗಿದೆ. ಕಳೆದ ಕೆಲವು ದಿನಗಳಿಂದ ಹಗಲು ರಾತ್ರಿಯೆನ್ನದೆ ನಿರಂತರವಾಗಿ ಲೋಡ್‌ಶೆಡ್ಡಿಂಗ್ ಮಾಡುತ್ತಿರುವ ಮೆಸ್ಕಾಂ ಕ್ರಮ ಖಂಡನೀಯವಾದುದು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಮಳೆಗಾಲದಲ್ಲಿ ಈ ಪರಿಸ್ಥಿತಿ ನಿರ್ಮಾಣಗೊಂಡರೆ ಬೇಸಿಗೆಯಲ್ಲಿ ಯಾವ ಪರಿಸ್ಥಿತಿ ಇರಬಹುದು ಎಂದು ಊಹಿಸಲು ಸಾಧ್ಯವಿಲ್ಲ. ಮಳೆಗಾಲದ ಈ ಸಮಯದಲ್ಲಿ ವಿದ್ಯುತ್ ಕೊರತೆ ನೆಪವೊಡ್ಡಿ ಅನಧಿಕೃತ ಲೋಡ್‌ಶೆಡ್ಡಿಂಗ್ ಮಾಡುವುದನ್ನು ನಿಲ್ಲಿಸಿ ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು. ರಾತ್ರಿ ಸಮಯದಲ್ಲಿ ಸಿಬ್ಬಂದಿಗಳ ನೇಮಕ ಮಾಡಬೇಕು.…
ಗಂಗೊಳ್ಳಿ: ಇತ್ತೀಚಿಗೆ ಹಾಂಗ್‌ಕಾಂಗ್‌ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಏಷ್ಯನ್ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಮೂರು ಬೆಳ್ಳಿಪದಕ ವಿಜೇತ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟು ಗಂಗೊಳ್ಳಿ ಕೆನರಾ ಬ್ಯಾಂಕ್‌ನ ಅಧಿಕಾರಿ ಅಶೋಕ ಜಿ.ವಿ. ಅವರನ್ನು ಗಂಗೊಳ್ಳಿಯಲ್ಲಿ ಇತ್ತೀಚಿಗೆ ಸನ್ಮಾನಿಸಿ ಗೌರವಿಸಲಾಯಿತು. ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ರೋಟರಿ ಸಭಾಂಗಣದಲ್ಲಿ ಗಂಗೊಳ್ಳಿಯ ಶ್ರೀ ಚೌಡೇಶ್ವರಿ ಯುತ್ ಕ್ಲಬ್ ಆಶ್ರಯದಲ್ಲಿ ನಡೆದ ಸರಳ ಸಮಾರಂಭದಲ್ಲಿ ಇವರನ್ನು ಸನ್ಮಾನಿಸಲಾಯಿತು. ಉದ್ಯಮಿ ಸದಾನಂದ ಯು.ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ಬಿ.ರಾಘವೇಂದ್ರ ಪೈ, ಕಾಲೇಜಿನ ಪ್ರಾಂಶುಪಾಲ ಆರ್.ಎನ್. ರೇವಣ್‌ಕರ್, ಕುಂದಾಪುರ ರೋಟರಿ ಕ್ಲಬ್ ಮಿಡ್‌ಟೌನ್ ಅಧ್ಯಕ್ಷ ಮಹೇಶ ಬೆಟ್ಟಿನ್, ಕುಂದಾಪುರದ ನ್ಯಾಯವಾದಿ ರಾಘವೇಂದ್ರ ಚರಣ್ ನಾವಡ, ಉಪನ್ಯಾಸಕ ಸುಜಯೀಂದ್ರ ಹಂದೆ, ಸಂಘದ ಗೌರವಾಧ್ಯಕ್ಷ ನಾಗರಾಜ ಖಾರ್ವಿ ಹಾಗೂ ಮಹಮ್ಮದ್ ಹುಸೇನ್ ಮೊದಲಾದವರು ಉಪಸ್ಥಿತರಿದ್ದರು.
ಗಂಗೊಳ್ಳಿ: ವಿದ್ಯಾರ್ಥಿ ಜೀವನದಲ್ಲಿ ವಿದ್ಯಾಭ್ಯಾಸಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಂಡು, ಉತ್ತಮ ಶಿಕ್ಷಣ ಪಡೆದುಕೊಳ್ಳುವಂತಾಗಬೇಕು. ಆರ್ಥಿಕ ಸಮಸ್ಯೆಯಿಂದ ವಿದ್ಯಾಭ್ಯಾಸವನ್ನು ಮೊಟಕುಗೊಳಿಸದೆ ವಿದ್ಯಾಭ್ಯಾಸಕ್ಕೆ ಬೇಕಾಗುವ ಆರ್ಥಿಕ ಸಹಾಯವನ್ನು ಇಂತಹ ವಿದ್ಯಾರ್ಥಿವೇತನದ ಮೂಲಕ ಪಡೆದುಕೊಂಡು ಶಿಕ್ಷಣವನ್ನು ಮುಂದುವರಿಸಿಕೊಂಡು ವಿದ್ಯಾವಂತರಾಗಿ ಸಮಾಜದ ಆಸ್ತಿಯಾಗಬೇಕು ಎಂದು ಮುಂಬೈನ ದಾನಿ ಬಾಂಡ್ಯ ಶ್ರೀಕಾಂತ ಪೈ ಗಂಗೊಳ್ಳಿ ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ರೋಟರಿ ಸಭಾಂಗಣದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಸ್ಕೂಲ್ ಅಸೋಸಿಯೇಶನ್ ಪ್ರಾಯೋಜಿತ ಸರಸ್ವತಿ ವಿದ್ಯಾನಿಧಿ ಯೋಜನೆಯ ವಿದ್ಯಾರ್ಥಿವೇತನ ವಿತರಿಸಿ ಮಾತನಾಡಿದರು. ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಸ್ಕೂಲ್ ಅಸೋಸಿಯೇಶನ್‌ನ ಅಧ್ಯಕ್ಷ ಡಾ.ಕಾಶೀನಾಥ ಪೈ ಮಾತನಾಡಿ, ಜಿಎಸ್‌ಬಿ ಸಮಾಜದ ಪ್ರತಿಭಾನ್ವಿತ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ವಿದ್ಯಾನಿಧಿ ಯೋಜನೆ ಆರಂಭಿಸಲಾಗಿತ್ತು. ಕಳೆದ ಕೆಲವು ವರ್ಷಗಳಿಂದ ಅನಿವಾರ್ಯ ಕಾರಣಗಳಿಂದ ವಿದ್ಯಾರ್ಥಿವೇತನ ನೀಡುವಲ್ಲಿ ಸಾಧ್ಯವಾಗಿಲ್ಲ. ಇದೀಗ ಪುನ: ಅರ್ಹ ವಿದ್ಯಾರ್ಥಿಗಳಿಗೆ ಪ್ರತಿವರ್ಷ ವಿದ್ಯಾರ್ಥಿವೇತನ ವಿತರಿಸುವ ಗುರಿ ಹೊಂದಲಾಗಿದೆ ಎಂದರು. ಸರಸ್ವತಿ ವಿದ್ಯಾಲಯ ಶಾಲೆಗಳ ಸಂಚಾಲಕ…
ಕುಂದಾಪುರ: ಇಲ್ಲಿನ ಅಂಕದಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಸೈಕಲಿಗೆ ಡಿಕ್ಕಿ ಹೊಡೆದ ಪರಿಣಾಮ ಸೈಕಲಿನಲ್ಲಿ ಸಂಚರಿಸುತ್ತಿದ್ದ ಬಾಗಲಕೋಟೆ ಮೂಲಕ ಬಾಲಕ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ವರದಿಯಾಗಿದೆ. ಚಂದ್ರಶೇಖರ (14) ಮೃತ ದುರ್ದೈವಿ ಬಾಲಕ ಘಟನೆಯ ವಿವರ: ಬಾಗಲಕೋಟೆಯಲ್ಲಿ ೮ನೇ ತರಗತಿ ಓದುತ್ತಿರುವ ಚಂದ್ರಶೇಖರ ಇಂದು ಶಾಲೆ ರಜೆ ಇದ್ದ ಕಾರಣ ನಿನ್ನೆ ಅಂಕದಕಟ್ಟೆಯ ಸಮೀಪದಲ್ಲಿ ವಾಸವಾಗಿರುವ ತಂದೆ-ತಾಯಿಯನ್ನು ನೋಡಲೇಂದು ಬಂದಿದ್ದರು. ಇಲ್ಲಿಯೇ ಇದ್ದ ಸಹೋದರನ ಸೈಕಲ್ ಏರಿ ಅಂಗಡಿಗೆ ತೆರಳುತ್ತಿದ್ದ. ಅಂಕದಕಟ್ಟೆ ಸಮೀಪವಿರುವ ಡಿವೈಡರ್ ದಾಟುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ಕಾರೊಂದು ಬಾಲಕನಿಗೆ ಡಿಕ್ಕಿ ಹೊಡೆದಿತ್ತು. ಡಿಕ್ಕಿ ಹೊಡೆದ ರಭಸಕ್ಕೆ ಬಾಲಕನಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆಗಾಗಲೇ ಮೃತಪಟ್ಟಿದ್ದರು. ಒಂದು ದಿನಕ್ಕೆ ತಂದೆ-ತಾಯಿಯನ್ನು ನೋಡಲೆಂದು ಬಂದ ಬಾಲಕನಿಗೆ ಈ ರೀತಿಯಲ್ಲಿ ಅನಾಹುತವಾಗಿರುವುದು ವಿಪರ್ಯಾಸವೇ ಸರಿ. ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ: ಕ್ರೀಡಾಕೂಟಗಳು ಸೌಹಾರ್ದತೆಯನ್ನು ಮೂಡಿಸುತ್ತದೆ. ವಿದ್ಯಾರ್ಥಿಗಳು ಕ್ರೀಡಾ ಮನೋಭಾವ ಬೆಳೆಸಿಕೊಂಡು ಕ್ರೀಡಾ ಸಾಮಾರ್ಥ್ಯವನ್ನು ಪ್ರದರ್ಶಿಸಬೇಕು ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು. ಉಡುಪಿ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕ್ರೀಡಾ ಪ್ರಾಧಿಕಾರ ಹಾಗೂ ತಾಲೂಕು ಪಂಚಾಯತ್ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ತಾಲೂಕು ರಾಜೀವ್ ಗಾಂಧಿ ಖೇಲ್ ಗ್ರಾಮೀಣ ಮತ್ತು ದಸರಾ ಕ್ರೀಡಾಕೂಟ 2015-16ನ್ನು ಕುಂದಾಪುರದ ಗಾಂಧಿ ಮೈದಾನದಲ್ಲಿ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ತಾಲೂಕು ಪಂಚಾಯತ್ ಅಧ್ಯಕ್ಷ ಭಾಸ್ಕರ ಬಿಲ್ಲವ ಮಾತನಾಡಿ, ಕ್ರೀಡಾಳುಗಳು ಕ್ರೀಡಾಮನೋಭಾವದಿಂದ ಆಡವಾಡಬೇಕು. ತೀರ್ಪುಗಾರರ ತೀರ್ಪಿಗೆ ಬದ್ಧರಾಗಿ, ಉನ್ನತ ಹಂತವನ್ನು ಪ್ರತಿನಿಧಿಸುವಂತಾಗಬೇಕು ಎಂದರು. ಪುರಸಭೆ ಅಧ್ಯಕ್ಷೆ ಕಲಾವತಿ ಯು.ಎಸ್., ಪುರಸಭಾ ಸದಸ್ಯ ಉದಯ ಮೆಂಡನ್, ರಾಜೇಶ ಕಾವೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ|ರೋಶನ್ ಕುಮಾರ್ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷ…
ಕುಂದಾಪುರ: ಸಮಾಜದಲ್ಲಿ ಅಘಾತಕಾರಿ ಘಟನೆಗಳಿಗೆ ಕಾರಣರಾಗುವ ಕೆಟ್ಟ ಮನಸ್ಸುಗಳ ನಿಯಂತ್ರಣ ಸರ್ಕಾರದಿಂದ ಮಾತ್ರ ಸಾಧ್ಯವಿಲ್ಲ. ಸಮುದಾಯದ ಪಾತ್ರವೂ ಇಲ್ಲಿದೆ. ಮಾನಸಿಕ ಪರಿವರ್ತನೆ, ನೈತಿಕ ಮೌಲ್ಯಗಳನ್ನು ಮನಸ್ಸಿನಲ್ಲಿ ತುಂಬುವುದರಿಂದ ಬದಲಾವಣೆ ಸಾಧ್ಯವಿದೆ. ಇವತ್ತು ಅಪರಾಧ ಕೃತ್ಯ ಎಸಗುವ ವ್ಯಕ್ತಿ ಅವಿದ್ಯಾವಂತನಲ್ಲ. ವಿದ್ಯಾವಂತರೇ ಹೆಚ್ಚಿನ ಸಂಖ್ಯೆಯಲ್ಲಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ. ಇವತ್ತು ಸಮಾಜದ ಮಾನಸಿಕ ಸ್ಥಿತಿಯನ್ನು ಸರಿಪಡಿಸುವ ಕೆಲಸವೂ ಆಗಬೇಕಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಹೇಳಿದರು. ಗಂಗೊಳ್ಳಿಯ ವಿಜಯ ವಿಠಲ ಮಂಟಪದಲ್ಲಿ ಗಂಗೊಳ್ಳಿ ಸಮುದಾಯ ಹಿತರಕ್ಷಣಾ ಸಮಿತಿ ವತಿಯಿಂದ ಆಯೋಜಿಸಲಾದ ದಿ.ಅಕ್ಷತಾ ದೇವಾಡಿಗ ಮತು ದಿ.ರತ್ನಾ ಕೊಠಾರಿ ಸ್ಮರಣಾರ್ಥ ವಿದ್ಯಾರ್ಥಿಗಳೊಂದಿಗೆ ಶಿಕ್ಷಣ ಸಚಿವರ ಸಂವಾದ ಕಾರ್ಯಕ್ರಮ ಉದ್ಘಾಟಿಸಿ, ಸಂವಾದದಲ್ಲಿ ಭಾಗವಹಿಸಿ ಮಾತನಾಡಿದರು. ಮಕ್ಕಳ ಮನಸ್ಸಿನಲ್ಲಿ ಜಾತಿ, ಧರ್ಮದ ಬೇಲಿ ಹಾಕಬಾರದು. ದೇಶದ ಏಕತೆ, ಸಮಗ್ರತೆಯ ಅರಿವನ್ನು ಮೂಡಿಸಬೇಕು. ಕಾನೂನು ಕಾಯ್ದೆಗಳಿಂದ ಆಗದ ಕಾರ್ಯ ನೈತಿಕ ಮೌಲ್ಯಗಳನ್ನು ಮನಸ್ಸಿನಲ್ಲಿ ತುಂಬುವುದರಿಂದ ಸಾಧ್ಯವಿದೆ. ಆ ನೆಲೆಯಲ್ಲಿ ಪಠ್ಯ ಪುಸ್ತಕದಲ್ಲಿ ನೈತಿಕ ಮೌಲ್ಯಗಳಿಗೆ…
ಕುಂದಾಪುರ: ಹಾಡಹಗಲೇ ಕುಂದಾಪುರ ತಾಲೂಕಿನ ತಲ್ಲೂರು ರಾಷ್ಟ್ರೀಯ ಹೆದ್ದಾರಿಯ ಬಳಿ ಬಸ್ಸಿಗಾಗಿ ಕಾಯುತ್ತಿದ್ದ ಮಹಿಳೆಯ ಕುತ್ತಿಗೆಯಿಂದ ಸರ ಹರಿದುಕೊಂಡು ಬೈಕಿನಲ್ಲಿ ಪರಾರಿಯಾದ ಚಾಲಾಕಿ ಕಳ್ಳರನ್ನು ಹಿಡಿಯಲು ಕುಂದಾಪುರದ ಶಾಸ್ತ್ರೀವೃತ್ತದಲ್ಲಿ ಪೊಲೀಸರು ವಿಘಲರಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಭಾರಿ ಚರ್ಚೆಗೆ ಕಾರಣವಾಗಿದೆ. ಒಂದೆಡೆ ವಿಡಿಯೋ ನೋಡಿದ ಜನ ಕಳ್ಳರನ್ನು ಹಿಡಿಯಲಾಗದ ಬಗ್ಗೆ ಪೊಲೀಸರ ಬಗ್ಗೆ ಅಸಮಾಧಾನವನ್ನು ಹೊರಗೆಡವುತ್ತಿದ್ದರೇ, ಇತ್ತ ಇಲಾಖೆಯ ಬಳಿ ಗೌಪ್ಯವಾಗಿರಬೇಕಿದ್ದ ಈ ವಿಡಿಯೋ ಎಲ್ಲರ ಮೊಬೈಲುಗಳಿಗೆ ಬಂದು ಕುಳಿತಿರುವ ಬಗ್ಗೆ ಪೊಲೀಸರು ತಲೆಕೆಡಿಕೊಂಡಿದ್ದರು. ಆದದ್ದೇನು? ಬೈಕಿನಲ್ಲಿ ಹಲ್ಮೆಟ್ ಧರಿಸಿ ಬಂದ ಇಬ್ಬರು ಆಗಂತುಕರು ತಲ್ಲೂರಿನಲ್ಲಿ ಮಹಿಳೆಯ ಕುತ್ತಿಗೆಯಲ್ಲಿದ್ದ ಸರವನ್ನು ಹರಿದುಕೊಂಡು ಬೈಕಿನಲ್ಲಿ ಕೆಲವೇ ನಿಮಿಷಗಳಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಕುಂದಾಪುರಕ್ಕೆ ಬಂದಿದ್ದಾರೆ. ಅದಕ್ಕೂ ಮೊದಲೇ ಭಟ್ಕಳದಲ್ಲಿ ಸರಗಳ್ಳತನ ಮಾಡಿದ ಇದೇ ಚೋರರು ಕುಂದಾಪುರ ಮಾರ್ಗವಾಗಿ ಬರುತ್ತಿರುವ ಬಗ್ಗೆ ಇಲಾಖೆಗೆ ಮಾಹಿತಿ ಬಂದಿತ್ತು. ಅದನ್ನು ಉಪಅಧೀಕ್ಷಕರ ಕಛೇರಿಯಿಂದ ಎಲ್ಲಾ ಠಾಣೆಗೆ ತಿಳಿಸುವ ಹೊತ್ತಿಗೆ ತಲ್ಲೂರಿನಲ್ಲಿ ಪ್ರಕರಣ ಬೆಳಕಿಗೆ ಬಂದಿತ್ತು. ಕೂಡಲೇ ಎಚ್ಚೇತ್ತ…
